Author: AIN Author

ಹೈದರಾಬಾದ್: ಗುರುವಾರ ಹೈದರಾಬಾದ್‌ನಲ್ಲಿ (Hyderabad) ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ನರ್‌ಗಳಾದ ಆರ್. ಅಶ್ವಿನ್ (R.Ashwin) ಮತ್ತು ರವೀಂದ್ರ ಜಡೇಜಾ (Ravindra Jadeja) ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ಬೌಲಿಂಗ್ ಜೋಡಿ ಎನಿಸಿಕೊಂಡಿದ್ದಾರೆ. ಈ ಜೋಡಿ 54 ಪಂದ್ಯಗಳಲ್ಲಿ 501 ವಿಕೆಟ್‌ಗಳನ್ನು ಗಳಿಸಿದ ಅನಿಲ್ ಕುಂಬ್ಳೆ ಮತ್ತು ಹರ್ಭಜನ್ ಸಿಂಗ್ ಅವರ ದಾಖಲೆ ಮುರಿದು 504 ವಿಕೆಟ್‌ಗಳನ್ನು ಪಡೆದಿದೆ 138 ಟೆಸ್ಟ್ ಪಂದ್ಯಗಳಲ್ಲಿ 1,039 ವಿಕೆಟ್‌ಗಳನ್ನು ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಮತ್ತು ಸ್ಟುವರ್ಟ್ ಬ್ರಾಡ್ ಜೋಡಿ ಕಬಳಿಸಿದೆ. ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಈ ಜೋಡಿ ಬರೆದಿದೆ. ಮಿಚೆಲ್ ಸ್ಟಾರ್ಕ್ ಮತ್ತು ನಾಥನ್ ಲಿಯಾನ್ 81 ಟೆಸ್ಟ್‌ಗಳಲ್ಲಿ 643 ವಿಕೆಟ್‌ಗಳನ್ನು ಪಡೆದು ದಾಖಲೆಯಲ್ಲಿ ನಂತರದ ಸ್ಥಾನದಲ್ಲಿದ್ದಾರೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಇಂದಿನಿಂದ ಆರಂಭಗೊಂಡ ಟೀಂ ಇಂಡಿಯಾ (Team India) ಹಾಗೂ ಇಂಗ್ಲೆಂಡ್ (England) ವಿರುದ್ಧದ ಮೊದಲ ಟೆಸ್ಟ್ ಪಂದ್ಯದ (IND vs…

Read More

ಬೆಂಗಳೂರಿನ ಬೆಡಗಿ ರುಕ್ಮಿಣಿ ವಸಂತ್ ಅವರು ಇದೀಗ ತೆಲುಗು ಸಿನಿಮಾರಂಗದಲ್ಲಿ ಬೇಡಿಕೆ ಹೆಚ್ಚಾಗಿದೆ. ರಶ್ಮಿಕಾ ಮಂದಣ್ಣ (Rashmika Mandanna), ಶ್ರೀಲೀಲಾರನ್ನು (Sreeleela) ಬಿಟ್ಟು ರುಕ್ಮಿಣಿ ವಸಂತ್‌ಗೆ (Rukmini Vasanth) ಸ್ಟಾರ್ ನಟರ ಜೊತೆ ನಟಿಸುವ ಅವಕಾಶ ಅರಸಿ ಬರುತ್ತಿದೆ. ‘ಸಪ್ತಸಾಗರದಾಚೆ ಎಲ್ಲೋ’ ಚಿತ್ರದ ತೆಲುಗು ವರ್ಷನ್ ಟಾಲಿವುಡ್‌ನಲ್ಲಿ ಹವಾ ಕ್ರಿಯೇಟ್ ಮಾಡಿದೆ. ರುಕ್ಮಿಣಿ ನಟಿಸಿದ ಪುಟ್ಟಿ ಪಾತ್ರ ತೆಲುಗು ಮಂದಿಗೆ ಮೋಡಿ ಮಾಡಿದೆ. ಹಾಗಾಗಿಯೇ ತೆಲುಗಿನಲ್ಲಿ ಕನ್ನಡದ ಬೆಡಗಿಗೆ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ವಿಜಯ್ ದೇವರಕೊಂಡ (Vijay Devarakonda) ನಟನೆಯ ಮುಂದಿನ ಚಿತ್ರದಲ್ಲಿ ನಟಿಸುವ ಅವಕಾಶ ರುಕ್ಮಿಣಿಗೆ ಸಿಕ್ಕಿದೆ ಎನ್ನಲಾಗಿತ್ತು. ಈ ಸುದ್ದಿ ಬೆನ್ನಲ್ಲೇ ತೆಲುಗಿನ ಮತ್ತೊಬ್ಬ ಸ್ಟಾರ್ ರವಿತೇಜಾ (Ravi Teja)  ಜೊತೆ ರುಕ್ಮಿಣಿ ನಟಿಸುತ್ತಾರೆ. ಈ ಚಿತ್ರದ ಬಗ್ಗೆ ಮಾತುಕತೆ ಆಗಿದೆ ಎನ್ನಲಾಗುತ್ತಿದೆ. ರವಿತೇಜಾ (Ravi Reja) ನಟನೆಯ ಮುಂಬರುವ ಹೊಸ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿಯಾಗಿ ಆಯ್ಕೆ ಆಗಿರುವ ಮಾತುಗಳು ಕೇಳಿ ಬರುತ್ತಿದೆ. ಈಗಾಗಲೇ ಚಿತ್ರಕ್ಕೆ ನಟಿ…

Read More

ಗಣರಾಜ್ಯೋತ್ಸವದ ಮುನ್ನಾ ದಿನ 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರಕಟಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ದೊರೆತಿದೆ. ಸಾಧಕರಿಗೆ ಪದ್ಮ ವಿಭೂಷಣ, ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಅದರಂತೆ ಹಲವು ವರ್ಷಗಳಿಂದ ಕಲಾ ಸೇವೆ ಮಾಡಿರುವ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆತಿದೆ. ಕಲೆ ಕ್ಷೇತ್ರದಲ್ಲಿ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದವರು 1. ವೈಜಯಂತಿಮಾಲಾ ಬಾಲಿ (ತಮಿಳುನಾಡು) 2.ಮೆಗಾಸ್ಟಾರ್ ಚಿರಂಜೀವಿ (ಆಂಧ್ರಪ್ರದೇಶ) 3.ಪದ್ಮ ಸುಬ್ರಹ್ಮಣ್ಯಂ (ತಮಿಳುನಾಡು) ಕಲೆ ಕ್ಷೇತ್ರದಲ್ಲಿ ಪದ್ಮ ಭೂಷಣ ಪ್ರಶಸ್ತಿ ಭಾಜನರಾದವರು ಮಿಥುನ್ ಚಕ್ರವರ್ತಿ ದತ್ತಾತ್ರೇಯ ಅಂಬಾದಾಸ್ ಮೇಲು ಉಷಾ ಉತ್ತುಪ್ ತಮಿಳಿನ ನಟ ವಿಜಯಕಾಂತ್

Read More

ಗಾಂಧೀನಗರ: ಗುಜರಾತ್‍ನ ಸೂರತ್ ಮೂಲದ ವಜ್ರ ವ್ಯಾಪಾರಿ 11 ಕೋಟಿ ರೂ. ಮೌಲ್ಯದ ಕಿರೀಟವನ್ನು  ರಾಮಲಲ್ಲಾ ಮೂರ್ತಿಗೆ  ದೇಣಿಗೆ ನೀಡಿದ್ದಾರೆ. ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿ ಮಾಲೀಕರಾದ ಮುಕೇಶ್ ಪಟೇಲ್ ದೇಣಿಗೆ ನೀಡಿರುವ ವ್ಯಕ್ತಿ. ಸೂರತ್‍ನಲ್ಲಿ ವಜ್ರ ವ್ಯಾಪಾರಿಯಾಗಿರುವ ಮುಕೇಶ್ ಅವರು ಪ್ರಭು ಶ್ರೀರಾಮನಿಗಾಗಿ 6 ಕೆ.ಜಿ ತೂಕದ ಚಿನ್ನ ಮತ್ತು ವಜ್ರಗಳಿಂದ ತಯಾರಿಸಿರುವ ಕಿರೀಟವನ್ನು ಕೊಡುಗೆಯಾಗಿ ನೀಡಿದ್ದಾರೆ. ಅಯೋಧ್ಯೆಯ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ  ಇಡೀ ದೇಶವೇ ಸಾಕ್ಷಿಯಾಗಿತ್ತು. ಪ್ರಭು ಶ್ರೀರಾಮ ಚಿನ್ನದ ಅಭರಣಗಳಿಂದ ಕಂಗೊಳಿಸುತ್ತಿದ್ದನು. ಇದೇ ಹೊತ್ತಲ್ಲಿ ಸೂರತ್‍ನ  ವಜ್ರ ವ್ಯಾಪಾರಿ ನೀಡಿರುವ 11 ಕೋಟಿ ರೂಪಾಯಿ ಮೌಲ್ಯ ಬೆಲೆ ಬಾಳುವ ಚಿನ್ನ ಮತ್ತು ವಜ್ರಗಳಿಂದ ತಯಾರಿಸಿರುವ ಕಿರೀಟ ದಾನ ಮಾಡಿದ್ದಾರೆ .  ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಕುಟುಂಬ ಸಮೇತರಾಗಿ ಮುಕೇಶ್ ಪಟೇಲ್ ಅಯೋಧ್ಯೆಗೆ ಆಗಮಿಸಿದ್ದರು. ಬಳಿಕ ಖುದ್ದಾಗಿ ಮಂದಿರದ ಪ್ರಧಾನ ಅರ್ಚಕರು ಮತ್ತು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿಗಳಿಗೆ ಸೂಕ್ಷ್ಮವಾಗಿ ರಚಿಸಲಾದ ಕಿರೀಟವನ್ನು ಹಸ್ತಾಂತರ ಮಾಡಿದ್ದಾರೆ. ಹಲವಾರು…

Read More

ಭಾರತದ ವಿವಿಧ ಭಾಗಗಳಲ್ಲಿ ಮೊಮೊಸ್ ಟ್ರೆಂಡ್ ವೇಗವಾಗಿ ಹೆಚ್ಚುತ್ತಿದೆ. ನೇಪಾಳದಿಂದ ಆರಂಭವಾದ ಈ ಖಾದ್ಯ ದೇಶದ ಮೂಳೆ ಮೂಲೆಗಳಿಗೂ ಹಬ್ಬಿದೆ. ಸಂಜೆಯಾಗುತ್ತಿದ್ದಂತೆಯೇ ರಸ್ತೆ ಬದಿಗಳಲ್ಲಿ ಮೊಮೊಸ್ ಸ್ಟಾಲ್‌ಗಳು  ಎದ್ದು ನಿಲ್ಲುತ್ತವೆ. ಈ ಖಾದ್ಯ ತಿನ್ನಲು ಬಲು ರುಚಿ. ಈ ರುಚಿಯ ಕಾರಣದಿಂದಲೇ ಇದನ್ನು ಎಷ್ಟು ತಿಂದರೂ ಕಡಿಮೆ ಎಂದೆನಿಸುತ್ತದೆ.    ಆದರೆ ರಸ್ತೆ ಬದಿಯಲ್ಲಿ ತರಾತುರಿಯಲ್ಲಿ ತಿನ್ನುವ ಮೊಮೊಸ್ ನಿಮ್ಮ ದೇಹಕ್ಕೆ ತುಂಬಾ ಅಪಾಯಕಾರಿ ಎಂದು ನಿಮಗೆ ತಿಳಿದಿದೆಯೇ? ಅದರಲ್ಲಿ ಎಣ್ಣೆ ಮತ್ತು ಮಸಾಲೆಗಳಿಲ್ಲ ಎಂದು ನಮಗೆ ಅನಿಸುತ್ತದೆ. ಎಣ್ಣೆ ಮತ್ತು ಮಸಾಲೆ ಇಲ್ಲದಿರುವಾಗ ಇದು ಹೇಗೆ ಅಪಾಯಕಾರಿ ಎಂದು ಹಲವರು ಕೇಳುತ್ತಾರೆ. ಎಷ್ಟೇ ತಿಂದರೂ ಅದು ದೇಹಕ್ಕೆ ಹಾನಿಕಾರಕವಲ್ಲ ಎಂದು ಭಾವಿಸುವುದು ತುಂಬಾ ತಪ್ಪು. ಬೊಜ್ಜಿನ ಸಮಸ್ಯೆ ಹೆಚ್ಚಾಗುತ್ತೆ: ಮೊಮೊಸ್ ತಯಾರಿಸಲು ಮೈದಾ ಬಳಸಲಾಗುತ್ತದೆ.  ಮೈದಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಇರುವ ಪಿಷ್ಟದಿಂದಾಗಿ ಸ್ಥೂಲಕಾಯದ (obesity) ಅಪಾಯ ಹೆಚ್ಚಾಗುತ್ತದೆ. ಇದಲ್ಲದೆ, ಮೈದಾ ತಿನ್ನುವುದರಿಂದ ರಕ್ತದಲ್ಲಿ ಕೊಲೆಸ್ಟ್ರಾಲ್ ಮತ್ತು ಟ್ರೈಗ್ಲಿಸರೈಡ್ (ಕೆಟ್ಟ ಕೊಲೆಸ್ಟ್ರಾಲ್) ಮಟ್ಟವನ್ನು…

Read More

ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಒಂದು ವಾರದಲ್ಲಿ ರೈತರಿಗೆ ಬರ ಪರಿಹಾರದ ಮೊದಲ ಕಂತಿನ ಹಣ ಪಾವತಿಯಾಗುತ್ತದೆ. ಈ ಹಿಂದೆ ಬರ ಪರಿಹಾರ, ಅತೀವೃಷ್ಟಿ ಪರಿಹಾರ ನೀಡುವಲ್ಲಿ ಸಾಕಷ್ಟು ನ್ಯೂನ್ಯತೆಗಳಿದ್ದವು. ಎಷ್ಟೋ ಜನ ಬೆಳೆಯನ್ನೇ ಇಡದಿದ್ದರೂ ಅವರಿಗೂ ಪರಿಹಾರ ಸಿಗುತ್ತಿತ್ತು. ಬೆಳೆ ಹಾನಿಯಾದವರಿಗೆ ಪರಿಹಾರ ಸಿಗುತ್ತಿರಲಿಲ್ಲ ಎಂದರು. ಹಿಂದಿನ ಸರ್ಕಾರ ಇದ್ದಾಗ, ನಾನು ಕೃಷಿ ಸಚಿವನಿದ್ದಾಗಲೂ ನೋಡಿದ್ದೇನೆ. ಯಾರದ್ದೋ ಜಮೀನು ಮತ್ತೊಬ್ಬರಿಗೆ ಹಣ ಪಾವತಿಯಾಗಿತ್ತಿತ್ತು. ರೈತರ ಬೆಳೆಯೇ ಬೇರೆ ಪರಿಹಾರ ಬರುವುದೇ ಬೇರೆ ಬೆಳೆಗೆ. ಅಧಿಕಾರಿಗಳು ಮಾಹಿತಿ ಸೇರಿಸುವಾಗ ತಪ್ಪುಗಳಾಗುತ್ತಿದ್ದವು. ಇದೆಲ್ಲಾ ಸರಿಮಾಡಿ ಬೆಳೆಸಮೀಕ್ಷೆ ಆಧಾರದಲ್ಲಿ ಹಣ ಪಾವತಿಯಾಗುತ್ತದೆ ಎಂದರು. ವ್ಯವಸ್ಥೆ ಸರಿಪಡಿಸಲು ಎರಡು ತಿಂಗಳು ತಡವಾಗಿದೆ. ಒಂದು ವಾರದಲ್ಲಿ ಮೊದಲ ಕಂತಿನ ಹಣ ಬರುತ್ತದೆ. 12 ಲಕ್ಷ ಜನರಿಗೆ ಆರ್‌ಬಿಐಗೆ ಪೇಮೆಂಟ್ ಆರ್ಡರ್ ಕಳುಹಿಸಿದ್ದೇವೆ. ಇನ್ನೂ 20 ಲಕ್ಷ…

Read More

ಮೈಸೂರು: 2024ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ (Padma Awards 2024) ಆಯ್ಕೆಯಾಗಿರುವವರ ಪಟ್ಟಿ ಗುರುವಾರ ಪ್ರಕಟಗೊಂಡಿದೆ. ಕರ್ನಾಟಕದ ಇಬ್ಬರು ಸೇರಿ ಒಟ್ಟು 34 ಮಂದಿಯನ್ನು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಹಾಗೆ ಮೈಸೂರಿನ  ಆದಿವಾಸಿ ಮುಖಂಡನಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ  ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಮೊತ್ತ ಹಾಡಿಯ ನಿವಾಸಿ. ಜೇನು ಕುರುಬ ಸಮುದಾಯದ ಸೋಮಣ್ಣನಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಸೋಮಣ್ಣ: ಮೈಸೂರಿನ ಬುಡಕಟ್ಟು ಕಲ್ಯಾಣ ಕಾರ್ಯಕರ್ತ ಸೋಮಣ್ಣ ಅವರು 4 ದಶಕಗಳಿಂದ ಜೇನು ಕುರುಬ ಜನಾಂಗದ ಉನ್ನತಿಗಾಗಿ ಅವಿರತವಾಗಿ ಶ್ರಮಿಸುತ್ತಿದ್ದಾರೆ. ಸಮಾಜಕಾರ್ಯ ಕ್ಷೇತ್ರದಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದಾರೆ.

Read More

ದೇಹ ಸೌಂದರ್ಯಕ್ಕಾಗಿ ಎಷ್ಟೋ ಜನ ತುಂಬ ಪ್ರಯತ್ನ ಪಡುತ್ತಿರುರತ್ತಾರೆ. ನಾವು ಎಲ್ಲರ ಮುಂದೆ ಚೆನ್ನಾಗಿ ಕಾಣಿಸಿಕೊಳ್ಳಬೇಕು ಎಂಬುದು ಪ್ರತಿಯೊಬ್ಬರ ಆಸೆಯಾಗಿರುತ್ತೆ. ಆದರೆ ಏನೋ ಮಾಡಲು ಹೋಗಿ, ಏನೋ ಮಾಡಿಕೊಂಡು ಇರುವ ಸೌಂದರ್ಯವನ್ನು ಹಾಳು ಮಾಡಿಕೊಳ್ಳುವವರು ತುಂಬಾ ಜನ ಇದ್ದಾರೆ. ಅಂತವರಿಗೆ ನೈಸರ್ಗಿಕವಾಗಿ ಹೇಗೆ ನಮ್ಮ ದೇಹದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು ಎಂಬುವುದಕ್ಕೆ ಮಾಹಿತಿ ಈ ಕೆಳಗಿನಂತಿದೆ. ದಾಸವಾಳದಿಂದ ತಯಾರಿಸಿದ ಚಹಾವನ್ನು ಸೇವಿಸುವುದರಿಂದ ಚರ್ಮದ ಕಾಂತಿ ಹೆಚ್ಚುವುದು, ಅಧಿಕ ರಕ್ತದೊತ್ತಡ ನಿಯಂತ್ರಣ, ತೂಕ ನಷ್ಟ ಮತ್ತು ಕೂದಲು ಬೆಳವಣಿಗೆಗೆ ಇದು ಸಹಾಯಕವಾಗಿದೆ. ದಾಸವಾಳದ ಚಹಾದಿಂದಾಗುವ ಸೌಂದರ್ಯ ಪ್ರಯೋಜನಗಳು: 1. ಹೊಸ ಚರ್ಮದ ಬೆಳವಣಿಗೆಗೆ ಸಹಾಯಕ: ದಾಸವಾಳದಲ್ಲಿ ವಿಟಮಿನ್ ಸಿ ಸಮೃದ್ಧವಾಗಿರುವುದರಿಂದ ಈ ಚಹಾ ಕುಡಿಯುವುದರಿಂದ ದೇಹದಲ್ಲಿ ಹಾಳಾದ ಚರ್ಮ ಬೆಳವಣಿಗೆಗೆ ಸಹಾಯಕವಾಗಿದೆ. ನಿಮ್ಮ ಚರ್ಮವನ್ನು ಆರೋಗ್ಯಕರ, ತಾರುಣ್ಯ ಮತ್ತು ಹೊಳೆಯುವಂತೆ ಮಾಡಲು ಉಪಯುಕ್ತವಾಗುತ್ತದೆ. 2. ನಿಮ್ಮ ಚರ್ಮವನ್ನು ಹೈಡ್ರೇಟ್ ಮಾಡುತ್ತದೆ. 3. ಉರಿಯೂತವನ್ನು ಸರಾಗಗೊಳಿಸುತ್ತದೆ: ಕಪ್ಪು ಕಲೆಗಳು, ಚರ್ಮ ಸುಕ್ಕಾಗಿರುವುದನ್ನು ಕಡಿಮೆ ಮಾಡಲು ಸಹಾಯ…

Read More

ವಿಜಯಪುರ: ನಿನ್ನೆ ರಾತ್ರಿ  8.40  ನಿಮಿಷಕ್ಕೆ ಭೂ ಕಂಪನದ ಅನುಭವ ವಿಜಯಪುರ ಜನರಿಗೆ ಅನುಭವವಾಗಿದೆ. ನಗರದ ಮನಗೂಳಿ ಪಟ್ಟಣದಲ್ಲಿ ಭೂ ಕಂಪನದ ಅನುಭವ ಆಗಿದ್ದು ರಿಕ್ಟರ್ ಮಾಪಕದಲ್ಲಿ 2.6 ತೀವೃತೆ ದಾಖಲಾಗಿದೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣವಾಗಿದ್ದು ಅಲ್ಲಿ ರಾತ್ರು 8.40ರವೇಳೆ ಭೂಕಂಪನದ ಅನುಭವವಾಗಿದ್ದು ಜನರಲ್ಲಿ ಆತಂಕದ ಮನೆ ಮಾಡಿದೆ. ಈ ಬಗ್ಗೆ ಭೂ ಕಂಪನದ ಕುರಿತು ಜಿಲ್ಲಾಡಳಿತದಿಂದ ಮಾಹಿತಿ ದೊರೆತಿದೆ. ಸರಣಿ ಭೂಕಂಪನಕ್ಕೆ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಆಗಾಗ ಸಂಭವಿಸುತ್ತಿದೆ. ಇದೀಗ ಜಿಟಿ ಜಿಟಿ ಮಳೆಗೆ ಮನೆಯ ಛಾವಣಿ ನೆನದಿವೆ. ಹೀಗಾಗಿ ಜನರು ಆತಂಕದಲ್ಲಿದ್ದಾರೆ.

Read More

ಹಸಿಕಡಲೆ ಇಷ್ಟ ಇರದ ಜನರೇ ಇರಲಾರರು ಅನಿಸುತ್ತದೆ. ಹಸಿಗಡಲೆ ತಿನ್ನಲು ಬಹಳ ರುಚಿಕರ ವಾಗಿರುತ್ತದೆ. ಅಡುಗೆಯಲ್ಲಿ ವಿವಿಧ ರೀತಿಯಲ್ಲಿ ಹಸಿಗಡಲೆ ಬಳಸಲಾಗುತ್ತದೆ. ಇದು ಸಾಕಷ್ಟು ಕ್ಯಾಲೋರಿ ಕೊಬ್ಬಿನಿಂದ ಸಮೃದ್ಧವಾಗಿದೆ. ಈ ಕೆಲವು ಸಮಸ್ಯೆ ಇರುವವರು ನೆಲಕಡಲೆಯನ್ನು ತಿನ್ನೋದ್ರಿಂದ ದೂರ ಉಳಿಯುವುದು ಒಳ್ಳೆಯದು ಎನ್ನಲಾಗುತ್ತದೆ. ಆರೋಗ್ಯಕರವಾಗಿ ಜೀವನ ನಡೆಸಲು ಕೆಲವೊಂದು ಆಹಾರಗಳ ಆಗತ್ಯತೆ ಇರುತ್ತದೆ. ಗರ್ಭಿಣಿ ಮಹಿಳೆಯರ ಆರೋಗ್ಯದ ದೃಷ್ಟಿಯಲ್ಲಿ ನೋಡುವುದಾದರೆ ಕಡಲೆ ಬೀಜಗಳು ತುಂಬಾ ಪ್ರಯೋಜನಕಾರಿ. ಆದರೆ ಇವುಗಳನ್ನು ಮಿತ ಪ್ರಮಾಣದಲ್ಲಿ ಮಾತ್ರ ಸೇವನೆ ಮಾಡಬೇಕು ಎಂದು ಹೇಳುತ್ತಾರೆ. ಕಡಲೆ ಬೀಜಗಳನ್ನು ಸೇವನೆ ಮಾಡುವ ಮುಂಚೆ ಅದಕ್ಕೆ ಉಪ್ಪು ಬೆರೆಸಬೇಡಿ. ಏಕೆಂದರೆ ಉಪ್ಪಿನ ಅಂಶ ರಕ್ತದ ಒತ್ತಡ ಹೆಚ್ಚಾಗುವಂತೆ ಮಾಡುತ್ತದೆ. ಹಸಿಗಡಲೆ ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ವಿಟಮಿನ್ ಸಿ ನಲ್ಲಿ ಸಮೃದ್ಧವಾಗಿದೆ. ಅಲ್ಲದೆ, ವೈರಲ್ ಸೋಂಕಿನ ಅಪಾಯವನ್ನು ಸಹ ಕಡಿಮೆ ಮಾಡುತ್ತದೆ. ಹಸಿ ಕಡಲೆಯಲ್ಲಿ ಕರಗುವ ನಾರು ಇದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ಹತೋಟಿಗೆ ತರಲು ಸಹಾಯ ಮಾಡುತ್ತದೆ.…

Read More