ಬೆಂಗಳೂರು : ಅಪರಾಧ ಚಟುವಟಿಕೆಗಳನ್ನ ತಡೆಗಟ್ಟಲು ಸಿಲಿಕಾನ್ ಸಿಟಿ ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಕೆಲವು ಕಠಿಣ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಹೌದು ಇನ್ನುಮುಂದೆ ಪಿಜಿ ಆರಂಭಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಿಂದ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಇನ್ನು ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳನ್ನ ತಡೆಗಟ್ಟಲು ಪೊಲೀಸ್ ಇಲಾಖೆಯಿಂದ ಕೆಲವು ಕಠಿಣ ನಿಯಮಗಳುಳ್ಳ ಮಾರ್ಗಸೂಚಿ ಪ್ರಕಟ ಮಾಡಲಾಗಿದೆ. ಪೊಲೀಸ್ ಇಲಾಖೆಯ ಅಧಿಕೃತ ಜಾಲತಾಣ ‘ಎಕ್ಸ್’ ಮೂಲಕ ಪಿ.ಜಿ.ಮಾಲೀಕರಿಗೆ ಮಾರ್ಗಸೂಚಿಯ ಬಗ್ಗೆ ತಿಳಿಸಲಾಗಿದೆ. ಪೊಲೀಸ್ ಇಲಾಕೆ ಮಾರ್ಗಸೂಚಿಯಲ್ಲಿ ಏನಿದೆ? ಎಲ್ಲ ಪಿಜಿಗಳು ಅಗತ್ಯವಿರುವ ಪರವಾನಿಗೆಯನ್ನ ಬಿಬಿಎಂಪಿಯಿಂದ ಪಡೆಯುವುದು ಕಡ್ಡಾಯ ಪಿಜಿ ವಾಸಕ್ಕೆ ಬರುವ ಎಲ್ಲ ವ್ಯಕ್ತಿಗಳ ಗುರುತಿನ ಚೀಟಿ ಪಡೆಯಬೇಕು. ಇತ್ತೀಚಿನ ಭಾವಚಿತ್ರ ಮತ್ತು ರಕ್ತ ಸಂಬಂಧಿಗಳ ವಿವರ, ಮೊಬೈಲ್ ನಂಬರ್ ದಾಖಲೆ ಮಾಡಬೇಕು. ಇನ್ನೂ ಪಿಜಿಗೆ ಭೇಟಿ ನೀಡಲು ಬರುವ ಸಂಬಂಧಿಕರಾಗಲಿ ಅಥವಾ ಯಾರೇ ಆಗಿರಲಿ ಅವರ ವಿವರಗಳನ್ನೂ ಪ್ರತ್ಯೇಕವಾಗಿ ನಿರ್ವಹಿಸಬೇಕು. ಸಿಸಿಟಿವಿ, ಅಗ್ನಿ ಸುರಕ್ಷತಾ ವ್ಯವಸ್ಥೆ ಹೊಂದಿರಬೇಕು. ಮಾದಕ ವಸ್ತು ಸೇವನೆ ಮತ್ತು ಕಾನೂನುಬಾಹಿರ…
Author: AIN Author
‘ಬಿಗ್ ಬಾಸ್ ಸೀಸನ್ 10’ ಈ ಹಿಂದಿನ ಎಲ್ಲಾ ಸೀಸನ್‌ಗಳ ರೆಕಾರ್ಡ್ ಬ್ರೇಕ್ ಮಾಡಿ ಸದ್ದು ಮಾಡಿರುವಂತಹ ಸೀಸನ್. ಕಾಂಟ್ರವರ್ಸಿ, ಟ್ರೋಲ್, ಟೀಕೆ ಹೀಗೆ ಹಲವು ವಿಚಾರಗಳಿಂದ ಈ ಬಾರಿಯ ಕನ್ನಡದ ಬಿಗ್ ಬಾಸ್ ಸದ್ದು ಮಾಡುತ್ತಿದೆ. ಶನಿವಾರ ಫಿನಾಲೆಯ ಮೊದಲ ಸಂಚಿಕೆ ಪ್ರಸಾರ ಆಗಿದೆ. ಇಂದು (ಜನವರಿ 28) ಅಂತಿಮ ಫಲಿತಾಂಶ ಹೊರಬೀಳಲಿದೆ. ಶನಿವಾರದ ಎಪಿಸೋಡ್ನಲ್ಲಿ ತುಕಾಲಿ ಸಂತೋಷ್ ಔಟ್ ಆದರು. ಅವರ ಎಲಿಮಿನೇಷನ್ ಬಳಿಕ ಉಳಿದಿರುವ ಟಾಪ್ 5 ಸ್ಪರ್ಧಿಗಳಿಗೆ ಈಗ ಢವಢವ ಶುರುವಾಗಿದೆ. ವಿನಯ್ ಗೌಡ (Vinay Gowda), ವರ್ತೂರು ಸಂತೋಷ್, ಸಂಗೀತಾ ಶೃಂಗೇರಿ, ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್ ಅವರು ಫಿನಾಲೆಯಲ್ಲಿದ್ದಾರೆ. ಈ 5 ಸ್ಪರ್ಧಿಗಳಲ್ಲಿ ಯಾರಿಗೆ ಬಿಗ್ ಬಾಸ್ ವಿನ್ನರ್ ಪಟ್ಟ ಸಿಗಲಿದೆ ಎಂಬುದೇ ಸದ್ಯದ ಪ್ರಶ್ನೆಯಾಗಿದೆ. 5 ಜನ ಸ್ಪರ್ಧಿಗಳು ಸ್ಟ್ರಾಂಗ್ ಇದ್ದಾರೆ. ಮೈಂಡ್ ಗೇಮ್, ಜನ ಬಲ, ಟಾಸ್ಕ್ ಅಂತ ಬಂದಾಗ ಠಕ್ಕರ್ ಕೊಡುವ ಗುಣ ಎಲ್ಲವೂ ಇದೆ. ಹೀಗಿರುವಾಗ ಯಾರಿಗೆ ಗೆಲುವಿನ…
‘ಬಿಗ್ ಬಾಸ್ ಸೀಸನ್ 10’ ಈ ಹಿಂದಿನ ಎಲ್ಲಾ ಸೀಸನ್‌ಗಳ ರೆಕಾರ್ಡ್ ಬ್ರೇಕ್ ಮಾಡಿ ಸದ್ದು ಮಾಡಿರುವಂತಹ ಸೀಸನ್. ಕಾಂಟ್ರವರ್ಸಿ, ಟ್ರೋಲ್, ಟೀಕೆ ಹೀಗೆ ಹಲವು ವಿಚಾರಗಳಿಂದ ಈ ಬಾರಿಯ ಕನ್ನಡದ ಬಿಗ್ ಬಾಸ್ ಸದ್ದು ಮಾಡುತ್ತಿದೆ. ಇದೀಗ ಸುದೀಪ್, ವರ್ತೂರು ಸಂತೋಷ್ ಜೈಲಿಗೆ ಹೋದ ವಿಚಾರವನ್ನು ಮನೆಯೊಳಗಡೆ ಇರುವ ಸ್ಪರ್ಧಿಗಳಿಗೆ ರಿವೀಲ್ ಮಾಡಿದ್ದಾರೆ. ಜೊತೆಗೆ ಅವರಿಗೆ 3 ಮದುವೆಯಾದರು ಅಚ್ಚರಿಪಡಬೇಕಿಲ್ಲ ಎಂದು ಸುದೀಪ್ ತಮಾಷೆ ಮಾಡಿದ್ದಾರೆ. ಇಡೀ ಮನೆಯಲ್ಲಿ ಒಂದು ಗುಟ್ಟು ಇದೆ. ಹೊರ ಜಗತ್ತಿಗೆ ಆ ಗುಟ್ಟು ಗೊತ್ತಿದೆ. ಮನೆಯ ಒಂದು ಸ್ಪರ್ಧಿಗೆ ಮಾತ್ರ ಅದು ಗೊತ್ತಿದೆ. ಉಳಿದ ಯಾರಿಗೂ ಆ ಗುಟ್ಟು ತಿಳಿದಿಲ್ಲ, ಏನದು ಎಂದು ಸುದೀಪ್ ಸ್ಪರ್ಧಿಗಳಿಗೆ ಕೇಳಿದ್ದರು. ಮನೆಯವರಿಗೆ ಇದನ್ನು ಕೇಳಿ ಗೊಂದಲ ಆಯಿತು. ಸುದೀಪ್ ಅವರು ವರ್ತೂರು ಅವರೇ ಎಂದು ಹೇಳಿದರು. ಆಗ ವರ್ತೂರು ಸಂತೋಷ್ ಅವರಿಗೆ ಇದು ತಮ್ಮದೇ ವಿಚಾರ ಎಂಬುದು ಗೊತ್ತಾಯಿತು. ವರ್ತೂರು ಸಂತೋಷ್ ಅವರು ಒಂದು ವಾರ ಹೊರಗೆ…
ಬೆಂಗಳೂರು: ಸಂವಿಧಾನದಡಿಯಲ್ಲಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಧ್ವಜ ಹಾರಿಸಲಷ್ಟೇ ಅವಕಾಶವಿದೆ. ಇದರ ಹೊರತಾಗಿ ಯಾವುದೇ ರಾಜಕೀಯ, ಧಾರ್ಮಿಕ ಧ್ವಜ ಹಾರಿಸಲು ಅವಕಾಶವಿಲ್ಲ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು. ಅವರು ಇಂದು ಕೆರಗೂಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹನುಮ ಧ್ವಜ ಹಾರಿಸಿರುವ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿ ಮಾತನಾಡಿದರು. ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಜಾಗದಲ್ಲಿ ರಾಷ್ಟ್ರೀಯ ಧ್ವಜ ಹಾರಿಸಬಹುದು. ಅದು ಹೊರತು ಪಡಿಸಿ ಸರ್ಕಾರಿ ಜಾಗದಲ್ಲಿ ಬೇರೆ ಧ್ವಜವನ್ನು ಹಾರಿಸುವಂತಿಲ್ಲ. ತ್ರಿವರ್ಣ ಧ್ವಜಕ್ಕೆ ಅನುಮತಿ ಪಡೆದು ಬೇರೆ ಧ್ವಜ ಹಾರಿಸೋದು ತಪ್ಪು. ನಾಳೆ ಬೆಳಿಗ್ಗೆ ಡಿಸಿ ಕಚೇರಿ ಮುಂದೆ ಹಾರಿಸ್ತೀನಿ ಅಂತಾರೆ. ಆಗ ಅವಕಾಶ ಕೊಡಲು ಆಗುತ್ತಾ.? ಇದು ಒಂದು ಕಡೆ ಅವಕಾಶ ಕೊಟ್ರೆ ಎಲ್ಲಾ ಕಡೆ ಕೇಳ್ತಾರೆ. ಇದು ತಪ್ಪು ಎಂದರು. https://ainlivenews.com/loan-from-central-government-for-business-people-get-rs-10-lakh-easily/ ಸ್ಥಳೀಯ ಯುವಕರು ಒಳ್ಳೆಯವರೇ ಅವರನ್ನ ದಾರಿ ತಪ್ಪಿಸುತ್ತಿದ್ದಾರೆ. ಎಲ್ಲಾ ಯುವಕರ ಜೊತೆ ಮಾತನಾಡುತ್ತೇನೆ. ಬೇರೆ ಸ್ಥಳದಲ್ಲಿ ಹನುಮಾನ್…
ಕಲಬುರಗಿ: ಬಿಹಾರ ಬೆಳವಣಿಗೆ ನನಗೆ ನಾಲ್ಕೈದು ದಿವಸದ ಹಿಂದೆನೇ ಲಾಲು ಪ್ರಸಾದ ಯಾದವ್ ಹೇಳಿದ್ರು ಅಂತ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ..ಕಲಬುರಗಿಯಲ್ಲಿಂದು ಮಾತನಾಡಿದ ಖರ್ಗೆ ನಾನು ಲಾಲು ಅವರ ಜೊತೆ ಸುಧಿರ್ಘವಾಗಿ ಮಾತಾಡಿದ್ದೆ, ಅವರದ್ದು ಸಂಖ್ಯೆ ನಮ್ಮದು ಏನು ಸಂಖ್ಯೆ ಇದೆ ಅಂತಾ ಕೇಳಿದ್ದೆ, ಅಷ್ಟರಲ್ಲೇ ನಿತೀಶ್ ಕುಮಾರ್ ಬೆಳವಣಿಗೆ ಆಗಿದೆ..ಇದೀಗ ಹೋಗ್ತಿದ್ದಾರೆ ಹೋಗಲಿ ಬಿಡಿ ನಾವು ನೀವು ಸೇರಿ ಹೋರಾಡೋಣ ಅಂತಾ ಹೇಳಿದ್ರು ಹೋರಾಡ್ತೆವೆ ಈ ವಿಚಾರ ನನಗೆ ಗೊತ್ತಿದ್ರೂ ಕೂಡ ನಾನು ಎಲ್ಲು ಬಹಿರಂಗ ಹೇಳಿಲ್ಲ ಅಂತ ಅಂದ್ರು..
ಕಂಪ್ಲಿ: ಕಬ್ಬಿನ ಹೊಲಕ್ಕೆ ಬೆಂಕಿ ಹತ್ತಿ ಬೆಳೆ ಹಾನಿಯಾದ ಘಟನೆ ತಾಲೂಕಿನ ಕಂಪ್ಲಿ ಗ್ರಾಮದಲ್ಲಿ ಬೆಳಗೋಡು ನಡೆದಿದೆ. ತಾಲ್ಲೂಕಿನ ಕಂಪ್ಲಿ ತಾಲ್ಲೂಕಿನ ಬೆಳಗೋಡು ಗ್ರಾಮದ ಹನುಮವ್ವ ಎಂಬ ರೈತರ, ಕಬ್ಬಿನ ಹೊಲದಲ್ಲಿ ವಿದ್ಯುತ್ ಶಾರ್ಟ ಸರ್ಕೀಟ್ ಆದ ಪರಿಣಾಮ ಕೊಯ್ಲಿಗೆ ಬಂದಿದ್ದ 2ಎಕರೆ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ. ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅವಘಡ ತಪ್ಪಿದೆ.
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lokabha Election) ಬಿಜೆಪಿಗೆ 400 ಸೀಟುಗಳು ಸಿಗೋದು ಖಚಿತ. ಮತ್ತೆ ಮೋದಿಯವರು ಪ್ರಧಾನಿ ಆಗುವುದು ಖಚಿತ ಎಂದು ಕೇಂದ್ರ ಸಚಿವ ಭೂಪೇಂದ್ರ ಯಾದವ್ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ (BJP) ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತಾಡಿದ ಭೂಪೇಂದ್ರ ಯಾದವ್, ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಕೇಂದ್ರದಿಂದ ಅನೇಕ ಅನುದಾನಗಳು, ಜಿಎಸ್‍ಟಿ ಬಾಕಿ ಬಂದರೂ ಅಭಿವೃದ್ಧಿ ಶೂನ್ಯ. ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಜನರಿಗೆ ವಂಚಿಸುತ್ತಿದೆ ಎಂದು ಆರೋಪಿಸಿದರು. https://ainlivenews.com/loan-from-central-government-for-business-people-get-rs-10-lakh-easily/ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದ 28 ಕ್ಷೇತದಲ್ಲೂ ಜಯಿಸಲಿದೆ. ಬಳಿಕ ರಾಜ್ಯದಲ್ಲಿ ಕಮಲ ಅರಳುವುದು ಗ್ಯಾರಂಟಿ. ಪಶ್ಚಿಮ ಬಂಗಾಳ ಹಾಗೂ ಬಿಹಾರದ ಬೆಳವಣಿಗೆಯಿಂದ ಕಾಂಗ್ರೆಸ್ ಮತ್ತಷ್ಟು ಕುಗ್ಗಿದೆ ಎಂದು ಭೂಪೇಂದ್ರ ಯಾದವ್ ಹೇಳಿದರು.
ಬೆಂಗಳೂರು: ಪ್ರತೀ ಮಂಡಲ, ಜಿಲ್ಲೆಗಳಲ್ಲಿರುವ ರಾಮಭಕ್ತರನ್ನು ಅಯೋಧ್ಯೆಗೆ ಕಳುಹಿಸಿಕೊಡಲು ನಿಶ್ಚಯಿಸಲಾಗಿದೆ ಎಂದು ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾತನಾಡಿದ ಅವರು, ಅಯೋಧ್ಯೆಗೆ ರಾಮಭಕ್ತರನ್ನು ಕಳಿಸಿಕೊಡಲು ಈಗಾಗಲೇ ನಿಶ್ಚಯಿಸಲಾಗಿದೆ. ಪ್ರತೀ ಮಂಡಲ, ಜಿಲ್ಲೆಗಳಲ್ಲಿ ರಾಮಭಕ್ತರನ್ನು ಅಯೋಧ್ಯೆಗೆ ಕಳಿಸಿಕೊಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ. ಫೆ.3, 4, 5 ರಂದು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆ ಮಾಡಲು ನಿಶ್ಚಯಿಸಲಾಗಿದೆ. ಕೇಂದ್ರ ಸರ್ಕಾರದಿಂದ ಬಂದಿರುವ, ಕೇಂದ್ರದ ಯೋಜನೆಗಳ ಫಲಾನುಭವಿಗಳಾಗಿರುವ ಮಹಿಳಾ ಸಂಘಗಳು, ಸ್ವಸಹಾಯ ಸಂಘಗಳ ನಾರಿ ವಂದನ ಹೆಸರಲ್ಲಿ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ. ಮತ್ತೊಮ್ಮೆ ಮೋದಿ ಎಂದು ಬೂತ್‌ಗಳಲ್ಲಿ ಗೋಡೆ ಬರಹ ಬರೆಯಲು ನಿರ್ಧರಿಸಲಾಗಿದೆ. ಜ.30 ರಂದು ಜಿಲ್ಲಾ, ಮಂಡಲ, ಬೂತ್ ಪದಾಧಿಕಾರಿಗಳು ಆಂದೋಲನದ ಮಾದರಿಯಲ್ಲಿ ಪ್ರತೀ ಬೂತ್‌ಗಳಲ್ಲೂ ಗೋಡೆ ಬರಹ ಆಂದೋಲನ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. https://ainlivenews.com/loan-from-central-government-for-business-people-get-rs-10-lakh-easily/ ಗ್ರಾಮ್ ಚಲೋ ಕಾರ್ಯಕ್ರಮವೂ ನಿಶ್ಚಯ ಆಗಿದೆ. ಎಲ್ಲ ಗ್ರಾಮಗಳಿಗೆ ತೆರಳಿ ಕಾಂಗ್ರೆಸ್ ವೈಫಲ್ಯಗಳು, ಕೇಂದ್ರದ ಸಾಧನೆಗಳ ಪ್ರಚಾರ…
ಪುಷ್ಪ-2 ಸ್ವಾತಂತ್ರ್ಯ ದಿನದಂದು ಅಂದರೆ ಆಗಸ್ಟ್ 15ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ ಎಂದು ಸ್ಪೆಷಲ್ ಪೋಸ್ಟರ್ ಮೂಲಕ ಚಿತ್ರತಂಡ ರಿಲೀಸ್ ಡೇಟ್ ಘೋಷಿಸಿತ್ತು. ಫ್ಯಾನ್ಸ್ ಪುಷ್ಪ ಸೀಕ್ವೆಲ್ ನೋಡೋದಿಕ್ಕೆ ಎಕ್ಸೈಟ್ ಆಗಿದ್ದರು. ಇದೀಗ ರಿಲೀಸ್ ಡೇಟ್ ಮುಂದೆ ಹೋಗಿದೆ ಎಂದು ಸುದ್ದಿಯನ್ನು ಹರಿಬಿಡಲಾಗಿದೆ. ಅಂದು ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಸಿನಿಮಾ ಬರಲಿರುವ ಕಾರಣ ಸಿನಿಮಾ ಬಿಡುಗಡೆ ಮುಂದಕ್ಕೆ ಹೋಗಿದೆ ಅಂತ ಸುದ್ದಿ ಆಗಿತ್ತು. ಇಂಥದ್ದೊಂದು ಸುದ್ದಿ ಆದ ಬೆನ್ನಲ್ಲೇ ಸಿನಿಮಾ ತಂಡದಿಂದ ಸ್ಪಷ್ಟನೆ ಬಂದಿದೆ. ಯಾವುದೇ ಕಾರಣಕ್ಕೂ ರಿಲೀಸ್ ಡೇಟ್ ಮುಂದಕ್ಕೆ ಹಾಕಲ್ಲ ಅಂದಿದ್ದಾರೆ ನಿರ್ದೇಶಕರು. ಘೋಷಣೆ ಮಾಡಿದ ದಿನದಂದೇ ಚಿತ್ರವನ್ನು ರಿಲೀಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲು ಅರ್ಜುನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊರಬಿದ್ದಿದ್ದ ಪುಷ್ಪ-2 ಟೀಸರ್ ಝಲಕ್ ಹಲ್ ಚಲ್ ಎಬ್ಬಿಸಿತ್ತು. ಪುಷ್ಪ 2 ಟೀಸರ್ ಜೊತೆ ಹೊರಬಿದ್ದಿದ್ದ ಪುಷ್ಪರಾಜನ ಹೊಸ ಫೋಟೋವಂತೂ ಟಾಕ್ ಆಫ್ ದಿ ಟಾಲಿವುಡ್ ಆಗಿತ್ತು. ಸೀರೆ ಉಂಟು ಬಳೆ ತೊಟ್ಟು ಮೂಗುತಿ…
ನಟ ಬಾಬಿ ಡಿಯೋಲ್ ಅಭಿನಯದ ಕಂಗುವ ಚಿತ್ರತಂಡ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿದ್ದು, ಬಾಬಿಯ ಉಧೀರನ್ ಲುಕ್ ಕಂಡು ಅಭಿಮಾನಿಗಳು ಅಚ್ಚರಿ ಪಟ್ಟಿದ್ದಾರೆ. ಪಾತ್ರ ಇನ್ನೂ ಹೇಗೆಲ್ಲ ಇರಲಿದೆ ಎನ್ನುವ ಚರ್ಚೆಯನ್ನೂ ಮಾಡುತ್ತಿದ್ದಾರೆ. ಮೊನ್ನೆಯಷ್ಟೇ ಚಿತ್ರದ ನಾಯಕ ಸೂರ್ಯ (Surya) ಅವರ ‘ಕಂಗುವ’ (Kanguva) ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿತ್ತು. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದರು. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದರು. ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಕೂಡ ಮಾಡಿತ್ತು. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ. ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. https://ainlivenews.com/loan-from-central-government-for-business-people-get-rs-10-lakh-easily/ ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ…