ಮಧುಮೇಹಿಗಳು ದಾಳಿಂಬೆ ಹಣ್ಣು ಸೇವಿಸಬಹುದೇ? ಬೇಡವೇ? ಎಂಬ ಗೊಂದಲ ಹಲವರಲ್ಲಿದೆ. ಹಾಗಾಗಿ ಇದರ ಬಗ್ಗೆ ತಿಳಿಯೋಣ. ದಾಳಿಂಬೆಯಲ್ಲಿ ಅನೇಕ ಪೋಷಕಾಂಶಗಳು ಕಂಡುಬರುತ್ತದೆ, ಕಬ್ಬಿಣ, ವಿಟಮಿನ್ ಸಿ, ಕೆ, ಫೈಬರ್, ಒಮೆಗಾ 6 ಕೊಬ್ಬಿನಾಮ್ಲ, ಪೊಟ್ಯಾಶಿಯಂ, ಸತು ಮುಂತಾದವು ಕಂಡುಬರುತ್ತದೆ. ಇದು ದೇಹದ ಬೆಳವಣಿಗೆಗೆ ಮತ್ತು ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ. ಇದನ್ನು ಸೇವಿಸುವುದರಿಂದ ರಕ್ತಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ. ಮಧುಮೇಹಿಗಳು ದಾಳಿಂಬೆ ಹಣ್ಣುಗಳನ್ನು ಸೇವಿಸಬಹುದು. ಇದರಲ್ಲಿರುವ ಫೈಬರ್ ಅಂಶ ಮಧುಮೇಹಿಗಳಿಗೆ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಆಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿರುವ ಕಾರಣ ಇದು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.
Author: AIN Author
ಚಿತ್ರದುರ್ಗ: ಸವದಿ ನಮ್ಮ ಉತ್ತಮವಾದ ಗೆಳೆಯರು, ರಾತ್ರಿ ನಾನವರ ಜೊತೆ ದೀರ್ಘವಾಗಿ ಮಾತನಾಡಿದ್ದೇನೆ. ಅವ್ರು ಯಾವುದೇ ಕಾರಣಕ್ಕೂ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ ಎಂದು ಲಕ್ಷಣ ಸವದಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆ ವಿಚಾರಕ್ಕೆ ಚಿತ್ರದುರ್ಗದಲ್ಲಿ ಸಚಿವ ಡಿ. ಸುಧಾಕರ್ ಪ್ರತಿಕ್ರಿಯೇ ನೀಡಿದ್ದಾರೆ. ಅವರು ಕಾಂಗ್ರೆಸ್ ಸಿದ್ಧಾಂತ ಒಪ್ಪಿ ಇಲ್ಲೇ ಇರ್ತಾರೆ. ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ಕಂಡಿದೆ. ಇನ್ನೂ ಜಗದೀಶ್ ಶೆಟ್ಟರ್ ಬಿಜೆಪಿ ಅವರಿಗೆ ಟಿಕೆಟ್ ಕೊಡದಿದ್ದಾಗ ಅವ್ರನ್ನ ಗೌರವಿಸಿದ್ದೇವೆ. ಅವ್ರು ಸೋತ್ರೂ ಕೂಡ ಎಂಎಲ್ಸಿ ಮಾಡಿದ್ದಾರೆ. ಆದ್ರೂ ಯಾಕೆ ಹೋದ್ರು ಅಂತಾ ಅವರನ್ನೇ ಕೇಳಬೇಕು. ಸವದಿ ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ರು ಅನ್ನೋದು ಸತ್ಯಕ್ಕೆ ದೂರ ಎಂದು ಹೇಳಿದರು. ಇನ್ನೂ ಕಾಂಗ್ರೆಸ್ ನಲ್ಲಿ ಡಿಸಿಎಂ ಚರ್ಚೆ ನಡೆದಿರುವ ವಿಚಾರಕ್ಕೆ ಎಲ್ಲವೂ ಸತ್ಯಕ್ಕೆ ದೂರವಾಗಿದ್ದು, ಸಧ್ಯ ನಮ್ಮ ಮುಂದಿರೋದು ಲೋಕಸಭಾ ಚುನಾವಣೆ, ಅದಕ್ಕೆ ಗಮನ ಹರಿಸಿ ನಾವು ಯಶಸ್ವಿಯಾಗುತ್ತೇವೆ ಎಂದರು. ಶಾಸಕ ಟಿ. ರಘುಮೂರ್ತಿ ನಿಗಮ ಂಮಡಳಿಗೆ ಪರಿಗಣಿಸದಂತೆ ಪತ್ರ ಬರೆದ…
ತೆಂಗಿನ ಎಣ್ಣೆಯ ಆರೋಗ್ಯ ಪ್ರಯೋಜನಗಳು ಹಿಂದೆ ಯೋಚಿಸಿದಷ್ಟು ಉತ್ತಮವಾಗಿಲ್ಲ ಎಂದು ಕೆಲವರು ವಾದಿಸುತ್ತಾರೆ. ಇದಕ್ಕೆ ಕಾರಣಗಳೇನು ತಿಳಿಯೋಣ. ಹೆಚ್ಚಿನ ಕೊಬ್ಬು ತೆಂಗಿನ ಎಣ್ಣೆಯು ಹೆಚ್ಚಿನ ಮಟ್ಟದ ಸ್ಯಾಚುರೇಟೆಡ್ ಕೊಬ್ಬನ್ನು ಹೊಂದಿರುತ್ತದೆ. ಇದು ದೇಹದಲ್ಲಿ LDL ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ. ಕೊಬ್ಬಿನಾಮ್ಲಗಳ ಉತ್ತಮ ಮೂಲ ಒಮೆಗಾ -3 ಮತ್ತು ಒಮೆಗಾ -6 ನಂತಹ ಅಗತ್ಯ ಕೊಬ್ಬಿನಾಮ್ಲಗಳು ನಮ್ಮ ಒಟ್ಟಾರೆ ಆರೋಗ್ಯಕ್ಕೆ ಅಗತ್ಯ. ಆದರೆ ಅವುಗಳು ಗಮನಾರ್ಹ ಪ್ರಮಾಣದಲ್ಲಿ ತೆಂಗಿನ ಎಣ್ಣೆಯಲ್ಲಿ ಕಂಡುಬರುವುದಿಲ್ಲ. ಆದ್ದರಿಂದ ಆರೋಗ್ಯಕರ ಕೊಬ್ಬಿನ ದೈನಂದಿನ ಸೇವನೆಗೆ ತೆಂಗಿನ ಎಣ್ಣೆಯನ್ನು ಮಾತ್ರ ಅವಲಂಬಿಸುವುದರಿಂದ ಕೊರತೆಯಾಗಬಹುದು. ಹೆಚ್ಚಿನ ಕ್ಯಾಲೋರಿ ತೆಂಗಿನ ಎಣ್ಣೆಯನ್ನು ಇತರ ಅಡುಗೆ ಎಣ್ಣೆಗಳಿಗೆ ‘ಆರೋಗ್ಯಕರ’ ಎಂದೇ ಹೇಳಲಾಗುತ್ತದೆ. ಆದರೆ ಇದರಲ್ಲಿ ಕೊಬ್ಬಿನಂಶ ಹೆಚ್ಚಾಗಿದೆ. ಇದು ಹೆಚ್ಚಿನ ಸಂಖ್ಯೆಯ ಕ್ಯಾಲೊರಿಗಳನ್ನು ಹೊಂದಿರುತ್ತದೆ. ಅಗತ್ಯ ಪೋಷಕಾಂಶಗಳ ಕೊರತೆ ತೆಂಗಿನ ಎಣ್ಣೆಯು ವಿಟಮಿನ್ ಇ ಮತ್ತು ಲಾರಿಕ್ ಆಮ್ಲದಂತಹ ಕೆಲವು ಪ್ರಯೋಜನಕಾರಿ ಪೋಷಕಾಂಶಗಳನ್ನು ಹೊಂದಿದೆ. ಆದರೆ ನಮ್ಮ ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ಅನೇಕ…
ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷ ಪಿ. ಮರಿಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ನಂತರ ಸಂವಿಧಾನದ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್ , ಆರ್.ಮಹದೇವ್ , ಕೆಪಿಸಿಸಿ ಸದಸ್ಯ ಸೈಯದ್ ರಫಿ, ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷ ಮಹಮ್ಮದ್ ಅಜ್ಗರ್ , ಚೂಡಾ ಮಾಜಿ ಅಧ್ಯಕ್ಷ ಸುಹೇಲ್ ಆಲಿ ಖಾನ್, ಎಪಿಎಂಸಿ ಮಾಜಿ ಅಧ್ಯಕ್ಷ, ನಾಗೇಂದ್ರ , ಮುಖಂಡರಾದ ಡಿ.ಎನ್. ನಟರಾಜ್ , ಕಾಗಲವಾಡಿ ಚಂದ್ರು, ದೊಡ್ಡರಾಯಪೇಟೆ ಮೂರ್ತಿ ,ರವಿ ಗೌಡ, ಶಿವಮೂರ್ತಿ, ಮಸಗಾಪುರ ರಾಜು, ಯುವ ಕಾಂಗ್ರೆಸ್ ನ ಉಪಾಧ್ಯಕ್ಷ ನಾಗೇಂದ್ರ ನಾಯಕ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಗೌಡಹಳ್ಳಿ ರಾಜೇಶ್, ವಿದ್ಯಾರ್ಥಿ ಕಾಂಗ್ರೆಸ್ ನ ಅಧ್ಯಕ್ಷ ಮೋಹನ್ ಕುಮಾರ್, ಕಾರ್ಮಿಕ ಘಟಕದ ಅಧ್ಯಕ್ಷ ಮಹೇಶ್ , ಶ್ರೀನಿವಾಸ್,ಅಕ್ಷಯ್ ಹಾಗೂ ಇತರರು ಉಪಸ್ಥಿತರಿದ್ದರು.
ಕೋಲಾರ : ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರ ಕಣ್ಣಲ್ಲಿ ಹೊಳಪು ಕಾಣುತಿದ್ದೇವೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಕೋಲಾರದಲ್ಲಿ ಮಾಡನಾಡಿದ ಅವರು, ನಮ್ಮ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಜನರ ಕಣ್ಣಲ್ಲಿ ಹೊಳಪು ಕಾಣುತಿದ್ದೇವೆ. ಲೋಕಸಭಾ ಚುನಾವಣೆಯಲ್ಲಿ 15-20 ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಮರಳಿದ್ದರಿಂದ ನಮಗೆ ಯಾವುದೇ ನಷ್ಟವಿಲ್ಲ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ನಮ್ಮ ಪಕ್ಷದಲ್ಲಿ ಅಭ್ಯರ್ಥಿಗಳಿಗೆ ಯಾವ ಕೊರತೆಯೂ ಇಲ್ಲ ಎಂದಿದ್ದಾರೆ. ಈ ಬಾರಿ ಜನತಾದಳ ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಕಾಂಗ್ರೆಸ್ ಪಕ್ಷಕ್ಕೆ ನೇರವಾಗಿ ಲಾಭವಾಗಲಿದೆ ಎಂದು ನುಡಿದ ಬೈರತಿ ಸುರೇಶ್, ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ಬಿಜೆಪಿಯವರು ಇದು ಬಿದ್ದುಹೋಗುತ್ತದೆ ಎನ್ನುತ್ತಿದ್ದಾರೆ. ಬಿಜೆಪಿಯವರು ಹೇಳುವುದೆಲ್ಲ ಅಪ್ಪಟ ಸುಳ್ಳು ಎಂದರು.
ಕಲಬುರಗಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಹೋಗಿದ್ದಕ್ಕೆ ನಮ್ಮ ಪಕ್ಷಕ್ಕೆ ಮೈನಸ್ ಆಗೋದು ಬಿಡಿ ಅವರಿದ್ದಾಗ ನಮಗೆ ಪ್ಲಸ್ ಏನಾಗಿತ್ತು ಹೇಳಿ ಅಂತ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.. ಕಲಬುರಗಿ ಯಲ್ಲಿಂದು ಮಾತನಾಡಿದ ಪ್ರಿಯಾಂಕ್ ಪ್ರಧಾನಿ ಮೋದಿ ಕೈ ಬಲಪಡಿಸಲು ಬಿಜೆಪಿ ಸೇರಿದ್ದೇನೆ ಅಂತಾರೆ ಹಂಗಾದ್ರೆ ರಾಜ್ಯ ಬಿಜೆಪಿಯಲ್ಲಿ ಯಾರಲ್ಲೂ ಬಲ ಇಲ್ಲಾಂತ ಆಯ್ತು.. IT ED CBI ಈ ಮೂರು ಬಿಜೆಪಿಗೆ ಸ್ಟಾರ್ ಕ್ಯಾಂಪೇನ್ ಗಳು.ಈ ಮೂರು ಸ್ಟಾರ್ ಬಿಟ್ಟು ನೋಡ್ರಿ 100% ಬಿಜೆಪಿಯವರು ಎಲ್ರೂ ಸೋಲ್ತಾರೆ ಅಂದ್ರು . ಇದೇವೇಳೆ ಸವದಿ ಜೊತೆ DCM ಡಿಕೆಶಿ ಚರ್ಚೆ ಮಾಡಿದ್ದು ಏನ್ ತಪ್ಪಿದೆ ನನಗೂ ಕರೆಸಿ ಮಾತಾಡಬಹುದು ನಾನು ಪಕ್ಷ ಬಿಡ್ತೀನಿ ಅಂತ ಅರ್ಥಾನಾ ಅಂತ ಅಂದ್ರು..
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ಶ್ರೀ ರಾಮಪ್ಪ ಚಿಕ್ಕೋಡಿ ಆಟದ ಮೈದಾನದಲ್ಲಿ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಬಕವಿ ಬನಹಟ್ಟಿ ತಾಲೂಕ ಆಡಳಿತ ಕೊಡಮಾಡುವ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 50 ಸಾಧಕರಿಗೆ ಸನ್ಮಾನ ಮಾಡಿ ಪ್ರಶಸ್ತಿ ನೀಡಿ ಗೌರವಿಸಿದರು.
ಚಾಮರಾಜನಗರ: ಸಾಕಾಣಿಕೆ ಮಾಡಿದ್ದ ಮೀನುಗಳಿಗೆ ದುಷ್ಕರ್ಮಿಗಳು ವಿಷ ಹಾಕಿದ ಘಟನೆ ಚಾಮರಾಜನಗರ ಪಟ್ಟಣದ ರಾಮಸಮುದ್ರದಲ್ಲಿ ನಡೆದಿದೆ. ರಾಮಸಮುದ್ರ ಬಡಾವಣೆಯ ರೈತ ಮಹೇಶ್ ಬಾಬು ಎಂಬುವವರ ಜಮೀನಿನಲ್ಲಿ ಸಾಕಾಣಿಕೆ ಮಾಡಿದ್ದ ಸಾವಿರಾರು ಮೀನುಗಳ ಸಾವನ್ನಪ್ಪಿವೆ. ರಾಮಸಮುದ್ರ ಬಸವನಪುರ ರಸ್ತೆಯಲ್ಲಿರುವ ಮಹದೇಶ್ವರ ದೇವಾಲಯದ ಸಮೀಪದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ರೈತ ಮಹೇಶ್ ಬಾಬು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ತಮ್ಮ ಜಮೀನಿನಲ್ಲಿ ಮೀನು ಸಾಕಾಣಿಕೆ ಮಾಡಿದ್ದರು. ಆದರೆ ರಾತ್ರೋರಾತ್ರಿ ಕಿಡಿಗೇಡಿಗಳು ಮೀನಿನ ಹೊಂಡಕ್ಕೆ ವಿಷ ಹಾಕಿದ್ದಾರೆ. ಹಾಗಾಗಿ ಮೀನು ಸಾಕಾಣಿಕೆ ಘಟಕದಲ್ಲಿದ್ದ ಸಾವಿರಾರು ಮೀನುಗಳು ಏಕಕಾಲದಲ್ಲಿ ಸಾವನ್ನಪ್ಪಿವೆ.
ಆಗಸ್ಟ್ 15, 1947 ರಲ್ಲಿ ಬ್ರಿಟಿಷರಿಂದ ತಾತ್ವಿಕವಾಗಿ ಸ್ವಾತಂತ್ರ್ಯವನ್ನು ಪಡೆದುಕೊಂಡ ದಿನವಾದರೆ, ಜನವರಿ 26, 1950 ಭಾರತ ತನ್ನ ಸಂವಿಧಾನವನ್ನು ಜಾರಿಗೊಳಿಸಿದ ದಿನವಾಗಿದೆ. ರಾಜ ಪ್ರಭುತ್ವವನ್ನು ತ್ಯಜಿಸಿ ಪ್ರಜಾಪ್ರಭುತ್ವದಲ್ಲಿ ತನ್ನ ನಿಜ ಅಸ್ಥಿತ್ವವನ್ನು ಸ್ಥಾಪಿಸಿದ ದಿನವಾಗಿದೆ. ಈ ಕಾರಣಕ್ಕಾಗಿ ಗಣರಾಜ್ಯೋತ್ಸವ ಭಾರತೀಯರ ಪಾಲಿಗೆ ಅತ್ಯಂತ ಮಹತ್ವದ ದಿನವಾಗಿದೆ. ಅತಿ ಶೀಘ್ರದಲ್ಲಿ ಭಾರತ ನಂ ೧ ಮಾದರಿಯಲ್ಲಿ ಅಭಿವೃದ್ಧಿ ದೇಶವಾಗಲಿದೆ ಎಂದು ಶಾಸಕ ಸವದಿ ತಿಳಿಸಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಾಮಪ್ಪ ಚಿಕ್ಕೋಡಿ ಕ್ರೀಡಾಂಗಣದಲ್ಲಿ ಜರುಗಿದ ೭೫ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 1929ರ ಲಾಹೋರ್ ನಲ್ಲಿ ನಡೆದ ಕಾಂಗ್ರೆಸ್ ಸೆಷನ್ನಲ್ಲಿ ಜವಹಾರ್ ಲಾಲ್ ನೆಹರು ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಜನವರಿ 26, 1930 ರಲ್ಲಿ ದೇಶ ಸಂಪೂರ್ಣ ಸ್ವಾತಂತ್ರ್ಯ ಪಡೆಯಬೇಕೆಂಬ ನಿರ್ಣಯವನ್ನೂ ಕೈಗೊಳ್ಳಲಾಗಿತ್ತು. ಅದನ್ನೇ ಪೂರ್ಣ ಸ್ವರಾಜ್ ದಿವಸ್ ಅಥವಾ ಸ್ವಾತಂತ್ರ್ಯ ದಿನಾಚರಣೆಯನ್ನಾಗಿ ಘೋಷಣೆ ಮಾಡಲಾಗಿತ್ತು. ಆದರೆ ಇದು 1947ರ ವರೆಗೂ ಈಡೇರಲಿಲ್ಲ. ಆದ್ದರಿಂದ…
ನವದೆಹಲಿ: ದೇಶಾದ್ಯಂತ ಇಂದು 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿಯವರ ಪೇಟ ಗಮನಸೆಳೆದಿದೆ. ವರ್ಣರಂಜಿತ ಪೇಟ ಧರಿಸುವ ತಮ್ಮ ಸಂಪ್ರದಾಯವನ್ನು ಮುಂದುವರಿಸಿದ್ದಾರೆ. ಪ್ರಧಾನಿಯವರು ಈ ಬಾರಿ ಭಾರತದ ವೈವಿಧ್ಯತೆಯನ್ನು ಸಂಕೇತಿಸಲು ಬಹುವರ್ಣದ ಪೇಟವನ್ನು (Modi Turban) ಆಯ್ಕೆ ಮಾಡಿದರು. ಗುಲಾಬಿ ಮತ್ತು ಕಿತ್ತಳೆ ಬಣ್ಣದ ರಾಜಸ್ಥಾನಿ ಬಂಧನಿ ಪೇಟವನ್ನು ಧರಿಸುವ ಮೂಲಕ ಭಗವಾನ್ ರಾಮನಿಗೆ ಗೌರವ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವರ್ಷ ಮೋದಿ ಅವರು ಬಿಳಿ ಕುರ್ತಾವನ್ನು ಧರಿಸಿದ್ದಾರೆ. ಜೊತೆಗೆ ಕಪ್ಪು ಕಂದು ಬಣ್ಣದ ಜಾಕೆಟ್ ಮತ್ತು ಕಪ್ಪು ಬೂಟುಗಳನ್ನು ಧರಿಸಿದ್ದಾರೆ. https://ainlivenews.com/rs-3-lakh-loan-for-women-without-interest-how-to-apply-here-is-the-complete-details/ ಒಟ್ಟಿನಲ್ಲಿ ಪ್ರತಿ ಬಾರಿಯೂ ಪ್ರಧಾನಿಯವರ ಪೇಟ ಆಕರ್ಷಕವಾಗಿರುತ್ತದೆ. ಈ ಬಾರಿ ಪ್ರಧಾನಿಯವರು (Narendra Modi) ಯಾವ ಬಣ್ಣದ ಪೇಟ ತೊಡುತ್ತಾರೆ ಎಂಬ ಕುತೂಹಲ ಜನರಲ್ಲಿ ಇತ್ತು. ಅಂತೆಯೇ ಇಂದು ಗಣರಾಜ್ಯೋತ್ಸವ ಪರೇಡ್‌ಗೂ ಮುನ್ನ ಪ್ರಧಾನಿ ಮೋದಿ ಅವರು ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಆಗಮಿಸುತ್ತಿದ್ದಂತೆಯೇ ಅವರು ಧರಿಸಿರುವ ಉಡುಪಿನ ಫಸ್ಟ್…