ದಾವಣಗೆರೆ:- ದಾವಣಗೆರೆಯ ರಾಮ ಮಂದಿರದಲ್ಲಿ ಬಾಲ ರಾಮನ ವೇಷದಲ್ಲಿದ್ದ ಬಾಲಕ ಎಲ್ಲರ ಗಮನ ಸೆಳೆದಿದ್ದಾನೆ. ಕೈಯಲ್ಲಿ ಬಿಲ್ಲು ಬಾಣ ಹಿಡಿದು ಬಾಲ ಶ್ರೀರಾಮನಂತೆ ಬಾಲಕ ವೇಷ ತೊಟ್ಟಿದ್ದು, ಕಾರ್ಯಕ್ರಮದಲ್ಲಿ ಬಾಲ ರಾಮನ ವೇಷಧಾರಿ ಬಾಲಕ ವಿಶೇಷ ಆಕರ್ಷಣೆ ಆಗಿದ್ದ. ಬಾಲರಾಮನನ್ನ ಎತ್ತಿ ಪೋಟೋ ರಾಮ ಭಕ್ತರು ಹಾಗೂ ಮಹಿಳೆಯರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ದಾವಣಗೆರೆಯ ಪಿಜೆ ಬಡಾವಣೆಯ ರಾಮಮಂದಿರದಲ್ಲಿ ಬಾಲರಾಮ ಕಂಡು ಬಂದಿದ್ದಾನೆ.
Author: AIN Author
ರಾಯಚೂರು:- ಅಯೋಧ್ಯೆಯಲ್ಲಿ ರಾಮನ ಪ್ರತಿಷ್ಠಾಪನೆ ಹಿನ್ನೆಲೆ ಮಂತ್ರಾಲಯದಲ್ಲಿ ಶೋಭ ಯಾತ್ರೆ ನಡೆದಿದೆ. ಮುಸಲ್ಮಾನರಿಗೆ ಧ್ವಜವನ್ನು ಕೊಟ್ಟು ಘೋಷಣೆ ಕೂಗಿ ಸುಭಧೆಂದ್ರತೀರ್ಥ ಸ್ವಾಮೀಜಿಗಳು ಚಾಲನೆ ನೀಡಿದ್ದಾರೆ. 3 ಸಾವಿರಕ್ಕೂ ಹೆಚ್ಚು ಭಕ್ತರು ಶೋಭ ಯಾತ್ರೆಯಲ್ಲಿ ಭಾಗಿ ಆಗಿದ್ದು, ಜಾತಿ ಭೇದ ಮರೆತು ಎಲ್ಲ ಭಕ್ತರು ಪಾಲ್ಗೊಂಡು ಐತಿಹಾಸಿಕ ಶೋಭ ಯಾತ್ರೆ ಆಚರಣೆ ಮಾಡಿದ್ದಾರೆ.
ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ (ʼಅಭಿಜಿತ್ʼ ಅಂದ್ರೆ ʼಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ (Pran Prathistha ceremony) ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿಯವರ ಸಾರಥ್ಯದಲ್ಲಿ ಮೂಲ ವಿಗ್ರಹದ ಎದುರು ವಿಧಿ-ವಿಧಾನಗಳನ್ನು ನೆರವೇರಿತು. 500 ವರ್ಷಗಳ ಬಳಿಕ ಬಾಲರಾಮ ತನ್ನ ಸ್ವಸ್ಥಾನಕ್ಕೆ ಮರಳಿದ ಶ್ರೀರಾಮ
ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಮೂಲಕ 500 ವರ್ಷಗಳ ಬಳಿಕ ಬಾಲರಾಮ ತನ್ನ ಸ್ವಸ್ಥಾನಕ್ಕೆ ಮರಳಿದ್ದಾರೆ. 12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್ ಮುಹೂರ್ತದಲ್ಲಿ (ʼಅಭಿಜಿತ್ʼ ಅಂದ್ರೆ ʼಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ (Pran Prathistha ceremony) ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದಕ್ಕೂ ಮುನ್ನ ಪ್ರಧಾನಿಯವರ ಸಾರಥ್ಯದಲ್ಲಿ ಮೂಲ ವಿಗ್ರಹದ ಎದುರು ವಿಧಿ-ವಿಧಾನಗಳನ್ನು ನೆರವೇರಿತು. ಗರ್ಭಗುಡಿಯಲ್ಲಿ ಪೂಜಾ-ಕೈಂಕರ್ಯಗಳು ನಡೆದವು. ಬಳಿಕ ಬಾಲರಾಮನ ಹಣೆಗೆ ಮೋದಿ ತಿಲಕವಿಟ್ಟರು. ಈ ಸಂದರ್ಭದಲ್ಲಿ ಶಂಖ, ಜಾಗಟೆಗಳು ಮೊಳಗಿದವು. ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್, ಆರ್‌ಎಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಹಾಗೂ ಅಯೋಧ್ಯೆಯ ಪ್ರಧಾನ ಅರ್ಚಕರು ಉಪಸ್ಥಿತರಿದ್ರು. ಈ ದಿನಕ್ಕಾಗಿ ಪ್ರಧಾನಿಯವರು ಕಳೆದ 11 ದಿನಗಳಿಂದ…
ಕೊಪ್ಪಳ :- ಶ್ರೀರಾಮನ ಮಂದಿರ ಸೇರಿದಂತೆ ನಾಡಿನ ಎಲ್ಲ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಅದರಂತೆ ಕೊಪ್ಪಳ ನಗರದ ಭಾಗ್ಯನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಮಾಡಿದರು. ಅಲ್ಲದೇ ಮುಸ್ಲಿಂ ಮುಖಂಡರು ದೇವಸ್ಥಾನಗಳಿಗೆ ಬರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಿದ್ದಾರೆ.
ಸೆಲೆಬ್ರಿಟಿಗಳ ದಂಡು ರಾಮ ಮಂದಿರಕ್ಕೆ ತೆರಳಿದೆ. ಸಾವಿರಾರು ಗಣ್ಯರ ಸಮ್ಮುಖದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಈಗಾಗಲೇ ಕನ್ನಡದ ಹೆಸರಾಂತ ನಟ, ನಿರ್ದೇಶಕ ರಿಷಬ್ ಶೆಟ್ಟಿ(Rishabh Shetty), ಅನಿಲ್ ಕುಮಾರ ಸ್ವಾಮಿ, ಬಾಲಿವುಡ್ ಖ್ಯಾತ ನಟ ಅಮಿತಾಬ್ ಬಚ್ಚನ್, ತೆಲುಗು ನಟರಾದ ಚಿರಂಜೀವಿ, ರಾಮ್‌ಚರಣ್, ಪವನ್ ಕಲ್ಯಾಣ್ ಬಾಲಿವುಡ್ ಖ್ಯಾತ ನಟಿ ಕಂಗನಾ ರಣಾವತ್ತ್, ಕತ್ರಿನಾ ಕೈಫ್ ಸೇರಿದಂತೆ ಅನೇಕ ನಟ ನಟಿಯರು ಅಯೋಧ್ಯೆಗೆ ಆಗಮಿಸಿದ್ದಾರೆ. ಕೇವಲ ಸಿನಿಮಾ ನಟರು ಮಾತ್ರವಲ್ಲ, ಕ್ರೀಡಾ ತಾರೆ ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ವೆಂಕಟೇಶ್ ಪ್ರಸಾದ್, ಆರ್.ಅಶ್ವಿನ್, ಸೈನಾ ನೆಹ್ವಾಲ್ ಸೇರಿದಂತೆ ಅನೇಕರು ಅಯೋಧ್ಯೆಗೆ ಆಗಮಿಸಿದ್ದು, ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಕಂಗನಾ ರಣಾವತ್ ಅವರಿಗೆ ದೇವರ ಮೇಲೆ ಅಪಾರ ಭಕ್ತಿ. ಅವರು ರಾಮ ಮಂದಿರದ ಎದುರು ನಿಂತು ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ಪ್ರಾಣ ಪ್ರತಿಷ್ಠಾಪನೆಗೂ ಮೊದಲು ಅಲ್ಲಿರುವ ಹನುಮ ದೇವಾಲಯಕ್ಕೆ ರಿಷಬ್ ಶೆಟ್ಟಿ ಹಾಗೂ ಪ್ರಗತಿ…
ಮೈಸೂರು:- ತಾಲೂಕು ಹಾರೋಹಳ್ಳಿಯಲ್ಲಿ ರಾಮ ಮಂದಿರ ಗುದ್ದಲಿ ಪೂಜೆಗೆ ಆಗಮಿಸಿದ ಪ್ರತಾಪ್ ಸಿಂಹಗೆ ಘೇರಾವ್ ಹಾಕಿದ ಘಟನೆ ಜರುಗಿದೆ. ಆಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ರಾಮಲಲ್ಲಾ ಮೂರ್ತಿಯ ಕೃಷ್ಣ ಶಿಲೆ ಕಲ್ಲು ಹಾರೋಹಳ್ಳಿ ಬಳಿಯ ಗಯಜ್ಜೇಗೌಡನಪುರದ ರಾಮದಾಸ್ ಅವರ ಜಮೀನಿನಲ್ಲಿ ಸಿಕ್ಕಿತ್ತು. ಈ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವುದಾಗಿ ಸ್ಥಳೀಯ ಶಾಸಕ ಜಿ.ಟಿ.ದೇವೇಗೌಡ ಅವರು ಈ ಹಿಂದೆ ತಿಳಿಸಿದ್ದರು. ಹೀಗಾಗಿ ಇಂದು ಭೂಮಿಪೂಜೆ ಮತ್ತು ರಾಮನ ಪೂಜೆ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಸಂಸದ ಪ್ರತಾಪ್ ಸಿಂಹ ಆಗಮಿಸಿದ್ದರು. ಈ ವೇಳೆ ಕೆಲ ಸ್ಥಳೀಯರು ಸಂಸದರನ್ನು ಘೇರಾವ್ ಹಾಕಿ ಮಹಿಷಾ ದಸರಕ್ಕೆ ವಿರೋಧ ನೆಪ ಹೇಳಿಕೊಂಡು ಅಪಮಾನ ಮಾಡಿ ದಲಿತ ವಿರೋಧಿ ಎಂದು ಕರೆದು ಕಾರ್ಯಕ್ರಮಕ್ಕೆ ಬರದಂತೆ ಅಡ್ಡಿಪಡಿಸಿದ್ದಾರೆ. ಇದರಿಂದ ಬೇಸರಕೊಂಡ ಸಂಸದ ಪ್ರತಾಪ್ ಸಿಂಹ ಕಾರ್ಯಕ್ರಮದಲ್ಲಿ ಭಾಗಿಯಾಗದೆ ಹೊರ ನಡೆದರು. ಜಾತ್ಯಾತೀತವಾಗಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಜಾತಿ ತಂದು ಗಲಾಟೆ ಮಾಡಲಾಗಿದೆ.
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾನ ಹಿನ್ನೆಲೆ ದೇಶದಾದ್ಯಂತ ಸಂಭ್ರಮ ಮನೆ ಮಾಡಿದ್ದು ಇನ್ನೇನು ಕೆಲವೇ ಕ್ಷಣಗಳಲ್ಲಿ ಅಯೋಧ್ಯೆಯಲ್ಲಿ ರಾಮನಮೂರ್ತಿ ಪ್ಪ್ರಪ್ರಾಣ ಪ್ರಿತಿಷ್ಠಾಪನೆ ಆಗಿಲಿದೆ. ನಗರದ ಅರಮನೆ ರಸ್ತೆ ಬಾಲಬ್ರುಹಿ ಅತಿಥಿಗೃಹದ ಹತ್ತಿರ ಇರುವ ಮಾರುತಿ ಭಗವಾನ್ ದೇವಾಲಯದಲ್ಲಿ ಸಂಭ್ರಮ ಮನೆ ಮಾದ್ದು ಸಚಿವ ರಾಮಲಿಂಗಾರೆಡ್ಡಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ವೇಳೆ ಅಲ್ಲಿ ಬಂದಿರುವ ಭಕ್ತಾದಿಗಳಿಗೆ ಸಚಿವರು ಲಡ್ಡು ವಿತರಿಸಿದರು.
ಶಿವಮೊಗ್ಗ:- ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ರಾಮಮಂದಿರ ಉದ್ಘಾಟನೆ ಪ್ರಯುಕ್ತವಾಗಿ ಆಯೋಜನೆ ಮಾಡಲಾಗಿದ್ದ ಸಿಹಿ ವಿತರಣೆ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ‘ಅಲ್ಲಾಹೋ ಅಕ್ಬರ್’ ಘೋಷಣೆ ಕೂಗಿ, ನೀವು ಮೋದಿ ಪರ ಕೆಲಸ ಮಾಡುತ್ತಿದ್ದೀರಿ ಎಂದು ಪೊಲೀಸರಿಗೆ ಆವಾಜ್ ಹಾಕಿದರು. ಪರಿಣಾಮವಾಗಿ ಸ್ಥಳದಲ್ಲಿ ತುಸು ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಮುಸ್ಲಿಂ ಮಹಿಳೆಯ ಘೋಷಣೆಗೆ ಸ್ಥಳದಲ್ಲಿದ್ದ ಹಿಂದು ಕಾರ್ಯಕರ್ತರು ತೀವ್ರ ಪ್ರತಿರೋಧ ವ್ಯಕ್ತಪಡಿಸಿದರು. ಪ್ರತಿಯೊಬ್ಬರಿಂದಲೂ ಜೈಶ್ರೀರಾಮ್ ಘೋಷಣೆ ಮೊಳಗಿತು. ಈ ಮಧ್ಯೆ, ಮುಸ್ಲಿಂ ಮಹಿಳೆಯನ್ನು ಬಂಧಿಸುವಂತೆ ಬಿಜೆಪಿ ಮುಖಂಡ, ಮಾಜಿ ಸಚಿವ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಪೊಲೀಸರನ್ನು ಆಗ್ರಹಿಸಿದರು. ಮುಸ್ಲಿಂ ಮಹಿಳೆ ಗೊಂದಲ ಸೃಷ್ಟಿಸುತ್ತಿದ್ದರೂ ಸುಮ್ಮನಿದ್ದೀರಾ ಎಂದು ಪೊಲೀಸರನ್ನು ಕಾಂತೇಶ್ ತರಾಟೆಗೆ ತೆಗೆದುಕೊಂಡರು. ನಂತರ ಪೊಲೀಸರು ಮುಸ್ಲಿಂ ಮಹಿಳೆಯನ್ನು ವಶಕ್ಕೆ ಪಡೆದು ಜೀಪಿನಲ್ಲಿ ಕರೆದೊಯ್ದರು. ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ರಾಜ್ಯದಾದ್ಯಂತ ಬಿಜೆಪಿ ನಾಯಕರು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅಂತೆಯೇ ಹಿಂದೂ ಸಂಘಟನೆಗಳು ಸಹ ಸಿಹಿ ವಿತರಣೆ, ಪೂಜೆ…
ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ. ಡಿ ಕೆ ಶಿವಕುಮಾರ್ ನನ್ನ ವಿರುದ್ಧ 420 ಪ್ರಕರಣ ದಾಖಲು ಮಾಡಿದ್ದಾರೆ. ಈ ಪ್ರಕರಣದಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ಡಿ ಕೆ ಶಿವಕುಮಾರ್ ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಕಾಗವಾಡ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ” ಹಿಂದೆ ಸಿ ಡಿ ಕೇಸ್ನಲ್ಲಿ ನನಗೆ ಶಿಕ್ಷೆ ನೀಡಬೇಕೆಂದು ಕಾಂಗ್ರೆಸ್ನವರು ಪ್ರಯತ್ನಪಟ್ಟಿದ್ದರು. ಆದ್ರೆ ಆಗ್ಲಿಲ್ಲ. ಈಗ ತಮ್ಮ ಸರ್ಕಾರದ ಅವಧಿಯಲ್ಲಿ ನನ್ನ ವಿರುದ್ಧ ಪ್ರಕರಣ ದಾಖಲು ಮಾಡಿದ್ದಾರೆ. ಈ ಪ್ರಕರಣಗಳು ಲೋಕಸಭಾ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಇದರಿಂದ ನಾನು ಹಿಂದೆ ಸರಿಯುವುದಿಲ್ಲ. ನಾನು ಗಟ್ಟಿಯಾಗಿ ಇದ್ದೇನೆ, ಇದನ್ನು ಎದುರಿಸುತ್ತೇನೆ. ಈ ಕುರಿತು…