Author: AIN Author

ಬೆಂಗಳೂರು: ರಾಜ್ಯದಲ್ಲಿ ಎಗ್ಗಿಲ್ಲದೇ ಟ್ರಾನ್ಸ್‌ಫರ್ ದಂಧೆ ನಡೆಯುತ್ತಿದ್ಯಾ ಎಂಬ ಅನುಮಾನ ಮೂಡಿದ್ದು, ಟ್ರಾನ್ಸ್‌ಫರ್‌ ಬಗ್ಗೆ ಕಾಂಗ್ರೆಸ್​ ನಾಯಕನ ಸ್ಫೋಟಕ ಆಡಿಯೋ ವೈರಲ್​ ಆಗಿದೆ. ಕಾಂಗ್ರೆಸ್​ ನಾಯಕ ಉಮಾಪತಿಗೌಡ ಸಾಮಾಜಿಕ ಕಾರ್ಯಕರ್ತ ವಿಜಯ್ ಡೆನ್ನಿಸ್​ ಜೊತೆ ಸಂಭಾಷಣೆ ನಡೆಸಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇನ್ಸ್‌ಪೆಕ್ಟರ್‌ ಟ್ರಾನ್ಸ್‌ಫರ್‌ಗೆ ಉಮಾಪತಿಗೌಡ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. https://ainlivenews.com/a-woman-shows-a-fake-ticket-and-enters-the-airport/ ಅದೇ ಠಾಣೆಯಲ್ಲಿ ಉಳಿಸಲು ಇನ್ಸ್‌ಪೆಕ್ಟರ್‌ ಹಣ ನೀಡಿದ್ದಾರೆ. ಈ ಹಣವನ್ನ ಹೋಂ ಮಿನಿಸ್ಟರ್‌ಗೆ ಕೊಟ್ಟಿರೋ ಬಗ್ಗೆ ಆಡಿಯೋದಲ್ಲಿ ಪ್ರಸ್ತಾಪ ಮಾಡಲಾಗಿದೆ. ಸಚಿವರಿಗೆ ಹಣ ಕೊಟ್ಟಿರೋದಾಗಿ ಉಮಾಪತಿಗೌಡ ಹೇಳಿದ್ದಾರೆ. ನಾನು ಹೇಳಿದರೇ ನಮ್ಮ ಸರ್ಕಾರದಲ್ಲಿ ಕೆಲಸ ಆಗೇ ಆಗುತ್ತೆ ಎಂದು ಕಾಂಗ್ರೆಸ್​ ನಾಯಕ ಉಮಾಪತಿಗೌಡ ಹೇಳಿದ್ದಾರೆ.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಜನಸ್ಪಂದನೆ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಹಮ್ಮಿಕೊಂಡಿದ್ದು ಸಾಲು ಸಾಲು ಸಮಸ್ಯೆಗಳ ಅಹವಾಲುಗಳನ್ನು ಹೊತ್ತು ಬೆಳಗ್ಗೆಯಿಂದಲೇ ಸಿಎಂ ಮನೆಯ ಮುಂದೆ ಸಾಕುಕಟ್ಟಿ ನಿಂತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರೆ ಖುದ್ದು ಜನರ ಸಮಸ್ಯೆಗಳನ್ನು ಆಲಿಸಿದ್ದು ನಾಡಿನ ವಿವಿಧೆಡೆಗಳಿಂದ ಆಗಮಿಸಿರುವ ಜನರು ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಹೊತ್ತು ಸಿಎಂ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳಯವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರಿಂದ ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದರು. ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೇ ಕಿರುಕುಳ ತಪ್ಪಿಸುವಂತೆ ಖಡಕ್ ಸೂಚನೆ ನೀಡಿದರು. ವೃದ್ದಾಪ್ಯ ವೇತನ ಮಂಜೂರಾತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎನ್ನುವ ದೂರುಗಳ ಹಿನ್ನೆಲೆಯಲ್ಲಿ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಇಲಾಖೆ ನಿರ್ದೇಶಕರನ್ನು ಕರೆಸಿ ತಾಂತ್ರಿಕ‌ ತೊಂದರೆ ಇದ್ದರೆ ತಕ್ಷಣ…

Read More

ಬೆಂಗಳೂರು: ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ 2 ಸಿನಿಮಾದ ಟೀಸರ್ ಫಸ್ಟ್‌ ಲುಕ್‌ ಬಿಡುಗಡೆಯಾಗಿದೆ. ಮೊದಲ ಭಾಗದಂತೆಯೇ, ಎರಡನೇ ಭಾಗವನ್ನು ಸಹ ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಲಿದ್ದಾರೆ, ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ಬ್ಯಾನರ್‌ನ ವಿಜಯ್ ಕಿರಂಗಂದೂರು ನಿರ್ಮಿಸಿರುವ ಈ ಸೀಕ್ವೆಲ್ ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್‌ನಲ್ಲಿ ಬಿಡುಗಡೆಯಾಗಿದೆ. ನಟ ರಿಷಬ್‌ ಶೆಟ್ಟಿ ಅವರ ಸಿನಿಪಯಣದ ದಿಕ್ಕನ್ನು ಬದಲಿಸಿದ ಸಿನಿಮಾ ಕಾಂತಾರ. ವಿಶ್ವವ್ಯಾಪಿ ಪ್ರೇಕ್ಷಕರ ಮನಗೆಲ್ಲುವುದರೊಂದಿಗೆ, ಬಾಕ್ಸ್‌ ಆಫೀಸ್‌ನಲ್ಲಿ ಕೋಟಿ ಕೋಟಿ ಹಣವನ್ನೂ ಬಾಚಿತ್ತು. ಇದೀಗ ಈ ಸಿನಿಮಾದ ಪ್ರೀಕ್ವೆಲ್‌ ತೆರೆಯ ಮೇಲೆ ಬರಲಿದ್ದು, ಪ್ರೇಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟಿಸಿದೆ.

Read More

ಶಿರಾ:- ಮಾಜಿ ಸಚಿವ ಆರ್‌. ಅಶೋಕ ಅವರು ಪ್ರತಿಕ್ರಿಯೆ ನೀಡಿ, ಜಾತಿ ಗಣತಿಗೆ ಬಿಜೆಪಿ ವಿರೋಧ ಇಲ್ಲ ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಜಾತಿ ಗಣತಿಯನ್ನು ಬಿಜೆಪಿ ಎಂದೂ ವಿರೋಧ ಮಾಡುವುದಿಲ್ಲ. ಆದರೆ, ಜಾತಿ ಗಣತಿ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ‌ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡುತ್ತಿದ್ದಾರೆ ಎಂದರು. ವೀರಶೈವ ಎಂದು ಜಾತಿ ಒಡೆಯುವ ಕೆಲಸ ಮಾಡಿದ್ದ ಸಿದ್ದರಾಮಯ್ಯ ಈ ಬಾರಿ ಜಾತಿ, ಜಾತಿಗಳನ್ನು ಎತ್ತಿಕಟ್ಟುವ ಮೂಲಕ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದಾರೆ ಎಂದು ಆರೋಪಿಸಿದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಅವರ ಸಂಪುಟದ ಸದಸ್ಯರೇ ಜಾತಿ ಗಣತಿ ವರದಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ವರದಿ ಈಗಾಗಲೇ ಸೋರಿಕೆಯಾಗಿದ್ದು, ಅವೈಜ್ಞಾನಿಕವಾಗಿದೆ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್‌ ಪಡೆಯುವ ಮೂಲಕ ರಾಜ್ಯ ಕಾಂಗ್ರೆಸ್‌ ಸರ್ಕಾರ ಕೆಟ್ಟ ಸಂಪ್ರದಾಯ ಆರಂಭಿಸಿದೆ. ಸಂಪುಟ ಸಭೆಯನ್ನು ದುರುಪಯೋಗ ಮಾಡಿಕೊಂಡಿದೆ ಎಂದು ತರಾಟೆಗೆ ತೆಗೆದುಕೊಂಡರು. ಈ ಹಿಂದೆ ಲೋಕಾಯುಕ್ತ ಸಂಸ್ಥೆ…

Read More

ಮಂಡ್ಯ:- ಜಾತಿ ಗಣತಿಯಲ್ಲಿ  ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯಿಂದ ನ್ಯಾಯ ಸಿಗುವ ವಿಶ್ವಾಸ ಇದೆ ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.  ಈ ಸಂಬಂಧ ಮಾತನಾಡಿದ ಅವರು, ಜಾತಿ ಗಣತಿಯಿಂದ ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ, ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಈ ರಾಜ್ಯದಲ್ಲಿ ಎಲ್ಲರಿಗೂ ನ್ಯಾಯಕೊಡಿಸುವ ಕೆಲಸ ಮಾಡುತ್ತಾರೆ ಎಂದರು.  ನನಗೆ ಸಿದ್ದರಾಮಯ್ಯ ನವರ ಮೇಲೆ ನಂಬಿಕೆ ಇದೆ. ಸಿದ್ದರಾಮಯ್ಯ ನವರು ಸೂಕ್ತ ರೀತಿಯಲ್ಲಿ ಪರಿಶೀಲನೆ ಮಾಡಿ ಜಾತಿಗಣತಿ ಜಾರಿಗೊಳಿಸುತ್ತಾರೆ. ವರದಿ ಸ್ವೀಕಾರವು ಮುಖ್ಯಮಂತ್ರಿ ಅವರಿಗೆ ಬಿಟ್ಟಿದ್ದು ಎಂದರು. ಮುಖ್ಯಮಂತ್ರಿ ಅವರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ, ಎಲ್ಲ ಸಮಾಜದ ಅಹವಾಲು ಕೇಳಿದ್ದಾರೆ. ಯಾವ ಸಮಾಜದ ಆತಂಕ ಇದೆ ಅದನ್ನ ಮುಖ್ಯಮಂತ್ರಿ ಮುಂದೆ ಪ್ರಸ್ತಾಪ ಮಾಡಲಾಗಿದೆ. ಇದನ್ನು ಕ್ರೂಢೀಕರಿಸಿ ಸೂಕ್ತ ತೀರ್ಮಾನ ಮಾಡುತ್ತಾರೆ, ವರದಿ ಸಲ್ಲಿಕೆ ಆದ ಮೇಲೆ ಆತಂಕ ಪಡಬೇಕು. ಆತಂಕ ಪಟ್ಟಿರುವುದು ಸೂಕ್ತವಾಗಿದೀಯಾ ಆಮೇಲೆ ಅದನ್ನ ಸರಿ ಮಾಡಬೇಕು. ವರದಿ ಬಂದ ಮೇಲೆ ಮಾತನಾಡುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಕಾಂಗ್ರೆಸ್ ಪಕ್ಷದವರೇ…

Read More

ಕಲಬುರಗಿ: ಜಾತಿ ಗಣತಿ ಸಮೀಕ್ಷೆ ಹೊರಬಂದ್ರೆ ನಮ್ಮ ಸಮುದಾಯಕ್ಕೆ ಸಿಗುವ ಸವಲತ್ತುಗಳ ತಪ್ಪಿ ಹೋಗಬಹುದಾ ಅನ್ನೋ ಆಲೋಚನೆ ವಿರೋಧಿಸುವವರಿಗಿದೆ ಅಂತ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿಎಸ್ ದ್ವಾರಕಾನಾಥ್ ಹೇಳಿದ್ದಾರೆ. ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದ್ವಾರಕನಾಥ್ ಮೊದಲು ಸಮೀಕ್ಷೆ ಪ್ರಕಟ ಆಗಲಿ.. ಅದರಲ್ಲಿ ಏನಿದೆ ಅಂತ ತಿಳಿಯದೇ ವಿರೋಧಿಸುವುದು ಸರಿಯಲ್ಲ ಅಂದ್ರು..ಎಲ್ಲೋ ಕುಳಿತು ಸಮೀಕ್ಷೆ ಮಾಡಿದ್ದಾರೆ ಅಂತ ಆರೋಪಿಸುವವರು ದಾಖಲೆ ಇಟ್ಟು ಮಾತಾಡಿದ್ರೆ ಒಳಿತು ಅಂತ ಹೇಳಿದ್ರು.

Read More

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜನತಾದರ್ಶನ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.೦ ಹಾಗೂ ಜಿಲ್ಲೆಗಳ ಪ್ರಗತಿ ಪರಿಶೀಲನೆ ಕುರಿತಂತೆ ಡಿ.ಐ.ಎಸ್. ತಂತ್ರಾಂಶವನ್ನು ಲೋಕಾರ್ಪಣೆ ಮಾಡಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಇ-ಆಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಾರ್ವಜನಿಕ ಸಂಗ್ರಹಣೆ ಪೋರ್ಟಲ್‌ 2.0 ರಾಜ್ಯದ ಆಯವ್ಯಯದಲ್ಲಿ ಕೈಗೊಂಡ ಎಲ್ಲಾ ಇಲಾಖೆಗಳ ರೂ 1 ಕೋಟಿಗಿಂತ ಹೆಚ್ಚಿನ ಕಾಮಗಾರಿಗಳ ಪ್ರಗತಿಯನ್ನು ಸಮಯಬದ್ದವಾಗಿ ಮೇಲ್ವಿಚಾರಣೆ ಮಾಡಲು ಕಾಂಟ್ರಾಕ್ಟ್ ಮ್ಯಾನೇಜಮೆಂಟ್ ಮಾಡ್ಯೂಲ್‌ನಲ್ಲಿ ಡ್ಯಾಷ್‌ಬೋರ್ಡ್‌ನ್ನು ಇ-ಆಡಳಿತ ಇಲಾಖೆಯ ವತಿಯಿಂದ ಸಿದ್ದಪಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಲಸಂಪನ್ಮೂಲ ಇಲಾಖೆ, ಲೋಕೋಪಯೋಗಿ ಇಲಾಖೆ ಮತ್ತು ಅದರ ವ್ಯಾಪ್ತಿಯಲ್ಲಿರುವ ಎಲ್ಲಾ ಮಂಡಳಿಗಳು ಮತ್ತು ನಿಗಮಗಳಡಿ ನೀಡಲಾದ ರೂ.50 ಲಕ್ಷ ಮತ್ತು ಅದಕ್ಕಿಂತ…

Read More

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ & ಗ್ಯಾಂಗ್ ದಾಂಧಲೆ ಪ್ರಕರಣ ಹಿನ್ನೆಲೆಯಲ್ಲಿ  ಆರ್ ಟಿ. ಪೊಲೀಸರಿಂದ ರೌಡಿಶೀಟರ್ ಬೋಡ್ಕೆ ಇಮ್ರಾನ್  ಅರೆಸ್ಟ್ ಮಾಡಲಾಗಿದೆ. ಡಿ‌ಜೆ.ಹಳ್ಳಿ ಠಾಣಾ ವ್ಯಾಪ್ತಿಯ ಮೋದಿ ರೋಡ್  ನಲ್ಲಿ ನಡೆದಿದ್ದ ಘಟನೆ https://ainlivenews.com/laser-therapy-soukhy-robotic-ortho-care/ ಕೆಲವು ದಿನಗಳ ಹಿಂದೆ ಬಾರ್ ಗೆ ನುಗ್ಗಿ ಲಾಂಗ್ ತೋರಿಸಿ  ದಂದಾಲೆ ಮಾಡಿದ್ದ ಇಮ್ರಾನ್ ಅಂಡ್ ಗ್ಯಾಂಗ್ ಬಳಿಕ ಬೀಡಾ ಅಂಗಡಿ ಮಾಲೀಕನಿಗೆ ಲಾಂಗ್ ತೋರಿಸಿ ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್ ಆರ್.ಟಿ.ನಗರ ಹಾಗೂ .ಜೆ.ಸಿ.ನಗರ.ರೌಡಿಶೀಟರ್ ಬೊಡ್ಕೆ ಇಮ್ರಾನ್ ಅಂಡ್ ಗ್ಯಾಂಗ್ ನಿಂದ ನಡೆದಿದ್ದ ಹಲ್ಲೆ ಅಷ್ಟೇ ಅಲ್ಲದೇ ಮೋದಿ ರೋಡ್ನಲ್ಲಿ ನಿಲ್ಲಿಸಿದ್ದ ಕಾರ್, ಆಟೋ ಜಖಂ ಮಾಡಿದ್ದ  ಕಿಡಿಗೇಡಿಗಳು  ಸಿಸಿಟಿವಿಯಲ್ಲಿ ರೌಡಿಶೀಟರ್ ಲಾಂಗ್ ಬಿಸೋ ಕೃತ್ಯ ಸೆರೆಯಾಗಿತ್ತು ಟ್ಯಾಂಕ್ ಮುಲ್ಲಾ ,ಹುಸೇನಾ ಮಸೀದಿ ,ಪಿಎನ್ ಟಿ ಸರ್ಕಲ್ ನಲ್ಲೂ ಕೃತ್ಯ ಎಸಗಿದ್ರು ಬೀಡಾ ಅಂಗಡಿ ಮಾಲೀಕ ಶಿವಣ್ಣ ಬಳಿ ಲಾಂಗ್ ತೋರಿಸಿ 6 ಸಾವಿರ ಕಸಿದು ಪರಾರಿಯಾಗಿದ್ರು ಸದ್ಯ ಆರೋಪಿಯನ್ನ ಬಂಧಿಸಿರುವ ಅರ್…

Read More

ಶಿವಮೊಗ್ಗ:- ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಸ್ಲಿಂ ನಾಯಕರಿಗೆ ತಲೆಬಾಗಬೇಕು ಎಂಬುದಕ್ಕೆ ನನ್ನ ವಿರೋಧವಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.  ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಕಾಂಗ್ರೆಸ್ ಸರ್ಕಾರ ಭಾರತದ ಸಂವಿಧಾನ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಇಲ್ಲ ಪಾಕಿಸ್ತಾನದ ಇಸ್ಲಾಮಿಕ್ ಪ್ರಕಾರ ಆಡಳಿತ ನಡೆಸುತ್ತಿದೆಯಾ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದರು. ಸಚಿವ ಜಮೀರ್ ಅಹಮ್ಮದ್ ಅವರು ತೆಲಂಗಾಣದಲ್ಲಿ ಪ್ರಚಾರಕ್ಕೆ ಹೋದಾಗ ಮುಸ್ಲಿಂ ಸಭಾಧ್ಯಕ್ಷರಿಗೆ ಎಲ್ಲರೂ ತಲೆಬಾಗಿ ವಿಧಾನಸಭೆ ಚಟುವಟಿಕೆ ನಡೆಸಬೇಕು ಎಂದಿದ್ದಾರೆ. ಮುಸ್ಲಿಂ ನಾಯಕರಿಗೆ ತಲೆಬಾಗಬೇಕು ಎಂಬುದಕ್ಕೆ ನನ್ನ ವಿರೋಧವಿದೆ. ನಾವು ಗೌರವ ಕೊಡುತ್ತಿರುವುದು ಖಾದರ್ ಅನ್ನೋ ಬೋಳಪ್ಪ ಇದ್ದಾನೆ ಅಂತಲ್ಲ. ದೇಶದ ಸಂವಿಧಾನ ಹಾಗೂ ಸ್ಪೀಕರ್ ಸ್ಥಾನಕ್ಕೆ.  ಈ ರೀತಿ ರಾಷ್ಟ್ರದ್ರೋಹಿ ಹೇಳಿಕೆ ನೀಡಿರುವ ಜಮೀರ್‌ ಅಹಮ್ಮದ್‌ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಜಮೀರ್ ಹೇಳಿಕೆಗೆ ಮುಂದಿನ ಚುನಾವಣೆಯಲ್ಲಿ…

Read More

ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ (Kempegowda International Airport) ನಡೆದಿದೆ. https://ainlivenews.com/laser-therapy-soukhy-robotic-ortho-care/ ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ ಪಿಇಎಸ್‍ಸಿವರೆಗೂ ಹೋಗಿದ್ದಳು. ಬಳಿಕ ಲ್ಯಾಪ್‍ಟಾಪ್ ಕಳೆದುಹೋಗಿದೆ ಎಂದು ಹೊರಗೆ ಬಂದಿದ್ದಳು. ಈ ವೇಳೆ ಅನುಮಾನಗೊಂಡ ಸಿಬ್ಬಂದಿ ಟಿಕೆಟ್ ಪರಿಶೀಲನೆ ನಡೆಸಿದಾಗ ನಕಲಿ ಟಿಕೆಟ್ ಎನ್ನುವುದು ತಿಳಿದು ಬಂದಿದೆ. ಈ ಸಂಬಂಧ ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್ (Police) ಠಾಣೆಯಲ್ಲಿ ಎಫ್‍ಐಆರ್ (FIR) ದಾಖಲಾಗಿದೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More