ಹಾವೇರಿ:- ಹಾವೇರಿಯಲ್ಲಿ ಅಣ್ಣ ತಮ್ಮಂದಿರು ಜಮೀನಿಗೆ ನೀರು ಹಾಯಿಸುವ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ ಒಂದು ಕ್ಷಣದ ಸಿಟ್ಟು ಅದೆಂಹತ ಅನಾಹುತಕ್ಕೆ ಸಾಕ್ಷಿಯಾಗುತ್ತೆ ಅನ್ನುವುದಕ್ಕೆ ಈ ಘಟನೆ ಸಾಕ್ಷಿ. ಇಲ್ಲಿ ಹೆಣವಾದ ವ್ಯಕ್ತಿಯ ಹೆಸರು ನಾಗಪ್ಪ ಬೆನಕನಹಳ್ಳಿ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಯಲವಿಗಿ ಗ್ರಾಮದ ನಿವಾಸಿ. ಇವರು ಐದು ಜನ ಅಣ್ಣ ತಮ್ಮಂದಿರು ಎಲ್ಲರೂ ಬೇರೆ ಬೇರೆಯಾಗಿ ಜೀವನ ನಡೆಸುತ್ತಿದ್ದರು. ಎಲ್ಲರಿಗೂ ಮೂರು ಎಕರೆ ಜಮೀನು ಬಂದಿತ್ತು. ಅದರಲ್ಲಿ ಎಲ್ಲರೂ ಒಂದೊಂದು ಕೊಳವೆ ಬಾವಿ ಕೊರೆಸಿಕೊಂಡು ಜಮೀನು ಉಳುಮೆ ಮಾಡುತ್ತಿದ್ದರು. ಆದರೆ ಫೋಟೋದಲ್ಲಿ ಕಾಣುತ್ತಿರುವ ವ್ಯಕ್ತಿ ಮೃತ ನಾಗಪ್ಪನ ತಮ್ಮ ಯಲ್ಲಪ್ಪ ತನ್ನ ಕೊಳವೆ ಬಾವಿಯಲ್ಲಿ ನೀರು ಕಡಿಮೇ ಆಗಿದಕ್ಕೆ ಅಣ್ಣನ ಜಮೀನಲ್ಲಿದ್ದ ನೀರು ಕದ್ದುಮುಚ್ಚಿ ಹಾಯಿಸಿಕೊಳ್ಳುತ್ತಿದ್ದನಂತೆ. ಇದನ್ನು ಪ್ರಶ್ನೆ ಮಾಡಿದ ಅಣ್ಣನನ್ನ ಕಟ್ಟಿಗೆಯಿಂದ ಕೊಡೆದು ಕೊಲೆ ಮಾಡಿದ್ದಾನೆ ಎಂದು ಮೃತನ ಹೆಂಡತಿ ಆರೋಪ ಮಾಡುತ್ತಿದ್ದಾರೆ. ಒಂದಡೆ ಬರಗಾಲ, ಮತ್ತೊಂದೆಡೆ ವಿದ್ಯುತ್ ಕಣ್ಣಾಮುಚ್ಚಾಲೆ ಆಟ. ಹೀಗಾಗಿ ರೈತರು ತಮ್ಮ ಜಮೀನಿನಲ್ಲಿ…
Author: AIN Author
ತುಮಕೂರು:- ತಾಲೂಕಿನ ಕೌತಮಾರನಹಳ್ಳಿ ಗ್ರಾಮದ ಬಳಿ ಜಲ್ಲಿ ಕ್ರಷರ್ನಲ್ಲಿ ಕೆಲಸ ಮಾಡುವಾಗ ಕಲ್ಲುಗಳು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವಂತಹ ಘಟನೆ ಜರುಗಿದೆ. 29 ವರ್ಷದ ಮೊಹಮ್ಮದ್ ಅಬ್ದುಲ್, 25 ವರ್ಷದ ಮನು ಮೃತ ಕಾರ್ಮಿಕರು ಎನ್ನಲಾಗಿದೆ. ಕ್ವಾರಿಯಲ್ಲಿ ಕಲ್ಲು ಕೊರೆಯುವಾಗ ಮೇಲಿಂದ ಕಲ್ಲುಗಳು ಬಿದ್ದು ದುರಂತ ಸಂಭವಿಸಿದೆ. ಮೃತ ಮೊಹಮ್ಮದ್, ಮನು ಇಬ್ಬರೂ ಬಿಹಾರ ಮೂಲದವರು. ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಂಗಳೂರು:- ರಾಜ್ಯ ಸರ್ಕಾರವು ವಿವಿಧ ಇಲಾಖೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನಿವೃತ್ತ ಅಧಿಕಾರಿ ಮತ್ತು ನೌಕರರಿಗೆ ಶಾಕ್ ಕೊಟ್ಟಿದ್ದು, ಕೂಡಲೇ ಸೇವೆಯಿಂದ ಬಿಡುಗಡೆಗೊಳಿಸುವಂತೆ ಆದೇಶ ಹೊರಡಿಸಿದೆ. ಸಿಎಂ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಆದೇಶಿಸಿದ್ದಾರೆ. ಆ ಹುದ್ದೆಗೆ ಹಾಲಿ ಸರ್ಕಾರಿ ಅಧಿಕಾರಿಗಳು, ನೌಕರರನ್ನೇ ನಿಯೋಜಿಸಲು ಆದೇಶದಲ್ಲಿ ಸೂಚಿಸಿದ್ದಾರೆ. ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ಜು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳಿಸಲು ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರ ಕೆಲವು ಇಲಾಖೆಗಳಲ್ಲಿ ಮತ್ತು ಸಚಿವಾಲಯದಲ್ಲಿ ಅನಗತ್ಯ ಹುದ್ದೆಗಳನ್ನು ಸೃಷ್ಟಿಸಿ ಸರ್ಕಾರಿ ಸೇವೆಯಿಂದ ನಿವೃತ್ತಿ ಹೊಂದಿದ ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ನೇಮಿಸಿಕೊಳ್ಳಲಾಗಿದೆ. ಗ್ರೂಪ್ ವೃಂದದ ಕೆಲವು ಹುದ್ದೆಗಳಿಗೂ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ನೇಮಿಸಿಕೊಂಡ ನಿವೃತ್ತ…
ಬೆಂಗಳೂರು:- ಶ್ರೀ ರಾಮನೇನು ಬಿಜೆಪಿ ನಾಯಕರ ಅಪ್ಪನ ಆಸ್ತಿಯಾ!? ಎಂದು ಪ್ರಶ್ನಿಸುವ ಮೂಲಕ DCM ಡಿಕೆಶಿ ಸಿಡಿಮಿಡಿಗೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೈ ಶ್ರೀರಾಮ್ ಅಂತ ಹೇಳಿದ್ದಕ್ಕೆ ಟೀಕಿಸುತ್ತಿರುವ ಬಿಜೆಪಿ ನಾಯಕರಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಶ್ರೀರಾಮ ಏನು ಅವರ ಮನೆ ಆಸ್ತಿನಾ ಅಂತ ಕೇಳಿದ ಶಿವಕುಮಾರ್, ಸಿದ್ದರಾಮಯ್ಯನವರ ಹೆಸರಲ್ಲಿ ರಾಮ ಇದ್ದಾನೆ ಮತ್ತು ತಮ್ಮ ಹೆಸರಲ್ಲಿ ಶಿವ ಮತ್ತು ಕುಮಾರ ಇಬ್ಬರೂ ಇದ್ದಾರೆ ಎಂದರು. ಗಾಂಧೀಜಿ ಅವರು ಹಾಡಿದ್ದು ಏನು ಅನ್ನೋದು ಅಂತ ಅವರಿಗೆ ಗೊತ್ತಿಲ್ವಾ? ರಘುಪತಿ ರಾಘವ ರಾಜಾರಾಮ ಪತಿತ ಪಾವನ ಸೀತಾರಾಮ ಅಂತ ಹಾಡಿದ ಶಿವಕುಮಾರ್ ನಮಗೆ ರಾಮನೂ ಬೇಕು, ಸೀತೆಯೂ ಬೇಕು ಎಂದರು. ಮಾಡಲು ಕೆಲಸವಿಲ್ಲದೆ ಹತಾಶರಾಗಿರುವ ಬಿಜೆಪಿ ನಾಯಕರಿಗೆ, ನಿನ್ನೆ ತಮ್ಮ ಸರ್ಕಾರ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಪೂಜೆಗಳನ್ನು ಮಾಡಿಸಿ ಅನ್ನ ಸಂತಪರ್ಣೆ ಮಾಡಿಸಿದ್ದು ಸಹಿಸಿಕೊಳ್ಳಲಾಗುತ್ತಿಲ್ಲ, ಕೈಕೈ ಹಿಸುಕಿಕೊಳ್ಳುತ್ತಾ ನಮ್ಮ ಕೈಯಲ್ಲಿ ಅಧಿಕಾರವಿಲ್ಲವಲ್ಲ ಅಂತ…
ಹುಬ್ಬಳ್ಳಿ :- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬೀದಿಯಲ್ಲಿ ಎರಡು ಗುಂಪುಗಳು ಕಟ್ಟಿಗೆ , ಕಲ್ಲುಗಳಿಂದ ಹೊಡೆದಾಡಿಕೊಂಡ ಘಟನೆ ಹಳೇ ಹುಬ್ಬಳ್ಳಿಯ ಶಿವಶಂಕರ ಕಾಲನಿಯಲ್ಲಿ ನಡೆದಿದೆ. ಜ್ಯೋತಿ ಹನೀಫ ಅಂಚಿಟಗೇರಿ ಎಂಬುವವರು ಈ ಹಿಂದೆ ಹುಬ್ಬಳ್ಳಿ ಮಹಿಳಾ ಪೊಲೀಸ್ ಠಾಣೆಯಲ್ಲಿ ತನ್ನ ಗಂಡನಾದ ಹನೀಫ ಈತನ ವಿರುದ್ಧ ದೂರು ಸಲ್ಲಿಸಿದ್ದರು. ಇದು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿ ಇದ್ದು. ಈ ಕೇಸನ್ನು ನೀನು ಹಿಂದೆ ತೆಗೆದುಕೊ ಅಂತ ಹೇಳಿದ್ದರು. ಅದಕ್ಕೆ ಜ್ಯೋತಿ ಒಪ್ಪದಿದ್ದಕ್ಕೆ ಆರೋಪಿತರಾದ ಮೊಹಮ್ಮದ ಹುಸೇನ ಅಂಚಿಟಗೇರಿ ,ಗುರುನಾಥ ಅಂಚೆಟಗೇರಿ, ಅನೀಲ ಹರ್ಪನಹಳ್ಳಿ, ಅರ್ಜುನ ಕಂಚಗಾರ ಸೇರಿ 12 ಜನರು ಕೂಡಿಕೊಂಡು ಇಟ್ಟಿಗೆ, ಕಟ್ಟಿಗೆಯಿಂದ ಹಾಗೂ ದೊಣೆಯಿಂದ ಜ್ಯೋತಿ, ಮಂಜುನಾಥ, ಹಾಗೂ ಶಂಕರ ಇವರ ತಲೆಗೆ ಹೊಡೆದು ಹಾಗೂ ಭರತ ಈತನಿಗೆ ಕೈಯಿಂದ ಮೈ ಕೈಗೆ ಹೊಡೆದು ಗಾಯ ಪಡಿಸಿ ಅವಾಚ್ಯವಾಗಿ ಬೈದಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಜ್ಯೋತಿ ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲಿಯೇ ಹೊಡೆದಾಟ ನಡೆದಿದ್ದು, ಪೊಲೀಸರ ಲಘು ಲಾಠಿ ಏಟಿಗೆ…
ಅಯೋಧ್ಯೆ:- ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಸ್ವಾಮೀಜಿ ಮುಖ ಮುಚ್ಚಿದ್ದೇಕೆ? ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಅದರ ಬಗ್ಗೆ ತಿಳಿಯಲು ಸುದ್ದಿ ಪೂರ್ತಿಯಾಗಿ ಓದಿ. ಒಂದು ಹಂತದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗರ್ಭಗುಡಿಯಲ್ಲಿ ಮುಖ ಮುಚ್ಚಿಕೊಂಡರು. ಅದೇಕೆ ಗೊತ್ತಾ? ರಾಮಲಲ್ಲಾನಿಗೆ ನೈವೇದ್ಯ ಮಾಡುವ ಸಂದರ್ಭದಲ್ಲಿ ದೇವರನ್ನು ನೋಡಬಾರದು ಎಂಬ ಶಾಸ್ತ್ರೀಯ ನಿಯಮ ಇದೆ. ಪ್ರಧಾನಿ ಮೋದಿಯವರು ರಾಮಲಲ್ಲಾನಿಗೆ ಭಕ್ಷ್ಯ ಮತ್ತು ಫಲಗಳನ್ನು ನೈವೇದ್ಯ ಮಾಡುತ್ತಿದ್ದರು. ಈ ವೇಳೆ ಮೋದಿ ಸಮೀಪವೇ ಇದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಅಂಗವಸ್ತ್ರದಿಂದ ಮುಖ ಮುಚ್ಚಿಕೊಂಡರು. ಜತೆಗೆ ವಿಧಿವಿಧಾನಗಳು ನಡೆಯುತ್ತಿದ್ದ ವೇಳೆ ಅವರು, ಮಂತ್ರೋಚ್ಛಾರಣೆ ಮಾಡುತ್ತಿದ್ದರು. ಜತೆಗೆ, ಕೆಲ ಸಂದರ್ಭದಲ್ಲಿ ಪ್ರಧಾನಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದದ್ದೂ ಕಂಡುಬಂತು.
ನಿರುದ್ಯೋಗಿಗಳಿಗೆ ಸಿಹಿ ಸುದ್ದಿ ಇದ್ದು, ಬೆಂಗಳೂರಿನಲ್ಲಿ ಕೆಲಸ ಮಾಡಲು ಬಯಸುವವರು ಇಲ್ಲಿ ಉದ್ಯೋಗವಕಾಶ ಇದೆ. ಅತ್ತಿಬೆಲೆ ವ್ಯಾಪ್ತಿಯಲ್ಲಿ ಕೆಲಸ ಮಾಡಲು ಪದವಿ, ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 25 ರಂದು ಬೆಳಿಗ್ಗೆ 10:30 ರಿಂದ 1 ಗಂಟೆಯವರೆಗೆ ನೇರ ಸಂದರ್ಶನ ಭಾಗವಹಿಸಿ. ಹೆಚ್ಚಿನ ಮಾಹಿತಿಗಾಗಿ : ಡಾ.ಪಿ.ಬಾಲಾಜಿ ಮೊಬೈಲ್ ಸಂಖ್ಯೆ9942169804 ಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹುದ್ದೆಗಳ ವಿವರ Programme manager – 1 MSW two year experience, Salary 21k M&E cum Accountant -1 B.com or M.com 16k Counsellor 2 MSW 1year experience ORW – 7 qualification 10 STD 10500/- 1 EXPERIENCE ಅಭ್ಯರ್ಥಿಗಳು ಬೇಕಾಗಿದ್ದಾರೆ ಎಂದು ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ 11 ದಿನಗಳ ಕಾಲ ಉಪವಾಸ ವ್ರತ ಮಾಡಿದ್ದೇ ಅನುಮಾನ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರೀ ಎಳನೀರು ಕುಡಿದು ಉಪವಾಸ ಮಾಡಿದ್ರೆ ಮನುಷ್ಯ ಒಂದೆರೆಡು ದಿನದಲ್ಲಿ ಕೆಳಗೆ ಬೀಳುತ್ತಾನೆ. 11 ದಿನಗಳ ಕಾಲ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದರು. https://ainlivenews.com/do-you-sleep-less-than-6-hours-beware-of-this-deadly-disease/ ನಾನು ಬೆಳಗ್ಗೆ ವಾಕಿಂಗ್ ಮಾಡಬೇಕಾದರೆ ವೈದ್ಯರ ಬಳಿ ಈ ಬಗ್ಗೆ ಚರ್ಚೆ ಮಾಡಿದೆ. ವೈದ್ಯರ ಅಭಿಪ್ರಾಯದ ಪ್ರಕಾರ ಮನುಷ್ಯ ಬದುಕೋದು ಅಸಾಧ್ಯ. ಹಾಗಾಗಿ ನರೇಂದ್ರ ಮೋದಿಯವರು ಉಪವಾಸ ವ್ರತ ಮಾಡಿರೋದು ಅನುಮಾನ. ಹಾಗೆ ಉಪವಾಸ ಮಾಡದೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ರೆ ಆ ಕ್ಷೇತ್ರಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಪ್ರಶ್ನಿಸಿದರು.
ವಿಜಯಪುರ : ಮುಳವಾಡ ಏತ ನೀರಾವರಿ ಯೋಜನೆಯ ಎಡ ಹಾಗೂ ಬಲ ಕಾಲುವೆಗಳಿಗೆ ನೀರು ಹರಿಸುವಂತೆ ವಿಜಯಪುರ ಜಿಲ್ಲೆಯ ಕೋಲ್ಹಾರ-ಬಾಗೇವಾಡಿ ರಾಜ್ಯ ಹೆದ್ದರಿ ತಡೆದು ರೈತರು ಪ್ರತಿಭಟನೆ ನಡೆಸಿದರು. ಮಟ್ಟಿಹಾಳ ಕೆ.ಬಿ.ಜೆ.ಎನ್.ಎಲ್ ಕಚೇರಿಗೆ ಬೀಗ ಜಡಿದು ರಾಜ್ಯ ರೈತ ಸಂಘ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಕಾಲುವೆ ನೀರು ಬಿಡದೆ ಇರೋದಕ್ಕೆ ಹೈವೆ ರಸ್ತೆಯಲ್ಲಿ ಟೈರ್ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ. ಆದ್ದರಿಂದ ತಕ್ಷಣವೇ ನೀರು ಬಿಡುವಂತೆ ಆಗ್ರಹಿಸಿದರು.
ಹುಬ್ಬಳ್ಳಿ ಜ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ, ಮೀನುಗಾರಿಕೆ ಇಲಾಖೆ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಹಾಪ್ ಕಾಮ್ಸ್ ಮತ್ತು ಉದ್ಯಾನ ಹಾಗೂ ಫಲಪುಷ್ಪ ಪ್ರದರ್ಶನ ಸಮಿತಿ ಇವುಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಹಾಗೂ ಸಿರಿಧಾನ್ಯ ಹಬ್ಬ 2023-24 ನ್ನು ಜನೇವರಿ 26 ರಿಂದ 28 ರವರೆಗೆ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದೆ. ಜನೇವರಿ 26 ರಂದು ಸಂಜೆ 4 ಗಂಟೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ್ ಜೋಶಿ, ವಿಧಾನ ಪರಿಷತ ಸಭಾಪತಿಯಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದೆ. https://ainlivenews.com/do-you-sleep-less-than-6-hours-beware-of-this-deadly-disease/ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ, ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಮತ್ತು ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ…