ಬೆಂಗಳೂರು:- ರಾಮಮಂದಿರ ಪ್ರತಿಷ್ಠಾಪನೆ ದಿನ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು, ನಾಳೆ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಎಲ್ಲಾ ಮುಜರಾಯಿ ಇಲಾಖೆ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ. ಆದರೆ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದರು. ನಾನು ಮಹಾದೇಪುರದಲ್ಲಿ ನಿರ್ಮಾಣ ಆಗಿರುವ ರಾಮಮಂದಿರ ಉದ್ಘಾಟನೆಗೆ ಹೋಗುತ್ತೇನೆ ಎಂದು ಹೇಳಿದರು. ಬೆಂಬಲ ಬೆಲೆ ಕುರಿತು ಮಾತನಾಡಿ, ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1,500 ರೂ. ಹೆಚ್ಚುವರಿಯಾಗಿ ಬೆಂಬಲ ಬೆಲೆ ಕೊಟುತ್ತೇವೆ ಎಂದರು. ರಾಮಮAದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ದಿನ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು ಸರ್ಕಾರಕ್ಕೆ ಒತ್ತಾಯಿಸಿದ್ದರು. ಆದರೆ ರಜೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ, ರಾಮಭಕ್ತರ ವಿರೋಧಿ ಎಂದು ಟೀಕಿಸಿದ್ದಾರೆ.
Author: AIN Author
ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಲುಕ್‌ನಲ್ಲಿ ಮೇಘಾ ಶೆಟ್ಟಿ ಮಿಂಚಿದ್ದಾರೆ. ಕೈವ’ ಸಿನಿಮಾ ನಂತರ ಸಾಕಷ್ಟು ಆಫರ್ಸ್ ಬಾಚಿಕೊಳ್ತಿರೋ ಮೇಘಾ ಇದೀಗ ಹೊಸ ಲುಕ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಪ್ಪು ಬಣ್ಣ ಡ್ರೆಸ್‌ನಲ್ಲಿ ಮೇಘಾ ಶೆಟ್ಟಿ ಮುದ್ದಾಗಿ ಫೋಟೋಶೂಟ್ ಮಾಡಿಸಿದ್ದಾರೆ. ಕಿವಿ ಮೇಲೆ ಫ್ಲವರ್ ಇಟ್ಟುಕೊಂಡಿರೋ ಫೋಟೋ ಶೇರ್ ಮಾಡಿರೋ ಮೇಘಾಗೆ ಅತಿಲೋಕ ಸುಂದರಿ ಎಂದು ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ಹಾಡಿಹೊಗಳುತ್ತಿದ್ದಾರೆ. ನಟಿಯ ಮೂಗುತಿ ಲುಕ್‌ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಜೊತೆ ಜೊತೆಯಲಿ’ ಸೀರಿಯಲ್ ಮೂಲಕ ಟಿವಿ ಜಗತ್ತಿಗೆ ಪರಿಚಿತರಾದ ಮೇಘಾ ಶೆಟ್ಟಿ ಅವರು ಈಗ ಬೆಳ್ಳಿತೆರೆಯಲ್ಲಿ ಸಾಲು ಸಾಲು ಸಿನಿಮಾಗಳನ್ನು ಮಾಡ್ತಿದ್ದಾರೆ. ಅನು ಸಿರಿಮನೆ ಎಂಬ ಪಾತ್ರದ ಮೂಲಕ ಕಿರುತೆರೆ ಮನೆ ಮಾತಾಗಿದ್ದ ನಟಿ ಈಗ ಸ್ಯಾಂಡಲ್‌ವುಡ್‌ನಲ್ಲಿ ಮಿಂಚ್ತಿದ್ದಾರೆ.
ಚಿತ್ರದುರ್ಗ:- ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಎಲ್ಪಿಜಿ ಸಿಲಿಂಡರ್ ನ ಸ್ಫೋಟಗೊಂಡು ಓರ್ವ ಮಹಿಳೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ. 38 ವರ್ಷದ ಲಕ್ಷ್ಮಮ್ಮ (38) ಮೃತ ದುರ್ದೈವಿ. ರೇಣುಕಮ್ಮ ಮತ್ತು ರಚನಾ ಎಂಬುವರಿಗೆ ಗಾಯಗಳಾಗಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಮೇಶ್ ಎಂಬುವರ ಬೀದಿ ಬದಿ ಹೋಟೆಲ್ಗೆ ಬೆಂಕಿ ಬಿದ್ದಿತ್ತು. ಬೆಂಕಿ ಬಿದ್ದ ವಿಚಾರ ತಿಳಿಯುತ್ತಿದ್ದಂತೆ, ಸುತ್ತಮುತ್ತಲಿದ್ದ ಮಹಿಳಾ ಕಾರ್ಮಿಕರು ಬೀದಿ ಬದಿ ಹೋಟೆಲ್ನತ್ತ ಧಾವಿಸಿದ್ದಾರೆ. ಈ ವೇಳೆ ಹೋಟೆಲ್ನಲ್ಲಿದ್ದ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಪೋಟದಿಂದ ಸ್ಥಳದಲ್ಲಿದ್ದ ಮಹಿಳಾ ಕಾರ್ಮಿಕ ಲಕ್ಷ್ಮಮ್ಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಅದರಂತೆ ಕರ್ನಾಟಕದಲ್ಲಿ ಕಳೆದ 24 ಗಂಟೆಯಲ್ಲಿ 3336 ಜನರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಈ ಪೈಕಿ 89 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಬ್ಬ ಸೋಂಕಿತ ಮೃತಪಟ್ಟಿದ್ದು, 74 ಸೋಂಕಿತರು ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 16 ಮಂದಿಗೆ ಕೋವಿಡ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಬ್ಬ ಸೋಂಕಿತ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.66 ರಷ್ಟಿದೆ. ಒಟ್ಟು 497 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ತುಮಕೂರು, ಜನವರಿ 21: ರಾಜ್ಯ ಸರ್ಕಾರದಿಂದ ಕೊಬ್ಬರಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ನೀಡುವ ಕನಿಷ್ಠ ಬೆಂಬಲ ಬೆಲೆ 12000 ರೂ.ಗಳೊಂದಿಗೆ 1500 ರೂ. ಗಳನ್ನು ಹೆಚ್ಚುವರಿಯಾಗಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಸಿದ್ದಗಂಗಾ ಮಠ ಕ್ಯಾತ್ಸಂದ್ರ ಕಾರ್ಯಕ್ರಮ ಮುಗಿದ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು. ಒಟ್ಟು ನಮ್ಮ ಸರ್ಕಾರದಿಂದ ಕ್ವಿಂಟಾಲಿಗೆ 1500 ರೂ.ಗಳನ್ನು ಒದಗಿಸಲಾಗುವುದು. 3000 ರೂ.ಗಳಿಗೆ ಬೇಡಿಕೆ ಇದ್ದರೂ ಸರ್ಕಾರದ ತನ್ನ ಶಕ್ತ್ಯಾನುಸಾರ ಬೆಂಬಲ ಬೆಲೆ ನೀಡುತ್ತಿದ್ದು, ಎಂ.ಎಸ್.ಪಿ ದರ ನಿಗದಿ ಮಾಡುವುದು ಕೇಂದ್ರ ಸರ್ಕಾರ ಎಂದರು. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತ ರಾಜ್ಯ ಸರ್ಕಾರ ಕೊಬ್ಬರಿ ಬೆಳೆಗಾರರಿಗೆ 1500 ಹೆಚ್ಚಾಗಿ ನೀಡಲಿದೆ ಎಂದರು. ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ರಜೆ ಇಲ್ಲ;- ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ನಾಳೆ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಚಾರ ಮಾಡಲಾಗುವುದು:- ಹಿಂದಿನ ಸರ್ಕಾರ ಜನವರಿ 21 ನ್ನು ದಾಸೋಹ ದಿನ ಎಂದು ಆಚರಿಸಲು ಘೋಷಣೆ ಮಾಡಿದ್ದರ…
ಬೆಂಗಳೂರು:- ರಸ್ತೆ ಅಪಘಾತದಲ್ಲಿ ರಾಜ್ಯ ಮಟ್ಟದ ಫುಟ್ ಬಾಲ್ ಆಟಗಾರ ಸಾವನ್ನಪ್ಪಿದ ಘಟನೆ ಕೆ ಆರ್ ಪುರಂ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. 27 ವರ್ಷದ ಮೊನೀಶ್ ಕೆ ಸಾವನ್ನಪ್ಪಿದ ಆಟಗಾರ. ನಿನ್ನೆ ರಾತ್ರಿ 2 ಗಂಟೆ ಸುಮಾರಿಗೆ ಮೊನೀಶ್ ಬೈಕ್ ನಲ್ಲಿ ಹೋಗ್ತಿದ್ದ. ಈ ವೇಳೆ ಆತನ ಬೈಕ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೊನೀಶ್ ತೀವ್ರ ಗಾಯಗೊಂಡಿದ್ದ. ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೊನೀಶ್ ಸಾವನ್ನಪ್ಪಿದ್ದಾನೆ. ಪರಿಕ್ರಮ ಎಫ್ ಸಿ, ಡೆಕ್ಕನ್ ಎಫ್ ಸಿ, ಯಂಗ್ ಚಾಲೆಂಜರ್ಸ್ ಸೇರಿ ವಿವಿಧ ಕ್ಲಬ್ ಗಳ ಪರ ಮೊನೀಶ್ ಆಡಿದ್ದ. ಸದ್ಯ ಬೆಂಗಳೂರು ಈಗಲ್ಸ್ ಎಫ್ ಸಿ ಪರ ಆಡ್ತಿದ್ದ. ಮಂಗಳವಾರ ಟೂರ್ನಿಯೊಂದರಲ್ಲಿ ಭಾಗಿಯಾಗಬೇಕಿತ್ತು. ಆದ್ರೆ ಮೊನೀಶ್ ನಿಧನದ ಹಿನ್ನೆಲೆ. ಪಂದ್ಯವನ್ನ ಬೆಂಗಳೂರು ಈಗಲ್ಸ್ ಎಫ್ ಸಿ ಮುಂದೂಡಿದೆ.
ನವದೆಹಲಿ:- ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ನಾಳೆ 50 ತಂಡಗಳಿಂದ ಮಂಗಳ ವಾದ್ಯ ಮೊಳಗಲಿದೆ. ರಾಮ ಮಂದಿರ ಲೋಕಾರ್ಪಣೆ ಹಿನ್ನೆಲೆ ಅಯೋಧ್ಯೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಬೆಳಿಗ್ಗೆ 10 ರಿಂದ ಮಂಗಳ ವಾದ್ಯ ಮೊಳಗಲಿದೆ. ಉತ್ತರ ಪ್ರದೇಶದ ಆದಿವಾಸಿ ಜನಾಂಗದವರ ಜಾನಪದ ವಾದ್ಯಮೇಳ, ಬುಡಕಟ್ಟು ಜನಾಂಗದವರು ಭಾರಿಸುವ ವಾದ್ಯ ಸೇರಿದಂತೆ ವಿವಿಧ ರಾಜ್ಯಗಳ 50ಕ್ಕೂ ಹೆಚ್ಚು ಮನಮೋಹಕ ಸಂಗೀತ ವಾದ್ಯ ತಂಡಗಳು ಭಾಗಿಯಾಗಲಿದ್ದು, ಸುಮಾರು ಎರಡು ಗಂಟೆಗಳ ಕಾಲ ಮಂಗಳ ವಾದ್ಯ ಮೊಳಗಲಿದೆ. ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯ ಬಳಿಕ ರಾಮ ಜ್ಯೋತಿ ಬೆಳಗುವ ಮೂಲಕ ದೀಪಾವಳಿ ಆಚರಣೆ ಮಾಡಲಾಗುತ್ತದೆ. ಸಂಜೆ 10 ಲಕ್ಷ ದೀಪಗಳಿಂದ ಅಯೋಧ್ಯೆ ಕಂಗೊಳಿಸಲಿದೆ. ಅಯೋಧ್ಯೆಯ ಮನೆಗಳು, ಅಂಗಡಿಗಳು ಮತ್ತು ಪೌರಾಣಿಕ ಸ್ಥಳಗಳಲ್ಲಿ ‘ರಾಮ ಜ್ಯೋತಿ’ ಬೆಳಗಿಸಲಾಗುತ್ತದೆ. ಮಣ್ಣಿನಿಂದ ಮಾಡಿದ ದೀಪಗಳಿಂದ ಅಯೋಧ್ಯೆಯು ಬೆಳಗಲಿದ್ದು, ಸರಯೂ ನದಿಯ ದಡದ ರಾಮ್ ಕಿ ಪಾಡಿಯಲ್ಲಿ ದೀಪ ಬೆಳಗಲಾಗುತ್ತದೆ. ಕನಕ್ ಭವನ, ಹನುಮಾನ್ ಗಡಿ,…
ಬೆಂಗಳೂರು:- ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಅವರು ಕುಟುಂಬ ಸಮೇತರಾಗಿ ಅಯೋಧ್ಯೆಗೆ ತೆರಳಿದ್ದಾರೆ. ದೇವೇಗೌಡರಿಗೆ ವಯಸ್ಸಾಗಿರುವ ಹಿನ್ನೆಲೆಯಲ್ಲಿ ಅವರು ಅಯೋಧ್ಯೆಗೆ ಹೋಗಬೇಕೋ ಬೇಡ್ವಾ ಎನ್ನುವ ಯೋಚನೆಯಲ್ಲಿದ್ದರು. ಆದರೂ ಸಹ ಅಯೋಧ್ಯೆಗೆ ಹೋಗಲು ಪ್ರಯತ್ನಿಸುತ್ತೇನೆ ಎಂದಿದ್ದರು. ಅದರಂತೆ ಇಂದು ತಮ್ಮ ಆರೋಗ್ಯವನ್ನು ಲೆಕ್ಕಿಸಿದೇ ಅಯೋಧ್ಯೆಗೆ ಹೊರಟ್ಟಿದ್ದಾರೆ. ಇನ್ನು ದೇವೇಗೌಡ್ರಿಗೆ ಪತ್ನಿ, ಪುತ್ರ ಹಾಗೂ ಮೊಮ್ಮಗ ಸಾಥ್ ನೀಡಿದ್ದಾರೆ. ಇಂದು ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಪ್ರೈವೆಟ್ ಜೆಟ್ನಲ್ಲಿ ದೇವೇಗೌಡ ಜೊತೆ ಪತ್ನಿ ಚನ್ನಮ್ಮ, ಪುತ್ರ ಎಚ್.ಡಿ. ಕುಮಾರಸ್ವಾಮಿ ಹಾಗೂ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಜೊತೆ ತೆರಳಿದರು.
ದಾವಣಗೆರೆ:- ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಗೊರೆ ನೀಡಲು ದಾವಣಗೆರೆಯಲ್ಲಿ ನಾಣ್ಯಗಳಲ್ಲಿ ಅಯೋಧ್ಯೆ ರಾಮ ಮಂದಿರ ಸಿದ್ಧಪಡಿಸಲಾಗಿದೆ. ಹರಿಹರ ನಗರದ ಆಕಾರ-ಆಧಾರ ಸಂಸ್ಥೆಯ ರಾಮು ಎಂ ಹಾಗೂ ಮಕ್ಕಳು ಸೇರಿಕೊಂಡು ಒಂದು, ಎರಡು, ಐದು, 10, 20 ರೂಪಾಯಿ ಮೌಲ್ಯದ ಒಟ್ಟು 12 ಸಾವಿರ ನಾಣ್ಯ ಬಳಸಿ ಶ್ರೀರಾಮ ಮಂದಿರ ನಿರ್ಮಾಣ ಮಾಡಿದ್ದಾರೆ. ಒಟ್ಟು 31,500 ರೂಪಾಯಿ ವೆಚ್ಚದಲ್ಲಿ 30 ದಿನಗಳಲ್ಲಿ ಈ ಮಂದಿರವನ್ನು ಸಿದ್ಧಪಡಿಸಲಾಗಿದೆ. ನಾಳೆ ರಾಮ ಮಂದಿರದ ಉದ್ಘಾಟನೆ ಹಿನ್ನೆಲೆ ನಾಣ್ಯಗಳಿಂದ ಸಿದ್ಧವಾದ ಮಂದಿರವನ್ನು ಹುಬ್ಬಳ್ಳಿಯಲ್ಲಿ ಪ್ರದರ್ಶನಕ್ಕಿಡಲಾಗುತ್ತಿದೆ.
ವಿಜಯನಗರ:- ಹರಪನಹಳ್ಳಿ ತಾಲೂಕಿನ ಒಡೆಯರಹಳ್ಳಿ ಗ್ರಾಮದಲ್ಲಿ ಬೀದಿ ದೀಪ ಸರಿಪಡಿಸಲು ಹೋಗಿ ವಿದ್ಯುತ್ ಪ್ರವಹಿಸಿ ವ್ಯಕ್ತಿ ಮೃತಪಟ್ಟಿರುವ ಘಟನೆ ಜರುಗಿದೆ. 37 ವರ್ಷದ ರೇಣುಕಪ್ಪ ಮೃತದುರ್ದೈವಿ ಎನ್ನಲಾಗಿದೆ. ಗ್ರಾಮ ಪಂಚಯಾತಿ ಸಿಬ್ಬಂದಿ ಸೂಚನೆ ಮೇರೆಗೆ ರೇಣುಕಪ್ಪ ವಿದ್ಯುತ್ ಕಂಬ ಹತ್ತಿ ದೀಪ ಸರಿಪಡಿಸುತ್ತಿದ್ದರು. ಈ ವೇಳೆ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ರೇಣುಕಪ್ಪ ಗ್ರಾಮದಲ್ಲಿ ವಿದ್ಯುತ್ ಪಂಪ್ ಸೆಟ್ ಹಾಗೂ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ರೇಣಕಪ್ಪ ಅವರಿಗೆ ಬೀದಿ ದೀಪ ಸರಿಪಡಿಸುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ