Author: AIN Author

ಬೆಳಗಾವಿ : ನನಗೆ ಸ್ಪರ್ಧೆ ಮಾಡುವಂತೆ ಹೈಕಮಾಂಡ್‌ನ ಯಾವ ನಾಯಕರೂ ಸೂಚಿಸಿಲ್ಲ. ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧಿಸುವುದು ಕಡ್ಡಾಯವಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು. ಕಾಂಗ್ರೆಸ್‌ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಮ್ಮ ಸ್ಪರ್ಧೆಗೆ ಹೈಕಮಾಂಡ್‌ನಿಂದ ಒತ್ತಡ ಬರುತ್ತಿರುವ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ ಅವರು ಈ ರೀತಿ ಉತ್ತರಿಸಿದರು. ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಕಾಂಗ್ರೆಸ್‌ ಹೈಕಮಾಂಡ್‌ ನನಗೇನೂ ಸೂಚನೆ ನೀಡಿಲ್ಲ ಎಂದು ಹೇಳಿದರು. ರಾಜ್ಯದಲ್ಲಿ 18 ಕ್ಷೇತ್ರಗಳ ಪೈಕಿ ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧ್ಯವಿಲ್ಲ. ಕೆಲ ಕ್ಷೇತ್ರಗಳಲ್ಲಿ ನಮ್ಮ ಪಕ್ಷ ವೀಕ್‌ ಇದೆ. 28ರ ಪೈಕಿ 20 ಕ್ಷೇತ್ರಗಳಲ್ಲಿ ನಾವು ಪ್ರಬಲರಾಗಿದ್ದೇವೆ. 8 ಕ್ಷೇತ್ರಗಳಲ್ಲಿ ವೀಕ್‌ ಇದ್ದೇವೆ. ತಮ್ಮ ಅಭ್ಯರ್ಥಿ ಗೆಲುವಿಗೆ ಎಲ್ಲ ಸಚಿವರೂ ಪ್ರಯತ್ನ ಮಾಡುತ್ತಾರೆ. ನಮ್ಮ ಸಚಿವರ ಪ್ರಯತ್ನದ ನಂತರವೂ ಕೆಲವೊಮ್ಮೆ ಫಲ ಸಿಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಸಚಿವರ ತಲೆದಂಡವಾಗುತ್ತದೆ ಎಂಬುದು ಶುದ್ಧ…

Read More

ಬೆಂಗಳೂರು: ಇವತ್ತು ಆಯೋಧ್ಯೆಯಲ್ಲಿ‌ ಬಾಲರಾಮನ ಪ್ರಾಣಪ್ರತಿಷ್ಠಪಾನೆ ಹಿನ್ನೆಲೆಯಲ್ಲಿ ನಗರದ ಹಲವು ದೇಗುಲಗಳಲ್ಲಿ ವಿಶೇಷ ಅಭಿಷೇಕ, ಪೂಜೆ, ಹೋಮ ಹವನಗಳುನಡೆಯುತ್ತಿವೆ. ರಾಜಾಜಿನಗರದ ರಾಮಮಂದಿರ ದೇವಾಲಯದಲ್ಲೂ ಬೆಳಿಗ್ಗೆಯಿಂದ ವಿಶೇಷ ಪೂಜೆ, ಹೋಮ ನಡೆಯುತ್ತಿದ್ದು  ಮುಂಜಾನೆ 3 ಗಂಟೆಗೆ ಶ್ರೀರಾಮನಿಗೆ ಅಭಿಷೇಕ..ಬಳಿಕ ರಾಮನಿಗೆ ವಿಶೇಷ ಅಲಂಕಾರ ಬೆಳಿಗ್ಗೆ 6 ಗಂಟೆಯಿಂದ ದೇವರ ದರ್ಶನ ಪಡೆಯುತ್ತಿರುವ ಭಕ್ತರು 9.30ರಿಂದ ರಾಮತಾರಕ‌ ಹೋಮ ಆರಂಭಗೊಂಡು 12.30 ಪೂರ್ಣಾಹುತಿ ಆಗಲಿದೆ ರಾಮಮಂದಿರದಲ್ಲಿ ಇಡೀ ದಿನ ಭಜನೆ, ಪ್ರಸಾದ ವಿನಿಯೋಗ ನಡೆಯಲಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನಲೆ  ಸಾರ್ವಜನಿಕರ ಅನುಕೂಲಕ್ಕೆ ಎಲ್ ಇಡಿ ವ್ಯವಸ್ಥೆ ರಾಮಮಂದಿರದಲ್ಲಿ ಸಂಜೆ 6 ಗಂಟೆಗೆ 108 ದೀಪ ಬೆಳಗಲಿದೆ ರಾತ್ರಿ 10.30ರವರೆಗೂ ದೇವಾಲಯದಲ್ಲಿ ನಿರಂತರ ಭಜನೆ ನಡೆಯಲಿದೆ ಈಗಾಗಲೆ ವಿವಿಧ ಹಿಂದೂ ಸಂಘಟನೆಗಳಿಂದ ದೇವಾಲಯಕ್ಕೆ ಭೇಟಿ ಮಾಡಿ ಪೂಜೆ ಸಲ್ಲಿಕೆ

Read More

ಬೆಂಗಳೂರು: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ (Ayodhya) ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ (Ram lalla) ಪ್ರಾಣಪ್ರತಿಷ್ಠೆ ನೆರವೇರಲಿದೆ ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮನ ಪ್ರಾಣ ಪ್ರತಿಷ್ಠಾಪನೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಮನೆಯಲ್ಲಿ  ಶ್ರೀ ರಾಮನಿಗೆ ವಿಶೇಷ ಪೂಜೆ ಮಾಡಿದ್ದಾರೆ. ಬೆಂಗಳೂರಿನ ಆರ್. ಟಿ. ನಗರದ ತಮ್ಮ ಮನೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ಶ್ರೀ ರಾಮನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ನಿ ಚನ್ನಮ್ಮ, ಮಗ ಭರತ್ ಹಾಗೂ ಪುತ್ರಿ ಅದಿತಿ ಬೊಮ್ಮಾಯಿ ಪಾಲ್ಗೊಂಡಿದ್ದರು.

Read More

ದಾಸರಹಳ್ಳಿ‌: ರಾಮನೂರು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆಗೆ ಕ್ಷಣಗಣನೆ ಶುರುವಾಗಿದೆ. ದೇಶಾದ್ಯಂತ ಶ್ರೀ ರಾಮನ ಜಪ ಮೊಳಗುತ್ತಿದೆ. ಅದರಂತೆ ರಾಜಧಾನಿ ಬೆಂಗಳೂರು ಇನ್ಫ಼ಿನಿಟಿ ಡಾಫೋಡಿಲ್ ಅಪಾರ್ಟ್ಮೆಂಟ್ ನಲ್ಲಿ ಕಾರ್ಯಕ್ರಮ ಅಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಶಾಸಕ ಎಸ್ ಮುನಿರಾಜು ಭಾಗಿ ಆಗಿದ್ದಾರೆ. ಅಪಾರ್ಟ್ಮೆಂಟ್ ಮುಂದೆ 40ಅಡಿ ಕಟೌಟ್ ನ ರಾಮನ ಪ್ಲೆಕ್ಸ್ ನಿರ್ಮಾಣ ಮಾಡಲಾಗಿದೆ. ಅಪಾರ್ಟ್ಮೆಂಟ್ ನ ಎಲ್ಲಾ ನಿವಾಸಿಗಳು ಭಾಗಿಯಾಗಿದ್ದಾರೆ.

Read More

ಖ್ಯಾತ ಗಾಯಕ, ಸಂಗೀತ ಸಂಯೋಜಕ ಶಂಕರ್ ಮಹಾದೇವನ್ (Shankar Mahadevan) ಅವರು ಅಯೋಧ್ಯೆ (Ayodhya) ರಾಮಮಂದಿರದ ಉದ್ಘಾಟನೆಯ ಕುರಿತು ಮಾತನಾಡಿದ್ದಾರೆ. ಅದಷ್ಟೇ ಅಲ್ಲ, ಈ ಸಂಭ್ರಮದಲ್ಲಿ ಶಂಕರ್ ಮಹಾದೇವನ್ ಕೂಡ ಭಾಗಿಯಾಗಿದ್ದಾರೆ. ಈಗಾಗಲೇ ಅಯೋಧ್ಯೆ ತಲುಪಿರುವ ಶಂಕರ್ ಮಹಾದೇವನ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇಡೀ ದೇಶ ಮಾತ್ರವಲ್ಲದೇ ಇಡೀ ಜಗತ್ತು ಈ ಕ್ಷಣಕ್ಕಾಗಿ ಕಾಯುತ್ತಿದೆ. ರಾಮಮಂದಿರ ಪ್ರಾಣ ಪ್ರತಿಷ್ಠೆ ನೋಡಲು ನಾವು ತುಂಬಾ ಸಂತೋಷ ಮತ್ತು ಉತ್ಸುಕರಾಗಿದ್ದೇವೆ. ನಾವು ಕೂಡ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗ್ತಿರೋದ್ದಕ್ಕೆ ಖುಷಿಯಿದೆ ಎಂದು ಹೇಳಿದ್ದಾರೆ. ಬಳಿಕ ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆಯು ಭಾರತದಲ್ಲಿ ನಡೆಯಲಿರುವ ದೊಡ್ಡ ಸಂಭ್ರಮ ಎಂದು ನಾನು ಭಾವಿಸುತ್ತೇನೆ ಎಂದು ಶಂಕರ್ ಮಹಾದೇವನ್ ಮಾತನಾಡಿದ್ದಾರೆ.

Read More

ಮುಂಬೈ:- ದೇಶದ ಅತೀ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್‌ನಲ್ಲಿ ಅಟಲ್ ಸೇತು ಮೊದಲ ಅಪಘಾತ ಸಂಭವಿಸಿದೆ. ಚಾಲಕನಿಂದ ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡಿದಿದೆ. ಡಿಕ್ಕಿ ಹೊಡೆದು ಮೂರ್ನಾಲ್ಕು ಬಾರಿ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳಿಗೆ ಗಾಯಗಳಾಗಿವೆ, ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೊಳಗಾದ ಕಾರು ಅವರು ಚಿರ್ಲೆಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಟಲ್‌ ಸೇತು ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಒಂದು ವಾರಗಳ ಹಿಂದೆ ಉದ್ಘಾಟಿಸಿದ್ದರು.

Read More

ಅಯೋಧ್ಯೆಯ ರಾಮಮಂದಿರ (Ram Mandir) ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಹೀಗಿರುವಾಗ ಹಾಡುವ ಮೂಲಕ ಶ್ರೀರಾಮನನ್ನು ನಟ ಜಗ್ಗೇಶ್ ಸ್ಮರಿಸಿದ್ದಾರೆ. ಈ ಕುರಿತ ವಿಡಿಯೋವೊಂದನ್ನು ಜಗ್ಗೇಶ್ (Actor Jaggesh) ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ‌ https://x.com/Jaggesh2/status/1748977544660132087?s=20 ಜೈಶ್ರೀರಾಮ್ ಎಂದು ಹೇಳುತ್ತಲೇ ಜಗ್ಗೇಶ್ ಹಾಡಿದ್ದಾರೆ. ಹಾಡುವ ಮುಖಾಂತರ ರಾಮನ ಬರಮಾಡಿಕೊಳ್ಳೋಣ ಸ್ನೇಹಿತರೆ ಎಂದಿದ್ದಾರೆ. ಶಾಸ್ತ್ರೀಯವಾಗಿ ಬಂದರು ಸರಿ ಇಲ್ಲದಿದ್ದರು ಸರಿ ರಾಮನಿಗಾಗಿ, ಸಂಕೋಚ ಬಿಟ್ಟು ಯತ್ನಿಸಿ ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಿ ಎಂದು ಅಭಿಮಾನಿಗಳಿಗೆ ಜಗ್ಗೇಶ್ ಮನವಿ ಮಾಡಿದ್ದಾರೆ. ರಾಮನಿಗಾಗಿ ಸಣ್ಣಭಕ್ತಿಯ ಪ್ರಯತ್ನವಿದು. ನಾನು ಹಾಡುಗಾರನಲ್ಲ ತಪ್ಪಿದ್ದರೆ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ. ಬಳಿಕ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿ.ವೈ ವಿಜಯೇಂದ್ರ ಅವರಿಗೆ ಜಗ್ಗೇಶ್ ಟ್ಯಾಗ್ ಮಾಡಿದ್ದಾರೆ. ಜ.22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಸಕಲ ತಯಾರಿ ನಡೆಯುತ್ತಿದೆ. ಕನ್ನಡದ ನಟ ರಿಷಬ್ ಶೆಟ್ಟಿ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಬಹುಭಾಷಾ ಕಲಾವಿದರಿಗೂ ಆಹ್ವಾನ ನೀಡಿದ್ದಾರೆ.

Read More

ಅಯೋಧ್ಯೆ: ಇಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ರಾಮನ ಪ್ರಾಣ ಪ್ರತಿಷ್ಟಾ ನೆರವೇರಲು ಕ್ಷಣಗಣನೆ ಆರಂಭವಾಗಿದೆ. ನೂರಾರು ವರ್ಷಗಳ ಹೋರಾಟದ ಕನಸು ನನಸಾಗುತ್ತಿರುವ ಈ ಸನ್ನಿವೇಶವನ್ನು ಕಣ್ತುಂಬಿಕೊಳ್ಳಲು ದೇಶದ ಕೋಟ್ಯಾಂತರ ಜನ ಕಾಯುತ್ತಿದ್ದಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ದೇಶದ ವಿವಿಧೆಡೆಗಳಿಂದ ಆಹ್ವಾನಿತರು, ಸಾರ್ವಜನಿಕರು ಅಯೋಧ್ಯೆಗೆ ಆಗಮಿಸುತ್ತಿದ್ದಾರೆ. ರಾಮ ಜನ್ಮಭೂಮಿಯಲ್ಲಿ ರಾಮನ ಪ್ರಾಣ ಪ್ರತಿಷ್ಟಾ ಎಂದು ಎಲ್ಲೆಡೆ ಹೇಳಲಾಗುತ್ತಿದ್ದು, ಈ ಪ್ರಾಣ ಪ್ರತಿಷ್ಟಾ ಎಂದರೇ ಏನು? ಎನ್ನುವ ಪ್ರಶ್ನೆ ಕಾಡುತ್ತಿದೆ. ಇದಕ್ಕೆ ಉತ್ತರ ಈ ವರದಿಯಲ್ಲಿದೆ. ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ. ಪ್ರಾಣ ಪ್ರತಿಷ್ಠಾ…

Read More

ಬೆಂಗಳೂರು: ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಇಂದು ಬಾಲರಾಮನ ಪ್ರಾಣ ಪ್ರತಿಷ್ಠಾ ನಡೆಯಲಿದೆ ಈ ಸುಸಂದರ್ಭದಲ್ಲಿ ಸ್ಯಾಂಡಲ್​ವುಡ್​ನ ಆ್ಯಕ್ಷನ್​ ಪ್ರಿನ್ಸ್​ ಅರ್ಜುನ್​ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೂ ಇಂದೇ ನಾಮಕರಣ ಮಾಡಲು ಸಿದ್ದತೆ ಮಾಡಿಕೊಂಡಿದ್ದಾರೆ. ಅಪ್ಪಟ ಹನುಮ ಭಕ್ತರಾಗಿರುವ ಸರ್ಜಾ ಕುಂಟುಂಬದ ಕುಡಿಗಳಿಗೆ ಇಂದು ನಾಮಕರಣ ಮಾಡಲು ತಯಾರಿ ನಡೆಯುತ್ತಿದೆ. ನಟ ಧೃವ ಸರ್ಜಾ ಅವರ ಮಗಳು ಮತ್ತು ಮಗ ಇಬ್ಬರ ನಾಮಕರಣವನ್ನು ಕನಕಪುರದ ಬಳಿ ಇರುವ ಫಾರಂಹೌಸ್​ ನಲ್ಲಿ ನೆರವೇರಿಸಲಿದ್ದಾರೆ. ಈ ಸುಸಂದರ್ಭದಲ್ಲಿ ಅರ್ಜುನ್​ ಸರ್ಜಾ ಫ್ಯಾಮಿಲಿ, ಧೃವಸರ್ಜಾ ಮತ್ತು ಚಿರುಸರ್ಜಾ ಪತ್ನಿ ಮೇಘನಾ ರಾಜ್​ ಮತ್ತು ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

Read More

ಮಂಡ್ಯ:- ಸಂಸಾರ ಎಂಬ ನೌಕೆಯಲ್ಲಿ ಕೌಟುಂಬಿಕ ಕಲಹ ಉಂಟಾಗಿ, ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಮಂಡ್ಯ ನೆಹರೂನಗರದ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಪದ್ಮ(36) ಮೃತ ಮಹಿಳೆ. ಇನ್ನ ಇದು ಆತ್ಮಹತ್ಯೆಯಲ್ಲ ಕೊಲೆ ಅಂತಾ ಮೃತ ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಮೃತ ಮಹಿಳೆ ಪದ್ಮ ಪತಿ ಸಿದ್ದರಾಜು ಎಂಬಾತನ ಮೇಲೆ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಅಂದಹಾಗೆ ರಾಮನಗರ ತಾಲೂಕಿನ ಅಂಕನಹಳ್ಳಿ ನಿವಾಸಿಯಾಗಿದ್ದ ಪದ್ಮ ಹಾಗೂ ಮಂಡ್ಯ ಮೂಲದ ಸಿದ್ದರಾಜು ನಡುವೆ ಪ್ರೀತಿ ಉಂಟಾಗಿ 13 ವರ್ಷದ ಕೆಳಗೆ ಪ್ರೀತಿಸಿ ಮದುವೆಯಾಗಿದ್ದರು. ಇಬ್ಬರು ಮುದ್ದಾದ ಮಕ್ಕಳು ಸಹ ಇವೆ. ಆದರೆ ಆನಂತರ ಹಣಕ್ಕಾಗಿ ಸಿದ್ದರಾಜು ಎಂಬಾತ ಸಾಕಷ್ಟು ಪೀಡಿಸುತ್ತಿದ್ದನಂತೆ. ಆಗಾಗ ಗಲಾಟೆ ಸಹ ನಡೆಯುತ್ತಿತ್ತು. ಹಲವು ಬಾರಿ ಹಲ್ಲೆ ಕೂಡ ನಡೆಸಿದ್ದನಂತೆ. ಹೀಗಾಗಿಯೇ ಇದರಿಂದ ಮನನೊಂದು ಪದ್ಮ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಮಧ್ಯೆ ಕುಟುಂಬಸ್ಥರು ಮಾತ್ರ ಪತಿ ಸಿದ್ದರಾಜುನೇ ಕೊಲೆ ಮಾಡಿ ನೇಣು ಹಾಕಿದ್ದಾನೆ ಎನ್ನುತ್ತಿದ್ದಾರೆ. ಅಂದಹಾಗೆ ಮದುವೆಯಾದ ನಂತರ ಒಂದು ಬಾರಿಗೂ…

Read More