Author: AIN Author

ಎಲ್​ಪಿಜಿ ಸಿಲಿಂಡಗಳ ಬೆಲೆ ಮತ್ತೆ ಏರಿಕೆಯಾಗಿದೆ.ದರ ಹೆಚ್ಚಳದ ಬಳಿಕ 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟದ ಬೆಲೆ  1796.50 ರೂಪಾಯಿಗೆ ಏರಿಕೆಯಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯ ಬೆಲೆಯಾಗಿದ್ದು, ಇದೇ ಬೆಲೆ ವಾಣಿಜ್ಯ ನಗರಿ ಮುಂಬೈನಲ್ಲಿ 1,749 ರೂಪಾಯಿಗೆ ಜಿಗಿತವಾಗಿದೆ. ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,904 ರೂಪಾಯಿಗೆ ಏರಿಕೆಯಾಗಿದೆ. ಹೊಸದಾಗಿ ಬೆಲೆ ಪರಿಷ್ಕರಣೆ ಬಳಿಕ ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,968.5 ರೂಪಾಯಿ ಹಾಗೂ ಕೋಲ್ಕತ್ತದಲ್ಲಿ 1,908 ರೂಪಾಯಿ ಇದೆ. 14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು. ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ…

Read More

ಮೈಸೂರು: ಪತ್ನಿ ಮೇಲೆ ವಿಪರೀತ ಸಂಶಯ ಪಡುತ್ತಿದ್ದ ಗಂಡನೊಬ್ಬ ಆಕೆ ತವರು ಮನೆಗೆ ಹೋಗಿದ್ದಾಗ ಅಲ್ಲಿ ಆಕೆಗೆ ಚಾಕುವಿನಿಂದ 5 ಬಾರಿ ಇರಿದು, ಬಳಿಕ ತನ್ನ ಮನೆಗೆ ಪರಾರಿಯಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ (Piriyapatna) ತಾಲೂಕಿನ ಮುತ್ತಿನಮುಳ್ಳುಸೋಗೆ ಗ್ರಾಮದಲ್ಲಿ ನಡೆದಿದೆ. ಕಳೆದ ಒಂದೂವರೆ ವರ್ಷದ ಹಿಂದೆ ಮುತ್ತಿನ ಮುಳುಸೋಗೆ ಗ್ರಾಮದ ಶ್ವೇತಾ ಎಂಬಾಕೆಯನ್ನು ಗ್ರಾಮದ ಪ್ರಸನ್ನ (36) ಎಂಬಾತ ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿದ್ದ. ಆದರೆ ದಿನಕಳೆದಂತೆ ತನ್ನ ಪತ್ನಿ ಮೇಲೆ ಪ್ರಸನ್ನ ವಿಪರೀತ ಸಂಶಯ ಪಟ್ಟು ಆಕೆಗೆ ಮಾನಸಿಕ ಹಾಗೂ ದೈಹಿಕವಾಗಿ ಹಿಂಸೆ ನೀಡುತ್ತಿದ್ದ. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಈ ಬಗ್ಗೆ ಹಲವಾರು ಬಾರಿ ಮೈಸೂರು ಹಾಗೂ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿ, ದಂಪತಿಯ ರಾಜಿ ಸಂಧಾನ ಮಾಡಿ ಕಳುಹಿಸಿದ್ದರು. ಆದರೆ ಪ್ರಸನ್ನ ಮಾತ್ರ ಪತ್ನಿ ಮೇಲೆ ಅನುಮಾನ ಪಡುವುದು ಬಿಟ್ಟಿರಲಿಲ್ಲ. ಆಕೆಯ ತಂಗಿಯ ಮೇಲೆ ವ್ಯಾಮೋಹವೂ ಹೆಚ್ಚಾಗಿ, ಆಕೆಯೊಂದಿಗೆ ಮದುವೆ…

Read More

ಪೃಥ್ವಿರಾಜ್ ಸುಕುಮಾರನ್ (Pruthviraj Sukumaran) ಅಭಿನಯದ ದಿ ಗೋಟ್ ಲೈಫ್ (The Goat Life), ದಿ ಎಪಿಕ್ ಟೇಲ್ ಆಫ್ ದಿ ಗ್ರೇಟೆಸ್ಟ್ ಸರ್ವೈವಲ್ ಅಡ್ವೆಂಚರ್ ಸಿನಿಮಾಗೆ ರಿಲೀಸ್ ಡೇಟ್ ಫಿಕ್ಸ್ ಆಗಿದೆ. 2024ರ ಏಪ್ರಿಲ್ 10 ರಂದು ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇದು ರಾಷ್ಟ ಪ್ರಶಸ್ತಿ ವಿಜೇತ ಬ್ಲೆಸ್ಸಿ  (Blessy)ನಿರ್ದೇಶನದ ಸಿನಿಮಾ. ದಿ ಗೋಟ್ ಲೈಫ್ ಚಿತ್ರದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ  ಕಥೆ ಆಧರಿಸಿದ ಚಿತ್ರವಾಗಿದೆ. ಬ್ಲೆಸ್ಸಿ ನಿರ್ದೇಶನದ ಈ ಸಿನಿಮಾವನ್ಬು ವಿಷುಯಲ್ ರೊಮ್ಯಾನ್ಸ್ ನಿರ್ಮಿಸಿದೆ. ಈ ಚಿತ್ರದಲ್ಲಿ ಹಾಲಿವುಡ್ ನಟ ಜಿಮ್ಮಿ ಜೀನ್-ಲೂಯಿಸ್, ಅಮಲಾ ಪೌಲ್, ಭಾರತೀಯ ನಟ ಕೆ.ಆರ್.ಗೋಕುಲ್ ಮತ್ತು ಪ್ರಸಿದ್ಧ ಅರಬ್ ನಟರಾದ ತಾಲಿಬ್ ಅಲ್ ಬಲೂಶಿ ಮತ್ತು ರಿಕಾಬಿ…

Read More

ಹಾಸನ: ನನ್ನ ಕ್ಷೇತ್ರವೊಂದರಲ್ಲೇ 224 ಶಾಲೆಗಳಲ್ಲಿ ಶೌಚಾಲಯ ಇಲ್ಲ. ಇರುವ ಕಡೆ ಶಿಕ್ಷಕರೇ ಸ್ವಚ್ಛ ಮಾಡುವ ಪರಿಸ್ಥಿತಿ ಬಂದಿದೆ ಎಂದು ಮಾಜಿ ಸಚಿವ ಹೆಚ್.ಡಿ‌.ರೇವಣ್ಣ (H.D.Revanna) ಬೇಸರ ವ್ಯಕ್ತಪಡಿಸಿದರು. ಹಾಸನ (Hassan) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವರು ಬಂದರು. ಕಾಂಗ್ರೆಸ್ ಕಚೇರಿಗೆ ಭೇಟಿ ಕೊಟ್ಟರು. ಜಿಪಂನಲ್ಲಿ ಕೇಸರಿಬಾತ್, ಉಪ್ಪಿಟ್ಟು ತಿಂದು ಹೋದರು. ಶೌಚಾಲಯ ತೊಳೆಯುವ ಶಿಕ್ಷಕರ ಸ್ಥಿತಿ ಏನಾಗಬೇಕು. ಇಂಥ ಪರಿಸ್ಥಿತಿ ನಾಚಿಕೆಗೇಡು ಎಂದು ಅಸಮಾಧಾನ ಹೊರಹಾಕಿದರು. ಬಿಜೆಪಿ-ಜೆಡಿಎಸ್ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಸಚಿವ ಮಧು ಬಂಗಾರಪ್ಪ ಹೇಳಿಕೆಗೆ ಟಾಂಗ್ ನೀಡಿದ ರೇವಣ್ಣ, ಅವರು ಕುಮಾರಣ್ಣನ ಬಳಿ ವ್ಯಾಪಾರ ಮಾಡಿಕೊಂಡು ಹೋಗಿರುವವರು. ಅವರ ಪಕ್ಷದವರೇಕೆ 2009 ರಲ್ಲಿ ನಮ್ಮ ಬಳಿ ಬಂದಿದ್ದರು ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಹಾಲಿ ಇರುವುದು ನೆಹರೂ, ಮಹಾತ್ಮ ಗಾಂಧಿ ಕಾಲದ ಕಾಂಗ್ರೆಸ್. ಪಕ್ಷ ಹಾಗೂ ಮುಖಂಡರು ಶೀಘ್ರ ಧೂಳೀಪಟ ಆಗುವ ಕಾಲ ಬರಲಿದೆ ಎಂದು ಭವಿಷ್ಯ ನುಡಿದರು. ರಾಜ್ಯದ ದುಡ್ಡಿನಿಂದ ತೆಲಂಗಾಣದಲ್ಲಿ ಚುನಾವಣೆ ಮಾಡಲಾಗುತ್ತಿದೆ. ಗೃಹಲಕ್ಷ್ಮಿ ಆಸೆ…

Read More

ಬೆಂಗಳೂರು: ಸಿಲಿಕಾನ್​ ಸಿಟಿಯ 15 ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ.ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ ಎಂಡು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ ಎಂದು ತಿಳಿದು ನಾನು ನನ್ನ ಮನೆಯ ಹತ್ತಿರ ಇರುವ ಶಾಲೆಗೆ ಬಂದಿದ್ದೇನೆ. ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ” ಎಂದರು. ”ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಅಂತಹ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಹೀಗೆ ಹುಸಿ ಕರೆ ಬಂದಿತ್ತು .ಇದರ ಬಗ್ಗೆ ಗಂಭೀರವಾಗಿ ಪರಿಗಣಿಸಿ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದು ಹೇಳಿದರು.

Read More

ಬೆಂಗಳೂರು: ಸಿಲಿಕಾನ್ ಸಿಟಿಯ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಇ-ಮೇಲ್ ಬೆದರಿಕೆ ಕೇಳಿಬಂದ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಇಲಾಖೆ ತೀವ್ರ ತಪಾಸಣೆ ಕೈಗೊಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಅವರು, ಈಗಾಗಲೇ ಬೆದರಿಕೆ ಇ-ಮೇಲ್ ಮಾಡಲಾಗಿದ್ದ ಶಾಲೆಗಳಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಬೆಂಗಳೂರು ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದಕೂಡಲೇ ಕ್ರಮ ಕೈಗೊಳ್ಳಲಾಗಿದೆ. ಈ ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಆಗಂತುಕರು ಬಾಂಬ್ ಬೆದರಿಕೆ ಹಾಕಿದ್ದಾರೆ. ಇ-ಮೇಲ್…

Read More

ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನ ಸಲಾರ್ ಸಿನಿಮಾದ ಬಹು ನಿರೀಕ್ಷಿತ ಟ್ರೈಲರ್ (Trailer) ಇಂದು ಸಂಜೆ 7.19ಕ್ಕೆ ರಿಲೀಸ್ ಆಗಲಿದೆ. ಸಂಜೆಗಾಗಿ ಪ್ರಭಾಸ್ ಅಭಿಮಾನಿಗಳು ಅತೀ ನಿರೀಕ್ಷೆ ಇಟ್ಟುಕೊಂಡು ಕಾಯುತ್ತಿದ್ದಾರೆ. ಈ ಕಾಂಬಿನೇಷನ್ ನ ಮೊದಲ ಸಿನಿಮಾ ಇದಾಗಿದ್ದರಿಂದ, ಟ್ರೈಲರ್ ಯಾವ ರೀತಿಯಲ್ಲಿ ಮೋಡಿ ಮಾಡಲಿದೆ ಎಂದು ಈಗಿನಿಂದಲೇ ವಿಶ್ಲೇಷಿಸಲಾಗುತ್ತಿದೆ. ಸಲಾರ್ ಸಿನಿಮಾದ ಕಥೆಯ (Story) ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಪ್ರಶಾಂತ್ ನೀಲ್ (Prashant Neel) ಈ ಹಿಂದೆ ಕನ್ನಡದಲ್ಲಿ ಮಾಡಿದ್ದ ಉಗ್ರಂ ಸಿನಿಮಾವನ್ನೇ ಕೊಂಚ ಬದಲಿಸಿಕೊಂಡು ಚಿತ್ರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಪ್ರಶಾಂತ್ ನೀಲ್ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಕಥೆಯ ಬಗ್ಗೆ ಪ್ರಶಾಂತ್ ಮಾತನಾಡಿದ್ದಾರೆ. ಇದು ರಿಮೇಕ್ ಸಿನಿಮಾವಲ್ಲ ಎಂದು ಸ್ಪಷ್ಟ ಪಡಿಸಿದರುವ ಅವರು, ಸ್ನೇಹಿತರಿಬ್ಬರು ದೊಡ್ಡ ಶತ್ರುಗಳಾಗಿ ಬದಲಾಗುವ ಕಥೆಯನ್ನು ಸಿನಿಮಾದಲ್ಲಿ ತೋರಿಸಲಾಗುತ್ತಿದೆ ಎಂದಿದ್ದಾರೆ. ಈ ಇಬ್ಬರ ಜರ್ನಿಯನ್ನು ಎರಡು ಭಾಗವಾಗಿ ತೋರಿಸಲಾಗುವುದು ಎಂದು ಇದೇ ಮೊದಲ…

Read More

ಖ್ಯಾತ ಹಿರಿಯ ನಟಿ ಮತ್ತು ಸಂಗೀತ ಕ್ಷೇತ್ರದಲ್ಲೂ ಸಾಕಷ್ಟು ಹೆಸರು ಮಾಡಿರುವ ಮಲೆಯಾಳಂನ (Malayalam) ಆರ್.ಸುಬ್ಬಲಕ್ಷ್ಮಿ (R.Subbalakshmi) ನಿಧನರಾಗಿದ್ದಾರೆ (Passed away). 87ರ ವಯಸ್ಸಿನ ಈ ಹಿರಿ ಜೀವ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಸಿನಮಾ ರಂಗದಲ್ಲಿ ಮಾತ್ರವಲ್ಲ, ಚಿತ್ರಕಲೆ ಮತ್ತು ಸಂಗೀತ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು ಸುಬ್ಬಲಕ್ಷ್ಮಿ. ಮಲಯಾಳಂನ ಅನೇಕ ಸ್ಟಾರ್ ನಟರ ಜೊತೆಗೆ ಕೆಲಸ ಮಾಡಿದ್ದ ಸುಬ್ಬಲಕ್ಷ್ಮಿ ಅವರು, ಇತ್ತೀಚಿನ ದಿನಗಳಲ್ಲಿ ಅಜ್ಜಿ ಪಾತ್ರಕ್ಕೆ ಫಿಕ್ಸ್ ಆಗಿದ್ದರು. ಸಾಕಷ್ಟು ಚಿತ್ರಗಳಲ್ಲಿ ಅಜ್ಜಿಯಾಗಿಯೇ ಫೇಮಸ್ ಆದವರು. ಪಾಂಡಿಪ್ಪ, ನಂದನಂ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು. ನಟಿಯ ನಿಧನಕ್ಕೆ ನಟರು ಮಾತ್ರವಲ್ಲ, ಕೇರಳದ ಮುಖ್ಯಮಂತ್ರಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಸಿನಿಮಾ ರಂಗದ ಕಲಾವಿದರು ಮತ್ತು ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ.

Read More

ಧಾರವಾಡ: ಹುಬ್ಬಳ್ಳಿ, ಧಾರವಾಡದ ಅವಳಿನಗರಗಳಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕಗಳು ಬಹಳ ಹೊಲಸಾಗಿವೆ. ಅವುಗಳ ನಿರ್ವಹಣೆ ಸರಿಯಾಗಿಲ್ಲ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅಸಮಾಧಾನ ವ್ಯಕ್ತಪಡಿಸಿದರು. https://ainlivenews.com/case-of-sale-of-cow-children-the-woman-who-was-selling-vegetables-is-a-billionaire/ ಧಾರವಾಡದಲ್ಲಿ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಘಟಕಗಳು ಬಹಳು ಹೊಲಸುತನದಿಂದ ಕೂಡಿವೆ. ಹುಬ್ಬಳ್ಳಿ, ಧಾರವಾಡ ಎರಡೂ ನಗರಗಳನ್ನು ನಾನು ಸುತ್ತಿ ನೋಡುತ್ತೇನೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದ ಹತ್ತಿರ ಚರಂಡಿ ನೀರು ಕೆಲ ಮನೆಗಳಿಗೆ ನುಗ್ಗಿದೆ ಎಂದು ದೂರು ಬಂದಿತ್ತು. ಈ ಸಂಬಂಧ ನಾಳೆ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದೇನೆ. ಇದರ ಬಗ್ಗೆ ಸುಧೀರ್ಘ ಚರ್ಚೆ ಮಾಡಲಿದ್ದೇನೆ ಎಂದರು.

Read More

ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವಿವ್ಸ್ಯೂ ಪಡೆಯುತ್ತಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ ಕಳೆದ ವರ್ಷ ಬಿಡುಗಡೆಯಾಗಿ  ಜಗತ್ತಿನಾದ್ಯಂತ ಮೆಚ್ಚುಗೆ ಪಡೆಯುವುದರ ಜೊತೆಗೆ ದೊಡ್ಡ ಯಶಸ್ಸು ಕಂಡ ‘ಕಾಂತಾರ’ ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್, ಈಗ ಇನ್ನೊಂದು ಅಂಥದ್ದೇ ಪ್ರಯತ್ನದೊಂದಿಗೆ ವಾಪಸಾಗುತ್ತಿದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ಮಹತ್ವಾಕಾಂಕ್ಷೆಯ ಮತ್ತು ಬಹುನಿರೀಕ್ಷಿತ ಚಿತ್ರವಾದ ‘ಕಾಂತಾರ – ಅಧ್ಯಾಯ 1’ ರ (Kantara Chapter 1) ಮೊದಲ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಜನರ ವೀಕ್ಷಣೆಗೆ ಸಾಕ್ಷಿಯಾಗಿತ್ತು. ‘ಕಾಂತಾರ’ ಜಗತ್ತನ್ನು ಪರಿಚಯಿಸುವ ಈ ಟೀಸರ್ ನಲ್ಲಿ ರಿಷಬ್ ಶೆಟ್ಟಿ (Rishabh Shetty) ಅವರ ಪಾತ್ರ ಮತ್ತು ವೇಷ ಗಮನ…

Read More