Author: AIN Author

ಬಳ್ಳಾರಿ: ಟ್ರಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುರುಗೋಡು ತಾಲೂಕಿನ ವದ್ದಟ್ಟಿ ರಸ್ತೆಯ ಬಳಿ ನಡೆದಿದೆ. ಕೆ.ಕಲ್ಗುಡೆಪ್ಪ (24) ಮೃತ ದುರ್ಧೈವಿಯಾಗಿದ್ದು, ಟ್ರಾಕ್ಟರ್ ಮತ್ತು ಟ್ರಾಕ್ಟರ್ ಚಾಲಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಘಟನೆ ಸಂಬಂಧ ಕುರುಗೋಡು ಪೋಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Read More

ಬೆಂಗಳೂರು: ನಗರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಪೊಲೀಸರು  ಮೂರು ಕೋಟಿ ರೂಪಾಯಿ ಮೌಲ್ಯದ ಇ-ಸಿಗರೇಟ್ (E-cigarette) ಅನ್ನು  ವಶಪಡಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಇ-ಸಿಗರೇಟ್​ಗಳನ್ನು ದುಬೈಯಿಂದ ಬೆಂಗಳೂರಿಗೆ ತರಿಸಲಾಗಿತ್ತು ಎಂಬುದು ತಿಳಿದುಬಂದಿದೆ. ಒಂದು ಸಿಗರೇಟ್​​ಗೆ ಐದರಿಂದ ಆರು ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು. ಇ-ಸಿಗರೇಟ್ ಅನ್ನು ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಬೈಯಿಂದ ದೆಹಲಿಗೆ ತೆರಿಸಿ ಅಲ್ಲಿಂದ ಬೆಂಗಳೂರಿಗೆ ತರಿಸಲಾಗಿತ್ತು. ಬೆಂಗಳೂರಿನ ಸುದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಇರಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳ ಮೂಲದ ಶೋಹೇಬ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಹಲವಾರು ಸ್ಮೋಕಿ ಜೋಜ್ ಹಾಗೂ ರೀಟೆಲ್ ಮಾರಾಟ ಮಾಡುವವರಿಗೆ ಇ-ಸಿಗರೇಟ್​​ ಅನ್ನು ನೀಡುತ್ತಿದ್ದ. ಅನ್​ಲೈನ್ ಮೂಲಕ ಆರ್ಡರ್ ಮಾಡಿಸಿಕೊಂಡು ಪೋರ್ಟರ್ ಮತ್ತು ಡ್ನಜೋ ಮೂಲಕ ಪೂರೈಕೆ ಮಾಡುತ್ತಿದ್ದ ಎಂದು ಮಾಹಿತಿ ನೀಡಿದ್ದಾರೆ.

Read More

ಬೆಂಗಳೂರು: ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್​ ಮಂಡನೆಯಾಗಲಿದ್ದು  ಹಾಗೆ ಈ ಬಾರಿ 3.80 ಲಕ್ಷ ಕೋಟಿ ರೂ. ಬಜೆಟ್‌ ಮಂಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ 15 ಕೋಟಿ ಹೆಚ್ಚುವರಿ ಅನುದಾನವನ್ನು ನೀಡುವಂತೆ  ವಿಧಾನಪರಿಷತ್‌ ನಾಐಕ ಟಿ.ಎ.ಶರವಣ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ. 2024-25ನೇ ಸಾಲಿನಲ್ಲಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮಕ್ಕೆ 15 ಕೋಟಿ ಹೆಚ್ಚುವರಿ ಅನುದಾನವನ್ನು ನೀಡುವಂತೆ ಕೋರಿ ಸನ್ಮಾನ್ಯ ಮುಖ್ಯಮಂತ್ರಿಗಳಾದಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಪತ್ರ ಸಲ್ಲಿಸಿದ ಪರಿಷತ್‌ ನಾಯಕ ಟಿ.ಎ. ಶರವಣ.

Read More

ಅತೀ ನಿರೀಕ್ಷಿತ ಅಲ್ಲು ಅರ್ಜುನ್ ನಟನೆಯ ಪುಷ್ಪ-2 ಬಿಡುಗಡೆ ಕುರಿತಂತೆ ಮತ್ತೊಂದು ಸ್ಪಷ್ಟನೆ ಬಂದಿದೆ. ಅಲ್ಲಿಗೆ ನಿಗದಿತ ದಿನಾಂಕದಂದೆ ಸಿನಿಮಾ ರಿಲೀಸ್ (Released) ಆಗುವುದು ಫಿಕ್ಸ್ ಆಗಿದೆ. ನಿನ್ನೆಯಷ್ಟೇ ನಿರ್ಮಾಣ ಸಂಸ್ಥೆಯು ಪೋಸ್ಟರ್ ಹಂಚಿಕೊಂಡಿದ್ದು, ಪುಷ್ಪ 2 ಸಿನಿಮಾ ರಿಲೀಸ್  ಗೆ 200 ದಿನವಷ್ಟೇ ಬಾಕಿ ಎಂದು ಬರೆದಿದೆ. ಅಲ್ಲಿಗೆ ಇಂದಿಗೆ 199 ದಿನ ಬಾಕಿ ಉಳಿದಿದೆ. ಈ ಹಿಂದೆ ಸ್ವಾತಂತ್ರ್ಯ ದಿನದಂದು ಅಂದರೆ ಆಗಸ್ಟ್ 15ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ ಎಂದು ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿತ್ತು. ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ ಎಕ್ಸೈಟ್ ಆಗಿದ್ದರು. ಇದೀಗ ರಿಲೀಸ್ ಡೇಟ್ ಮುಂದೆ ಹೋಗಿದೆ ಎಂದು ಸುದ್ದಿಯನ್ನು ಹರಿಬಿಡಲಾಗಿದೆ. ಅಂದು ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾ ಬರಲಿರುವ ಕಾರಣ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದೆ ಅಂತ ಸುದ್ದಿ ಆಗಿತ್ತು. ಇಂಥದ್ದೊಂದು ಸುದ್ದಿ ಆದ ಬೆನ್ನಲ್ಲೇ ಸಿನಿಮಾ ತಂಡದಿಂದ ಸ್ಪಷ್ಟನೆ ಬಂದಿದೆ. ಯಾವುದೇ ಕಾರಣಕ್ಕೂ ರಿಲೀಸ್ ಡೇಟ್…

Read More

ಕಲಬುರಗಿ: ಮದುವೆ ವಿಚಾರಕ್ಕೆ ಕಲಹ ಉಂಟಾದ ಹಿನ್ನಲೆ ಬಾವಿಯಲ್ಲಿ ಬಿದ್ದು ಅಣ್ಣ ತಂಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿಂಚೋಳಿ ತಾಲ್ಲೂಕಿನ ಪಟಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ಅಣ್ಣ ಸಂದೀಪ್ ತಂಗಿ ನಂದಿನಿ‌ ಸಾವಿಗೆ ಶರಣಾದ ದುರ್ದೈವಿಗಳು ಎನ್ನಲಾಗಿದೆ. ಮದುವೆ ವಿಚಾರದಲ್ಲಿ ಮನೆಯಲ್ಲಿ ಗಲಾಟೆ ಮಾಡಿಕೊಂಡಿದ್ದ ನಂದಿನಿ ಬಳಿಕ ಮನೆಯಿಂದ ಹೊರಹೋಗಿ ಬಾವಿಗೆ ಹಾರಿದ್ದಾಳೆ. ಕೂಡಲೇ ನಂದಿನಿಯ ಹಿಂದೇನೆ ತೆರಳಿದ ಅಣ್ಣ ಸಂದೀಪ್ ತಂಗಿ ಬಾವಿಗೆ ಹಾರಿರೋದನ್ನ ಕಂಡು ತಾನೂ ಬಾವಿಗೆ ಹಾರಿದ್ದಾನೆ. ಈಜು ಬಾರದ ಪರಿಣಾಮ ಅಣ್ಣ ತಂಗಿಯಿಬ್ಬರು ಬಾವಿಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ  ಮುಂದುವರೆದಿದೆ..

Read More

ಬಳ್ಳಾರಿ: ರಸ್ತೆ ಅಪಘಾತದಲ್ಲಿ ಕಂಪ್ಲಿಯ ದೇವರಮನೆ ಯಲ್ಲಪ್ಪ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ರಸ್ತೆ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸಿಂಧನೂರು ಮಾರ್ಗವಾಗಿ ಕಂಪ್ಲಿ ಪಟ್ಟಣದ ಕಡೆ ತೆರಳುತ್ತಿರುವಾಗ ಕಾರು ಹಾಗೂ ಲಾರಿಯ ಮಧ್ಯೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಕುಳಿತಿದ್ದ ದೇವರ ಮನೆ ಯಲ್ಲಪ್ಪ ಅವರ ತಲೆಗೆ ತೀವ್ರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ್ದಿದ್ದಾನೆ. ಇನ್ನು ಕಾರಿನಲ್ಲಿ ಕುಳಿತಿದ್ದ ಹೆಂಡತಿ, ಮಗ, ಸೊಸೆ ಹಾಗೂ ಮೊಮ್ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕಂಪ್ಲಿ ಪೊಲೀಸರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Read More

ಮಂಡ್ಯ: ಸ್ವಾಭಿಮಾನ, ಗೌರವದ ವಿಚಾರದಲ್ಲಿ ಮಂಡ್ಯ ಜಿಲ್ಲೆ ರಾಜ್ಯಕ್ಕೆ ಮಾದರಿ. ಜನತಾ ಪಕ್ಷವನ್ನ ನಿನ್ನೆಯೇ ಅಂತಿಮಗೊಳಿಸಿದ್ದೀರಿ ಎಂದು ಹೆಚ್ಡಿಕೆ ವಿರುದ್ಧ ಚಲುವರಾಯಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನೀವು (ಕುಮಾರಸ್ವಾಮಿ) ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದ ಕಾರಣ ಎಂಬುದನ್ನು ಮರೆಯಬೇಡಿ. ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು. ಜಿಲ್ಲೆಯ ಜನರೇ ನಿಮಗೆ ಅಧಿಕಾರ ನೀಡಿದ್ದು. ಕಳೆದ ಬಾರಿಯ ಚುನಾವಣೆಯಲ್ಲಿ ನಮ್ಮನ್ನು ಆಶೀರ್ವದಿಸಿದ್ದಾರೆ. ಮುಂದೆ ನಾವು ಸರಿಯಾದ ದಾರಿಯಲ್ಲಿ ಸಾಗದಿದ್ದರೆ ನಮಗೂ ಜನ ಪಾಠ ಕಲಿಸಬಹುದು. ಇದನ್ನು ನೀವು ನೆನಪಿನಲ್ಲಿಟ್ಟುಕೊಳ್ಳಿ. ಅದು ಬಿಟ್ಟು ಸಂವಿಧಾ, ಪ್ರಜಾಪ್ರಭುತ್ವ ವಿರೋಧಿ ಚಟುವಟಿಕೆಗಳಿಗೆ ಪ್ರಚೋದನೆ ನೀಡಬೇಡಿ ಎಂದು ಕುಮಾರಸ್ವಾಮಿ ಅವರನ್ನುದ್ದೇಶಿಸಿ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.…

Read More

ಕಲಬುರಗಿ: ನಿಯಮ ಉಲ್ಲಂಘಿಸಿದ ಆರೋಪ ಹಿನ್ನಲೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮಾಲೀಕತ್ವದ ಸಿದ್ಧಶ್ರೀ ಸಕ್ಕರೆ ಕಾರ್ಖಾನೆ ಬಂದ್ ಮಾಡುವಂತೆ ಸರ್ಕಾರ ನೀಡಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ. ಕಲಬುರಗಿಯ ಚಿಂಚೋಳಿ ಬಳಿಯ ಸಕ್ಕರೆ ಕಾರ್ಖಾನೆ ಕಾಯಿದೆಗಳನ್ನ ಗಾಳಿಗೆ ತೂರಿದೆ. ಹೀಗಾಗಿ ಫ್ಯಾಕ್ಟರಿ ಬಂದ್ ಮಾಡುವಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್ ಮೊರೆ ಹೋಗಿದ್ರು.. ಇದೀಗ ಸರ್ಕಾರ ನಿರ್ಧಾರಕ್ಕೆ ಬ್ರೇಕ್ ಬಿದ್ದಿದ್ದು ಈ ವಿಚಾರ ಸತ್ಯಕ್ಕೆ ಸಿಕ್ಕ ಜಯ ಅಂತ ಟ್ವೀಟ್ ಮಾಡಿ ಯತ್ನಾಳ್ ಮಾಹಿತಿ ಹಂಚಿಕೊಂಡಿದ್ದಾರೆ..ಸಿಹಿ ಸುದ್ದಿ ಹೊರ ಬೀಳ್ತಿದ್ದಂತೆ ಕಾರ್ಮಿಕರು ಪಟಾಕಿ ಸಿಡಿಸಿ ಫ್ಯಾಕ್ಟರಿ ಮುಂಭಾಗ ಸಂಭ್ರಮಿಸಿದ್ದಾರೆ..

Read More

ಬೆಂಗಳೂರು ಗ್ರಾಮಾಂತರ:  ತನ್ನನ್ನು ಗುರಾಯಿಸಿ ನಿಂದಿಸಿದ್ದಾಗಿ ವ್ಯಕ್ತಿಯೊಬ್ಬ ಯುವಕನಿಗೆ ಚಾಕು ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ.ಬೇಗೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿಯಾಗಿರುವ ಮಂಜುನಾಥ್ ಕೊಲೆ ಯತ್ನ ಮಾಡಿದ ಆರೋಪಿಯಾಗಿದ್ದು, ಅಶ್ವತ್ಥ್​ ಕುಮಾರ್ (30)​ ಚಾಕು ಇರಿತಕ್ಕೊಳಗಾದ ಯುವಕನಾಗಿದ್ದಾನೆ.  ಘಟನೆಯ ವಿವರ ಅಶ್ವತ್ಥ್ ಕುಮಾರ್ ಸೂರ್ಯ ಗ್ಯಾಸ್ ಎಂಬ​ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಈತ ತನ್ನನ್ನು ಗುರಾಯಿಸಿದ್ದಲ್ಲದೆ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಿ ಮಂಜುನಾಥ್ ತನ್ನ ಡಿಯೋ ಬೈಕ್​ನಲ್ಲಿ ಬಂದು ಅಶ್ವತ್ಥ್​ ಕುಮಾರ್​ಗೆ ಚಾಕು ಇರಿದು ಪರಾರಿಯಾಗಿದ್ದಾನೆ. ಗಾಯಾಳು ಅಶ್ವತ್ಥ್ ಕುಮಾರ್​ ಅವರನ್ನು ಕೂಡಲೇ ಸಿದ್ದಾರ್ಥ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಘಟನಾ ಸ್ಥಳಕ್ಕೆ ಆಗಮಿಸಿದ ನೆಲಮಂಗಲ ಗ್ರಾಮಾಂತರ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿಗಾಗಿ ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ಅಹಿತಕರ ಘಟನೆಗಳು ನಡಯದಂತೆ ಗ್ರಾಮದಲ್ಲಿ ಪೊಲೀಸನ್ನು ನಿಯೋಜಿಸಲಾಗಿದೆ.

Read More

ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ತೊಡಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಸೈಬರ್ ಪೋಲೀಸರ್ ಯಶಸ್ಸಿಯಾಗಿದ್ದಾರೆ.ಆರೋಪಿಗಳಿಂದ ಸುಮಾರು 17 ಲಕ್ಷ ರೂ.ಮೌಲ್ಯದ, 16.940 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿರುವ ಘಟನೆ ಜರುಗಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಆರ್.ಎಚ್.ಕಾಲೋನಿಯ ಶ್ರೀಪಾದೂ ಬಿಶ್ವಾಸ್(56) ಮತ್ತು ಪಶನ್ ಜಿತ್ ಮಂಡಲ್(31) ಬಂಧಿತ ಆರೋಪಿಗಳು. ಬಳ್ಳಾರಿ ನಗರದ ಹೊರವಲಯ ಸಿರುಗುಪ್ಪ ರಸ್ತೆಯ ಲಕ್ಷ್ಮೀನಗರ ಕ್ಯಾಂಪ್ ಬಳಿಯ ಹೊಲವೊಂದರಲ್ಲಿ ಆರೋಪಿಗಳಿಬ್ಬರೂ 17 ಲಕ್ಷ ರೂ. ಮೌಲ್ಯದ 16.940 ಕೆಜಿ ಗಾಂಜಾವನ್ನು ಮಾರಾಟ ಮಾಡಲು ಮುಂದಾಗಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದಿರುವ ಅಪರಾಧ ಪೊಲೀಸ್ ಠಾಣೆಯ ಸಿಪಿಐ ವೈ.ಎಚ್.ರಮಾಕಾಂತ್, ಪಿಎಸ್‌ವೈ ವಲಿಬಾಷ, ಸಿಬ್ಬಂದಿಗಳಾದ ಕೆ.ಸುರೇಶ್, ಕೆ.ವೇಣುಗೋಪಾಲ್, ಕೆ.ತಿಪ್ಪೇರುದ್ರಪ್ಪ ಸೇರಿ ಇತರರು ದಾಳಿ ನಡೆಸಿ, ಗಾಂಜಾ ಮಾರಾಟದಲ್ಲಿ ತೊಡಗಿದ್ದ ಆರೋಪಿಗಳನ್ನು ಗಾಂಜಾ ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More