Author: AIN Author

ಮಂಡ್ಯ : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನೆಗೆ ಅಕ್ರಮವಾಗಿ ನಾವು ವಿದ್ಯುತ್‌ ಕನೆಕ್ಷನ್‌ ಕೊಡಿಸಿದ್ವಾ? ಗೊತ್ತಿಲ್ಲದೇ ತಪ್ಪಾಗಿದೆ ಅಂತಾ ಹೇಳಿದ್ರೆ ಮುಗಿತಿತ್ತು. ಅದು ಬಿಟ್ಟು ಎಲ್ಲರನ್ನು ಲಘುವಾಗಿ ಬಾಯಿಗೆ ಬಂದಾಗೆ ಮಾತನಾಡಿದರು. ಇವರಿಗೆ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ರಕ್ಷಣೆ ಇದೆ ಅಂತಾ ಬಾಯಿಗೆ ಬಂದಾಗೆ ಮಾತಾಡ್ತಾರಾ.? ಮಾತನಾಡುವ ನಾಲಿಗೆಗೆ ಇತಿಮಿತಿ ಇರುತ್ತೆ ಅಲ್ವ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕಿಡಿ ಕಾರಿದರು. ಮಂಡ್ಯ ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಮನೆಗೆ ಅಕ್ರಮವಾಗಿ ವಿದ್ಯುತ್ ಕನೆಕ್ಷನ್ ನಾವು ಕೊಡಿಸಿದ್ವಾ? 68 ಸಾವಿರ ಪೆನಾಪ್ಟಿ ಕಟ್ಟೋಕೆ ನಾವು ಹೇಳಿದ್ವಾ? ಹಳ್ಳಿಗಳಲ್ಲಿ ಅಕ್ರಮವಾಗಿ ಮನೆ ಕಟ್ಟುವಾಗ ವಿದ್ಯುತ್ ತಕೊಂಡಿರ್ತಾರೆ. ಆ ಸಂದರ್ಭ ನಾನೇ ಮಂತ್ರಿಯಾಗಿ ಬುದ್ದಿ ಹೇಳ್ತೀನಿ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ದಂಡವನ್ನ ಕಡಿಮೆ ಮಾಡಿ ಅಂತಾ ಅಧಿಕಾರಿಗೆ ಹೇಳಿದ್ದೇವೆ. ಗೊತ್ತಿಲ್ಲದೇ ತಪ್ಪಾಗಿದೆ ಅಂತಾ ಹೇಳಿದ್ರೆ ಮುಗಿತಿತ್ತು. ಅದು ಬಿಟ್ಟು ಎಲ್ಲರನ್ನು ಲಘುವಾಗಿ ಬಾಯಿಗೆ ಬಂದಾಗೆ ಮಾತನಾಡಿದರು. ಇವರಿಗೆ ಪ್ರಧಾನಿ, ಮಾಜಿ…

Read More

ಬೆಂಗಳೂರು:- ಮೆಟ್ರೋದಲ್ಲಿ ಯುವತಿಯೋರ್ವಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗಿದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಕಿರುಕುಳ ಎಸಗಿದ ವ್ಯಕ್ತಿ ಗುಂಪಿನಲ್ಲಿ ಸಲೀಸಾಗಿ ಕಣ್ಮರೆಯಾಗಿದ್ದಾನೆ. ಸಂತ್ರಸ್ತೆಯ ಸ್ನೇಹಿತರು ಈ ಘಟನೆಯನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದು, ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ಘಟನೆಯನ್ನು ಹಂಚಿಕೊಂಡಿರುವ ಆಕೆಯ ಸ್ನೇಹಿತರು, ಕಾಲೇಜಿಗೆ ಹೋಗಲು ಬಸ್ ಬಳಸಲಾಗುತ್ತಿತ್ತು. ಆದರೆ ಸೋಮವಾರ ಮೆಟ್ರೋದಲ್ಲಿ ಪ್ರಯಾಣಿಸಲಾಯಿತು. ಮೆಜೆಸ್ಟಿಕ್‌ನಲ್ಲಿ ಬೆಳಗ್ಗೆ 8.50ರ ಸುಮಾರಿಗೆ ಮೆಟ್ರೋದಲ್ಲಿ ಸಾಕಷ್ಟು ಜನಸಂದಣಿ ಇತ್ತು. ಅಲ್ಲಿ ತಳ್ಳಾಟ, ನೂಕಾಟ ನಡೆಯುತ್ತಿತ್ತು. ಜನಸಂದಣಿ ನಿರ್ವಹಣೆಯ ಜವಾಬ್ದಾರಿ ಹೊಂದಿರುವ ಮಹಿಳೆ ಹೆಚ್ಚಿನ ಸಂಖ್ಯೆಯ ಜನರನ್ನು ರೈಲಿಗೆ ಪ್ರವೇಶಿಸಲು ಅವಕಾಶ ಮಾಡಿಕೊಟ್ಟರು ‘ಸ್ವಲ್ಪ ಸಮಯದ ನಂತರ, ಸ್ನೇಹಿತೆಗೆ ತುಂಬಾ ಅನಾನುಕೂಲವಾಯಿತು. ಕೆಂಪು ಅಂಗಿಯ ವ್ಯಕ್ತಿಯೊಬ್ಬನು ತನ್ನ ಹಿಂದೆ ನಿಂತಿದ್ದಾನೆ ಎಂದು ಅವಳು ಅರಿತುಕೊಂಡಳು. ಅವನು ಅವಳನ್ನು ಮುಟ್ಟುತ್ತಿದ್ದನು. ಅವನ ಉಗುರುಗಳು ಅವಳನ್ನು ಚುಚ್ಚುತ್ತಿದ್ದವು. ಆರಂಭದಲ್ಲಿ ಏನಾಗುತ್ತಿದೆ ಎಂದು ಆಕೆಗೆ ತಿಳಿದಿರಲಿಲ್ಲ, ಅವಳು ತಿರುಗಿ ನೋಡಿದಾಗ, ಒಬ್ಬ ವ್ಯಕ್ತಿ ತನ್ನ ಹಿಂದೆ ನಿಂತಿದ್ದನು. ಸಹಾಯಕ್ಕಾಗಿ ಕಿರುಚಲು ಪ್ರಾರಂಭಿಸಿದಳು. ಆದರೆ ಜನರು…

Read More

ಬೆಂಗಳೂರು:- ಇಂದು ನಗರದಲ್ಲಿ ಕುದಿ ಕಂಬಳಕ್ಕೆ ಚಾಲನೆ ದೊರೆಯಲಿದೆ. ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ -ನಮ್ಮ ಕಂಬಳದ ಪೂರ್ವಭಾವಿಯಾಗಿ ಬುಧವಾರ ಕುದಿ ಕಂಬಳಕ್ಕೆ ಚಾಲನೆ ಸಿಗಲಿದೆ. ಅಶ್ವಿ‌ನಿ ಪುನೀತ್‌ ರಾಜಕುಮಾರ್‌ ಅವರು ಬೆಳಗ್ಗೆ 10ಕ್ಕೆ ಅರಮನೆ ಮೈದಾನದ 5ನೇ ಗೇಟ್‌ನಲ್ಲಿ ನಿರ್ಮಿಸಲಾದ ಕಣದಲ್ಲಿ ಕುದಿ ಕಂಬಳಕ್ಕೆ ಚಾಲನೆ ನೀಡಲಿದ್ದಾರೆ. ಅರಮನೆ ಮೈದಾನದಲ್ಲಿ ಕಂಬಳದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ವೇದಿಕೆ, ಆಸನ, ಪಾರ್ಕಿಂಗ್‌ ವ್ಯವಸ್ಥೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಂಬಳ ಸಮಿತಿ ಹಗಲಿರುಳು ಶ್ರಮಿಸುತ್ತಿದೆ. ಜತೆಗೆ ಸ್ಟಾಲ್‌ಗ‌ಳ ನೋಂದಣಿ ಕೆಲಸವು ಭರದಿಂದ ನಡೆಯುತ್ತಿದೆ. ಕಂಬಳ ಸ್ಪರ್ಧಾಕೂಟ ಸಮೀಪಿಸುತ್ತಿದ್ದಂತೆ ಕುದಿ ಕಂಬಳ ಆಯೋಜಿಸಲಾಗುತ್ತದೆ. ಕರಾವಳಿಯಲ್ಲಿ ಸ್ಪರ್ಧೆ ನಡೆಯುವ ಒಂದು ತಿಂಗಳ ಮೊದಲು ಕುದಿ ಕಂಬಳ ಎಂಬ ಕೋಣಗಳ ಓಟದ ರಿಹರ್ಸಲ್‌ ಅಥವಾ ಓಟದ ತಾಲೀಮು ಮಾಡಲಾಗುತ್ತದೆ. ಈ ವೇಳೆ ಕೋಣಗಳಿಗೆ ಹುರಿದುಂಬಿಸುವ ಕೆಲಸವಾಗುತ್ತದೆ. ಅಂತೆಯೇ ಬೆಂಗಳೂರು ಕಂಬಳದ ಪೂರ್ವಭಾವಿಯಾಗಿ ಬುಧವಾರ ಮಂಗಳೂರಿನಿಂದ ಆಗಮಿಸಿದ ಎರಡು ಜೋಡಿ ಕೋಣಗಳು ಕುದಿ ಕಂಬಳದ ಟ್ರಯಲ್‌ಗೆ ಇಳಿಯಲಿದೆ.

Read More

ಚಿಕ್ಕಮಗಳೂರು: ಪ್ರಿಯಾಂಕ್ ಖರ್ಗೆ ಕಲಿಯುವುದು ಬಹಳ ಇದೆ, ಹಗುರವಾದ ಮಾತುಗಳು ಬೇಡ ಎಂದು ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಇಲ್ಲಿಗೆ ಎಲ್ಲಾ ಶಾಸಕರು ಬರುತ್ತಾರೆ, ಎಲ್ಲದರ ಬಗ್ಗೆಯೂ ಮಾತುಕತೆ ನಡೆಯುತ್ತೆ. ಎಲ್ಲರೂ ಒಂದು ಕಡೆ ಸೇರಿ ಖುಷಿಯಿಂದ ಇರೋಣ ಅಂತಾ ಇಲ್ಲಿಗೆ ಬಂದಿದ್ದೇವೆ ಜೆಡಿಎಸ್‌ ಪಕ್ಷದಿಂದ ಯಾರೂ ಹೋಗಲ್ಲ. ನಾವೆಲ್ಲ ಒಗ್ಗಟ್ಟಿನಿಂದ ಇದ್ದೇವೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಹಳೇ ಮೈಸೂರು ಪ್ರಾಂತ್ಯದಲ್ಲಿ ಗಾಳ ಹಾಕುವ ಕೆಲಸ ನಡೆಯುತ್ತಿದೆ. ಆದರೆ ಯಾರೂ ಕಿವಿಗೊಡಲ್ಲ. ನಾವು ಎಚ್‌ಡಿ ದೇವೇಗೌಡರ ಕುಟುಂಬದ ಸದಸ್ಯರಿದ್ದಂತೆ. ಹೆಚ್ಡಿಕೆ, ದೇವೇಗೌಡರ ಬಗ್ಗೆ ಗೌರವವಿದೆ.  ನಾವ್ಯಾರೂ ಎಲ್ಲಿಗೂ ಹೋಗಲ್ಲ ಅಂತ ಎಲ್ಲರೂ ಮಾತು ಕೊಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು. ಎಚ್‌ಡಿ ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು ಅದಕ್ಕಾಗಿ ಸುಳ್ಳು ಆರೋಪ ಮಾಡುತ್ತಾರೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು, ದೇವೇಗೌಡರ ಕುಟುಂಬ ಸೋಲು-ಗೆಲುವನ್ನ ಸಮಾನವಾಗಿ ಸ್ವೀಕರಿಸ್ತಾರೆ. ಯಾರೇ ಆದರೂ ಸಣ್ಣತನದ ಹೇಳಿಕೆ ಕೊಡುವುದು ಒಳ್ಳೆಯದ್ದಲ್ಲ ಎಂದು ತಿರುಗೇಟು…

Read More

ಬೆಂಗಳೂರು:- ಬೆಂಗಳೂರಿನಲ್ಲೊಬ್ಬ ವಿಚಿತ್ರ ಕಳ್ಳನೊಬ್ಬ ಇದ್ದು, ಎಲ್ಲರೂ ನಗನಾಣ್ಯ ಕಳ್ಳತನ ಮಾಡಿದ್ರೆ, ಈ ಕಳ್ಳನ ಟಾರ್ಗೆಟ್ ಮಾತ್ರ ಎಳನೀರು ಮಾತ್ರ. ಹೌದು, ನಗರದಲ್ಲಿ ಎಳನೀರು ಕಳ್ಳತನ ಮಾಡುತ್ತಿದ್ದ ಅಸಾಮಿಯನ್ನ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸರಿಂದ ಮೋಹನ್ ಎಂಬಾತನನ್ನು ಅರೆಸ್ಟ್ ಮಾಡಲಾಗಿದೆ. ಕಳೆದ ಮೂರು ತಿಂಗಳಿಂದ ಮೋಹನ್ ಎಳನೀರು ಕಳ್ಳತನ ಮಾಡುತ್ತಿದ್ದ. ಎಳನೀರು ಕದಿಯಲೆಂದೆ ಕಾರಿನಲ್ಲಿ ಅರಾಮಿನ ಬರುತ್ತಿದ್ದ. ರಾತ್ರಿ ವೇಳೆ ರಸ್ತೆ ಬದಿಯ ಎಳನೀರು ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ. ಗಿರಿನಗರದ ಮಂಕುತಿಮ್ಮನ ಪಾರ್ಕ್ ಬಳಿ ಇತ್ತೀಚಿಗೆ ಎಳನೀರು ಕಳ್ಳತನ ಮಾಡಿದ್ದ. ರಾಜಣ್ಣ ಎಂಬುವರ 1150 ಎಳನೀರು ಆರೋಪಿ ಮೋಹನ್ ಕದ್ದಿದ್ದ. ಈ ಸಂಬಂಧ ಎಳನೀರು ವ್ಯಾಪಾರಿ ರಾಜಣ್ಣ ಗಿರಿನಗರ ಠಾಣೆಗೆ ದೂರು ನೀಡಿದ್ದ. ಸಿಸಿಟಿವಿಗಳ ಪರಿಶೀಲನೆ ನಡೆಸಿ ಪೊಲೀಸರು ಮೋಹನ್ ನನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತನಿಂದ ಎಳನೀರು ಸೇರಿ ಎಂಟು ಲಕ್ಷ ಮೌಲ್ಯದ ಒಂದು ಕಾರು, ರಾಯಲ್ ಎನ್ ಫೀಲ್ಡ್ ಬೈಕ್ ವಶಕ್ಕೆ ಪಡೆಯಲಾಗಿದೆ. ಪೊಲೀಸರ ತನಿಖೆ ವೇಳೆ ಎಳನೀರು ಕಳ್ಳನ…

Read More

ಕಲಬುರಗಿ : ಪ್ರಿಯಾಂಕ್ ಖರ್ಗೆ ಸಚಿವರಾದ ಬಳಿಕ ಕಲಬುರಗಿಯಲ್ಲಿ ಗೂಂಡಾಗಿರಿ ಪ್ರವೃತ್ತಿ ಹೆಚ್ಚಾಗಿದೆ ಎಂದು ಕಲಬುರಗಿಯಲ್ಲಿ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಆಂದೋಲಾ ಸಿದ್ದಲಿಂಗ ಸ್ವಾಮೀಜಿ ಕಿಡಿಕಾರಿದರು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಮೇಲೆ ಖರ್ಗೆ ಬೆಂಬಲಿಗರು ಮಾರಾಣಾಂತಿಕವಾಗಿ ಹಲ್ಲೆ ನಡೆಸಿರುವ ವಿಚಾರ ಸಂಬಂಧ ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿದರು. ಚಿತ್ತಾಪುರದಲ್ಲಿ ಬಹಳಷ್ಟು ಅಕ್ರಮ ನಡೆಯುತ್ತಿದೆ ಅದಕ್ಕೆಲ್ಲ ಸಚಿವ ಪ್ರಿಯಾಂಕ್ ಖರ್ಗೆ ಅವರ ಕುಮ್ಮಕ್ಕಿದೆ‌. ಕಲಬುರಗಿಯಲ್ಲಿ ದುಷ್ಟಶಕ್ತಿಗಳ ಅಟ್ಟಹಾಸ ಮಿತಿಮೀರಿದೆ. ಪ್ರಜಾಪ್ರಭುತ್ವ ಕಗ್ಗೊಲೆಯಾಗಿ ಗೂಂಡಾ ಪ್ರಭುತ್ವ ಹೆಚ್ಚಾಗಿದೆ. ಅಕ್ರಮ ಮರಳು ಲಾರಿಗಳನ್ನು ಹಿಡಿದು  ಪೊಲೀಸ್ ಠಾಣೆಗೆ ಒಪ್ಪಿಸಿದ ಮಣಿಕಂಠ ಮೇಲೆ ರಾಬರಿ ಕೇಸ್ ಹಾಕಿದ್ದಾರೆ, ಆಸ್ಪತ್ರೆ ಶುಚಿತ್ವದ ಬಗ್ಗೆ ಪ್ರಶ್ನೆ ಮಾಡಿದ್ರೆ ಕರ್ತವ್ಯಕ್ಕೆ ಅಡ್ಡಿ ಆಂತಾ ಮಣಿಕಂಠ ಮೇಲೆ ಕೇಸ್ ಹಾಕುತ್ತಾರೆ. https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಹಾಗಾದ್ರೆ ಈ ಜಿಲ್ಲೆಯಲ್ಲಿ ಹೋರಾಟನೇ ಮಾಡಬಾರದಾ? ಪ್ರಿಯಾಂಕ ಖರ್ಗೆ ಅವರದ್ದು ಯಾವ ಸಂವಿಧಾನ ಇದೆ? ಇವರ ಅಕ್ರಮ, ಭ್ರಷ್ಟಾಚಾರ, ಅವ್ಯವಸ್ಥೆ ವಿರುದ್ಧ ಪ್ರಶ್ನಿಸಿದರೆ ಕ್ರಿಮಿನಲ್…

Read More

ಬೆಂಗಳೂರು:- ಅತ್ಯಾಚಾರಕ್ಕೆ ಒಳಾಗದ ಸಂತ್ರಸ್ತೆಯನ್ನೇ ಮದುವೆಯಾದ ಆರೋಪಿಯ ಕೇಸ್ ಅನ್ನು ಹೈಕೋರ್ಟ್ ರದ್ದು ಮಾಡಿದೆ. ನ್ಯಾಯಮೂರ್ತಿ ಹೇಮಂತ್‌ ಚಂದನ್‌ ಗೌಡರ್‌ ಅವರ ಪೀಠ ಈ ಆದೇಶ ಮಾಡಿದೆ. ಅತ್ಯಾಚಾರ ಘಟನೆ ನಡೆದಾಗ ಸಂತ್ರಸ್ತೆಯು ಅಪ್ರಾಪ್ತೆಯಾಗಿದ್ದರು. ಸಂತ್ರಸ್ತೆ ಲೈಂಗಿಕ ಸಂಭೋಗಕ್ಕೆ ಗುರಿಯಾಗಿದ್ದಾಳೆ ಎಂಬುದಾಗಿ ವೈದ್ಯಕೀಯ ದಾಖಲೆಗಳು ಬಹಿರಂಗಪಡಿಸುತ್ತವೆ. ಇದೀಗ ವಿಚಾರಣೆಗೆ ಹಾಜರಾಗಿರುವ ಸಂತ್ರಸ್ತೆ, ಆರೋಪಿಯನ್ನು ಮದುವೆಯಾಗುವುದಾಗಿ ದೃಢೀಕರಿಸಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಮತ್ತೊಂದೆಡೆ ಆರೋಪಿ ಸಹ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯದ ವಿಚಾರಣೆ ವೇಳೆ ಪ್ರಕರಣದ ಸಾಕ್ಷಿಯಾಗಿರುವ ಸಂತ್ರಸ್ತೆ ಪ್ರತಿಕೂಲ ಸಾಕ್ಷ್ಯ ನುಡಿದ್ದಾರೆ. ಪ್ರಾಸಿಕ್ಯೂಷನ್‌ನ್ನು ಬೆಂಬಲಿಸುವ ಯಾವೊಂದು ಸಾಕ್ಷ್ಯವನ್ನೂ ಪಾಟಿ ಸವಾಲಿನಲ್ಲಿ ಸಂತ್ರಸ್ತೆ ದಾಖಲಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಆರೋಪಿ ವಿರುದ್ಧದ ಕ್ರಿಮಿನಲ್‌ ವಿಚಾರಣಾ ಪ್ರಕ್ರಿಯೆ ಮುಂದುವರಿದರೆ, ಆತ ಸೆರೆಮನೆ ವಾಸದಲ್ಲಿ ಮುಂದುವರಿಯಲಿದ್ದು, ಹೆಚ್ಚಿನ ಸಂಕಟ ಅನುಭವಿಸುತ್ತಾನೆ. ಜೊತೆಗೆ, ಸಂತ್ರಸ್ತೆಗೆ ನ್ಯಾಯ ಸಿಗುವುದಕ್ಕಿಂತ ಹೆಚ್ಚಿನ ದುಃಖ ಒದಗುತ್ತದೆ. ನ್ಯಾಯದಾನದೊಂದಿಗೆ ಪ್ರಕರಣ ಅಂತ್ಯವಾಗುವುದಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ…

Read More

ಬೆಂಗಳೂರು:- ಇನ್ಮುಂದೆ ಬೆಂಗಳೂರಿನಲ್ಲಿ ಮನೆ ಬಾಗಿಲಿಗೆ ತಾಜಾ ಮೀನು ಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಕೊಡುವುದು ಹಾಗೂ ಮನೆ ಬಾಗಿಲಿಗೆ ತಾಜಾ ಮೀನು ತಲುಪಿಸುವ ಉದ್ದೇಶದಿಂದ ಸರ್ಕಾರ ಮತ್ಸ್ಯವಾಹಿನಿ ವಾಹನ ಆರಂಭಿಸಿದೆ. ಸದ್ಯ 150 ವಾಹನ ಸೇವೆಯನ್ನು ಮೀನುಗಾರಿಕಾ ಇಲಾಖೆ ಆರಂಭಿಸಿದ್ದು, ಮುಂದೆ ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ. ಈ 150 ಮತ್ಸ್ಯವಾಹಿನಿ ವಾಹನಗಳು ಬೆಂಗಳೂರು ನಗರದಲ್ಲಿ ಸಂಚರಿಸಲಿದ್ದು, ಬೆಳಗ್ಗೆ ತಾಜಾ ಮೀನು, ಸಂಜೆ ಮೀನು ಖಾದ್ಯಗಳ ಮಾರಾಟ ಮಾಡಲಾಗುತ್ತದೆ. ವಾಹನ ಭದ್ರತಾ ಠೇವಣಿ 2 ಲಕ್ಷ ರೂ ಹಾಗೂ ಮಾಸಿಕ 3000 ರೂ. ಬಾಡಿಗೆಯನ್ನು ರಾಜ್ಯ ಸರ್ಕಾರದಿಂದ ನೀಡಲಾಗುತ್ತದೆ. ಬ್ಯಾಟರಿ ಚಾಲಿತ ತ್ರಿಚಕ್ರ ವಾಹನದಲ್ಲಿ ಮೀನು ಖಾದ್ಯ ಮಾಡುವ ವ್ಯವಸ್ಥೆ ಕೂಡ ಇದ್ದು, ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೆ 150 ವಾಹನಗಳನ್ನು ಸರ್ಕಾರ ವಿತರಿಸುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದ್ದು, ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ…

Read More

ತೆಲಂಗಾಣ: ಪಂಚ ರಾಜ್ಯ ವಿಧಾನಸಭಾ ಚುನಾವಣಾ ಅಖಾಡ ರಂಗೇರಿದೆ. ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ತೆಲಂಗಾಣ ರಾಜ್ಯದ ಜಗ್ತಿಯಾಲ್‌ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ, ತೆಲಂಗಾಣ ರಾಜ್ಯದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ, https://ainlivenews.com/satish-jarakiholi-becoming-cm-is-as-true-as-surya-being-born-congress-mla/ ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಮರು ಹಂಚಿಕೆ ಮಾಡೋದಾಗಿ ಭರವಸೆ ನೀಡಿದ್ದಾರೆ.  ಎಸ್‌ಸಿ, ಎಸ್‌ಟಿ ಹಾಗೂ ಒಬಿಸಿ ಸಮುದಾಯಕ್ಕೆ ಮೀಸಲಾತಿ ಮರು ಹಂಚಿಕೆ ಮಾಡಬೇಕಿದೆ. ಹೀಗಾಗಿ, ತೆಲಂಗಾಣ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ. 4 ಮೀಸಲಾತಿಯನ್ನು ಪರಿಶಿಷ್ಟ ಜಾತಿ, ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳಿಗೆ ಹಂಚಿಕೆ ಮಾಡಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.

Read More

ಬೆಂಗಳೂರು:- ನಿಗಮ- ಮಂಡಳಿ ನೇಮಕ ಕುರಿತು ಸುರ್ಜೆವಾಲ ಜೊತೆಗೆ ಸಭೆ ನಡೆದಿದ್ದು, ಸಭೆಯ ಬಳಿಕ DCM ಡಿಕೆಶಿ ಮಹತ್ವದ ಮಾಹಿತಿ ನೀಡಿದ್ದಾರೆ. ಪಕ್ಷದ ಸಂಘಟನೆ, ನಿಗಮ ಮಂಡಳಿ ನೇಮಕ ಸೇರಿದಂತೆ ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ನೀಡುವ ಬಗ್ಗೆ ನಮ್ಮ ನಾಯಕರ ಜೊತೆ ಚರ್ಚೆ ಮಾಡಲಾಗಿದೆ. ಶಾಸಕರಿಗೆ ಜವಾಬ್ದಾರಿ ನೀಡುವ ಬಗ್ಗೆ ಮೊದಲ ಸುತ್ತಿನ ಚರ್ಚೆ ಆಗಿದ್ದು, ಈಗಿನ ಪಟ್ಟಿಯನ್ನು ಕೇಂದ್ರ ನಾಯಕರು ಪರಿಶೀಲಿಸಲಿದ್ದಾರೆ. ನಂತರ ಎರಡನೇ ಸುತ್ತಿನ ಚರ್ಚೆ ಆಗಲಿದೆ.” ಈ ಪ್ರಕ್ರಿಯೆ ಪೂರ್ಣಗೊಳ್ಳಲು ಎಷ್ಟು ಸಮಯಾವಕಾಶ ಬೇಕು ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ, “ಪಂಚರಾಜ್ಯ ಚುನಾವಣೆ ನಡೆಯುತ್ತಿದ್ದು, ಮುಖ್ಯಮಂತ್ರಿಗಳು ಹಾಗೂ ನಾನು ಪ್ರಚಾರಕ್ಕೆ ಹೋಗಬೇಕಿದೆ. ಆದಷ್ಟು ಬೇಗ ಈ ಪ್ರಕ್ರಿಯೆ ಮಾಡುತ್ತೇವೆ” ಎಂದರು. ಗೃಹಸಚಿವರು ಮುನಿಸಿಕೊಂಡಿದ್ದಾರೆ ಎಂಬ ಬಗ್ಗೆ ಚರ್ಚೆ ಆಗುತ್ತಿದೆಯಲ್ಲ ಎಂದು ಕೇಳಿದಾಗ, “ಗೃಹಸಚಿವರು ಕೂಡ ಈ ಸಭೆಯಲ್ಲಿ ಭಾಗವಹಿಸಿದ್ದರು. ಬೆಳಗಾವಿಯಿಂದ ಬಂದು ಚರ್ಚೆ ಮಾಡಿದ್ದಾರೆ. ಯಾರು ಯಾಕೆ ಮುನಿಸಿಕೊಳ್ಳುತ್ತಾರೆ” ಎಂದು ಕೇಳಿದರು. ಲೋಕಸಭೆ ಚುನಾವಣೆ ಸಂಬಂಧದ…

Read More