Author: AIN Author

ಬೆಂಗಳೂರು:- ಕುಮಾರಸ್ವಾಮಿ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕುಮಾರಸ್ವಾಮಿಯವರು ನೂರು ಬಾರಿ ಟ್ವೀಟ್​ಗಳನ್ನೂ ಮಾಡಿದರೂ, ಅವುಗಳಿಗೆ ಉತ್ತರಿಸುವ ಅವಶ್ಯಕತೆಯಿಲ್ಲ. ಅವರ ಸರ್ಕಾರದ ಅವಧಿಯಲ್ಲಿ ಮಾಡುತ್ತಿದ್ದ ವರ್ಗಾವಣೆ ಮತ್ತು ಹಣದ ವ್ಯವಹಾರವನ್ನು ಈಗ ಹೇಳುತ್ತಿದ್ದಾರೆ. ನಾನು ಈ ಮೊದಲೂ ಹೇಳಿದಂತೆ, ಹಣ ತೆಗೆದುಕೊಂಡು ವರ್ಗಾವಣೆ ಮಾಡಿಸಿದ್ದರೆ, ನನ್ನ ರಾಜಕೀಯ ಜೀವನದಿಂದ ನಿವೃತ್ತಿ ಹೊಂದುತ್ತೇನೆ ಎಂದರು. ಭಾರತ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಕ್ರಿಕೆಟ್ ಪೈನಲ್ ಪಂದ್ಯದ ಹಿನ್ನೆಲೆಯಲ್ಲಿ ಭಾರತ ತಂಡಕ್ಕೆ ಶುಭ ಕೋರಿದ ಮುಖ್ಯಮಂತ್ರಿಗಳು, ಭಾರತ ಹತ್ತು ಪಂದ್ಯಗಳನ್ನು ಸತತವಾಗಿ ಗೆಲ್ಲುವ ಮೂಲಕ ಉತ್ತಮ ಪ್ರದರ್ಶನವನ್ನು ನೀಡುತ್ತಿದೆ. ಈ ಬಾರಿಯ ಕ್ರಿಕೆಟ್ ವಿಶ್ವಕಪ್ ಭಾರತ ತಂಡಕ್ಕೆ ಲಭಿಸಲಿದೆ ಎಂಬ ವಿಶ್ವಾಸವಿದೆ ಎಂದರು.

Read More

ಬೆಂಗಳೂರು:- ಸಚಿವ ಸತೀಶ್ ಜಾರಕಿಹೊಳಿ ವಿದೇಶಕ್ಕೆ ಹಾರಿದ್ದು, ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ. ಕರ್ನಾಟಕ ಉಪಮುಖ್ಯಮಂತ್ರಿ & ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಮತ್ತು ಜಾರಕಿಹೊಳಿ ಬ್ರದರ್ಸ್ ಮಧ್ಯೆ ಮುನಿಸು ಇದೆ ಎಂಬುದು ಹಳೇ ಆರೋಪ. ಆದರೆ ಈ ಮುನಿಸು ಇದೀಗ ಜ್ವಾಲೆಯ ರೂಪ ಪಡೆದಿದೆ ಎನ್ನುವ ಆರೋಪಗಳು ಕೇಳಿ ಬರುತ್ತಿವೆ. ಅದರಲ್ಲೂ ಕೆಲ ದಿನಗಳ ಹಿಂದಷ್ಟೆ, ಇಂತಹದ್ದೇ ಬೆಳವಣಿಗೆ ನಡೆದು ಅದೇ ಸಮಯದಲ್ಲಿ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿ ಅವರನ್ನು ಮೀಟ್ ಮಾಡಿ ಮಾತುಕತೆ ನಡೆಸಿದ್ದರು. ಆದರೆ ಈಗ ಮತ್ತೊಮ್ಮೆ ಸತೀಶ್ ಜಾರಕಿಹೊಳಿ ವಿಮಾನ ಏರಿ ತಮ್ಮ ಬೆಂಬಲಿಗರ ಜೊತೆ ವಿದೇಶಕ್ಕೆ ಹಾರಿದ್ದಾರೆ. ಲೋಕೋಪಯೊಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಆಪ್ತರ ಜೊತೆಯಲ್ಲಿ ವಿದೇಶಕ್ಕೆ ತೆರಳಿದ್ದಾರೆ. ಅವರ ಈ ನಡೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೂ ಕಾರಣವಾಗಿದೆ. ಅಲ್ದೆ ಕಾಂಗ್ರೆಸ್ ಒಳಗೆ ಅಸಮಾಧಾನದ ಹೊಗೆ ಆವರಿಸಿದೆ ಎನ್ನುವ ಆರೋಪ ಮತ್ತೊಮ್ಮೆ ಕೇಳಿಬಂದಿದೆ.…

Read More

ಬೆಂಗಳೂರು:- ಬಿಜೆಪಿ ಅಥವಾ ದಳಕ್ಕೆ ವೋಟು ಹಾಕಿದ್ರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತವೆ ಎಂದು ಡಿಸಿಎಂ ಡಿಕೆ ಶಿವಕುಮಾರ ಎಚ್ಚರಿಕೆ ನೀಡಿದರು. ನಾನು ಡಿಸಿಎಂ ಆದಾಗ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಹೋಗಿದ್ದೆ. ಈ ವರ್ಷ ಎರಡು ಗ್ಯಾರಂಟಿ ಯೋಜನೆಗಳನ್ನು ತಂದ್ರೆ ಸಾಕು ಅಂದ್ರು. ಆದರೆ ನಾವು ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆವು. ಹಾಸನಾಂಬೆ ಜಾತ್ರಾ ಸಂಧರ್ಭದಲ್ಲಿ ಹದಿನಾಲ್ಕು ಕೋಟಿ ಆದಾಯ ಬಂದಿದೆ. ಬಸ್ ಫ್ರೀ ಕೊಟ್ಟಿದ್ದರಿಂದಲೇ ಇಷ್ಟೊಂದು ಆದಾಯ ಜಾಸ್ತಿ ಆಗಿದೆ. ಗೃಹ ಲಕ್ಷ್ಮಿ ಯೋಜನೆ ಟೆಕ್ನಿಕಲ್ ಸಮಸ್ಯೆಯಿಂದ ಏಳು ಪರ್ಸೆಂಟ್ ಜನರಿಗೆ ತಲುಪಿಲ್ಲ. ಉಳಿದೆಲ್ಲರಿಗೂ ಯೋಜನೆ ತಲುಪಿದೆ. ನವೆಂಬರ್ ಅಥವಾ ಡಿಸೆಂಬರ್ ನಲ್ಲಿ ಯುವನಿಧಿ ಕೂಡಾ ಜಾರಿಗೆ ತರ್ತೀವಿ. ಈ ಬಗ್ಗೆ ಜನರಿಗೆ ನೀವೆಲ್ಲ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಸೂಚಿಸಿದರು.

Read More

ವಿಶ್ವಕಪ್ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತದ ಬ್ಯಾಟರ್​​ಗಳು ಪರದಾಡಿದ್ದಾರೆ. ಟಾಸ್​ ಸೋತು ಮೊದಲು ಬ್ಯಾಟ್​ ಮಾಡಲು ಆಹ್ವಾನ ಪಡೆದ ಭಾರತ ತಂಡದ ಆರಂಭದಲ್ಲಿ ವೇಗದ ರನ್​ ಗಳಿಕೆಗೆ ಯತ್ನಿಸಿದರೂ ಬಳಿಕ ಸತತವಾಗಿ ವಿಕೆಟ್​ ಕಳೆದುಕೊಂಡಿತು. ಹೀಗಾಗಿ ದೊಡ್ಡ ಮೊತ್ತದ ಗುರಿಯೊಂದಿಗೆ ಆಡಿದ ಭಾರತ ತಂಡಕ್ಕೆ ಹಿನ್ನಡೆ ಉಂಟಾಯಿತು. ಭಾರತ ತಂಡ ಮೊದಲ 39 ಎಸೆತಗಳಿಗೆ 50 ರನ್ ಬಾರಿಸಿತ್ತು. ಹೀಗಾಗಿ ದೊಡ್ಡ ಮೊತ್ತ ಗ್ಯಾರಂಟಿ ಎಂದು ನಂಬಲಾಗಿತ್ತು. ಆದರೆ ಅದಕ್ಕಿಂತ ಮೊದಲೇ ಶುಭ್​ಮನ್​ ಗಿಲ್​ 4 ರನ್ ಬಾರಿಸಿ ಔಟಾಗಿದ್ದರು. ಈ ವೇಳೆ ವಿರಾಟ್ ಕೊಹ್ಲಿಯೂ ರನ್​ ಗತಿ ಇಳಿಕೆಯಾಗದಂತೆ ನೋಡಿಕೊಂಡಿತು. ಆದರೆ, ನಂತರ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಲು ಮುಂದಾದ ರೋಹಿತ್​ ಶರ್ಮಾ 47 ರನ್​ಗಳಿಗೆ ಔಟಾದರು. ಅವರು 31 ಎಸೆತಗಳಿಗೆ 47 ರನ್ ಬಾರಿಸಿದ್ದರು. ಆದರೆ, ಆ ಬಳಿಕ ಬ್ಯಾಟ್ ಮಾಡಲು ಬಂದ ಶ್ರೇಯಸ್​ ಅಯ್ಯರ್​​ 4 ರನ್​ ಗೆ ಔಟಾದರು. ಅವರು ಅದಕ್ಕಿಂತ…

Read More

ಅಹಮದಾಬಾದ್‌: ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಇದೀಗ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿ ಕಾದಾಟ ನಡೆಸುತ್ತಿವೆ. ಈ ಮಹತ್ವದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾದ ಭಾರತ ತಂಡ 50 ಓವರ್‌ಗಳ ಅಂತ್ಯಕ್ಕೆ  10 ವಿಕೆಟ್‌ ನಷ್ಟಕ್ಕೆ 241 ಟಾರ್ಗೆಟ್ ನೀಡಿದೆ.

Read More

“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯನಟ ಶ್ರೀನಿವಾಸಮೂರ್ತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಫಸ್ಟ್ ನೈಟ್ ವಿತ್ ದೆವ್ವ” ಹಾರಾರ್ ವಿತ್ ಕಾಮಿಡಿ ಜಾನರ್ ನ ಚಿತ್ರ ಎಂದು ಮಾತನಾಡಿದ ನಾಯಕ ಪ್ರಥಮ್, ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನಾನು ಈ ಚಿತ್ರಕ್ಕೆ ಕಥೆ ಬರೆಯಲು “ವಿಕ್ರಮ್ ಮತ್ತು ಬೇತಾಳ” ಕಥೆ ಸ್ಪೂರ್ತಿ. ಸಾಕಷ್ಟು ಹಾರಾರ್ ಚಿತ್ರ ಬಂದಿದೆ. ಆದರೆ ನಾವು ಸ್ವಲ್ಪ ವಿಭಿನ್ನವಾಗಿ ತೋರಿಸುತ್ತಿದ್ದೇವೆ‌. ನಿಖಿತ ಅವರು  ನನ್ನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಂಗೀತಾ, ಹರೀಶ್ ರಾಜ್, ತನುಜಾ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಮಾನ್ಯ ಸಿಂಗ್ ದೆವ್ವದ ಪಾತ್ರ ಮಾಡುತ್ತಿದ್ದಾರೆ. ನನ್ನ ಸ್ನೇಹಿತ ನವೀನ್ ಈ ಚಿತ್ರ…

Read More

ಕಾರವಾರ: 13ನೇ ಆವೃತ್ತಿಯ ಏಕದಿನ ವಿಶ್ವಕಪ್‌ ಟೂರ್ನಿಯ ಫೈನಲ್‌ ಪಂದ್ಯವು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ನಡೆಯುತ್ತಿದ್ದು, ಟೀಂ ಇಂಡಿಯಾ (Team India) ಗೆಲುವಿಗೆ ಕೋಟ್ಯಂತರ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ. ಆದ್ರೆ ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮುರುಡೇಶ್ವರ ನೇತ್ರಾಣಿ ಅಡ್ವೆಂಚರ್ಸ್ ಸಂಸ್ಥೆಯ ಸಾಹಸಿಗರು ಸಮುದ್ರದಾಳದಲ್ಲಿ ವಿಶೇಷ ಪೋಸ್ಟರ್‌ ಹಿಡಿದು ವಿಭಿನ್ನವಾಗಿ ಶುಭ ಹಾರೈಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಮುರುಡೇಶ್ವರ ನೇತ್ರಾಣಿ ಅಡ್ವೆಂಚರ್ಸ್ (Netrani Adventures) ಸಂಸ್ಥೆ ನೇತ್ರಾಣಿ ಸಮುದ್ರದಾಳದ ನಡುಗಡ್ಡೆಯಲ್ಲಿ ಸ್ಕೂಬಾ ಡೈವ್ (‎Scuba Diving) ಮಾಡುವ ಮೂಲಕ ಟೀಂ ಇಂಡಿಯಾ ವಿಶ್ವಕಪ್‌ ಗೆಲ್ಲಲಿ ಎಂದು ಶುಭ ಹಾರೈಸಿದೆ.

Read More

ಬೆಂಗಳೂರು:ಪೊಲೀಸ್ ಠಾಣೆ ಕೂಗಳತೆ ದೂರದಲ್ಲೆ ನಡೀತಿದೆ ಮಾಂಸ ದಂಧೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ‌ನಡೆಸಿದ್ದಾರೆ. ದಂಧೆ ಎಲ್ಲಾ ಗೊತ್ತಿದ್ರು ಕಣ್ಮುಚ್ಚಿ ಕುಳಿತಿದ್ರಾ ಕಬ್ಬನ್ ಪಾರ್ಕ್ ಪೊಲೀಸರು? ಅನ್ನೋ ಅನುಮಾನ ಎದ್ದಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಇರುವ ಚಾನ್ಸರಿ ಪೆವಿಲಿಯನ್ ಹೊಟೇಲ್ ನಲ್ಲಿ ವಿದೇಶದಿಂದ ಯುವತಿಯರನ್ನ ಕರೆತಂದು ವೇಶ್ಯಾವಾಟಿಕೆ ನಡೆಸ್ತಿದ್ರು ಅನ್ನೋ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸ್ರು ನಿನ್ನೆ ರಾತ್ರಿ ದಾಳಿ ನಡೆಸಿದ್ದರೆ. ಆದ್ರೆ ದಾಳಿ ನಂತರ ಸಿಸಿಬಿ ಪೊಲೀಸ್ರೆ ಹೈ ಡ್ರಾಮ ಕ್ರಿಯೇಟ್ ಮಾಡಿದ್ದಾರೆ. ದಾಳಿಯಲ್ಲಿ ಮೂರ್ನಾಲ್ಕು ವಿದೇಶಿ ಯುವತಿಯರು ಸಿಕ್ರು ಅನ್ನೋ‌ಮಾಹಿತಿದೆ ಇದೆ ಆದ್ರ ಸಿಸಿಬಿ ಪೊಲೀಸ್ರು ಓರ್ವ ಯುವತಿಯ ರಕ್ಷಣೆ,ಠಾಣೆಗೆ ಕರೆತಂದು ವಿಚಾರಣೆ ನಡರಸಿದ್ದಾರೆ. ಅಷ್ಟು ದೊಡ್ಡ ಹೊಟೇಲ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಆರೋಪಿಗಳು ಪರಾರಿ ಯಾಗಿದ್ದಾರೆ ಸಿಸಿಬಿ ಪೊಲೀಸ್ರು ಹೇಳ್ತಿರೋದು ನೋಡಿದ್ರೆ ಸಿಸಿಬಿ ಪೊಲೀಸ್ರೆ ಆರೋಪಿಗಳ ರಕ್ಷಣೆ  ಮಾಡಿದ್ರಾ? ಇಲ್ಲ ಯಾರೋದ್ದ ಒತ್ತಡಕ್ಕೆ ಇನ್ಯಾರನ್ನೊ ರಕ್ಷಣೆ ಮಾಡಲು ನಿಂತ್ರಾ ಅನ್ನೋ ಪ್ರಶ್ನೆ…

Read More

ಜೈಪುರ: ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಪ್ರಧಾನಿ ಮೋದಿಯವರ (Narendra Modi) ಚುನಾವಣಾ ರ‍್ಯಾಲಿಯ ಭದ್ರತೆಗೆ ನಿಯೋಜಿದ್ದ ಆರು ಜನ ಪೊಲೀಸರು (Police) ಮೃತಪಟ್ಟ ಘಟನೆ ರಾಜಸ್ಥಾನದ (Rajasthan) ಚುರು ಎಂಬಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಆರು ಜನ ಪೊಲೀಸರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ. ಅಪಘಾತದಲ್ಲಿ ಮೃತರಾದ ಪೊಲೀಸರನ್ನು ಜುಂಜುನ್‍ನ ನರೇಂದ್ರ ಮೋದಿಯವರ ರ‍್ಯಾಲಿಯ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಅಪಘಾತದಲ್ಲಿ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.

Read More

ಬೆಂಗಳೂರು : ಆಸ್ಟ್ರೇಲಿಯಾ ವಿರುದ್ಧದ ವಿಶ್ವಕಪ್-2023 ಫೈನಲ್ ಪಂದ್ಯದಲ್ಲಿ ರನ್ ಮೆಷಿನ್ ವಿರಾಟ್ ಕೊಹ್ಲಿ ಅರ್ಧಶತಕ ಸಿಡಿಸಿದರು. 81 ರನ್​ಗಳಲ್ಲಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದ್ದ ಭಾರತ ತಂಡಕ್ಕೆ ವಿರಾಟ್ ಕೊಹ್ಲಿ ಆಪದ್ಬಾಂಧವರಾಗಿದ್ದಾರೆ. 52 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನೊಂದಿಗೆ ವಿರಾಟ್ ಅರ್ಧಶತಕ ಸಿಡಿಸಿದ್ದಾರೆ. ಕೊಹ್ಲಿ ವಿಶ್ವಕಪ್​ನಲ್ಲಿ 9ನೇ 50+ ಸ್ಕೋರ್ ಸಿಡಿಡಿದ್ದಾರೆ. ಇದು ಏಕದಿನ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿ ಅವರ 72ನೇ ಅರ್ಧಶತಕವಾಗಿದೆ. ಸಂಕಷ್ಟದಲ್ಲಿದ್ದ ಭಾರತ ತಂಡಕ್ಕೆ ಕನ್ನಡಿಗ ಕೆ.ಎಲ್. ರಾಹುಲ್ ಅವರೊಂದಿಗೆ 66 ರನ್​ಗಳ ಜೊತೆಯಾಟ ಪ್ರದರ್ಶಿಸಿದ್ದಾರೆ. ಇನ್ನೂ ವಿರಾಟ್ ಕೊಹ್ಲಿಗೆ ಉತ್ತಮ ಸಾಥ್ ನೀಡುತ್ತಿರುವ ಕೆ.ಎಲ್ ರಾಹುಲ್ 67 ಎಸೆತಗಳಲ್ಲಿ 37 ರನ್​ ಸಿಡಿಸಿದ್ದಾರೆ.

Read More