ಬೆಂಗಳೂರು: ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ತಂದೆ ಮತ್ತು ಐದು ವರ್ಷದ ಮಗಳು ಮೃತಪಟ್ಟಿರುವ ಘಟನೆ ನೆಲಮಂಗಲ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನೆಲಮಂಗಲ ಬಳಿಯ ಅಡಕಿಮಾರನಹಳ್ಳಿಯ ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದೆ. ನೆಲಮಂಗಲ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗಂಡ, ಹೆಂಡತಿ ಹಾಗೂ ಮಗು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಭೀಕರ ಅಪಘಾತದ ಪರಿಣಾಮ ತಂದೆ (Father) ಹಾಗೂ ನಾಲ್ಕು ವರ್ಷದ ಮಗು (Child) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಿಂದ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಚಿಕ್ಕಪೇಟೆಯ ಅಮಿತ್ (32) ಹಾಗೂ 5 ವರ್ಷದ ಮಗಳು ಅನಿತಾ ಮೃತಪಟ್ಟವರು. ಅಮಿತ್ ಪತ್ನಿ ಕುಸುಮಾ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ತಂದೆ ಹಾಗೂ ಮಗಳ ಇಬ್ಬರ ತಲೆಗೂ ಗಂಭೀರ ಪೆಟ್ಟಾಗಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟರು. ಅಮಿತ್ ಮತ್ತು ಕುಸುಮಾ ಅವರು ತಮ್ಮ ಪುಟ್ಟ ಮಗಳೊಂದಿಗೆ ಸಂಕ್ರಾಂತಿ ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಅಲ್ಲಿಂದ ಹಬ್ಬ ಮುಗಿಸಿ ಮರಳುವಾಗ ನೆಲಮಂಗಲ ಬಳಿಯ ಅಡಕಮಾರನಹಳ್ಳಿಯ…
Author: AIN Author
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಹಾಗೂ ಅತಿ ವೇಗದ ಬಸ್ ಚಾಲನೆಗೆ ಫುಡ್ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. https://ainlivenews.com/the-prime-ministers-favorite-song-poojisalende-hoogala-paat/ ಬಸವಾರಾಜು ಮೃತ ಫುಡ್ ಡೆಲಿವರಿ ಬಾಯ್. ತಡರಾತ್ರಿ 2 ಗಂಟೆ ವೇಳೆ ಸ್ಯಾಟಲೈಟ್ ಬಸ್ ನಿಲ್ದಾಣದ ಮುಂಭಾಗ ಈ ಅಪಘಾತ ಸಂಭವಿಸಿದೆ. ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ರೋಡ್ ಕಡೆಗೆ ರಾತ್ರಿ ಫುಡ್ ಡೆಲಿವರಿ ಮಾಡಲು ಬಸವರಾಜು ತೆರಳುತ್ತಿದ್ದ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಸ್ಥಳದಲ್ಲೇ ಬಸವರಾಜು ಮೃತಪಟ್ಟಿದ್ದಾನೆ.
ಬೆಂಗಳೂರು : ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದರು. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಡ ಹೆಚ್ಚಾಗಬೇಕು. ವೈಜ್ಞಾನಿಕವಾಗಿ ಸಮರ್ಥ ಆರೋಪ ಪಟ್ಟಿ ಸಲ್ಲಿಕೆಯಾಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು. ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ. ಶಿಕ್ಷೆ ಪ್ರಮಾಣ ಹೆಚ್ಚಾಗಬೇಕು. ಇಲ್ಲದಿದ್ದರೆ ಡಿಸಿಪಿ ಗಳನ್ನೇ ಈ ವೈಫಲ್ಯಕ್ಕೆ ಹೊಣೆ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿದರು. ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು ಎಂದು ಸೂಚಿಸಿದರು. ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ…
ಬೆಂಗಳೂರು ಗ್ರಾಮಾಂತರ: ಕಾರವಾರದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಮಾತನಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಎನ್ಐಎಸ್ ಯು ಸಂಘಟನೆ ವತಿಯಿಂದ ಆನೇಕಲ್ ಪೊಲೀಸ್ ಠಾಣೆಯಲ್ಲಿ ಅನಂತ್ ಕುಮಾರ್ ಹೆಗಡೆ ವಿರುದ್ಧ ಕೇಸ್ ದಾಖಲು ಮಾಡುವಂತೆ ದೂರು ನೀಡಿದರು ಕಾರವಾರದಲ್ಲಿ ಮಾತನಾಡುವಾಗ ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ಮೂರ್ಖ ರಾಮಯ್ಯನವರು ಹಿಂದು ಸಮಾಜವನ್ನು ಒಡೆಯುತ್ತಿದ್ದಾರೆ ಏಕವಚನದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದರು ಹೇಳಿಕೆನ ಖಂಡಿಸಿ ಎನ್ಐಎಸ್ಯು ಸಂಘಟನೆಗಳು ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಇನ್ನು ಅನಂತ್ ಕುಮಾರ್ ನನ್ನ ಬಂಧಿಸುವಂತೆ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ಚಾಮರಾಜನಗರ:- ಪುಣಜನೂರು ಸ್ಟೇಟ್ ಫಾರೆಸ್ಟ್‌ನಲ್ಲಿ ವ್ಯವಸಾಯ ಮಾಡಲು ತೊಂದರೆ ಕೊಡುತ್ತಿರುವ ಅರಣ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಕ್ರಮವನ್ನು ವಿರೋಧಿಸಿ ದಸಂಸ ಪದಾಧಿಕಾರಿಗಳು ಮತ್ತು ನಗರದ ಅಂಬೇಡ್ಕರ್ ಬಡಾವಣೆಯ ನಿವಾಸಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಪ್ರತಿಭಟನಾಕಾರರು ಅರಣ್ಯ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ವಿರುದ್ಧ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಅವರ ಹಾಕಿದರು. ಚಾಮರಾಜನಗರ ತಾಲೂಕಿನ ಎಚ್.ಡಿ.ಫಾರೆಸ್ಟ್ ಪುಣಜನೂರು ಸ್ಟೇಟ್ ಫಾರೆಸ್ಟ್‌ನ ಸ.ನಂ. 1. 3. 5ರಲ್ಲಿ ಸುಮಾರು 150 ಜನರಿಗೆ ಸೇರಿದ ಜಮೀನಿದ್ದು, ಕಳೆದ 50 ವರ್ಷಗಳಿಂದಲೂ ವ್ಯವಸಾಯ ಮಾಡಿಕೊಂಡು ಬರುತ್ತಿದ್ದೇವೆ. ಆದರೆ, ಕಳೆದ 2-3 ವರ್ಷಗಳಿಂದ ಕೋವಿಡ್ ಕಾರಣ ಹಾಗೂ ಆರ್ಥಿಕ ಸಮಸ್ಯೆಯಿಂದಾಗಿ ವ್ಯವಸಾಯ ಮಾಡಲು ಸಾಧ್ಯವಾಗಿಲ್ಲ. ಆರ್ಥಿಕ ಮಟ್ಟವನ್ನು ಸುಧಾರಿಸಿಕೊಂಡು ಜಮೀನನ್ನು ಉಳುಮೆ ಮಾಡಲು ಜಮೀನಿಗೆ ತೆರಳಿದ ಸಂದರ್ಭದಲ್ಲಿ ಅರಣ್ಯ ಇಲಾಖೆಯವರು ಜಮೀನನ್ನು ಉಳುಮೆ ಮಾಡದಂತೆ ನಮ್ಮನ್ನು ತಡೆದು, ನಮಗೆ ತೊಂದರೆ ಕೊಡುತ್ತಿದ್ದಾರೆ. ಉಳುಮೆ ನಿಲ್ಲಿಸಿ…
ಬೆಂಗಳೂರು: ‘ಪೂಜಿಸಲೆಂದೆ ಹೂಗಳ ತಂದೆ..’ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ತಮ್ಮದೇ ಶೈಲಿಯಲ್ಲಿ ಹಾಡಿ ಯೂಟ್ಯೂಬ್ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು.ಈ ಹಾಡಿನ ಲಿಂಕ್ನ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ನಲ್ಲಿ ಹಂಚಿಕೊಂಡು ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ಹಾಡಿನ ಬಗ್ಗೆ ಹಾಗೂ ಶಿವಶ್ರೀ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಶಿವಶ್ರೀ ಯಾರು ಎಂದು ಸೋಶಿಯಲ್ ಮೀಡಿಯಾದಲ್ಲಿ ಹುಡುಕಾಟ ನಡೆದಿದೆ. ಗಾಯಕಿ ಶಿವಶ್ರೀ ಯಾರು..? ಶಿವಶ್ರೀ ಅವರು ಕಲಾವಿದರ ಕುಟುಂಬದಿಂದಲೇ ಬಂದವರು. ಹೀಗಾಗಿ, ಅವರಿಗೆ ಸಣ್ಣ ವಯಸ್ಸಿನಿಂದಲೇ ಸಂಗೀತದ ಬಗ್ಗೆ ಒಲವು ಇತ್ತು. ಶಾಸ್ತ್ರೀಯ ಸಂಗೀತ, ಭರತನಾಟ್ಯವನ್ನು ಅವರು ಕಲಿತಿದ್ದಾರೆ. ಶಿವಶ್ರೀ ಅವರ ತಾತ ಖ್ಯಾತ ಸಂಗೀತಕಾರರಾಗಿದ್ದರು. ಶಿವಶ್ರೀ ಅವರ ತಂದೆ ಖ್ಯಾತ ಮೃದಂಗ ವಾದಕ ವಿದ್ವಾನ್ ಸೀರ್ಕಾಜಿ ಜೆ. ಸ್ಕಂದಪ್ರಸಾದ್. ಶಿವಶ್ರೀ ಅವರು ಎ.ಎಸ್. ಮುರಳಿ ಮತ್ತು ಆಚಾರ್ಯ ಚೂಡಾಮಣಿ ಅವರಲ್ಲಿ ಸಂಗೀತ ಕಲಿತಿದ್ದಾರೆ. ರೋಜಾ ಕಣ್ಣನ್ ಅವರಿಂದ ಭರತನಾಟ್ಯ ತರಬೇತಿ ಪಡೆದಿದ್ದಾರೆ. ಶಿವಶ್ರೀ ಅವರ ಸಹಜ ಪ್ರತಿಭೆ, ಕುಟುಂಬದ…
ಬಳ್ಳಾರಿ:- ಕಾಂತರಾಜ್ ವರದಿ ಜಾರಿಗೆ ಒತ್ತಾಯಿಸಿ ಶೋಷಿತ ವರ್ಗಗಳಿಂದ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೇಸ್ ಪಕ್ಷ ಇಂದು ರಾಜ್ಯದಲ್ಲಿ ಆಡಳಿತದಲ್ಲಿ ಇದೆ. ಶೋಷಿತ ವರ್ಗದ ನಾಯಕರಾದ ಸಿದ್ದರಾಮಯ್ಯ ಇಂದು ಮುಖ್ಯಮಂತ್ರಿ ಇದ್ದಾರೆ. ಆದರೆ ಅವರ ಸರ್ಕಾರದ ಇತರೆ ನಾಯಕರು ಕಾಂತರಾಜ್ ವರದಿಯನ್ನು ಜಾರಿಗೆ ತರದಂತೆ ಒತ್ತಾಯ ಹಾಕುತ್ತಿದ್ದಾರೆ.ರಾಜ್ಯದಲ್ಲಿ ಬೃಹತ್ ಪ್ರಮಾಣದಲ್ಲಿ ಬಹು ಸಂಖ್ಯಾತರಿದ್ದೆವೆ, ಆದರೂ ಇಂದಿನ ಆಧುನಿಕ ಕಾಲದಲ್ಲಿಯು ಶೋಷಿತ ವರ್ಗಕ್ಕೆ ನ್ಯಾಯ ಸಿಗುತ್ತಿಲ್ಲ. ಇದು ಹೀಗೆ ಮುಂದುವರೆಯಬಾರದು ಎನ್ನುವ ನಿಟ್ಟಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಶೋಷಿತ ವರ್ಗಕ್ಕೆ ಅನಾನುಕೂಲವಾಗುವ ನಿಟ್ಟಿನಲ್ಲಿ ಇಂದಿನ ಕೇಂದ್ರ ಸರ್ಕಾರಗಳು ವರ್ತಿಸುತ್ತಿವೆ. ಶೋಷಿತ ವರ್ಗಗಳಿಗೆ ಇರುವ ಸೌಲಭ್ಯಗಳನ್ನು ಸಾಕಷ್ಟು ಕಡಿತಗೊಳ್ಳಿಸಿದ್ದಾರೆ. ಈ ಕುರಿತು ಜನರನ್ನು ಜಾಗೃತಿಗೊಳ್ಳಿಸಲು ಇದೆ 22ಕ್ಕೆ ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗಿದೆ ಎಂದು ಸಮುದಾಯದ ಮುಖಂಡರು ಹೇಳಿದ್ದಾರೆ.
ದೆಹಲಿ: ಕನ್ನಡದ (Kannada) ಅತ್ಯಂತ ಜನಪ್ರಿಯ ಹಾಡುಗಳಲ್ಲಿ ಒಂದಾದ ‘ಪೂಜಿಸಲೆಂದೇ ಹೂಗಳ ತಂದೆ’ ಹಾಡಿಗೆ ಪ್ರಧಾನಿ ಮೋದಿ (Narendra Modi) ಫಿದಾ ಆಗಿದ್ದಾರೆ. ಖ್ಯಾತ ಗಾಯಕಿಯೊಬ್ಬರು ಹಾಡಿದ ಈ ಹಾಡಿನ ತುಣುಕನ್ನು ಮೋದಿ ಎಕ್ಸ್‌ನಲ್ಲಿ (X) ಹಂಚಿಕೊಂಡಿದ್ದಾರೆ. ಶಿವಶ್ರೀ ಸ್ಕಂದ ಪ್ರಸಾದ್ (Sivasri Skandaprasad) ಹಾಡಿರುವ ವಿಡಿಯೋವನ್ನು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಶೇರ್ ಮಾಡುವ ಮೂಲಕ ಹರ್ಷ ವ್ಯಕ್ತಪಡಿಸಿದ್ದಾರೆ. ಶ್ರೀರಾಮನ ಶಕ್ತಿಯನ್ನು ಬಿಂಬಿಸುವ, ಎತ್ತಿಹಿಡಿಯುವ ಅದ್ಭುತ ಹಾಡಿದು. ಇಂತಹ ಪ್ರಯತ್ನಗಳು ನಮ್ಮ ಸಂಸ್ಕೃತಿ, ಪರಂಪರೆಯನ್ನು ಉಳಿಸುತ್ತದೆ ಎಂದು ಗುಣಗಾನ ಮಾಡಿದ್ದಾರೆ. ಟ್ವೀಟ್‌ನಲ್ಲಿ ಏನಿದೆ? ಕನ್ನಡದಲ್ಲಿ ಶಿವಶ್ರೀ ಸ್ಕಂದಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಮನೋಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಮೋದಿ ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದೇ ಜ.22 ರಂದು ಅಯೋಧ್ಯೆ (Ayodhya) ರಾಮಮಂದಿರದಲ್ಲಿ (Ram Mandir) ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಜರುಗಲಿದೆ. ಈ…
ದಾವಣಗೆರೆ:- CM ಸಿದ್ದರಾಮಯ್ಯ, ಡಿಕೆಶಿ ಬಗ್ಗೆ ಮಾತನಾಡಿದ್ರೆ ಸಹಿಸೋದಿಲ್ಲ ಎಂದು ಮಾಜಿ ಶಾಸಕ ಎಸ್ ರಾಮಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯರಿಗೆ ಏಕವಚನದಲ್ಲಿ ಮಾತನಾಡಿದ ಅನಂತ್ ಕುಮಾರ್ ಹೆಗಡೆಗೆ ಮೆಟ್ನಲ್ಲಿ ಹೊಡಿತೀನಿ ಎಂದು ಹೇಳಿದ್ದಾರೆ. ಇನ್ನೊಂದು ಸಾರಿ ಮಾತನಾಡಿದ್ರೆ ಎಲ್ಲಿದಾನೋ ಅಲ್ಲಿಗೆ ಹೋಗಿ ಮೆಟ್ನಲ್ಲಿ ಹೊಡಿತೀನಿ ಎಂದು ಹೇಳುವ ಮೂಲಕ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಮಾಜಿ ಶಾಸಕ ಎಸ್ ರಾಮಪ್ಪ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅ ನನ್ ಮಗ ಇಷ್ಟು ದಿನ ನೆಲ ಕಚ್ಚಿದ್ದ ದೇವರ ದಯದಿಂದ ಬದುಕಿ ಬಂದಿದಾನೆ. ಈಗ ಸಿದ್ದರಾಮಯ್ಯ ನವರಿಗೆ ಹೀಗೆ ಮಾತನಾಡಿದ್ರೆ ಸರಿ ಇರೋದಿಲ್ಲ. ಹಿಂದುತ್ವ ಅನ್ನೋದು ಬಿಜೆಪಿ ಅಪ್ಪನ ಸ್ವತ್ತಾ. ನಾವು ಕೂಡ ಹಿಂದೂಗಳು ನಮಗೂ ಹಿಂದೂತ್ವ ಇದೆ. ಆದರೆ ಎಲ್ಲಾ ಧರ್ಮಗಳು ಒಂದಾಗಿ ಬಾಳಬೇಕು ಅನ್ನೋದು ನಮ್ ಆಸೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಗೆ ಏಕವಚನದಲ್ಲೇ ಸಿದ್ದರಾಮಯ್ಯ ಆಪ್ತ ಮಾಜಿ ಶಾಸಕ ಎಸ್ ರಾಮಪ್ಪ ನಿಂದಿಸಿದ್ದಾರೆ.
ಯಶ್ ಅವರ ಹುಟ್ಟು ಹಬ್ಬಕ್ಕಾಗಿ ರಾತ್ರಿ ಬ್ಯಾನರ್ ಕಟ್ಟಲು ಹೋಗಿ ವಿದ್ಯುತ್ ಅವಘಡದಲ್ಲಿ ಪ್ರಾಣ ಬಿಟ್ಟಿರುವ ಅಭಿಮಾನಿಗಳ ಮನೆಗೆ ಯಶ್ ತಂಡದವರು ಭೇಟಿ ಕೊಟ್ಟು ಪರಿಹಾರ ಧನ ನೀಡಲಿದ್ದಾರೆ. ನಾಳೆ ಹತ್ತು ಗಂಟೆಗೆ ಯಶ್ ಟೀಮ್ ಆಯಾ ಕುಟುಂಬಗಳಿಗೆ ಭೇಟಿ ಮಾಡಿ, ಪರಿಹಾರದ ಧನವನ್ನು ಹಸ್ತಾಂತರ ಮಾಡಲಿದ್ದಾರೆ. ಒಂದು ಕಡೆ ಯಶ್‍್ ಪರಿಹಾರವನ್ನು ನೀಡುತ್ತಿದ್ದರೆ ಮತ್ತೊಂದು ಕಡೆ ಅಭಿಮಾನಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯವೊಂದನ್ನು ಮಾಡಿದ್ದಾರೆ. ಸರ್ಕಾರ ಘೋಷಿಸಿದ 2 ಲಕ್ಷ ರೂಪಾಯಿ ಪರಿಹಾರ ಸಾಕಾಗಲ್ಲ. ಹೀಗಾಗಿ ಮೂವರ ಕುಟುಂಬಕ್ಕೆ ಹೆಚ್ಚಿನ ಪರಿಹಾರ ಕೊಡುವಂತೆ ಲಕ್ಷ್ಮೇಶ್ವರ ಸೂರಣಗಿ (Suranagi Village) ಗ್ರಾಮಸ್ಥರು ಆಗ್ರಹ ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೇ ಅಂಬೇಡ್ಕರ್ ಅಭಿವೃದ್ಧಿ ನಿಗಮದಡಿ 2 ಎಕರೆ ಜಮೀನು ನೀಡಬೇಕು. ಘಟನಾ ಸ್ಥಳದಲ್ಲಿ ಮೃತರ ಪುತ್ಥಳಿ ನಿರ್ಮಿಸಬೇಕು. ಮುಂದೆ ಇಂತಹ ಅವಘಡಗಳು ಸಂಭವಿಸಬಾರದು. ಅಲ್ಲದೆ ಈ ಮೂವರ ಪುತ್ಥಳಿ ಮುಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಬೇಕು ಎಂದು ಸೂರಣಗಿ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹ…