Author: AIN Author

ಬೆಂಗಳೂರು:- ಇಂದು ಬೆಳ್ಳಂ ಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ. *ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಆಗಿರುವ ಹರ್ಷಾ ಅವರ ಕಚೇರಿ, ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ಮನೆ, ಮಂಡ್ಯ ಜಿಲ್ಲೆಯಲ್ಲಿರುವ ಸಂಬಂಧಿಕರ ಮನೆಗಳು, ಮಂಡ್ಯದ ಕಚೇರಿ, ಕಲ್ಲಹಳ್ಳಿಯಲ್ಲಿರುವ ಮಾವನ ಮನೆ, ನಾಗಮಂಗಲದಲ್ಲಿರುವ ಫಾರ್ಮ್​ಹೌಸ್​​ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. *ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಾಸನದ ಆಹಾರ ನೀರಿಕ್ಷಕರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಫುಡ್ ಇನ್ಸ್‌ಪೆಕ್ಟರ್ ಜಗನ್ನಾಥ್ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕಚೇರಿ ಹಾಗೂ ನಿವಾಸದಲ್ಲಿ…

Read More

ಚಿತ್ರದುರ್ಗ:- ಮರಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಗ್ರಾಮದ ಬಳಿ ಜರುಗಿದೆ ಜನೇನಹಳ್ಳಿ ಗ್ರಾಮದ ವೆಂಕಟೇಶ (50), ವೆಂಕಟೇಶ (48) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಾರಲ್ಲಿದ್ದ ಮತ್ತೊರ್ವ ಪ್ರಯಾಣಿಕ ಕಿಶೋರ್ ಎಂಬುವರಿಗೆ ಗಾಯಾಗಳಾಗಿದ್ದು, ಚಿತ್ರದುರ್ಗ (Chitradurga) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Read More

ಅಥಣಿ : ಮದುವೆಯಾಗಿ ಕೈ ಕೊಟ್ಟ ಹೆಂಡತಿ ಹಾಗೂ ಪ್ರಿಯತಮನನ್ನು ಮಾಜಿ ಪತಿ ಕೊಚ್ಚಿ ಕೊಲೆ ಮಾಡಿದ ದಾರುಣ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮದ ಹೊರವಲಯದಲ್ಲಿ ಡಬಲ್ ಮರ್ಡರ್ಗೆ ಗ್ರಾಮವೇ ಬೆಚ್ಚಿ ಬಿದ್ದಿದ್ದೆ, ಯಾಸಿನ ಬಾಗೊಡೆ (21) ಹೀನಾಕೌಸರ್ ಸುದಾರಾಣೆ (19) ಕೊಲೆಯಾದ ನವ ಜೋಡಿಗಳು. ಈ ಕೊಲೆಯನ್ನು ತಪ್ಪಿಸಲು ಅಮಿನಾಬಾಯಿ ಬಾಗೂಡ, ಹಾಗೂ ಮುಸ್ತಫಾ ಮುಲ್ಲಾ ಮಧ್ಯೆ ಪ್ರವೇಶಿಸಿದಾಗ ಅವರು ಮೇಲು ಆರೋಪಿ ತೌಫಿಕ್ ಕ್ಯಾಡಿ ಮಾರಣಾಂತಿಕ ಹಲ್ಲೆ ಮಾಡಿದ್ದು ಅವರನ್ನು ಮಹಾರಾಷ್ಟ್ರ ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ತಿಂಗಳ ಹಿಂದೆ ಹೀನಾಕೌಸರ ಹಾಗೂ ತೌಫಿಕ್ ನಡುವೆ ಮದುವೆ ನಡೆದಿತ್ತು ಮದುವೆಯಾಗಿ ಒಂದೆ ತಿಂಗಳಿಗೆ ಕೊಲೆಯಾದ ಯಾಸಿನ ಜೋತೆ ಪ್ರಿತಿಸಿ ಹೀನಾಕೌಸರ ಓಡಿ ಹೋಗಿದ್ದಳು , ಒಂದುವರೆ ತಿಂಗಳ ಬಳಿಕ ಸಮಾಜದವ ಸಮ್ಮುಖದಲ್ಲಿ ರಾಜಿ ಪಂಚಾಯ್ತಿ ಮಾಡಿದ್ದ ಗ್ರಾಮಸ್ಥರು ಮಾಜಿ ಪತಿ ತೌಫಿಕ ಜೋತೆ ವಿವಾಹ ಮುರಿದು ಯಾಸಿನ್ ಜೋತೆ ಮಧುವೆ ಮಾಡಿಸಿದ್ದರು…

Read More

ಬಾಗಲಕೋಟೆ : ಸಿಎಎ ಜಾರಿ ಆಗಲೇಬೇಕು, ಆಗ ವಿರೋಧ ಉಂಟಾಗಿ ಆಗಿರಲಿಲ್ಲ. ಈಗ ಕೇಂದ್ರ ಸರ್ಕಾರ ಮಾಡೇ ಮಾಡುತ್ತದೆ. ಈಗ ಆಗದಿದ್ದರೂ ಮುಂದಿನ ಚುನಾವಣೆಗಾದರೂ ಜಾರಿ ಮಾಡೇ ಮಾಡುತ್ತಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಸಿಎಎ ಜೊತೆಗೆ ಸಮಾನ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಕೂಡ ಜಾರಿಯಾಗಿ,  ಹಿಂದು ರಾಷ್ಟ್ರ ಘೋಷಣೆ ಕೂಡ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 2024ರ ಚುನಾವಣೆಯಲ್ಲಿ ಮೋದಿ ಅವರು ನೂರಕ್ಕೆ ನೂರು ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತಾರೆ. ನಮ್ಮ ಉಳಿವಿಗಾಗಿ ಮೋದಿ ಅವಶ್ಯಕತೆ ಇದೆ ಅನ್ನೋದು ತಳಮಟ್ಟದ ಸಾಮಾನ್ಯ ನಾಗರಿಕರಿಗೂ ಗೊತ್ತಾಗಿದೆ ಎಂದು ಅಭಿಪ್ರಾಯ ಪಟ್ಟರು. ಮಾಜಿ ಸಿಎಂ ಶೆಟ್ಟರ್ ಘರ್‌ ವಾಪ್ಸಿ ಕುರಿತು ಪ್ರತಿಕ್ರಿಯಿಸಿದ ಮುತಾಲಿಕ್, ಜಗದೀಶ ಶೆಟ್ಟರ್ ಅವರದು ರಾಜಕೀಯ. ನಾನೇನು ಅದರ ಬಗ್ಗೆ ಕಮೆಂಟ್ ಮಾಡಲ್ಲ ಎಂದರು. ಮುತಾಲಿಕ್ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಕುರಿತು ಕೇಳಲಾದ ಪ್ರಶ್ನೆಗೆ…

Read More

ಜೈಪುರ:- ರಾಜಸ್ಥಾನದ ಎಲ್ಲಾ ಶಾಲೆಗಳಲ್ಲಿ ಸರಸ್ವತಿ ಮೂರ್ತಿ ಪ್ರತಿಷ್ಠಾಪನೆಗೆ ಅಲ್ಲಿನ ಸರ್ಕಾರ ಆದೇಶಿಸಿದೆ. ಸರಸ್ವತಿಯ ಭಾವಚಿತ್ರ ಅಥವಾ ಮೂರ್ತಿ ಇಲ್ಲದ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೆ ಶಾಲೆಗಳಲ್ಲಿ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗುವುದು ಎಂದಿದ್ದಾರೆ. ವಿದ್ಯಾರ್ಥಿಗಳ ವಯಸ್ಸು ಮತ್ತು ಲಿಂಗವನ್ನು ಆಧರಿಸಿ ವಸ್ತ್ರ ಸಂಹಿತೆ ನಿರ್ಧರಿಸಲಾಗುತ್ತದೆ. ಇನ್ನು ಶಾಲೆಗಳಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಅಲ್ಲೂ ಹಿಜಾಬ್‌ ವಿವಾದ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ಬಿಜೆಪಿಯ ಭಜನ್​ಲಾಲ್​ ಶರ್ಮಾ ಅಧಿಕಾರಕ್ಕೇರಿದ ಬಳಿಕ ಮುಸ್ಲಿಂ ವಿರೋಧಿ ನೀತಿಗಳನ್ನು ಜಾರಿಗೆ ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರಾಜಸ್ಥಾನದ ಸರ್ಕಾರಿ ಶಾಲೆಗಳಲ್ಲಿ ಮಾತ್ರವಲ್ಲದೆ ಖಾಸಗಿ ಶಾಲೆಗಳು ಮತ್ತು ಮದರಸಾಗಳಲ್ಲಿಯೂ ಹಿಜಾಬ್‌ನ್ನು ನಿಷೇಧಿಸಬೇಕು ಎಂದು ರಾಜಸ್ಥಾನದ ಹಿರಿಯ ಸಚಿವ ಕಿರೋರಿ ಲಾಲ್ ಮೀನಾ ಒತ್ತಾಯಿಸಿದ್ದಾರೆ.

Read More

ಸಂಜೆಯ ಸಮಯದಲ್ಲಿ ಉಪ್ಪನ್ನು ಇತರರಿಗೆ ನೀಡಿದರೆ ಲಕ್ಷ್ಮಿಯನ್ನೇ ಮನೆಯಿಂದ ಆಚೆ ಕಳಿಸಿದ ಹಾಗೆ ಆಗುವುದು. ಇದು ಲಕ್ಷ್ಮಿಗೆ ಅವಮಾನ ಮಾಡಿದಂತಾಗುವುದು. ಜೀವನದಲ್ಲಿ ಧನ-ಧಾನ್ಯವನ್ನು ಹೊಂದಲು ಬಯಸುತ್ತೇವೆ ಎಂದಾದರೆ ಮೊದಲು ಲಕ್ಷ್ಮಿ ದೇವಿಯನ್ನು ಖುಷಿ ಪಡಿಸುವ ಮತ್ತು ಆರಾಧಿಸುವ ಕಾರ್ಯ ನೆರವೇರವೇರಬೇಕು. ದೇವಿಗೆ ವಿಶೇಷ ಗೌರವ ಹಾಗೂ ಪೂಜೆಯನ್ನು ಸಲ್ಲಿಸುವುದರ ಮೂಲಕ ತಾಯಿಯ ಕೃಪೆಗೆ ಒಳಗಾಗಬಹುದು. ಜೊತೆಗೆ ಬಯಸಿದ ಸಿರಿ-ಸಂಪತ್ತು ಮನೆಯಲ್ಲಿ ತುಂಬಿರುತ್ತವೆ ಎಂಬ ನಂಬಿಕೆಯಿದೆ. ಜೇಬಿನಲ್ಲಿ ಉಪ್ಪನ್ನು ಇಟ್ಟುಕೊಳ್ಳಿ ಉಪ್ಪು ಕೆಡುವಂತಹ ವಸ್ತುಗಳನ್ನು ಹಾಗೂ ದುಷ್ಟ ಶಕ್ತಿ ವಿರುದ್ಧ ಹೋರಾಡುವಂತಹ ಶಕ್ತಿಯನ್ನು ಪಡೆದುಕೊಂಡಿದೆ. ಈ ನಿಟ್ಟಿನಲ್ಲಿಯೇ ದೆವ್ವ ಮತ್ತು ಭೂತಗಳು ಉಪ್ಪಿಗೆ ಹೆದರುತ್ತವೆ ಎಂದು ಹೇಳಲಾಗುವುದು. ಉಪ್ಪು ದೈವಿಕ ಶಕ್ತಿ ಹೊಂದಿರುವುದರಿಂದ ನಾಶವಾಗುವ ಪರಿಸ್ಥಿತಿ ಹಾಗೂ ವಸ್ತುಗಳನ್ನು ಕಾಪಾಡುವ ಶಕ್ತಿಯನ್ನು ಪಡೆದುಕೊಂಡಿದೆ. ದೂರದ ಪ್ರಯಾಣ ಮಾಡುವಾಗ ಅಥವಾ ನಿಮ್ಮ ಇಷ್ಟದ ಸ್ಥಳಗಳಿಗೆ ಹೋಗುವಾಗ ಜೇಬಿನಲ್ಲಿ ಸ್ವಲ್ಪ ಸಮುದ್ರದ ಉಪ್ಪನ್ನು ಕೊಂಡೊಯ್ಯಬೇಕು ಎಂದು ಹೇಳಲಾಗುವುದು. ಹೀಗೆ ಮಾಡುವುದರಿಂದ ಪ್ರಯಾಣದಲ್ಲಿ ಉಂಟಾಗುವ ತೊಂದರೆ ಹಾಗೂ…

Read More

ಬೆಂಗಳೂರು:- ಮಡಿವಾಳ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಹಾಡಹಗಲೇ ಮನೆಕಳವು ಮಾಡ್ತಿದ್ದ ಮನೆಗಳ್ಳರನ್ನ ಅರೆಸ್ಟ್ ಮಾಡಿದ್ದಾರೆ. ಹೈದರಾಬಾದ್ ಮೂಲದ ಐವರು ಆರೋಪಿಗಳು ಮಡಿವಾಳ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಬುದ್ ಅಲಿ, ಶೇಕ್ ಫಯಾಜ್, ಅಯೈಜ್ ಅಹ್ಮದ್, ರಿಯಾಜ್ ಬಂಧಿತ ಆರೋಪಿಗಳು. ಡಿಸೆಂಬರ್​ನಲ್ಲಿ ಮಡಿವಾಳ ಠಾಣಾ ವ್ಯಾಪ್ತಿಯ ಮಾರುತಿನಗರದ 7ನೇ ಕ್ರಾಸ್ ನ ಮನೆಯೊಂದರ ಡೋರ್ ಅನ್ನು ರಾಡ್​ನಿಂದ ಮುರಿದು ಮನೆಕಳವು ಮಾಡಿ ಖದೀಮರು ಎಸ್ಕೇಪ್ ಆಗಿದ್ದರು. 3 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದರು. ಸದ್ಯ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಆರೋಪಿಗಳು ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಕಳವು ಮಾಡಿ ಒಂದೂವರೆ ಕಿ.ಮೀ. ನಡೆದು ಕಾರ್ ಹತ್ತಿದ್ದರು. ಕಳ್ಳರ ಜಾಡು ಹಿಡಿದು ಸಿಸಿ ಕ್ಯಾಮರಾ ಆಧರಿಸಿ ಟ್ರೇಸ್ ಮಾಡಿದಾಗ ಈ ಖದೀಮರು ಹೊಸ ಕ್ರೆಟಾ ಕಾರ್ ನಲ್ಲಿ ಹೈದರಾಬಾದ್ ನಿಂದ ಕಳವು ಮಾಡಲೆಂದೆ ಬರ್ತಿದ್ದರು ಎಂದು ತಿಳಿದುಬಂದಿದೆ. ಖತರ್ನಾಕ್ ಕಳ್ಳರ ಚಲನವಲನ ಏರಿಯಾದ ಸಿಸಿ…

Read More

ಕೋಲಾರ :  ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಕೊಡದಿದ್ದರೂ ಕಾಂಗ್ರೆಸ್ ಕಾರ್ಯಕರ್ತರಿಗೆ ಕ್ಯಾಬಿನೆಟ್ ದರ್ಜೆ ಸ್ಥಾನ ನೀಡಲಾಗುತ್ತಿದೆ. ಕಾರ್ಯಕರ್ತರಿಗೆ ಬಿರಿಯಾನಿ ತಿನ್ನಿಸಲು ಇವರ ಬಳಿ ಹಣವಿದೆ, ರೈತರಿಗೆ ನೀಡಲು ಹಣ ಇಲ್ಲವೇ, ಹಾಗಿದ್ದರೆ ಕುರ್ಚಿ ಖಾಲಿ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿ ಕಾರಿದರು.  ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ರೈತರಿಗೆ ಸರ್ಕಾರ 25 ಸಾವಿರ ರೂ.ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಪಾಪರ್‌ ಆಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ನಾವೇ ಹಣ ಕೊಡುತ್ತೇವೆ, ನಮ್ಮ ರೈತರಿಂದಲೇ ನೀವು ಭಿಕ್ಷೆ ಪಡೆಯಿರಿ, ಎಲ್ಲ ರೈತರೇ ಸರ್ಕಾರಕ್ಕೆ 2 ಸಾವಿರ ರೂ.ನೀಡುತ್ತಾರೆ. ಇಂತಹ ಸ್ಥಿತಿಗೆ ತಲುಪಿರುವ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದರು. ಅಲ್ಪಸಂಖ್ಯಾತ ಇಲಾಖೆಯ ಸಚಿವರು ಮನವಿ ಕೊಟ್ಟ ಮೂರು ದಿನಗಳಲ್ಲಿ ಮುಸ್ಲಿಮರಿಗೆ 1 ಸಾವಿರ ಕೋಟಿ ರು.ಗಳ ಅನುದಾನವನ್ನು ಕಾಲನಿ ಅಭಿವೃದ್ಧಿಗೆ ಬಿಡುಗಡೆ ಮಾಡಲಾಗಿದೆ ಎಂದರು. ರೈತರನ್ನು ಕಡೆಗಣಿಸಿ ಟಿಪ್ಪುವನ್ನು ವೈಭವೀಕರಿಸುವ ಮೂಲಕ ಅಲ್ಪಸಂಖ್ಯಾತರನ್ನು ಒಲೈಸಿಕೊಳ್ಳುತ್ತಿದ್ದೀರಿ, ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಿಂಚತ್ತು…

Read More

ರಾಯ್ಪುರ್:‌ ಹಿಂದೂ ದೇವರನ್ನು (Hindu God) ನಂಬಬೇಡಿ, ಬೌದ್ಧ ಧರ್ಮ ಅಳವಡಿಸಿಕೊಳ್ಳಿ ಅಂತ ಶಿಕ್ಷಕರೊಬ್ಬರು ಮಕ್ಕಳಿಗೆ ಪ್ರಮಾಣ ವಚನ ಬೋಧಿಸಿದ ಘಟನೆ ಛತ್ತೀಸ್‍ಘಡದ ಬಿಲಾಸ್‍ಪುರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಶಿಕ್ಷಕ ರತನ್‍ಲಾಲ್ ಸರೋವರ್ ರನ್ನು ಬಂಧಿಸಲಾಗಿದೆ. ಮುಖ್ಯ ಶಿಕ್ಷಕನ ಸ್ಥಾನದಿಂದಲೂ ಅಮಾನತುಗೊಳಿಸಲಾಗಿದೆ. ನಡೆದಿದ್ದೇನು..?: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆ ಸಂದರ್ಭದಲ್ಲಿ ಆರೋಪಿ ಮುಖ್ಯಸ್ಥರು ಮೊಹ್ತರಾಯ್ ಗ್ರಾಮದಲ್ಲಿ ಮಕ್ಕಳು ಮತ್ತು ಜನರ ಗುಂಪನ್ನು ಒಟ್ಟುಗೂಡಿಸಿದ್ದಾರೆ. ಬಳಿಕ ಅವರಿಗೆ ಹಿಂದೂ ದೇವರುಗಳನ್ನು ನಾವು ಪೂಜಿಸುವುದಿಲ್ಲ. ಬೌದ್ಧ ಧರ್ಮವನ್ನು ಅನುಸರಿಸುತ್ತೇವೆ ಎಂದು ಪ್ರತಿಜ್ಞೆ ಮಾಡಲಾಯಿತು. ಈ ಸಂಬಂಧ ಹಿಂದೂ ಸಂಘಟನೆಯೊಂದರ ಪದಾಧಿಕಾರಿ ರೂಪೇಶ್ ಶುಕ್ಲಾ ಎಂಬವರು ಹೆಡ್ ಮಾಸ್ಟರ್ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಶಿವ, ರಾಮ, ಕೃಷ್ಣ ಸೇರಿದಂತೆ ಹಿಂದೂ ದೇವತೆಗಳನ್ನು ಪೂಜಿಸುವುದಿಲ್ಲ ಮತ್ತು ಬೌದ್ಧ ಧರ್ಮವನ್ನು ಅನುಸರಿಸುವುದಾಗಿ ಪ್ರಮಾಣ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಅವರ ಈ ಕ್ರಮ ಸನಾತನ ಧರ್ಮದಲ್ಲಿ ನಂಬಿಕೆ ಇರುವ ಜನರ ಭಾವನೆಗಳಿಗೆ ಧಕ್ಕೆ…

Read More

ಟೊಮೇಟೊ, ಈರುಳ್ಳಿ ಬೆಲೆ ಗಗನಕ್ಕೇರಿದಾಗ ಖದೀಮರು ಕತ್ತಲಾಗುವುದಕ್ಕಾಗಿಯೇ ಕಾದು ಬೆಲೆಯನ್ನು ಕದ್ದು ಪರಾರಿಯಾಗುತ್ತಿದ್ದರು.  ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾಗಿದ್ದು ಬೆಳೆಯನ್ನು ಕಾಪಾಡಿಕೊಳ್ಳುವುದೇ ರೈತರಿಗೆ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಜಮೀನಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದಾರೆ. ಕುಂದಗೋಳ ತಾಲೂಕಿನ‌ ಹಿರೇನರ್ತಿ ಗ್ರಾಮದ ರೈತ ತಾನು ಬೆಳೆದ ಮೆಣಸಿನಕಾಯಿ ಬೆಳೆಯನ್ನು ಕಳ್ಳರಿಂದ ಕಾಪಾಡಿಕೊಳ್ಳಲು ಜಮೀನಿಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ. ಮೆಣಿಸಿನಕಾಯಿ ಬೆಳೆಗೆ ಕಳ್ಳರ ಕಾಟ ಹೆಚ್ಚಾದ ಹಿನ್ನಲೆ ಶಿವಪುತ್ರಪ್ಪ ದ್ಯಾಮಣ್ಣವರ ಅವರು ಬೆಳೆಗೆ ಸಿಸಿ ಕ್ಯಾಮೆರಾದ ಹದ್ದಿನ ಕಣ್ಣಿಟ್ಟಿದ್ದಾರೆ. ಸೋಲಾರ್ ಮೂಲಕ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ. ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಮೆಣಸಿನಕಾಯಿಗೆ 80 ರಿಂದ 90 ಸಾವಿರ ರೂ ಇದೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡೋರು ಜಾಸ್ತಿಯಾಗಿದ್ದಾರೆ. ಶಿವಪುತ್ರಪ್ಪ ಅವರು ಐದು ಎಕರೆಯಲ್ಲಿ ಮೆಣಸಿನಕಾಯಿ ಬೆಳದಿದ್ದಾರೆ. ಹೀಗಾಗಿ ಮೆಣಸಿನಕಾಯಿ ಕಳ್ಳತನ ಮಾಡಬಾರದು ಅನ್ನೋ ಉದ್ದೇಶಕ್ಕೆ ಸಿಸಿ ಕ್ಯಾಮೆರಾ ಅಳವಡಿಸಿದ್ದಾರೆ.

Read More