ಮಂಗಳೂರು:- ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಜೆಪ್ಪು ಕುಡ್ಪಾಡಿ ಬಳಿ ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ನಟೋರಿಯಸ್ ರೌಡಿಶೀಟರ್ ಕಾಲಿಗೆ ಸಿಸಿಬಿ ಪೊಲೀಸರು ಗುಂಡು ಹಾರಿಸಿದ್ದಾರೆ. ಮಲ್ಪೆಯಲ್ಲಿ ತನ್ನ ಸ್ನೇಹಿತನ ರೂಮ್ನಲ್ಲಿ ಶರಣ್ ನೆಲೆಸಿರುವ ಮಾಹಿತಿ ತಿಳಿದ ಸಿಸಿಬಿ ಪೊಲೀಸರು, ಕಾರ್ಯಾರಣೆ ನಡೆಸಿದ್ದಾರೆ. ಮಾಹಿತಿ ತಿಳಿದ ಶರಣ್, ಮಲ್ಪೆಯಿಂದ ತಪ್ಪಿಸಿಕೊಂಡಿದ್ದನು. ಈತನಿಗೆ ಆಶ್ರಯ ಕೊಟ್ಟ ಸ್ನೇಹಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಿಸಿಬಿ ಪೊಲೀಸರಿಗೆ ಶರಣ್ ಬಿಳಿ ಬಣ್ಣದ ಐ10 ಕಾರಿನಲ್ಲಿ ತೆರಳಿದ್ದಾಗಿ ತಿಳಿದುಬಂದಿದೆ. ಬಳಿಕ ಹೆಜಮಾಡಿ ಟೋಲ್ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿ ಶರಣ್ನನ್ನು ಚೇಸ್ ಮಾಡಿದಾಗ ಮಂಗಳೂರಿನ ಪಂಪ್ ವೆಲ್ ಬಳಿ ಪೊಲೀಸರ ಕಣ್ಣಿಗೆ ಬಿದ್ದಿದ್ದಾನೆ. ಇಲ್ಲಿಂದಲೂ ಕಾರು ಮೂಲಕ ತಪ್ಪಿಸಿಕೊಂಡ ಶರಣ್, ಜೆಪ್ಪು ಕುಡುಪಾಡಿ ರಸ್ತೆಯ ಖಾಸಗಿ ಜಾಗದಲ್ಲಿ ಕಾರು ನಿಲ್ಲಿಸಿದಾಗ ಎಂಟು ಸಿಸಿಬಿ ಪೊಲೀಸರು ಸುತ್ತವರಿದಿದ್ದಾರೆ. ಈ ವೇಳೆ ಹಿಡಿಯಲು ಬಂದ ಕಾನ್ಸ್‌ಟೇಬಲ್ ಪ್ರಕಾಶ್ ಮೇಲೆ ಶರಣ್ ಚೂರಿಯಿಂದ ದಾಳಿ ನಡೆಸಿದಾಗ…
Author: AIN Author
ತೆಲುಗು ರಾಜ್ಯಗಳ ಸೆಲೆಬ್ರಿಟಿ ಜ್ಯೋತಿಷಿ ಎನಿಸಿಕೊಂಡಿರುವ ವೇಣು ಸ್ವಾಮಿ, ತೆಲುಗಿನ ಜನಪ್ರಿಯ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಕುರಿತು ಭವಿಷ್ಯ ನುಡಿದಿದ್ದಾರೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ಪವನ್ ಕಲ್ಯಾಣ್ರ ಖಾಸಗಿ ಜೀವನ, ರಾಜಕೀಯ ಜೀವನದ ಬಗ್ಗೆ ವೇಣು ಸ್ವಾಮಿ ಮಾತನಾಡಿದ್ದಾರೆ. ಪವನ್ ಕಲ್ಯಾಣ್ ಮುಂದೆ ಏನು ಮಾಡಿದರೆ ಅವರ ಜಿವನದಲ್ಲಿ ಏಳ್ಗೆ ಇರುತ್ತದೆ ಎಂಬ ಬಗ್ಗೆಯೂ ಭವಿಷ್ಯ ಹೇಳಿದ್ದಾರೆ. ಪವನ್ ಕಲ್ಯಾಣ್ ರ ರಾಜಕೀಯ ವಿರೋಧಿಗಳು ಅವರ ಮೂರು ಮದುವೆ ವಿಷಯವನ್ನು ಸದಾ ಪವನ್ರ ವಿರುದ್ಧ ಅಸ್ತ್ರವಾಗಿ ಬಳಸುತ್ತಿರುತ್ತಾರೆ. ಪವನ್ಗೆ ಈಗಾಗಲೇ ಮೂರು ಮದುವೆಗಳಾಗಿವೆ, ಮೂರನೇ ಪತ್ನಿಗೂ ವಿಚ್ಛೇದನ ನೀಡಿ ನಾಲ್ಕನೇ ಮದುವೆ ಆಗಲು ತಯಾರಾಗಿದ್ದಾರೆ ಎಂದು ಕೆಲವು ದಿನಗಳ ಹಿಂದಷ್ಟೆ ವೈಸಿಪಿ ಪಕ್ಷದ ಮುಖಂಡರೊಬ್ಬರು ವಾಗ್ದಾಳಿ ನಡೆಸಿದ್ದರು. ಈ ಬಗ್ಗೆ ಮಾತನಾಡಿರುವ ವೇಣು ಸ್ವಾಮಿ, ‘ಈ ವರ್ಷದ ಜೂನ್ ವರೆಗೆ ಆ ರೀತಿಯ ಘಟನೆಗಳು ನಡೆಯುವುದಿಲ್ಲ ಆದರೆ ಜೂನ್ ತಿಂಗಳ ನಂತರ ಪವನ್…
ನಟ-ನಿರ್ದೇಶಕ ಸಿಹಿಕಹಿ ಚಂದ್ರು (Sihi Kahi Chandru) ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್ ಭೋಜನ’ ((Bombat Bhojana)) ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” ಹಾಕಿಸಿ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ವಿವರಣೆ ನೀಡಿದರು. ಮೂರನೆಯ ಆವೃತ್ತಿಯ ಬಗ್ಗೆ ಮಾತನಾಡಿದ ಚಂದ್ರು, ‘ನಾಡಿನ ಹಲವು ಜಿಲ್ಲೆಗಳಿಗೆ ಹೋಗಿ ಅಲ್ಲಿನ ಮಹಿಳಾ ಮಂಡಳಿ ಸದಸ್ಯರಿಗೆ ಅಡಿಗೆ ಮಾಡಿ ತೋರಿಸಲಾಗಿದೆ. ಆಹ್ವಾನಿಸಿದವರ ಮನೆಗೆ ಹೋಗಿ ಅವರು ಪ್ರೀತಿಯಿಂದ ಮಾಡಿದ ತಿಂಡಿಯನ್ನು ಸವಿದು ಬಂದಿದ್ದೇನೆ. ಬರೀ ಅಡುಗೆಯಷ್ಟೇ ಅಲ್ಲ, ‘ಅಂದ ಚೆಂದ’ ಎಂಬ ಹೊಸ ವಿಭಾಗಗಳ ಮೂಲಕ ಮಹಿಳೆಯರು ತಮ್ಮ…
ವಿಜಯಪುರ:- ನಗರದ ಟಿಪ್ಪು ಸುಲ್ತಾನ್ ಸರ್ಕಲ್ ನಲ್ಲಿ ಚಲಿಸುತ್ತಿದ್ದ ಸರ್ಕಾರಿ ಬಸ್ನ ಹಿಂಬದಿ ಚಕ್ರದ ಅಡಿ ಬಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ ಯುವಕ ಬಸ್ ಚಕ್ರದ ಕೆಳಗೆ ಬೀಳುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಸ್ ಬರುತ್ತಿದ್ದಂತೆ ಕೈಯಲ್ಲಿದ್ದ ಮೊಬೈಲ್ ಎಸೆದು ಚಕ್ರದಡಿ ಬೀಳುವುದನ್ನು ಕಾಣಬಹುದು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಮೂಲದ ವಿಶ್ವನಾಥ ಶಂಕರಯ್ಯ (38) ಎಂದು ತಿಳಿದುಬಂದಿದೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೃತ ಯುವಕನ ಕುಟುಂಬಸ್ಥರನ್ನು ಸಂಪರ್ಕಿಸಲು ಮುಂದಾಗಿದ್ದಾರೆ.
ಬದಲಾಗುತ್ತಿರುವ ಕಾಲಘಟ್ಟದಲ್ಲಿ ಎಲ್ಲರೂ ಒಂದಿಲ್ಲೊಂದು ಒತ್ತಡವನ್ನು ಎದುರಿಸುತ್ತಲೇ ಇದ್ದೇವೆ. ಕೇವಲ ಕೆಲಸಕ್ಕೆ ಹೋಗುವವರಷ್ಟೇ ಅಲ್ಲ ಮನೆಯಲ್ಲೇ ಇರುವವರೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕೋವಿಡ್ ಕಾಲದ ನಂತರದಲ್ಲಿ ಇನ್ನೂ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭವಾಗಿದೆ. ಇದರಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಯೂ ಒಂದಾಗಿದೆ. ಒತ್ತಡವು ದೇಹ ಮತ್ತು ಮನಸ್ಸು ಅಗಾಧವಾಗಿ ಕಂಡುಬರುವ ಸಂದರ್ಭಗಳಿಗೆ ಶಾರೀರಿಕ ಮತ್ತು ಮಾನಸಿಕ ಪ್ರತಿಕ್ರಿಯೆಯಾಗಿದೆ. ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಈ ತರಕಾರಿಗಳು ಕಂಡಿತವಾಗಿಯೂ ನಿಮಗೆ ಸಹಾಯವಾಗಲಿದೆ. ದೇಹಕ್ಕೆ ನಿತ್ಯವೂ ಬೇಕಾಗಿರುವ ವಿಟಮಿನ್ ಸಿ ಅಂಶದ ಶೇ.65ರಷ್ಟು ಗೆಣಸಿನಲ್ಲಿ ಇದೆ. ಗ್ಲೈಸೆಮಿಕ್ ಇಂಡೆಕ್ಸ್ 17 ಆಗಿದ್ದು, ಗೆಣಸಿನಲ್ಲಿ ಅತ್ಯಧಿಕ ಪ್ರಮಾಣದ ಆಹಾರದ ನಾರಿನಾಂಶವಿದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡುವುದು. ಇದರಿಂದ ಹೊಟ್ಟೆಯ ಕೊಬ್ಬು ಕರಗುವುದು. ಬೀನ್ಸ್ ನಲ್ಲಿ ಪ್ರಮುಖ ಪೋಷಕಾಂಶಗಳಿದ್ದು, ಇದರಲ್ಲಿ ಲೈಸಿನ್ ಎನ್ನುವ ಅಮಿನೋ ಆಮ್ಲವಿದ್ದು, ಇದು ದೇಹದಲ್ಲಿನ ಕೊಬ್ಬಿನಾಮ್ಲವನ್ನು ಶಕ್ತಿಯಾಗಿ ಪರಿವರ್ತನೆ ಮಾಡುವುದು ಮತ್ತು ಕೊಲೆಸ್ಟ್ರಾಲ್ ತಗ್ಗಿಸುವುದು. ಇದರಲ್ಲಿ ವಿಟಮಿನ್ ಬಿ ಅಂಶವಿದ್ದು, ಇದು…
ಬೆಂಗಳೂರಿನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಜನವರಿ 10, 2024 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್( ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ: ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ: ವಾರ್ಷಿಕ ಪ್ಯಾಕೇಜ್ 7 ಲಕ್ಷ ಉದ್ಯೋಗದ ಸ್ಥಳ: ಬೆಂಗಳೂರು
ಭಾರತದಲ್ಲಿ ಚಿನ್ನದ ದರ ಇಳಿಕೆ ಮುಂದುವರಿದಿದೆ. ಕಳೆದ ಎರಡು ವಾರಗಳಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲ ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 10ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ ಬೆಳ್ಳಿ ಬೆಲೆ 10 ಗ್ರಾಂಗೆ: 766 ರೂ ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ…
ಆಹಾರವು ಬೇಗನೆ ಜೀರ್ಣವಾಗುವಂತೆ ನಾವು ಖಂಡಿತವಾಗಿಯೂ ಊಟವನ್ನು ತ್ವರಿತವಾಗಿ ತಿನ್ನಬೇಕು. ಬೇಗನೆ ಊಟ ಮಾಡುವುದು ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ತಜ್ಞರು ಹೇಳುತ್ತಾರೆ. ಇಂದಿನ ಸಮಯದಲ್ಲಿ ಅನೇಕ ಜನರು ತಡವಾಗಿ ಊಟ ಮಾಡುತ್ತಿದ್ದಾರೆ ಮತ್ತು ಇದು ಸಾಕಷ್ಟು ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತಿದೆ ಎಂದು ಅವರು ಹೇಳುತ್ತಾರೆ. ಗ್ಯಾಸ್, ಅಜೀರ್ಣ ಮತ್ತು ಹೊಟ್ಟೆಯಲ್ಲಿ ಆಸಿಡ್ ರಿಫ್ಲಕ್ಸ್ ನಂತಹ ಸಮಸ್ಯೆಗಳನ್ನು ತಪ್ಪಿಸಬಹುದು ಮತ್ತು ಸಂಜೆ ಬೇಗನೆ ಊಟ ಮಾಡುವುದರಿಂದ ಬೇಗನೆ ನಿದ್ರೆ ಮಾಡಲು ಸಹಾಯ ಮಾಡುತ್ತದೆ. ನಿದ್ರಾಹೀನತೆಯ ಸಮಸ್ಯೆಯನ್ನು ಸಹ ತಪ್ಪಿಸಲಾಗಿದೆ. ಇದಲ್ಲದೆ, ತೂಕ ಇಳಿಸಿಕೊಳ್ಳಲು ಬಯಸುವವರು ಸಂಜೆ ಬೇಗನೆ ಊಟ ಮಾಡಬೇಕು. ವಿಶೇಷವಾಗಿ ತೂಕ ಇಳಿಸಿಕೊಳ್ಳಲು ಬಯಸುವವರಿಗೆ. ಆದ್ದರಿಂದ, ದೇಹದಲ್ಲಿ ಹೆಚ್ಚುವರಿ ಕೊಬ್ಬು ಸಂಗ್ರಹವಾಗುವುದಿಲ್ಲ. ಬೇಗನೆ ಊಟ ಮಾಡುವುದರಿಂದ ದೇಹದಲ್ಲಿನ ಅಂಗಗಳಿಗೆ ಸಾಕಷ್ಟು ವಿಶ್ರಾಂತಿ ಸಿಗುತ್ತದೆ. ಆದ್ದರಿಂದ ನಾವು ಮರುದಿನ ಉತ್ಸಾಹದಿಂದ ಮತ್ತು ಶಕ್ತಿಯುತವಾಗಿ ಕೆಲಸ ಮಾಡಬಹುದು. ಬೇಗನೆ ಊಟ ಮಾಡುವುದರಿಂದ ದೇಹದಲ್ಲಿ ನಿರ್ವಿಷೀಕರಣದ ಪ್ರಕ್ರಿಯೆಯನ್ನು ವೇಗವಾಗಿ ಮಾಡಬಹುದು. ದೇಹದಿಂದ ಕಲ್ಮಶಗಳು…
ಜಗತ್ತಿನಲ್ಲಿ ಹೆಚ್ಚಿನ ಮಹಿಳೆಯರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರಿಂದ ಅನೇಕ ಸಮಸ್ಯೆಗಳನ್ನು ಮಹಿಳೆಯರು ಎದುರಿಸುತ್ತಿದ್ದಾರೆ. ಹಾಗಾಗಿ ಪಿಸಿಒಎಸ್ ಸಮಸ್ಯೆಯನ್ನು ತೊಡೆದುಹಾಕಲು ಈ ಜೀವನಶೈಲಿಯನ್ನು ರೂಢಿಸಿಕೊಳ್ಳಿ. ನೀವು ಒತ್ತಡವನ್ನು ತೆಗೆದುಕೊಳ್ಳುವುದನ್ನು ತಪ್ಪಿಸಿ. ಒತ್ತಡದ ಜೀವನಶೈಲಿಯಿಂದ ಪಿಸಿಒಎಸ್ ಸಮಸ್ಯೆ ಹೆಚ್ಚು ಕಾಡುತ್ತದೆ. ಇದು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದರಿಂದ ಋತುಚಕ್ರ ಅನಿಯಂತ್ರಿತವಾಗುತ್ತದೆ. ಸರಿಯಾದ ಆಹಾರ ಕ್ರಮಗಳನ್ನು ಪಾಲಿಸಿ. ತರಕಾರಿ, ಹಣ್ಣುಗಳು, ಧಾನ್ಯಗಳನ್ನು ಹೆಚ್ಚು ಸೇವಿಸಿ. ಜಂಕ್ ಫುಡ್, ಸಂಸ್ಕರಿಸಿದ ಆಹಾರಗಳು ಮತ್ತು ಕರಿದ ಪದಾರ್ಥಗಳನ್ನು ಹೆಚ್ಚು ಸೇವಿಸಬೇಡಿ. ಹಾಗೇ ಕಾರ್ಬೋಹೈಡ್ರೇಟ್ ಆಹಾರಗಳಿಂದ ದೂರವಿರಿ. ಬಿಳಿ ಬ್ರೆಡ್, ಅಕ್ಕಿ ಸಕ್ಕರೆಯನ್ನು ಹೆಚ್ಚು ಬಳಸಬೇಡಿ.
ಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ (Vijaya Prakash) ಅವರ ಧ್ವನಿಯಲ್ಲಿ ಕನ್ನಡದಲ್ಲಿ ಮೊದಲನೇ ಹನುಮಾನ ಚಾಲಿಸಾ (Hanumana Chalisa) ಕೋಟ್ಯಂತರ ಜನ ಭಾರತೀಯರು ಕಾತುರದಿಂದ ಕಾಯುತ್ತಿರುವ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಶ್ರೀರಾಮನ ಪ್ರತಿಷ್ಠೆ ಸುಸಮಯ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಜಗತ್ತಿಗೆ ಭಕ್ತಿಯ ನಿಯಮ – ಏನೆಂದು ತೋರಿಸಿಕೊಟ್ಟ ರಾಮಭಕ್ತ ಹನುಮನ ಕುರಿತಾದ ಹನುಮಾನ್ ಚಾಲಿಸಾ ಬಿಡುಗಡೆಯಾಗಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಮೂಡಿಬಂದಿರುವ ಹನುಮಾನ್ ಚಾಲಿಸಾ ವನ್ನು ಭಕ್ತಿ ಭಾವದ ಹೊನಲಿಗೆ ಹೃದಯಸ್ಪರ್ಶ ನೀಡುವ ಹೃತ್ಕಂಠ ಗಾಯಕ ನಮ್ಮ ಕನ್ನಡದ ಹೆಮ್ಮೆಯ ವಿಜಯ್ ಪ್ರಕಾಶ್ ಸುಶ್ರಾವ್ಯವಾಗಿ ಭಕ್ತಿಪರವಶರಾಗಿ ಹಾಡಿದ್ದಾರೆ. ನಿರ್ಮಾಣ ವೆಂಕಟೇಶ್ ಉತ್ತರಹಳ್ಳಿ ಅವರಿಂದ ಇದಕ್ಕೆ ಸಂಗೀತದ ಸ್ಪರ್ಶ ನೀಡಿರುವವರು ಈಗಾಗಲೇ ಕನ್ನಡ ಚಲನಚಿತ್ರ ಕ್ಷೇತ್ರದಲ್ಲಿ ಹಲವು ಚಿತ್ರಗಳಿಗೆ ಸಂಗೀತ ನೀಡಿ ಜನ ಮನ್ನಣೆಗಳಿಸಿರುವ ಲೋಕಿ ತವಸ್ಯ ಅವರು.