Author: AIN Author

ಬೆಂಗಳೂರು: ಭಾರತದಲ್ಲಿ ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯ ಸ್ಥಾಪನೆಗೋಸ್ಕರ ಅವಿರತವಾಗಿ ಶ್ರಮಿಸಬೇಕೆಂದು ಅಂದಿನ ರಾಷ್ಟ್ರೀಯ ಕಾಂಗ್ರೆಸ್ 1929ರ ಜನವರಿ 26ರಂದು ಪ್ರತಿಜ್ಞೆ ಮಾಡಿತ್ತು. 1950ರ ಜನವರಿ 26ರಂದು ಈ ಕನಸು ನನಸಾಯಿತು. ಈ ದಿನ ಭಾರತವು ಗಣರಾಜ್ಯವಾಗಿ ತನ್ನ ಆಡಳಿತಾತ್ಮಕ ವ್ಯವಸ್ಥೆಯನ್ನು ರೂಪಿಸಿಕೊಂಡಿತು. 1. ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನ ತಿಳಿಸಿದ ಸಿಎಂ ಸಿದ್ದರಾಮಯ್ಯ 2. ಭಾರತವು ತನ್ನನ್ನು ತಾನು ಆಳಿಕೊಳ್ಳಲು ರಚಿಸಿಕೊಂಡ ಸಂವಿಧಾನ ಜಾರಿಗೆ ಬಂದು 2023ರ ಜನವರಿ 26ಕ್ಕೆ 75 ವರ್ಷಗಳು ತುಂಬುತ್ತಿವೆ. ಭಾರತದ ಎಲ್ಲ ನಾಗರಿಕರಿಗೆ ಸಾಮಾಜಿಕ,ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು, ಚಿಂತನೆ, ಅಭಿವ್ಯಕ್ತಿ ನಂಬಿಕೆ ಮತ್ತು ಆರಾಧನೆಯ ಸ್ವಾತಂತ್ರ್ಯವನ್ನು, ಸ್ಥಾನಮಾನ ಮತ್ತು ಅವಕಾಶಗಳಲ್ಲಿ ಸಮಾನತೆಯನ್ನು ಖಾತರಿಪಡಿಸಿ ಎಲ್ಲರ ನಡುವೆ ಭಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಮೂಲ ಆಶಯವಾಗಿದೆ. 3. ವಿಶ್ವಕ್ಕೆ ಮಾದರಿ ಸ್ವರೂಪದ ಇಂತಹದ್ದೊಂದು ಸಂವಿಧಾನವನ್ನು ನಮಗೆ ನೀಡಿದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಈ ಸಂದರ್ಭದಲ್ಲಿ ನೆನಪುಮಾಡಿಕೊಂಡು ಗೌರವ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.…

Read More

ಗುವಾಹಟಿ: ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರನ್ನು ಲೋಕಸಭೆ ಚುನಾವಣೆ ನಂತರ ಬಂಧಿಸಲಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಭಾರತ್‌ ಜೋಡೋ ನ್ಯಾಯ ಯಾತ್ರೆ ವೇಳೆ ಅಸ್ಸಾಂ ಶಾಂತಿ ಕದಡಲು ರಾಹುಲ್‌ ಯತ್ನಿಸಿದರು ಎಂದು ಆರೋಪಿಸಿ, ಅವರ ವಿರುದ್ಧ ಸಿಎಂ ಸೂಚನೆ ಮೇಲೆ, ಪೊಲೀಸರು ಪ್ರಕರಣ ದಾಖಲಿಸಿದ್ದರು. ಇದಕ್ಕೆ  ಪ್ರತಿಕ್ರಿಯೆ ನೀಡಿದ ಹಿಮಂತ ಬಿಸ್ವಾ ಶರ್ಮಾ, ನಾವು ಎಸ್‌ಐಟಿ ರಚಿಸಿ ತನಿಖೆ ನಡೆಸುತ್ತೇವೆ. ರಾಹುಲ್‌ ಬಂಧನ ಆಗುವಂತೆ ನೋಡಿಕೊಳ್ಳುತ್ತೇವೆ. ಆದರೆ ಈಗಲ್ಲ. ಲೋಕಸಭೆ ಚುನಾವಣೆಯ ನಂತರ. ನಾವು ಈಗ ಕ್ರಮ ಕೈಗೊಂಡರೆ, ಅದು ರಾಜಕೀಯ ಪ್ರೇರಿತ ಎಂಬ ಆರೋಪ ನಮ್ಮ ಮೇಲೆ ಕೇಳಿಬರುತ್ತದೆ. ಹೀಗಾಗಿ ಈಗ ಬಂಧಿಸಲ್ಲ ಎಂದರು. ರಾಹುಲ್‌ ಯಾತ್ರೆಯ ಸಂಪೂರ್ಣ ಉದ್ದೇಶವು ಅಸ್ಸಾಂನ ಶಾಂತಿ ಕದಡುವುದು. ಆದರೆ ಇದಕ್ಕೆ ಅವಕಾಶ ನೀಡಲ್ಲ. ನಮ್ಮ ಬಳಿ ಸಾಕ್ಷ್ಯಗಳಿವೆ ಎಂದರು.

Read More

ಕಲಬುರಗಿ: 75 ನೆಯ ಗಣರಾಜ್ಯೋತ್ಸವ ಅಂಗವಾಗಿ ಕಲಬುರಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಲವರಿದ್ದರು

Read More

ಬೆಂಗಳೂರು: 75ನೇ‌ ಗಣರಾಜ್ಯೋತ್ಸವ ಹಿನ್ನೆಲೆ‌ ಕೆಪಿಸಿಸಿ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ ಈ ವೇಳೆ  ಧ್ವಜಾರೋಹಣ ನೆರೆವೆರೆಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ. ಹಾಗೆ ಮಾತನಾಡಿದ ಅವರು, ಜನವರಿ 26 ನಮ್ಮ ಜೀವನದಲ್ಲಿ ಹಾಗೂ ಭಾರತದ ಇತಿಹಾಸದಲ್ಲಿ ವಿಶೇಷ ದಿನ ಈ ದೇಶದ ಸಂವಿಧಾನ ಅಸ್ತಿತ್ವದಲ್ಲಿ ಇಲ್ಲದೇ ಹೋಗಿದ್ದರೆ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಆಗುತ್ತಿರಲಿಲ್ಲ ಇಷ್ಟೊಂದು ಪ್ರಯತ್ನ ಮಾಡಿ ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿ ಸಂವಿಧಾನ ರಚಿಸಿದರು ಪ್ರಮುಖವಾಗಿ ದೇಶದ ಸಂವಿಧಾನದಲ್ಲಿ ಇರುವ ಪ್ರಮುಖ ಅಂಶಗಳು ಸಮಾನತೆ, ಭ್ರಾತೃತ್ವತೆ, ಜಾತ್ಯಾತೀತ ತತ್ವ ಇದೆಲ್ಲ ಕೂಡಿ ನಮ್ಮ ಸಂವಿಧಾನ ಆಗಿದೆ ಇವತ್ತು ಸಂವಿಧಾನ ತಿರುಚುದು ಬದಲಾವಣೆ ಮಾಡಬೇಕು ಎಂಬ ಬಹಳ ದೊಡ್ಡ ಕುತಂತ್ರ ಆರ್ ಎಸ್ ಎಸ್ ಹಾಗೂ ಬಿಜೆಪಿ ಮಾಡ್ತಿದೆ ಸ್ವಾಯತ್ತ ಸಂಸ್ಥೆಗಳನ್ನೆಲ್ಲ ನಾಶ ಮಾಡಬೇಕು ಅಂತ ಬಿಜೆಪಿ ಸರ್ವ ಪ್ರಯತ್ನ ಮಾಡ್ತಿದೆ ಮೋದಿಯವರು ಆರ್ ಎಸ್ ಎಸ್ ಕೈಗೊಂಬೆಯಾಗಿ ನಡೆದುಕೊಂಡಿದ್ದಾರೆ ಇದರಿಂದ ನ್ಯಾಯಾಂಗ ಹಾಗೂ ಜಾತ್ಯಾತೀತ ತತ್ವಕ್ಕೆ ದೊಡ್ಡ ಪೆಟ್ಟು ಬೀಳ್ತಿದೆ  ಎಂದು ಎಐಸಿಸಿ…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವಕ್ಕೆ  ಕಬ್ಬನ್​​ ರಸ್ತೆಯಲ್ಲಿರುವ ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ  ಸಿದ್ಧತೆ ಮಾಡಿಕೊಳ್ಳಲಾಗಿದೆ.   ಈ ಹಿನ್ನೆಲೆಯಲ್ಲಿ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿದೆ. ಹಾಗೆ ಪರ್ಯಾಯ ಮಾರ್ಗವನ್ನು ಸಹ ನೀಡಿದ್ದಾರೆ. ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾಕಡೆ ಎಡ ತಿರುವು ಪಡೆದು ಮೈನ್​ಗಾರ್ಡ್​ ರಸ್ತೆ – ಆಲೀಸ್​ ಸರ್ಕಲ್​- ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ. ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ. ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್…

Read More

ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ (Ilayaraja) ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ಭವತಾರಿಣಿ (Bhavatarini) ಜನವರಿ 25ರಂದು ವಿಧಿವಶರಾಗಿದ್ದಾರೆ (Passed away). ಕೆಲ ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಚಿಕಿತ್ಸೆ ಪಡೆಯುವುದಕ್ಕಾಗಿ ಅವರು ಶ್ರೀಲಂಕಾಗೆ ತೆರಳಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಶ್ರೀಲಂಕಾದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಪಾರ್ಥಿವ ಶರೀರವನ್ನು ಚೆನ್ನೈಗೆ ತರಲಾಗುತ್ತಿದೆ ಎಂದು ಅವರ ಪತಿ ಬಾಲಾಜಿ ತಿಳಿಸಿದ್ದಾರೆ. ಇಳಯರಾಜ ಅವರಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದು ಯುವನ್ ಶಂಕರ್ ರಾಜಾ ಮತ್ತು ಭವತಾರಿಣಿ ಸಂಗೀತ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಯುವನ್ ಶಂಕರ್ ಸಂಗೀತ ನಿರ್ದೇಶಕರಾಗಿದ್ದರೆ ಭವತಾರಿಣಿ ಗಾಯಕಿ. ಮಾಯಿಲ್ ಪೋಲ ಪೊನ್ನು ಒನ್ನು ಚಿತ್ರಕ್ಕಾಗಿ ಇವರಿಗೆ ರಾಷ್ಟ್ರೀಯ ಪುರಸ್ಕಾರ ಕೂಡ ಲಭಿಸಿತ್ತು

Read More

ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣ ಸಂಬಂಧ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ಒತ್ತಾಯ ಕೇಳಿಬಂದಿದೆ. ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಶಾಸಕ ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು ಆದ್ರೆ ಬುಡ್ಗ ಜಂಗಮ‌ ಜಾತಿಗೆ ಸೇರಿದವರು ಎಂದು ನಕಲಿ ಜಾತಿ ಪ್ರಮಾಣ ಪತ್ರ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಎಸ್ ಸಿ ಮೀಸಲಾತಿ ದುರ್ಬಳಕೆ ಮಾಡಲಾಗಿದೆ. 2013 ರಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಮೀಸಲಾತಿ ದುರುಪಯೋಗ ಪಡಿಸಿಕೊಂಡಿದ್ದಾರೆ ಅಲ್ಲದೆ ದಲಿತರನ್ನು ಲೇ ಲೇಕರ್ ಶೂಗೆ ಹೋಲಿಸಿದ್ದರು ಕೊತ್ತೂರು ಮಂಜುನಾಥ್ ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆಗೆ ಬನ್ನಿ ಎಂದು ಸವಾಲ್ ಹಾಕಿದರು ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ಸವಾಲ್ ಹಾಕಿದ್ದು  ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಹೈಕೋರ್ಟ್ ಸಹ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ…

Read More

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್‌ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.

Read More

ಮದ್ದೂರು: ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುತ್ತೇನೆ ಎನ್ನುವಷ್ಟು ಕಠೋರವಾದ ಜಾತ್ಯತೀತ ಸಿದ್ಧಾಂತವನ್ನು ಪಾಲಿಸಿದ್ದ ದೇವೇಗೌಡರು ಇಂದು ಬಿಜೆಪಿಯನ್ನು ಬೆಂಲಿಸುತ್ತಿದ್ದಾರೆಂದರೆ ನಮಗೆ ನೋವಾಗುತ್ತಿದೆ. ಅವರ ಇಂದಿನ ಸ್ಥಿತಿಗೆ ಮಕ್ಕಳೇ ಕಾರಣ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಆರೋಪಿಸಿದರು. ದೇವೇಗೌಡರ ಇಂದಿನ ನಿಲುವು ಜಾತ್ಯತೀತ ತತ್ವಕ್ಕೆ ವಿರುದ್ಧವಾಗಿದೆ. ದೇವೇಗೌಡರು ನಮ್ಮ ನಾಯಕರು. ದೇಶದ ಪ್ರಧಾನಿಯಾಗಿದ್ದವರು. ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಎಲ್ಲರನ್ನೂ ಅದರೆಡೆಗೆ ಕರೆತಂದಿದ್ದರು. ಜಾತ್ಯತೀತ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಹಲವು ದಶಕಗಳಿಂದ ರಾಜಕಾರಣ ಮಾಡಿದ ಎಚ್.ಡಿ.ದೇವೇಗೌಡರನ್ನು ಆ ಪಕ್ಷದ ನಾಯಕರು, https://ainlivenews.com/india-not-having-permanent-seat-in-unsc-ironic-elon-musk/ ಅವರ ಮಕ್ಕಳು ಈ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದಾರೆ ಎಂದು ಛೇಡಿಸಿದರು. ನಾವೂ ರಾಮ ಭಕ್ತರೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಹೇಳಲಿಲ್ಲವೇ, ಬಿಜೆಪಿಯವರು ಚುನಾವಣೆಗಾಗಿ ಶ್ರೀರಾಮನನ್ನು ಬಳಸಿಕೊಳ್ಳುತ್ತಿದ್ದಾರೆ. ನಾವು ಚುನಾವಣೆ ಬಿಟ್ಟು ವೈಯಕ್ತಿಕವಾಗಿ ದೇವರ ಆರಾಧನೆ ಮಾಡುತ್ತೇವೆ. ನಮಗೂ ಭಕ್ತಿ ಇದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Read More

ಚೀನಾದ ದಕ್ಷಿಣ ಕ್ಸಿನ್‌ಜಿಯಾಂಗ್‌ನಲ್ಲಿ (Southern part of China’s) ಸೋಮವಾರ ತಡರಾತ್ರಿ 7.2 ತೀವ್ರತೆಯ ಪ್ರಬಲ ಭೂಕಂಪನ (Earthquake) ಸಂಭವಿಸಿದ್ದು, ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಸದ್ಯ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಆಸ್ತಿಪಾಸ್ತಿ ಹಾನಿಯಾದ ಬಗ್ಗೆಯೂ ವರದಿಯಾಗಿಲ್ಲ. ರಿಕ್ಟರ್‌ ಮಾಪಕದಲ್ಲಿ ಭೂಕಂಪನ ತೀವ್ರತೆ 7.2 ಎಂದು ಗುರುತಿಸಲಾಗಿದ್ದು, ಸುಮಾರು 80 ಕಿಮೀ ಆಳದಲ್ಲಿ ಭೂಕಂಪನದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದೇ ಜನವರಿ 11ರಂದು ಅಫ್ಘಾನಿಸ್ತಾನದಲ್ಲಿ 6.1 ತೀವ್ರತೆ ಭೂಕಂಪ ಸಂಭವಿಸಿದ ನಂತರ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಲಘು ಭೂಕಂಪ ಸಂಭವಿಸಿದ್ದವು. ಕಾಬೂಲ್‌ನಿಂದ ಈಶಾನ್ಯಕ್ಕೆ 241 ಕಿಮೀ ದೂರದಲ್ಲಿ ಕೇಂದ್ರ ಬಿಂದು ಪತ್ತೆಯಾಗಿತ್ತು. ಪಾಕಿಸ್ತಾನದಲ್ಲೂ ಭೂಮಿ ಕಂಪಿಸಿದ ಅನುಭವವಾಗಿತ್ತು

Read More