ಹಾಸನ: ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲೇ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಎದುರಿಸಲಾಗುತ್ತದೆ. ಇದರಲ್ಲಿ ಹೆಚ್ಚು ಸ್ಥಾನ ಗೆದ್ದರೆ ಅಡೆತಡೆ ಇಲ್ಲದೆ 5 ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೇಳಿದ್ದಾರೆ. ಚುನಾವಣೆಗೂ ಮೊದಲು 5 ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಲಾಗಿತ್ತು. ಸರ್ಕಾರಕ್ಕೆ ಒಂದು ವರ್ಷ ತುಂಬುವ ಮೊದಲೇ ಅವುಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷತರಿಗಾಗಿ ಕೆಲಸ ಮಾಡುವ ಹಂಬಲ ಕಾಂಗ್ರೆಸ್ಗೆ ಇದೆ. ಹಾಗಾಗಿ ನೀವೆಲ್ಲರೂ ಸಿಎಂ ಸಿದ್ದರಾಮಯ್ಯಗೆ ಬೆಂಬಲ ನೀಡಬೇಕು ಎಂದು ಯತೀಂದ್ರ ಕರೆ ನೀಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ ನೈತಿಕವಾಗಿ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56 ಸಾವಿರ ಕೋಟಿ ರೂಪಾಯಿ ಖರ್ಚು ಆಗುತ್ತದೆ. ರಾಜ್ಯದಲ್ಲಿ ಯಾವ ಸರ್ಕಾರವೂ ಇಷ್ಟು ಹಣವನ್ನು ಖರ್ಚು ಮಾಡಿಲ್ಲ. ಇಷ್ಟೊಂದು ಹಣ…
Author: AIN Author
ಕಾಟೇರ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. 18 ದಿನಗಳಲ್ಲಿ 190 ಕೋಟಿಗೂ ಹೆಚ್ಚು ಕಲೆಕ್ಷನ್ ಗಳಿಸಿ (Gross collection) 200 ಕೋಟಿ ಕಲೆಕ್ಷನ್ ನತ್ತ ಯಶಸ್ವಿಯಾಗಿ ಸಾಗುತ್ತಿದೆ ಎಂದು ದರ್ಶನ್ ಅವರ ಫ್ಯಾನ್ಸ್ ಪೋಸ್ಟರ್ ಹಂಚಿಕೊಂಡಿದ್ದಾರೆ. ಈ ವಾರದಲ್ಲೇ 200 ಕೋಟಿ ರೂಪಾ ಕ್ಲಬ್ ಸೇರೋದು ಗ್ಯಾರಂಟಿ ಎನ್ನುವ ಲೆಕ್ಕಾಚಾರ ಶುರುವಾಗಿದೆ. ಈ ನಡುವೆ ಸುದೀಪ್ ಮತ್ತೊಂದು ಸಂಭ್ರಮದ ಸುದ್ದಿ ಕೊಟ್ಟಿದ್ದಾರೆ. ಕೆಲವು ದಿನಗಳಿಂದ ಕಾಟೇರ (Katera) ಸಿನಿಮಾವನ್ನು ಕಿಚ್ಚ ಸುದೀಪ್ (Sudeep) ನೋಡಲಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ಜೊತೆ ಸುದೀಪ್ ಮಾತನಾಡಿ, ಅತೀ ಶೀಘ್ರದಲ್ಲೇ ಸಿನಿಮಾ ನೋಡುತ್ತೇನೆ ಎಂದು ಹೇಳಿದ್ದಾಗಿ ವರದಿ ಆಗಿತ್ತು. ಅದೀಗ ನಿಜವಾಗಿದೆ. ಸುದೀಪ್ ಕಾಟೇರ ಸಿನಿಮಾವನ್ನು ವೀಕ್ಷಿಸಿದ್ದಾರೆ. ಈ ಮಾಹಿತಿಯನ್ನು ಸ್ವತಃ ಸುದೀಪ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಒಂದು ಕಡೆ ಸೆಲೆಬ್ರಿಟಗಳು ಸಿನಿಮಾವನ್ನು ಮೆಚ್ಚಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ಕಾಟೇರ ಸಿನಿಮಾ ರಿಲೀಸ್ ಗಳಿಕೆಯೂ…
ಬೆಂಗಳೂರು: ರಾಮ ಮಂದಿರ ಉದ್ಘಾಟನೆಗೂ ಮುನ್ನವೇ ಪ್ರಧಾನಿ ಮೋದಿ ಕರ್ನಾಟಕಕ್ಕೆ ಬರ್ತಿದ್ದಾರೆ, BIETCಗೆ ಬರ್ತಿರೋ ನಮೋ ಚಾಮರಾಜನಗರಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ. ರಾಜ್ಯ ಬಿಜೆಪಿ ನಾಯಕರಲ್ಲಿ ಲೋಕಸಭಾ ರಣೋತ್ಸಾಹ ಬಂದಿದ್ದು ಹೊಸ ಹುರುಪಿನಲ್ಲಿದ್ದಾರೆ, ಬೆಂಗಳೂರಿನಲ್ಲಿ ನಮೋ ಬೃಹತ್ ರೋಡ್ ಶೋಗೆ ಕೇಸರಿ ನಾಯಕರು ಪ್ಲಾನ್ ಮಾಡ್ತಿದ್ದು ಲೋಕಸಮರಕ್ಕೆ ರಣಕಹಳೆ ಮೊಳಗಿಸಲು ಸಜ್ಜಾಗ್ತಿದ್ದಾರೆ ಕಮಲನಾಯಕರು. ಜನವರಿ 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಇಲ್ಲಿದೆ ಅವರ ವೇಳಾಪಟ್ಟಿ ವಿವರ! ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಕಲ್ಬುರ್ಗಿ ಏರ್ ಪೋರ್ಟ್ ಗೆ ಆಗಮನ 9.40 ಕ್ಕೆ ಕಲ್ಬುರ್ಗಿಯಿಂದ ಹೆಲಿಕಾಫ್ಟರ್ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಪ್ರಯಾಣ ಮಧ್ಯಾಹ್ನ 12.10ಕ್ಕೆ ಹೆಲಿಕಾಫ್ಟರ್ ಮೂಲಕ ಸೊಲ್ಲಾಪುರದಿಂದ ನಿರ್ಗಮನ ಮಧ್ಯಾಹ್ನ 1 ಗಂಟೆಗೆ ಕಲ್ಬುರ್ಗಿ ಏರ್ ಪೋರ್ಟ್ ಗೆ ಆಗಮನ 1.05 ಕ್ಕೆ ವಿಶೇಷ ವಿಮಾನದ ಮೂಲಕ ಕಲ್ಬುರ್ಗಿಯಿಂದ ಬೆಂಗಳೂರಿಗೆ ಪ್ರಯಾಣ ಮಧ್ಯಾಹ್ನ 2.10 ಕ್ಕೆ ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ ಗೆ ಆಗಮನ 2.15 ಕ್ಕೆ…
ಗದಗ: ಅಯೋಧ್ಯಾ ಶ್ರೀ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ದೇವಸ್ಥಾನಗಳ ಆವರಣಗಳನ್ನು ಸ್ವಚ್ಚಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಹಿನ್ನೆಲೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ 17 ನೇ ವಾರ್ಡಿನ ಹೆಸರೂರ ರಸ್ತೆಯ, ಆಶ್ರಯ ಕೊಲೋನಿಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣವನ್ನು ಬಿಜೆಪಿ ಮುಖಂಡರಾದ ಕರಬಸಪ್ಪ ಹಂಚಿನಾಳ ಅವರ ನೇತೃತ್ವದಲ್ಲಿ ಸ್ವಚ್ಛಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಜನವರಿ 21 ರ ವರೆಗೆ ಎಲ್ಲೆಡೆ ದೇವಾಲಯಗಳನ್ನು ಸ್ವಚ್ಛಗೊಳಿಸಿ 22 ರಂದು ಪ್ರತಿ ಮನೆಗಳಲ್ಲಿ ರಾಮಜ್ಯೋತಿ ಬೆಳಗುವ ಮೂಲಕ ಶ್ರೀರಾಮನನ್ನು ಸ್ವಾಗತಿಸುವಂತೆ ಕರೆ ನೀಡಲಾಯಿತು. ಸ್ವಚ್ಚತಾ ಕಾರ್ಯದಲ್ಲಿ ಹಿಂದೂಪರ ಸಂಘಟನೆ ಹಾಗೂ ಬಿಜೆಪಿ ಮುಖಂಡರು ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು
ಅಯೋಧ್ಯೆ: ಜನವರಿ 22ರಂದು ಭಗವಾನ್ ರಾಮ ನಮಗೆಲ್ಲರಿಗೂ ದರ್ಶನವನ್ನು ನೀಡಲಿದ್ದಾನೆ. ಅಯೋಧ್ಯೆಯ ರಾಮ ಮಂದಿರದ (Ayodhya RamMandir) ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ (Pran Prathistha Ceremony) ನನ್ನನ್ನು ಆಹ್ವಾನಿಸಿರುವುದು ನನ್ನ ಅದೃಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ (PM-JANMAN) ಅಡಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ – ಗ್ರಾಮೀಣ (PMAY-G) ಫಲಾನುಭವಿಗಳನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಮೋದಿಯವರು ಮಾತನಾಡುತ್ತಾ ಈ ರೀತಿಯಾಗಿ ಹೇಳಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಇನ್ನೇನು ಕೆಲವು ದಿನಗಳ ನಂತರ ಅಂದರೆ ಜನವರಿ 22 ರಂದು ಭಗವಾನ್ ರಾಮನು ತನ್ನ ಭವ್ಯವಾದ ದೇವಾಲಯದಲ್ಲಿ ನಮಗೆ ದರ್ಶನವನ್ನು ನೀಡುತ್ತಾನೆ. ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಮುಂಚಿತವಾಗಿ ನಾನು 11 ದಿನಗಳ ವಿಶೇಷ ಅನುಷ್ಠಾನವನ್ನು ಪ್ರಾರಂಭಿಸಿದ್ದೇನೆ. ಮಾತಾ ಶಬರಿ ಇಲ್ಲದೆ ಭಗವಾನ್ ರಾಮನ ಕಥೆ ಅಪೂರ್ಣ ಎಂದು ಪ್ರಧಾನಿ ತಿಳಿಸಿದರು.
ಬೆಂಗಳೂರು : ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಟಿ-20 ಸರಣಿಯ ಅಂತಿಮ ಪಂದ್ಯ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಮೊದಲೆರಡು ಪಂದ್ಯಗಳನ್ನು ಗೆದ್ದು ಬೀಗಿರುವ ಭಾರತ ಮೂರನೇ ಪಂದ್ಯವನ್ನು ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ನಿರೀಕ್ಷೆಯಲ್ಲಿದೆ. ಮತ್ತೊಂದೆಡೆ, ಅಫ್ಘಾನಿಸ್ತಾನ ಭಾರತದ ವಿರುದ್ಧ ಚೊಚ್ಚಲ ಟಿ-20 ಪಂದ್ಯ ಗೆಲ್ಲುವ ಕನಸು ಕಾಣುತ್ತಿದೆ. ಭಾರತ ತಂಡದ ಆಟಗಾರರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದರು. ಈ ವೇಳೆ, ಅಪಘಾತದಿಂದ ಒಂದು ವರ್ಷದಿಂದ ಕ್ರಿಕೆಟ್ನಿಂದ ದೂರ ಉಳಿದಿದ್ದ ರಿಷಬ್ ಪಂತ್ ಕಾಣಿಸಿಕೊಂಡರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಂತ್ ಕೆಲವು ತಿಂಗಳುಗಳಿಂದ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಭಾರತ ತಂಡ ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಶಿವಂ ದುಬೆ, ಜಿತೇಶ್ ಶರ್ಮಾ (ವಿ.ಕೀ.), ಸಂಜು ಸ್ಯಾಮ್ಸನ್, ರಿಂಕು ಸಿಂಗ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್,…
ಬೆಂಗಳೂರು ಗ್ರಾಮಾಂತರ: ಇತ್ತೀಚಿಗೆ ಬೇರೆ ಮಕ್ಕಳನ್ನ ತಂದು ಭಿಕ್ಷಾಟನೆ ಮಾಡುವ ಬಗ್ಗೆ ಸಾಕಷ್ಟು ದೂರ ಕೇಳಿ ಬಂದಿತ್ತು ಅದಲ್ಲದೆ ತಮ್ಮದಲ್ಲದ ಮಕ್ಕಳನ್ನು ಕರೆತಂದು ಭಿಕ್ಷಾಟನೆ ಮಾಡುತ್ತಿದ್ದು ಈ ಬಗ್ಗೆ ಸಾರ್ವಜನಿಕರು ಪೊಲೀಸರಾಗಲಿ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ದೂರು ನೀಡುವಂತೆ ಇನ್ಸ್ ಪೆಕ್ಟರ್ ಚಂದ್ರಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡರು.. ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೀದಿಬದಿ ಮತ್ತು ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಣ ಕಾರ್ಯಾಚರಣೆ ವಿಚಾರವಾಗಿ ಆನೇಕಲ್ ತಾಲೂಕಿನ ಸಂತೆ ಬೀದಿಯಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಇನ್ನು ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಪೊಲೀಸ್ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.. ಇದೇ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಇನ್ಸ್ ಪೆಕ್ಟರ್ ಚಂದ್ರಪ್ಪ ರಸ್ತೆಯಲ್ಲಿ ಭಿಕ್ಷೆಯನ್ನು ಬೇಡುವ ಮಕ್ಕಳು ಸಾಮಾನ್ಯವಾಗಿ ಅವರದ್ದಲ್ಲ ಯಾರದೋ ಮಕ್ಕಳನ್ನು ತಂದು ಸಂತೆಗಳಲ್ಲಿ ಬೀದಿಗಳಲ್ಲಿ ಭಿಕ್ಷಾಟನೆಯನ್ನು ಮಾಡುತ್ತಿದ್ದಾರೆ ಹಾಗಾಗಿ ಸಾರ್ವಜನಿಕರು ಈ ಬಗ್ಗೆ ಗಮನಕ್ಕೆ ಬಂದರೆ ಪೊಲೀಸ್ ಇಲಾಖೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ…
ಬೆಳಗಾವಿ: ಕಾಂಗ್ರೆಸ್ನವರು ಬಿಜೆಪಿಯಿಂದ ಸಭ್ಯತೆ ಕಲಿಯುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಹೆಚ್ ಎಂ ರೇವಣ್ಣ ಹೇಳಿದ್ದಾರೆ. ಕಾಂಗ್ರೆಸ್ನವರು ಸಭ್ಯತೆ ಕಲಿಯಲಿ ಎಂಬ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘‘ಇದೇನು ಮೊದಲಲ್ಲ. ಈ ರಾಷ್ಟ್ರದಲ್ಲಿ ಅಂಬೇಡ್ಕರ್ ಅವರ ಸಂವಿಧಾನವನ್ನು ನಾವೆಲ್ಲರೂ ಅಪ್ಪಿ, ಒಪ್ಪಿ ಬಾಳುತ್ತಿದ್ದೇವೆ. ಆದರೆ, ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿದ್ದ ಆ ವ್ಯಕ್ತಿ ಸಂಸ್ಕಾರವಂತರಾಗಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಎಷ್ಟು ಜಾಣರು ಎಂದರೆ ಒಳ್ಳೆಯ ಮಗು ಹುಟ್ಟಿದರೆ ನಮ್ಮದು, ಕೆಟ್ಟ ಮುಗು ಹುಟ್ಟಿದರೆ ಬೀದಿಯದ್ದು ಎನ್ನುತ್ತಾರೆ‘‘ ಎಂದು ಲೇವಡಿ ಮಾಡಿದರು. ಟೀಕೆ ಮಾಡಲು ಇವರಿಗೆ ಒಳ್ಳೆಯ ಪದಗಳೇ ಸಿಗುವುದಿಲ್ಲ. ಹಿಂದೆ ಜೆ ಎಚ್ ಪಟೇಲರು ಸೇರಿ ಅನೇಕ ರಾಜಕಾರಣಿಗಳು ಬಹಳ ತೀಕ್ಷ್ಣವಾಗಿ ಟೀಕೆ ಮಾಡುತ್ತಿದ್ದರು. ಆದರೆ, ಬಿಜೆಪಿಯವರಿಗೆ ಪದಗಳು ಸಿಗುವುದಿಲ್ಲವೇ? ಈ ರೀತಿ ಮಾತಾಡುವುದು ಸಾರ್ವಜನಿಕವಾಗಿ ಒಳ್ಳೆಯದಲ್ಲ. ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ. ಹಾಗಾದರೆ…
ಯಶ್ ಅವರ ಹುಟ್ಟು ಹಬ್ಬಕ್ಕಾಗಿ ರಾತ್ರಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಅವಘಡದಲ್ಲಿ ಪ್ರಾಣ ಬಿಟ್ಟಿರುವ ಅಭಿಮಾನಿಗಳ ಮನೆಗೆ ಯಶ್ ತಂಡದವರು ಭೇಟಿ ಕೊಟ್ಟು ಪರಿಹಾರ ಧನ ನೀಡಲಿದ್ದಾರೆ. ಇಂದು ಬೆಳಗ್ಗೆ ಯಶ್ ಟೀಮ್ ಆಯಾ ಕುಟುಂಬಗಳಿಗೆ ಭೇಟಿ ಮಾಡಿ, ಪರಿಹಾರದ ಧನವನ್ನು ಹಸ್ತಾಂತರ ಮಾಡಲಿದ್ದಾರೆ. ಒಂದು ಕಡೆ ಯಶ್ ಪರಿಹಾರವನ್ನು ನೀಡುತ್ತಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ ಮಾಡಿದ್ದಾರೆ.…
ತುಮಕೂರು :- ಬಳಿಯ ಹೀರೆಹಳ್ಳಿ ಸಮೀಪ ರಾಯರಪಾಳ್ಯ ಗ್ರಾಮದ ನಿವಾಸಿ ಪ್ರತಾಪ್ ಅವರ ಇಟ್ಟಿಗೆ ಗೂಡಿನ ಒಳಗೆ ಅಡಗಿದ್ದ ಸುಮಾರು 8 ಅಡಿ ಉದ್ದದ ಹೆಬ್ಬಾವನ್ನು ವಾರ್ಕೊ ಸಂಸ್ಥೆಯವರು ರಕ್ಷಣೆ ಮಾಡಿರುವುದು ನಡೆದಿದೆ. ಬೃಹತ್ ಗಾತ್ರದ ಹೆಬ್ಬಾವುನ್ನು ಕಂಡು ಭಯಭೀತರಾಗಿದ್ದ ಕೆಲಸದವರು ಮಾಲಿಕರಿಗೆ ವಿಷಯ ತಿಳಿಸಿದ್ದಾರೆ. ತಕ್ಷಣ ಪ್ರತಾಪ್ ರವರು ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯವರಿಗೆ (ವಾರ್ಕೊ) ಕರೆಮಾಡಿ ತಿಳಿಸಿದ್ದು ಸಂಸ್ಥೆಯ ಉರಗ ತಜ್ಞರಾದ ಮನು ಅಗ್ನಿವಂಶಿ, ಚೇತನ್ ಮತ್ತು ಸ್ಯಾಮ್ಯುಯೆಲ್ ರವರು ಸ್ಥಳಕ್ಕೆ ಆಗಮಿಸಿ ಬೃಹತ್ ಗಾತ್ರದ ಹೆಬ್ಬಾವನ್ನು ಸುರಕ್ಷಿತವಾಗಿ ರಕ್ಷಿಸಿ ವಲಯ ಅರಣ್ಯಾಧಿಕಾರಿ ಮಾರ್ಗದರ್ಶನದಂತೆ ಸಮೀಪದ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ಹಾವುಗಳ ರಕ್ಷಣೆ ಮಾಡಲು ವಾರ್ಕೊ ಸಂಸ್ಥೆಯ ಸಹಾಯವಾಣಿಗೆ ಕರೆಮಾಡಬಹುದು ಎಂದು ಉರಗ ತಜ್ಞ ಮನು ತಿಳಿಸಿದರು.