ಬೆಂಗಳೂರು:- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 75ನೇ ಗಣರಾಜ್ಯೋತ್ಸವದಂದ ತಮ್ಮ ಶಾಸಕರ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಪೌರ ಕಾರ್ಮಿಕರನ್ನ ಗೌರವಿಸಿದ್ದಾರೆ. ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಿಕ ವರ್ಗದವರು. ಅಂಥವರನ್ನು ಗುರುತಿಸಿ ತಮ್ಮ ಕಚೇರಿಯಲ್ಲಿ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲು ಸಚಿವರು ಸೂಚನೆ ನೀಡಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಿಲ್ಲಾ ಕೇಂದ್ರದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ಚೀಕರಿಸಿದ ಸಚಿವರು, ತಮ್ಮ ಸ್ವ ಕ್ಷೇತ್ರದಲ್ಲಿ ತಮ್ಮ ಅನುಪಸ್ಥಿತಿಯಲ್ಲಿ ಪೌರ ಕಾರ್ಮಿಕರಿಂದ ಧ್ವಜರೋಹಣ ಕಾರ್ಯ ನೆರವೇರಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಸಮಾರಂಭದಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರ ಪುತ್ರಿ ಅನನ್ಯ ರಾವ್ ಅವರು ಪಾಲ್ಗೊಂಡು ಧ್ವಜವಂದನೆ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಪೌರ ಕಾರ್ಮಿಕರನ್ನ ಸನ್ಮಾನಿಸಿ, ಗೌರವಿಸಲಾಯಿತು.
Author: AIN Author
ಚಾಮರಾಜನಗರ:- ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಆಕ್ಸಿಜನ್ ದುರಂತ ದಲ್ಲಿ ಒಂದೇ ರಾತ್ರಿ 32 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಆಗಿನ ಸರ್ಕಾರ ಅಲ್ಪ ಸ್ವಲ್ಪ ಪರಿಹಾರ ಕೊಟ್ಟು ಕೈ ತೊಳೆದುಕೊಂಡಿತು. ನಂತರ ಕಾಂಗ್ರೆಸ್, ಆಕ್ಸಿಜನ್ ದುರಂತದಲ್ಲಿ ಸತ್ತಿದ್ದು 24 ಅಲ್ಲ 32 ಮಂದಿಯೆಂದು ಕೆಪಿಸಿಸಿ ವತಿಯಿಂದ ತಲಾ ಒಂದು ಲಕ್ಷ ಪರಿಹಾರ ಕೊಟ್ಟಿತ್ತು.ಇನ್ನು ರಾಜ್ಯದಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಸಂತ್ರಸ್ತರ ಜೊತೆಗೆ ಸಂವಾದ ನಡೆಸಿ ಸರ್ಕಾರಿ ಉದ್ಯೋಗದ ಭರವಸೆ ಕೊಟ್ಟಿದ್ದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಬಳಿಕವೂ ಸಿಎಂ ಸಿದ್ದರಾಮಯ್ಯ, ಡಿಕೆಶಿ ಇಬ್ಬರು ಕೂಡ ಸಂತ್ರಸ್ತ ಕುಟುಂಬಕ್ಕೆ ಉದ್ಯೋಗದ ಭರವಸೆ ಕೊಟ್ಟಿದ್ದರು. ಇದೀಗ ಚಾಮರಾಜನಗರ ಉಸ್ತುವಾರಿ ಸಚಿವ ವೆಂಕಟೇಶ್ ಗಣರಾಜ್ಯೋತ್ಸವ ದಿನದಂದೆ ಗುತ್ತಿಗೆ ಆಧಾರದ ಮೇಲೆಯೇ ಕೆಲಸ ಕೊಡುವ ಘೋಷಣೆ ಮಾಡಿದ್ದಾರೆ. ಜೊತೆಗೆ ಫೆಬ್ರವರಿ 1 ರಿಂದ ಕೆಲಸಕ್ಕೆ ಹಾಜರಾಗುವಂತೆ ಸಂತ್ರಸ್ತ ಕುಟುಂಬದ ಒಬ್ಬ ವ್ಯಕ್ತಿಗೆ ಕೆಲಸ ಕೊಡುವ…
ಕನ್ನಡ ಚಿತ್ರರಂಗದಲ್ಲಿ ‘ರಂಗಿತರಂಗ’ ಚಿತ್ರ ಮಾಡಿದ ಸಾಧನೆ ದೊಡ್ಡದು. ಈ ಸಿನಿಮಾ ಬಿಡುಗಡೆಯಾಗಿ ಹೆಚ್ಚುಕಮ್ಮಿ 10 ವರ್ಷವಾಗಿದೆ. ಬಾಹುಬಲಿಯಂತಹ ದೊಡ್ಡ ಸಿನಿಮಾದ ಎದುರು ಗೆದ್ದು ಬೀಗಿದ್ದ ಈ ಸಿನಿಮಾದಲ್ಲಿ, ನಾಯಕನಾಗಿ ಅಮೋಘವಾಗಿ ನಟಿಸಿದ್ದ ನಿರೂಪ್ ಭಂಡಾರಿ ಎದುರು ಖಳನಾಯಕನಾಗಿ ಸಾಯಿಕುಮಾರ್ ಅತ್ಯದ್ಭುತ ಪ್ರದರ್ಶನ ತೋರಿಸಿದ್ದರು. ಪೋಸ್ಟ್ ಮ್ಯಾನ್ ಕಾಳಿಂಗನಾಗಿ ಅಬ್ಬರಿಸಿದ್ದ ಸಾಯಿಕುಮಾರ್ ಹಾಗೂ ನಿರೂಪ್ ಮತ್ತೆ ಕೈ ಜೋಡಿಸಿದ್ದಾರೆ. ಮೊದಲ ಬಾರಿಗೆ ಡೈರೆಕ್ಟರ್ ಕ್ಯಾಪ್ ತೊಟ್ಟಿರುವ ಯುವ ಪ್ರತಿಭೆ ಸಚಿನ್ ವಾಲಿ ಸಾರಥ್ಯದ ಹೊಸ ಸಿನಿಮಾದಲ್ಲಿ ನಿರೂಪ್ ಭಂಡಾರಿ ಹಾಗೂ ಸಾಯಿಕುಮಾರ್ ಒಟ್ಟಿಗೆ ನಟಿಸ್ತಿದ್ದಾರೆ. ಈಗಾಗ್ಲೇ ಸಾಯಿಕುಮಾರ್ ಚಿತ್ರತಂಡ ಸೇರಿದ್ದು ಬಹಳ ವರ್ಷಗಳ ನಂತ್ರ ಈ ಕಾಂಬೋ ಮತ್ತೆ ಒಂದಾಗಿರುವುದು ಕುತೂಹಲ ಹೆಚ್ಚಿಸಿದೆ. ಸಾಯಿಕುಮಾರ್ ಅವರು ನಿರೂಪ್ ಅವರ ತಂದೆ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರದ ಶೀರ್ಷಿಕೆ ಮತ್ತು ಪರ್ಸ್ಟ್ ಲುಕ್ ಫೆಬ್ರವರಿ 6ಕ್ಕೆ ಅನಾವರಣಗೊಳ್ಳುತ್ತಿದೆ ಸತ್ಯ ಮತ್ತು ಸುಳ್ಳಿನ ನಡುವೆ ಇರುವ ಸಾಮಾಜಿಕ ಬದ್ಧತೆ ಸುತ್ತ ಸಾಗುವ ಕಾಮಿಡಿ…
ಬಾದಾಮಿ ನಮ್ಮ ದೇಹಕ್ಕೆ ಎಷ್ಟೇ ಆರೋಗ್ಯಕರವಾಗಿದ್ದರೂ ಅದನ್ನು ಹೆಚ್ಚಾಗಿ ಸೇವಿಸಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದು ಎಂಬುದು ಕೂಡ ನಿಮಗೆ ತಿಳಿದಿರಲಿ. ಬಾದಾಮಿ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಸತ್ಯ. ಆದರೆ, ದಿನಕ್ಕೆ ಎಷ್ಟು ಬಾದಾಮಿ ತಿನ್ನಬೇಕು? ಬಾದಾಮಿಯನ್ನು ಅತಿಯಾಗಿ ಸೇವಿಸಿದರೆ ಏನಾಗುತ್ತದೆ? ಎಂಬಿತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ಇಲ್ಲಿದೆ. ಪ್ರತಿದಿನ ಒಂದು ಹಿಡಿ ಬಾದಾಮಿಯನ್ನು ಸೇವಿಸುವುದರಿಂದ ಅನೇಕ ರೀತಿಯಲ್ಲಿ ಆರೋಗ್ಯಕ್ಕೆ ಪ್ರಯೋಜನಗಳನ್ನು ನೀಡುತ್ತದೆ. ಆದರೆ, ಅದಕ್ಕಿಂತ ಹೆಚ್ಚು ಸೇವಿಸಿದರೆ ಕೆಟ್ಟ ಪರಿಣಾಮಗಳು ಕೂಡ ಉಂಟಾಗುತ್ತದೆ. ಅಲರ್ಜಿಯ ಪ್ರತಿಕ್ರಿಯೆಗಳು: ಬಾದಾಮಿಯನ್ನು ಹೆಚ್ಚು ಸೇವಿಸಿದರೆ ಕೆಲವರಿಗೆ ಅಲರ್ಜಿ ಆಗುತ್ತದೆ. ಕೆಲವು ವ್ಯಕ್ತಿಗಳು ಅವುಗಳನ್ನು ಸೇವಿಸಿದ ನಂತರ ಅಲರ್ಜಿಯ ಪ್ರತಿಕ್ರಿಯೆಯನ್ನು ಹೊಂದುತ್ತಾರೆ. ಬಾದಾಮಿ ಅಲರ್ಜಿಯ ರೋಗಲಕ್ಷಣಗಳು ಸೌಮ್ಯದಿಂದ ತೀವ್ರವಾಗಿರಬಹುದು ಮತ್ತು ತುರಿಕೆ, ಊತ, ಜೇನುಗೂಡುಗಳು, ಉಸಿರಾಟದ ತೊಂದರೆ, ಅಥವಾ ಅನಾಫಿಲ್ಯಾಕ್ಸಿಸ್ ಮುಂತಾದ ಸಮಸ್ಯೆ ಕೂಡ ಉಂಟಾಗಬಹುದು. ಬಾದಾಮಿಯನ್ನು ಸೇವಿಸಿದ ನಂತರ ನೀವು ಯಾವುದೇ ಅಲರ್ಜಿಯ ಲಕ್ಷಣಗಳನ್ನು ಅನುಭವಿಸಿದರೆ, ತಕ್ಷಣವೇ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಮುಖ್ಯ. ಜೀರ್ಣಕಾರಿ…
ರಿಷಬ್ ಶೆಟ್ಟಿ ಅವರಿಗೆ ನಾಯಕಿಯಾಗಿ ‘ಕಾಂತಾರ’ ಮೂಲಕ ಸಕ್ಸಸ್ ಕಂಡ ನಟಿ ಸಪ್ತಮಿ ಇದೀಗ ಬಹುಭಾಷೆಗಳಲ್ಲಿ ಮಿಂಚುತ್ತಿದ್ದಾರೆ. ಇದರ ನಡುವೆ ಕಿರುತೆರೆಗೆ ಸಪ್ತಮಿ ಹಾಜರಿ ಹಾಕಿದ್ದಾರೆ. ‘ಶ್ರೀರಸ್ತು ಶುಭಮಸ್ತು’ ಸೀರಿಯಲ್ ಇದೀಗ ಮಹಾ ಸಂಚಿಕೆ ನಡೆಯುತ್ತಿದೆ. ಇದರಲ್ಲಿ ವಿಶೇಷ ಪಾತ್ರದಲ್ಲಿ ನಟಿಸುವ ಮೂಲಕ ಸಪ್ತಮಿ ತಂಡಕ್ಕೆ ಸಾಥ್ ನೀಡಿದ್ದಾರೆ. ಸೀರಿಯಲ್ ಪ್ರಚಾರಕ್ಕೆ ಸಪ್ತಮಿ ಬಂದಿದ್ದಾರೆ. ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ಪಾತ್ರಗಳ ನಿರೂಪಣೆ ಮಾಡಿದ್ದಾರೆ. ಸೀರಿಯಲ್‌ನ ನಾಯಕಿ ತುಳಸಿ ಪಾತ್ರಧಾರಿ ಅಂದರೆ ಸುಧಾರಾಣಿ ಅವರು ಮಕ್ಕಳ ಖುಷಿಗಾಗಿ ಎದುರಾಳಿಗಳ ಕುತಂತ್ರಕ್ಕೆ ಮಣಿದು ಮನೆಯಿಂದ ಹೊರಹೋಗುತ್ತಾರೆ. ಮುಂದೇನು ಆಗುತ್ತೆ? ನಾಯಕಿ ಮತ್ತೆ ಮರಳಿ ಮನೆಗೆ ಬರುತ್ತಾರಾ ಎಂಬುದು ಸದ್ಯದ ಟ್ವಿಸ್ಟ್. ಇದನ್ನು ಸಪ್ತಮಿ ನಿರೂಪಣೆ ಮಾಡುವ ಮೂಲಕ ಸೀರಿಯಲ್ ಕುರಿತು ಮತ್ತಷ್ಟು ಕುತೂಹಲ ಮೂಡುವಂತೆ ಮಾಡಿದ್ದಾರೆ. ಸದ್ಯ ರಿವೀಲ್ ಆಗಿರೋ ಸಪ್ತಮಿ ಪ್ರೋಮೋ ಸದ್ದು ಮಾಡುತ್ತಿದೆ. ಕಾಂತಾರ’ ಚಿತ್ರದ ಸಕ್ಸಸ್ ಅನ್ನು ನಟಿ ಸದುಪಯೋಗಪಡಿಸಿಕೊಂಡಿದ್ದಾರೆ. ಕನ್ನಡದ ಜೊತೆ ಜೊತೆಗೆ ಬಾಲಿವುಡ್ ಸಿನಿಮಾಗಳಲ್ಲಿ ಸಪ್ತಮಿ ಬ್ಯುಸಿಯಾಗಿದ್ದಾರೆ.…
ಬಾಗಲಕೋಟೆ:- ಜಿಲ್ಲೆಯ ಬೀಳಗಿ ತಾಲ್ಲೂಕಿನ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಅನಗವಾಡಿ ಗ್ರಾಮದ ಬಳಿ ಕಬ್ಬು ತುಂಬಿ ನಿಂತ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದು ನುಜ್ಜುಗುಜ್ಜಾದ ಘಟನೆ ಜರುಗಿದೆ. ಅಪಘಾತದಲ್ಲಿ ಓರ್ವ ಮಹಿಳೆ,ಮೂವರು ಪುರುಷರು ಸೇರಿ ಒಟ್ಟು ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ಅಪಘಾತದ ಸದ್ದು ಕೇಳಿ ಬಂದ ಸ್ಥಳೀಯರು, ಕೂಡಲೇ ಬೀಳಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಸೇರಿ ಶವ ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಈ ಬಗ್ಗೆ ಮಾತಾಡಿದ ಪ್ರತ್ಯಕ್ಷದರ್ಶಿ ಬಸು ಛಬ್ಬಿ ಎಂಬಾತ ‘ನಾಲ್ಕು ಗಂಟೆಗೆ ಹೊಲಕ್ಕೆ ಹೋಗಿ ಬರುವಾಗ ಜೋರಾದ ಸದ್ದು ಕೇಳಿ ಬಂತು. ಹೋಗಿ ನೋಡಿದರೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು ಎಂದಿದ್ದಾನೆ. ಮೃತರೆಲ್ಲರೂ ವಿಜಯಪುರ ತಾಲ್ಲೂಕಿನ ಹೊನಗಳ್ಳಿ ಗ್ರಾಮದವರಾಗಿದ್ದಾರೆ. ಚಾಲಕ ಮಲ್ಲು ಪೂಜಾರಿ(25), ಕಲ್ಲು ಕವಟಗಿ(35), ಕಾಮಾಕ್ಷಿ ಬಡಿಗೇರ(30), ತುಕಾರಾಮ ತಳೇವಾಡ(30) ಮೃತರಾಗಿದ್ದಾರೆ. ಇವರಲ್ಲಿ ಕಲ್ಲು ಕವಟಗಿ ಎಂಬಾತ ಗ್ರಾಮ ಪಂಚಾಯತಿ ಸದಸ್ಯರಾಗಿದ್ದಾರೆ. ಎಲ್ಲರೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ…
ಡ್ರೋನ್ ಪ್ರತಾಪ್ ಒಳ್ಳೆಯ ಹುಡುಗ’ ಎಂದು ಹೇಳುವ ಮೂಲಕ ಕೊನೇ ಕ್ಷಣದಲ್ಲಿ ವಿನಯ್ ಗೌಡ ಒಪ್ಪಿಕೊಂಡಿದ್ದಾರೆ. ಡ್ರೋನ್ ಪ್ರತಾಪ್ ಮತ್ತು ವಿನಯ್ ಗೌಡ ಅವರ ನಡುವೆ ಆದ ಜಗಳಗಳು ಒಂದೆರಡಲ್ಲ. ಇಬ್ಬರೂ ಅನೇಕ ಬಾರಿ ಪರಸ್ಪರ ಆರೋಪ ಮಾಡಿಕೊಂಡಿದ್ದಾರೆ. ಆದರೆ ಈಗ ಡ್ರೋನ್ ಪ್ರತಾಪ್ ಅವರನ್ನು ವಿನಯ್ ಗೌಡ ಹೊಗಳಿದ್ದಾರೆ. ಅದಕ್ಕೆ ಕಾರಣ ಆಗಿದ್ದು ಒಂದು ಘಟನೆ. ಇನ್ನೇನು ಡ್ರೋನ್ ಪ್ರತಾಪ್ ಅವರು ಎಲಿಮಿನೇಟ್ ಆಗುತ್ತಾರೆ ಎಂಬ ಸಂದರ್ಭ ಎದುರಾಯಿತು. ಆಗ ಅವರ ಬಗ್ಗೆ ವಿನಯ್ ಗೌಡ ಅಭಿಪ್ರಾಯ ತಿಳಿಸಿದರು. ನಂತರ ಫೋಟೋಗಳು ತುಂಬಿರುವ ಬಿಗ್ ಬಾಸ್ ಮನೆಯ ನೆನಪಿನ ಗೋಡೆಯನ್ನು ನೋಡಿಕೊಂಡು ಮನದ ಮಾತುಗಳನ್ನು ಹಂಚಿಕೊಳ್ಳುವಾಗಲೂ ಡ್ರೋನ್ ಪ್ರತಾಪ್ ಬಗ್ಗೆ ತಮಗೆ ಇರುವ ಭಾವನೆ ಎಂಥದ್ದು ಎಂಬುದನ್ನು ವಿನಯ್ ಗೌಡ ತಿಳಿಸಿದರು. ಜನವರಿ 25ರ ಸಂಚಿಕೆಯಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯುತ್ತದೆ ಎಂದು ಬಿಗ್ ಬಾಸ್ ಘೋಷಿಸಿದರು. ಮನೆಯಲ್ಲಿ ಇರುವ ಆರು ಮಂದಿಯ ಅಭಿಪ್ರಾಯದ ಆಧಾರದಲ್ಲಿ ಒಬ್ಬರನ್ನು ಹೊರಗೆ ಕಳಿಸಲಾಗುತ್ತದೆ…
ಕೆಂಪು ರಕ್ತ ಕಣಗಳು ರಕ್ತಜೀವಕೋಶಗಳ ಅತ್ಯಂತ ಸಾಮಾನ್ಯ ಬಗೆಗಳಾಗಿವೆ. ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಸಪ್ಲಿಮೆಂಟ್ ಅಥವಾ ಔಷಧಿಗಳನ್ನು ಸೇವಿಸುವುದಕ್ಕಿಂತಲೂ ಆಹಾರದ ಮೂಲಕವೇ ಅದನ್ನು ಕಂಟ್ರೋಲ್ ಮಾಡಬಹುದು. ರಕ್ತ ಪರಿಚಲನೆಯ ಮೂಲಕ ದೇಹದ ಅಂಗಾಶಗಳಿಗೆ ಆಮ್ಲಜನಕವನ್ನು ತಲುಪಿಸುವ ಪ್ರಮುಖ ಸಾಧನ ಇದಾಗಿದೆ. ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಈ 10 ಆಹಾರವನ್ನು ಸೇವಿಸಿ. ಹಸಿರು ಸೊಪ್ಪು: ಪಾಲಕ್, ಕೇಲ್, ಸ್ವಿಸ್ ಚಾರ್ಡ್ ಮತ್ತು ಇತರ ಹಸಿರು ಸೊಪ್ಪಿನಲ್ಲಿ ಕಬ್ಬಿಣ ಮತ್ತು ಫೋಲೇಟ್ ಸಮೃದ್ಧವಾಗಿರುತ್ತದೆ. ಇದು ಕೆಂಪು ರಕ್ತ ಕಣಗಳ ಉತ್ಪಾದನೆಗೆ ಅವಶ್ಯಕವಾಗಿದೆ. ಮಾಂಸ: ಆರ್ಗನ್ ಮಾಂಸಗಳು ವಿಶೇಷವಾಗಿ ಯಕೃತ್ತು, ಕಬ್ಬಿಣ, ವಿಟಮಿನ್ ಬಿ 12 ಮತ್ತು ಕೆಂಪು ರಕ್ತ ಕಣಗಳ ರಚನೆಗೆ ಪ್ರಮುಖವಾದ ಇತರ ಪೋಷಕಾಂಶಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ಬೀನ್ಸ್ ಮತ್ತು ಮಸೂರ: ದ್ವಿದಳ ಧಾನ್ಯಗಳು ಮತ್ತು ಬೀನ್ಸ್ (ಉದಾಹರಣೆಗೆ ಕಡಲೆ, ಕಪ್ಪು ಬೀನ್ಸ್) ಕಬ್ಬಿಣ, ಪ್ರೋಟೀನ್ ಮತ್ತು ಫೋಲೇಟ್‌ನ ಉತ್ತಮ ಮೂಲಗಳಾಗಿವೆ. ನಟ್ಸ್ ಮತ್ತು ಸೀಡ್ಸ್: ಬಾದಾಮಿ, ಸೂರ್ಯಕಾಂತಿ ಬೀಜಗಳು…
ಬೆಂಗಳೂರು :-ಪೂರ್ವ ತಾಲ್ಲೂಕಿನಲ್ಲಿ ಇಂದು ದೇಶದಾದ್ಯಂತ 75ನೇ ಗಣರಾಜ್ಯೋತ್ಸವ ದಿನವನ್ನು ಅದ್ದೂರಿಯಿಂದ ಆಚರಣೆ ಮಾಡಲಾಯಿತು.ಕ್ಷೇತ್ರದ ಕೆ.ಆರ್.ಪುರ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ತಿರಂಗಾ ರಾರಾಜಿಸಿತು.ಬೆಂಗಳೂರು ಪೂರ್ವ ತಾಲ್ಲೂಕು ದಂಡಾಧಿಕಾರಿ ರವಿ ಅವರು ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಬಾನಂಗಳಕ್ಕೆ ತಿವರ್ಣ ಬಣ್ಣದ ನೂರಾರು ಬಲೂನ್ ಗಳನ್ನ ಹಾರಿಸಿದರು. ಶಾಸಕ ಬೈರತಿ ಬಸವರಾಜ್,ಮತ್ತು ತಾಲ್ಲೂಕು ದಂಡಾಧಿಕಾರಿ ರವಿ ಅವರು ಪೊಲೀಸರಿಂದ ತೆರೆದ ವಾಹನದ ಮೂಲಕ ಗೌರವ ವಂದನೆ ಸ್ವೀಕರಿಸಿದರು. ಗಣರಾಜ್ಯೋತ್ಸವ ಕಾರ್ಯಕ್ರಮವನ್ನ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಭೈರತಿ ಬಸವರಾಜ್ ನಾವೆಲ್ಲ ಉನ್ನತ ಸ್ಥಾನದಲ್ಲಿ ಬಾಳಲು ನಮಗೆ ಸಿಕ್ಕಂತ ಅವಕಾಶಗಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದ ಪ್ರತಿಯೊಬ್ಬರೂ ಇದನ್ನು ಅರಿತು ನಡೆಯಬೇಕು. ನಮಗೆ ಕೊಟ್ಟಂತಹ ಸಂವಿಧಾನದ ವಿಧಿಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ತಿಳಿಸಿದರು. ಪರಕೀಯರ ಆಡಳಿತದ ಮುಷ್ಠಿಯಲ್ಲಿದ್ದ ಭಾರತ ಹಲವು ಮಹನೀಯರ ಹೋರಾಟ, ಪ್ರಾಣ ತ್ಯಾಗ, ಬಲಿದಾನದ ಫಲವಾಗಿ ಸ್ವಾತಂತ್ರ್ಯಗೊಂಡಿತು. ಸ್ವಾತಂತ್ರ್ಯ ಬಳಿಕ ದೇಶದಲ್ಲಿ ಆಹಾರದ ಕೊರತೆ, ಧಾರ್ಮಿಕ ಸಂಘರ್ಷ ಮನೆ ಮಾಡಿತ್ತು.…
ಟೀಂ ಇಂಡಿಯಾ ಆಟಗಾರರು ಇಂಗ್ಲೆಂಡ್ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ 175 ರನ್‍ಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಅಲ್ಲದೇ ಮೂರನೇ ದಿನವೂ ಟೀಂ ಇಂಡಿಯಾ ಬ್ಯಾಟಿಂಗ್ ಮುಂದುವರಿಸಲಿದೆ. ಪಂದ್ಯದ ಮೊದಲ ದಿನ ಇನ್ನಿಂಗ್ಸ್ ಆರಂಭಿಸಿದ ಇಂಗ್ಲೆಂಡ್, 64.3 ಓವರ್‌ಗಳಲ್ಲಿ 246 ರನ್‍ಗಳಿಗೆ ಆಲೌಟ್ ಆಗಿತ್ತು. ಬಳಿಕ ಬ್ಯಾಟ್ ಮಾಡಿದ ಭಾರತ, 1 ವಿಕೆಟ್ ಕಳೆದುಕೊಂಡು 119 ರನ್ ಗಳಿಸಿತ್ತು. ಆ ಮೂಲಕ ಕೇವಲ 127 ರನ್‍ಗಳ ಅಲ್ಪ ಹಿನ್ನಡೆಯೊಂದಿಗೆ ಎರಡನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿತ್ತು. ಇಂದು ಮತ್ತೆ ಬ್ಯಾಟಿಂಗ್ ಮುಂದುವರೆಸಿದ ಭಾರತ, ದಿನದ ಅಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 421 ರನ್ ಗಳಿಸಿದೆ. ಇಂದಿನ ಆಟದ ಆರಂಭದಲ್ಲೇ ಜೈಸ್ವಾಲ್ ಔಟಾದರು. 74 ಎಸೆತಗಳಲ್ಲಿ 80 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್, ರೂಟ್ ಎಸೆತದಲ್ಲಿ ಕ್ಯಾಚ್ ನೀಡಿ ಔಟಾದರು. ಅದಾದ ಕೆಲವೇ ಹೊತ್ತಿನಲ್ಲಿ ಶುಭಮನ್ ಗಿಲ್ ಕೂಡಾ 23 ರನ್ ಗಳಿಸಿ ವಿಕೆಟ್ ಒಪ್ಪಿಸಿ, ಪೆವಿಲಿಯನ್‍ಗೆ…