ಮೈಸೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ಭಾರಿ ಗಾತ್ರದ ಹುಲಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ನಡೆದಿದೆ. ಘಟನೆಯಲ್ಲಿ ಗಂಡು ಹುಲಿ ಸಾವನ್ನಪ್ಪಿದ್ದು ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನ ವಶಕ್ಕೆ ಪಡೆದಿದ್ದಾರೆ. ನಿನ್ನೆ ತಡರಾತ್ರಿ ಸುಮಾರು 12 ಗಂಟೆ ವೇಳೆಗೆ ಘಟನೆ ನಡೆದಿದೆ. ಇಟಿಯೋಸ್ ಕಾರ್ ಹುಲಿಗೆ ಢಿಕ್ಕಿ ಹೊಡೆದಿದೆ.ಕಾರಿನ ಮುಂಭಾಗಕ್ಕೂ ಹಾನಿಯಾಗಿದೆ.ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳಾದ ಮಾಲತಿ ಪ್ರಿಯ,ಲಕ್ಷ್ಮಿನಾರಾಯಣ್,ಸುರೇಂದ್ರ ಹಾಗೂ ಇತರರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://ainlivenews.com/are-you-thinking-of-buying-a-home-low-interest-home-loan-available-in-these-banks/ ಇತ್ತೀಚಿನ ದಿನಗಳಲ್ಲಿ ನಂಜನಗೂಡು ಹಾಗೂ ಸುತ್ತ ಮುತ್ತ ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿತ್ತು.ಇದೇ ಹುಲಿ ಅಪಘಾತದಲ್ಲಿ ಸಿಲುಕಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸದ್ಯ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಲು ಅರಣ್ಯಾಧಿಕಾರಿಗಳು ನಿರ್ಧರಿಸಿದ್ದಾರೆ. ಅಪಘಾತವಾದ ಕಾರನ್ನ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದು ಪ್ರಯಾಣಿಕರನ್ನ ವಿಚಾರಣೆ ನಡೆಸುತ್ತಿದ್ದಾರೆ..
Author: AIN Author
ದರ್ಶನ್ ಮುಖ್ಯಭೂಮಿಕೆಯ ಡೆವಿಲ್ ಸಿನಿಮಾದ ಮೊದಲ ಹಂತದ ಶೂಟಿಂಗ್ (shooting) ಮುಕ್ತಾಯವಾಗಿದೆ ಎಂದು ಸ್ವತಃ ನಿರ್ದೇಶಕ ಪ್ರಕಾಶ್ ಅವರೇ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಎರಡನೇ ಹಂತದ ಚಿತ್ರೀಕರಣವನ್ನು ಫೆಬ್ರವರಿ 2 ತಾರೀಖಿನಿಂದ ಆರಂಭಿಸೋದಾಗಿ ತಿಳಿಸಿದ್ದಾರೆ. ಕೆಲ ತಿಂಗಳ ಹಿಂದೆಯಷ್ಟೇ ‘ಡೆವಿಲ್’ (Devil) ಚಿತ್ರದ ಸ್ಕ್ರಿಪ್ಟ್ ಪೂಜೆ ಸರಳವಾಗಿ ನೆರವೇರಿತ್ತು. ಪೂಜೆ ಮುಗಿದಿದ್ದೆ ತಡ ಡೆವಿಲ್ ಹೆಸರಿನಲ್ಲಿ ಪೋಸ್ಟರ್ ಹರಿದಾಡಿದವು. ಆದರೆ, ಈ ಕುರಿತು ನಿರ್ದೇಶಕರು ಪ್ರತಿಕ್ರಿಯೆ ನೀಡಿದ್ದರು. ಡೆವಿಲ್ ಸಿನಿಮಾದ ಯಾವುದೇ ಮಾಹಿತಿ ನಂಬಬೇಡಿ. ನಾವೇ ಕೊಡುತ್ತೇವೆ ಎಂದಿದ್ದರು. ಶುಭದಿನವೆಂದು ಡೆವಿಲ್ ಚಿತ್ರದ ಸ್ಕ್ರಿಪ್ಟ್ ಪೂಜೆ ಮಾಡಿದ್ದೇವೆ. ಆದರೆ, ಚಿತ್ರದ ಫಸ್ಟ್ ಲುಕ್ (First Look) ಆಗಲಿ, ಪೋಸ್ಟರ್ ಆಗಲಿ ಯಾವುದು ನಾವು ಬಿಡುಗಡೆ ಮಾಡಿಲ್ಲ. ಕಾಟೇರ ಚಿತ್ರದ ನಂತರ ನಮ್ಮ ಚಿತ್ರದ ಪ್ರಚಾರ ಕಾರ್ಯ ಆರಂಭಿಸುತ್ತೇವೆ. ನಮ್ಮ ವೈಷ್ಣೊ ಸ್ಟುಡಿಯೋಸ್ ಸಂಸ್ಥೆಯ ಮೂಲಕವೇ ಅಧಿಕೃತವಾಗಿ ಡೆವಿಲ್ ಚಿತ್ರದ ಬಗ್ಗೆ ಮಾಹಿತಿ ನೀಡುತ್ತಾ ಹೋಗುತ್ತೇವೆ ಎಂದು ನಿರ್ದೇಶಕ ಪ್ರಕಾಶ್ ವೀರ್ ತಿಳಿಸಿದ್ದರು.…
ಟಗರು ಪಲ್ಯ ಖ್ಯಾತಿಯ ನಟ ನಾಗಭೂಷಣ್ (Nagabhushan) ಇಂದು ಹೊಸ ಜೀವನಕ್ಕೆ ಕಾಲಿಟ್ಟಿರು. ಬಹುಕಾಲದ ಗೆಳತಿ, ನಟಿ ಪೂಜಾ ಪ್ರಕಾಶ್ (Pooja Prakash) ಜೊತೆ ಇಂದು ಬೆಳಗಾವಿಯಲ್ಲಿ ಅವರು ಮದುವೆ (marriage) ಆಗಿದ್ದು, ಡಾಲಿ ಧನಂಜಯ್, ವಾಸುಕಿ ವೈಭವ್, ಪೂರ್ಣಚಂದ್ರ ತೇಜಸ್ವಿ ಸೇರಿದಂತೆ ಹಲವಾರು ಕಲಾವಿದರು ಮತ್ತು ತಂತ್ರಜ್ಞರು ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಈ ಮದುವೆಯಲ್ಲಿ ಗೆಳೆಯ ನಾಗಭೂಷಣ್ ಅವರಿಗಾಗಿಯೇ ಸಂಗೀತ ನಿರ್ದೇಶಕ, ಗಾಯಕ ವಾಸುಕಿ ವೈಭವ ಸೊಗಸಾದ ಗೀತೆಗಳನ್ನು ಹಾಡಿದ್ದಾರೆ. ಜೊತೆಗೆ ಹೊಸ ಜೀವನಕ್ಕೆ ವಾಸುಕಿ ದಂಪತಿ ಸಮೇತ ಶುಭ ಹಾರೈಸಿದ್ದಾರೆ. ಟಗರು ಪಲ್ಯ ಸೇರಿದಂತೆ ಅನೇಕ ಚಿತ್ರಗಳಿಗೆ ನಾಯಕನಾಗಿ ನಟಿಸಿರುವ ನಾಗಭೂಷಣ್, ನಾನಾ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗಷ್ಟೇ ಇವರ ಹೊಸ ಸಿನಿಮಾ ಘೋಷಣೆಯಾಗಿದೆ. ಈ ಸಿನಿಮಾವನ್ನು ಡಾಲಿ ಧನಂಜಯ್ ಅವರೇ ನಿರ್ಮಾಣ ಮಾಡುತ್ತಿರುವುದು ವಿಶೇಷ. ನಾಗಭೂಷಣ್ ಮದುವೆ ಆಗುತ್ತಿರುವ ಪೂಜಾ ಪ್ರಕಾಶ್ ಚಿತ್ರಕಲೆ ಮತ್ತು ಗ್ರಾಫಿಕ್ಸ್ ಡಿಸೈನ್ ನಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇಂದು ಬೆಳಗಾವಿಯಲ್ಲಿ ಇವರ ವಿವಾಹ…
ಬಿಗ್‌ಬಾಸ್ (Bigg Boss Kannada) ಕನ್ನಡ 10ನೇ ಸೀಸನ್‌ನಲ್ಲಿ ಡ್ರೋಣ್ ಪ್ರತಾಪ್ (Drone Pratap) ಅವರು ರನ್ನರ್ ಅಪ್ (Runner Up) ಆಗಿ ಹೊರಹೊಮ್ಮಿದ್ದಾರೆ. ಅವರೇ ಹೇಳಿಕೊಂಡಂತೆ ಅವರು ಇದನ್ನು ಕನಸು ಮನಸಿನಲ್ಲಿಯೂ ಎಣಿಸಿರಲಿಲ್ಲ. ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು. ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋಣ್ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್ ಕೈ ಇತ್ತು. ಆ ಟೆನ್ಷನ್ ಅನ್ನು ಮಾತುಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಇಡೀ ಕರ್ನಾಟಕವೇ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಗಳಿಗೆ ಅದು. ಅದರಲ್ಲಿ ಸುದೀಪ್ ಅವರು…
ಚಿಕ್ಕಬಳ್ಳಾಪುರ: ಕುಮಾರಸ್ವಾಮಿಯವರ ಸಹವಾಸ ಮಾಡಿದವರು ಯಾರೂ ಉದ್ಧಾರವಾದ ಇತಿಹಾಸ ಇಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ (Veerappa Moily) ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಕಥೆ ಇತಿಹಾಸ ಹೇಳುತ್ತಾ ಹೋದರೆ ಹಲವು ವರ್ಷಗಳೆ ಬೇಕು. ಅವರ ಸಹವಾಸದಿಂದ ಸುಖವಿಲ್ಲ. ಅವರನ್ನು ನಂಬಿದವರಿಗೆ ದೇವರೇ ಗತಿ. ನನಗೆ ಸಿಎಂ ಆಗಿ, ರಾಜಕೀಯದಲ್ಲಿ 50-55 ವರ್ಷದ ರಾಜಕೀಯ ಅನುಭವವಿದೆ. ನನ್ನ ರಾಜಕೀಯ ಇತಿಹಾಸದಲ್ಲಿ ಈ ಅನುಭವ ಇದೆ ಎಂದಿದ್ದಾರೆ. https://ainlivenews.com/are-you-thinking-of-buying-a-home-low-interest-home-loan-available-in-these-banks/ ಕುಮಾರಸ್ವಾಮಿಯವರ ತಂದೆಯವರ ಜೊತೆ ನಾನು ಚೆನ್ನಾಗಿ ಇದ್ದ ಕಾಲವೂ ಇದೆ. ಅದೇ ಪ್ರಕಾರ ಕಷ್ಟ ನಷ್ಟ ಅನುಭವಿಸಿದ್ದು ಇದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಕುಮಾರಸ್ವಾಮಿ ಜೊತೆ ಬಹಳ ಜನ ಸ್ನೇಹ ಮಾಡಿದ್ರು, ಯಾರೂ ಉದ್ಧಾರ ಆಗಿಲ್ಲ. ಅವರ ಜೊತೆ ಸ್ನೇಹ ಮಾಡಿದವರು ಗುಂಡಿಗೆ ಬೀಳುತ್ತಾರೆ. ಬಿಜೆಪಿ (BJP) ಉದ್ಧಾರ ಆಗುವುದಾದರೆ ಆಗಲಿ ಎಂದಿದ್ದಾರೆ.
ಹೈದರಾಬಾದ್: ಇಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 28 ರನ್‌ಗಳ ಜಯ ಸಾಧಿಸಿತು. ಟಾಮ್ ಹಾರ್ಟ್ಲಿ 7 ವಿಕೆಟ್ ಕಬಳಿಸುವ ಮೂಲಕ ತಂಡದ ಗೆಲುವಿಗೆ ಕಾರಣರಾದರು. 2ನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 231 ರನ್ ಗುರಿ ನೀಡಿದ್ದ ಇಂಗ್ಲೆಂಡ್ 202 ರನ್‌ಗಳಿಗೆ ಆಲೌಟ್ ಮಾಡಿತು. 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿತು. ಟೀಂ ಇಂಡಿಯಾದ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಉತ್ತಮ ಆರಂಭ ನೀಡಲು ಯತ್ನಿಸಿದರು. ರೋಹಿತ್ 39 ರನ್‌ಗಳಿಸಿ ಔಟಾದರು. ನಂತರ ಬಂದ ಯಾವೊಬ್ಬ ಬ್ಯಾಟರ್ ಕೂಡ ಉತ್ತಮ ರನ್ ಕಲೆ ಹಾಕುವಲ್ಲಿ ವಿಫಲರಾದರು. 2ನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ಒಲೀ ಪೊಪ್ ಅಮೋಘ ಬ್ಯಾಟಿಂಗ್ ಮಾಡಿದರು. 196 ರನ್ ಗಳಿಸಿದ ಅವರು ಕೇವಲ 4 ರನ್‌ಗಳಿಂದ ದ್ವಿಶತಕ ವಂಚಿತರಾದರು. ಇಂಗ್ಲೆಂಡ್ ಬೌಲರ್ ಟಾಮ್ ಹಾರ್ಟ್ಲಿ 7 ವಿಕೆಟ್ ಉರುಳಿಸಿ ತಂಡದ ಗೆಲುವಿಗೆ ಕಾರಣರಾದರು. ಸಂಕ್ಷಿಪ್ತ ಸ್ಕೋರ್ ಇಂಗ್ಲೆಂಡ್: 246 & 420 ಭಾರತ: 436…
ಬಾಗಲಕೋಟೆ: ಶಾಲಾ ಬಸ್ ಹಾಗೂ ಟ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾಗಿರುವ ಘಟನೆ ಬಾಗಲಕೋಟೆಯ ಜಿಲ್ಲೆ ಜಮಖಂಡಿ ತಾಲ್ಲೂಕಿನ ಅಲಗೂರು ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ನಡೆದ ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 8ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸಾಗರ ಕಡಕೋಳ (17), ಶ್ವೇತಾ (13), ಗೋವಿಂದ(13), ಬಸವರಾಜ (17) ಮೃತ ವಿದ್ಯಾರ್ಥಿಗಳು. https://ainlivenews.com/are-you-thinking-of-buying-a-home-low-interest-home-loan-available-in-these-banks/ ಮೃತರು ವರ್ಧಮಾನ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಾಗಿದ್ದು, ಇಬ್ಬರು ಪಿಯುಸಿ, ಮತ್ತಿಬ್ಬರು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ. ಭಾನುವಾರ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್‌ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಅಂಡರ್-19 ವಿಶ್ವಕಪ್ ಟೂರ್ನಿಯ ಮೂರನೇ ಪಂದ್ಯದಲ್ಲಿ ಮತ್ತೆ ಘರ್ಜಿಸಿದ ಭಾರತ ಯಂಗ್ ಟೈಗರ್ಸ್ ಅಮೆರಿಕ ತಂಡವನ್ನು ಉಡೀಸ್ ಮಾಡಿದೆ. ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಅಮೆರಿಕವನ್ನು ಎದುರಿಸಿದ ಭಾರತ 201 ರನ್‌ಗಳ ಬೃಹತ್ ಜಯ ಸಾಧಿಸಿದೆ. ಇದರೊಂದಿಗೆ ಲೀಗ್ ಸುತ್ತಿನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 326 ರನ್ ಗಳಿಸಿತ್ತು. ಅರ್ಶಿನ್ ಕುಲಕರ್ಣಿ 8 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 108 ರನ್ ಸಿಡಿಸಿದರು. ಮುಶೀರ್ 73, ನಾಯಕ ಉದಯ್ ಸಾಹರನ್ 35, ಪ್ರಿಯಾಂಶು ಮೊಲಿಯಾ 27, ಸಚಿನ್ ದಾಸ್ 20 ರನ್ ಗಳಿಸಿದರು. 327 ರನ್‌ಗಳ ಬೃಹತ್ ಟಾರ್ಗೆಟ್ ಬೆನ್ನತ್ತಿದ ಅಮೆರಿಕ ತಂಡ 8 ವಿಕೆಟ್ ಕಳೆದುಕೊಂಡು ಕೇವಲ 125 ರನ್ ಗಳಿಸಲಷ್ಟೇ ಶಕ್ತವಾಯಿತು. ಅಮೆರಿಕ ಬ್ಯಾಟರ್ ಉತ್ಕರ್ಷ್ ಶ್ರೀವಾಸ್ತವ 40 ರನ್ ಗಳಿಸಿದರು. ಉಳಿದ ಯಾವ ಬ್ಯಾಟರ್ ಸಹ ಉತ್ತಮ ಪ್ರದರ್ಶನ…
ಕ್ಯಾನ್ಬೆರಾ: ವಿಶ್ವ ಟೆನಿಸ್‌ನ ನಂ.1 ಡಬಲ್ಸ್ ಆಟಗಾರ, ಕನ್ನಡಿಗ ರೋಹನ್ ಬೋಪಣ್ಣ ಅವರು ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ (Australian Open 2024) ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ರೋಹನ್ ಬೋಪಣ್ಣ (RohanBopanna) ಮತ್ತು ಮ್ಯಾಥ್ಯೂ ಎಬ್ಡೆನ್ (Matthew Ebden) ಜೋಡಿಯು ಶನಿವಾರ ಸಿಮೋನ್ ಬೊಲೆಲ್ಲಿ ಮತ್ತು ಆಂಡ್ರಿಯಾ ವವಸ್ಸೋರಿ ಜೋಡಿಯನ್ನು ಮಣಿಸಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್ ಚಾಂಪಿಯನ್ ಆಗಿದ್ದಾರೆ. ಆ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 1 ಗಂಟೆ 39 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಇಟಲಿ ಜೋಡಿಯು ವಿರುದ್ಧ ಭಾರತ ಮತ್ತು ಆಸ್ಟ್ರೇಲಿಯಾ ಜೋಡಿಯು 7-6 (0), 7-5 ಅಂತರದಲ್ಲಿ ಜಯ ಸಾಧಿಸಿತು. ಬೋಪಣ್ಣ ಪುರುಷರ ಡಬಲ್ಸ್ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಫೈನಲ್ ತಲುಪಲು ಬೋಪಣ್ಣ ಮತ್ತು ಅವರ ಆಸ್ಟ್ರೇಲಿಯನ್ ಜೊತೆಗಾರ ಎಬ್ಡೆನ್, ಚೀನಾದ ಜಾಂಗ್ ಝಿಜೆನ್ ಮತ್ತು ಜೆಕ್ ಗಣರಾಜ್ಯದ ತೋಮಸ್ ಮಚಾಕ್ ಜೋಡಿಯನ್ನು ಕೇವಲ ಎರಡು ಗಂಟೆಗಳಲ್ಲಿ 6-3,…
ಬಿಗ್‌ಬಾಸ್ (Bigg Boss Kannada) ಕನ್ನಡ 10ನೇ ಸೀಸನ್‌ನಲ್ಲಿ ಕಾರ್ತಿಕ್ ಮಹೇಶ್ (Karthik) ಅವರು ವಿನ್ನರ್ (Winner) ಆಗಿ ಹೊರಹೊಮ್ಮಿದ್ದಾರೆ. ಮೊದಲಿನಿಂದಲೂ ಆತ್ಮವಿಶ್ವಾಸದಿಂದಲೇ ಇದ್ದ ಕಾರ್ತಿಕ್ ಅವರು ಕೊನೆಯ ಕ್ಷಣದಲ್ಲಿ ಟೆನ್ಷನ್‌ಗೆ ಒಳಗಾದಂತೆ ಕಾಣಿಸುತ್ತಿದ್ದರು. ವರ್ತೂರು ಸಂತೋಷ್ ಮತ್ತು ವಿನಯ್ ಗೌಡ ಅವರು ಕ್ರಮವಾಗಿ ಮನೆಯಿಂದ ಹೊರಹೋಗುತ್ತಿದ್ದಂತೆಯೇ ಮನೆಯಲ್ಲಿ ಉಳಿದಿದ್ದವರು ಕಾರ್ತಿಕ್, ಸಂಗೀತಾ ಮತ್ತು ಪ್ರತಾಪ್. ಸ್ವತಃ ಕಿಚ್ಚ ಸುದೀಪ್ ಮನೆಯೊಳಗೆ ಹೋಗಿ, ಕಾಫಿ ಕುಡಿದು ಹರಟಿ ನಂತರ ಬಿಗ್‌ಬಾಸ್ ಮನೆಯಿಂದ ಬೀಳ್ಕೊಟ್ಟು ಮೂವರೂ ಸ್ಪರ್ಧಿಗಳನ್ನು ಮುಖ್ಯವೇದಿಕೆಗೆ ಕರೆತಂದರು. ಮುಖ್ಯವೇದಿಕೆಯಲ್ಲಿ ಸಂಗೀತಾ ಶೃಂಗೇರಿ ಎರಡನೇ ರನ್ನರ್ ಅಪ್ ಆಗಿದ್ದಾರೆ ಎಂದು ಕಿಚ್ಚ ಘೋಷಿಸಿದರು. ನಂತರ ವೇದಿಕೆಯ ಮೇಲೆ ಉಳಿದಿದ್ದು ಕಾರ್ತಿಕ್ ಮತ್ತು ಡ್ರೋಣ್ ಪ್ರತಾಪ್. ಕಿಚ್ಚನ ಒಂದು ಕೈಯಲ್ಲಿ ಕಾರ್ತಿಕ್ ಕೈ ಮತ್ತೊಂದು ಕೈಯಲ್ಲಿ ಪ್ರತಾಪ್ ಕೈ ಇತ್ತು. ಆ ಟೆನ್ಷನ್ ಅನ್ನು ಮಾತುಗಳಲ್ಲಿ ಹಿಡಿದಿಡಲು ಸಾಧ್ಯವಿಲ್ಲ. ಇಡೀ ಕರ್ನಾಟಕವೇ ಉಸಿರು ಬಿಗಿಹಿಡಿದು ಕಾಯುತ್ತಿದ್ದ ಗಳಿಗೆ ಅದು. ಇಬ್ಬರ ಕೈಯಲ್ಲಿ ಕಿಚ್ಚ…