Author: AIN Author

ಬಿಗ್‌ಬಾಸ್‌ ಈ ಸಲದ ಷೋ 50ನೇ ದಿನವನ್ನು ತಲುಪಿದೆ. ಈ ವಾರದ ‘ಸೂಪರ್ ಸಂಡೆ ವಿಥ್ ಸುದೀಪ್‌’ ಎಪಿಸೋಡ್‌ನಲ್ಲಿ ಐವತ್ತು ದಿನಗಳ ಪಯಣದ ವಿಟಿಯನ್ನೂ ಹಾಕಿ ತೋರಿಸಲಾಗಿದೆ. ಐವತ್ತು ದಿನಗಳ ಕಾಲದ ಏಳುಬೀಳಿನ ಹಾದಿಯನ್ನು ನೋಡಿ ಸ್ಪರ್ಧಿಗಳು ಖುಷಿಪಟ್ಟರು. ನಂತರ ನಾಮಿನೇಷನ್‌ ಲೀಸ್ಟ್‌ನಲ್ಲಿರುವ ಸ್ಪರ್ಧಿಗಳಲ್ಲಿ ಮೊದಲು ನಮ್ರತಾ ಅವರು ಸೇಫ್‌ ಎಂದು ಕಿಚ್ಚ ಘೋಷಣೆ ಮಾಡಿದರು. ನಂತರ ಸೇಫ್‌ ಆಗಿದ್ದು, ತುಕಾಲಿ ಸಂತೋಷ್. ಸ್ನೇಹಿತ್‌ ಕೂಡ ಸೇಫ್‌ ಆದರು.  ಆ ಹಂತದಲ್ಲಿ ನಾಮಿನೇಷನ್ ಲೀಸ್ಟ್‌ನಲ್ಲಿ ಉಳಿದವರು ನೀತು ಮತ್ತು ಸಿರಿ. ಅವರಿಬ್ಬರಲ್ಲಿ ಸಿರಿ ಸೇಫ್ ಆಗಿದ್ದಾರೆ ಮತ್ತು ನೀತು ವನಜಾಕ್ಷಿ ಅವರ ಬಿಗ್‌ಬಾಸ್ ಪಯಣ ಈ ಎಪಿಸೋಡ್‌ನೊಂದಿಗೆ ಮುಗಿದಿದೆ. ಬಿಗ್‌ಬಾಸ್‌ ಕನ್ನಡ ಇತಿಹಾಸದಲ್ಲಿಯೇ, ಕ್ಯಾಪ್ಟನ್‌ಷಿಪ್‌ನಲ್ಲಿ ಇದ್ದು, ಎಲಿಮಿನೇಟ್‌ ಆದ ಮೊದಲ ಸ್ಪರ್ಧಿಯಾಗಿ ನೀತು ಹೊರಗೆ ಹೋಗಿದ್ದಾರೆ. ಟ್ರಾನ್ಸ್‌ಜೆಂಡರ್‍ ಸಮುದಾಯದಿಂದ ಬಂದಿರುವ ನೀತು, ‘ನಮ್ಮ ಸಮುದಾಯದವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಬಿಗ್‌ಬಾಸ್‌ ವೇದಿಕೆಯ ಮೂಲಕ ಮಾಡುತ್ತೇನೆ’ ಎಂದು ಆರಂಭದಲ್ಲಿಯೇ ಹೇಳಿದ್ದರು. ಹಾಗೆಂದು…

Read More

ಬಾಗಲಕೋಟೆ:-  ಬಿಎಸ್‌ವೈಗೆ ಆದ ಸ್ಥಿತಿ ವಿಜಯೇಂದ್ರನಿಗೂ ಬರಲಿದೆ ಎಂದು ಸಚಿವ ತಿಮ್ಮಾಪುರ ಭವಿಷ್ಯ ನುಡಿದಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿಯಲ್ಲಿ ಸಾಕಷ್ಟು ನಾಯಕರಿಗೆ ಅನ್ಯಾಯಮಾಡಿದ್ದು, ನಮ್ಮ ಯಡಿಯೂರಪ್ಪ ಸಾಹೇಬರನ್ನು ಈ ಮುಂಚೆ ಯಾವ ರೀತಿಯಾಗಿ ಪಕ್ಷವು ನಡೆಸಿಕೊಂಡಿದೆ ಎಂಬುವುದು ಎಲ್ಲರಿಗೂ ಗೊತ್ತಿರುವ ವಿಷಯ. ಅದೇ ರೀತಿ ಪರಿಸ್ಥಿತಿ ಅವರ ಮಗನಿಗೂ ಬರಲಿದೆ ಎಂದು ಭವಿಷ್ಯ ನುಡಿದರು. ಲಿಂಗಾಯತರು, ದಲಿತರು ಎಲ್ಲ ಸರ್ವ ಜನಾಂಗದವರನ್ನು ತುಳಿಯುವ ವ್ಯವಸ್ಥೆ ಬಿಜೆಪಿಯಲ್ಲಿದೆ. ಯಾರನ್ನೂ ಸಹ ಅವರು ಸರಿಯಾಗಿ ನಡೆಸಿಕೊಳ್ಳುವುದಿಲ್ಲ. ಎಲ್ಲ ಮುಖಂಡರ ಪರಿಸ್ಥಿತಿಯೂ ಬಿಜೆಪಿಯಲ್ಲಿ ಹಾಗೆಯೇ ಇದೆ. ಇತ್ತೀಚೆಗೆ ವಿಧಾನಸಭೆ ಚುನಾವಣೆಯಲ್ಲಿ ವಿ.ಸೋಮಣ್ಣ ಅವರಿಗೆ ಬೇಕೆಂದಲೇ 2 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿ, ಕ್ಷೇತ್ರ ಬದಲಿಸಿ ಅವರನ್ನು ಸೋಲಿಸಲಾಗಿದೆ. ಇಂಥ ಪಕ್ಷದಲ್ಲಿ ಇರುವುದು ಎಲ್ಲ ನಾಯಕರಿಗೂ ಬೇಡವಾಗಿದೆ ಎಂದರು. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಹಿಂದು-ಮುಸ್ಲಿಂ ಗಲಾಟೆ ಮಾಡಿಸುವುದೇ ಬಿಜೆಪಿಯವರ ಮುಖ್ಯ ಕೆಲಸವಾಗಿದೆ. ತಮ್ಮ ಸ್ವಾರ್ಥ ಸಾಧನೆಗೆ ಬಿಜೆಪಿ ಹೈಕಮಾಂಡ್‌ ಮುಖಂಡರು ಎಲ್ಲರನ್ನೂ ಬಲಿಕೊಡುತ್ತಿದ್ದಾರೆ. ಅಧಿಕಾರದ ಲಾಲಸೆಗೆ ಏನು ಬೇಕಾದರೂ ಮಾಡಲು…

Read More

ಬೆಂಗಳೂರು: ವಿ. ಸೋಮಣ್ಣ ಅವರು ಕಾಂಗ್ರೆಸ್ ಎಂಟ್ರಿ ವದಂತಿ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್ ನಾಯಕರಿಗೆ ಶಾಸಕರಾದ ಕೃಷ್ಣಪ್ಪ (Krishnappa) ಹಾಗೂ ಪ್ರಿಯಕೃಷ್ಣ (Priya Krishna) ಸಂದೇಶ ರವಾನೆ ಮಾಡಿದ್ದಾರೆ. ಬರುವುದಕ್ಕೆ ನಮ್ಮ ಸಮ್ಮತಿ ಇಲ್ಲ, ಬಂದರೆ ವಿರೋಧವೂ ಇಲ್ಲಾ. ಪಕ್ಷಕ್ಕೆ ಬರುವುದಾದರೆ ವಿಜಯನಗರಕ್ಕೂ, ಗೋವಿಂದರಾಜ ನಗರಕ್ಕೂ ಸೋಮಣ್ಣಗೂ ಕಾಂಗ್ರೆಸ್‍ನಲ್ಲಿ (Congress) ಸಂಬಂಧ ಇರಬಾರದು. ಇದನ್ನು ಮೀರಿದರೆ ನಮ್ಮ ನಿರ್ಧಾರ ಬೇರೆ ಇರುತ್ತದೆ ಎಂದು ಅಪ್ಪ-ಮಗ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. https://ainlivenews.com/laser-therapy-soukhy-robotic-ortho-care/ ಸೋಮಣ್ಣ ಕಾಂಗ್ರೆಸ್ ಎಂಟ್ರಿ ವದಂತಿ ಬೆನ್ನಲ್ಲೆ ಕಾಂಗ್ರೆಸ್‍ನಲ್ಲಿ ಅಸಮಧಾನವೂ ವ್ಯಕ್ತವಾಗಿದೆ ಎನ್ನಲಾಗಿದೆ. ಸೋಮಣ್ಣ ಬರುವುದಕ್ಕೆ ನಮ್ಮ ಸಮ್ಮತಿ ಇಲ್ಲ. ಒಂದು ವೇಳೆ ಅವರು ಬಂದರೆ ವಿರೋಧವೂ ಇಲ್ಲ ಎಂದು ಹೇಳಿಕೆ ನಿಡಿವ ಮೂಲಕ ಕೈ ನಾಯಕರನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು: ಇಂದು ರಸ್ತೆಗಿಳಿಯೋ ಮುನ್ನ ವಾಹನ ಸವಾರರೇ ಎಚ್ಚರ ಎಚ್ಚರ‌‌ ಬೆಂಗಳೂರಿನಲ್ಲಿ ನಡೆಯುತ್ತೆ ಸಾಲು ಸಾಲು ಪ್ರತಿಭಟನೆ, ಹೋರಾಟಗಳು ವಿವಿಧ ಸಂಘಟನೆಗಳಿಂದ ಸಾಲು ಸಾಲು ಪ್ರತಿಭಟನೆಗೆ ಕರೆ ಹೀಗಾಗಿ ಬೆಂಗಳೂರಿನ ಹಲವು ರಸ್ತೆಗಳ ಸಂಚಾರದಲ್ಲಿ ಬದಲಾವಣೆ ನಗರದ ಸಂಚಾರಿ ಪೊಲೀಸರಿಂದ ಟ್ರಾಫಿಕ್ ಡೈವರ್ಷನ್ ಸೂಚನೆ ಫ್ರೀಡಂ ಪಾರ್ಕ್ ನಲ್ಲಿ ಇಂದು ನಡೆಯಲಿರೋ ಪ್ರತಿಭಟನೆ ಹಾಗೂ ರಾಜಭವನ ಚಲೋ ಸಂಯುಕ್ತ ಹೋರಾಟ ಸಮಿತಿ ಸೇರಿ ವಿವಿಧ ಸಂಘಟನೆಗಳಿಂದ ಹೋರಾಟಕ್ಕೆ ಕರೆ https://ainlivenews.com/laser-therapy-soukhy-robotic-ortho-care/ ಮಾರ್ಗ ಬದಲಾವಣೆ ಮೈಸೂರು ಬ್ಯಾಂಕ್ ಸರ್ಕಲ್ ನಿಂದ ಫ್ರೀಡಂ ಪಾರ್ಕ್ ಮಾರ್ಗವಾಗಿ ಹೋಗೋ ವಾಹನಗಳು- ಪ್ಯಾಲೆಸ್ ಕ್ರಾಸ್ ರಸ್ತೆ ಮುಖಾಂತರ ಮಹಾರಾಣಿ ಅಂಡರ್ ಪಾಸ್ ಮೂಲಕ ಹೋಗಲು ಸೂಚನೆ ಫ್ರೀಡಂ ಪಾರ್ಕ್ ನಿಂದ ಕನಕದಾಸ ವೃತ್ತ ಕಡೆ ಹೋಗೋ ವಾಹನಗಳಿಗೆ ತಾತ್ಕಾಲಿಕವಾಗಿ ಸಂಚಾರ ಬಂದ್ ಕೋಡೆ ಸರ್ಕಲ್ ಜಂಕ್ಷನ್ ಕಡೆಯಿಂದ ಕೆ ಆರ್ ಸರ್ಕಲ್ ಕಡೆ ಹೋಗೋ ವಾಹನಗಳು ಹಳೇ ಜೆಡಿಎಸ್ ಕಚೇರಿ ರಸ್ತೆ ಮೂಲಕ ಸಂಚರಿಸಲು ಸೂಚನೆ ಸುಬ್ಬಣ್ಣ…

Read More

ಉಡುಪಿ:- ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದ್ದಾರೆ. https://ainlivenews.com/upi-id-with-no-transaction-for-1-year-upi-number-de-activate-reason/#google_vignette ಬೈಂದೂರು ತಾಲೂಕಿನ ಮರವಂತೆಯಲ್ಲಿ ಹೊರ ಬಂದರು, ಗಂಗೊಳ್ಳಿ ಮೀನುಗಾರಿಕೆ ಬಂದರಿನ ಮರು ನಿರ್ಮಾಣ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹಾಗೂ ಕೋಡಿ ಜೆಟ್ಟಿಯ ನ್ಯಾವಿಗೇಷನ್ ಚಾನೆಲ್‌ನಲ್ಲಿ ಹೂಳೆತ್ತುವ ಕಾಮಗಾರಿಗಳನ್ನು ತಾಂತ್ರಿಕ ಸಮಸ್ಯೆಗಳಿಂದಾಗಿ ಕೈಗೊಳ್ಳದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

Read More

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಡೀ ದಿನ ಜನತಾ ದರ್ಶನ ನಡೆಸಲಿದ್ದಾರೆ. ಬೀದಿ ಬದಿ ವ್ಯಾಪಾರಿಗಳಿಗೆ, ತಳ್ಳಯವ ಗಾಡಿಯಲ್ಲಿ ವ್ಯಾಪಾರ ಮಾಡುವವರಿಗೆ ಆಗುತ್ತಿರುವ ಪೊಲೀಸ್ ಮತ್ತು ಬಿಬಿಎಂಪಿ ಅಧಿಕಾರಿಗಳ ಕಿರುಕುಳದ ಬಗ್ಗೆ ಬಡ ವ್ಯಾಪಾರಿ ನಿಂಗಮ್ಮ ಅವರಿಂದ  ಮುಖ್ಯಮಂತ್ರಿಗಳಿಗೆ ದೂರು. ತಕ್ಷಣ ಪೊಲೀಸ್ ಅಧಿಕಾರಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳನ್ನು ಕರೆಸಿ ನಿಂಗಮ್ಮ‌ ಅವರಿಗೇ ಕಿರುಕುಳ ತಪ್ಪಿಸುವಂತೆ ಸೂಚನೆ ನೀಡಿದ ಸಿಎಂ. ಅಹವಾಲು ಸಲ್ಲಿಸುವವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಿಎಂ ಗೃಹ ಕಚೇರಿ ಕೃಷ್ಣಾ ಆವರಣದಲ್ಲಿ 20 ಕೌಂಟರ್ ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರು ಹಾಗೂ ಅಂಗವಿಕಲರಿಗೆ ಎರಡು ಪ್ರತ್ಯೇಕ ಕೌಂಟರ್‌ಗಳು ಇರಲಿವೆ.

Read More

ಬೆಂಗಳೂರು: ಬಿಜೆಪಿ- ಜೆಡಿಎಸ್ ಲೋಕಸಭಾ ಮೈತ್ರಿಯ ನಂತರ ಎರಡೂ ಪಕ್ಷಗಳಲ್ಲಿ ಆದ ರಾಜಕೀಯ ಕ್ಷಿಪ್ರ ಬೆಳವಣಿಗೆಗಳು ಭಾರೀ ತಲ್ಲಣವನ್ನೇ ಸೃಷ್ಠಿಸಿವೆ. ಅಸಮಾಧಾನ, ಆಂತರಿಕೆ ಭಿನ್ನಮತ, ಆಪರೇಷನ್ ಹಸ್ತ ಮಧ್ಯೆ ಉಭಯ ಪಕ್ಷದ ನಾಯಕರಿಗೆ ತಲೆನೋವು ತಂದೊಡ್ಡಿದೆ. ಈ ಅಸಮಾಧಾನ ಶಮನಕ್ಕೆ ಎರಡೂ ಪಕ್ಷದ ರಾಜ್ಯಾಧ್ಯಕ್ಷರು ಮುಂದಾಗಿದ್ದು ಮೈತ್ರಿಯನ್ನ ಸರಿದಾರಿಗೆ ತರಲು ಜೋಡೆತ್ತುಗಳಾಗಿ ಕೆಲಸ ಮಾಡಲು ಮುಂದಾಗಿದ್ದಾರೆ. ಕುಮಾರಸ್ವಾಮಿ- ವಿಜಯೇಂದ್ರ‌ ಭೇಟಿಯ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ……. 2024 ರ ಲೋಕಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ನಾಯಕರು ಕಮಲ-ದಳ ಮೈತ್ರಿಯನ್ನು ಮಾಡಿಕೊಂಡಿದ್ದಾರೆ. ಈ ಮೈತ್ರಿಗೆ ಉಭಯ ಪಕ್ಷಗಳಲ್ಲೂ ಅಸಮಾಧಾನ ಸ್ಪೋಟಗೊಂಡಿದೆ ಕೆಲ ನಾಯಕರು ನಮಗೆ ಹೇಳದೆ ಮೈತ್ರಿ ಮಾಡಿಕೊಂಡಿದ್ದಾರೆ ಅಂತ ಮುನಿಸಿಕೊಂಡಿದ್ರೆ, ಕೆಲವರು ಪಕ್ಷದೊಳಗಿನ ಲೆಕ್ಕಾಚಾರ, ಜಾತಿ ಸಮೀಕರಣ, ಸ್ಥಳೀಯ ಲೆಕ್ಕಾಚಾರಗಳಿಂದಾಗಿ ಮೈತ್ರಿ ವಿರೋಧಿಸ್ತಿದ್ದಾರೆ. ಅದ್ರಲ್ಲು ಪ್ರಮುಖವಾಗಿ ಈಗಾಗ್ಲೆ ಜೆಡಿಎಸ್ ನ ಇಬ್ಬರು ಮಾಜಿ ಶಾಸಕರು ಮೈತ್ರಿ ವಿರೋಧಿಸಿ ಹೊರೆ ಇಳಿಸಿ ಹಸ್ತ ಹಿಡಿದಿದ್ದಾರೆ. ಈ ಮಧ್ಯೆ ಎಲ್ಲಾ ಅಸಮಾಧಾನ, ಭಿನ್ನಮತಗಳನ್ನು ಸರಿಪಡಿಸಿ ಚುನಾವಣೆ…

Read More

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಸೋಮವಾರ ತಿರುಪತಿ (Tirupati) ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ (Venkateshwara Swamy Temple) ಭೇಟಿ ನೀಡಿದ್ದು, 140 ಕೋಟಿ ಭಾರತೀಯರ ಉತ್ತಮ ಆರೋಗ್ಯ, ಯೋಗಕ್ಷೇಮ ಮತ್ತು ಸಮೃದ್ಧಿಗಾಗಿ ಪ್ರಾರ್ಥಿಸಿದರು. ದೇವಾಲಯದ ಭೇಟಿ ಕುರಿತು ಪ್ರಧಾನಿ ಎಕ್ಸ್‌ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ದೇಗುಲಕ್ಕೆ ಎರಡು ದಿನಗಳ ಭೇಟಿಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ವೆಂಕಟೇಶ್ವರನ ಸನ್ನಿಧಿಗೆ ಆಗಮಿಸಿದರು. ಮೋದಿ ಭಾನುವಾರ ರಾತ್ರಿ ತಿರುಮಲದಲ್ಲಿ ತಂಗಿದ್ದರು. ಸೋಮವಾರ ಮುಂಜಾನೆ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. https://ainlivenews.com/upi-id-with-no-transaction-for-1-year-upi-number-de-activate-reason/#google_vignette ತಿರುಪತಿ ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ಮೋದಿ ಆಗಮನಕ್ಕೆ ಒಂದೆರಡು ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಆಗಮಿಸಿ ಅವರನ್ನು ಸ್ವಾಗತಿಸಿದರು. ಗವರ್ನರ್ ಅಬ್ದುಲ್ ನಜೀರ್ ಅವರು ಪ್ರಧಾನಿ ಮೋದಿಯವರೊಂದಿಗೆ ತಿರುಪತಿಗೆ ಹೋದರೆ, ಮುಖ್ಯಮಂತ್ರಿ ಜಗನ್ ಆರತಕ್ಷತೆಯ ನಂತರ…

Read More

ಬೆಂಗಳೂರು: ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು ಹೊಸ ಸಮರ ಸಾರಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು ಬೆಂಗಳೂರು ಚಲೋ ನಡೆಸಲು ಮುಂದಾಗಿದ್ದಾರೆ. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ & ಸಹಾಯಕಿಯರ ಸ್ವತಂತ್ರ ಸಂಘಟನೆಯಿಂದ ಇಂದು ಬೆಳಗ್ಗೆ  ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಸಲು ಚಲೋಗೆ ಕರೆ ನೀಡಲಾಗಿದೆ. https://ainlivenews.com/another-victim-of-bescoms-negligence-cm-dcm-energy-minister-directly-responsible-for-death-of-mother-daughte/ ಕರ್ನಾಟಕ ರಾಜ್ಯದಲ್ಲಿ ಬರೋಬ್ಬರಿ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರು ಇದ್ದಾರೆ. ಸರ್ಕಾರದಿಂದ 1,32,000 ಅಂಗನವಾಡಿ ಕಾರ್ಯಕರ್ತೆಯರು & ಸಹಾಯಕಿಯರಿಗೆ ಗೌರವ ಧನ ಹೆಸರಲ್ಲಿ ಶೋಷಣೆ ಮಾಡುತ್ತಿದೆ. ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಕಲ್ಪಿಸಿಲ್ಲ. ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಬೇಡಿಕೆಗಳು ಏನೇನು…?  ಅಂಗನವಾಡಿ ಕಾರ್ಯಕರ್ತೆಯರಿಗೆ & ಸಹಾಯಕಿಯರಿಗೆ ಕನಿಷ್ಠ 21,000 ವೇತನ ನೀಡಬೇಕು ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ಘೋಷಣೆ ಮಾಡಿದಂತೆ 6ನೇ ಗ್ಯಾರಂಟಿ ಜಾರಿ ಮಾಡಬೇಕು ಎಲ್ಲಾ‌ ಮಿನಿ ಅಂಗನವಾಡಿ ಕೇಂದ್ರಗಳನ್ನ…

Read More

ಬೆಂಗಳೂರು: ಮಾಲ್, ಮೆಟ್ರೋ ಸೇರಿದಂತೆ ಹಲವೆಡೆ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದು ಬೆಂಗಳೂರಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎಂಬುದು ಕಾತರಿಯಾಗಿದೆ. ಈ ನಿಟ್ಟಿನಲ್ಲಿ BMTC ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡಲು ಹೊರಟಿದೆ. https://ainlivenews.com/laser-therapy-soukhy-robotic-ortho-care/ ಇತ್ತಿಚಿನ ದಿನಗಳಲ್ಲಿ ಬೆಂಗಳೂರಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಬೆಳಕಿಗೆ ಬರುತ್ತಿವೆ. ಈ ನಿಟ್ಟಿನಲ್ಲಿ ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಒತ್ತು ಕೊಡುತ್ತಿದೆ. ಪಬ್ಲಿಕ್ ಟ್ರಾನ್ಸ್‌ಪೋರ್ಟ್ ಅನ್ನು ಸೇಫ್ ಟ್ರಾನ್ಸ್‌ಪೋರ್ಟ್ ಮಾಡುವುದಾಗಿ ಬಿಎಂಟಿಸಿ ಎಂಡಿ ಸತ್ಯವತಿ ಹೆಜ್ಜೆ ಇಟ್ಟಿದ್ದಾರೆ. ಮಹಿಳೆಯರು ಬಸ್‍ನಲ್ಲಿ ಪ್ರಯಾಣಿಸುವಾಗ ಏನಾದರೂ ತೊಂದರೆಯಾದರೆ, ಬಸ್ ಸೀಟ್ ಪಕ್ಕದಲ್ಲೇ ಇರೋ ಪ್ಯಾನಿಕ್ ಬಟನ್ ಕ್ಲಿಕ್ ಮಾಡಬಹುದು. ಈ ಬಟನ್ ಕ್ಲಿಕ್ ಮಾಡಿದ ತಕ್ಷಣ ಈ ಅಲರ್ಟ್ ಬಿಎಂಟಿಸಿ ಕಂಟ್ರೋಲ್ ರೂಮ್‍ಗೆ ಬರುತ್ತದೆ. ಜೊತೆಗೆ ಸಾರಥಿಗೆ ಲೋಕೇಶನ್ ಹೋಗುತ್ತದೆ. ಆ ಲೋಕೇಷನ್‍ನಲ್ಲೇ ಬಿಎಂಟಿಸಿ ಟೀಮ್ ಬರುತ್ತದೆ.

Read More