Author: AIN Author

ಹುಬ್ಬಳ್ಳಿ: ಕನಕದಾಸ ಜಯಂತಿ ಅಂಗವಾಗಿ ಹುಬ್ಬಳ್ಳಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಟೌನ್ ಹಾಲ್ ವರೆಗೆ ಮೆರವಣಿಗೆ  ನಡೆಸಲಾಯಿತು. ಕನಕದಾಸರ ಬೃಹತ್ ಭಾವಚಿತ್ರದೊಂದಿಗೆ ಸಾಗಿದ ಮೆರವಣಿಗೆ ಆಗಿದ್ದು, ಹಿಳೆಯರಿಂದ ಕುಂಭ ಮೇಳ, ಪುರುಷರ ಡೊಳ್ಳು ಕುಣಿತ ಗಮನ ಸೆಲೆಯಿತು. ಕನಕದಾಸ ನೈರುತ್ಯ ರೈಲ್ವೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕನಕದಾಸ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಟೌನ್ ಹಾಲ್ ನಲ್ಲಿ ನಡೆಯಲಿರುವ ಕಾರ್ಯಕ್ರಮವಾಗಿದ್ದು, ನೂರಾರು ಕುರುಬ ಸಮಾಜದವರು ಮೆರವಣಿಗೆಯಲ್ಲಿ ಭಾಗಿಯಾದರು.

Read More

ಹೈದಾರಾಬಾದ್‌: ತೆಲಂಗಾಣದಲ್ಲಿ (Telangana) ಕಾಂಗ್ರೆಸ್‌ಗೆ (Congress) ಭಾರೀ ಮುನ್ನಡೆ ಸಾಧಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಪಟಾಕಿ ಹೊಡೆದು ಸಂಭ್ರಮಿಸಿದ್ದಾರೆ. ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷ ರೇವಂತ್‌ ರೆಡ್ಡಿ (Revanth Reddy) ನಿವಾಸದಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಕಾರ್ಯಕರ್ತರು ಸಿಹಿ ಹಂಚುತ್ತಿದ್ದಾರೆ.  ಬೆಳಗ್ಗೆ 10:15ರ ಟ್ರೆಂಡ್‌ ಪ್ರಕಾರ ಬಿಆರ್‌ಎಸ್‌ 50, https://ainlivenews.com/nia-raid-accused-making-fake-notes-arrested/ ಕಾಂಗ್ರೆಸ್‌ 60, ಬಿಜೆಪಿ 3, ಎಐಎಂಐಎಂ 5 ಸ್ಥಾನದಲ್ಲಿ ಮುನ್ನಡೆ ಸಾಧಿಸಿದ್ದಾರೆ. ತೆಲಂಗಾಣದಲ್ಲಿ ಒಟ್ಟು 119 ಸ್ಥಾನಗಳಿದ್ದು ಬಹುಮತಕ್ಕೆ 60 ಸ್ಥಾನಗಳ ಅಗತ್ಯವಿದೆ. ತೆಲಂಗಾಣದಲ್ಲಿ 2018 ರ ಚುನಾವಣೆಯಲ್ಲಿ ಬಿಆರ್‌ಎಸ್‌ 88 ಸೀಟ್‌ಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 19, ಎಐಎಂಐಎಂ 7, ಟಿಡಿಪಿ 2 ಸ್ಥಾನಗಳನ್ನು ಗೆದ್ದಿದ್ದವು. ಬಿಜೆಪಿ ಒಂದು ಕ್ಷೇತ್ರದಲ್ಲಿ ಮಾತ್ರ ಜಯ ಸಾಧಿಸಿತ್ತು.

Read More

ಕಲಬುರಗಿ: ಲೋಕಸಭೆ ಚುನಾವಣೆಗೆ ಪಂಚ ರಾಜ್ಯಗಳ ಫಲಿತಾಂಶ ದಿಕ್ಸೂಚಿ ಅಂತಾ ಹೇಳಕ್ಕಾಗಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಮಾತನಾಡಿದ ಪ್ರಿಯಾಂಕ್ ನಮಗೆ ಯಾವ ರೀತಿಯಲ್ಲೂ ಆಪರೇಷನ್ ಕಮಲ ಭಯ ನಮಗಿಲ್ಲ, ಆದ್ರೆ ನಮ್ಮ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಬೇಕಿದೆ. ಬಿಜೆಪಿ ಅವರು ತೋಳ್ಬಲ, ಹಣ ಬಲ, ಸಿಬಿಐ, ಇಡಿ ಬಳಕೆ ಮಾಡ್ತಾರೆ, ಹೀಗಾಗಿ ನಮ್ಮ ಶಾಸಕರನ್ನ ನಾವು ಸೇಫ್ ಆಗಿ ಇಟ್ಟುಕೊಳ್ಳಬೇಕಿದೆ ಅಷ್ಟೆ.ನಾನಂತೂ ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುವವರಿದ್ದೇವೆ ಅಂದ್ರು.

Read More

ಅಹಮದಾಬಾದ್: ಇಲ್ಲಿನ ಟ್ರಾನ್ಸ್‌ಸ್ಟೇಡಿಯಾ ಅರೆನಾ ಸ್ಟೇಡಿಯಂನಲ್ಲಿ ನಡೆದ ಪ್ರೊ ಕಬಡ್ಡಿ (Kabaddi) ಲೀಗ್‍ನ 10ನೇ ಸೀಸನ್‍ನ ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ (Telugu Titans) ವಿರುದ್ಧ ಗುಜರಾತ್ ಜೈಂಟ್ಸ್ (Gujarat Giants) ಭರ್ಜರಿ ಗೆಲುವು ಸಾಧಿಸಿತು. ಗುಜರಾತ್ ತಂಡದ ರೈಡರ್ ಸೋನು ಜಗ್ಲಾನ್ ಉತ್ತಮ ಪ್ರದರ್ಶನ ನೀಡಿದ್ದು, ಒಟ್ಟು 11 ಬಾರಿ ದಾಳಿ ಮಾಡಿ 11 ಪಾಯಿಂಟ್ಸ್ ತಂದುಕೊಟ್ಟು ಯಶಸ್ವಿಯಾದರು. https://ainlivenews.com/nia-raid-accused-making-fake-notes-arrested/ ರಾಕೇಶ್ ಸುಂಗ್ರೋಯಾ 5 ರೈಡ್‍ಗಳಲ್ಲಿ 5 ಅಂಕಗಳಿಸಿದರು. ಈ ಮೂಲಕ ಆತಿಥೇಯ ಗುಜರಾತ್ ಜೈಂಟ್ಸ್ ತಂಡವು ತೆಲುಗು ಟೈಟಾನ್ಸ್ ವಿರುದ್ಧ 38-32 ಅಂಕಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿತು. ತೆಲುಗು ಟೈಟಾನ್ಸ್ ತಂಡದ ಸ್ಟಾರ್ ರೈಡರ್ ಪವನ್ ಸೆಹ್ರಾವತ್ ಈ ಪಂದ್ಯದಲ್ಲಿ ಸೂಪರ್ 10 ಪಡೆದರು. ಪಂದ್ಯದ ನಿರ್ಣಾಯಕ ಘಟ್ಟಗಳಲ್ಲಿ ತೆಲುಗು ಟೈಟಾನ್ಸ್ ಎಡವಿದ ಕಾರಣ ಗೆಲುವಿಗೆ ಆ ಅಂಕಗಳು ಸಾಕಾಗಲಿಲ್ಲ.

Read More

ರಾಯಪುರ: ಛತ್ತಿಸ್‌ಗಢದಲ್ಲಿ ಸದ್ಯ ಬಿಜೆಪಿ-ಕಾಂಗ್ರೆಸ್‌ ನಡುವೆ ಹಾವು ಏಣಿ ಆಟ ಶುರುವಾಗಿದೆ. ಜಿದ್ದಾ ಜಿದ್ದಿ ಕಣದಲ್ಲಿ ಒಮ್ಮೆ ಬಿಜೆಪಿ, ಒಮ್ಮೆ ಕಾಂಗ್ರೆಸ್‌ ನಡುವೆ ಏರಿಳಿತ ಕಂಡುಬರುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಶುರುವಾಗಿದೆ. ಬೆಳಗ್ಗೆ 9:35ರ ವರೆಗೂ ಮುನ್ನಡೆ ಸಾಧಿಸಿದ್ದ ಆಡಳಿತ ಪಕ್ಷ ಕಾಂಗ್ರೆಸ್‌ನಲ್ಲಿ ಇದ್ದಕ್ಕಿದ್ದಂತೆ ಒಂದೊಂದೇ ಸ್ಥಾನ ಇಳಿಕೆಯಾಗುತ್ತಿರುವುದು ಕಂಡುಬರುತ್ತಿದೆ. https://ainlivenews.com/nia-raid-accused-making-fake-notes-arrested/ ಬೆಳಗ್ಗೆ 9:15ರ ವೇಳೆಗೆ ಛತ್ತಿಸ್‌ಗಢದಲ್ಲಿ ಬಿಜೆಪಿ 30, ಕಾಂಗೆಸ್ 49, ಇತರೇ 1 ಸ್ಥಾನಗಳಲ್ಲಿ, ಬೆಳಗ್ಗೆ 9:35ರ ವೇಳೆಗೆ ಬಿಜೆಪಿ 31, ಕಾಂಗೆಸ್ 59, ಇತರೇ 2 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿತ್ತು. 10:05 ಗಂಟೆ ವೇಳೆಗೆ ಬಿಜೆಪಿ 42, ಕಾಂಗ್ರೆಸ್‌ 46 ಹಾಗೂ ಇತರೇ 2 ಸ್ಥಾನಕ್ಕೆ ಬಂದು ನಿಂತಿತ್ತು. ಆದ್ರೆ 10:06 ಗಂಟೆ ವೇಳೆಗೆ ಪುನಃ ಬಿಜೆಪಿ 45, ಕಾಂಗ್ರೆಸ್‌ 44, ಇತರೇ 1 ಸ್ಥಾನಕ್ಕೆ ಬಂದು ನಿಂತಿದೆ. ಸದ್ಯ ಛತ್ತಿಸ್‌ಗಡದಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಆಡಳಿತದಲ್ಲಿದೆ. ಪ್ರತಿ 5 ನಿಮಿಷಕ್ಕೆ ಫಲಿತಾಂಶ…

Read More

ಭೋಪಾಲ್: ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ನಾವು ಮತ್ತೆ ರಾಜ್ಯದಲ್ಲಿ ಅಧಿಕಾರ ನಡೆಸುತ್ತೇವೆ ಎಂದು ಸಚಿವ, ಬಿಜೆಪಿ ನಾಯಕ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಚುನಾವಣಾ ಫಲಿತಾಂಶಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗ್ಗೆ 8 ಗಂಟೆಯಿಂದ ಮತಣಿಕೆ ನಡೆಯಲಿದೆ ಎಂದರು. ಈ ಬಾರಿಯ ಚುನಾವಣೆಯಲ್ಲಿ ನಾವು 125 ರಿಂದ 150 ಮತಗಳೊಂದಿಗೆ ಭರ್ಜರಿ ಜಯಗಳಿಸುತ್ತೇವೆ. https://ainlivenews.com/nia-raid-accused-making-fake-notes-arrested/ ಈ ಮೂಲಕ ರಾಜ್ಯದಲ್ಲಿ ನಾವು ಮತ್ತೆ ಆಡಳಿತ ನಡೆಸುತ್ತೇವೆ ಎಂದು ಸಚಿವರು ಹೇಳಿದರು. ಒಟ್ಟಿನಲ್ಲಿ ಸದ್ಯ ಬಿಜೆಪಿ ಸರ್ಕಾರವಿರುವ ಮಧ್ಯಪ್ರದೇದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ನೆಕ್ ಟು ನೆಕ್ ಫೈಟ್ ಇರಲಿದೆ ಎಂಬುದಾಗಿ ಬಹುತೇಕ ಸಮೀಕ್ಷೆಗಳು ತಿಳಿಸಿದ್ದು, ಯಾರು ಅಧಿಕಾರದ ಚುಕ್ಕಾಣಿ ಹಿಡಿಯುತ್ತಾರೆ ಎಂಬುದನ್ನು ಕಾದುನೋಡಬೇಕು. ಕೆಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುಂದಿದ್ದರೆ, ಇನ್ನು ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

Read More

ಭೋಪಾಲ್: ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದ್ದು, ಭಾರೀ ಕುತೂಹಲ ಹುಟ್ಟಿಸಿದೆ. ಮಧ್ಯಪ್ರದೇಶದಲ್ಲಿ (Madhyapradesh Election Result) ಸದ್ಯ ಬಿಜೆಪಿ (BJP) ಸರ್ಕಾರವಿದ್ದು, ಬಹುತೇಕ ಸಮೀಕ್ಷೆಗಳು ನೆಕ್ ಟು ನೆಕ್ ಫೈಟ್ ಇದೆ ಎಂದಿವೆ. ಕೆಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಮುಂದಿದ್ದರೆ, ಇನ್ನು ಕೆಲವು ಸಮೀಕ್ಷೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ನವೆಂಬರ್ 17ರಂದು ನಡೆದ ಚುನಾವಣೆಯಲ್ಲಿ ಮಧ್ಯಪ್ರದೇಶ ಚುನಾವಣಾ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಮತದಾನ ಅಂದ್ರೆ 77.1%ರಷ್ಟು ವೋಟಿಂಗ್ ನಮೂದಾಗಿತ್ತು. ಕಳೆದ ಬಾರಿ ಇಲ್ಲಿ ಗರಿಷ್ಠ ಸೀಟ್ ಗೆದ್ದು ಬಿಎಸ್‍ಪಿ ಶಾಸಕರ ನೆರವಿನಿಂದ ಇಲ್ಲಿ ಕಮಲ್‍ನಾಥ್ (Kamalnath) ಸರ್ಕಾರ ಮಾಡಿದ್ರು. ಆದರೆ ಬಿಜೆಪಿ ಆಪರೇಷನ್ ಕಮಲ ನಡೆಸಿದ ಕಾರಣ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಮತ್ತೆ ಸಿಎಂ ಆದ್ರು. https://ainlivenews.com/five-hostages-died-in-gaza-while-there-was-a-ceasefire/ ಇಲ್ಲಿ ಈ ಬಾರಿ ಕಾಂಗ್ರೆಸ್-ಬಿಜೆಪಿ (Congress-BJP) ನಡ್ವೆ ಟಫ್ ಫೈಟ್ ನಡೆದಿದೆ ಅಧಿಕಾರ ಉಳಿಸಿಕೊಳ್ಳೋ ಸಲುವಾಗಿ ಬಿಜೆಪಿ ಸೀಟ್ ಹಂಚಿಕೆಯಲ್ಲಿ ಹೊಸ ತಂತ್ರ ಅನುಸರಿಸಿತ್ತು. ಕೇಂದ್ರ ಸಚಿವರು ಸೇರಿ ಏಳು…

Read More

ಟೆಲ್‌ ಅವೀವ್‌: ಕೇವಲ ಗಾಜಾ ಪಟ್ಟಿಯಲ್ಲಿ (Gaza Strip) ಅಲ್ಲ ವಿಶ್ವದೆಲ್ಲೆಡೆ ಇರುವ ಹಮಾಸ್‌ (Hamas) ನಾಯಕರನ್ನು ಹತ್ಯೆ ಮಾಡಲು ಇಸ್ರೇಲ್‌ (Israel) ಈಗ ಮುಂದಾಗಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು (Israeli Prime Minister Benjamin Netanyahu) ಇಸ್ರೇಲಿನ ವಿದೇಶಿ ಗುಪ್ತಚರ ಸೇವೆ ನೀಡುವ ಮೊಸಾದ್‌ಗೆ (Mossad) ವಿಶ್ವದೆಲ್ಲೆಡೆ ಇರುವ ಹಮಾಸ್‌ ನಾಯಕರನ್ನು ಹುಡುಕಿ ಹುಡುಕಿ ಹತ್ಯೆ ಮಾಡುವಂತೆ ಆದೇಶ ನೀಡಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಟರ್ಕಿ, ಲೆಬನಾನ್ ಮತ್ತು ಕತಾರ್‌ನಲ್ಲಿ ನೆಲೆಸಿರುವ ಹಮಾಸ್ ನಾಯಕರನ್ನು ಪತ್ತೆ ಹಚ್ಚುವ ಕೆಲಸವನ್ನು ಗುಪ್ತಚರ ಇಲಾಖೆ ಆರಂಭಿಸಿದೆ. ಕತಾರ್‌ ತನ್ನ ರಾಜಧಾನಿ ದೋಹಾದಲ್ಲಿ ಕಳೆದ ಒಂದು ದಶಕದಿಂದ ರಾಜಕೀಯ ಕಚೇರಿಯನ್ನು ನಡೆಸಲು ಹಮಾಸ್‌ಗೆ ಅವಕಾಶ ಮಾಡಿಕೊಟ್ಟಿದೆ ಎಂದು ವರದಿ ತಿಳಿಸಿದೆ. ಸಾಮಾನ್ಯವಾಗಿ ಈ ರೀತಿಯ ಯೋಜನೆಗಳು ರಹಸ್ಯವಾಗಿರುತ್ತದೆ. ಆದರೆ ನೆತನ್ಯಾಹು ನ.22 ರಂದು ಹಿರಿಯ ಅಧಿಕಾರಿಗಳ ಜೊತೆಗೆ ನಡೆಸಿದ ಸಭೆಯಲ್ಲಿ ವಿದೇಶದಲ್ಲಿ ನೆಲೆಸಿರುವ ಹಮಾಸ್‌ ನಾಯಕರ ವಿರುದ್ಧ ಕಾರ್ಯನಿರ್ವಹಿಸಲು ಸೂಚನೆ ನೀಡಿದ್ದೇನೆ ಎಂದು…

Read More

ಕಲಬುರಗಿ:- ತಾಯಿಯನ್ನು ನಿಂದಿಸಿದನೆಂದು ಅಜ್ಜನನ್ನೇ ಮೊಮ್ಮಗ ಕೊಂದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಘಟನೆ ತುಸು ತಡವಾಗಿ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಮೊಮ್ಮಗನನ್ನು ಆಕಾಶ್‌ (22) ಎಂದು ಗುರುತಿಸಲಾಗಿದೆ. ಘಟನೆ ಕಲಬುರಗಿ ತಾಲೂಕಿನ ಜವಳಗಾ (ಬಿ) ಗ್ರಾಮದಲ್ಲಿ ಸಂಭವಿಸಿದೆ. ಮೃತ ಅಜ್ಜನನ್ನು ಸಿದ್ರಾಮಪ್ಪ (74) ಎಂದು ಗುರುತಿಸಲಾಗಿದೆ. ಆಕಾಶನ ತಾಯಿ ಸರೋಜಮ್ಮಳಿಗೆ ಅಜ್ಜ ಸಿದ್ರಾಮಪ್ಪ ನಿಂದಿಸಿರೋದೆ ಕೊಲೆಗೆ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ. ಕಳೆದ ಸೋಮವಾರ ಸಿದ್ರಾಮಪ್ಪನ ಸಹೋದರಿ ಮೃತಪಟ್ಟ ಹಿನ್ನೆಲೆಯಲ್ಲಿ ಸಹೋದರರೆಲ್ಲರೂ ಸೇರಿ ಕುಮಸಿ ಗ್ರಾಮಕ್ಕೆ ತೆರಳಿದ್ದರು. ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡು ಮರಳಿ ಊರಿಗೆ ಬರುವಾಗ ದಾರಿಯಲ್ಲಿ ಸರೋಜಮ್ಮ ಸಿದ್ರಾಮಪ್ಪನಿಗೆ ಕ್ರೂಸರ್‌ ವಾಹನದ ಟಾಪ್‌ ಮೇಲೆ ಕೂರುವಂತೆ ಸೂಚಿಸಿದ್ದರು. ತನಗೆ ವಯಸ್ಸಾಗಿದೆ. ಗಾಡಿ ಮೇಲೆ ಕೂರುವಂತೆ ಹೇಳುತ್ತಿಯಾ ಎಂದು ಸಿದ್ರಾಮಪ್ಪ ಸರೋಜಮ್ಮಳಿಗೆ ಅವಾಚ್ಯವಾಗಿ ನಿಂದಿಸಿದ್ದರು. ಈ ಸಂಗತಿ ಸರೋಜಮ್ಮ ತನ್ನ ಮಗನಿಗೆ ಹೇಳಿದ್ದರು. ಇದೇ ಕಾರಣದಿಂದ ರೊಚ್ಚಿಗೆದ್ದ ಮಗ ಆಕಾಶ್‌ ಅಜ್ಜನನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಈ ಕುರಿತಂತೆ…

Read More

ಹುಬ್ಬಳ್ಳಿ, : ಹೊರಗಿನ ಕತ್ತಲೆ ಕಳೆಯಲು ದೀಪಬೇಕು. ಅಜ್ಞಾನವೆಂಬ ಕತ್ತಲೆ ಕಳೆಯಲು ಗುರುಬೇಕು. ಅರಿವು, ಆದರ್ಶಗಳ ಪರಿಪಾಲನೆಯಿಂದ ಜೀವನ ಉಜ್ವಲಗೊಳ್ಳುತ್ತದೆಂದು ಬಾಳೆಹೊನ್ನುರು ಶ್ರೀ ರಂಭಾಪುರಿ ಡಾ‌. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು. ಅವರು ಹುಬ್ಬಳ್ಳಿ ವಿದ್ಯಾನಗರದ ಶ್ರೀ ರಂಭಾಪುರಿ ಜಗದ್ಗುರು ವೀರ ಗಂಗಾಧರ ಸಮುದಾಯ ಭವನದಲ್ಲಿರುವ ಶ್ರೀ ಜಗದ್ಗುರು ರೇಣುಕ ಮಂದಿರದಲ್ಲಿ ಜರುಗಿದ ಕಾರ್ತೀಕ ದೀಪೋತ್ಸವ ಸಮಾರಂಭದ ಸಾನಿಧ್ಯವಹಿಸಿ, ಆಶಿರ್ವಚನ ನೀಡಿದರು. ಮನುಷ್ಯನಿಗೆ ಅರಿವು, ಆರೋಗ್ಯ ಮತ್ತು ಆಯುಷ್ಯ ಬಹು ಮುಖ್ಯ. ಭೌತಿಕ ಬದುಕು ಸಂಪತ್ತಿನಷ್ಟೆ ಉಜ್ವಲಗೊಳ್ಳುವುದು. ಸಂಪತ್ತಿನ ಜೊತೆ ಶಿವ ಜ್ಞಾನದ ಅರಿವು ಸಂಪಾದಿಸಿಕೊಂಡು ಬಾಳ ಬೇಕಾಗುತ್ತದೆ ಎಂದು ಅವರು ಹೇಳಿದರು. ಶ್ರೀ ಜಗದ್ಗುರು ರೇಣುಕಾಚಾರ್ಯರು ಮೌಲ್ಯ ಆಧಾರಿತ ಬದುಕಿಗೆ ಧರ್ಮದ ದಶವಿಧ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ,ಅಸ್ತೇಯ, ಬ್ರಹ್ಮಚರ್ಯ, ದಯಾ, ಕ್ಷಮಾ, ದಾನ, ಪೂಜಾ, ಜಪ, ಧ್ಯಾನ ಎಂಬ ಹತ್ತು ಸೂತ್ರಗಳು ಸಕಲರ ಬಾಳಿನ ಶ್ರೇಯಸ್ಸಿಗೆ ಕಾರಣವಾಗಿವೆ. ಮಾತು ಮತ್ತು ಕೃತಿ ಒಂದಾಗಿ ಬಾಳಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.…

Read More