Author: AIN Author

ಕೋಲ್ಕತ್ತಾ: ಉತ್ತರ ಪ್ರದೇಶ ಮೂಲದ ಮೂವರು ಸಾಧುಗಳನ್ನು ಅಪಹರಣಕಾರರೆಂದು ಶಂಕಿಸಿ, ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಪುರುಲಿಯಾ (West Bengal Purulia) ಜಿಲ್ಲೆಯಲ್ಲಿ ನಡೆದಿದೆ. ಸಂಕ್ರಾಂತಿ ಹಬ್ಬದ (Sankranti Festival) ಹಿನ್ನೆಲೆಯಲ್ಲಿ ಗಂಗಾಸಾಗರ ಮೇಳಕ್ಕೆ (Gangasagar Mela) ತೆರಳುತ್ತಿದ್ದ ಸಾಧುಗಳನ್ನು ಅಪಹರಣಕಾರರೆಂದು ಶಂಕಿಸಿ ಗುಂಪು ಥಳಿಸಿದ್ದು, ಈ ಘಟನೆ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ 12 ಜನರನ್ನ ಬಂಧಿಸಲಾಗಿದ್ದು, ಆರೋಪಿಗಳನ್ನು ಪುರುಲಿಯಾ ಜಿಲ್ಲೆಯ ಕೋರ್ಟ್‌ಗೆ ಹಾಜರುಪಡಿಸುದಾಗಿ ಪೊಲೀಸರು ತಿಳಿಸಿದ್ದಾರೆ.  ಗಂಗಾಸಾಗರದಲ್ಲಿ ಮಕರ ಸಂಕ್ರಾಂತಿ ಉತ್ಸವದಲ್ಲಿ ಪಾಲ್ಗೊಳ್ಳಲು ಹಿರಿಯ ಸಾಧು ಮತ್ತು ಅವರ ಇಬ್ಬರು ಪುತ್ರರು ಬಾಡಿಗೆ ವಾಹನದಲ್ಲಿ ಹೊರಟಿದ್ದರು. ಮಾರ್ಗಮಧ್ಯೆ ಮಹಿಳೆಯರ ಗುಂಪನ್ನು ಸಂಪರ್ಕಿಸಿ ಗಂಗಾಸಾಗರಕ್ಕೆ ತೆರಳಲು ದಾರಿ ಕೇಳಿದ್ದಾರೆ. ಇದರಿಂದ ಕೆಲವು ಸ್ಥಳೀಯರಲ್ಲಿ ಅನುಮಾನ ವ್ಯಕ್ತವಾಗಿದೆ. ಸ್ವಲ್ಪ ಹೊತ್ತಿನಲ್ಲಿಯೇ ಅಲ್ಲಿ ಸೇರಿದ ಜನರ ಗುಂಪು, ಸಾಧುಗಳನ್ನ ಅಪಹರಣಕಾರರು ಎಂದು ದೂರಿ, ಅವರ ಮೇಲೆ ಹಲ್ಲೆ ನಡೆಸಿದ್ದಾರೆ. https://ainlivenews.com/how-many-times-to-change-address-in-aadhaar-card/ ಸಾಧುಗಳು ಮತ್ತು ಮೂವರು ಸ್ಥಳೀಯ ಹೆಣ್ಣುಮಕ್ಕಳ ನಡುವೆ…

Read More

ಬೆಂಗಳೂರು:- ಮಕರ ಸಂಕ್ರಾಂತಿ ಹಬ್ಬವನ್ನು ಅದ್ದೂರಿಯಿಂದ ಆಚರಣೆ ಮಾಡಲು ಸಿಟಿ ಮಂದಿ ತಯಾರಿ ಶುರು ಮಾಡಿದ್ದಾರೆ.‌ ಸಂಕ್ರಾಂತಿ ಹಬ್ಬಕ್ಕೆ ಬೇಕಾದ ಹೂ, ಹಣ್ಣು, ತರಕಾರಿಗಳನ್ನ ಖರೀದಿ ಮಾಡಲು ಕೆ.ಆರ್. ಮಾರುಕಟ್ಟೆಗೆ ಮುಗಿಬಿದ್ದಿದ್ದಾರೆ.‌ ಹೀಗಾಗಿ ಕೆ.ಆರ್.ಮಾರುಕಟ್ಟೆಯ (KR Market) ಸುತ್ತ – ಮುತ್ತ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಬಾರಿ ತರಕಾರಿ, ಹೂ, ಹಣ್ಣುಗಳ ಬೆಲೆ ಏರಿಕೆಯಾಗಿದ್ದು, ಬೆಲೆಗಳನ್ನ ಕೇಳಿಯೇ ಗ್ರಾಹಕರು ಶಾಕ್ ಆಗುತ್ತಿದ್ದಾರೆ.‌ ತರಕಾರಿಗಳ ಬೆಲೆ 10 ರಿಂದ 20 ರೂಪಾಯಿ ಜಾಸ್ತಿಯಾಗಿದ್ರೆ, ಹೂವಿನ ಬೆಲೆ ಗಗನಕ್ಕೆ ಏರಿದೆ.‌ ಈ ಮಧ್ಯೆ ಹಣ್ಣುಗಳ ಬೆಲೆಯು ಏರಿಕೆಯಾಗಿದ್ದು, ವ್ಯಾಪಾರಸ್ತರು ಲಾಭದ ನೀರಿಕ್ಷೆಯಲ್ಲಿದ್ದಾರೆ. ಹಾಗಿದ್ರೆ ಸಧ್ಯ ತರಕಾರಿಗಳ ಬೆಲೆ ಕಳೆದ ವಾರ ಎಷ್ಟಿತ್ತು. ಇಂದು ಎಷ್ಟಿದೆ ಅಂತ ನೋಡುವುದಾದರೆ. ಕ್ಯಾರೆಟ್; ಇಂದಿನ ಬೆಲೆ-60 kg, ಹಿಂದಿನ ಬೆಲೆ-60 ರೂ. ಬಟಾಣಿ: ಇಂದಿನ ಬೆಲೆ – 40 kg, ಹಿಂದಿನ ಬೆಲೆ – 60ರೂ. ಅವರೆಕಾಯಿ: ಇಂದಿನ ಬೆಲೆ- 80 kg, ಹಿಂದಿನ ಬೆಲೆ-…

Read More

ಒಂದೆರಡು ಅಥವಾ ಹೆಚ್ಚು ಅಪಾಯ ಅಂಶಗಳು ಇದ್ದರೆ ಸ್ತನದ ಕ್ಯಾನ್ಸರ್‌ ಉಂಟಾಗುವುದು ಖಚಿತ ಎಂದು ಹೇಳಲು ಸಾಧ್ಯವಿಲ್ಲ; ಹಾಗೆಯೇ ಯಾವುದೇ ಅಪಾಯ ಅಂಶಗಳು ಇಲ್ಲದವರು ಕೂಡ ಸ್ತನದ ಕ್ಯಾನ್ಸರ್‌ಗೆ ತುತ್ತಾಗಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಳ್ಳಬೇಕು. ಸ್ತನದ ಕ್ಯಾನ್ಸರ್‌ ಆರಂಭಿಕ ಹಂತಗಳಲ್ಲಿ ಗಮನಾರ್ಹ ಲಕ್ಷಣಗಳನ್ನು ಪ್ರಕಟಿಸದೆ ಇರಬಹುದು. ಹೀಗಾಗಿ ಮ್ಯಾಮೊಗ್ರಾಮ್‌ ನಂತಹ ತಪಾಸಣೆಗಳನ್ನು ನಿಯಮಿತವಾಗಿ ಮಾಡಿಸಿಕೊಳ್ಳುವುದು ಶೀಘ್ರವಾಗಿ ಈ ರೋಗವನ್ನು ಪತ್ತೆಹಚ್ಚುವುದಕ್ಕೆ ನಿರ್ಣಾಯಕವಾಗಿವೆ; ಯಾಕೆಂದರೆ ಲಕ್ಷಣಗಳು ಗಮನಕ್ಕೆ ಬರುವ ವೇಳೆಗೆ ಸ್ತನದ ಕ್ಯಾನ್ಸರ್‌ ಮುಂದುವರಿದ ಹಂತಗಳನ್ನು ಮುಟ್ಟಿರುವ ಅಪಾಯ ಇರುತ್ತದೆ. ಸ್ತನದ ಕ್ಯಾನ್ಸರ್‌ ತಪಾಸಣೆಯಲ್ಲಿ ಸ್ತನದ ಅಂಗಾಂಶಗಳ ಎಕ್ಸ್‌ರೇ ಪರೀಕ್ಷೆಯಾಗಿರುವ ಮ್ಯಾಮೊಗ್ರಾಮ್‌ ಒಳಗೊಂಡಿರುತ್ತದೆ. ಇದರ ಉದ್ದೇಶ ಲಕ್ಷಣಗಳು ಪ್ರಕಟವಾಗುವುದಕ್ಕೆ ಮುನ್ನವೇ, ಆರಂಭಿಕ ಹಂತಗಳಲ್ಲಿಯೇ ಗಡ್ಡೆಯಂತಹ ಅಸಹಜತೆಗಳನ್ನು ಪತ್ತೆಹಚ್ಚುವುದು. ನಿಯಮಿತವಾಗಿ ಇಂತಹ ತಪಾಸಣೆಗಳನ್ನು ಮಾಡಿಸಿಕೊಳ್ಳುವುದು, ವಿಶೇಷವಾಗಿ 40 ವರ್ಷ ವಯಸ್ಸು ದಾಟಿರುವ ಮಹಿಳೆಯರಿಗೆ ಆದಷ್ಟು ಬೇಗನೆ ಈ ಕಾಯಿಲೆಯನ್ನು ಪತ್ತೆಹಚ್ಚಿ ಯಶಸ್ವಿಯಾಗಿ ಚಿಕಿತ್ಸೆ ಪಡೆದುಕೊಳ್ಳುವುದಕ್ಕೆ ಬಹಳ ಮುಖ್ಯವಾಗಿದೆ. ಸ್ತನದ ವೈದ್ಯಕೀಯ ತಪಾಸಣೆ ಮತ್ತು ವೈಯಕ್ತಿಕವಾಗಿ…

Read More

ಬೆಂಗಳೂರು:- ತಮ್ಮ ರಾಸಲೀಲೆ ಕಂಡ ಪತಿಯನ್ನು ರುಬ್ಬುವ ಕಲ್ಲು ಎತ್ತಿ ಹಾಕಿ ಹತ್ಯೆಗೈದು, ಬಳಿಕ ಆಯ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಕಥೆ ಸೃಷ್ಟಿಸಿದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರಿಂದ ಬಂಧಿಸಿದ್ದಾರೆ. ಎಚ್‌ಎಸ್‌ಆರ್‌ ಲೇಔಟ್‌ 2ನೇ ಸೆಕ್ಟರ್‌ನ ನಂದಿನಿ ಬಾಯಿ (22) ಮತ್ತು ಆಕೆಯ ಪ್ರಿಯಕರ ನಿತೀಶ್‌ ಕುಮಾರ್‌ (22) ಬಂಧಿತರು. ಆರೋಪಿಗಳು ಜ.9ರಂದು ರಾತ್ರಿ ವೆಂಕಟರಮಣ ನಾಯಕ್‌ (30) ಎಂಬಾತನ ಮೇಲೆ ರುಬ್ಬುವ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದರು. ಈ ಸಂಬಂಧ ಮೃತನ ತಂದೆ ಲಕ್ಷ್ಮೀ ನಾಯಕ್‌ ಎಂಬುವರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ಮದುವೆಯ ಆರಂಭದಲ್ಲಿ ದಂಪತಿ ಅನೋನ್ಯವಾಗಿದ್ದರು. ಆ ಬಳಿಕ ಪತ್ನಿ ನಂದಿನಿ ಸಣ್ಣ-ಪುಟ್ಟ ವಿಚಾರಗಳಿಗೆ ಜಗಳ ತೆಗೆದು ತವರು ಮನೆಗೆ ಹೋಗುತ್ತಿದ್ದಳು. ಅಲ್ಲದೆ, ತನ್ನ ಮೂರು ವರ್ಷದ ಮಗಳನ್ನು ತನ್ನ ತವರು ಮನೆಯಲ್ಲೇ ಬಿಟ್ಟಿದ್ದಳು. ಈ ಮಧ್ಯೆ…

Read More

ಕಲಬುರಗಿ:- ರಾಮ ಮಂದಿರ ಉದ್ಘಾಟನೆ ಕಣ್ತುಂಬಿಕೊಳ್ಳಲು ಅಯೋಧ್ಯೆಗೆ ರೆಡಿಯಾಗಿರುವ ಕಲಬುರಗಿ ಲಕ್ಷಾಂತರ ರಾಮ ಭಕ್ತರಿಗೆ ಟ್ರೇನ್ ಇಲ್ಲ.ಹೀಗಾಗಿ ಅನುಕೂಲ ಮಾಡಿ ಅಂತ ಸಂಸದ ಉಮೇಶ್ ಜಾಧವ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.. ಈಗಾಗಲೇ ಸೊಲ್ಲಾಪುರದಿಂದ ಅಯೋಧ್ಯೆಗೆ ವಿಶೇಷ ರೈಲು ಹೊರಡಲು ಸಿದ್ಧವಾಗಿದೆ.ಜನೆವರಿ 19 ರಂದು ಹೊರಡುವ ವಿಶೇಷ ರೈಲು ಕಲಬುರಗಿಯಿಂದ ಶುರುವಾಗಲಿ ಅಂತ ಪತ್ರದಲ್ಲಿ ಉಲ್ಲೇಖಿಸಲಾಗಿದೆ..ಜಾಧವ್ ಬರೆದ ಪತ್ರಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿ ವಿಶೇಷ ರೈಲನ್ನ ಕಲಬುರಗಿವರೆಗೆ ವಿಸ್ತರಿಸುತ್ತಾ ಕಾದು ನೋಡಬೇಕಿದೆ..

Read More

ಬೆಂಗಳೂರು:- ಸಿದ್ದರಾಮಯ್ಯರ ಮುಂದೆ ಅನಂತ್ ಕುಮಾರ್ ಹೆಗಡೆ ಹುಲ್ಲು ಕಡ್ಡಿಗೂ ಸಮಾನರಲ್ಲ ಎಂದು ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಶೋಷಿತ ಸಮುದಾಯದ ದ್ವನಿಯಾಗಿರುವ ಸಿದ್ದರಾಮಯ್ಯರನ್ನು ಮತಾಂಧತೆಯ ವಿಷ ತುಂಬಿಕೊಂಡಿರುವ ಹೆಗಡೆ ಏಕವಚನದಲ್ಲಿ ‘ಮಗನೇ’ ಎಂದಿರುವುದು ಅವರ ಕೊಳಕು ಮನಸ್ಥಿತಿಯ ಅನಾವರಣ ಮಾಡಿದೆ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯರಿಗೆ ‘ಮಗನೇ’ ಎಂದು ಸಂಬೋಧಿಸಿರುವ ಅನಂತ್ ಕುಮಾರ್ ಹೆಗಡೆ ಹಿಂದೂ ಸಮಾಜದ ಕಳಂಕವಿದ್ದಂತೆ. ವಯಸ್ಸಿನಲ್ಲಿ ಹಿರಿಯರಾದವರಿಗೆ ಮರ್ಯಾದೆ ಕೊಡುವುದು ನಮ್ಮ ಹಿಂದೂ ಧರ್ಮ ಕಲಿಸಿರುವ ಸಂಸ್ಕಾರ. ಅನಂತ್ ಕುಮಾರ್ ಹೆಗಡೆಯವರು ಯಾವ ಧರ್ಮದಿಂದ ಈ ರೀತಿ ಕೊಳಕು ಭಾಷೆ ಮಾತನಾಡುವ ಸಂಸ್ಕಾರ ಕಲಿತಿದ್ದಾರೆ ಎಂದು ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ. ಬಾಯಿ ಬಿಟ್ಟರೆ ಹೊಡಿ, ಬಡಿ, ಕೊಚ್ಚು, ಕೊಲ್ಲು, ದ್ವೇಷ, ಸೇಡು ಎನ್ನುವ ಅನಂತ್ ಕುಮಾರ್ ಹೆಗಡೆಯಂತಹವರು ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಟ್ಟ ಹುಳು ಇದ್ದಂತೆ. ಅನಂತ್ ಕುಮಾರ್ ಹೆಗಡೆಯವರೇ, ಸಾರ್ವಜನಿಕವಾಗಿ ಹೇಗೆ ಮಾತಾಡಬೇಕು ಹಾಗೂ ಹೇಗೆ ವರ್ತಿಸಬೇಕು ಎಂಬ ಕನಿಷ್ಟ ಜ್ಞಾನವನ್ನು ದಯವಿಟ್ಟು ಬೆಳೆಸಿಕೊಳ್ಳಿ ಎಂದು…

Read More

ನವದೆಹಲಿ: 2016ರ ಜುಲೈ 22ರಂದು ಬಂಗಾಳಕೊಲ್ಲಿಯಲ್ಲಿ ಕಾರ್ಯಾಚರಣೆ ವೇಳೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ An-32 ವಿಮಾನದ (IAFs AN-32 Aircraft) ಅವಶೇಷಗಳು 8 ವರ್ಷಗಳ ನಂತರ ಪತ್ತೆಯಾಗಿವೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಇದೇ ವಿಮಾನದಲ್ಲಿ ಮಂಗಳೂರಿನ ಗುರುವಾಯನಕೆರೆಯ ಯೋಧ ಏಕನಾಥ ಶೆಟ್ಟಿ (Eknath Shetty) ಕೂಡ ಇದ್ದರು. ಭೂ ವಿಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಷನ್ ಟೆಕ್ನಾಲಜಿಯು ವಿಮಾನವನ್ನು ಪತ್ತೆಹಚ್ಚಲು ಸ್ವಾಯತ್ತ ನೀರೊಳಗಿನ ವಾಹನವನ್ನು (AUV) ಬಳಸಿದೆ. ಅಪಘಾತಕ್ಕೀಡಾಗಿದ್ದ ವಿಮಾನದ ಅವಶೇಷಗಳು ಚೆನ್ನೈ ಕರಾವಳಿಯಿಂದ ಸರಿಸುಮಾರು 140 ನಾಟಿಕಲ್ ಮೈಲುಗಳಷ್ಟು (ಅಂದಾಜು 310 ಕಿಮೀ) ಸಮುದ್ರದ ಆಳದಲ್ಲಿ ಪತ್ತೆಯಾಗಿದೆ. ಶೋಧದ ಚಿತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ. An-32 ವಿಮಾನ ಎನ್ನುವುದಕ್ಕೆ ಸಾಕಷ್ಟು ಪುರಾವೆ ಸಿಕ್ಕಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.  ಬಹು-ಬೀಮ್ ಸೋನಾರ್, ಸಿಂಥೆಟಿಕ್ ಅಪರ್ಚರ್ ಸೋನಾರ್ ಮತ್ತು ಹೈ-ರೆಸಲ್ಯೂಶನ್ ಛಾಯಾಗ್ರಹಣ ಸೇರಿದಂತೆ ಬಹು ಪೇಲೋಡ್‌ಗಳನ್ನು ಬಳಸಿಕೊಂಡು 3,400 ಮೀ ಆಳದಲ್ಲಿ ಹುಡುಕಾಟ ನಡೆಸಲಾಗಿತ್ತು ಎಂದು…

Read More

ಬಳ್ಳಾರಿ:- ಮಲಗಿದ್ದ ವೇಳೆ ಲಾರಿ ಹರಿದು ಇಬ್ಬರು ಕುರಿಗಾಯಿಗಳು ದಾರುಣ ಸಾವನ್ನಪ್ಪಿದ ಘಟನೆ ಬಳ್ಳಾರಿ ನಗರದ ಏತ್ತಿನಬೂದಿಹಾಳು ಹತ್ತಿರದ ಬೆಂಚಿಕೊಟ್ಟಲ ಗ್ರಾಮದ ಬಳಿ ಜರುಗಿದೆ. ಕಬ್ಬಿನ ಗದ್ದೆಲ್ಲಿ ಲಾರಿ ಹರಿದು ಇಬ್ಬರು ಕುರಿಗಾರರು ಸಾವನ್ನಪ್ಪಿದ್ದಾರೆ. ಕಬ್ಬುನ್ನು ಸಾಗಾಟ ಮಾಡುವ ಲಾರಿ ಲೋಡ್ ಮಾಡುವ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಲಾರಿಯ ಚಕ್ರದ ಬಳಿ ಕುರಿಗಾಯಿಗಳು ಮಲಗಿದ್ದರು ಎನ್ನಲಾಗಿದೆ. ಚಿತ್ರದುರ್ಗದ ಮೊಳಕಾಲ್ಮುರು ತಾಲ್ಲೂಕಿನ ಮ್ಯಾಗಳಹಟ್ಟಿ ಗ್ರಾಮದ ಸಿದ್ದಪ್ಪ(51) ಎರಿಸ್ವಾಮಿ (20) ಮೃತ ದುರ್ದೈವಿಗಳು. ಇವರು ಕಬ್ಬಿನ ಹೊಲದಲ್ಲಿ ಕುರಿಗಳನ್ನು ನಿಲ್ಲಿಸಿ ಮಲಗಿದ್ದರು. ಕಬ್ಬು ಲೋಡ್ ಮಾಡಿಕೊಳ್ಳತ್ತಾ ರಿವರ್ಸ್ ಬಂದ ಸಮಯದಲ್ಲಿ ಇವರ ಮೇಲೆ ಲಾರಿ ಹರಿದಿದೆ. ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Read More

ಸಪೋಟಾ ರಸದಲ್ಲಿ ತಾಮ್ರ, ನಿಯಾಸಿನ್, ಕಬ್ಬಿಣ, ಕ್ಯಾಲ್ಸಿಯಂ ಮತ್ತು ರಂಜಕವೂ ಸಮೃದ್ಧವಾಗಿದೆ. ಸಪೋಟಾ ಜ್ಯೂಸ್ ಕುಡಿಯುವುದರಿಂದ ಅನೇಕ ಆರೋಗ್ಯ ಲಾಭಗಳು ಸಿಗಲಿವೆ. ಸಪೋಟಾದ ಉರಿಯೂತ ನಿವಾರಕ ಗುಣಗಳು ಗ್ಯಾಸ್ಟ್ರಿಕ್ ಮತ್ತು ಹೊಟ್ಟೆಯ ಸಮಸ್ಯೆಗಳನ್ನು ತಡೆಯುತ್ತವೆ. ಸಪೋಟಾ ರಸವು ನರಮಂಡಲವನ್ನು ಸಡಿಲಗೊಳಿಸುವ ಮತ್ತು ಒತ್ತಡವನ್ನು ಕಡಿಮೆ ಮಾಡುವ ಪರಿಣಾಮಕಾರಿ ರಸವಾಗಿದೆ. ಸಪೋಟಾ ರಸದಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸುತ್ತದೆ. ಗರ್ಭಿಣಿಯರಿಗೆ ಶಕ್ತಿಯನ್ನು ನೀಡುತ್ತದೆ. ಸಪೋಟಾ ರಸದಲ್ಲಿ ವಿಟಮಿನ್ ಸಿ ಇದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಸಪೋಟಾ ರಸವನ್ನು ಕುಡಿಯುವುದರಿಂದ ಆಂತರಿಕ ಅಂಗ ವ್ಯವಸ್ಥೆಯಲ್ಲಿನ ವೈರಲ್, ಬ್ಯಾಕ್ಟೀರಿಯಾ ಮತ್ತು ಪ್ಯಾರಾಸಿಸ್ಟಿಕ್ ಪರಿಣಾಮಗಳನ್ನು ತೆಗೆದುಹಾಕುತ್ತದೆ. ರಸದಲ್ಲಿರುವ ವಿಟಮಿನ್ ಎ ಶ್ವಾಸಕೋಶ ಮತ್ತು ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸಹಾಯ ಮಾಡುತ್ತದೆ. ಸಪೋಟಾ ರಸದಲ್ಲಿ ಫ್ರಕ್ಟೋಸ್-ಸುಕ್ರೋಸ್ ಸಮೃದ್ಧವಾಗಿದೆ. ಅವು ಶಕ್ತಿಯನ್ನು ಒದಗಿಸುತ್ತವೆ.

Read More

ರಾಯಚೂರು:- ನಾನು ಎಲ್ಲಿಯೂ ಅಯೋಧ್ಯೆಗೆ ಭೇಟಿ ಕೊಡುತ್ತೇನೆ ಎಂದೂ ಹೇಳಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ನಾನು ರಾಮನ ವಿರೋಧಿಯೂ ಅಲ್ಲ, ರಾಮಮಂದಿರ ನಿರ್ಮಾಣದ ವಿರೋಧಿಯೂ ಅಲ್ಲ. ಅಯೋಧ್ಯೆಗೆ ಭೇಟಿ ಕೊಡುತ್ತೇನೆ ಎಂದೂ ಹೇಳಿಲ್ಲ. ಆದರೆ ರಾಮಮಂದಿರ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದರು. ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಮಾಜಿ ಶಾಸಕ ಯತೀಂದ್ರ ಅವರನ್ನು ಕಣಕ್ಕಿಳಿಸುವುದಾಗಿ ನಾನಾಗಲಿ, ಯತೀಂದ್ರ ಆಗಲಿ ಹೇಳಿಲ್ಲ. ಪ್ರತಾಪ್ ಸಿಂಹ ಅವರಿಗೆ ಸೋಲಿನ ಹೆದರಿಕೆ ಶುರುವಾಗಿದೆ. ಹಾಗಾಗಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ’ ಎಂದರು. ‘ನಗರಾಭಿವೃದ್ಧಿ ಸಚಿವರು ಚುನಾವಣಾ ವೀಕ್ಷಕರಾಗಿ ಹೋಗಿದ್ದರು. ಅವರು ನೀಡಿರುವ ವರದಿ ಆಧಾರದ ಮೇಲೆ ನಾವು ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು. ಗೃಹ ಲಕ್ಷ್ಮಿ ಯೋಜನೆಯಡಿ ಕೊಡುವ ₹2 ಸಾವಿರ ಯಾವುದಕ್ಕೂ ಸಾಲುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನೀಡಿದ್ದ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ‘ಪ್ರಧಾನಿ ಹಾಗೂ ಮುಖ್ಯಮಂತ್ರಿಯಾದಾಗ ಒಂದು ನೂರು ರೂಪಾಯಿ ಸಹ ಜನರಿಗೆ ನೀಡಿಲ್ಲ.…

Read More