Author: AIN Author

ಅಯೋಧ್ಯೆಯಲ್ಲಿ ಕನ್ನಡದ ಹಾಡು ಮೊಳಗಲಿದ್ದು, ಹಾಡು ರಚನಾಕಾರರಿಗೆ ಇದು ಹೆಮ್ಮೆಯ ವಿಷಯವಾಗಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ರಾಮಲಲ್ಲಾ ವಿಗ್ರಹದ ಪ್ರತಿಷ್ಠಾಪನೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ದೇಶ, ವಿದೇಶಗಳಿಂದ ಕಾಣಿಕೆಗಳು ಹರಿದುಬರುತ್ತಿದೆ. ಬಾಲ ರಾಮನನ್ನು ಕಣ್ತುಂಬಿಕೊಳ್ಳಲು ಕೋಟ್ಯಂತರ ಹಿಂದೂಗಳು ಕಾತುರದಿಂದ ಕಾಯುತ್ತಿದ್ದಾರೆ. ಇದೀಗ ಕರ್ನಾಟಕದ ಜನತೆ ಖುಷಿಪಡುವ ಸುದ್ದಿಯೊಂದು ಹೊರಬಿದ್ದಿದೆ. ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಅಯೋಧ್ಯೆಯಲ್ಲಿ ಕನ್ನಡದ ಹಾಡು ಮೊಳಗಲಿದೆ. ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ರಾಮಲಲ್ಲಾ ವಿಗ್ರಹ ಲೋಕಾರ್ಪಣೆ ವೇಳೆ ಕನ್ನಡದ ಹಾಡು ಮೊಳಗಲಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ ಗೀತೆ ರಚನೆಗಾರ ಡಾ.ಗಜಾನನ ಶರ್ಮಾ ರಚಿಸಿರುವ ‘ಇನ್ನಷ್ಟು ಬೇಕೆನ್ನ ಹೃದಯಕ್ಕೆ ರಾಮ’ ಎಂಬ ಗೀತೆ ಜ.22 ರಂದು ರಾಮಮಂದಿರ ಪ್ರಾಣಪ್ರತಿಷ್ಠೆ ವೇಳೆ ಪ್ರಸಾರವಾಗಲಿದೆ. ಈ ಕುರಿತು ಅಯೋಧ್ಯೆ ಟ್ರಸ್ಟ್ ಎಕ್ಸ್‌ನಲ್ಲಿ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದೆ. ಈ ಕುರಿತು ಡಾ.ಗಜಾನನ ಶರ್ಮಾ ಸ್ಪಷ್ಟಪಡಿಸಿದ್ದು, ನಾನು ರಚಿಸಿದ ಹಾಡನ್ನು ರಾಮಮಂದಿರ ಟ್ರಸ್ಟ್‌ನವರು ತೆಗೆದುಕೊಂಡಿದ್ದಕ್ಕೆ ಖುಷಿಯಾಗಿದೆ…

Read More

ಶಿವಮೊಗ್ಗ:- ಹೆಚ್ಚುವರಿ ಡಿಸಿಎಂ ನೇಮಕದ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಈ ಬಗ್ಗೆ ನಾನು ಮಾತನಾಡುವುದಿಲ್ಲ. ನಮ್ಮ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳಬೇಕೋ ಅದನ್ನು ಹೇಳಿದ್ದಾರೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಗೆ ಹೇಗೆ ಸಹಕಾರಿಯಾಗಲಿವೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, “ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬುವ ಉದ್ದೇಶದೊಂದಿಗೆ ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದೇವೆ. ಆದರೆ‌, ನಾವು ಈ ವಿಚಾರದಲ್ಲಿ ರಾಜಕೀಯ ಮಾಡಲು ಹೋಗುವುದಿಲ್ಲ. ರಾಜ್ಯದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರ ಅಭಿವೃದ್ಧಿ ಮಾಡಲು ಪ್ರಯತ್ನಿಸುತ್ತಿದ್ದೇವೆಯೇ ಹೊರತು ಮತಬ್ಯಾಂಕ್ ಗಾಗಿ ಜಾರಿ ಮಾಡಿಲ್ಲ” ಎಂದು ಹೇಳಿದರು.

Read More

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಗ್ಯಾರಂಟಿ ಯೋಜನೆ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿ ಜಾರಿಯಾಗುತ್ತಿರುವುದು ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು. ಅವರು ಇಂದು ಕೌಶಲ್ಯಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಶಿವಮೊಗ್ಗದ ಫ್ರೀಡಂ ಪಾರ್ಕ್ ಆವರಣದಲ್ಲಿ ಆಯೋಜಿಸಲಾಗಿದ್ದ ಯುವ ನಿಧಿ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯದ ಯುವ ಸಮುದಾಯಕ್ಕೆ ಬೆನ್ನಲುಬಾಗಿ ನಿಂತು ಅವರ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಅದರಲ್ಲೂ ಈ ಯುವನಿಧಿ ಯೋಜನೆಯೂ ಹೋರಾಟದ ನೆಲ, ಸರ್ವಜನಾಂಗದ ಶಾಂತಿಯ ತೋಟ ಎಂದು ವಿಶ್ವಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜಿಲ್ಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನದಂದು ಮಲೆನಾಡಿನಿಂದ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಜಾರಿಯಾಗುತ್ತಿದೆ. ಇದು ರಾಜ್ಯದ ಜನತೆಗೆ ಐತಿಹಾಸಿಕ ಮತ್ತು ಹೆಮ್ಮೆಯ ಸಂಗತಿಯಾಗಿದೆ. ಇದರ ಉಪಯೋಗವನ್ನು ರಾಜ್ಯದ ಯುವ ಸಮುದಾಯ…

Read More

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ (Ayodhya Ram Mandir) ನಡೆಯುವ ರಾಮ ಮಂದಿರ ಪ್ರಾಣ ಪ್ರತಿಷ್ಠಾ ಸಮಾರಂಭದಲ್ಲಿ ಪಾಲ್ಗೊಳ್ಳಲು ಆಹ್ವಾನವನ್ನು ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ (Giriraj Singh) ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಜನರು ಅವಕಾಶವಾದಿ ಹಿಂದೂಗಳಾಗಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಮತ ಪಡೆಯಲು ಮೃದು ಹಿಂದೂಗಳಾಗಲು ಪ್ರಯತ್ನಿಸುತ್ತಾರೆ. ಜವಾಹರಲಾಲ್ ನೆಹರೂ ನಂತರ ಕಾಂಗ್ರೆಸ್ಸಿನ ಯಾರೊಬ್ಬರೂ ಅಯೋಧ್ಯೆಗೆ ಹೋಗಿಲ್ಲ ಎಂದು ಕಿಡಿಕಾರಿದರು. https://ainlivenews.com/if-you-have-a-gmail-account-and-are-not-using-it-you-must-read-this-story/ ನ್ಯಾಯಾಲಯದಲ್ಲಿ ಪ್ರಕರಣವನ್ನು ಇತ್ಯರ್ಥಗೊಳಿಸುವ ಕೆಲಸವನ್ನು ಸ್ವತಃ ಕಾಂಗ್ರೆಸ್ (Congress) ಪಕ್ಷವೇ ಮಾಡಿದೆ. ಆದರೆ ಅವರಿಗೆ ಅಯೋಧ್ಯೆಗೆ ಹೋಗಲು ನೈತಿಕ ಶಕ್ತಿ ಇಲ್ಲ ಎಂದು ಸಚಿವರು ತಿಳಿಸಿದರು. ಅಯೋಧ್ಯೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಸೋನಿಯಾ ಗಾಂಧಿ (Sonia Gandhi) ಮತ್ತು ಅಧೀರ್ ರಂಜನ್ ಚೌಧರಿ ಅವರಿಗೆ ಆಹ್ವಾನ ಬಂದಿತ್ತು. ಆದರೆ ಗೌರವ ಪೂರ್ವಕವಾಗಿ ಕಾಂಗ್ರೆಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗದಿರಲು ನಿರ್ಧರಿಸಿದೆ ಎಂದು…

Read More

ನೆಲಮಂಗಲ:- ಬೆಂಗಳೂರು ಗ್ರಾ. ಜಿಲ್ಲೆ ನೆಲಮಂಗಲದ ಸುಭಾಷ್ ನಗರದಲ್ಲಿ ತಾನು ಪ್ರೀತಿಸಿದ ಹುಡುಗಿ ಬೇರೊಬ್ಬರ ಜೊತೆ ಮದುವೆಯಾದಳು ಎಂಬ ಕಾರಣಕ್ಕೆ ಮನನೊಂದ ಯುವಕ ಫ್ಯಾನ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಕಳೆದುಕೊಂಡ ಇಡೀ ಕುಟುಂಬ ಕಣ್ನೀರಲ್ಲಿ ಕೈತೊಳೆಯುತ್ತಿದೆ. ಮೃತ ಪ್ರವೀಣ್ ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಯುವತಿ ಜೊತೆ ಲವ್ ಬ್ರೇಕಪ್ ಆಗಿತ್ತು. ಅಲ್ಲದೆ ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬರ ಜೋತೆ ವಿವಾಹವಾದಳು. ಇದರಿಂದ ನೊಂದಿದ್ದ ಯುವಕ ಕಳೆದ 6 ತಿಂಗಳಿಂದ ಯುವತಿಯ ನೆನಪಲ್ಲೇ ಕಣ್ಣೀರು ಹಾಕಿದ್ದ. ಆದರೆ ನಿನ್ನೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ರೂಂನ ಫ್ಯಾನಿಗೆ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನೀವು ಸಾಮಾನ್ಯ ಕೇಬಲ್ ಮತ್ತು  ಲೈವ್‌ ಆಗಿ ನೋಡಲು ಸಾಧ್ಯವಾಗದ ಟಿವಿ ಕಾರ್ಯಕ್ರಮಗಳ ಬೆಂಬಲಿಗರಲ್ಲದಿದ್ದರೆ, ಬಹಳಷ್ಟು ಹೊಸ ವಿಷಯಗಳು ಇಂಟರ್ನೆಟ್ ಅನ್ನು ಅವಲಂಬಿಸಿರುವುದನ್ನು  ಗಮನಿಸಿರಬಹುದು. ನಿಮ್ಮ ನಿಯಮಿತ ಸೆಟ್-ಟಾಪ್ ಬಾಕ್ಸ್ ಮೂಲಕ ನೀವು ವಿವಿಧ ರೀತಿಯ ಪ್ರೋಗ್ರಾಮಿಂಗ್‌ಗೆ ಪ್ರವೇಶವನ್ನು ಹೊಂದಿದ್ದರೂ, ನೀವು ಸ್ಟ್ರೀಮಿಂಗ್ ಕ್ರಾಂತಿಯನ್ನು ಪಡೆಯದಿದ್ದರೆ ನೀವು ತಪ್ಪಿಸಿಕೊಳ್ಳುತ್ತೀರಿ. ಅನೇಕ ಅತ್ಯುತ್ತಮ ಟಿವಿ ಶೋಗಳು ಮತ್ತು ಚಲನಚಿತ್ರಗಳು ಈಗ ಆನ್‌ಲೈನ್‌ನಲ್ಲಿ ಕಂಡುಬರುತ್ತವೆ ಮತ್ತು ನೆಟ್‌ಫ್ಲಿಕ್ಸ್, ಹಾಟ್‌ಸ್ಟಾರ್ ಮತ್ತು ಅಮೆಜಾನ್ ಪ್ರೈಮ್ ವೀಡಿಯೊದಂತಹ ಸ್ಟ್ರೀಮಿಂಗ್ ಸೇವೆಗಳ ಮೂಲಕ ಸಾಮಾನ್ಯವಾಗಿ ಲಭ್ಯವಿವೆ. ನೀವು ಪರಿಕಲ್ಪನೆಯಲ್ಲಿ ಮಾರಾಟವಾಗಿದ್ದರೂ ಸಹ, ಸಮಸ್ಯೆಯು ಈಗ ನಿಮ್ಮ ಪರದೆಯೊಂದಿಗೆ ಉದ್ಭವಿಸುತ್ತದೆ. ಖಚಿತವಾಗಿ, ನಿಮ್ಮ ಸ್ಮಾರ್ಟ್‌ಫೋನ್ ಜನಪ್ರಿಯ ಸ್ಟ್ರೀಮಿಂಗ್ ಸೇವೆಗಳನ್ನು ಬೆಂಬಲಿಸುತ್ತದೆ ಮತ್ತು ಮೊಬೈಲ್ ಡೇಟಾದ ವೆಚ್ಚವನ್ನು ಕಡಿಮೆ ಮಾಡುವುದು ಎಂದರೆ ಅದರ ಕೈಗೆಟುಕುವ ದರವೂ ಆಗಿದೆ. ಆದರೆ ನಿಮ್ಮ ವೀಡಿಯೊ ವಿಷಯವನ್ನು ಸಣ್ಣ ಪರದೆಯಲ್ಲಿ ವೀಕ್ಷಿಸಲು ನೀವು ಬಯಸದಿದ್ದರೆ ಏನು ಮಾಡಬೇಕು? ನಿಮ್ಮ ಟಿವಿಯನ್ನು ನೀವು ಬಳಸಬಹುದಾದರೆ ಏನು? ನೀವು…

Read More

ಬೆಂಗಳೂರು:- ನಗರದ ಟರ್ಫ್‌ಕ್ಲಬ್ ಮೇಲೆ ಸಿಸಿಬಿ ದಾಳಿ ನಡೆದಿದ್ದು, ೩ ಕೋಟಿಗೂ ಹೆಚ್ಚು ನಗದು ಜಪ್ತಿ ಮಾಡಲಾಗಿದೆ. ಜಿಎಸ್‌ಟಿ ಕಟ್ಟದೆ ವಂಚನೆ ಹಾಗೂ ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡಿರುವ ಆರೋಪದಡಿ ಸಿಸಿಬಿ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದಾರೆ, ಬೆಂಗಳೂರು ಟರ್ಫ್‌ಕ್ಲಬ್ಗೆ ಬರುವವರಿಂದ ಹೆಚ್ಚು ಹಣ ಪಡೆದು ಕಡಿಮೆ ಮೊತ್ತಕ್ಕೆೆ ಟಿಕೆಟ್ ಮಾರಾಟ, ಸೂಕ್ತ ರೀತಿಯಲ್ಲಿ ಜಿಎಸ್‌ಟಿ ಕಟ್ಟದೆ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಕೌಂಟರ್‌ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ಲಾಕ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿಕ್ರಾಂತ್ ಎಂಟರ್ ಪ್ರೈಸಸ್, ನಿರ್ಮಲ್ ಅಂಡ್ ಕೋ, ಶ್ರೀರಾಮ ಎಂಟರ್ ಪ್ರೈಸಸ್, ಚಾಮುಂಡೇಶ್ವರಿ ಎಂಟರ್ ಪ್ರೈಸಸ್, ಆರ್.ಆರ್ ಎಂಟರ್ ಪ್ರೈಸಸ್, ರಾಯಲ್ ಇಎನ್ ಟಿಪಿ, ಆರ್.ಕೆ.ಎಂಟರ್ ಪ್ರೈಸಸ್, ಎಎ ಅಸೋಸಿಯೇಟ್ಸ್, ಸಾಮ್ರಾಟ್ ಅಂಡ್ ಕೋ. ನೀಲಕಂಠ, ಮೆಟ್ರೊ ಅಸೋಸಿಯೇಟ್ಸ್, ಪರಸ್ ಅಂಡ್ ಕೋ, ಕಾರ್ತಿಕ್ ಆಯಂಡ್ ಕಂಪನಿ, ಅಮೃತಾಯ ಕೌಂಟರ್ ಸೇರಿದಂತೆ ಹಲವು ಕೌಂಟರ್‌ಗಳಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Read More

ಬೆಂಗಳೂರು:- ಕರ್ನಾಟಕದಾದ್ಯಂತ ಚಳಿ ಚುರುಕು ಪಡೆದಿದೆ, ಹಲವೆಡೆ ಮಂಜು ಮುಸುಕಿದ ವಾತಾವರಣವಿದೆ. ವಿಜಯಪುರದಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ ಒಂದೆರಡು ದಿನಗಳಲ್ಲಿ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ. ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​ನಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Read More

ಚಳಿಗಾಲದಲ್ಲಿ ಪ್ರತಿಯೊಬ್ಬರೂ ಬೆಚ್ಚನೆಯ ಚಹಾ, ಕಾಫಿ, ಸಮೋಸ, ಪಕೋಡ ತಿನ್ನಲು ಇಷ್ಟಪಡುತ್ತಾರೆ. ಕೆಲವೊಮ್ಮೆ ಇವುಗಳನ್ನು ಮಿತಿಯಲ್ಲಿ ತಿನ್ನುವುದರಿಂದ ಆರೋಗ್ಯಕ್ಕೆ ಹೆಚ್ಚಿನ ಹಾನಿಯಾಗುವುದಿಲ್ಲ. ಆದರೆ ಚಳಿಗಾಲದಲ್ಲಿ ನಿರಂತರವಾಗಿ ಇಂತಹ ಕರಿದ ಆಹಾರವನ್ನು ತಿನ್ನುವುದು ನಿಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ. ಹಾಗಾಗಿ ನಾವು ಕೆಲವೊಂದು ಟಿಪ್ಸ್‌ ಹೇಳುತ್ತೇವೆ ಕೇಳಿ! ದೇಹ ಮತ್ತು ಮನಸ್ಸನ್ನು ಹೊಂದಲು ಕ್ಯಾಲೋರಿ ಸೇವನೆಯನ್ನು ಪರಿಶೀಲಿಸುವುದು ಮುಖ್ಯವಾಗಿದೆ. ವಿಟಮಿನ್ ಸಿ, ಡಿ, ಒಮೆಗಾ -3 ಕೊಬ್ಬಿನಾಮ್ಲಗಳನ್ನು ಒಳಗೊಂಡಿರುವ ಆಹಾರಗಳು ಮತ್ತು ಹಗುರವಾದ ಊಟವು ಸಹಾಯ ಮಾಡುತ್ತದೆ ಎಂದು ತಜ್ಞರು ಸೂಚಿಸುತ್ತಾರೆ. ಚಳಿಗಾಲದ ಉದ್ದಕ್ಕೂ, ಆರೋಗ್ಯಕರ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸುವುದು ನಮಗೆ ಮುಖ್ಯವಾಗಿದೆ, ಅನಾರೋಗ್ಯವನ್ನು ವಿರೋಧಿಸಲು ದೇಹದ ನೈಸರ್ಗಿಕ ಕಾರ್ಯವಿಧಾನ. ಸಿಟ್ರಸ್ ಹಣ್ಣುಗಳಲ್ಲಿ ಕಂಡುಬರುವ ವಿಟಮಿನ್ ಸಿ ಆರೋಗ್ಯಕರ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬೆಂಬಲಿಸಲು ಸಹಾಯ ಮಾಡುತ್ತದೆ ಮತ್ತು ಆಯಾಸ ಮತ್ತು ಆಯಾಸವನ್ನು ಕಡಿಮೆ ಮಾಡಲು ಸಹಾಯ ಮಾಡುವ ಹೆಚ್ಚುವರಿ ಪ್ರಯೋಜನವನ್ನು ಹೊಂದಿದೆ. * ಧಾನ್ಯಗಳು ಮತ್ತು ದ್ವಿದಳ ಧಾನ್ಯಗಳು: ಗೋಧಿ ಮತ್ತು ಅಕ್ಕಿಯ…

Read More

ಬೆಳಗಾವಿ:- ಮಾದಿಗರ ಆಸ್ಮಿತೆಗೆ ಧಕ್ಕೆ ಯಾಗದಂತೆ ತಿಮ್ಮಾಪೂರರವರಿಗೆ ಉಪ ಮಖ್ಯಮಂತ್ರಿ ಸ್ಥಾನ ನೀಡಿ ಸಾಮಾಜಿಕ ನ್ಯಾಯ ನೀಡಲು ಪಕ್ಷದ ಹೈಕಮಾಂಡಕ್ಕೆ ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಆರ್.ಬಿ. ತಿಮ್ಮಾಪೂರರವರು ಉತ್ತರ ಕರ್ನಾಟಕದ ದಲಿತ ಸಮುದಾಯದ (ಎಡ ಗೈ ಪ್ರಬಲ ನಾಯಕರಾಗಿದ್ದು ಸಮುದಾಯವನ್ನು ಸಂಘಟಿಸಿ ಮಾದಿಗ ಸಮುದಾಯವನ್ನು ಒಟ್ಟು ಗೂಡಿಸಿ ಕಾಂಗ್ರೆಸ್ ಪಕ್ಷಕ್ಕೆ ಗಟ್ಟಿ ತನದಿಂದ ಬೆಂಬಲವನ್ನು ಕೊಡಿಸುವಲ್ಲಿ ಯಶಸ್ವಿಯಾಗಿದ್ದು ಸಮುದಾಯದ ಆಶಯವನ್ನು ಈಡೇರಿಸಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಬೇಕೇಂದು ಮಾದಿಗ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಕರ್ತರನ್ನು ಉದ್ದೇಶಿಸಿ ಮಾತನಾಡಿದ ಪಿರಪ್ಪ ಮ್ಯಾಗೇರಿ ಶ್ರೀಮತಿ ಇಂದಿರಾಗಾಂಧಿ ಹಾಗೂ ದೇವರಾಜ ಅರಸರ ಕಾಲದಿಂದಲೂ ಕಾಂಗ್ರೇಸ್ ಪಕ್ಷ ಸಾಮಾಜಿಕ ನ್ಯಾಯವನ್ನು ನೀಡುತ್ತಾ ಬಂದಿದ್ದು ಇರುತ್ತದೆ ಈಗ ಸರ್ಕಾರ ಪಕ್ಷದ ಹೈಕಮಾಂಡರ ಮಾದಿಗರ ಅಸ್ಮಿತೆಗೆ ಧಕ್ಕೆ ಯಾಗದಂತೆ ಸಾಮಾಜಿಕ ನೀಡಬೇಕೆಂದು ಅವರು ಹೇಳಿದ್ದಾರೆ. ಎಡಗೈ ಸಮುದಾಯದ ನಾಯಕರಾದಂತ ತಿಮ್ಮಾಪೂರರವರು ಹಾಗೂ ಕೆ.ಎಚ್.ಮುನಿಯಪ್ಪರವರು ಇದ್ದು ಕಾಂಗ್ರೇಸ ಪಕ್ಷವನ್ನು ಬೆಂಬಲಿಸುವಲ್ಲಿ…

Read More