ಬೆಂಗಳೂರು: ನಾಳೆಯಿಂದ ನಮ್ಮ ಮೆಟ್ರೊದ ಹಸಿರು ಮಾರ್ಗದ ಪೀಣ್ಯ ಇಂಡಸ್ಟ್ರಿ ಮತ್ತು ನಾಗಸಂದ್ರ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು 3 ದಿನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುವುದು ಎಂದು BMRCL ಪ್ರಕಟಣೆಯಲ್ಲಿ ತಿಳಿಸಿದೆ. ನಾಗಸಂದ್ರದಿಂದ ಮಾದಾವರವರೆಗಿನ ವಿಸ್ತರಿತ ಮಾರ್ಗದ ಪೂರ್ವ ನಿಯೋಜಿತ ಕಾಮಗಾರಿಗಳನ್ನು ಕೈಗೊಳ್ಳುವ ಸಲುವಾಗಿ, ಜ.26ರಿಂದ 28ರವರೆಗೆ ಮೆಟ್ರೊ ರೈಲು ಸೇವೆಗಳು ಲಭ್ಯವಿರುವುದಿಲ್ಲ ಎಂದು ಹೇಳಿದೆ. ಈ ದಿನಗಳಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ನಿಲ್ದಾಣಗಳ ನಡುವಿನ ರೈಲು ಸಂಚಾರ ಎಂದಿನಂತೆ ಇರಲಿದೆ. ನೇರಳೆ ಬಣ್ಣದ ಮಾರ್ಗದಲ್ಲೂ ಯಾವುದೇ ವ್ಯತ್ಯಯ ಇರುವುದಿಲ್ಲ. ಜ. 29ರ ಬೆಳಿಗ್ಗೆ 5 ಗಂಟೆಯಿಂದ ಹಸಿರು ಮಾರ್ಗದ ನಾಗಸಂದ್ರ ಮತ್ತು ರೇಷ್ಮೆ ಸಂಸ್ಥೆ ನಡುವೆ ಸೇವೆಗಳು ಪುನರಾರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಈ ಮೂರು ದಿನ ಪೀಣ್ಯ ಇಂಡಸ್ಟ್ರಿ ಮತ್ತು ಗೊರಗುಂಟೆಪಾಳ್ಯ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚಿನ ಜನಸಂದಣಿ ಉಂಟಾಗುವ ಸಾಧ್ಯತೆ ಇರುವುದರಿಂದ, ವಾಟ್ಸ್‌ಆ್ಯಪ್, ನಮ್ಮ ಮೆಟ್ರೊ ಅಥವಾ ಇತರ ಅಪ್ಲಿಕೇಶನ್‌ಗಳ ಮೂಲಕ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಿ ಎಂದು ಪ್ರಯಾಣಿಕರಲ್ಲಿ…
Author: AIN Author
ಹುಬ್ಬಳ್ಳಿ: ಅತ್ತ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಲೇ ಇತ್ತ ಡಿಕೆಶಿ ಆಪ್ತರಿಗೆ ಗಾಳ ಹಾಕಲು ಬಿ. ವೈ. ವಿಜಯೇಂದ್ರ ಮುಂದಾ ಗಿದ್ದಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ರಾಜೀನಾಮೆ ಪರ್ವ ಆರಂಭ ವಾಗಿದೆ. ಹೌದು.. ಶೆಟ್ಟರ್ ಮತ್ತೆ ಬಿಜೆಪಿ ಸೇರ್ಪಡೆಯಿಂದ ಮರ್ಮಘಾತಕ್ಕೊಳ್ಳಗಾಗಿರುವ ಕಾಂಗ್ರೆಸ್ ಧಾರವಾಡ ಪಾಳೆಯದಲ್ಲಿ ಅಲ್ಲೋಲ ಕಲ್ಲೋಲವಾಗಿದೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಘರ್ ವಾಪಸ್ಸಿ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ರಾಜೀನಾಮೆ ಪರ್ವ ಆರಂಭ ವಾಗಿದ್ದು, ಧಾರವಾಡ ಜಿಲ್ಲೆಯ ಪಂಚಮಸಾಲಿ ಸಮಾಜದ ಜಿಲ್ಲಾ ಯುವ ಘಟಕದ ಅಧ್ಯಕ್ಷ ವಿರೇಶ ಉಂಡಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಇನ್ನೂ ಅಪಾರ ಬೆಂಬಲಿಗರೊಂದಿಗೆ ನಾಳೆ ಬಿಜೆಪಿ ಸೇರ್ಪಡೆ ಆಗಲಿರುವ ಕಾಂಗ್ರೆಸ್ ಮುಖಂಡ ವೀರೇಶ ಉಂಡಿ. ಕಾಂಗ್ರೆಸ್ ಒಡನಾಟಕ್ಕೆ ಬ್ರೇಕ್ ಹಾಕಿ ಕಮಲ ಹಿಡಿಯಲಿದ್ದಾರೆ.
ಚಾಮರಾಜನಗರ: ಮನ್ ಕಿ ಬಾತ್ʼನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ್ದ ಕವಿ ಮಂಜುನಾಥ್‌ಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ಜೋಗುಳ ಪದ ರಚಿಸಿದ್ದ ಕೊಳ್ಳೇಗಾಲದ ಕವಿ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರದ ದೆಹಲಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ಬಂದಿದೆ. ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರರಾಗಿರುವ ಮಂಜುನಾಥ್, ಪ್ರವೃತ್ತಿಯಲ್ಲಿ ಕವಿಯಾಗಿದ್ದಾರೆ. ಕೋವಿಡ್ ವೇಳೆ ‘ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ’ ಎಂಬ ಸಾಲಿನಿಂದ ಜೋಗುಳ ಪದ ರಚಿಸಿದ್ದರು. ಕೇಂದ್ರ ಸರ್ಕಾರದ ವತಿಯಿಂದ 75 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಆನ್‌ಲೈನ್ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆ ಆಯೋಜಿಸಲಾಗಿತ್ತು. ಪುತ್ರನ ಒತ್ತಾಸೆಗೆ ಮಣಿದು ಜೋಗುಳದ ಹಾಡು ರಚಿಸಿದ್ದ ಕವಿ ಮಂಜುನಾಥ್.ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ನಡೆಸಿದ್ದ ಪೆನ್ ಎ ಲೋರಿ ಎಂಬ ಜೋಗುಳ ಗೀತೆ ಸ್ಪರ್ಧೆಯಲ್ಲಿ ಚಾಮರಾಜನಗರ ಜಿಲ್ಲೆಯ ಕವಿ ಮಂಜುನಾಥ್ ಪ್ರಥಮ ಸ್ಥಾನ ಪಡೆದಿದ್ದರು.
ಚಾಮರಾಜನಗರ: ಬಲೆಗೆ ಸಿಲುಕಿ ಸಾವು ಬದುಕಿನೊಡನೆ ಹೋರಾಟ ಮಾಡುತ್ತಿದ್ದ ನಾಗರಹಾವನ್ನೂ ಉರುಗಪ್ರೇಮಿ ಮಹೇಶ್ ರಕ್ಷಣೆ ಮಾಡಿದ್ದಾರೆ. ಚಾಮರಾಜನಗರ ತಾಲೋಕು ದಾಸನಹುಂಡಿ ಗ್ರಾಮದಲ್ಲಿ ಬೆಳೆ ರಕ್ಷಣೆಗೆ ಜಮೀನಿನ ಸುತ್ತ ಅಳವಡಿಸಿದ್ದ ಬಲೆ ನಾಗರಹಾವು ಸಿಲುಕಿದೆ. ಈ ವೇಳೆ ಸಾವು ಬದುಕಿನೊಡನೆ ಹೋರಾಟ ಮಾಡುತ್ತಿತ್ತು. ಸಾವಿನಂಚಿನಲ್ಲಿದ್ದ ನಾಗರಹಾವು ರಕ್ಷಣೆ ಮಾಡಿ ಉರುಗಪ್ರೇಮಿ ಮಹೇಶ್ ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.
ಬೆಂಗಳೂರು: ಬಿಡಿಎ ಅಂದ್ರೆ ಬೋಗಸ್,ಬಂಡಲ್ ಅಂತ ಜನ ಉಗಿಯುತ್ತಿರ್ತಾರೆ.ಈಗೇ ಇದ್ರೂ ಅಧಿಕಾರಿಗಳು ಕೊಡೋ ಬಿಲ್ಡಪ್ ಮಾತ್ರ ಬೀಡ್ತಿಲ್ಲ.ಇರೋ ಲೇಔಟ್ಗಳನ್ನ ನೆಟ್ಟಿಗೆ ಮಾಡೋಕೆ ಆಗ್ತಿಲ್ಲ.ಹೀಗಿರುವಾಗ ಮತ್ತಷ್ಟು ಹೊಸ ಲೇಔಟ್ ಗಳನ್ನ ಮಾಡ್ತೀವಿ ಅಂತ ಬಿಡಿಎ ಅಧಿಕಾರಿಗಳು ಹೊರಟಿದ್ದಾರೆ.ಆದ್ರೆ ಇತ್ತ ರೈತರು ಮಾತ್ರ ಪ್ರಾಣ ಕೊಟ್ಟೇವೋ ಬಿಡಿಎಗೆ ಜಾಗ ಬಿಡೋದಿಲ್ಲ ಅಂತ ಹೇಳಿದ್ರೂ ಅದೇ ಲೇಔಟ್ ಮೇಲೆ ಬಿಡಿಎ ಕಣ್ಣು ಬಿದ್ದಿದೆ. . ಬಿಡಿಎ. ಇದು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ.ಬೆಂಗಳೂರು ನಗರದಲ್ಲಿ ಲೇಔಟ್ ಗಳನ್ನು ಮಾಡೋದು ಫ್ಲಾಟ್ ಗಳನ್ನ ಕಟ್ಟಿ ಬಡವರಿಗೆ ರಿಯಾಯಿತಿ ದರದಲ್ಲಿ ನೀಡೋದು ಇದರ ಕೆಲಸ. ಆದ್ರೆ ದಿನಕಳೆಂದೆ ಬಿಡಿಎ ಪ್ಲಾಟ್ ಹಾಗೂ ಬಡಾವಣೆಗಳನ್ನ ಸರಿಯಾಗಿ ನಿರ್ಮಾಣ ಮಾಡ್ತಿಲ್ಲ. ನಿರ್ಮಾಣ ಮಾಡಿರೋ ಲೇಔಟ್ ಹಾಗೂ ಫ್ಲಾಟ್ಗ ಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಯೋಗ್ಯತೆ ಇಲ್ಲ. ಹೀಗಾಗಿ ಜನ ಬಿಡಿಎ ಅಧಿಕಾಇರಿಗಳು ಥೂ ಅಂತ ಉಗಿಯುತ್ತಿದ್ದಾರೆ. ಈ ನಡುವೆ ಹೊಸ ಲೇಔಟ್ ಗಳ ಮಾಡೋಕೆ ಬಿಡಿಎ ಹೊರಟಿದೆ. ಹೌದು.. ಹೌದು..ಈಗಾಗಲೇ ಡಾ.ಶಿವರಾಮ ಕಾರಂತ…
ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut) ಡೇಟಿಂಗ್ (Dating)ನಲ್ಲಿ ಇರುವ ವಿಚಾರ ಹಾಗಾಗ್ಗೆ ಮುನ್ನೆಲೆಗೆ ಬರುತ್ತದೆ. ಅದರಲ್ಲೂ ಈಸ್ ಮೈಟ್ರಿಪ್ ಸಂಸ್ಥಾಪಕ ನಿಶಾಂತ್ ಪಿಟ್ಟಿ (Nishant Pitti) ಜೊತೆ ಕಂಗನಾ ಕಾಣಿಸಿಕೊಂಡಾಗೆಲ್ಲ ಇಬ್ಬರ ಹೆಸರೂ ತಳುಕು ಹಾಕಿಕೊಳ್ಳುತ್ತದೆ. ಈ ಬಾರಿಯೂ ಅದೇ ಆಗಿದೆ. ನಿಶಾಂತ್ ಜೊತೆ ಕಂಗನಾ ಅಯೋಧ್ಯೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಸುದ್ದಿ ಭಾರೀ ಪ್ರಮಾಣದಲ್ಲಿ ಹರಡುತ್ತಿದ್ದಂತೆಯೇ ಕಂಗನಾ ಅದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ನಿಶಾಂತ್ ಮದುವೆ ಆಗಿರುವ ವಿಚಾರವನ್ನೂ ಹೇಳಿಕೊಂಡಿದ್ದಾರೆ. ನಿಶಾಂತ್ ಅವರಿಗೆ ಈಗಾಗಲೇ ಮದುವೆ ಆಗಿದೆ. ನಮ್ಮಿಬ್ಬರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ, ಅವರ ಸಂಸಾರ ಹಾಳು ಮಾಡಬೇಡಿ. ನಾನು ಬೇರೆಯವರ ಜೊತೆ ಡೇಟಿಂಗ್ ಮಾಡುತ್ತಿದ್ದರೂ, ಅದನ್ನು ಹೇಳುವುದಕ್ಕಾಗಿ ಸಮಯ ಕೊಡಿ ಎಂದು ಕಂಗನಾ ಹೇಳಿದ್ದಾರೆ. ಈ ನಡುವೆ ಕಂಗನಾ ರಣಾವತ್ ಮತ್ತೊಂದು ಸುದ್ದಿಯನ್ನೂ ನೀಡಿದ್ದಾರೆ. ಕಂಗನಾ ನಟನೆಯ ‘ಎಮರ್ಜೆನ್ಸಿ’ (Emergency) ಸಿನಿಮಾ ನವೆಂಬರ್ 24ರಂದು ರಿಲೀಸ್ (Release) ಆಗಬೇಕಿತ್ತು. ಆದರೆ,…
ಚಾಮರಾಜನಗರ: ಜಾಂಬವಂತನ ಹುಲಿರಾಯ ಬೇಟೆಯಾಡಿದ್ದಾನೆ. ಹೌದು ಬಂಡೀಪುರ ಸಫಾರಿಗೆ ತೆರಳಿದ ಪ್ರವಾಸಿಗರ ಮೊಬೈಲ್ ಕ್ಯಾಮರಾದಲ್ಲಿ ರೋಚಕ ದೃಶ್ಯ ಸೆರೆಯಾಗಿದೆ. ನೀರು ಕುಡಿಯಲು ಬಂದ ಕರಡಿಯನ್ನ ಹುಲಿ ಬೇಟೆಯಾಡಿದೆ. ಕರಡಿ ಮೇಲೆ ದಾಳಿ ಮಾಡಿ ಕೊಂದು ತಿಂದಿದೆ ಹುಲಿ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿಗೆ ತೆರಳಿದ ವೇಳೆ ಹುಲಿ ಬೇಟೆಯಾಡುವ ದೃಶ್ಯ ಸೆರೆ ಆಗಿದೆ. ಹುಲಿಯಿಂದ ತಪ್ಪಿಸಿಕೊಳ್ಳಲು ಎಷ್ಟೇ ಪ್ರಯತ್ನ ಪಟ್ಟರೂ ಸಾಧ್ಯವಾಗದೆ ಕರಡಿ ಒದ್ದಾಡಿದೆ. ಕೊನೆಗೂ ಹುಲಿಯ ಬಾಯಿಗೆ ಸಿಲುಕಿ ಒದ್ದಾಡಿ ಒದ್ದಾಡಿ ಜಾಂಬವಂತ ಪ್ರಾಣ ಬಿಟ್ಟಿದೆ..
ಕಲಬುರಗಿ: ಆರು ತಿಂಗಳಲ್ಲಿ ಕಾಂಗ್ರೆಸ್ ಬಿಟ್ಟು ಮತ್ತೆ ಬಿಜೆಪಿ ಸೇರಿರುವ ಜಗದೀಶ್ ಶೆಟ್ಟರ್ ಆಯಾ ರಾಮ್ ಗಯಾ ರಾಮ್ ಅಂತ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಮಾತನಾಡಿದ ಪ್ರಿಯಾಂಕ್ ಖರ್ಗೆ ಕಾಂಗ್ರೆಸ್ ಪಕ್ಷ ಯಾರ ಮೇಲೂ ಡಿಪೆಂಡ್ ಆಗಿಲ್ಲ.ಶೆಟ್ಟರ್ ಗೆ ನಾವು ಎಂಎಲ್ಸಿ ಮಾಡಿದ್ವಿ. ಹೀಗಾಗಿ ನಾವು ಏನ್ ಅನ್ಯಾಯ ಮಾಡಿದ್ವಿ ಅಂತ ಶೆಟ್ಟರ್ ತಿಳಿಸಲಿ ಅಂತ ಹೇಳಿದ್ರು.
ಬೆಂಗಳೂರು: ನಗರದ ಟೌನ್ ಹಾಲ್ ನಲ್ಲಿ ಇಂದು ಚುನಾವಣೆ ಆಯೋಗದಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ , ರಾಜ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಡಿಸಿ ಕೆಎ ದಯಾನಂದ್ ಸೇರಿದಂತೆ ಇತರರು ಭಾಗಿಯಾಗಿದ್ರು. ಈ ವೇಳೆ ಕಾರ್ಯಕ್ರಮದಲ್ಲಿ ಮತದಾತನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಈ ವೇಳೆ ರಾಜ್ಯಪಾಲರು ಚುನಾವಣೆಯಲ್ಲಿ ಮತಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನ ಬಲಪಡಿಸುವಲ್ಲಿ ಪ್ರಮುಖ ಕೊಡುಗೆ ನೀಡಬೇಕು ಅಂತ ಮನವಿ ಮಾಡಿದರು ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ ಮತ್ತು ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಮತದಾರರು ಮತ್ತು ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಗಣ್ಯರು ಪ್ರಮುಖ ಕೊಡುಗೆಯನ್ನು ಹೊಂದಿದ್ದಾರೆ. 4. ಜಗತ್ತಿನಲ್ಲಿ ಪ್ರಚಲಿತದಲ್ಲಿರುವ ಹಲವು ರೀತಿಯ ಆಡಳಿತ ವ್ಯವಸ್ಥೆಗಳಿವೆ. ಅವುಗಳಲ್ಲಿ, ಪ್ರಜಾಪ್ರಭುತ್ವವು ಅಂತಹ ಆಡಳಿತ ವ್ಯವಸ್ಥೆಯಾಗಿದ್ದು, ಇದರಲ್ಲಿ ಸಂಪೂರ್ಣ ಆಡಳಿತದ ಅಧಿಕಾರವು ಜನರ ಮೇಲಿರುತ್ತದೆ. ಪ್ರಪಂಚದ ವಿವಿಧ ದೇಶಗಳಲ್ಲಿ ವಿವಿಧ ರೀತಿಯ…
ಬೆಂಗಳೂರು : ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಯಾವ ನಷ್ಟವೂ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕುಟುಕಿದ್ದಾರೆ. ಶೆಟ್ಟರ್ ಬಿಜೆಪಿ ಸೇರ್ಪಡೆ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಗದೀಶ್ ಶೆಟ್ಟರ್ ಅವರಂತಹ ಸಾವಿರಾರು ನಾಯಕರನ್ನು ಸೃಷ್ಟಿಸುವ ತಾಕತ್ತು ಕಾಂಗ್ರೆಸ್‌ಗಿದೆ ಎಂದು ಚಾಟಿ ಬೀಸಿದ್ದಾರೆ. ಜಗದೀಶ್ ಶೆಟ್ಟರ್ ಹಿರಿಯ ರಾಜಕಾರಣಿ. ಆದರೆ, ರಾಜಕೀಯ ಸಂದ್ಯಾಕಾಲದಲ್ಲಿ ತಮ್ಮನ್ನು ಅವಮಾನಿಸಿದ ಪಕ್ಷಕ್ಕೆ ಮರಳಿ ಸೇರಿಕೊಂಡಿದ್ದಾರೆ. ಈ ಮೂಲಕ ಶೆಟ್ಟರ್ ರಾಜಕೀಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದು ಛೇಡಿಸಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಯಿಂದ ಅವಮಾನಿತರಾಗಿ ರಾಜಕೀಯ ಆಶ್ರಯ ಅರಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ನಮ್ಮ ಪಕ್ಷ ಅವರಿಗೆ ವಿಧಾನಸಭಾ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಸೋತರೂ ವಿಧಾನ ಪರಿಷತ್‌ಗೆ ಆಯ್ಕೆ ಮಾಡಿತ್ತು. ಇದಕ್ಕಿಂತ ಹೆಚ್ಚಿನ ಗೌರವ ಕೊಡಲು ಇನ್ನೇನು ಸಾಧ್ಯ? ಈಗ ಅವಮಾನ ಮಾಡಿದ ಪಕ್ಷಕ್ಕೇ ಮರಳಿ ಹೋಗಿದ್ದಾರೆ. ಶೆಟ್ಟರ್ ಆತ್ಮಗೌರವ ಕಳೆದುಕೊಂಡು ಬಿಜೆಪಿಗೆ ಮರಳಿ ಹೋಗುವ ದುಸ್ಥಿತಿ…