ಜೈಪುರ:- ರಾಜಸ್ಥಾನದ ಅಲ್ವಾರ್‌ನ ನೌಗಾಂವ್ ಬಳಿಯ ಖುಷ್ಪುರಿ ಗ್ರಾಮದ ಬಳಿ ದೆಹಲಿ-ಜೈಪುರ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ವಿದೇಶಾಂಗ ಸಚಿವ ಜಸ್ವಂತ್ ಸಿಂಗ್ ಸೊಸೆ ಸಾವನ್ನಪ್ಪಿದ್ದಾರೆ. ಮನ್ವೇಂದ್ರ ಅವರು ತಮ್ಮ ಕುಟುಂಬದೊಂದಿಗೆ ದೆಹಲಿಯಿಂದ ಜೈಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಮೋರಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಪತ್ನಿ ಚಿತ್ರಾ ಸಿಂಗ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಕೈ ನಾಯಕ ಮನ್ವೇಂದ್ರ ಸಿಂಗ್ ಹಾಗೂ ಅವರ ಮಗ ಹಮೀರ್ ಸಿಂಗ್ ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಸಿಕ್ಕಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಗಾಯಾಳುಗಳನ್ನು ಅಲ್ವಾರ್‌ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ತಂದೆ-ಮಗ ಇಬ್ಬರಿಗೂ ಪಕ್ಕೆಲುಬುಗಳಿಗೆ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳುಗಳ ಸ್ಥಿತಿ ಅಪಾಯದಿಂದ ಪಾರಾಗಿದೆ ಎಂದು ಹೇಳಲಾಗುತ್ತಿದೆ.
Author: AIN Author
ಟೀನೇಜ್ ಮಕ್ಕಳಿಗೆ ಹೇಗೆ ನೋಡಿಕೊಂಡರೆ ದಾರಿ ತಪ್ಪೋದಿಲ್ಲ ಅಂತ ಸುಧಾಮೂರ್ತಿ ಕೆಲವೊಂದು ಸಲಹೆ ನೀಡಿದ್ದಾರೆ. ಟಿನೇಜ್ ಬಂತು ಅಂದರೆ ಕೆಂಡದ ಮೇಲೆ ನಡೆಯೋ ಹಾಗಿರುತ್ತೆ ಪೋಷಕರ ಮನಸ್ಥಿತಿ. ಮಾತು ಕೇಳದ ಮಕ್ಕಳನ್ನು ತಾವು ಹೇಳಿದಂತೆ ಕೇಳಿಸಿಯೇ ಕೇಳಿಸುತ್ತೇನೆ ಎಂದು ಹೆಣಗುತ್ತಾರೆ ಪೋಷಕರು. ಆದರೆ ಟೀನೇಜ್ ಮಕ್ಕಳ ಮನಸ್ಥಿತಿಯನ್ನು ಹತ್ತಿರದಿಂದ ಕಂಡ, ಈ ಬಗ್ಗೆ ಹಿಂದಿನಿಂದಲೇ ಮಾತನಾಡುತ್ತಾ ಬಂದಿರುವ ಸುಧಾಮೂರ್ತಿ ಟೀನೇಜ್ ಮಕ್ಕಳ ಪೇರೆಂಟಿಂಗ್ ಹೇಗಿರಬೇಕು ಅನ್ನೋದರ ಬಗ್ಗೆ ಮಹತ್ವದ ಟಿಪ್ಸ್ ನೀಡುತ್ತಾರೆ. ಅವರ ಮಾತುಗಳನ್ನು ಕೇಳುತ್ತಿದ್ದರೆ ಮಕ್ಕಳು ದಾರಿ ತಪ್ಪೋ ಮಾತೇ ಇರಲ್ಲ ಅನಿಸುತ್ತೆ. ಸುಧಾಮೂರ್ತಿ ಹೇಳೋ ಮೊದಲ ಮಾತು ಟೀನೇಜ್ ಮಕ್ಕಳ ಮಾತನ್ನು ಕೇಳಿಸಿಕೊಳ್ಳುವ ಸಹನೆ, ತಾಳ್ಮೆ ಪೋಷಕರಿಗೆ ಬೇಕು ಅನ್ನೋದು. ‘ಟೀನೇಜ್ ಮಕ್ಕಳಿಗೂ ಮನಸ್ಸಿದೆ. ಅವರಿಗೂ ಭಾವನೆಗಳಿವೆ. ಅವುಗಳನ್ನು ವ್ಯಕ್ತಪಡಿಸುವ ಸ್ವಾತಂತ್ರ್ಯವೂ ಇದೆ. ಆದರೆ ಕೇಳಿಸಿ ಕೊಳ್ಳುವ ಕಿವಿ ಬೇಕು ಅಷ್ಟೇ. ಅಂತಹ ಕೇಳಿಸಿಕೊಳ್ಳುವ ಗುಣ ನಿಮ್ಮಲ್ಲಿ ಇದ್ದರೆ ನಿಮ್ಮ ಮಕ್ಕಳಿಗೆ ನೀವೇ ನಿಜವಾದ ಬೆಸ್ಟ್ ಫ್ರೆಂಡ್ಸ್. ಮಕ್ಕಳಿಗೆ…
ಕಲಬುರ್ಗಿ:- ಜಿಲ್ಲೆಯಲ್ಲಿ ಕಾಲೇಜಿಗೆ ಹೋಗುವಂತೆ ಬೈದಿದ್ದಕ್ಕೆ ಬಾವಿಗೆ ಜಿಗಿದ ತಂಗಿ- ರಕ್ಷಿಸಲು ಹೋದ ಅಣ್ಣನೂ ಸಾವನ್ನಪ್ಪಿದ ಘಟನೆ ಜರುಗಿದೆ. 21 ವರ್ಷದ ಸಂದೀಪ್, 18 ವರ್ಷದ ನಂದಿನಿ ಎಂದು ಮೃತರನ್ನು ಗುರುತಿಸಲಾಗಿದೆ. ಈ ಘಟನೆ ಸೋಮವಾರ ಸಂಜೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ನಡೆದಿದೆ. ನಂದಿನಿಗೆ ಕಾಲೇಜಿಗೆ ಹೋಗು ಎಂದು ಅಣ್ಣ ಸಂದೀಪ್ ಬೈದು ಬುದ್ಧಿವಾದ ಹೇಳಿದ್ದಾನೆ. ಇಷ್ಟಕ್ಕೆ ಬೇಸರಗೊಂಡ ನಂದಿನಿ ಹತ್ತಿರದ ಬಾವಿಗೆ ಹೋಗಿ ಜಿಗಿದಿದ್ದಾಳೆ. ಇತ್ತ ತಂಗಿ ಬಾವಿಗೆ ಹಾರಿದ ವಿಚಾರ ತಿಳಿಯುತ್ತಿದ್ದಂತೆಯೇ ಅಣ್ಣ ಸಂದೀಪ್ ಆಕೆಯನ್ನು ರಕ್ಷಣೆ ಮಾಡಲೆಂದು ತಾನೂ ಬಾವಿಗೆ ಹಾರಿದ್ದಾನೆ. ಪರಿಣಾಮ ಈಜು ಬಾರದೆ ತಂಗಿಯ ಜೊತೆ ಆತನೂ ಮೃತಪಟ್ಟಿದ್ದಾನೆ. ಬಾವಿಯ ಪಕ್ಕದಲ್ಲಿ ಮೃತ ನಂದಿನಿ ತಲೆಗೆ ಮುಡಿದುಕೊಂಡ ಹೂವು ಬಿದ್ದಿರುವುದನ್ನು ಗಮನಿಸಿದ ಪಾಲಕರಿಗೆ ಅನುಮಾನ ಬಂದು ಹುಡುಕಾಟ ನಡೆಸಿದಾಗ ಅಣ್ಣ-ತಂಗಿಯ ಶವವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.
ವಿಜಯಪುರ:- ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಸಸ್ಪೆಂಡ್ ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್.ನಾಗೂರ ಹಾಗೂ ಡಯಟ್ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಸಸ್ಪೆಂಡ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು:- ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಪಿಎಸ್‌ಐ ಮರುಪರೀಕ್ಷೆಯ ತಾತ್ಕಾಲಿಕ ಕೀಯ ಉತ್ತರ ಪ್ರಕಟಿಸಿದೆ. ಇನ್ನು ಅಭ್ಯರ್ಥಿಗಳಲ್ಲಿ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜ.30ರಿಂದ ಫೆಬ್ರುವರಿ 5ರೊಳಗೆ ಸಲ್ಲಿಸಬಹುದಾಗಿದೆ ಎಂದು ಕೆಇಎ ತಿಳಿಸಿದೆ. ಕಳೆದ ಬಾರಿ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಈ ಬಾರಿ ಜನವರಿ 23ರಂದು ಕಟ್ಟೆಚ್ಚರದಿಂದ ಮರು ಪರೀಕ್ಷೆ ನಡೆಸಲಾಗಿತ್ತು. ಇದೀಗ ಮರು ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಜ.30ರಿಂದ ಫೆಬ್ರುವರಿ 5ರ ಸಂಜೆ 5 ಗಂಟೆಯೊಳಗೆ ಕೆಇಎ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್ (https://cetonline.karnataka.gov.in/keaobjections/forms/Login.aspx) ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಪಿಎಸ್‌ಐ ಮರು ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ನೀಡಲಾಗಿದ್ದು, ಅಭ್ಯರ್ಥಿಗಳು ಬುಕ್ಲೆಟ್ ಪ್ರಕಾರ ಕೀ ಉತ್ತರಗಳನ್ನು ಚೆಕ್ ಮಾಡಿಕೊಳ್ಳಬಹುದು. ಆಕ್ಷೇಪಣೆ ಸಲ್ಲಿಸುವಾಗ ಅಗತ್ಯ ಪೂರಕ ದಾಖಲೆಗಳ ಸ್ಕ್ಯಾನ್ ಕಾಪಿಯನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ.
ಬೆಂಗಳೂರು:- ಬಡ ಹೃದ್ರೋಗಿಗಳ ಆಶಾಕಿರಣ, ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಸೇವಾವಧಿ ನಾಳೆ ಮುಕ್ತಾಯ ಆಗಲಿದೆ. ಸರಕಾರಿ ಸ್ವಾಯತ್ತತೆಯ ಆಸ್ಪತ್ರೆಯೊಂದು ಒಂದು ಖಾಸಗಿ ಪಂಚತಾರಾ ಆಸ್ಪತ್ರೆಯಲ್ಲಿ ಸಿಗುವ ವೈದ್ಯಕೀಯ ನೆರವು, ಸೌಲಭ್ಯಗಳು, ಶ್ರೀಮಂತರಿಗೆ ಸಿಗುವ ಶ್ರೀಮಂತ ಚಿಕಿತ್ಸೆ ಬಡವರಿಗೆ, ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡುವುದು ತನ್ನ ತಪಸ್ಸಾಗಿತ್ತು ಅದು ಈಡೇರಿದೆ, ಹಾಗಾಗಿ ಸಂತೃಪ್ತ ಭಾವದಿಂದ ನಿವೃತ್ತನಾಗುತ್ತಿದ್ದೇನೆ ಎಂದು ಡಾ ಮಂಜುನಾಥ್ ಹೇಳುತ್ತಾರೆ. ಜಯದೇವ ಹೃದ್ರೋಗ ಸಂಸ್ಥೆ ಬೆಳೆಯಲು ನೆರವಾದ ಸರಕಾರ, ಮತ್ತು ದಾನಿಗಳನ್ನು ಡಾ ಮಂಜುನಾಥ್ ಕೃತಜ್ಞತೆಯಿಂದ ನೆನೆಯುತ್ತಾರೆ. ಹಣವಿಲ್ಲದೆ, ಸೂಕ್ತ ದಾಖಲಾತಿಗಳಿಲ್ಲದೆ ಚಿಕಿತ್ಸೆಗೆ ಬರುತ್ತಿದ್ದ ಹೃದ್ರೋಗಿಗಳು ಗುಣಮುಖರಾಗಿ ಅವರ ಕುಟುಂಬ ಸದಸ್ಯರೊಂದಿಗೆ ನಗುನಗುತ್ತಾ ಮನೆಗೆ ಹೋಗುವ ದೃಶ್ಯ ತನ್ನಲ್ಲಿ ಸಾರ್ಥಕತೆಯ ಭಾವ ಮೂಡಿಸುತ್ತಿತ್ತು ಎಂದು ಡಾ ಮಂಜುನಾಥ್ ಹೇಳುತ್ತಾರೆ.
ಮಡಿಕೇರಿ:- 28 ವರ್ಷದ ಯುವಕ ಮೊಣ್ಣಪ್ಪ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆ ತಾಲೂಕಿನ ಖಾಸಗಿ ಲಾಡ್ಜ್ನಲ್ಲಿ ಜರುಗಿದೆ. ತಾಲೂಕಿನ ಆರ್ಜಿ ಗ್ರಾಮದ ನಿವಾಸಿ ಮೊಣ್ಣಪ್ಪ ಖಾಸಗಿ ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದನು. ಇಂದು ಲಾಡ್ಜ್ನಲ್ಲಿ ವಿಷ ಕುಡಿದು, ಫ್ಯಾನ್ಗೆ ಹಗ್ಗ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಮಡಿಕೇರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಮಾನದಲ್ಲಿ ನೀರು ಕುಡಿದು ಅಸ್ವಸ್ಥ ಹಿನ್ನೆಲೆ, ಮಯಾಂಕ್ ಅಗರ್ವಾಲ್ ರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಕರ್ನಾಟಕ ರಣಜಿ ತಂಡದೊಂದಿಗೆ ತ್ರಿಪುರಾದ ಅಗರ್ತಲಾದಿಂದ ಸೂರತ್‌ಗೆ ವಿಮಾನದಲ್ಲಿ ಅಗರ್ವಾಲ್ ಪ್ರಯಾಣ ಬೆಳೆಸಿದ್ದರು. ವಿಮಾನದಲ್ಲಿ ಕುಳಿತಿದ್ದ ಮಯಾಂಕ್, ಸೀಟಿನ ಮುಂಭಾಗದಲ್ಲಿ ಇಟ್ಟಿದ್ದ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದಾರೆ. ನೀರು ಕುಡಿಯುತ್ತಿದ್ದಂತೆ ಮಯಾಂಕ್ ನಾಲಿಗೆ, ಬಾಯಿಗೆ ಸುಟ್ಟ ಅನುಭವವಾಗಿದೆ. ಪರಿಣಾಮ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಅಗರ್ತಲಾದ ಐಎಲ್‌ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. ತ್ರಿಪುರ ವಿರುದ್ಧ ಸೋಮವಾರ ನಡೆದ ರಣಜಿ ಪಂದ್ಯದಲ್ಲಿ ಕರ್ನಾಟಕ ಗೆಲುವು ಸಾಧಿಸಿತ್ತು. ಮುಂದಿನ ಪಂದ್ಯಕ್ಕಾಗಿ ಸೂರತ್‌ಗೆ ಪ್ರಯಾಣ ಬೆಳೆಸಲಾಗಿತ್ತು.
ಚಿಕ್ಕಮಗಳೂರು:- ರಾಜಕೀಯವಾಗಿ ನರೇಂದ್ರ ಸ್ವಾಮಿ Is Seedless ಎಂದು ಮಾಜಿ ಶಾಸಕ ಸಿ.ಟಿ ರವಿ ಗುಡುಗಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತನ್ನ ವಿರುದ್ಧ ಅವಹೇಳನ ಹೇಳಿಕೆ ನೀಡಿದ್ದ ನರೇಂದ್ರ ಸ್ವಾಮಿ, ರಾಜಕೀಯವಾಗಿ ನವ್ ಹೀ ಈಸ್ ಸೀಡ್ ಲೆಸ್ ಎಂದರು. ನರೇಂದ್ರ ಸ್ವಾಮಿ ಮಂತ್ರಿಗಿರಿಗಾಗಿ ಅರ್ಜಿ ಮೇಲೆ ಅರ್ಜಿ ಹಾಕಿ, ಗಮನ ಸೆಳೆಯುತ್ತಿದ್ದಾರೆ. ನವ್ ಹೀ ಈಸ್ ಸೀಡ್ ಲೆಸ್ ಯಾರು ಅದೇ ರೀತಿ ಇರ್ತಾರೆ, ಅವರು ಮಾತ್ರ ಅಂತಹ ಪದ ಬಳಕೆ ಮಾಡ್ತಾರೆ. ಅವರ ಮಾತಿನ ಧಾಟಿ ನೋಡಿದರೆ ನವ್ ಹೀ ಈಸ್ ಸೀಡ್ ಲೆಸ್. ಆ ಕಾರಣಕ್ಕೆ ಅವರ ಬಾಯಿಂದ ಅಂತಹ ಮಾತು ಬಂದಿದೆ. ಸೀಡ್ ಲೆಸ್ ಅಂದ್ರೆ ಗೊತ್ತಲ್ಲ, ಅದರಲ್ಲಿ ಬೀಜ ಇರಲ್ಲ ಮತ್ತು ಹುಟ್ಟಲ್ಲ. ರಾಜಕೀಯವಾಗಿ ನವ್ ಹೀ ಈಸ್ ಸೀಡ್ ಲೆಸ್. ಅದಕ್ಕೆ ಅವರು ಆ ಪದ ಬಳಸಿದ್ದಾರೆ ಎಂದು ರವಿ ತಿರುಗೇಟು ನೀಡಿದ್ದಾರೆ. ಇದೇ ವೇಳೆ ಜ್ಞಾನವ್ಯಾಪಿ ಮಸೀದಿ ಕುರಿತು ಮಾತನಾಡಿದ ಅವರು,…
ಬೆಂಗಳೂರು:- ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ವ್ಯಾಪ್ತಿಯ 218 ಪಿಎಸ್‌ಐಗಳನ್ನು ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ಸಬ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ ಈ ಬಗ್ಗೆ ನಗರ ಪೊಲೀಸ್ ಆಯುಕ್ತರ ಪರವಾಗಿ ಐಪಿಎಸ್ ಅಧಿಕಾರಿ ರಮನ್ ಗುಪ್ತಾ ಅವರು ಆದೇಶ ಹೊರಡಿಸಿದ್ದು, ಸಂಬಂಧಪಟ್ಟ ಘಟಕಾಧಿಗಳು ವರ್ಗಾವಣೆಗೊಂಡ ಪಿಎಸ್‌ಐಗಳನ್ನು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಳಿಸಿ, ನಿಯುಕ್ತಿಗೊಳಿಸಿರುವ ಸ್ಥಳಗಳಿಗೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಶಿವಪ್ಪ ಎಂ.ನಾಯ್ಕರ್-ರಾಮಮೂರ್ತಿನಗರ ಠಾಣೆ, ಶಿವಪ್ಪ -ವೈಟ್‌ಫೀಲ್ಡ್ ಠಾಣೆ, ರಮಾದೇವಿ ಬಿ.ಎಸ್.ಮಹದೇವಪುರ ಠಾಣೆ, ಮೂರ್ತಿ- ಮಲ್ಲೇಶ್ವರಂ ಠಾಣೆ, ಪ್ರಭುಗೌಡ ಎಸ್. ಪಾಟೀಲ್-ಆಡುಗೋಡಿ ಸಂಚಾರ ಠಾಣೆ, ವಿನೂತ್ ಎಚ್.ಎಂ.-ಬಸವನಗುಡಿ ಠಾಣೆ, ಶ್ರೀನಿವಾಸ್ ಪ್ರಸಾದ್- ಹುಳಿಮಾವು ಠಾಣೆಗೆ ಸೇರಿ 218 ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.