ಬೆಂಗಳೂರು: ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇಸರಿ ಧ್ವಜ ಹಾರಿಸಲು ಅನುಮತಿ ನೀಡಿರಲಿಲ್ಲ. ಹಾಗಾಗಿ ಪಂಚಾಯಿತಿ ಅಧಿಕಾರಿಗಳು ಕೇಸರಿ ಧ್ವಜ ತೆಗೆದು, ರಾಷ್ಟ್ರಧ್ವಜ ಹಾರಿಸಿದ್ದಾರೆ ಎಂದು ಸಮರ್ಥಿಸಿಕೊಂಡರು. ಇದರಿಂದ ಗಲಾಟೆಯಾಗಿದ್ದು, ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಬೇರೆ ಬೇರೆ ಕಡೆಯಲ್ಲಿ ಕೇಸರಿ ಧ್ವಜ ಹಾರಿಸಲು ಯಾರದ್ದು ತಕರಾರು ಇಲ್ಲ. ಆದರೆ ಸರ್ಕಾರಿ ಜಾಗದಲ್ಲಿ ಹಾರಿಸಬಾರದು.ಇದು ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ‘ಕಾಂಗ್ರೆಸ್‌ನವರು ಹಿಂದೂ ವಿರೋಧಿಗಳು ಎಂದು ಬಿಂಬಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ. ನಾವು ಸಹ ಹಿಂದೂಗಳೇ, ನೀವು ಕಾನೂನಿನ ಚೌಕಟ್ಟಿನಲ್ಲಿ ಕೆಲಸ ಮಾಡಿ ಎಂದು ಹೇಳುತ್ತಿದ್ದೇವೆ. ರಾಜ್ಯದ ಕಾನೂನು ಮುರಿಯುವ ಕೆಲಸ ಮಾಡಬೇಡಿ ಅಂತ ಹೇಳಿದರೂ ಅವರು ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ’ ಎಂದು ಪರಮೇಶ್ವರ ಬೇಸರ ವ್ಯಕ್ತಪಡಿಸಿದರು.
Author: AIN Author
ಬೆಂಗಳೂರು ಗ್ರಾಮಾಂತರ: ನಿರ್ಮಾಣ ಹಂತದ ಕಟ್ಟಡಕ್ಕೆ ಆಕ್ರಮವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡಿದ್ದ ಮಹಿಳೆಯನ್ನು ಬೆಸ್ಕಾಂ ಸಿಬ್ಬಂದಿ ಪ್ರಶ್ನೆ ಮಾಡಿದ್ದಕ್ಕೆ ಕಪಾಳ ಮೋಕ್ಷ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ ನಡೆದಿದೆ. ಇನ್ನೂ ಈ ಘಟನೆ 24ನೇ ತಾರೀಕು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಹಳೆ ಚಂದಾಪುರ ಮೂಲದ ರೂಪ ಹಲ್ಲೆ ಮಾಡಿದ ಮಹಿಳೆ ಎನ್ನಲಾಗಿದೆ.. ಹರೀಶ್ ಹಲ್ಲೆಗೊಳಗಾದ ಬೆಸ್ಕಾಂ ಸಿಬ್ಬಂದಿ.. ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿ ಕಳೆದ 24 ನೇ ತಾರೀಖಿನಂದು ಮಧ್ಯಾಹ್ನ 12:30ಕ್ಕೆ ವೀರಸಂದ್ರ ಬೆಸ್ಕಾಂ ಸಬ್ ಡಿವಿಷನ್ ಅಧಿಕಾರಿಗಳು ನಿರ್ಮಾಣ ಹಂತದ ಕಟ್ಟಡಕ್ಕೆ ಆಕ್ರಮವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡಿದ್ದ ಮಹಿಳೆಯನ್ನು ಮನೆ ಬಳಿ ಹೋಗಿದ್ದಾರೆ ಆ ವೇಳೆ ಮಹಿಳೆ ಲೈನ್ ಮ್ಯಾನ್ ಹರೀಶ್ ಪ್ರಶ್ನೆ ಮಾಡಿದ್ದಾರೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ ..ವಿಚಾರ ತಿಳಿದು ವಿದ್ಯುತ್ ಲೈನ್ ಕಟ್ ಮಾಡಿದಕ್ಕೆ ಬೆಸ್ಕಾಂ ಸಿಬ್ಬಂದಿಯ ಮೇಲೆ ಅವಾಚ್ಯ ಶಬ್ದಗಳಿಂದ…
ಚಿತ್ರದುರ್ಗ: ಕ್ವಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದ ಶೋಷಿತರ ಸಮಾವೇಶದಲ್ಲಿ ಬೆಳಕಿಗೆ ಬಂದಿದೆ. ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶಕ್ಕೆ ಬರುವ ಜನರಿಗೆ ವಿತರಿಸಲೆಂದು ಸಿದ್ಧಪಡಿಸಿದ್ದ ಬಿರಿಯಾನಿ ನೆಲದಪಾಲಾಗಿದೆ. ಸಮಾವೇಶಕ್ಕೆ ನಿರೀಕ್ಷೆಯಷ್ಟು ಜನರು ಬಾರದ ಹಿನ್ನೆಲೆಯಲ್ಲಿ ಉಳಿದ ಚಿಕನ್ ಬಿರಿಯಾನಿ ಹಾಗೂ ಪಲಾವ್ ಸಂಪೂರ್ಣವಾಗಿ ನೆಲದ ಪಾಲಾಗಿದೆ. ಜನರು ಸೇರುವ ನಿರೀಕ್ಷೆಯಿಂದ ಮೂರುವರೆ ಲಕ್ಷಕ್ಕೂ ಅಧಿಕ ಜನರಿಗೆಂದು ಬಿರಿಯಾನಿ ತಯಾರಿಸಲಾಗಿತ್ತು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಜನರು ಆಗಮಿಸದ ಹಿನ್ನಲೆ ತಯಾರಿಸಲು ತಂದಿದ್ದ ಕೆಲವು ಆಹಾರ ಸಾಮಗ್ರಿಗಳನ್ನು ಆಯೋಜಕರು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಉಳಿದ ಅನ್ನ, ಚಿಕನ್ ಎಲ್ಲವನ್ನು ನೆಲಕ್ಕೆ ಹಾಕಿದ್ದಾರೆ. ಈ ದೃಶ್ಯಾವಳಿಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ. https://ainlivenews.com/are-you-thinking-of-buying-a-home-low-interest-home-loan-available-in-these-banks/ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್ ಭಾಗಿಯಾಗಿದ್ದರು. ಹಸಿವಿನಿಂದ ಜನ ಇರಬಾರದು ಅಂತ ಹೇಳಿ ಬಿರಿಯಾನಿಯನ್ನು ತಯಾರಿಸಲಾಗಿತ್ತು. ಈ ಸಂದರ್ಭದಲ್ಲಿ ಅನ್ನವನ್ನು ನೆಲದ ಪಾಲು ಮಾಡಿರುವ ಆಯೋಜಕರ ವಿರುದ್ಧ ಜನಸಾಮನ್ಯರು ಕಿಡಿಕಾರಿದ್ದಾರೆ. ಉಳಿದ…
ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಲಿತ್ ಅಶೋಕ್ ನಲ್ಲಿ ಆಯೋಜಿಸಿದ್ದ GAFX ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. https://ainlivenews.com/cm-siddaramaiah-disrespects-president-what-did-hdk-say/ ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಭಾಗವಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿ ಎಸ್. ಮುಖಂಡ ಹೆಚ್.ಡಿ.ಕುಮಾರಸ್ವಾಮಿಯವರು ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ನೀಡುತ್ತಿದ್ದಾರೆ. ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು. ಪಂಚಾಯತಿಯವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದಾರೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ ಎಂದರು. ಸಿದ್ದರಾಮಯ್ಯ ಹಿಂದೂ ವಿರೋಧಿ…
ಬೆಂಗಳೂರು: ರಾಷ್ಟ್ರಪತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಗೌರವದ ಹೇಳಿಕೆ ವಿಚಾರ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ರಾಷ್ಟ್ರಪತಿ ಬಗ್ಗೆ ಅಗೌರವದ ಪದ ಬಳಕೆ ಮಾಡಿದ್ದಾರೆ ಶೋಷಿತ ವರ್ಗದ ಸಮಾವೇಶದಲ್ಲಿ ಈರೀತಿ ಹೇಳಿಕೆ ನೀಡಿದ್ದು ಖಂಡನೀಯ ಸಂವಿಧಾನ ತಜ್ಞ, ಅಹಿಂದ ಎಂದು ಹೇಳಿಕೊಳ್ಳುವ ವ್ಯಕ್ತಿ ಹೀಗೆ ಹೇಳಿದ್ದಾರೆ ಎಂದು ಕಿಡಿ ಕಾರಿದ್ದಾರೆ. https://ainlivenews.com/mallikarjuna-kharges-inappropriate-use-of-words-file-fir-against-chakraborty-sulibele/ ಕುರಿ ಕಾಯುವ ಸಮುದಾಯದವರು, 14 ಬಜೆಟ್ ನೀಡಿದ್ದೇನೆಂದಿದ್ದಾರೆ ಈವರೆಗೆ ಎಷ್ಟು ಶೋಷಿತ ವರ್ಗಕ್ಕೆ ಬಜೆಟ್ ನೆರವಾಗಿದೆ ಎಂದು ಹೇಳಲಿ ರಾಷ್ಟ್ರಪತಿ ಬಗ್ಗೆ ಅಗೌರವ ತೋರಿ ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ ಗ್ರಾಮೀಣ ಸೊಗಡಿನಲ್ಲಿ ಹಾಗೆ ಮಾತಾಡಿದ್ದೇನೆ ಎಂದು ಹೇಳಿದ್ದಾರೆ ಈಗ ಅಚಾತುರ್ಯದಿಂದ ಆದ ಪ್ರಮಾದಕ್ಕೆ ವಿಷಾದ ಎಂದಿದ್ದೀರಿ ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ -HDK ಆದರೆ ನಿಮ್ಮ ನಂಜಿನ ವಿಷ ರಾಜ್ಯ ಹಾಗೂ ದೇಶವನ್ನೆಲ್ಲಾ ವ್ಯಾಪಿಸಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ತೀವ್ರ…
ಬೆಂಗಳೂರು: Gruha Jyoti ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದೆ. ಗೃಹಜ್ಯೋತಿ ಯೋಜನೆಯ ಲಾಭ ಎಷ್ಟು ಜನರಿಗೆ ತಲುಪಿದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ. https://ainlivenews.com/shakthi-scheme-that-has-given-life-to-the-life-of-bangalore-income-of-five-and-a-half-crores/ ಗೃಹಜ್ಯೋತಿ ಯೋಜನೆಗೆ 1,40,31,320 ಗ್ರಾಹಕರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 74,08,769 ಮಂದಿಗೆ ಶೂನ್ಯ ಬಿಲ್ ನೀಡಲಾಗಿದೆ. ಆದರೆ, 45,29,633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ಸುಮಾರು 21 ಲಕ್ಷ ಜನರು 200 ಯೂನಿಟ್ಗಿಂತ ಹೆಚ್ಚು ಬಳಕೆ ಮಾಡಿ ಗೃಹ ಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ. ರಾಜ್ಯ ಸರ್ಕಾರವು 1 ಕೋಟಿ 19 ಲಕ್ಷ ಜನರಿಗೆ ಗೃಹಜ್ಯೋತಿ ಬಿಲ್ ನೀಡಿದ್ದು, ಇದರಲ್ಲಿ ಶೇ.62.06 ರಷ್ಟು ಅಂದರೆ, 74 ಲಕ್ಷದ 8 ಸಾವಿರ ಜನರು ಸರ್ಕಾರ ನೀಡಿರುವ ಸರಾಸರಿ ಹಾಗೂ ಅದಕ್ಕಿಂತ ಕಡಿಮೆ ಯೂನಿಟ್ ಬಳಸಿದ್ದಾರೆ. ಇನ್ನು, ಈಗಾಗಲೇ ಜುಲೈ ತಿಂಗಳ ಶೂನ್ಯ ಬಿಲ್ಗಾಗಿ ಸರ್ಕಾರದಿಂದ ಎಲ್ಲಾ ಎಸ್ಕಾಂಗಳಿಗಾಗಿ ಒಟ್ಟು 650 ಕೋಟಿ ರೂ. ಹಣ ಬಿಡುಗಡೆಯಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ…
ಅಮೃತಸರ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್, ತಮ್ಮ 50ನೇ ವಯಸ್ಸಿನಲ್ಲಿ ಮತ್ತೆ ತಂದೆಯಾಗುತ್ತಿದ್ದಾರೆ. ಅವರ ಎರಡನೇ ಪತ್ನಿ ಡಾ. ಗುರುಪ್ರೀತ್ ಕೌರ್ ಅವರು ಏಳು ತಿಂಗಳ ಗರ್ಭಿಣಿಯಾಗಿದ್ದಾರೆ. ಮಾರ್ಚ್‌ನಲ್ಲಿ ಮಗುವಿನ ಜನನದ ನಿರೀಕ್ಷೆ ಮಾಡುತ್ತಿರುವುದಾಗಿ ಅವರು ತಮ್ಮ ಭಾಷಣದ ವೇಳೆ ಪ್ರಕಟಿಸುವ ಮೂಲಕ ಸಭಿಕರನ್ನು ಅಚ್ಚರಿಗೊಳಿಸಿದರು. ಭ್ರೂಣ ಲಿಂಗ ಪತ್ತೆ ಪರೀಕ್ಷೆಗಳನ್ನು ನಡೆಸದಂತೆ ಜನರಿಗೆ ಮನವಿ ಮಾಡಿದ ಅವರು, “ನಾನು ಕೂಡ ನನ್ನ ಮನೆಗೆ ಮಾರ್ಚ್‌ನಲ್ಲಿ ಹೊಸ ಅತಿಥಿ ಆಗಮನದ ಆನಂದದ ಗಳಿಗೆಗಾಗಿ ನಿರೀಕ್ಷಿಸುತ್ತಿದ್ದೇನೆ. ನನ್ನ ಹೆಂಡತಿ ಏಳು ತಿಂಗಳ ಗರ್ಭಿಣಿ. ಲಿಂಗ ಪತ್ತೆ ಮಾಡಬಾರದು ಎಂಬುದನ್ನು ನಾವು ಪ್ರಜ್ಞಾಪೂರ್ವಕವಾಗಿ ನಿರ್ಧರಿಸಿದ್ದೇವೆ. ಭವಿಷ್ಯದಲ್ಲಿ ಕೂಡ ಇದನ್ನು ನಾವು ಮಾಡುವುದಿಲ್ಲ. https://ainlivenews.com/are-you-thinking-of-buying-a-home-low-interest-home-loan-available-in-these-banks/ ಅಂತಹ ಅಭ್ಯಾಸವನ್ನು ನಿಲ್ಲಿಸುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಗಂಡು ಮತ್ತು ಹೆಣ್ಣಿನ ನಡುವಿನ ತಾರತಮ್ಯವನ್ನು ನಿಲ್ಲಿಸೋಣ. ಅದರ ಬದಲಾಗಿ ಆರೋಗ್ಯವಂತ ಮಗುವಿಗಾಗಿ ಬಯಸೋಣ. ಅವಕಾಶ ನೀಡಿದರೆ, ಹೆಣ್ಣುಮಕ್ಕಳು ಸಾಧಿಸಲಾಗದ್ದು ಏನೂ ಇಲ್ಲ” ಎಂದು ಹೇಳಿದ್ದಾರೆ. ಪಂಜಾಬ್ ರಾಜ್ಯಪಾಲ…
ಧಾರವಾಡ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದ ಧ್ವಜ ಗಲಾಟೆಯನ್ನು ರಾಜಕೀಯವಾಗಿ ಎಳೆಯಬಾರದು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಈ ಧ್ವಜ ಗಲಾಟೆಗೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಉತ್ತರ ಕೊಟ್ಟಿದ್ದಾರೆ. ಇದನ್ನು ಹಿಂದೂ, ಮುಸ್ಲಿಂ ಗಲಾಟೆ ಮಾಡುವುದು ಸರಿಯಲ್ಲ. ಸಿಎಂಗೆ ಟಿಪ್ಪು ಸುಲ್ತಾನ್ ಎನ್ನುವುದು ಎಷ್ಟು ಸರಿ? ಹೀಗೆಲ್ಲ ಬಿಜೆಪಿ ಆರೋಪ ಮಾಡುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೀಗೆಲ್ಲ ಮಾಡುವುದು ಸರಿಯಲ್ಲ ಎಂದರು. ರಾಷ್ಟ್ರಪತಿಗಳಿಗೆ ಸಿಎಂ ಏಕವಚನ ಪದ ಬಳಕೆ ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಲಾಡ್, ಸಿಎಂ ಅದನ್ನು ಬಾಯಿತಪ್ಪಿ ಮಾತನಾಡಿದ್ದಾರೆ. ಉದ್ದೇಶಪೂರ್ವಕವಾಗಿ ಹೇಳಿದ ಮಾತು ಅದಲ್ಲ. ಆದರೆ, ಇದರ ಹಿಂದೆ ಸಿಎಂ ಹೇಳಿದ ವಿಷಯನ್ನೂ ನೋಡಬೇಕಲ್ಲವೇ? ಅವರು ಮಹತ್ವದ ವಿಷಯ ಹೇಳಿದ್ದಾರೆ. ಸಂಸತ್ ಉದ್ಘಾಟನೆಗೆ ರಾಷ್ಟ್ರಪತಿಗಳನ್ನು ಕರೆದಿಲ್ಲ. https://ainlivenews.com/are-you-thinking-of-buying-a-home-low-interest-home-loan-available-in-these-banks/ ಅವರೊಬ್ಬ ವಿಧವೆ ಹೆಣ್ಣು ಮಗಳು, ಬುಡಕಟ್ಟು ಸಮಾಜದವರು ಅದೇ ಕಾರಣಕ್ಕೆ ಅವರನ್ನು ಸಂಸತ್ ಉದ್ಘಾಟನೆಗೆ ಕರೆದಿಲ್ಲ. ರಾಮ ಪ್ರಾಣ ಪ್ರತಿಷ್ಠಾಪನೆ ಪೂಜೆ…
ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಳಿಕ ನಂದಿ ಗಿರಿಧಾಮಕ್ಕೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಒಂದೂವರೆ ತಿಂಗಳ ಬಳಿಕ ಆತನ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರದ ಜಾತವಾರ ಹೊಸಹಳ್ಳಿ ಗ್ರಾಮದ ನಾರಾಯಣಸ್ವಾಮಿ (37) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದು ಬಂದಿದೆ. ನಂದಿ ಗಿರಿಧಾಮದ 38ನೇ ತಿರುವಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಷಯ ತಿಳಿದ ಚಿಕ್ಕಬಳ್ಳಾಪುರ ವೃತ್ತ ನಿರೀಕ್ಷಕ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಬ್ಯಾಗ್‍ನಲ್ಲಿ ಆಧಾರ್ ಕಾರ್ಡ್ ಲಭ್ಯವಾಗಿದ್ದರಿಂದ ಮೃತನ ಗುರುತು ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ರ್ಯಾಕ್ಟರ್ ಚಾಲಕನಾಗಿದ್ದ ನಾರಾಯಣಸ್ವಾಮಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ. ಇನ್ನೂ ಸಾಯುವುದಕ್ಕೂ ಮುನ್ನ ತಿರುಪತಿಗೆ ತೆರಳಿ ದೇವರ ದರ್ಶನ ಪಡೆದು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಕಳೆದ ಡಿ.15ರ ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆ ತೊರೆದಿದ್ದ. ನಂತರ, ನಾನು ನಂದಿಬೆಟ್ಟದಲ್ಲಿದ್ದು ನನ್ನನ್ನ ಮರೆತುಬಿಡಿ, https://ainlivenews.com/are-you-thinking-of-buying-a-home-low-interest-home-loan-available-in-these-banks/…
ಬೆಂಗಳೂರು: ಕರ್ನಾಟಕ ಮಾತ್ರವಲ್ಲ ದೇಶದ ಬಹುತೇಕ ಸಾರ್ವಜನಿಕ ಸಾರಿಗೆ ಸಂಸ್ಥೆಗಳು ಮುಚ್ಚೋ ಸ್ಥಿತಿಗೆ ಬಂದು ನಿಂತಿವೆ. ನಷ್ಟದ ಮೇಲೆ ನಷ್ಟದಾಖಲಿಸ್ತಾ ಸಾಗ್ತಿವೆ. ಏರ್ ಇಂಡಿಯಾದಿಂದ ಹಿಡಿದು ಬಿಎಂಟಿಸಿವರೆಗೂ ಇದೇ ಕತೆ ಆಗಿತ್ತು. ಆದ್ರೆ ಇದೀಗ ಶಕ್ತಿ ಯೋಜನೆ ಜಾರಿ ಆಗಿ ಆರು ತಿಂಗಳ ಬಳಿಕ ಬೆಂಗಳೂರು ಜೀವನಾಡಿ ಲಾಭದ ಹಳಿಗೆ ಏರಿದೆ. ನಿತ್ಯ ಹಣ ಗಳಿಸ್ತಾ ಹೊಸ ಶಕೆ ಆರಂಭಿಸಿದೆ. ಹಾಗಾದ್ರೆ ಬಿಎಂಟಿಸಿ ಆರ್ಥಿಕವಾಗಿ ಸ್ಟಾಂಗ್ ಆಯ್ತು ಬನ್ನಿ ತೋರಿಸ್ತೀವಿ.. ದೇಶದ ಬಹುತೇಕ ಸಾರಿಗೆ ಸಂಸ್ಥೆಗಳು ಬಾಗಿಲು ಮುಚ್ಚೋ ಸ್ಥಿತಿಗೆ ಬಂದು ತಲುಪುತ್ತಿದೆ.ಜೊತೆಗೆ ರಾಜ್ಯದ ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿಯೂ ಹೆಚ್ಚೇನು ಸದೃಢ ಇರಲಿಲ್ಲ.ಈ ಮೊದಲು ಬರ್ತಿರೋ ಆದಾಯದಲ್ಲಿ ,ಡಿಸೇಲ್ ,ಬಿಡಿಭಾಗಗಳ ಖರೀದಿ,ನೌಕರರಿಗೆ ಸಂಬಳ ನೀಡೋಕ್ಕೂ ನಿಗಮಗಳ ಬಳಿ ದುಡ್ಡು ಇರಲಿಲ್ಲ. ಅಷ್ಟೋದು ದಿವಾಳಿ ಆಗಿದ್ವು ರಾಜ್ಯ ಸಾರಿಗೆ ನಿಗಮಗಳು.ಆದ್ರೆ ಸರ್ಕಾರ ಯಾವಾಗ ಗ್ಯಾರಂಟಿಗಳಲ್ಲಿ ಒಂದಾಗಿರೋ ಶಕ್ತಿ ಯೋಜನೆ ಅನುಷ್ಠಾನ ಮಾಡ್ತೋ ಆಗಿನಿಂದ್ಲೇ ನಿಗಮಗಳೀಗೆ ಬೂಸ್ಟರ್ ಡೋಸ್ ಸಿಕ್ಕಿದ್ದಂತೆ ಆಯ್ತು. ಹೌದು..ಶಕ್ತಿ…