ನಾನಾ ಕಾರಣಗಳಿಂದಾಗಿ ಹಿಂದಿ ಬಿಗ್ ಬಾಸ್ (Bigg Boss Hindi) ಸಾಕಷ್ಟು ಕುತೂಹಲ ಮೂಡಿಸಿತ್ತು. ಅಷ್ಟೇ ಅಲ್ಲದೇ ಸಾಕಷ್ಟು ಚರ್ಚೆಗಳನ್ನೂ ಅದು ಹುಟ್ಟು ಹಾಕಿತ್ತು. ಅದರಲ್ಲೂ ನಟ ವಿಕ್ಕಿ ಜೈನ್ (Vicky Jain), ತನ್ನ ಪತ್ನಿ ಹಾಗೂ ನಟಿ ಅಂಕಿತಾ ಲೋಖಂಡೆ ಜೊತೆ ಬಿಗ್ ಬಾಸ್ ಮನೆಗೆ ಕಾಲಿಟ್ಟು ಅಚ್ಚರಿ ಮೂಡಿಸಿದ್ದರು. ಈಗ ಬಿಗ್ ಬಾಸ್ ವಿಕ್ಕಿಗೆ ಬಿಗ್ ಶಾಕ್ ನೀಡಿದ್ದಾರೆ. ಹೌದು, ಹಿಂದಿ ಬಾಲಿವುಡ್ ಕೂಡ ಫಿನಾಲೆ ಹಂತ ತಲುಪಿದೆ. ನೂರು ದಿನಗಳು ಕಳೆದಿವೆ. ಅಂಕಿತಾ ಮತ್ತು ವಿಕ್ಕಿ ಇಬ್ಬರೂ ಫಿನಾಲೆ ವೇದಿಕೆಯ ಮೇಲೆ ಇರಲಿದ್ದಾರೆ ಎನ್ನುವುದು ಅವರ ಅಭಿಮಾನಿಗಳ ಕೋರಿಕೆ ಆಗಿತ್ತು. ಆದರೆ, ಬಿಗ್ ಬಾಸ್ ಆ ಕೋರಿಯನ್ನು ಈಡೇರಿಸಿಲ್ಲ. ಮಿಡ್ ವೀಕ್ ಎಲಿಮಿನೇಷನ್ (Eliminate) ನಡೆಸಿ ವಿಕ್ಕಿಯನ್ನು ಹೊರಗೆ ಕಳುಹಿಸಲಾಗಿದೆ. ಪತಿ ಬಿಗ್ ಬಾಸ್ ಮನೆಯನ್ನು ಬಿಟ್ಟು ಹೋಗುವುದನ್ನು ನೋಡಿ ಅಂಕಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಅಂಕಿತಾ ಲೋಖಂಡೆ (Ankita Lokhande) ಹಾಗೂ ವಿಕ್ಕಿ ದಂಪತಿ ವಿಚಿತ್ರ…
Author: AIN Author
ರಾಯಚೂರು: ಜಿಲ್ಲೆಯ ಲಿಂಗಸುಗೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಪಡೆಯುತ್ತಿದ್ದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾನೆ. ಕೆಂಚಪ್ಪ ಬಾವಿಮನಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಜೆಸ್ಕಾಂ ಅಧಿಕಾರಿ. ಲಿಂಗಸುಗೂರಿನ ಆಶಿಹಾಳ ತಾಂಡದ ನಿವಾಸಿ ವಿದ್ಯುತ್ ಗುತ್ತಿಗೆದಾರ ಪ್ರೇಮಕುಮಾರ ಎಂಬವರಿಗೆ ಹೊಸ ಮನೆಯ ಆರ್ ಆರ್ ನಂಬರ್ ನೀಡಲು 10 ಸಾವಿರ ಲಂಚ ಕೇಳಿದ್ದ. https://ainlivenews.com/have-you-installed-pink-whatsapp-be-careful-its-dangerous/ ಈಗಾಗಲೇ 5 ಸಾವಿರ ರೂಪಾಯಿ ನೀಡಿದ್ದ ಗುತ್ತಿಗೆದಾರ, ಅಧಿಕಾರಿಯಿಂದ ಬೇಸತ್ತು ಲೋಕಾಯುಕ್ತಕ್ಕೆ ದೂರು ನೀಡಿದ್ದ. ಉಳಿದ 5 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತರ ಬಲೆಗೆ ಬಿದ್ದಬಳಿಕ ಅಧಿಕಾರಿ ಅನಾರೋಗ್ಯದ ಹೈಡ್ರಾಮಾ ಮಾಡಿ ಲಿಂಗಸುಗೂರು ಸರ್ಕಾರಿ ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾನೆ. ಚಿಕಿತ್ಸೆ ಬಳಿಕ ಲೋಕಾಯುಕ್ತ ಅಧಿಕಾರಿಗಳು ಎಇಇ ಕೆಂಚಪ್ಪ ಬಾವಿಮನಿಯನ್ನ ವಶಕ್ಕೆ ಪಡೆದಿದ್ದಾರೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೈಕ್ ಕಳ್ಳರ ಕಾಟ ಹೆಚ್ಚಾಗುತ್ತಿದ್ದು ಹೇಗೆಂದರೆ ನಕಲಿ ಕೀ ಮಾಡಿಸಿಕೊಂಡು ತನ್ನದೇ ಬೈಕ್ ಎಂದು ಕಳವು ಮಾಡುತ್ತಿರುವ ಕಳ್ಳರ ಗುಂಪು ಹೆಚ್ಚಾಗಿದೆ. ಹೌದು ನಗರದಲ್ಲಿ ಬೆಳ್ಳಂಬೆಳಿಗ್ಗೆ ದುಬಾರಿ ಬೆಲೆಯ ಬೈಕ್ ಕದ್ದು ಎಸ್ಕೇಪ್ ಆದ ಕಳ್ಳ ಈ ಘಟನೆ ನಡೆದಿದ್ದು ಹೆಣ್ಣೂರಿನ ಸಾಯಿ ಗೋವಿಂದ್ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ದೀಪಕ್ ಎಂಬುವರಿಗೆ ಸೇರಿದ 4 ಲಕ್ಷ ಮೌಲ್ಯದ ಕೆಟಿಎಂ ಬೈಕ್ ಕಳ್ಳತನ ಮಾಡಿದ್ದು ತನ್ನದೆ ಬೈಕ್ ಎಂಬಂತೆ ಬಂದು ಬೈಕ್ ಕೊಂಡೊಯ್ದ ಕಳ್ಳ ಈ ಮೊದನೆ ಡೂಪ್ಲಿಕೇಟ್ ಕೀ ಮಾಡಿ ತಂದಿದ್ದ ಕಳ್ಳ ಬೆಳಿಗ್ಗೆ 8 ಗಂಟೆಗೆ ಅಪಾರ್ಟ್ಮೆಂಟ್ ಒಳಬಂದು ಕಳ್ಳತನ ಮಾಡಿದ್ದು ಬೈಕ್ ಕಳ್ಳತನದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಪಾರ್ಟ್ಮೆಂಟ್ ಆಗಿದ್ದು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.
ಇಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ. ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ.ಈ ದಿನದಂದು ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಲಿಂಗ ಅಸಮಾನತೆಯನ್ನು ಹೋಗಲಾಡಿಸಲು ಹೆಣ್ಣುಗೆ ಸಮಾನ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕು ಎನ್ನುವ ಉದ್ದೇಶದಿಂದ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಇತಿಹಾಸ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ವನ್ನು ಆಚರಣೆ ಮಾಡಲಾಗುತ್ತದೆ. ರಾಷ್ಟ್ರೀಯ ಹೆಣ್ಣುಮಕ್ಕಳ ದಿನವನ್ನು ಮೊದಲ ಬಾರಿಗೆ 2008 ರಲ್ಲಿ ಆಚರಣೆ ಮಾಡಲಾಯಿತು. ಭಾರತೀಯ ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಮತ್ತು ಕೇಂದ್ರ ಸರ್ಕಾರದಿಂದ ಈ ದಿನ ಆಚರಣೆಯನ್ನು ಆರಂಭಿಸಲಾಯಿತು. ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಣೆಯ ಉದ್ದೇಶ…
ಮಂಡ್ಯ: ಆಕೆ ವೃತ್ತಿಯಲ್ಲಿ ಶಿಕ್ಷಕಿ. ಯಾವ ಹೀರೋಹಿನ್ ಗೂ ಕಡಿಮೆ ಇಲ್ಲದಂತೆ ಇದ್ದಾಕೆಗೆ ರೀಲ್ಸ್ ಗೀಳಿತ್ತು. ಕೆಲಸ ಮುಗಿಸಿ ಶಾಲೆಯಿಂದ ಹೊರಟಿದ್ದಾಕೆ ನಿಗೂಢವಾಗಿ ನಾಪತ್ತೆಯಾಗಿದ್ಲು. ಮೂರು ದಿನದ ಬಳಿಕೆ ಬೆಟ್ಟದ ತಪ್ಪಲಿನಲ್ಲಿ ಆಕೆಯ ಶವ ಪತ್ತೆಯಾಗಿತ್ತು. ಮೃತ ದೇಹ ಸಿಕ್ಕದ ಸ್ಥಿತಿ ನೋಡಿ ಆ ಭಾಗದ ಜನರೆಲ್ಲ ಮೆಚ್ಚಿಬಿದ್ದಿದ್ದಾರೆ. ಈ ನಡುವೆ 13 ಸೆಕೆಂಡ್ ವಿಡಿಯೋ ತುಣುಕು ಸಿಕ್ಕಿದ್ದು, ಅಕ್ಕ ಅಕ್ಕ ಅಂತಿದ್ದ ಯುವಕನೇ ಕೊಲೆಗೈದ್ನ ಎಂಬ ಅನುಮಾನವೂ ಮೂಡಿದೆ. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ. ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಐತಿಹಾಸಿಕ ಹಾಗೂ ಪುರಾಣಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ಭಯಾನಕ ಕೃತ್ಯ ನಡೆದುಹೋಗಿದೆ. ಖಾಸಗಿ ಶಾಲೆಯ ಶಿಕ್ಷಕಿಯನ್ನ ಕೊಲೆಗೈದು ಬೆಟ್ಟದ ತಪ್ಪಲಿನಲ್ಲಿ ಹಂತಕರು ಹೂತಿಟ್ಟಿದ್ದು, ಆ ಭಾಗದ ಜನರನ್ನ ಬೆಚ್ಚಿಬೀಳಿಸುವಂತೆ ಮಾಡಿದೆ. ಅಂದಹಾಗೆ ಬೆಟ್ಟದ ತಪ್ಪಲಿನಲ್ಲಿ ಕೊಲೆಯಾದಾಕೆ ಹೆಸರು ದೀಪಿಕಾ. 28 ವರ್ಷದ ಈಕೆ ಪಾಂಡವಪುರ ತಾಲ್ಲೂಕಿನ ಮಾಣಿಕ್ಯನಹಳ್ಳಿ ನಿವಾಸಿ. ನೋಡೋದಕ್ಕೆ ಥೇಟ್ ಹೀರೋಹಿನ್ ರೀತಿ ಕಾಣುವ ದೀಪಿಕಾ…
ಸ್ಯಾಂಡಲ್‌ವುಡ್ ನಟ ಅಜಯ್ ರಾವ್ ಕನ್ನಡ ಚಿತ್ರರಂಗದಲ್ಲಿದ್ದು ದಶಕಗಳ ಮೇಲಾಯಿತು. ಅಂದಿನಿಂದ ಇಲ್ಲಿಯವರೆಗೂ ಸಾಕಷ್ಟು ಸಿನಿಮಾಗಳಲ್ಲಿ ಅಜಯ್ ನಟಿಸಿದ್ದಾರೆ. ಹೊಸ ಹೊಸ ಪ್ರಯೋಗಕ್ಕೂ ತಮ್ಮನ್ನು ಒಡ್ಡಿಕೊಂಡಿದ್ದಾರೆ. ನಟನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಅವರಿಗಿಂದು ಜನ್ಮದಿನದ ಸಂಭ್ರಮ. ಅಜಯ್ ರಾವ್ ಹುಟ್ಟುಹಬ್ಬದ ವಿಶೇಷವಾಗಿ ಯುದ್ಧಕಾಂಡ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿ ಶುಭ ಕೋರಲಾಗಿದೆ. ಕರಿಕೋಟು ತೊಟ್ಟು ಕೈಯಲ್ಲಿ ಪುಸ್ತಕ ಹಿಡಿದು ಲಾಯರ್ ಅವತಾರದಲ್ಲಿ ಕೃಷ್ಣ ಅಜಯ್ ರಾವ್ ಕಾಣಿಸಿಕೊಂಡಿದ್ದಾರೆ. ಯುದ್ಧಕಾಂಡ ಚಿತ್ರವನ್ನು ಅಜಯ್ ರಾವ್ ತಮ್ಮದೇ ನಿರ್ಮಾಣ ಸಂಸ್ಥೆ ‘ಶ್ರೀಕೃಷ್ಣ ಆರ್ಟ್ಸ್ ಅಂಡ್ ಕ್ರಿಯೇಷನ್ಸ್’ ಮತ್ತು ‘ಅಜಯ್ ರಾವ್ ಪ್ರೊಡಕ್ಷನ್ಸ್’ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಈ ಮೂಲಕ ‘ಕೃಷ್ಣ ಲೀಲಾ’ ಸಿನಿಮಾ ನಂತರ ಮತ್ತೊಮ್ಮೆ ನಿರ್ಮಾಣ ಸಾಹಸಕ್ಕೆ ಮುಂದಾಗಿದ್ದಾರೆ. ಅಂದಹಾಗೇ ಚಿತ್ರಕ್ಕೆ ಪವನ್ ಭಟ್ ಆಕ್ಷನ್ ಕಟ್ ಹೇಳುತ್ತಿದ್ದು ಕಾರ್ತಿಕ್ ಶರ್ಮಾ ಕ್ಯಾಮೆರಾ ಕೈಚಳಕವಿದೆ. ಬಹುಭಾಷೆಯಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ತಾರಾಬಳಗವಿರಲಿದೆ. ಸದ್ಯ ಯುದ್ಧಕಾಂಡ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ.…
‘ರಾಧಾ ರಮಣ’ (Radha Ramana) ನಟಿ ಕಾವ್ಯಾ ಗೌಡ (Kavya Gowda) ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಮನೆಗೆ ಮಹಾಲಕ್ಷ್ಮಿಯ ಆಗಮನವಾಗಿದೆ. ಹೆಣ್ಣು ಮಗುವಿಗೆ (Baby Girl) ನಟಿ ಜನ್ಮ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅಯೋಧ್ಯೆಯ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಜ.22ರಂದು ಅದ್ಧೂರಿಯಾಗಿ ನೆರವೇರಿದೆ. ಇದೇ ದಿನ ನಟಿ ಕಾವ್ಯಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಇದು ಕಾವ್ಯಾ ಗೌಡ ಅವರ ಕುಟುಂಬದಲ್ಲಿ ಮತ್ತಷ್ಟು ಸಂತಸ ಹೆಚ್ಚಿಸಿದೆ. ನಮ್ಮ ಮನೆಗೆ ಮುದ್ದಾದ ರಾಜಕುಮಾರಿಯ ಆಗಮನವಾಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ನಿಮ್ಮೆಲ್ಲರ ಶುಭಹಾರೈಕೆಗೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾ ಮೂಲಕ ನಟಿ ತಿಳಿಸಿದ್ದಾರೆ.
ಬೆಂಗಳೂರು: ನಗರದಲ್ಲಿ ತಡರಾತ್ರಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ರೌಡಿಶೀಟರ್ ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿವೇಕ್ ನಗರದ ಮಾಯಾ ಬಜಾರ್ ಸ್ಲಂ ನಲ್ಲಿ ನಡೆದಿದೆ. https://ainlivenews.com/rama-cutout-a-40-foot-cut-out-of-clothed-rama-a-huge-tragedy-missed/ ಸತೀಸ್ ಅಲಿಯಾಸ್ ಮಿಲ್ಟ್ರಿ ಸತೀಶ್ ಕೊಲೆಯಾದ ರೌಡಿಶೀಟರ್ ಆಗಿದ್ದು ತಡರಾತ್ರಿ ಮನೆಗೆ ನುಗ್ಗಿ ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲಮಾಡಿರೋ ಹಂತಕರು. ಹಳೆ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರೋ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಸತೀಶ್ ಮೇಲೆ 307 ಸೇರಿದಂತೆ ಬೇರೆ ಪ್ರಕರಣಗಳು ಮೊದಲೆ ಇದ್ದು ವಿವೇಕನಗರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು ಕೊಲೆಪಾತಕಿಗಳನ್ನ ಹಿಡಿಯಲು ಪೊಲೀಸರು ಮುಂದಾಗಿದ್ದಾರೆ.
ಗದಗ: ಎತ್ತಿನ ಬಂಡಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆ ನರಗುಂದ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ರೋಣ ತಾಲೂಕಿನ ಯಾವಗಲ್ ಗ್ರಾಮದ ರುದ್ರಗೌಡ ಪೊಲೀಸ್ ಪಾಟೀಲ್ (28) ಮೃತಪಟ್ಟವರು. ಕೆಲವು ಮಂದಿ ಎತ್ತಿನ ಗಾಡಿ ಮೂಲಕ ಸವದತ್ತಿ ಯಲ್ಲಮ್ಮ ದೇವರ ದರ್ಶನಕ್ಕೆ ಹೋಗುತ್ತಿದ್ದರು. https://ainlivenews.com/have-you-installed-pink-whatsapp-be-careful-its-dangerous/ ಆಗ ನರಗುಂದ ಪಟ್ಟಣದಿಂದ ಯಾವಗಲ್ ಗ್ರಾಮಕ್ಕೆ ಯುವಕನೊಬ್ಬ ಬೈಕ್‌ನಲ್ಲಿ ಹೋಗುತ್ತಿದ್ದ. ಈ ವೇಳೆ, ಬೈಕ್ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಜಯದೇವ ಆಸ್ಪತ್ರೆ ನಿರ್ದೇಶಕರನ್ನಾಗಿ ಡಾ. ಮಂಜುನಾಥ್‍ರನ್ನು ಮುಂದುವರಿಸುವ ನಿರ್ಧಾರವನ್ನು ಸರ್ಕಾರ ಕೈ ಬಿಟ್ಟಿದೆ. ಜನವರಿ 31ಕ್ಕೆ ಜಯದೇವ ಆಸ್ಪತ್ರೆ ನಿರ್ದೇಶಕರಾಗಿ ಡಾ. ಮಂಜುನಾಥ್ ಅವಧಿ ಮುಕ್ತಾಯವಾಗಲಿದೆ. ಕಳೆದ ಬಾರಿ ಅವಧಿ ಮುಕ್ತಾಯ ಬಳಿಕ ಜನರ ಒತ್ತಾಯ ಕೇಳಿ ಬಂದ ಹಿನ್ನೆಲೆ 6 ತಿಂಗಳ ಕಾಲ ಹುದ್ದೆಯಲ್ಲಿ ಸರ್ಕಾರ ಮುಂದುವರಿಸಿತ್ತು. ಎನ್‍ಎಂಸಿ ಆಕ್ಟ್ ಪ್ರಕಾರ 70 ವರ್ಷದವರೆಗೂ ಸೇವೆ ಸಲ್ಲಿಸಬಹುದಾಗಿದೆ. ಡಾ. ಮಂಜುನಾಥ್ ಅವರಿಗೆ 67 ವರ್ಷವಾಗಿದ್ದು, ಇನ್ನು 3 ವರ್ಷಗಳ ಕಾಲ ಸೇವೆ ಸಲ್ಲಿಸಬಹುದಾಗಿದೆ. ಆದರೆ ಸರ್ಕಾರ ಮುಂದುವರಿಸುವ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಜನವರಿ 31ಕ್ಕೆ ಡಾ. ಮಂಜುನಾಥ್ ನಿವೃತ್ತಿ ಘೋಷಣೆ ಮಾಡಲಿದ್ದಾರೆ. ಜಯದೇವ ಆಸ್ಪತ್ರೆ ನಿರ್ದೇಶಕರ ಹುದ್ದೆಗೆ ಪೈಪೆÇೀಟಿ ಆರಂಭವಾಗಿದ್ದು, 15ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಈ ನಡುವೆ ಮೈಸೂರು ಮೂಲದ ಸಿಎಂ ಆಪ್ತರಿಗೆ ನಿರ್ದೇಶಕರ ಹುದ್ದೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಅನ್ನೋ ಚರ್ಚೆ ಜೋರಾಗಿದೆ. ಚುನಾವಣೆಗೆ ಸ್ಪರ್ಧಿಸ್ತಾರೆ ಎಂಬ ಚರ್ಚೆ ಜೋರಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಾ.ಮಂಜುನಾಥ್…