ಬೆಂಗಳೂರು: ನಾಳೆಯಿಂದ ಲಾಲ್ಬಾಗ್ನಲ್ಲಿ 215ನೇ ಫಲಪುಪ್ಪ ಪ್ರದರ್ಶನ ಆರಂಭವಾಗಲಿದ್ದು ಜ.18 ರಿಂದ ಜ.28 ರ ವರೆಗೆ ನಡೆಯಲಿದೆ. ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿಯು ತೋಟಗಾರಿಕೆ ಇಲಾಖೆಯಿಂದ ಸಸ್ಯಕಾಶಿ ಲಾಲ್ ಬಾಗ್‌ನ ಗಾಜಿನ ಮನೆಯಲ್ಲಿ “ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ 215 ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಿದ್ದು, ಜ.18ರಿಂದ 28ರವರೆಗೆ ಒಟ್ಟು 11ದಿನಗಳ ಕಾಲ ನಡೆಯಲಿದೆ. ಇಂಡೋ-ಅಮೆರಿಕನ್ ಹೈಬ್ರಿಡ್ ಸೀಡ್ಸ್ ಕಂಪನಿಯು ಎಕ್ಸಾಟಿಕ್ ಆರ್ಕಿಡ್ಸ್ ಗಳಾದ ಪೆಲನಾಪ್ಪಿಸ್, ಡೆಂಡೋಬಿಯಂ, ವಾಂಡಾ, ಮೊಕಾರಾ ಸೇರಿದಂತೆ 20 ಬಗೆಯ ಆಕರ್ಷಕ ಮಿನಿಯೇಚರ್ ಆಂಥೋರಿಯಂ ಹಾಗೂ ವಿವಿಧ ಬಗೆಯ ಎಕ್ಸಾಟಿಕ್ ಹೂವುಗಳಿಂದ ಕಲಾಕೃತಿಗಳನ್ನು ಅಲಂಕರಿಸಲಾಗಿದ್ದು, ವಿಶ್ವಗುರು ಬಸವಣ್ಣ ಅವರ ಪುತ್ಥಳಿಯು ಗಾಜಿನಮನೆಯ ಪ್ರವೇಶದ್ವಾರದಲ್ಲಿ ನಿಮ್ಮನ್ನು ಸ್ವಾಗತಿಸುತ್ತದೆ. ಈ ಬಾರಿಯ ಫಲಪುಷ್ಪ ಪ್ರದರ್ಶನದ ಪ್ರಮುಖ ಆಕರ್ಷಕವಾಗಿರುವ ಅನುಭವ ಮಂಟಪದ ಪ್ರತಿರೂಪವು ಗಾಜಿನ ಮನೆಯ ಕೇಂದ್ರಭಾಗದಲ್ಲಿ ತಲೆ ಎತ್ತಲಿದೆ.
Author: AIN Author
ಬೆಂಗಳೂರು: ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ನಿಗಮ ಮಂಡಳಿಗಳ ನೇಮಕಾತಿಗೆ ಕೊನೆಗೂ ಕಾಯಕಲ್ಪ ದೊರೆಯುವ ನಿರೀಕ್ಷೆಯಿದ್ದು, 36 ಮಂದಿ ಶಾಸಕರಿಗೆ, 24 ಕಾರ್ಯಕರ್ತರೂ ಸೇರಿದಂತೆ ಒಟ್ಟು 70 ಕ್ಕೂ ಹೆಚ್ಚು ಜನರಿಗೆ ಅಧ್ಯಕ್ಷ ಸ್ಥಾನ ಘೋಷಣೆಯಾಗುವ ಸಾಧ್ಯತೆಗಳಿವೆ. ಸುಮಾರು ಕಳೆದೆರಡು ತಿಂಗಳಿನಿಂದಲೂ ನಿಗಮ ಮಂಡಳಿಯ ನೇಮಕಾತಿ ಕುರಿತು ವ್ಯಾಪಕ ಚರ್ಚೆಗಳು ನಡೆಯುತ್ತಲೇ ಇವೆ. ಸರ್ಕಾರ ಕಾಂಗ್ರೆಸ್ ಕಾರ್ಯಕರ್ತರನ್ನು ನಿರ್ಲಕ್ಷಿಸುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಇನ್ನೂ ವಿಳಂಬ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡುವ ನಿಟ್ಟಿನಲ್ಲಿ ಅಂತಿಮ ತೀರ್ಮಾನಗಳಾಗಿವೆ. ಕಾಂಗ್ರೆಸ್ ನಾಯಕರು ಕಳುಹಿಸಿದ್ದ ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಂಕಿತ ಹಾಕಿದ್ದಾರೆ. ಇಂದು ಸಂಜೆಯೊಳಗೆ ಪಟ್ಟಿ ಪ್ರಕಟವಾಗಲಿದೆ ಎಂಬ ಮಾಹಿತಿಗಳಿವೆ. 2-3ಕ್ಕಿಂತಲೂ ಹೆಚ್ಚು ಬಾರಿ ಗೆಲುವು ಸಾಸಿದ ಶಾಸಕರನ್ನು ಅದರಲ್ಲೂ ಹಿರಿಯರನ್ನು ನಿಗಮ ಮಂಡಳಿಗಳಿಗೆ ಪರಿಗಣಿಸಲಾಗಿದೆ. ವಿಧಾನಸಭೆಯ ಉಪಾಧ್ಯಕ್ಷ ಸ್ಥಾನವನ್ನು ನಿರಾಕರಿಸಿ ಎಡವಟ್ಟು ಮಾಡಿಕೊಂಡು ಚಾಮರಾಜನಗರದ ಪುಟ್ಟರಂಗಶೆಟ್ಟಿ, ಕಳೆದ ವಿಧಾನಸಭೆಯ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್…
ಗದಗ: ರೈತರ ನಿದ್ದೆಗೆಡಿಸಿದ್ದ ಟ್ರಾಕ್ಟರ್ ಟ್ರೇಲರ್ ಕಳ್ಳತನ ಪ್ರಕರಣಗಳನ್ನು ಭೇಧಿಸೋ ಮೂಲಕ ಗದಗ ಜಿಲ್ಲೆಯ ಮುಂಡರಗಿ ಪೊಲೀಸರು ಇದೀಗ ರೈತಾಪಿ ವರ್ಗದ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಳ್ಳತನವಾಗಿದ್ದ ಟ್ರಾಕ್ಟರ್ ಟ್ರೇಲರ್ ಗಳನ್ನ ಪತ್ತೆ ಹಚ್ವೋ ಮೂಲಕ ರೈತರನ್ನ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ. ಮುಂಡರಗಿ ತಾಲೂಕಿನ ಡಂಬಳ, ಮೇವುಂಡಿ ಮತ್ತು ಕಲಕೇರಿ ಗ್ರಾಮಗಳಲ್ಲಿ ಕಳ್ಳರು ತಮ್ಮ ಕರಾಮತ್ತು ತೋರಿಸಿ ಅನ್ನದಾತನ ಟ್ರೇಲರ್ ಗಳನ್ನ ಕದ್ದಿದ್ದರು ಆ ಕುರಿತು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ವು. ಗದಗ ಎಸ್ಪಿ ಬಿ ಎಸ್ ನೇಮಗೌಡ ವೀಶೇಷ ತಂಡ ರಚನೆ ಮಾಡಿದ್ರು. ಇದೀಗ ಮುಂಡರಗಿ ಪೊಲೀಸರು ಪ್ರಕರಣ ಭೇಧಿಸಿದ್ದು ರೈತರೆಲ್ಲಾ ಸೇರಿಕೊಂಡು ಪೊಲೀಸರಿಗೆ ಸನ್ಮಾನ ಮಾಡೋ ಮೂಲಕ ಅಭಿನಂದಿಸಿದ್ದಾರೆ.
ಕಲಬುರಗಿ: ನನ್ನ ಹೆಸರಲ್ಲೇ ಲಕ್ಷ್ಮಣ ಇದೆ ನಾನು ರಾಮ ಮಂದಿರಕ್ಕೆ ಹೋಗ್ತೀನಿ ಅಂತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಮಾತನಾಡಿದ ಸವದಿ, ನಾನು ಅಯೋಧ್ಯೆಗೆ ಹೋಗ್ತೀನಿ ಆದ್ರೆ ರಾಮ ಮಂದಿರ ಉದ್ಘಾಟನೆ ದಿನ ಹೋಗಲ್ಲ ಬದಲಾಗಿ 22 ರ ನಂತ್ರ ಒಮ್ಮೆ ಹೋಗಿ ಬರ್ತೀನಿ..ಹೀಗಾಗಿ ಹೋಗಬಾರದು ಅಂತೇನಿಲ್ಲ ಅಂದ್ರು.ನನ್ನ ಹೆಸರಲ್ಲೇ ಲಕ್ಷ್ಮಣ ಇದೆ ರಾಮನ ಹತ್ರ ಹೋಗ್ತೀನಿ ಅಂತ ಮುಗುಳ್ನಕ್ಕರು.
ಟೆಲ್ ಅವೀವ್: ದಕ್ಷಿಣ ಲೆಬನಾನ್‌ನಲ್ಲಿ (South Lebanon) ಇಸ್ರೇಲ್ (Isreal) ಸೈನಿಕರು ನಡೆಸಿದ ದಾಳಿಯಲ್ಲಿ ಹಿಜ್ಬುಲ್ಲಾದ ಗಣ್ಯ ರಾದ್ವಾನ್ ಪಡೆಯ ಹಿರಿಯ ಕಮಾಂಡರ್ ಒಬ್ಬ ಸಾವನ್ನಪ್ಪಿರುವುದಾಗಿ ಭದ್ರತಾ ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ. ಮೃತನನ್ನು ವಿಸ್ಸಾಮ್ ಅಲ್-ತವಿಲ್ (Wissam al-Tawil) ಎಂದು ಗುರುತಿಸಲಾಗಿದೆ. ಈತ ರಾದ್ವಾನ್ ಪಡೆಯೊಳಗಿನ ಘಟಕದ ಉಪ ಮುಖ್ಯಸ್ಥ ಎನ್ನಲಾಗಿದೆ. ಲೆಬನಾನಿನ ಮಜ್ದಾಲ್ ಸೆಲ್ಮ್ ಗ್ರಾಮದ ಮೇಲಿನ ದಾಳಿಯಲ್ಲಿ ವಿಸ್ಸಾಮ್ ಕಾರಿಗೆ ಡಿಕ್ಕಿ ಹೊಡೆದಾಗ ವಿಸ್ಸಾಮ್ ಮತ್ತು ಇನ್ನೊಬ್ಬ ಹೆಜ್ಬೊಲ್ಲಾ ಹೋರಾಟಗಾರ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಈ ಮೂಲಕ ಸದ್ಯದ ಪರಿಸ್ಥಿತಿ ಇನ್ನಷ್ಟು ಉಲ್ಬಣಗೊಳ್ಳುವ ಸಾಧ್ಯಗಳು ಹೆಚ್ಚಿದೆ ಎಂದು ಭದ್ರತಾ ಮೂಲವೊಂದು ಆತಂಕ ವ್ಯಕ್ತಪಡಿಸಿದೆ. ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ದಾಳಿಯ ನಂತರ ದಕ್ಷಿಣ ಲೆಬನಾನ್‌ನಲ್ಲಿ 130 ಕ್ಕೂ ಹೆಚ್ಚು ಹೆಜ್ಬೊಲ್ಲಾ ಹೋರಾಟಗಾರರನ್ನು ಹತ್ಯೆ ಮಾಡಲಾಗಿದೆ. ಇತ್ತ ಸಿರಿಯಾದಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ಲೆಬನಾನ್‌ನ ಮೇಲೆ ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಾರಂಭಿಸದಂತೆ ಕಳೆದ ವಾರ ಹೆಜ್ಬೊಲ್ಲಾಹ್‌ನ ಪ್ರಧಾನ…
ಬೆಂಗಳೂರು: ಬಡವರು ತಮ್ಮ ಕನಸಿನ ಮನೆ ನಿರ್ಮಿಸಿಕೊಂಡು ಬದುಕಿಗೊಂದು ಶಾಶ್ವತ ಸೂರು ಸಿಗಲಿ ಎಂಬ ಸರ್ಕಾರದ ಆಶಯದಂತೆ ರಾಜ್ಯ ಸರ್ಕಾರ ಹಲವು ರೀತಿಯಲ್ಲಿ ಪ್ರಯತ್ನ ಮಾಡುತ್ತಿದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಜನರಿಗೆ ಅನುಕೂಲವಾಗಿವಂತೆ ಸಹ ಮಾಡಿ ಕೊಟ್ಟಿದೆ. ಅದರಂತೆಯೇ ಈಗ ಸರಿಯಾದ ಮನೆ ಇಲ್ಲದೆಯೇ ಚಿಕ್ಕ ಪುಟ್ಟ ಗುಡಿಸಲು ಕಟ್ಟಿಕೊಂಡು ಜೀವನ ನಡೆಸುತ್ತಿರುವವರಿಗೆ ಮೂಲಭೂತ ಸೌಕರ್ಯ ಸಿಗಬೇಕು ಎಂಬ ಉದ್ದೇಶದಿಂದ ಆಶ್ರಯ ಯೋಜನೆಯಲ್ಲಿ ನಿವೇಶನಗಳನ್ನು ನೀಡಲು ಸರಕಾರ ಒಂದು ಯೋಜನೆಯನ್ನು ಸಹ ರೂಪಿಸಿಕೊಂಡಿದೆ. ಹೌದು ಅದೇನೆಂದರೆ ಬೆಂಗಳೂರಿನ ಗ್ರಾಮಾಂತರ ಪ್ರದೇಶದಲ್ಲಿ 527 ಎಕರೆ ಪ್ರದೇಶವನ್ನು ಈಗಾಗಲೇ ಸರಕಾರವು ಮನೆ ಕಟ್ಟಲು ಯೋಗ್ಯವಾದ ಜಾಗವನ್ನು ನಿಗದಿ ಮಾಡಿ ಬಡವರಿಗೆ ಹಂಚಲು ನಿರ್ಧರಿಸಿದೆ. ರಾಜೀವ್‌ಗಾಂಧಿ ವಸತಿ ನಿಗಮ ಮಂಡಳಿ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಆಹ್ವಾನ ಮಾಡಿದ್ದಾರೆ. ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರ ಅಥವಾ ಬೆಂಗಳೂರು ಒನ್ ಕೇಂದ್ರಕ್ಕೆ ತೆರಳಿ ನೀವು ಅರ್ಜಿ ಆಹ್ವಾನ ಮಾಡಬಹುದು. ಅರ್ಜಿಯನ್ನು…
ನವದೆಹಲಿ: ಬಜೆಟ್‌ನಲ್ಲಿ 7 ಲಕ್ಷ ರೂ. ವೈಯಕ್ತಿಕ ಆದಾಯಕ್ಕೆ (Personal Income) ತೆರಿಗೆ ವಿನಾಯಿತಿಯನ್ನು ಘೋಷಿಸಿದ್ದ ಸರ್ಕಾರ ಈಗ ಆದಾಯ ತೆರಿಗೆ ಕಾಯ್ದೆಗೆ ತಿದ್ದುಪಡಿ ಮಾಡಿ ಈ ಪ್ರಸ್ತಾಪವನ್ನು ಅಧಿಕೃತವಾಗಿ ಜಾರಿ ಮಾಡಿದೆ. ಈ ಸಂಬಂಧ ಹಣಕಾಸು ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದೆ. ಆದಾಯ ತೆರಿಗೆ ಕಾಯ್ದೆ (Income Tax Act) 2023 ಸೆಕ್ಷನ್ 87ಕ್ಕೆ ತಿದ್ದುಪಡಿ ಮಾಡಿ ವಾರ್ಷಿಕ ಬಜೆಟ್‌ನಲ್ಲಿ ಪ್ರಕಟಿಸಿದ ಘೋಷಣೆಯನ್ನು ಜಾರಿ ಮಾಡಲಾಗಿದೆ ಎಂದು ತಿಳಿಸಿದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಆದಾಯ 7 ಲಕ್ಷ ರೂಪಾಯಿಯ ತನಕ ಇದ್ದಲ್ಲಿ ಇನ್ನು ಮುಂದೆ ಆದಾಯ ತೆರಿಗೆ ಸಲ್ಲಿಸುವಾಗ ಕಟ್ಟಿರುವ ತೆರಿಗೆಯನ್ನು ರಿಬೇಟ್ ಅಥವಾ ವಾಪಸ್ ಪಡೆದುಕೊಳ್ಳುವ ಅವಕಾಶ ಲಭ್ಯವಿರುತ್ತದೆ. ಈ ಹಿಂದೆ 5 ಲಕ್ಷ ರೂ. ತನಕ ಆದಾಯ ಇದ್ದವರಿಗೆ ಈ ವಿನಾಯಿತಿ ನೀಡಲಾಗುತ್ತಿತ್ತು. 2023ರ ಬಜೆಟ್‌ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಅವಕಾಶವನ್ನು 7 ಲಕ್ಷ ರೂ. ಆದಾಯ ಇರುವವರಿಗೂ ವಿಸ್ತರಿಸಿದ್ದರು.
ಕಿರುತೆರೆಯಲ್ಲಿ ಮೋಡಿ ಮಾಡಿದ್ದ ನಟಿ ಕಾವ್ಯಾ ಗೌಡ (Kavya Gowda) ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಸೀಮಂತ ಶಾಸ್ತ್ರದ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿದೆ. ಕಾವ್ಯಾ ಗೌಡ ಸೀಮಂತ ಕಾರ್ಯಕ್ರಮ ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ನಡೆದಿದೆ. ಕಾರ್ಯಕ್ರಮದಲ್ಲಿ ಲೈಟ್ ಬಣ್ಣದ ಸೀರೆಯಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ಸೀಮಂತ ಕಾರ್ಯಕ್ರಮ ನಡೆದಿದೆ. 2021ರಲ್ಲಿ ಉದ್ಯಮಿ ಸೋಮಶೇಖರ್ ಜೊತೆ ಕಾವ್ಯಾ ಮದುವೆಯಾಗಿದ್ದಾರೆ. ಗುರುಹಿರಿಯರು ಸಮ್ಮತಿಸಿದ ಮದುವೆಗೆ ಕಾವ್ಯಾ ಗ್ರೀನ್ ಸಿಗ್ನಲ್ ನೀಡಿದ್ದರು. ಕಳೆದ ವರ್ಷ ಹೊಸ ಮನೆ ಕಟ್ಟಿ ಗೃಹಪ್ರವೇಶ ಕೂಡ ಅದ್ದೂರಿಯಾಗಿ ಮಾಡಿದ್ದರು. ಹೊಸ ಮನೆಗೆ ಕಾಲಿಟ್ಟ ಸಂಭ್ರಮದ ಬೆನ್ನಲ್ಲೇ ಈಗ ಹೊಸ ಅತಿಥಿ ಆಗಮನವಾಗುತ್ತಿರೋ ಖುಷಿಯಲ್ಲಿದ್ದಾರೆ.
ತುಮಕೂರು: ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಚಿವ ಕೆಎನ್ ರಾಜಣ್ಣ ಅಯೋಧ್ಯೆ ರಾಮಲಲ್ಲಾ ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹೌದು ತುಮಕೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಹೇಳಿದ್ದಾರೆ. ನಮ್ಮಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಅನೇಕ ರಾಮ ದೇಗುಲಗಳಿವೆ. ಆದರೆ, ಬಿಜೆಪಿ ಚುನಾವಣೆಗಾಗಿ ದೇಗುಲ ಕಟ್ಟುತ್ತಿದೆ. ಬಿಜೆಪಿ ಜನರನ್ನು ಮೋಸ ಮಾಡುತ್ತಿದೆ ಎಂದು ರಾಜಣ್ಣ ಟೀಕಿಸಿದ್ದಾರೆ. ರಾಜಣ್ಣ ಹೇಳಿಕೆಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.
ಬೆಂಗಳೂರು: ನಗರದಲ್ಲಿ ಪುಂಡರ ಹಾವಳಿ ಮುಂದುವರೆದಿದ್ದು KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದಾರೆ. ಎರಡು KSRTC ಬಸ್ ಗಳ ಗ್ಲಾಸ್ ಗಳು ಪೀಸ್ ಪೀಸ್ ಮಾಡಿರುವ ಘಟನೆ ನಗರದ ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ನಡೆದಿದೆ. ಬೆಂಗಳೂರು – ಮೈಸೂರು ಮಾರ್ಗದ ಬಸ್ ಗಳಿಗೆ ದೊಣ್ಣೆಯಿಂದ ಗ್ಲಾಸ್ ಹೊಡೆದ ಆರೋಪವಾಗಿದ್ದು ಆಟೋದಲ್ಲಿ ಬಂದು ಬಸ್ ಅಡ್ಡಗಟ್ಟಿ ಧಾಂಧಲೆ ನಡೆಸಿದ ಕಿಡಿಗೇಡಿಗಳು ಹಾಗೆ ಬಸ್ ಅಡ್ಡಗಟ್ಟಿ ಬಸ್ ನ ಗ್ಲಾಸ್ ಗಳನ್ನ ದೊಣ್ಣೆಗಳಿಂದ ಹೊಡೆದ ಪುಂಡರನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ. ಬಸ್ ಗಳಿಗೆ ಮಾತ್ರ ಕಲ್ಲು ಹೊಡೆದಿಲ್ಲ ಎರಡು ಕಾರು, ಆಟೋಗಳ ಗ್ಲಾಸ್ ಗಳನ್ನು ಹೊಡೆದಿದ್ದು ಹಾಗೆ ಕುಡಿದ ನಶೆಯಲ್ಲಿ ಕಂಡ ಕಂಡ ವಾಹನಗಳ ಗ್ಲಾಸ್ ಗಳನ್ನ ಹೊಡೆದು ಅಟ್ಟಹಾಸ ಮೆರೆದಿದ್ದಾರೆ ಆಟೋದಲ್ಲಿದ್ದ ಐವರು ಗ್ಯಾಂಗ್, ರಾಡ್ ಗಳನ್ನ ಇಟ್ಕೊಂಡಿದ್ರು ಅಂತ ಬಸ್ ಚಾಲಕರ ಆರೋಪ ಮಾಡಿದ್ದು ವಿಜಯನಗರ, ಮೈಸೂರು ಡಿಪೋ ಹುಣಸೂರು ಮೈಸೂರು ಡಿಪೋ ಗೆ ಸೇರಿದ ಬಸ್…