Author: AIN Author

ಬೆಂಗಳೂರು: ರಾಜ್ಯದ ಪರವಾಗಿ ಕೇಂದ್ರ ಸರ್ಕಾರದ ಹಣಕಾಸು ಸಚಿವೆಯನ್ನ ಭೇಟಿ ಮಾಡಿ, ಮನವಿ ಮಾಡಿದ್ದೇವೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಜಂಟಿಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಬಳಿ ರೈತರ ವಿಚಾರದಲ್ಲಿ ಅಂಕಿ ಅಂಶಗಳು ತಪ್ಪಾಗಿದೆ. ನಮ್ಮ ಬಳಿಯಿರುವ ಮಾಹಿತಿ ಅನ್ವಯ ರಾಜ್ಯದಲ್ಲಿ ಅತೀ ಸಣ್ಣ ರೈತರು ಶೇಕಡಾ 70ರಷ್ಟಿದ್ದಾರೆ. ಹೀಗಾಗಿ 2015ರ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳಬಾರದು ಎಂದರು. ಒಂದು ವೇಳೆ 2015ರ ಅಂಕಿ ಅಂಶಗಳನ್ನು ಗಣನೆಗೆ ತೆಗೆದುಕೊಂಡರೆ 1500 ಕೋಟಿ ರಾಜ್ಯಕ್ಕೆ ನಷ್ಟ ಆಗುತ್ತೆ ಎಂದು ತಿಳಿಸಿದ್ರು. ಇನ್ನು, ರಾಜ್ಯದ ರೈತರು ಕಂಗಾಲಾಗಿ, ಸಂಕಷ್ಟ ಎದುರಿಸ್ತಿದ್ದಾರೆ. ಹೀಗಾಗಿ ಪರಿಹಾರ ಹಣ ನೇರವಾಗಿ ರೈತರ ಅಕೌಂಟಿಗೆ ಹಾಕಲು ಯೋಜನೆ ರೂಪಿಸಿದ್ದೇವೆ ಎಂದು ಹೇಳಿದ್ದಾರೆ.

Read More

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಸರ್ಕಾರ ವಾಪಸ್ ಪಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ​ದರೋಡೆಕೋರರನ್ನು ರಕ್ಷಣೆ ಮಾಡಲು ಈ ಸರ್ಕಾರ ಇರುವುದು ಎಂದು ಹೇಳಿದ್ದಾರೆ https://ainlivenews.com/eskom-online-services-closed-for-3-days-from-today/ ನಗರದಲ್ಲಿ ಮಾತನಾಡಿದ ಅವರು,ಡಿಕೆ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್​ ವಿಚಾರವಾಗಿ ಕೋರ್ಟ್​​ನಲ್ಲಿ ಏನು ನಿರ್ಧಾರ ಆಗುತ್ತೆಂದು ನೋಡಿ ಮಾತಾಡುತ್ತೇನೆ. ಮರ್ಯಾದೆ ಇಲ್ಲದರಿಗೆ ಕೋರ್ಟ್​​ನಲ್ಲಿ ಇದ್ದರೇನು, ಎಲ್ಲಿದ್ದರೇನು? ಎಲ್ಲವನ್ನೂ ದುಡ್ಡಿನಿಂದ ಕೊಂಡುಕೊಳ್ಳುತ್ತೇವೆ ಅನ್ನೋ ದುರಹಂಕಾರ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪರೋಕ್ಷವಾಗಿ ಕಡಿಕಾರಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ನೀಡಿತ್ತು. ಹಿಂದಿನ ಅಡ್ವೋಕೇಟ್ ಜನರಲ್ ಹಾಗೂ ನಮ್ಮ ಸರ್ಕಾರದ ಎಜಿ ಇಬ್ಬರ ಅಭಿಪ್ರಾಯ ಗಂಭೀರವಾಗಿ ಪರಿಗಣಿಸಲಾಗಿದೆ. ಸ್ಪೀಕರ್ ರಿಂದ ಪರವಾನಗಿ ಪಡೆದುಕೊಳ್ಳದೇ ನಿಯಮ ಬಾಹಿರವಾಗಿ ಅನುಮತಿಯಿಲ್ಲದೇ ತೆಗೆದುಕೊಂಡ ಕ್ರಮ ಆಗಿತ್ತು. ಕಾನೂನು ಪ್ರಕಾರ ಆಗ ಕ್ರಮ ಆಗಿರಲಿಲ್ಲ. ಹಳೆಯ ಎಜಿ ಈಗಿನ ಎಜಿ ಇಬ್ಬರ ಅಭಿಪ್ರಾಯ ಪರಗಣಿಸಿದ್ದೇವೆ. ಆದೇಶ ನಾಳೆಯೋ ನಾಡಿದ್ದೋ ನಿಮಗೆ ಸೇರುತ್ತದೆ. Its…

Read More

ಬೆಂಗಳೂರು: ಬೆಂಗಳೂರು ಅರಮೆನೆ ಮೈದಾನದಲ್ಲಿ ಇಂದಿನಿಂದ (ನ.24) ಮೂರು ದಿನಗಳ ಕಾಲ ಕಂಬಳ ಪಂದ್ಯ ನಡೆಯಲಿದೆ.   ಕಂಬಳದಲ್ಲಿ 200ಕ್ಕೂ ಅಧಿಕ ಕೋಣಗಳು ಭಾಗಿಯಾಗಲಿವೆ. ಕಂಬಳಕ್ಕೆಂದೇ ರಾಜಮಹಾರಾಜ ಹೆಸರಿನ ಟ್ರ್ಯಾಕ್ ತಯಾರಾಗಿದೆ. 157 ಮೀಟರ್ ಉದ್ದ, 8 ಮೀಟರ್ ಅಗಲ ಟ್ರ್ಯಾಕ್ ಒಳಗೊಂಡಿದೆ. ಕಂಬಳ ವೀಕ್ಷಣೆಗೆ ಸುಮಾರು 6ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದೆ. https://ainlivenews.com/begging-in-metro-train-rs-500-per-person-officials-fined/ ಕಂಬಳದಲ್ಲಿ 200ಕ್ಕೂ ಅಧಿಕ ಕೋಣಗಳು ಭಾಗಿಯಾಗಲಿವೆ. ಕಂಬಳಕ್ಕೆಂದೇ ರಾಜಮಹಾರಾಜ ಹೆಸರಿನ ಟ್ರ್ಯಾಕ್ ತಯಾರಾಗಿದೆ. 157 ಮೀಟರ್ ಉದ್ದ, 8 ಮೀಟರ್ ಅಗಲ ಟ್ರ್ಯಾಕ್ ಒಳಗೊಂಡಿದೆ. ಕಂಬಳ ವೀಕ್ಷಣೆಗೆ ಸುಮಾರು 6ರಿಂದ 7 ಲಕ್ಷ ಜನರು ಬರುವ ಸಾಧ್ಯತೆ ಇದೆ. 200ಕ್ಕೂ ಹೆಚ್ಚು ಕೋಣಗಳು ಕಂಬಳದಲ್ಲಿ ಭಾಗವಹಿಸಲಿವೆ. ವೀಕೆಂಡ್​ನಲ್ಲಿ ಕಂಬಳವಿರುವುದರಿಂದ ವೀಕ್ಷಣೆಗೆ 6 ರಿಂದ 7 ಲಕ್ಷ ಜನ ಬರುವ ಸಾಧ್ಯತೆ ಇದೆ. ಇದಕ್ಕಾಗಿ ಸಕಲ ತಯಾರಿ ಮಾಡಲಾಗಿದ್ದು, ಜನರು ಕೂತು ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರಿಗೆ ಉಚಿತ ಪ್ರವೇಶಕ್ಕೆ ಅವಕಾಶ…

Read More

ಕಲಬುರಗಿ: ಬರೋಬ್ಬರಿ 8 ವರ್ಷಗಳ ಬಳಿಕ ಇದೇ ಮೊದಲ ಬಾರಿ ಗೆ ವಿಶ್ವ ಟೆನ್ನಿಸ್ ಪಂದ್ಯಾವಳಿ ಕಲಬುರಗಿಯಲ್ಲಿ ನಡೆಯಲಿದೆ. ನವೆಂಬರ್ 26 ರಿಂದ ಡಿಸೆಂಬರ್ 3 ರವರೆಗೆ ಪಂದ್ಯ ನಡೆಯಲಿದ್ದು9 ದೇಶದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಟೆನ್ನಿಸ್ ಹಬ್ಬ ನಡೆಯಲಿದೆ.65 ನೇ ವಿಶ್ವ ಶ್ರೇಯಾಂಕಿತ ಆಟಗಾರ ಎವಜೆನಿ ಡಾನ್ ಸ್ಕಾಯ್ ಸೇರಿದಂತೆ ಹಲವರು ಪಂದ್ಯಾವಳಿಯಲ್ಲಿ ಭಾಗಿಯಾಗುತ್ತಿದ್ದಾರೆ..ಸಚಿವ ಪ್ರಿಯಾಂಕ್ ಖರ್ಗೆ ಪಂದ್ಯ ಉದ್ಘಾಟಿಸಲಿದ್ದಾರೆ ಅಂತ ಜಿಲ್ಲಾಡಳಿತ ತಿಳಿಸಿದೆ..

Read More

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಭಿಕ್ಷಾಟನೆ ಮಾಡಿದ ವ್ಯಕ್ತಿಯ ಮೇಲೆ ಮೆಟ್ರೋ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. https://ainlivenews.com/martyred-soldier-captain-pranjals-mortal-remains-to-bangalore-today/ ವ್ಯಕ್ತಿಯೊಬ್ಬ ನಾನೂ ಮೂಗ, ಕಿವುಡ ಎಂದು ಚೀಟಿ ತೋರಿಸಿ ಮೆಟ್ರೋ ರೈಲಿನಲ್ಲಿ ಭಿಕ್ಷಾಟನೆ ಮಾಡಿದ್ದಾನೆ. ಈ ಹಿನ್ನೆಲೆ ಮೆಟ್ರೋ ಅಧಿಕಾರಿಗಳು ಈತನ ವಿರುದ್ಧ ಮೆಟ್ರೋ ಕಾಯ್ದೆ ಸೆಕ್ಷನ್ 39ರ ಅಡಿ ಕೇಸ್ ದಾಖಲಿಸಿದ್ದಾರೆ. 59 ಮಂದಿ ಪ್ರಯಾಣಿಕರಿಗೆ ತೊಂದರೆ ಪ್ರಕರಣದಲ್ಲಿ ಕೊಪ್ಪಳ ಮೂಲದ ಮಲ್ಲಿಕಾರ್ಜುನ್​ನನ್ನ ವಶಕ್ಕೆ ಪಡೆದು ಅಧಿಕಾರಿಗಳು ದಂಡ ವಸೂಲಿ ಮಾಡಿದ್ದಾರೆ.

Read More

ಬೆಂಗಳೂರು: ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಶುಕ್ರವಾರದಿಂದ 3 ದಿನಗಳ ಕಾಲ ಎಸ್ಕಾಂ (ESCOM) ಆನ್‌ಲೈನ್ ಸೇವೆಗಳು ಬಂದ್ ಇರಲಿದೆ. ಈ ಹಿನ್ನೆಲೆ ಬೆಂಗಳೂರು (Bengaluru) ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಿರಲಿದೆ. ಶುಕ್ರವಾರ ನವೆಂಬರ್ 24 ರಿಂದ 26 ರವರೆಗೆ 98 ನಗರ ಹಾಗೂ ಪಟ್ಟಣಗಳಲ್ಲಿ ಸೇವೆಗಳು ಅಲಭ್ಯವಾಗಿರಲಿದೆ. ಸಾಫ್ಟ್‌ವೇರ್, ಹಾರ್ಡ್‌ವೇರ್ ಅಪ್‌ಡೇಟ್ ಹಿನ್ನೆಲೆ ಸೇವೆಗಳು ಬಂದ್ ಇರಲಿದೆ. ಬೆಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಮಂಗಳೂರು ಸೇರಿದಂತೆ ಹಲವೆಡೆ ಆನ್‌ಲೈನ್ ಸೇವೆಗಳು ಸ್ಥಗಿತವಾಗಲಿದೆ. ಈ ಬಗ್ಗೆ ಬೆಸ್ಕಾಂ ಅಧಿಕೃತ ಪ್ರಕಟಣೆ ನೀಡಿದೆ. ಯಾವೆಲ್ಲಾ ಸೇವೆ ಇರಲ್ಲ? * ಹೊಸ ವಿದ್ಯುತ್ ಸಂಪರ್ಕ ನೋಂದಣಿ * ಆನ್‌ಲೈನ್ ಹಣ ಪಾವತಿ * ಕೌಂಟರ್‌ಗಳಲ್ಲಿ ನಗದು ಪಾವತಿ ಇರಲ್ಲ

Read More

ಡೆಹ್ರಾಡೂನ್: ಉತ್ತರಾಖಂಡದ (Uttarakhand) ಉತ್ತರಕಾಶಿಯಲ್ಲಿ (Uttarkashi) ಸುರಂಗದಲ್ಲಿ (Tunnel) ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ (Rescue operation) ಇಂದಿಗೆ 13ನೇ ದಿನಕ್ಕೆ ಕಾಲಿಟ್ಟಿದೆ. ಕಳೆದ ತಡರಾತ್ರಿ ತಾಂತ್ರಿಕ ಅಡಚಣೆಯಿಂದಾಗಿ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ವಿಳಂಬವಾಗಿದೆ. ಸಿಲ್ಕ್ಯಾರಾ ಸುರಂಗದ ಕಡೆಯಿಂದ ಅಮೆರಿಕನ್ ಆಗುರ್ ಯಂತ್ರವನ್ನು ಬಳಸಿ ಕೊರೆಯುವ ಕೆಲಸ ನಡೆಯುತ್ತಿತ್ತು. ರಕ್ಷಣಾ ತಂಡ ಇಲ್ಲಿಯವರೆಗೆ ಸುಮಾರು 46.8 ಮೀ. ವರೆಗೆ ಕೊರೆದಿದ್ದಾರೆ. ಆದರೆ ಗುರುವಾರ ತಡರಾತ್ರಿ ಮತ್ತೊಂದು ತಾಂತ್ರಿಕ ಅಡಚಣೆ ಉಂಟಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. https://ainlivenews.com/shooting-in-metro-also-from-now-on-bmrcl-green-signal/ ಕೊರೆಯುವ ಯಂತ್ರವನ್ನು ದುರಸ್ತಿಗೊಳಿಸಲು ಕೆಲವು ಗಂಟೆ ತೆಗೆದುಕೊಳ್ಳುತ್ತದೆ. ಬೇರೆ ಯಾವುದೇ ಸಮಸ್ಯೆ ಉಂಟಾಗದಿದ್ದರೆ ರಕ್ಷಣಾ ಕಾರ್ಯಾಚರಣೆ ಪುನರಾರಂಭವಾಗಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 13 ದಿನಗಳಿಂದ ಸುರಂಗದೊಳಗೆ ಸಿಲುಕಿ ಪರದಾಡುತ್ತಿರುವ 41 ಕಾರ್ಮಿಕರನ್ನು ಇಂದು ಹೊರತರುವ ನಿರೀಕ್ಷೆಯಿದೆ. ಅಂಬುಲೆನ್ಸ್‌ಗಳು, ವೈದ್ಯರ ತಂಡ ಅಗತ್ಯವಿರುವ ಎಲ್ಲಾ ವೈದ್ಯಕೀಯ ಉಪಕರಣಗಳೊಂದಿಗೆ ಸ್ಥಳದಲ್ಲಿ ಹಾಜರಿದ್ದಾರೆ. ಕಾರ್ಮಿಕರಿಗೆ ನೀರು, ಆಹಾರ ವಿತರಿಸಲು ಪೈಪ್ ಅನ್ನು ಅಳವಡಿಸಲಾಗಿದೆ. 

Read More

ಕೋಲ್ಕತ್ತಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಬೆನ್ನಲ್ಲೇ ಇದೀಗ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿಯವರು (Mamta Banerjee) ಟೀಂ ಇಂಡಿಯಾ ವಿಶ್ವಕಪ್ ಸೋತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾರಣ ಎಂದು ಪರೋಕ್ಷವಾಗಿ ದೂರಿದ್ದಾರೆ. ಕೋಲ್ಕತ್ತಾ ನೇತಾಜಿ ಇಂಡೋರ್ ಕ್ರೀಡಂಗಣದಲ್ಲಿ ಟಿಎಂಸಿ (TMC) ಕಾರ್ಯಕರ್ತರ ಸಭೆಯಲ್ಲಿ ದೀದಿ ಮಾತನಾಡಿದರು. ಪಾಪಿಗಳು ಹಾಜರಾದ ಫೈನಲ್ ಪಂದ್ಯ ಉಳಿದ ಎಲ್ಲಾ ಪಂದ್ಯಗಳಲ್ಲಿಯೂ ಟೀಂ ಇಂಡಿಯಾ ಜಯಗಳಿಸಿದೆ. ವಿಶ್ವಕಪ್ 20203ರ (World Cup) ಫೈನಲ್ ಪಂದ್ಯವು ಕೋಲ್ಕತ್ತಾ ಅಥವಾ ಮುಂಬೈನಲ್ಲಿ ನಡೆಯುತ್ತಿದ್ದರೆ ಭಾರತ ಗೆಲುವು ಸಾಧಿಸುತ್ತಿತ್ತು ಎಂದು ಅವರು ತಿಳಿಸಿದರು. https://ainlivenews.com/shooting-in-metro-also-from-now-on-bmrcl-green-signal/ ಕೋಲ್ಕತ್ತಾದ ಈಡನ್ ಗಾರ್ಡನ್ ಅಥವಾ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಫೈನಲ್ ಪಂದ್ಯ ನಡೆಯುತ್ತಿದ್ದರೆ ನಾವು ಗೆಲ್ಲುತ್ತಿದ್ದೆವು ಎಂದು ನಾನು ಈ ಸಂದರ್ಭದಲ್ಲಿ ಹೇಳಬಲ್ಲೆ. ಬಿಜೆಪಿಯವರು ಅವರಿಗೆ ಕೇಸರಿ ಜೆರ್ಸಿಯನ್ನು ನಿಡಿದ್ದಾರೆ ಎಂದು ಮಮತಾ ಇದೇ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ಕ್ರಿಕೆಟ್ (Team…

Read More

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದವರಿಗೆ ದಲಿತರಿಗೆ ದ್ರೋಹ ಮಾಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ ಅವರು ನ್ಯಾಯಲಯಕ್ಕೆ ಅಲೆಯುತ್ತಿದ್ದಾರೆ. ಸಚಿವ ಸಂಪುಟದ ಪಾವಿತ್ರ್ಯತೆ ಹಾಳು ಮಾಡುತ್ತಿದ್ದಾರೆ. ನೂರಕ್ಕೆ ನೂರರಷ್ಟು ಡಿಕೆ ಶಿವಕುಮಾರ್​ ವಿರುದ್ಧವಾಗಿ ತೀರ್ಪು ಬರಲಿದೆ. ನೂರಕ್ಕೆ ನೂರರಷ್ಟು ಡಿಕೆ ಶಿ‌ವಕುಮಾರ್​ ಜೈಲಿಗೆ ಹೋಗುತ್ತಾರೆ. https://ainlivenews.com/a-break-in-israels-war-against-hamas-militants-release-of-50-hostages/ ಇದರಲ್ಲಿ ಯಾವುದೇ ಅನುಮಾನ ಬೇಡ. ಇದರಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ರಾಜಕೀಯ ಜೀವನದಲ್ಲಿ ‌ಇದೊಂದು ಕಪ್ಪು ಚುಕ್ಕೆ. ಡಿಕೆ ಶಿವಕುಮಾರ್​ ಸಲುವಾಗಿ ಸಿದ್ದರಾಮಯ್ಯ ಕಪ್ಪು ಚುಕ್ಕೆ ಅಂಟಿಸಿಕೊಂಡರು ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಹೇಳಿದರು.

Read More

ಬೆಂಗಳೂರು: ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರ  ಇಂದು (ನ.24) ಬೆಂಗಳೂರಿಗೆ ಆಗಮಿಸಲಿದೆ. ಹೆಚ್​ಎಎಲ್ ಏರ್​ಪೋರ್ಟ್​ಗೆ ಬರಲಿರುವ ಪ್ರಾಂಜಲ್ ಪಾರ್ಥಿವ ಶರೀರಕ್ಕೆ ಸರ್ಕಾರ ವತಿಯಿಂದ ಗೌರವ ಸಲ್ಲಿಸಲಾಗುತ್ತದೆ. ನಂತರ ಬನ್ನೇರುಘಟ್ಟ ಸಮೀಪ ನಂದನವನ ಲೇಔಟ್​ ನಿವಾಸಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತದೆ. ಇಲ್ಲಿ ಕುಟುಂಬಸ್ಥರು ಅಂತಿಮ ನಮನ ಸಲ್ಲಿಸುತ್ತಾರೆ. ಪ್ರಾಂಜಲ್ ಅವರ ತಂದೆ ವೆಂಕಟೇಶ್ ಎಂಆರ್​ಪಿಎಲ್​​ನ ನಿವೃತ್ತ ವ್ಯವಸ್ಥಾಪಕ ನಿರ್ದೇಶಕ. ಎಂಆರ್​ಪಿಎಲ್ ಅಧಿಕಾರಿ ಸುದರ್ಶನ್ ಸೇರಿದಂತೆ 10 ಜನ ಸಿಬ್ಬಂದಿ ಪ್ರಾಂಜಲ್​​ ಅವರ ಮನೆಯಲ್ಲಿ ಮೊಕ್ಕಾಂ ಹೋಡಿದ್ದಾರೆ.  ಸಿಬ್ಬಂದಿ ಮನೆಯ ಬಳಿ ಅಂತಿಮ ದರ್ಶನಕ್ಕೆ ಎಲ್ಲಾ ಸಿದ್ಧತೆ ಮಾಡುತ್ತಿದ್ದಾರೆ. ಸೋಮಸಂದ್ರಪಾಳ್ಯದ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

Read More