ಕೆನಡಾ ಪ್ರಧಾನ ಮಂತ್ರಿ ಜಸ್ಟಿನ್ ಟ್ರೂಡೋರನ್ನು ಕೆರಿಬಿಯನ್ ದ್ವೀಪಕ್ಕೆ ಕರೆತಂದ ಮಿಲಿಟರಿ ವಿಮಾನವು ಈ ವಾರ ಜಮೈಕಾಕ್ಕೆ ಕೆನಡಾ ಸಶಸ್ತ್ರ ಪಡೆಗಳು 2ನೇ ವಿಮಾನ ಕಳಿಸಬೇಕಾಯ್ತು ಎಂದು ಸಿಬಿಸಿ ನ್ಯೂಸ್ ವರದಿ ಮಾಡಿದೆ. 4 ತಿಂಗಳೊಳಗೆ 2ನೇ ಬಾರಿಗೆ ಯಾಂತ್ರಿಕ ಸಮಸ್ಯೆಗಳಿಂದಾಗಿ ಟ್ರೂಡೋವನ್ನು ಸಾಗಿಸುವ ವಿಮಾನ ಹಾರಾಟ ನಡೆಸಲು ಸಾಧ್ಯವಾಗಲಿಲ್ಲ. ಕೆನಡಾದ ಪ್ರಧಾನಿ ಕುಟುಂಬ ವಿಹಾರಕ್ಕಾಗಿ ಜಮೈಕಾಗೆ ಹೋಗಿದ್ದರು, ಅಲ್ಲಿ ಅವರು ತಮ್ಮ ಕುಟುಂಬದೊಂದಿಗೆ ರೆಸಾರ್ಟ್‌ನಲ್ಲಿ ಉಳಿದುಕೊಂಡಿದ್ದರು, ಆದರೆ ಗುರುವಾರ, ಅವರು ಹಿಂದಿರುಗುವಾಗ, ಅವರ ವಿಮಾನವು ಕೆಟ್ಟನಿಂತಿತ್ತು, ಇದರಿಂದಾಗಿ ಅವರು ಒಂದು ದಿನ ಅಲ್ಲೇ ಉಳಿಯಬೇಕಾಯಿತು. ರಾಷ್ಟ್ರೀಯ ರಕ್ಷಣಾ ಇಲಾಖೆಯು ಜಮೈಕಾಕ್ಕೆ ಎರಡನೇ ವಿಮಾನವನ್ನು ಕಳುಹಿಸಿದೆ ಎಂದು ಕೆನಡಾದ ಔಟ್ಲೆಟ್ CBC ನ್ಯೂಸ್ ಶುಕ್ರವಾರ ವರದಿ ಮಾಡಿದೆ. ಕೆನಡಾದ ವಾರ್ತಾಪತ್ರಿಕೆ ನ್ಯಾಷನಲ್ ಪೋಸ್ಟ್ ಈ ಹಿಂದೆ ಟ್ರೂಡೊ ತನ್ನ ರಜೆಯ ಪ್ರಯಾಣಕ್ಕೆ ತಾನೇ ಪಾವತಿಸುತ್ತಿರುವುದಾಗಿ ಹೇಳಿದ್ದಾಗಿ ವರದಿ ಮಾಡಿತ್ತು.
Author: AIN Author
ಹರಿಹರ- ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಪ್ರತಿವರ್ಷ ಆಚರಣೆ ಮಾಡುತ್ತಿರುವ ಹರ ಜಾತ್ರಾ ಮಹೋತ್ಸವದಿಂದಾಗಿ ಸಮಾಜವನ್ನು ಜಾಗೃತಿ ಮಾಡಲಾಗುತ್ತಿದೆಯೇ ವಿನಹ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿಲ್ಲ ಎಂದು ಪಂಚಮಸಾಲಿ ಗುರುಪೀಠಾಧ್ಯಕ್ಷ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ನಗರದ ಹೊರವಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಆವರಣದಲ್ಲಿ ಸರಳವಾಗಿ ನಡೆದ ಮಹಾಯೋಗಿನಿ ಅಕ್ಕಮಹಾದೇವಿ ವಚನಗಳ ಪಲ್ಲಕ್ಕಿ ಮಹೋತ್ಸವ ಮತ್ತು ಆರನೆಯ ವರ್ಷದ ಪೀಠಾರೋಹಣ ಸಮಾರಂಭದ ದಿವ್ಯಸಾನಿಧ್ಯವನ್ನು ವಹಿಸಿ ಅವರು ಮಾತನಾಡಿದರು. ರಾಜ್ಯದ ವೀರಶೈವ ಲಿಂಗಾಯತ ಸಮಾಜದಲ್ಲಿ, ಪಂಚಮಸಾಲಿ ಸಮಾಜದ ಜನರು ಅಧಿಕ ಸಂಖ್ಯೆಯ ಇರುವುದರಿಂದ ಅವರನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ, ಆಧ್ಯಾತ್ಮಿಕವಾಗಿ ಮತ್ತು ರಾಜಕೀಯವಾಗಿ ಸಮಾಜದಲ್ಲಿ ಮುಖ್ಯವಾಹಿನಿಗೆ ತರುವ ದೃಷ್ಟಿಯಿಂದ ಪ್ರತಿವರ್ಷ ಹರ ಜಾತ್ರಾ ಮಹೋತ್ಸವ ಆಚರಣೆ ಮಾಡಿ, ಜಾತ್ರಾ ಸಮಯದಲ್ಲಿ ಸಮಾಜದ ಎಲ್ಲರನ್ನೂ ಒಗ್ಗೂಡಿಸಿ ಸಮಾಜಕ್ಕೆ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡಲಾಗುತ್ತದೆ ಹೊರತು ಸಮಾಜವನ್ನು ಒಡೆಯುವಂತ ಕಾರ್ಯವನ್ನು ಮಾಡುತ್ತಿಲ್ಲ ಎಂದು ಹೇಳಿದರು. ಪಂಚಮಸಾಲಿ ಸಮಾಜದಲ್ಲಿ ಬಹುತೇಕ…
ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ವರ್ಷದ ಮೊದಲ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಸಿನಿರಂಗದಲ್ಲಿ ಸುಗ್ಗಿ ಸಂಭ್ರಮ ಜೋರಾಗಿದೆ. ಸಂಕ್ರಾಂತಿ ವಿಶೇಷವಾಗಿ ಹೊಸ ಹೊಸ ಸಿನಿಮಾಗಳು ಘೋಷಣೆಯಾಗಿವೆ. ಅದರಂತೆ ಧನಂಜಯ್ ಒಡೆತನದ ಡಾಲಿ ಪಿಕ್ಚರ್ಸ್ ನ ನಾಲ್ಕನೇ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಅನಾವರಣ ಮಾಡಲಾಗಿದೆ. ಟಗರು ಪಲ್ಯ ಸಿನಿಮಾ ಮೂಲಕ ಕಳೆದ ವರ್ಷ ಡಾಲಿ ಪಿಚ್ಚರ್ಸ್ ಪ್ರೇಕ್ಷಕರಿಗೆ ಮನರಂಜನೆಯ ಬಾಡೂಟ ಬಡಿಸಿತ್ತು. ಹೊಸ ಹೊಸ ನಿರ್ದೇಶಕರಿಗೆ ವೇದಿಕೆಯಾಗಿರುವ ಡಾಲಿ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳನ್ನು ನಿರ್ಮಿಸುವಲ್ಲಿ ಹೆಜ್ಜೆ ಇಡ್ತಿದೆ. ಇದೀಗ ಡಾಲಿ ಪಿಕ್ಚರ್ಸ್ ನ ಮತ್ತೊಂದು ಕೊಡುಗೆ ವಿದ್ಯಾಪತಿ ಸಿನಿಮಾದ ಫಸ್ಟ್ ಲುಕ್ ನ್ನು ಸುಗ್ಗಿ ಸಂಭ್ರಮದ ವಿಶೇಷವಾಗಿ ಬಿಡುಗಡೆಯಾಗಿದೆ. ಈ ಹಿಂದೆ ಇಕ್ಕಟ್ ಸಿನಿಮಾ ಮೂಲಕ ಭರವಸೆ ಹುಟ್ಟಿಸಿದ್ದ ಇಶಾಂ ಮತ್ತು ಹಸೀಂ ಖಾನ್ ವಿದ್ಯಾಪತಿ ಸಿನಿಮಾದ ಸಾರಥಿ..ಈ ಚಿತ್ರವನ್ನು ಇವರಿಬ್ಬರು ರಚಿಸಿ ನಿರ್ದೇಶಿಸಿ ಸಂಕಲನ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಫಸ್ಟ್ ಲುಕ್ ನಲ್ಲಿ ನಾಗಭೂಷಣ್ ಕರಾಟೆ…
ಬಾಗಲಕೋಟೆ: ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ ಅವರ ತಾಯಿ ವಿಧಿವಶರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸುಶಿಲಾಬಾಯಿ (78)ಯವರು (Sushila Bai) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಸುಶಿಲಾಬಾಯಿ ಅವರು ಕಳೆದ 10 ದಿನಗಳಿಂದ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇವರು ಪತಿ ರುದ್ರಪ್ಪ ನಿರಾಣಿ, ಐವರು ಗಂಡುಮಕ್ಕಳು, ಇಬ್ಬರು ಹೆಣ್ಣುಮಕ್ಕಳು, ಐವರು ಸೊಸೆಯಂದಿರು ಹಾಗೂ 14 ಮಂದಿ ಮೊಮ್ಮಕ್ಕಳನ್ನು ಅಗಲಿದ್ದಾರೆ. ಸುಶಿಲಾಬಾಯಿಯವರು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಸವಹಂಚಿನಾಳ ಗ್ರಾಮದಲ್ಲಿ ನೆಲೆಸಿದ್ದರು. ಮಂಗಳವಾರ ಮದ್ಯಾಹ್ನ 1 ಗಂಟೆಗೆ ಸ್ವಗ್ರಾಮ ಬಸವಹಂಚಿನಾಳದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಕೃಷಿಪ್ರಧಾನ ಕುಟುಂಬದ ನಿರಾಣಿ ಪರಿವಾರದ ಮನೆಯೊಡತಿಯಾಗಿದ್ದ ಸುಶಿಲಾಬಾಯಿ ಅವರ ಅಗಲಿಕೆಯಿಂದ ನಿರಾಣಿ ಅವರ ಅಪಾರ ಬಂಧು ಬಳಗ ದುಃಖದಲ್ಲಿ ಮುಳುಗಿದೆ.
ಜೀರಿಗೆ ಸಾಮಾನ್ಯವಾಗಿ ಪ್ರತಿಯೊಬ್ಬರ ಅಡುಗೆಮನೆಯಲ್ಲೂ ಇರುತ್ತದೆ. ವಿಶೇಷ ಫ್ಲೇವರ್ ಹೊಂದಿರುವ ಈ ಜೀರಿಗೆ ಅಡುಗೆಗೆ ಹಾಕಿದರೆ ಮತ್ತಷ್ಟು ರುಚಿ ಕೊಡುತ್ತದೆ. ಇಂತಹ ಜೀರಿಗೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಮನೆ ಮದ್ದಾಗಿದ್ದು, ಬನ್ನಿ ಈ ಲೇಖನದಲ್ಲಿ ಇದರ ವಿವಿಧ ಆರೋಗ್ಯ ಪ್ರಯೋಜನಗಳನ್ನು ಕೊಡಲಾಗಿದೆ… ಮುಂದೆ ಓದಿ ಜೀರ್ಣಕ್ರಿಯೆಗೆ ಸಹಕಾರಿ ಸರಿಯಾಗಿ ಜೀರ್ಣಕ್ರಿಯೆಯಾಗಲು ಜೀರಿಗೆ ಸಹಾಯ ಮಾಡುತ್ತದೆ ಎಂದು ಹಲವಾರು ಅಧ್ಯಯನಗಳು ಸಾಬೀತುಪಡಿಸಿವೆ. ಜೀರಿಗೆಗಳಲ್ಲಿರುವ ಥೈಮೋಲ್ ಸಂಯುಕ್ತ ಮತ್ತು ಇತರ ಪ್ರಮುಖ ತೈಲಗಳು ಲಾಲಾರಸ ಗ್ರಂಥಿಗಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ. ಹೀಗಾಗಿ ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಆದ್ದರಿಂದ, ನೀವು ಅಜೀರ್ಣದಿಂದ ಬಳಲುತ್ತಿದ್ದರೆ, ದಿನಕ್ಕೆ ಮೂರು ಬಾರಿ ಜೀರಿಗೆ ಚಹಾ ಕುಡಿಯಿರಿ. ಜೀರಿಗೆ ಚಹಾ ತಯಾರಿಸುವ ವಿಧಾನ: ಒಂದು ಕಪ್ ನೀರು ತೆಗೆದುಕೊಂಡು, ಅದಕ್ಕೆ ಒಂದು ಟೀಸ್ಪೂನ್ ಜೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಆ ನಂತರ ಸೋಸಿ ಕುಡಿಯಿರಿ. ದಿನಕ್ಕೆ ಮೂರು ಬಾರಿ ಹೀಗೆ ಮಾಡಿ. ಮಲಬದ್ಧತೆ ನಿವಾರಣೆಗೆ ಜೀರಿಗೆಯಲ್ಲಿ ಹೆಚ್ಚಿನ ನಾರಿನಂಶವಿರುತ್ತದೆ, ಇದು…
ಅಯೋಧ್ಯೆ: ಛತ್ತೀಸ್‌ಗಢದ ಪ್ರಯಾಗ್‌ರಾಜ್ ಎಂದೂ ಕರೆಯಲ್ಪಡುವ ರಾಜೀಮ್‌ನಲ್ಲಿ ಕಸ ಸಂಗ್ರಹಿಸುವ ಬಿಹುಲಾ ಬಾಯಿ (Bihula Bai) ಅವರು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಮಲ್ಲಿ (Pran Prathistha Ceremony )ಭಾಗವಹಿಸಲು ಆಹ್ವಾನವನ್ನು ಸ್ವೀಕರಿಸಿದ್ದಾರೆ. ಬಿಹುಲಾ ಬಾಯಿ ಅವರು ಪ್ರತಿದಿನ ಕಸ ಸಂಗ್ರಹಿಸುವ ಮೂಲಕ ಜೀವನ ಸಾಗಿಸುತ್ತಿದ್ದಾರೆ. ಒಂದು ವರ್ಷದ ಹಿಂದೆ ರಾಮ ಮಂದಿರ (Ram Mandira) ನಿರ್ಮಾಣಕ್ಕೆ ನಿಧಿ ಸಮರ್ಪಣಾ ಕಾರ್ಯ ನಡೆಯುತ್ತಿದ್ದಾಗ ಇಡೀ ದಿನ ಕಸ ಸಂಗ್ರಹಿಸಿ ಬರುವ 40 ರೂ. ಸಂಪಾದನೆಯಲ್ಲಿ 20 ರೂ. ದೇಣಿಗೆ ನೀಡಿದ್ದರು. ಬಿಹುಲಾ ಬಾಯಿಯ ಈ ಭಾವನೆಯನ್ನು ನೋಡಿದ ಹಿಂದೂ ಸಂಘಟನೆಗಳು ಬಿಹುಲಾ ಬಾಯಿಯ ಗುಡಿಸಲಿಗೆ ತೆರಳಿ ಆಹ್ವಾನ ನೀಡಿದವು. ಆಹ್ವಾನ ಸ್ವೀಕರಿಸಿದ ನಂತರ ಬಿಹುಲಾ ಬಾಯಿ ಭಾವುಕರಾಗಿದ್ದು, ಈಗ ಬದುಕಿನಲ್ಲಿ ಸಂತಸದ ಹೊಳೆ ಹರಿದಿದೆ ಎಂದರು. ಅಲ್ಲದೆ ಅವರ ಇಡೀ ಕುಟುಂಬವು ರಾಮನ ದರ್ಶನದ ಬಗ್ಗೆ ತುಂಬಾ ಉತ್ಸುಕವಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಬಿಹುಲಾ, ಕಸ ಆರಿಸಿ ಬಂದ ಹಣದಿಂದ 20…
ಟೆಲಿಕಾಂ ಪೂರೈಕೆದಾರ ಭಾರತಿ ಏರ್‌ಟೆಲ್ (Bharti Airtel) ಇತ್ತೀಚಿಗೆ ಗೂಗಲ್‌ನ (Google) ಮಾತೃಸಂಸ್ಥೆಯೊಂದಿಗೆ ತನ್ನ ಪಾಲುದಾರಿಕೆಯನ್ನು ಹೊಂದಿದ್ದು, ಭಾರತದ ಗ್ರಾಮೀಣ ಮತ್ತು ದೂರದ ಪ್ರದೇಶಗಳಲ್ಲಿ ಲೇಸರ್ ಇಂಟರ್ನೆಟ್ (Laser Internet) ಮೂಲಕ ಹೆಚ್ಚಿನ ಇಂಟರ್ನೆಟ್ ಸೇವೆಯನ್ನು ಒದಗಿಸಲು ಪ್ರಯತ್ನಿಸುತ್ತಿದೆ. ಈ ಕಂಪನಿಗಳು ವೇಗದ ಇಂಟರ್ನೆಟ್ ಸೇವೆಯನ್ನು ತಲುಪಿಸುವ ಸಲುವಾಗಿ ಬೆಳಕಿನ ಕಿರಣಗಳನ್ನು (ಲೇಸರ್) ಬಳಸುವ ಹೊಸ ತಂತ್ರಜ್ಞಾನವನ್ನು ಬಳಸುತ್ತಿದೆ. ಈ ಎರಡು ಕಂಪನಿಗಳು ಈ ಕುರಿತು ಶೋಧನೆಯನ್ನು ಮಾಡಿ ಭಾರತದ ವಿವಿಧೆಡೆ ಇದನ್ನು ಪರೀಕ್ಷಿಸಿದ್ದು, ಪ್ರಾಯೋಗಿಕ ಪರೀಕ್ಷೆಯು ಯಶಸ್ವಿಯಾಗಿವೆ ಎಂದು ಮೂಲಗಳು ತಿಳಿಸಿವೆ. ಇತ್ತೀಚಿನ ಲೇಸರ್ ಆಧಾರಿತ ಇಂಟರ್ನೆಟ್ ತಂತ್ರಜ್ಞಾನವನ್ನು ಆಲ್ಫಾಬೆಟ್‌ನ ಕ್ಯಾಲಿಫೋರ್ನಿಯಾ ಇನ್ನೋವೇಶನ್ ಲ್ಯಾಬ್‌ನಲ್ಲಿ ಅಭಿವೃದ್ಧಿಪಡಿಸಿದ್ದು, ಇದನ್ನು ಎಕ್ಸ್ (X) ಎಂದು ಕರೆಯಲಾಗುತ್ತದೆ. ಈ ಯೋಜನೆಯನ್ನು ‘ತಾರಾ’ (Taara) ಎಂದು ಕರೆಯಲಾಗುತ್ತದೆ. ವೇಗದ ಇಂಟರ್ನೆಟ್ ಸೇವೆಯನ್ನು ಒದಗಿಸುವ ಸಲುವಾಗಿ ಈ ತಂತ್ರಜ್ಞಾನವು ಬೆಳಕಿನ ಕಿರಣಗಳನ್ನು ಬಳಸುತ್ತದೆ. ಫೈಬರ್ ರೀತಿಯಲ್ಲಿ ಕೇಬಲ್‌ಗಳಿಲ್ಲದೇ ಪ್ರಾಜೆಕ್ಟ್ ತಾರಾ ಅತ್ಯಂತ ಕಿರಿದಾದ ಮತ್ತು ಅಗೋಚರ ಕಿರಣದ…
ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ ಹೆಚ್.ಡಿ.ಕುಮಾರಸ್ವಾಮಿ ಮನೆಯಲ್ಲಿ ಸಂಕ್ರಾಂತಿ ಹಬ್ಬದ ಸಂಭ್ರಮ
ವಿಜಯನಗರ: ತಾಯಿಯೊಂದಿಗೆ ರಸ್ತೆ ದಾಟುವ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ಕು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಟ್ಟೂರು ತಾಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೂಗಮ್ಮ ಎಂಬುವವರ ಪುತ್ರಿ ವರ್ಷಿಣಿ (4) ಮೃತ ಬಾಲಕಿಯಾಗಿದ್ದು, ತಾಯಿ ತನ್ನಿಬ್ಬರ ಮಕ್ಕಳ ಜೊತೆಗೆ ಆಸ್ಪತ್ರೆಗೆ ಹೋಗುತ್ತಿದ್ದಳು. ಈ ವೇಳೆ ಬಸ್ ಸ್ಟಾಪ್‌ನಲ್ಲಿ ಬಾಲಕಿ ವರ್ಷಿಣಿ ನಿಂತಿದ್ದಳು. ಲಾರಿ ರಸ್ತೆ ಮೇಲೆ ಸ್ಪೀಡ್ ಆಗಿ ಬರುತ್ತಿದ್ದಾಗ ಬಾಲಕಿ ಲಾರಿಯತ್ತ ಓಡಿ ಹೋಗಿದ್ದಾಳೆ. ಬಸ್ ಸ್ಟಾಪ್ ಎದುರು ಹಂಪ್ಸ್ ಇಲ್ಲದ ಕಾರಣ ವೇಗವಾಗಿ ಹೋಗುತ್ತಿದ್ದ ಲಾರಿ ಬಾಲಕಿ ಮೇಲೆ ಹರಿದಿದೆ. ಚಾಲಕನ ಅಜಾಗರೂಕತೆ ಯಿಂದ ಅಪಘಾತ ನಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಟ್ಟೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾವೇರಿ: ಅಂಬಿಗ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈಗಾಗಲೇ ಎರಡು ಬಾರಿ ರಾಜ್ಯ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದೆ.ಪರಿಶಿಷ್ಟ ವರ್ಗಕ್ಕೆ ಸೇರಲು ಸಮುದಾಯ ಸಂಪೂರ್ಣ ಅರ್ಹತೆ ಪಡೆದಿದ್ದು, ಕೇಂದ್ರ ಸರ್ಕಾರ ಈಗ ಪುನಃ ಕೇಳಿರುವ ಸ್ಪಷ್ಟೀಕರಣವನ್ನು ಕೂಡಲೇ ಮಾಹಿತಿ ತರಿಸಿ ಸ್ಪಷ್ಟೀಕರಣ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಅವರು ಇಂದು ಶ್ರೀ ನಿಜ ಶರಣ ಅಂಬಿಗರ ಚೌಡಯ್ಯನವರ 6ನೇ ಶರಣ ಸಂಸ್ಕೃತಿ ಉತ್ಸವ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ 904 ನೇ ಜಯಂತೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ನಂತರದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ರಮ ವಹಿಸಬೇಕು ಎಂದರು. 96-97 ರಲ್ಲಿಯೇ ದಿವಂಗತ ಶಾಸಕ ನಾರಾಯಣ ರಾವ್ ಎಸ್.ಟಿ ಗೆ ಸೇರಿಸಲು ಪ್ರಯತ್ನಿಸಿದ್ದರು ಎಂದು ಮರೆಯಬಾರದು ಎಂದರು. ದೋಣಿ ನಡೆಸುವುದು ಹಾಗೂ ಮೀನು ಹಿಡಿಯುವ ಕಾಯಕ ಅಂಬಿಗರದ್ದು. ಕಾಯಕದಲ್ಲಿ ಮೇಲುಕೀಳು ಎಂಬುದಿಲ್ಲ. ಮನುಷ್ಯರ ನಡುವೆ ತಾರತಮ್ಯ ಇರಬಾರದು. ಕಾಯಕವನ್ನು ಆಧರಿಸಿ ಮೇಲು ಕೀಳು ಎಂದು ತಾರತಮ್ಯ…