Author: AIN Author

ಬೆಂಗಳೂರಿಗರು, ಕರಾವಳಿ ಜನರು ಕಾತುರದಿಂದ ಕಾಯ್ತಿದ್ದ ಆ ಕ್ಷಣ ಕೊನೆಗೂ ನೆನಸಾಗಿದೆ. ತುಳುನಾಡಿನ ಕಂಬಳ ಕಲೆಯನ್ನ ಕಣ್ತುಂಬಿಕೊಳ್ಳಲು ಕಾದಿದ್ದ ಜನರಿಗೆ ವೀಕೆಂಡ್ ನಲ್ಲಿ ಕಂಬಳದ ಅಖಾಡ ಸಖತ್ ಮನರಂಜನೆ ನೀಡಿದೆ. ಇತಿಹಾಸದಲ್ಲಿ ಪ್ರಥಮಬಾರಿಗೆ ಬೆಂಗಳೂರಿನಲ್ಲಿ ನಡೆಯುತ್ತಿರೋ ಕಂಬಳದ ಮೊದಲ ದಿನದ ಝಲಕ್ ಹೇಗಿತ್ತು ಅನ್ನೋದರ ಕಂಪ್ಲೀಟ್ ಡೀಟೇಲ್ ಇಲ್ಲಿದೆ ಕಂಬಳ ಕಂಬಳ…  ಬೆಂಗಳೂರು ಕಂಬಳ ನಮ್ಮ ಕಂಬಳ.. ಇದು ಇವತ್ತು ಬೆಂಗಳೂರು ಅರಮನೆ ಮೈದಾನದಲ್ಲಿ ಕೇಳಿಬರ್ತಿದ್ದ ಕೂಗು. ಒಂದೆಡೆ ಸಿಂಗಾರ ಮಾಡಿಕೊಂಡ ಕೋಣಗಳು ಕರೆಯಲ್ಲಿ ಶರವೇಗದಲ್ಲಿ ಓಡುತ್ತಿದ್ರೆ,ಮತ್ತೊಂದೆಡೆ ಓಟಗಾರರನ್ನ ಹುರಿದುಂಬಿಸ್ತಿದ್ದ ಜನರಿಂದ ಅರಮನೆ ಮೈದಾನದಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಬೆಳಗ್ಗೆ 10.30ಕ್ಕೆ ಕಂಬಳದ ಕರೆಗೆ ಪೂಜೆ ಸಲ್ಲಿಸಿ ದೀಪ ಬೆಳಗುವ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್, ಬಿ.ಎಸ್.ಯಡಿಯೂರಪ್ಪ ಸೇರಿ ಹಲವರು ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ್ರು. ಕಂಬಳಕ್ಕೆ ಚಾಲನೆ ಸಿಗ್ತಿದ್ದಂತೆ ಅಖಾಡಕ್ಕಿಳಿದ ಕೋಣಗಳು ಕರೆಯಲ್ಲಿ ನೀರು ಚಿಮ್ಮಿಸುತ್ತ ನೆರೆದಿದ್ದವರ ಹಾರ್ಟ್ ಬೀಟ್ ಜೋರು ಮಾಡಿತ್ತು. ಕಂಬಳಕ್ಕೆ ಚಾಲನೆ ನೀಡಿ ಮಾತನಾಡಿದ…

Read More

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ.ಸತ್ಯ ಪ್ರಕಾಶ್‌ ಚಿತ್ರ ಸೆಟ್ಟೇರಿತು ಎಂದರೆ ಏನಾದರೊಂದಷ್ಟು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ. ಅದನ್ನು ಅಷ್ಟೇ ಜತನದಿಂದ ಕಾಪಾಡಿಕೊಂಡು ಬಂದಿದ್ದಾರೆ ನಿರ್ದೇಶಕ ಸತ್ಯ. ಬಹಳ ದಿನಗಳ ನಂತರ ಈಗ ಅಳೆದು ತೂಗಿ ಅತ್ಯಾಪ್ತ ಕಥೆ ಮಾಡಿಕೊಂಡು ಅದಕ್ಕೆ “ಎಕ್ಸ್ ಅಂಡ್‌ ವೈ”  (X and Y) ಎಂದು ಶೀರ್ಷಿಕೆ ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದಾರೆ. ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್‌, ಆರಿಸಿಕೊಂಡ ಕಥೆ, ಲೊಕೇಶನ್ಸ್‌, ಕಲಾವಿದರ ಆಯ್ಕೆಯಲ್ಲದೆ ತಾವೇ ಮುಖ್ಯ ಪಾತ್ರಧಾರಿಯಾಗಿ ನಟನೆಗೆ ಇಳಿದಿದ್ದಾರೆ. ಇದೇ ನವೆಂಬರ್‌ 24ರ ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಜಯನಗರದ ತಮ್ಮದೇ ಕಚೇರಿಯಲ್ಲಿ ಸ್ನೇಹಿತರು, ಕಲಾವಿದರು, ಹಾಗೂ ತಮ್ಮ ತಂಡದ ತಂತ್ರಜ್ಞರನ್ನೊಳಗೂಡಿ ಸತ್ಯ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಮುಹೂರ್ತ ಮುಗಿಸಿಕೊಂಡಿದ್ದಾರೆ. ನಿರ್ಮಾಣ ಹಾಗೂ ನಿರ್ದೇಶನದ ಜೊತೆಗೆ ಸತ್ಯಪ್ರಕಾಶ್‌ (Sathyaprakash) ಹಾಗೂ ಅಥರ್ವ ಪ್ರಕಾಶ್‌ (Atharva…

Read More

ಕೀವ್: ಇದ್ದಕ್ಕಿದ್ದಂತೆ ಅಂಡರ್‍ಗ್ರೌಂಡ್ ನೀರಿನ ಪೈಪ್ ಸ್ಫೋಟಗೊಂಡು ಕಾರುಗಳ ಗಾಜು ಪುಡಿಪುಡಿಯಾಗಿ ಆಸ್ತಿಪಾಸ್ತಿಗೆ ನಷ್ಟವಾದ ಘಟನೆ ಸೋಮವಾರದಂದು ಉಕ್ರೇನ್‍ನಲ್ಲಿ ನಡೆದಿದ್ದು, ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ಉಕ್ರೇನ್ ರಾಜಧಾನಿ ಕೀವ್‍ನಲ್ಲಿ ಈ ಘಟನೆ ನಡೆದಿದ್ದು, ಇದರ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭೂಮಿ ನಡುಗುವಂತೆ ಕಾಣಿಸಿದ್ದು ಇದ್ದಕ್ಕಿದ್ದಂತೆ ನೀರಿನ ಪೈಪ್ ಸ್ಫೋಟಗೊಂಡು ರಸ್ತೆ ತುಂಬಾ ಕೆಸರು ಹರಿದಿದೆ. ಸ್ಫೋಟದ ರಭಸಕ್ಕೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರುಗಳ ಗಾಜು ಹಾಗೂ ಅಕ್ಕಪಕ್ಕದ ಮನೆಗಳ ಗಾಜುಗಳು ಪುಡಿಪುಡಿಯಾಗಿದೆ. ವಿಡಿಯೋದ ಆರಂಭದಲ್ಲಿ ರಸ್ತೆ ಪಕ್ಕದಲ್ಲೇ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿರೋದನ್ನು ಕಾಣಬಹುದಾಗಿದ್ದು, ಸ್ಫೋಟದ ನಂತರ ಸಿಸಿಟಿವಿ ಕ್ಯಾಮೆರಾ ಕಡೆಗೆ ಮಣ್ಣು ಸಿಡಿದಿದ್ದರಿಂದ ಆಕೆಗೆ ಏನಾಯಿತು ಎಂಬ ಬಗ್ಗೆ ಸ್ಪಷ್ಟವಾಗಿ ಗೊತ್ತಾಗಿಲ್ಲ. ಮತ್ತೊಂದು ಸಿಸಿಟಿವಿ ವಿಡಿಯೋದಲ್ಲಿ ಅಲ್ಲಿನ ನಿವಾಸಿಯೊಬ್ಬರು ಗಾಬರಿಯಿಂದ ಹೊರಬಂದು ನೋಡೋದನ್ನ ಕಾಣಬಹುದು.

Read More

ಬೆಂಗಳೂರು: ಸಮಾಜಮುಖಿ ಕೆಲಸಗಳ ಮೂಲಕ ಜನರ ಹೃದಯಕ್ಕೆ ಇನ್ನೂ ಹತ್ತಿರವಾಗುತ್ತಿರುವ ಹಿರಿಯ ನಟಿ ಲೀಲಾವತಿ ಅವರ ಕನಸಿನ ಆಸ್ಪತ್ರೆ ಇಂದು ಉದ್ಘಾಟನೆ ಆಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Sivakumar) ಅವರು ಪಶು ಆಸ್ಪತ್ರೆಯನ್ನು (Hospital) ಉದ್ಘಾಟಿಸಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ  ಅವರ ಆಸೆ ಇದಾಗಿದ್ದು, ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ. ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಬಳಿ ಸುಸಜ್ಜಿತ ಪಶು ಆಸ್ಪತ್ರೆಯನ್ನು ತಮ್ಮ ಸ್ವಂತ ಖರ್ಚಿನಲ್ಲಿ ನಿರ್ಮಾಣ ಮಾಡಿರುವ ಲೀಲಾವತಿ ಮತ್ತು ವಿನೋದ್ ರಾಜ್, ಹಿಂದೆ ಜನರಿಗಾಗಿ ಮತ್ತೊಂದು ಆಸ್ಪತ್ರೆಯನ್ನೂ ನಿರ್ಮಿಸಿದ್ದರು. ಈ ಆಸ್ಪತ್ರೆಯನ್ನೂ ಸರಕಾರವೇ ನೋಡಿಕೊಳ್ಳುತ್ತಿದೆ. ಬೆಂಗಳೂರಿನ ಥಣಿಸಂದ್ರದ ಪಶು ಆಸ್ಪತ್ರೆಯನ್ನು ಸರಕಾರ ಸೋಲದೇವನಹಳ್ಳಿಗೆ ಶಿಪ್ಟ್ ಮಾಡಿ ಆದೇಶ ಪ್ರಕಟಿಸಿದೆ.

Read More

ಧಾರವಾಡ: ಪಾರ್ಕಿಂಗ್ ಮಾಡಿದ ಕಾರಿನ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿರುವ ಘಟನೆ ಧಾರವಾಡದ ಆಜಾದ್ ಪಾರ್ಕ್ ಬಳಿ ಸಂಭವಿಸಿದೆ. ಆಜಾದ್ ಪಾರ್ಕ್ ಮುಂಭಾಗದಲ್ಲಿ ಈ ಬೃಹತ್ ಮರವಿತ್ತು. ಮರದ ಬುಡ ಸಂಪೂರ್ಣ ಕೊಳೆತದ್ದರಿಂದ ಏಕಾಏಕಿ ಆ ಮರ ನೆಲಕಚ್ಚಿದೆ. ಮರದ ಕೆಳಗಡೆ ಪಾರ್ಕ್ ಮಾಡಲಾಗಿದ್ದ ಕಾರಿನ ಮೇಲೆಯೇ ಈ ಮರ ಉರುಳಿ ಬಿದ್ದಿದೆ. https://ainlivenews.com/young-woman-cheated-in-the-name-of-work-from-home-5-lakhs-from-the-account/ ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇಲ್ಲದ್ದರಿಂದ ಅನಾಹುತವೊಂದು ತಪ್ಪಿದಂತಾಗಿದೆ. ಈ ಮರ ಉರುಳಿ ಬಿದ್ದಿದ್ದರಿಂದ ಆ ರಸ್ತೆ ಕೆಲಕಾಲ ಬಂದ್ ಆಗಿತ್ತು. ಹೆಸ್ಕಾಂನವರು ಹಾಗೂ ಪಾಲಿಕೆಯವರು ಸ್ಥಳಕ್ಕೆ ಬಂದು ಮರ ತೆರವುಗೊಳಿಸುವ ಕೆಲಸ ಮಾಡಿದರು.

Read More

ಬೆಂಗಳೂರು : ಇಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಎರಡನೇ ಟಿ-20 ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದ್ದು, ತಂಡದಲ್ಲಿ (ಪ್ಲೇಯಿಂಗ್ 11) ಹಲವು ಬದಲಾವಣೆ ಮಾಡುವ ಸಾಧ್ಯತೆಯಿದೆ. 5 ಪಂದ್ಯಗಳ ಸರಣಿಯಲ್ಲಿ ಭಾರತ ಮೊದಲ ಪಂದ್ಯ ಗೆದ್ದು 1-0 ಮುನ್ನಡೆ ಕಾಯ್ದುಕೊಂಡಿದೆ. ಸೂರ್ಯಕುಮಾರ್ ಯಾದವ್ ಪಡೆ ಇದೀಗ, ಎರಡನೇ ಪಂದ್ಯವನ್ನು ಗೆದ್ದು ಸರಣಿಯಲ್ಲಿ 2-0 ಮುನ್ನಡೆ ಸಾಧಿಸುವ ತವಕದಲ್ಲಿದೆ. ವಿಶಾಖಪಟ್ಟಣಂನಲ್ಲಿ ನಡೆದ ಮೊದಲ ಟಿ-20 ಪಂದ್ಯದಲ್ಲಿ ಬೌಲರ್‌ಗಳು ದುಬಾರಿಯಾಗಿದ್ದರು. ಮುಖೇಶ್ ಕುಮಾರ್ ಬಿಟ್ಟು ಉಳಿದ ಯಾವ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡಲಿಲ್ಲ. ಹೀಗಾಗಿ, ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡುವ ಸಾಧ್ಯತೆಯಿದೆ. ಭಾರತ ಸಂಭಾವ್ಯ ತಂಡ ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್/ಅವೇಶ್ ಖಾನ್, ಅರ್ಶದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ. ಆಸ್ಟ್ರೇಲಿಯಾ ಸಂಭಾವ್ಯ ತಂಡ ಟ್ರಾವಿಸ್ ಹೆಡ್/ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್,…

Read More

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆಗಳಲ್ಲಿ ಡಿಸೆಂಬರ್ 2ರವರೆಗೂ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಉಡುಪಿ,ಮಂಗಳೂರು ವಿಮಾನನಿಲ್ದಾಣ, ಮಂಗಳೂರು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ದೇವನಹಳ್ಳಿ, ಮಧುಗಿರಿಯಲ್ಲಿ ಮಳೆಯಾಗಿದೆ. ದಾವಣಗೆರೆ ಹಾಗೂ ವಿಜಯಪುರದಲ್ಲಿ 19.0 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶನಿವಾರ ಕೆಲವೆಡೆ ಮಳೆಯಾಗಿದೆ, ಇಂದು ಕೂಡ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯಾಗುವ ಸಾಧ್ಯತೆ ಇದೆ.

Read More

ದೆಹಲಿ: ಟೀಂ ಇಂಡಿಯಾದ (Team India) ಫಾಸ್ಟ್ ಬೌಲರ್ ಮೊಹಮ್ಮದ್ ಶಮಿಯವರು (Mohammad Shami) ಅಪಘಾತಕ್ಕೀಡಾದ ವ್ಯಕ್ತಿಯನ್ನು ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಘಟನೆ ನೈನಿತಾಲ್‍ನಲ್ಲಿ ನಡೆದಿದ್ದು, ಇದರ ವೀಡಿಯೋವನ್ನು ಶಮಿಯವರು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದಾರೆ ಇನ್‍ಸ್ಟಾಗ್ರಾಮ್‍ನಲ್ಲಿ (Instagram) ವೀಡಿಯೋವನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಶಮಿಯವರು ರಸ್ತೆ ಅಪಘಾತಕ್ಕೊಳಗಾದ ಸಂತ್ರಸ್ತರಿಗೆ ಸಹಾಯ ಮಾಡುವುದನ್ನು ಕಾಣಬಹುದಾಗಿದೆ. ಅಲ್ಲದೆ, ಅವನು ತುಂಬಾ ಅದೃಷ್ಟಶಾಲಿ. ದೇವರು ಅವನಿಗೆ 2 ನೇ ಜೀವನವನ್ನು ಕೊಟ್ಟನು. ಅವರ ಕಾರು ನೈನಿತಾಲ್ ಬಳಿಯ ಬೆಟ್ಟದ ರಸ್ತೆಯಿಂದ ನನ್ನ ಕಾರಿನ ಮುಂದೆ ಬಿದ್ದಿತು. ನಾವು ಅವರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದೇವೆ. ಇಂದು ಒಬ್ಬರ ಜೀವವನ್ನು ರಕ್ಷಿಸಿದ ಖುಷಿ ನನಗಿದೆ ಎಂದು ಶಮಿ ವೀಡಿಯೋ ಜೊತೆಗೆ ಬರೆದುಕೊಂಡಿದ್ದಾರೆ.

Read More

ನವದೆಹಲಿ: ಏಕದಿನ ವಿಶ್ವಕಪ್  (World Cup) ಫೈನಲ್‍ನಲ್ಲಿ ಟೀಂ ಇಂಡಿಯಾ ಸೋತಾಗ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಡ್ರೆಸ್ಸಿಂಗ್ ರೂಮಿಗೆ ತೆರಳಿ ಆಟಗಾರರಿಗೆ ಧೈರ್ಯ ತುಂಬಿದ್ದರ ಬಗ್ಗೆ ಭಾರತ ತಂಡದ (Team India) ಮಾಜಿ ಕೋಚ್ ರವಿಶಾಸ್ತ್ರಿ (Ravi Shastri) ಸಂತಸ ವ್ಯಕ್ತಪಡಿಸಿದ್ದಾರೆ. ನಾನು ಕೋಚ್ ಆಗಿ ಏಳು ವರ್ಷಗಳ ಕಾಲ ಇದ್ದೆ. ಒಂದು ತಂಡ ಸರಣಿ ಅಥವಾ ಪ್ರಮುಖ ಟೂರ್ನಿ ಸೋತ ಬಳಿಕ ಪರಿಸ್ಥಿತಿ ಹೇಗಿರಲಿದೆ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಈ ಕಾರಣದಿಂದ ಇದು ಅತ್ಯಂತ ಮಹತ್ವದ ವಿಚಾರ ಎಂದು ನನಗೆ ಅನಿಸುತ್ತದೆ ಸೋತು ಕಂಗೆಟ್ಟಿರುವಾಗ ಅದೊಂದು ವಿಚಿತ್ರ ಛಾಯೆ ಆವರಿಸಿರುತ್ತದೆ. ಇಂತಹ ಸಯಮದಲ್ಲಿ ಡ್ರೆಸ್ಸಿಂಗ್ ರೂಮ್‍ಗೆ ದೇಶದ ಪ್ರಧಾನಿಯಾದಂತವರು ಭೇಟಿ ನೀಡಿದಾಗ, ಅದು ದೊಡ್ಡ ವಿಚಾರವಾಗುತ್ತದೆ. ಇದು ಆಟಗಾರರ ಉತ್ಸಾಹವನ್ನು ಹೆಚ್ಚಿಸುತ್ತದೆ ಎಂದು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಮ್‍ಗೆ ಭೇಟಿ ನೀಡಿದ್ದಕ್ಕೆ ಕೆಲ ದಿನಗಳ ಹಿಂದೆ…

Read More

ಮೊದಲ ದಿನದಿಂದಲೂ ಕಾರ್ತಿಕ್‌ ಮತ್ತು ತನಿಷಾ ಜೊತೆ ಹೆಚ್ಚು ಆತ್ಮೀರಾಗಿದ್ದ ಸಂಗೀತ ಈ ವಾರ ಪೂರ್ತಿ ವಿನಯ್‌ ತಂಡದಲ್ಲೇ ಕಾಣಿಸಿಕೊಂಡರು. ಅಲ್ಲದೇ, ಟಾಸ್ಕ್‌ ಹೆಸರಲ್ಲಿ ಇವರು ತೋರಿದ ವರ್ತನೆ ನೋಡುಗರಿಗೆ ಸೇಡು ತೀರಿಸಿಕೊಳ್ಳುವಂತೆ ಕಾಣುತ್ತಿತ್ತು. ಗಾರ್ಡನ್‌ ಏರಿಯಾದಲ್ಲಿ ಮಾತನಾಡುವಾಗ ನಮ್ರತಾ ಮುಂದೆ ಅವರ ಜೊತೆ ಇದ್ದದ್ದು ಜಸ್ಟ್‌ ಟೈಂಪಾಸ್‌ ಎಂದಿದ್ದಾರೆ. ನಿನ್ನೆ ನಡೆದ ಕಿಚ್ಚ ಪಂಚಾಯ್ತಿಯಲ್ಲಿ ಸುದೀಪ್‌ ಈ ವಿಚಾರವನ್ನು ಸಹ ಮಾತನಾಡಿದ್ದಾರೆ. ಸಂಗೀತಗೆ ಸಖತ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಆರು ವಾರ ಕಾರ್ತಿಕ್ ತಂಡದ ಜೊತೆಗೆ ಇದ್ದವರು ಈಗ ವಿನಯ್ ಟೀಂ ಸೇರಿದ್ದೀರಿ. ಎರಡು ತಂಡದಲ್ಲಿ ಏನೆಲ್ಲ ಚೇಂಜಸ್‌ ಇದೆ ಎಂದು ಸುದೀಪ್‌ ಕೇಳಿದ್ದಾರೆ. ಈ ಟೀಮ್‌ಗೆ ಬಂದಮೇಲೆ ವಿನಯ್ ನನಗೆ ವೆರಿ ಕೇರಿಂಗ್ ಹಾಗೂ ಕಾಮ್ ಎನಿಸಿದರು. ಕಾರ್ತಿಕ್ ಯಾವಾಗಲೂ ನನ್ನ ಬಳಿ ಮಾತನಾಡುವಾಗ ಸಂಗೀತ ಜಗಳಕ್ಕೆ ಬರುತ್ತಾಳೆ ಎಂದೇ ಹೇಳ್ತಿದ್ರು. ವಿನಯ್ ತುಂಬಾ ಮೆಚ್ಯೂರ್ಡ್. ಆದರೆ ಆ ಮೆಚ್ಯೂರಿಟಿ ಕಾರ್ತಿಕ್ ಟೀಮ್‌ನಲ್ಲಿ ನನಗೆ ಕಾಣಿಸಿಲ್ಲ ಎಂದಿದ್ದಾರೆ. ಇಷ್ಟೆಲ್ಲ ಮಾತನಾಡಿದ್ದನ್ನು…

Read More