Author: AIN Author

ಹುಣಸೂರು:  ನಮ್ಮಗಳ ಮಾನಸಿಕ ನೆಮ್ಮದಿ ಮೂಡಿಸುವಲ್ಲಿ ದೇವಾಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ಮಾಜಿ ಶಾಸಕರಾದ ಎಚ್ ಪಿ ಮಂಜುನಾಥ್ ತಿಳಿಸಿದರು. ಹುಣಸೂರು ತಾಲ್ಲೂಕಿನ ಸಿ.ಬಿ.ಟಿ‌.ಕಾಲೋನಿಯಲ್ಲಿ ನಿರ್ಮಿಸಿರುವ ಶ್ರೀ ಕನ್ನಿ ಮಾರಮ್ಮ ದೇವಿಯ ದೇವಾಲಯವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ ನಮಗೆ ಮಾನಸಿಕ ನೆಮ್ಮದಿ ಮೂಡಿಸುವಲ್ಲಿ ದೇವಾಲಯಗಳ ಪಾತ್ರ ಮಹತ್ವದ್ದಾಗಿದ್ದು, ನಮ್ಮ ಆದ್ಯಾತ್ಮಿಕ ನೆಲೆಗಟ್ಟಿನಲ್ಲಿ ನಿರ್ಮಿತವಾದ ಬದುಕು ಸುಖ ಸಂತೋಷ ಕಾಣುತ್ತದೆ. ನಾವುಗಳು ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ಧ್ಯಾನ ಹಾಗೂ ಧಾರ್ಮಿಕ ಚಿಂತನೆಗಳನ್ನು ಕಲಿಸಬೇಕಿದ್ದು, ಈ ನಿಟ್ಟಿನಲ್ಲಿ ನಮ್ಮ ಹಿರಿಯರು ಹಾಕಿಕೊಟ್ಟಿರುವ ಮಾರ್ಗದಲ್ಲಿ ನಡೆಯಬೇಕಿದೆ. ಇಂದು ವಿಜ್ಞಾನದಿಂದ ನಮ್ಮ ಬದುಕು ಅರಳುವ ಬದಲು ನರಳುತ್ತಿದೆ, ನಮ್ಮಲ್ಲಿ ಎಷ್ಟೇ ಸೌಲಭ್ಯಗಳಿದ್ದರೂ ಸಹ ಮನಶಾಂತಿ ಇಲ್ಲದಂತಾಗಿದೆ. ಈ ದಿಸೆಯಲ್ಲಿ ನಾವುಗಳು ಧ್ಯಾನ ಹಾಗೂ ದೇವತಾ ಕಾರ್ಯಗಳಲ್ಲಿ ತೊಡಗಿಸಿಕೊಂಡು ನಮ್ಮನ್ನು ನಾವು ಅರ್ಥ ಮಾಡಿಕೊಂಡು ನೆಮ್ಮದಿ ಕಾಣಲು ಸಹಕಾರಿಯಾಗುತ್ತವೆ. https://ainlivenews.com/upi-id-with-no-transaction-for-1-year-upi-number-de-activate-reason/ ಇಂದು ನಿರ್ಮಿಸಿರುವ ಈ ದೇವಾಲಯದ ಮೂಲಕ ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ, ಧ್ಯಾನ ಹಾಗೂ ಧಾರ್ಮಿಕ…

Read More

ಕಲಬುರ್ಗಿ:- ಬಿಜೆಪಿಯಲ್ಲಿ ಮಾಜಿ ಸಚಿವ ಬಿ ಸೋಮಣ್ಣ ಅಸಮಾಧಾನ ವಿಚಾರವಾಗಿ ಮಾಜಿ DCM ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಿ ಸೋಮಣ್ಣ ನಮ್ಮ ಪಕ್ಷದ ಹಿರಿಯ ನಾಯಕರು. ನಮ್ಮ ಪಕ್ಷದಲ್ಲಿ ಅವರಿಗೆ ಸಂಪೂರ್ಣ ಗೌರವ ಇದೆ, https://ainlivenews.com/upi-id-with-no-transaction-for-1-year-upi-number-de-activate-reason/  ಅವರನ್ನು ವಿಶ್ವಾಸದಿಂದ ಕರೆದುಕೊಂಡು ಹೋಗುವ ಕೆಲಸ ಬಿಜೆಪಿ ಮಾಡ್ತದೆ. ಚುನಾವಣೆ ಅಂದ ಮೇಲೆ ಸೋಲು ಗೆಲುವು ಸಹಜ. ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ಸೋಮಣ್ಣನವರೇ ಪದೇ ಪದೇ ಈ ಮಾತು ಹೇಳ್ತಿದ್ದಾರೆ. ಸೋಮಣ್ಣ ಇಂದು, ಮುಂದು ಎಂದೆಂದೂ ನಮ್ಮ ಜೊತೆಯೇ ಇರ್ತಾರೆ. ಅವರ ನೋವು ಅಳಲು ದೂರ ಮಾಡುವ ಕೆಲಸ ಬಿಜೆಪಿಯಿಂದ ಆಗುತ್ತದೆ ಎಂದು ಕಲಬುರಗಿಯಲ್ಲಿ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು: ಪಿಂಚಣಿ ವಿಚಾರಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್​ ಮಹತ್ವದ ಆದೇಶವನ್ನು ನೀಡಿದೆ. ಮೃತ ಸರ್ಕಾರಿ ನೌಕರನ ಮೊದಲನೇ ಪತ್ನಿ ಬದುಕಿದ್ದಾಗಲೇ ಎರಡನೇ ಪತ್ನಿಗೆ ಪಿಂಚಣಿ ಪಡೆಯುವ ಅಧಿಕಾರವಿಲ್ಲ ಎಂದು ಪಿ.ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್​. ದೀಕ್ಷಿತ್​ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿ 2ನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ಮುಖ್ಯನ್ಯಾಯಮೂರ್ತಿಗಳು ಮೊದಲ ಪತ್ನಿಗೆ ಮಾತ್ರ ಮೃತ ಪತಿಯ ಕುಟುಂಬ ಪಿಂಚಣಿ ಅಧಿಕಾರವಿದೆ. ಮೊದಲನೇ ಪತ್ನಿ ಬದುಕಿದ್ದಾಗ 2ನೇ ವಿವಾಹಕ್ಕೆ ಮಾನ್ಯತೆಯಿಲ್ಲ. ಹಾಗಾಗಿ ಎರಡನೇ ಪತ್ನಿಗೆ ಪಿಂಚಣಿಯ ಹಕ್ಕಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, “ಕೌಟುಂಬಿಕ ಪಿಂಚಣಿಯನ್ನು ನಿಯಮದ ಪ್ರಕಾರ ‘ಪತ್ನಿ’ಗೆ ನೀಡಲಾಗುವುದು. ಆದರೆ ಎರಡನೇ ಪತ್ನಿಯ ಮದುವೆ ಕಾನೂನಿನ ಕಣ್ಣಲ್ಲಿ ಮದುವೆಯೇ ಅಲ್ಲ. ಹಾಗಾಗಿ ಹಿಂದೂ ವಿವಾಹ ಕಾಯಿದೆ 1955ರ ಪ್ರಕಾರ ದ್ವಿಪತ್ನಿತ್ವ ಅಪರಾಧವಾಗುತ್ತದೆ’ ಎಂದು ಆದೇಶಿಸಿದೆ. ಅರ್ಜಿದಾರರು ಕಾನೂನು ಬದ್ಧವಾಗಿ ಮದುವೆಯಾದ ಪತ್ನಿಯಲ್ಲ ಹಾಗಾಗಿ ಪಿಂಚಣಿ ನೀಡಲಾಗದು ಎಂದು…

Read More

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ (National Level Sports Event) ಬಹುಮಾನ (Prize) ಸಿಗದ ವಿಚಾರಕ್ಕೆ ಖಿನ್ನತೆಗೊಳಗಾದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (Student) ಕೀಟನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸಂಪ್ಯದಲ್ಲಿ (Sampya) ನಡೆದಿದೆ. ನಿಶಾ (17) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದು, https://ainlivenews.com/upi-id-with-no-transaction-for-1-year-upi-number-de-activate-reason/ ಕಳೆದ ಒಂದು ವಾರದ ಹಿಂದೆ ವಿಷ ಸೇವಿಸಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ (Bihar) ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿದ್ದು, ನಿಶಾ ರನ್ನಿಂಗ್ ರೇಸ್‌ನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬಹುಮಾನ ಸಿಗದಿದ್ದಕ್ಕೆ ನಿಶಾ ಬೇಸರಗೊಂಡಿದ್ದಾಳೆ. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿದ್ದು, ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ.

Read More

ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿಗೆ ಸೇರ್ಪಡೆ ವಿಚಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಪ್ರತಿಕ್ರಿಯಿಸಿದ್ದು, ‘ಬಿಜೆಪಿ ಪಾರ್ಟಿ(BJP Party)ಯನ್ನು ಒಬ್ಬ ರಾಮುಲು ಮಾತ್ರ ಕಟ್ಟಿಲ್ಲ. ರಾಜ್ಯದಲ್ಲಿರುವ ಕೊಟ್ಯಾಂತರ ಕಾರ್ಯಕರ್ತರ ಶ್ರಮದಿಂದ ಇವತ್ತು ಇಷ್ಟು ದೊಡ್ಡ ಪಾರ್ಟಿ ಆಗಿ ಬೆಳೆದಿದೆ. ಇಂತಹ ಸಂಧರ್ಭದಲ್ಲಿ ಯಾರನ್ನೂ ಸೇರಬೇಡ ಎನ್ನಲು ನನಗೆ ಅಧಿಕಾರ ಇಲ್ಲ. ನೂರು ಅಲ್ಲ, ಸಾವಿರ ಜನ ಬಂದ್ರೂ ನಮ್ಮ ಪಾರ್ಟಿ ಅಧ್ಯಕ್ಷ ವಿಜಯೇಂದ್ರ ಅವರಿಗೆ ಸರ್ವಾಧಿಕಾರ ಇದೆ. ಹೀಗಾಗಿ ನನ್ನ ಅಭ್ಯಂತರವಿಲ್ಲ ಎಂದರು. ಎಲ್ಲರೂ ಸೇರಿದ್ರೆ ಮತ್ತೆ ಗೆಲುವು ಸಾಧ್ಯ ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ‘ನಾನು ಜೀವನದಲ್ಲಿ ಯಾವತ್ತೂ ದ್ವೇಷ ಹಾಗೂ ಅಸೂಹೆ ರಾಜಕಾರಣ ಮಾಡಿಲ್ಲ‌. ಯಾರೇ ಬಂದರೂ ಪಾರ್ಟಿಗೆ ಅನುಕೂಲ ಆಗಲಿ ಎಂದು ಬಯಸುವೆ. ಯಾರಾದರೂ ಬರುತ್ತಾರೆ ಎಂದರೆ ಬೇಡ ಎನ್ನುವುದಕ್ಕೆ ನಾನು ಯಾರು?, https://ainlivenews.com/upi-id-with-no-transaction-for-1-year-upi-number-de-activate-reason/ ಪಾರ್ಟಿಯಲ್ಲಿ ಕೆಲಸ ಮಾಡುವ ಸಮಯದಲ್ಲಿ ನನ್ನ ವೈಯಕ್ತಿಕ ತೀರ್ಮಾನ, ಅಭಿಪ್ರಾಯ ಇರಲ್ಲ. ಪಾರ್ಟಿ ತೀರ್ಮಾನ ಏನಿರುತ್ತದೆ, ಅದಕ್ಕೆ ನಾವು…

Read More

ಬಿಗ್ ಬಾಸ್ ಮನೆಯ(Bigg Boss Kannada 10) ಆಟ 8ನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ರೋಚಕ ಹಂತ ತಲುಪುತ್ತಿದೆ. ಮನೆಯಲ್ಲಿ ಸ್ಪರ್ಧಿಗಳ ನಡುವೆ ಕಾಂಪಿಟೇಷನ್ ಕೂಡ ಜೋರಾಗಿದೆ. ಹೀಗಿರುವಾಗ ಕಿಚ್ಚನ ಪಂಚಾಯಿತಿಯಲ್ಲಿ, ನಾನು ತಲೆ ಬೊಳಿಸಿದ ಮೇಲೆ ಪಾಪ್ಯುಲರ್ ಆಗಿದ್ದು, ಎಂದು ತುಕಾಲಿ- ಕಾರ್ತಿಕ್ ಗೆ(Karthik Mahesh) ಕಿವಿ ಮಾತು ಹೇಳಿದ್ದಾರೆ. ಈಗ ವಾತವರಣವೇ ಬದಲಾಗಿದೆ. ಈ ವಾರ ಟಾಸ್ಕ್ ಮಾಡುವಾಗಲೇ ಬಿಗ್ ಬಾಸ್ ಎರಡು ತಂಡಗಳಾಗಿ ವಿಂಗಡಿಸಿದ್ರು. ಸಂಪತ್ತಿಗೆ ಸವಾಲ್ ಮತ್ತು ಗಜಕೇಸರಿ ಎಂಬ ಹೆಸರನ್ನ ತಂಡಕ್ಕೆ ಇಟ್ಟು ಮೈಕಲ್ & ಸಂಗೀತಾರನ್ನ ಮಾಡಲಾಗಿತ್ತು. ಎದುರಾಳಿ ತಂಡಕ್ಕೆ ಚಾಲೆಂಜ್ ಕೊಡುವ ಟಾಸ್ಕ್ ನಲ್ಲಿ ಹೆಡ್ ಶೇವ್ ಮಾಡುವ ಚಾಲೆಂಜ್ ಅನ್ನ ಕಾರ್ತಿಕ್ – ತುಕಾಲಿಗೆ ನೀಡಿದ್ರು. ಅದನ್ನ ಚಾಲೆಂಜ್ ಆಗಿ ತೆಗೆದುಕೊಂಡು ಸಿನಿಮಾ ಅವಕಾಶಗಳು ಕೈಯಲ್ಲಿದ್ರು ತುಕಾಲಿ ಸಂತು ಹಾಗೂ ಕಾರ್ತಿಕ್ ಮಹೇಶ್ ತಲೆ ಬೋಳಿಸಿಕೊಂಡರು. ಚಾಲೆಂಜ್‌ನ ಸ್ವೀಕರಿಸಿ ಕಂಪ್ಲೀಟ್ ಹೆಡ್ ಶೇವ್ ಮಾಡಿದರು. ಇದೇ ವಿಚಾರದ ಕುರಿತಾಗಿ…

Read More

ಬೆಂಗಳೂರು: ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ಭಾರತದ ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಸಂವಿಧಾನ ದಿನಾಚರಣೆಯ ಅಂಗವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಇಂದು ಸಂವಿಧಾನ ಅಂಗೀಕರಾವಾದ ದಿನ. 1949,ರ ನವೆಂಬರ್ 26 ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ. ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದರು. ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು. ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ…

Read More

ಬೆಂಗಳೂರು ಗ್ರಾಮಾಂತರ: ಅಕ್ರಮ ಸಂಬಂಧ (Illicit Relationship) ಶಂಕೆಯ ಮೇಲೆ ಪತಿ ದೊಣ್ಣೆಯಿಂದ ಹೊಡೆದು ಪತ್ನಿಯನ್ನು ಹತ್ಯೆಗೈದ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್  ತಾಲೂಕಿನ ತಮ್ಮನಾಯಕನಹಳ್ಳಿಯಲ್ಲಿ ನಡೆದಿದೆ. https://ainlivenews.com/laser-therapy-soukhy-robotic-ortho-care/ ಲಕ್ಷ್ಮಮ್ಮ (40) ಪತಿಯಿಂದ ಕೊಲೆಯಾದ ಮಹಿಳೆ. ಮಹದೇವಯ್ಯ (45) ಪತ್ನಿಯನ್ನು ಹತ್ಯೆಗೈದ ಪತಿ. ಇವರಿಬ್ಬರಿಗೆ ಆರು ಜನ ಮಕ್ಕಳಿದ್ದರು. ಮಹದೇವಯ್ಯ ಆನೇಕಲ್‌ನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಲಕ್ಷ್ಮಮ್ಮ ಗಾರೆ ಕೆಲಸ ಮಾಡಿಕೊಂಡಿದ್ದರು. ಗಾರೆ ಕೆಲಸ ಮಾಡುವ ವ್ಯಕ್ತಿಯ ಜೊತೆ ಲಕ್ಷ್ಮಮ್ಮ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಪತಿ ಶಂಕಿಸಿದ್ದು, ಈ ಬಗ್ಗೆ ಹಲವು ಬಾರಿ ಲಕ್ಷ್ಮಮ್ಮಹಾಗೂ ಮಹದೇವಯ್ಯ ನಡುವೆ ಗಲಾಟೆ ನಡೆದಿತ್ತು. ಈ ವಿಚಾರ ಇಡೀ ತಮ್ಮನಾಯಕನಹಳ್ಳಿ ಗ್ರಾಮದ ಜನಕ್ಕೆ ತಿಳಿದಿತ್ತು. ಜನರು ಅಕ್ರಮ ಸಂಬಂಧದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದರು. ಇದರಿಂದ ಮನನೊಂದ ಮಹದೇವಯ್ಯ ಪತ್ನಿ ಲಕ್ಷ್ಮಮ್ಮತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾನೆ. ಮನೆಯಲ್ಲಿ ಮಲಗಿದ್ದಾಗಲೇ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿದ್ದು, ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ…

Read More

ಮೈಸೂರು: ಮೈಸೂರು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ರೋಟರಿ ಐವರಿ ಸಿಟಿ ಸಂಯುಕ್ತ ಆಶ್ರಯದಲ್ಲಿ ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಂಡಿತವಾಗಿ ಮತದಾನ ಮಾಡುವೆ ಎಂಬ ಘೋಣ ವಾಕ್ಯದೊಂದಿಗೆ ನಡೆದ ಮತದಾನ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ.‌ಕೆ.ವಿ. ರಾಜೇಂದ್ರ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಾಯತ್ರಿ ಈ ಸಂದರ್ಭದಲ್ಲಿ ಹಾಜರಿದ್ದರು. https://ainlivenews.com/upi-id-with-no-transaction-for-1-year-upi-number-de-activate-reason/ ಕೋಟೆ ಆಂಜನೇಯಸ್ವಾಮಿ ದೇವಾಲಯದಿಂದ ಪ್ರಾರಂಭವಾದ ಜಾಥವು ನಗರದ ಚಿಕ್ಕಗಡಿಯಾರ ವೃತ್ತದಲ್ಲಿ ಅಂತ್ಯಗೊಂಡಿತು. ವಿವಿಧ ಸಂಘ ಸಂಸ್ಥೆಯಿಂದ ನೂರಾರು ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಉಪಆಯುಕ್ತರಾದ ಸೋಮಶೇಖರ್, ಉಪಕಾರ್ಯದರ್ಶಿ(ಅಭಿವೃದ್ಧಿ) ಡಾ.ಎಂ.ಕೃಷ್ಣರಾಜು, ಕ್ರೀಡಾಪಟು ಖುಷಿ ಸೇರಿದಂತೆ ಇತರರು ಹಾಜರಿದ್ದರು.

Read More

ಮೈಸೂರು:- ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆ ಮಾಡುವವರಿಗೆ ಉತ್ತಮ ರೀತಿಯಲ್ಲಿ ಆಹಾರ ತಯಾರಿಸುವ ತರಬೇತಿಯನ್ನು ನೀಡಿರಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ನೀಡಲು ಅಗತ್ಯ ಕ್ರಮ ವಹಿಸಬೇಕು. ಮತ್ತು ಏಪ್ರೋನ್‌ಗಳನ್ನು ಧರಿಸಿ ಅಡುಗೆಯನ್ನು ತಯಾರಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು. ಕರ್ನಾಟಕ ಮುಕ್ತ ಗಂಗೋತ್ರಿಯಲ್ಲಿನ ಆಡಳಿತ ಭವನದಲ್ಲಿ ಹಮ್ಮಿಕೊಂಡಿದ್ದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಎಲ್ಲಾ ನಿಗಮ/ಮಂಡಳಿ ಹಾಗೂ ಆಯೋಗಗಳಿಂದ ಅನುಷ್ಠಾನಗೊಳ್ಳುತ್ತಿರುವ ಯೋಜನೆಗಳ ಕುರಿತು ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆ ಎಂದರೆ ಬರಿ ಸ್ಕಾಲರ್‌ಶಿಪ್, https://ainlivenews.com/upi-id-with-no-transaction-for-1-year-upi-number-de-activate-reason/ ಉಚಿತ ಊಟ, ಬಟ್ಟೆ ನೀಡುತ್ತಾರೆ ಅನ್ನುವುದಕ್ಕಲ್ಲ ವಿದ್ಯಾರ್ಥಿಗಳು ತೇರ್ಗಡೆಯಾಗಿ ಮುಂದೆ ಅವರ ಭವಿಷ್ಯದಲ್ಲಿ ಏನು ಮಾಡಬೇಕು ಹಾಗೂ ಅವರು ಎಲ್ಲ ಸಮಾನತೆ ಮತ್ತು ಗೌರವ ದೊಂದಿಗೆ ಜೀವನ ನಡೆಸುವ ಉದ್ದೇಶಕ್ಕಾಗಿ ನಮ್ಮ ಇಲಾಖೆ ಇರುವುದು. ಅದೇ ರೀತಿ ಅವರಲ್ಲಿ…

Read More