Author: AIN Author

ಬೆಂಗಳೂರು: ರಾಮಮಂದಿರದ ಬಗ್ಗೆ ಒಳ್ಳೆಯ ಮಾತನಾಡದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಎಂದು ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಅವರು, ಹೈಕಮಾಂಡ್ ಹೇಳಿದರೆ ಮಾತ್ರ ರಾಮ ಮಂದಿರಕ್ಕೆ ಹೋಗುತ್ತೇವೆ ಎಂಬ ಗೃಹ ಸಚಿವ ಪರಮೇಶ್ವರ್‌ ಹೇಳಿಕೆಗೆ ರಾಮಮಂದಿರದ ಬಗ್ಗೆ ಒಳ್ಳೆಯ ಮಾತನಾಡದಿದ್ದರೆ ಹಿಂದೂಗಳ ಕೆಂಗಣ್ಣಿಗೆ ಗುರಿಯಾಗುವ ಭಯ ಎಂದು ವ್ಯಂಗ್ಯವಾಡಿದ್ದಾರೆ. https://ainlivenews.com/all-the-problems-in-your-family-are-solved-with-salt/ ರಾಮಮಂದಿರದ ಬಗ್ಗೆ ಒಳ್ಳೆಯ ಮಾತಾಡಿದರೆ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಕುರ್ಚಿಗೆ ಕುತ್ತು ಬರುವ ಭಯ. ಒಟ್ಟಿನಲ್ಲಿ ಎಡಬಿಡಂಗಿ ಕಾಂಗ್ರೆಸ್‌ ನಾಯಕರ ಪಾಡು ಅತ್ತ ದರಿ ಇತ್ತ ಪುಲಿ ಎಂಬಂತಾಗಿದೆ ಎಂದು ಕಾಲೆಳೆದಿದ್ದಾರೆ.

Read More

ಕಲಬುರಗಿ: ಎಲ್ಲಿ ನೋಡಿದರಲ್ಲಿ ರಂಗು ರಂಗಿನ ಕಲಾಕೃತಿಗಳು. ಮಸ್ತ್ ಖುಷಿ ಕೊಡೋ ಪೇಂಟಿಂಗ್ ಗಳು.ಇದಿಷ್ಟು ಕಲಬುರಗಿಯಲ್ಲಿ ಇವತ್ತು ನಡೆದ 11 ನೇ ವರ್ಷದ ಚಿತ್ರ ಸಂತೆಯಲ್ಲಿ ಕಂಡುಬಂದ ಸೀನ್ ಗಳು. ಹೌದು ಇವತ್ತು ನಗರದ ಟೌನ್ ಹಾಲ್ ಬಳಿ ಚಿತ್ರ ಸಂತೆ ಜೋರಾಗಿತ್ತು.ಈ ಚಿತ್ರಸಂತೆ ಕಾರ್ಯಕ್ರಮಕ್ಕೆ ಹಿರಿಯ ಕಲಾವಿದ ಜೆ ಎಸ್ ಖಂಡೇರಾವ್ ಚಾಲನೆ ಕೊಟ್ರು.. ಆರ್ಟ್ ಇಂಟ್ರಿಗ್ರೇಷನ್ ಫೈನ್ ಆರ್ಟ್ ಕಾಲೇಜ್ ಮತ್ತು ಎಸ್ ಬಿ ಹಾಗು ಎನ್ ವಿ ಕಾಲೇಜಿನ ನೂರಾರು ಕಲಾವಿದರು ಚಿತ್ರ ಸಂತೆಯಲ್ಲಿ ಭಾಗವಹಿಸಿದ್ರು..ವಾಟರ್ ಕಲರ್ ಆಯಿಲ್ ಕಲರ್ ಬಳಸಿ ರಚಿಸಿದ ಕಲಾಕೃತಿಗಳು ಪ್ರದರ್ಶನದಲ್ಲಿ ಮೇಳೈಸಿದ್ದವು..11 ನೇ ವರ್ಷದ ಈ ಚಿತ್ರಸಂತೆಯಲ್ಲಿ ಕೆಲವರು ಬರೀ ವೀಕ್ಷಣೆ ಮಾಡಿದ್ರೆ ಇನ್ನೂ ಕೆಲವರು ಪೇಂಟಿಂಗ್ ಖರೀದಿಸಿದ್ದು ವಿಶೇಷವಾಗಿತ್ತು..

Read More

ಕಲಬುರಗಿ: ಗಂಡನ ಕಿರಿಕಿರಿ ಸಾಕಾಗಿದೆ ದಯವಿಟ್ಟು ಬುದ್ಧಿ ಹೇಳಿ.. ಹೀಗಂತ ಕಷ್ಟ ಹೇಳಿಕೊಂಡು ಠಾಣೆಗೆ ಬಂದ ಮಹಿಳೆಗೆ ಪೋಲೀಸ್ ಪೇದೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕಲಬುರಗಿಯಲ್ಲಿ ಕೇಳಿ ಬಂದಿದೆ.. ಕಮಲಾಪುರ ಪೋಲೀಸ್ ಠಾಣೆಯ ಪೇದೆ ಬಸವರಾಜ್ ವಿರುದ್ಧ ಮಹಿಳೆ ಆರೋಪ ಮಾಡಿದ್ದು, ಇದೀಗ ದೂರು ದಾಖಲಾಗಿದೆ. ಕಷ್ಟ ಹೇಳಲು ಬಂದಾಗ ಸಹಾಯ ಮಾಡುವ ನೆಪದಲ್ಲಿ ಪದೇ ಪದೇ ಫೋನ್ ಮಾಡೋದು ನಂತ್ರ ನನ್ನ ಜೊತೆ ಅಡ್ಜಸ್ಟ್ ಆಗು ನಿನ್ನ ಸಮಸ್ಯೆ ಬಗೆಹರಿಸ್ತೇನೆ.ಹೀಗಂತ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ..

Read More

ಬಾಗಲಕೋಟೆ: ಸ್ವಾಮಿ ವಿವೇಕಾನಂದರ ಜೀವನ,ಆದರ್ಶ ತತ್ವಗಳನ್ನು ಹಾಗೂ ದೇಶದ ಪ್ರಗತಿಗೆ ಸ್ವಾಮಿ ವಿವೇಕಾನಂದರು ನೀಡಿರುವ ಸಲಹೆಗಳನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಳ್ಳಬೇಕೆಂದು ಹಿರಿಯ ಕಲಾವಿದ ಮಲ್ಲಪ್ಪ ಗಣಿ ಹೇಳಿದರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದರ 161 ನೇ ಜಯಂತೋತ್ಸವ ಹಾಗೂ ಸಂಘದ 19 ವಾರ್ಷಿಕೋತ್ಸವದ ಕಾರ್ಯಕ್ರಮ ನಡೆಯಿತು. ಪ್ರತಿಯೊಬ್ಬ ಯುವಕರು ದೇಶದ ಪ್ರಗತಿಗೆ ಸಹಾಯವಾಗುವ ಸಾಧನೆಗಳನ್ನು ಮಾಡಬೇಕು ಕ್ರಿಯಾ ಶಕ್ತಿ,ಇಚ್ಚಾ ಶಕ್ತಿ ಜ್ಞಾನ ಶಕ್ತಿ ಈ ಮೂರನ್ನು ಪ್ರತಿಯೊಬ್ಬರು ಅರ್ಥ ಮಾಡಿಕೊಂಡು ಜೀವನ ನಡೆಸಬೇಕೆಂದು ಯುವಕರಿಗೆ ಕಿವಿ ಮಾತು ಹೇಳಿದರು. ತಾಪಂ ಮಾಜಿ ಸದಸ್ಯ ಗುರುಪಾದಯ್ಯ ಮರಡಿಮಠ ಮಾತನಾಡಿ ಪ್ರತಿಯೊಬ್ಬ ಯುವಕರು ದುಶ್ಚಟಗಳಿಗೆ ಬಲಿಯಾಗದೆ ಒಳ್ಳೆಯ ಮಾರ್ಗದಿಂದ ನಡೆದರೆ ನಿಜವಾಗಿಯು ಸಂಘವನ್ನು ಸ್ಥಾಪನೆ ಮಾಡಿದಕ್ಕೆ ಸಾರ್ಥಕವಾಗುತ್ತದೆ ಎಂದು ಹೇಳಿದರು, ಇದೇ ಸಂದರ್ಭದಲ್ಲಿ ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು ಇದೇ ಸಂದರ್ಭದಲ್ಲಿ ಗ್ರಾಮದ ಹಿರಿಯ ಆನಂದ ಕಂಪು, ಗ್ರಾಪ ಅಧ್ಯಕ್ಷೆ ಯಮನವ್ವ ಕಂಚು,ಈರಪ್ಪ…

Read More

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಕೆ ಎಚ್ ಡಿ ಸಿ ಕಾಲೋನಿಯಲ್ಲಿರುವ ಶ್ರೀ ಗುರು ಬಸವ ಮನೆಯಲ್ಲಿ ಮಹಾಮನೆ ಸೇವಾ ಸಮಿತಿಯವರು ಪ್ರತಿ ವರ್ಷದಂತೆ ಈ ವರ್ಷವೂ ಸಾಮೂಹಿಕ ಇಷ್ಟಲಿಂಗ ಪೂಜೆ ಹಾಗೂ ಸಹಜ ಶಿವಯೋಗ ಮಂಗಲ ಸಮಾರಂಭ ಕಾರ್ಯಕ್ರಮ ನಡೆಯಿತು. ಅನೇಕ ರೋಗಗಳಿಂದ ಮುಕ್ತಿ ಪಡೆಯಲು ಎಲ್ಲರೂ ಲಿಂಗ ಪೂಜೆಯನ್ನು ಮಾಡಬೇಕು. ಎಲ್ಲರೂ ಅಂಗದ ಮೇಲೆ ಲಿಂಗ ಧರಿಸಿ ಲಿಂಗಧಾರಿಗಳಾಗಬೆಕೆಂದು ರಬಕವಿ ಬ್ರಹ್ಮಾನಂದ ಆಶ್ರಮದ ಪರಮಪೂಜ್ಯ ಶ್ರೀ ಗುರು ಸಿದ್ದೇಶ್ವರ ಮಹಾಸ್ವಾಮಿಗಳು ಸಾನಿಧ್ಯ ಹೇಳಿದರು. ಕಾಯಕದ ಜೊತೆಗೆ ಸ್ವಲ್ಪ ಸಮಯ ಲಿಂಗ ಪೂಜೆಗೆ ಮೀಸಲಿಡಬೇಕು ಚಂಚಲವಾದ ಮನಸ್ಸನ್ನು ನಿಗ್ರಹಿಸಲು ಹಾಗೂ ತಾಯಂದಿರಿಗೆ ಸಹನ ಗುಣವನ್ನು ಬೆಳೆಸಿಕೊಳ್ಳಲು ಲಿಂಗ ಪೂಜೆ ಬಹಳಷ್ಟು ಅವಶ್ಯವಾಗಿದೆ. ಮಹಾಮನೆಯ ಅನೇಕ ಸದಸ್ಯರು ಲಿಂಗ ಪೂಜೆಯನ್ನು ಮಾಡುವುದರಿಂದಲೇ ಒಳ್ಳೆಯ ಸ್ಥಾನದಲ್ಲಿರಲು ಸಾಧ್ಯವಾಗಿದೆ. ಮಹಾಮನೆಯ ಸದಸ್ಯರನ್ನು ಮನದುಂಬಿ ಹರಸಿದರು ಪೂರ್ವಾಶ್ರಮದಲ್ಲಿ ರಾಜು ಚನಾಳ ಅವರು ಲಿಂಗ ಪೂಜೆಯನ್ನು ಮಾಡಿರುವುದರಿಂದಲೇ ಇಂದು ಅಂಬಿಗರ ಚೌಡಯ್ಯನವರ ಪೀಠಕ್ಕೆ…

Read More

ಗದಗ: ಅಯೋಧ್ಯದಲ್ಲಿ ಜನೆವರಿ 22ರಂದು ಶ್ರೀ ರಾಮಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು  ಜನೆವರಿ 14ರಿಂದ ದೇಶದಲ್ಲಿ ಇರುವ ಪ್ರತಿ ದೇವಸ್ಥಾನ  ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂಬ ಕರೆಗೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಕೋರ್ಟ್ ಹತ್ತಿರ ಇರುವ ಇತಿಹಾಸ ಪ್ರಸಿದ್ದ ಲಕ್ಷ್ಮಿ ಲಿಂಗನ ಗುಡಿ ಸುತ್ತ ಮುತ್ತಲಿನ ಕಸ ಕಡ್ಡಿ ಗಳನ್ನು ಭಾರತೀಯ ಜನತಾ ಪಾರ್ಟಿ ಶಿರಹಟ್ಟಿ ಲಕ್ಷ್ಮೇಶ್ವರ ನಗರ ಘಟಕ ಹಾಗೂ ಶಾಸಕ ಡಾ. ಚಂದ್ರು ಲಮಾಣಿ ಅವರ ನೇತೃತ್ವದಲ್ಲಿ ಸ್ವಚ್ಛ ಗೊಳಿಸಿದ್ರು.

Read More

ಹುಬ್ಬಳ್ಳಿ; ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ ಆಗಿದ್ದು ಯಾವುದೇ ಕಾರಣಕ್ಕೂ  ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನ ವಿಧಾನ ಪರಿಷತ್ ಹಿರಿಯ ಸದಸ್ಯ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ, ನಾನು ಬಿಜೆಪಿ ತೊರೆದ ನಂತರ ಆಗಿರೋ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್ ಕರೆತರುವ ಪ್ರಯತ್ನದಲ್ಲಿ ಇದ್ದಾರೆ.  ದೊಡ್ಡ ಮಟ್ಟದ ಯಾವುದೇ ನಾಯಕರೂ ನನ್ನನ್ನು ಸಂಪರ್ಕಿಸಿಲ್ಲ ಆದರೆ ಹಲವಾರು ನಾಯಕರು ವಾಪಸ್ ತರುವಂತೆ ಒತ್ತಡ ಹಾಕ್ತಿರೋ ಮಾಹಿತಿ ಇದ್ದು,  ಯಾರು ಏನೇ ಪ್ರಯತ್ನ ಮಾಡಿದ್ರು ನಾನು ಬಿಜೆಪಿಗೆ ವಾಪಾಸ್ಸಾಗಲ್ಲ ಎಂದರು. ಇನ್ನು ಮುಖ್ಯಮಂತ್ರಿ  ಸಿದ್ದರಾಮಯ್ಯ ಕುರಿತು ಅನಂತಕುಮಾರ್ ಹೆಗಡೆ ಏಕವಚನದಲ್ಲಿ ವಾಗ್ದಾಳಿ ವಿಚಾರ ಕುರಿತು ಸಹ ಮಾತನಾಡಿದ ಅವರು ಅನಂತ್ ಕುಮಾರ್ ಹೆಗಡೆ ಹದ್ದು ಮೀರಿ ವರ್ತಿಸುತ್ತಿದ್ದಾರೆ.  ಲಕ್ಷ್ಮಣ ರೇಖೆ ದಾಟಿ…

Read More

ಹಿರಿಯ ನಟಿ ಲೀಲಾವತಿ (Leelavathi) ಕಳೆದ ವರ್ಷ ಡಿ.8ರಂದು ವಿಧಿವಶರಾದರು. ಈ ಬೆನ್ನಲ್ಲೇ ವಿನೋದ್ ರಾಜ್ (Vinod Raj) ಕುಟುಂಬ ಸ್ಮಾರಕ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ. ಇಂದು (ಜ.14) ಲೀಲಾವತಿ ಸ್ಮಾರಕಕ್ಕೆ ವಿನೋದ್ ರಾಜ್ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ನೆಲಮಂಗಲದ ತೋಟ ಮನೆಯ ಬಳಿ ಲೀಲಾವತಿ ಸ್ಮಾರಕ ನಿರ್ಮಾಣಕ್ಕೆ ವಿನೋದ್ ರಾಜ್ ಚಾಲನೆ ನೀಡಿದ್ದಾರೆ. ಪೂಜೆಯ ಕಾರ್ಯದಲ್ಲಿ ವಿನೋದ್ ರಾಜ್, ಪತ್ನಿ ಅನು, ಪುತ್ರ ಯುವರಾಜ್ ಭಾಗಿಯಾಗಿದ್ದಾರೆ. ಸ್ಮಾರಕ ಚಾಲನೆಯ ಬಳಿಕ ವಿನೋದ್ ರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿ, ಲೀಲಾವತಿ ಅವರ ಸ್ಮಾರಕ 55 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿದೆ. 120 ದಿನಗಳಲ್ಲಿ ಸ್ಮಾರಕ ಕೆಲಸ ಮುಗಿಯಲಿದೆ ಎಂದು ಮಾಹಿತಿ ನೀಡಿದ್ದಾರೆ. ತಾಯಿ ಅವರ ಸ್ಮಾರಕವನ್ನು ನನ್ನ ಆಸೆಯಂತೆ ನಿರ್ಮಿಸಲು ನಿರ್ಧರಿಸಿದ್ದೇನೆ. ಸುಮಾರು 55 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣ ಮಾಡ್ತಿದ್ದೇವೆ ಎಂದು ವಿನೋದ್ ಮಾತನಾಡಿದ್ದಾರೆ. ಅವರ ಮೊದಲ ಸಿನಿಮಾದಿಂದ ಕೊನೆಯ ಸಿನಿಮಾದ ವರೆಗೆ ಗ್ಯಾಲರಿಯನ್ನ ನಿರ್ಮಾಣ ಮಾಡಲು ಯೋಜನೆ ರೂಪಿಸಿದ್ದೇವೆ. ಅಮ್ಮನವರ…

Read More

ಬೆಂಗಳೂರು: ರಾಮಮಂದಿರ ಉದ್ಘಾಟನೆಗೆ ಹೋಗುವ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಹೋಗುವುದಿಲ್ಲ ಎಂದು ಹೇಳಿದರೆ, ಉತ್ತರ ಭಾರತದ ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ‌. ಇದರಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದೆ ಎಂದು ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ಅಯೋಧ್ಯೆಗೆ ಹೋಗುವುದಿಲ್ಲ ಎಂದು ಹೇಳಿದ್ದರು. ಅವರಿಗೆ ಸಲಹೆಗಾರರು ಬಹಳ‌ಜನ ಇದ್ದಾರೆ. ಹೀಗಾಗಿ ರಾಮ ಮಂದಿರ ವಿಚಾರದಲ್ಲಿ ಅವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಒಂದು ದಿನ ನಮ್ಮ ಊರಿನಲ್ಲೇ ರಾಮನ ಪೂಜಿಸುತ್ತೇವೆ ಅಂತಾರೆ ಮತ್ತೊಂದು ರಾಮ ಮಂದಿರ ಉದ್ಘಾಟನೆಗೆ ಹೊಗುವುದಿಲ್ಲ ಎನ್ನುತ್ತಾರೆ. https://ainlivenews.com/all-the-problems-in-your-family-are-solved-with-salt/ ಅದರಿಂದ ರಾಜಕೀಯವಾಗಿ ಕಷ್ಟವಾಗಲಿದೆ ಎಂದು ಇನ್ನೊಬ್ಬ ಸಲಹೆಗಾರರು ಹೇಳಿದಾಗ ಅಯೋದ್ಯೆಗೆ ಹೋಗುವುದಾಗಿ ಹೇಳುತ್ತಾರೆ. ರಾಮಮಂದಿರ ಉದ್ಘಾಟನೆವರೆಗೂ ಇನ್ನೂ ಏನೇನು ಹೇಳುತ್ತಾರೊ ನೋಡಿ ಎಂದು ವ್ಯಂಗ್ಯವಾಡಿದರು. ರಾಮಂದಿರ ವಿಚಾರದಲ್ಲಿ ಕಾಂಗ್ರೆಸ್ ಇಬ್ಬಾಗವಾಗಿದೆ. ಉತ್ತರ ಭಾರತದ ಅನೇಕ ಶಾಸಕರು ಅಯೋಧ್ಯೆಗೆ ಹೊಗುವುದಾಗಿ ಹೇಳುತ್ತಾರೆ. ಸೋನಿಯಾ ಖರ್ಗೆ ಹೋಗುವುದಿಲ್ಲ ಎಂದು ಹೇಳುತ್ತಾರೆ‌. ರಾಜ್ಯದ ನಾಯಕರು…

Read More

ಬೆಂಗಳೂರು: ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಮಂತ್ರಿ ಆಗುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಮುಂದೆ ಅ ಬಗ್ಗೆ ಚರ್ಚೆ ಆಗಿಲ್ಲ. ಆದರೆ, ಮೋದಿ ಅವರ ಮನಸಿನಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಟಿ ಉದೇಶಿಸಿ ಮಾತನಾಡಿದ ಅವರು; ಒಂದು ಬಾರಿ ಸಂಸತ್ ಸದಸ್ಯರಾದವರನ್ನು ಮಂತ್ರಿ ಮಾಡಿದ್ದಾರೆ. ಮೋದಿ‌ ಅವರ‌ ಆಕ್ಷನ್ ಪ್ಲ್ಯಾನ್ ಅವರ ಸಹೋದ್ಯೋಗಿಗಳಿಗೂ ಗೊತ್ತಾಗುವುದಿಲ್ಲ. ಹೀಗಾಗಿ ಅವರ ಮನಸ್ಸಿ‌ಲ್ಲಿ ಏನಿದೆಯೋ ನನಗೆ ಗೊತ್ತಿಲ್ಲ ಎಂದರು. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರಾ? ಇಲ್ಲವಾ? ಎಂದು ಕೇಳಲಾದ ಪ್ರಶ್ನೆಗೂ ಉತ್ತರಿಸಿದ ಅವರು; ನರೇಂದ್ರ ಮೋದಿ ಅವರು ಏನು ಹೇಳ್ತಾರೋ ನೊಡೋಣ. ಅವರ ಮನಸಿನಲ್ಲಿ ಇದೆಯೋ ಗೊತ್ತಿಲ್ಲ. ಮೋದಿ ಅವರು ಹೇಳಿದಂತೆ ಕುಮಾರಸ್ವಾಮಿ ಅವರು ಕೇಳುತ್ತಾರೆ. ಕುಮಾರಸ್ವಾಮಿ ಸ್ಪರ್ಧೆ ಮಾಡುವ ಪರಿಸ್ಥಿತಿ ಬಂದರೆ ನಾವೆಲ್ಲ ಕುಳಿತು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು. ಯಾವುದೇ ಕಾರಣಕ್ಕೂ ನಾನು…

Read More