ಹುಬ್ಬಳ್ಳಿ : ಸೌದತ್ತಿ ಶ್ರೀ ರೇಣುಕಾ ಯಲ್ಲಮ್ಮ ಹಾಗೂ ಬದಾಮಿ ಶ್ರೀ ಬನಶಂಕರಿದೇವಿ ಜಾತ್ರೆಗೆ ಹೋಗಿ ಬರುವ ಭಕ್ತಾದಿಗಳ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಜನೆವರಿ 23 ರಿಂದ 30 ರ ವರೆಗೆ ಹುಬ್ಬಳ್ಳಿ ಹಾಗೂ ನವಲಗುಂದದಿಂದ ಜಾತ್ರಾ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಸೌದತ್ತಿ ಶ್ರೀ ರೇಣುಕಾ ಯಲ್ಲಮ್ಮದೇವಿ ಜಾತ್ರೆ ಹಾಗೂ ಬಾದಾಮಿ ಶ್ರೀ ಬನಶಂಕರಿ ದೇವಿ ಜಾತ್ರೆಗಳು ಜನವರಿ 23 ರಿಂದ 30 ರವರೆಗೆ ಜರುಗಲಿವೆ. ಈ ಜಾತ್ರೆಗಳಿಗೆ ಹೋಗಿ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡ ಮತ್ತು ಬನಶಂಕರಿಗೆ ಹಾಗೂ ನವಲಗುಂದದಿಂದ ಯಲ್ಲಮ್ಮನಗುಡ್ಡಕ್ಕೆ ಹೆಚ್ಚುವರಿ ಜಾತ್ರಾ ವಿಶೇಷ ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ಹುಬ್ಬಳ್ಳಿಯಿಂದ 25 ಹಾಗೂ ನವಲಗುಂದ ದಿಂದ 10 ಬಸ್ಸುಗಳು, 100ಕ್ಕೂ ಹೆಚ್ಚು ಚಾಲಕರು, ನಿರ್ವಾಹಕರು, ಮೇಲ್ವಿಚಾರಣೆಗಾಗಿ 10 ಅಧಿಕಾರಿಗಳು ಹಾಗೂ 20 ಮೇಲ್ವಿಚಾರಕ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರಯಾಣಿಕರ ಒತ್ತಡಕ್ಕೆ ತಕ್ಕಂತೆ ಬಸ್ಸುಗಳನ್ನು ಹೆಚ್ಚಿಸಲಾಗುತ್ತದೆ. ಎಂದು ಹುಬ್ಬಳ್ಳಿ ಗ್ರಾಮಾಂತರ…
Author: AIN Author
ಬೆಳಗಾವಿ:- ರಾಜ್ಯದಲ್ಲಿ ಸಿಲಿಂಡರ್ ಗ್ಯಾಸ್ ಸ್ಪೋಟವಾಗಿ ಅನಾಹುತಗಳು ನಡೆದು ಯಾವ ರೀತಿ ಜೀವ ಹಾನಿಗಳು ನಡೆಯುತ್ತಿವೆ ಎಂಬುದನ್ನು ನಾವೆಲ್ಲ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವುದನ್ನು ನೋಡುತ್ತಿದ್ದೇವೆ. ಅದರಂತೆ ಬೆಳಗಾವಿ ಜಿಲ್ಲೆಯ ಕಾಗವಾಡ ವ್ಯಾಪ್ತಿಯ ಸಂಬರಗಿ ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ನಂಬರ್ ೧ ರಲ್ಲಿ ಮತ್ತೆ ಗ್ಯಾಸ ಒಲೆ ಉರಿಯುತ್ತಿರುವಾಗಲೇ ದೊಡ್ಡ ಗಾತ್ರದ ಬೆಂಕಿ ಕಾಣಿಸಿಕೊಂಡು ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆದುಕೊಂಡು ಹೊರಗಡೆ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಈ ಹಿಂದೆಯು ಗ್ಯಾಸ್ ಸೋರಿಕೆಯಾಗಿ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ ಆದರೂ ಸಹ ಎಚ್ಚೆತ್ತುಕೊಳ್ಳದ ಅಂಗನವಾಡಿ ಸಿಬ್ಬಂದಿಗಳ ವಿರುದ್ಧ ಪೊಷಕರು ಆಕ್ರೋಶಗೊಂಡಿದ್ದಾರೆ, ಮಕ್ಕಳಿಗೆ ಸರಿಯಾದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲಿ ಮಾಯವಾಗಿದ್ದು, ಈ ರೀತಿ ಬೇಜವಾಬ್ದಾರಿ ತೋರಿ, ಏನಾದರೂ ಅವಘಡ ಸಂಭವಿಸಿದರೆ ನಮ್ಮ ಮಕ್ಕಳನ್ನು ಯಾರ ಜವಾಬ್ದಾರಿ ಮೇಲೆ ಶಾಲೆಗೆ ಕಳುಹಿಸಬೇಕು ಎಂದು ಪೋಷಕವರ್ಗದವರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟಾರೆ ಮೇಲಾಧಿಕಾರಿಗಳು ಗ್ಯಾಸ್ ಸಮಸ್ಯೆ ಪರಿಶೀಲಿಸಿ ಈ ರೀತಿಯ ಬೇಜವಾಬ್ದಾರಿ ಧೋರಣೆ ತೋರಿ…
ಬೆಂಗಳೂರು:- ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ರಾಮಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಕಾಂಗ್ರೆಸ್ ನಾಯಕರ ಹೇಳಿಕೆಗಳು, ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಘಟನೆ, ಇದೆಲ್ಲವನ್ನೂ ನೋಡಿದಾಗ ರಾಜ್ಯದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ ರಾಮಮಂದಿರ ಉದ್ಘಾಟನೆ ಸಮೀಪಿಸುತ್ತಿರುವಾಗ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲದಲ್ಲಿದೆ. ದೇಶದಲ್ಲಿ ರಾಮಜಪ ನಡೆಯುತ್ತಿದ್ದರೆ, ಕರ್ನಾಟಕದಲ್ಲಿ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಬಂಧನ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.
ದಾವಣಗೆರೆ:- ರಾಜಕಾರಣಿಗಳ ನೀಚ ರಾಜಕೀಯದ ನಡುವೆ ಅಯೋಧ್ಯೆಯ ಮಂತ್ರಾಕ್ಷತೆ ಸ್ವೀಕರಿಸಿ ಮುಸ್ಲಿಂರು ಹಾರೈಸಿದ್ದಾರೆ. ಸದ್ಯ, ದೇಶಾದ್ಯಂತ ಅಯೋಧ್ಯೆ ಮಂತ್ರಾಕ್ಷತೆ ಹಾಗೂ ರಾಮ ಮಂದಿರ ಪೋಟೋವನ್ನು ಕೂಡ ಹಿಂದೂ ಕಾರ್ಯಕರ್ತರು, ಮುಖಂಡರು, ಮನೆ ಮನೆಗೆ ತೆರಳಿ ನೀಡುತ್ತಿದ್ದಾರೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲೂ ನೀಡಲಾಗುತ್ತಿದ್ದು, ಮುಸ್ಲಿಂ ಸಮುದಾಯದವರೂ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಶುಭ ಹಾರೈಸಿ ಭಾವೈಕ್ಯತೆ ಸಾರಿದ್ದಾರೆ. ಹರಿಹರ ತಾಲ್ಲೂಕಿನ ಕಡರ ನಾಯಕನಹಳ್ಳಿಯಲ್ಲಿ ವಿಭಿನ್ನವಾಗಿ ಮಂತ್ರಾಕ್ಷತೆ ರಾಮ ಮಂದಿರ ಪೋಟೋ ಮನೆ ಮನೆಗೂ ನೀಡುತ್ತಿದ್ದು, ಅದರಲ್ಲೂ ಮಹಿಳೆಯರ ತಂಡ ಮಂತ್ರಾಕ್ಷತೆ ಪೋಟೋ ಜೊತೆ ಮಹಿಳೆಯರಿಗೆ ಬಳೆ ಅರಿಶಿಣ ಕುಂಕುಮ ಕೊಟ್ಟು ಶ್ರೀರಾಮ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಳ್ಳಲು ಆಭಿಯಾನ ನಡೆಸುತ್ತಿದ್ದಾರೆ. ಈ ಅಭಿಯಾನದಲ್ಲಿ ಮುಸ್ಲಿಮರು ಕೂಡ ಭಾಗಿಯಾಗಿದ್ದು, ಅವರು ಕೂಡ ಶ್ರೀರಾಮನ ಮಂತ್ರಾಕ್ಷತೆ ಪೋಟೋ ಪಡೆದು ಸಂಭ್ರಮದಲ್ಲಿ ಭಾಗವಹಿಸಿದರು. ನಾವು ಕೂಡ ರಾಮ ಭಕ್ತರೇ. ಎಲ್ಲಾ ದೇವರು ಒಂದೇ, ನಾವು ಕೂಡ ಭಾರತೀಯರು ಎನ್ನುವುದರ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ.
ಬೆಂಗಳೂರು:- ಜನವರಿ 23 ರಂದು 545 ಪಿಎಸ್ಐ ಮರು ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ. ಪಿಎಸ್ಐ ಮರು ಪರೀಕ್ಷೆ ಬೆಂಗಳೂರು ನಗರದಲ್ಲಿ ಮಾತ್ರ ನಡೆಯಲಿದ್ದು, ಒಟ್ಟು 117 ಕೇಂದ್ರಗಳಲ್ಲಿ ಸಿದ್ಧತೆಗಳನ್ನು ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಪರೀಕ್ಷೆ ಮುಗಿಯುವವರೆಗೆ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಹಾವೇರಿ: ತಾಕತ್ ಇದ್ರೆ ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಮಾಜಿ ಸಚಿವ ಆರ್ ಅಶೋಕ್ ಸವಾಲ್ ಹಾಕಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಮಧು ಬಂಗಾರಪ್ಪ ಇದೆ ಮೊದಲ ಬಾರಿಗೆ ಶಾಸಕರಾಗಿದ್ದಾರೋ ಏನೋ.. ನನಗೆ ಗೋತ್ತಿಲ್ಲಾ. ಅನಂತ್ ಕುಮಾರ್ ಹೆಗಡೆ ಐದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕಾರವಾರದ ಜನ ಅವರನ್ನು ಆಯ್ಕೆ ಮಾಡಿದ್ದಾರೆ. ಕಾರವಾರ ಜನರಿಗೆ ಅವಮಾನ ಆಗುವಂತ ಹೇಳಿಕೆ ಮಧು ಬಂಗಾರಪ್ಪ ನೀಡಿದ್ದಾರೆ ಎಂದರು. ಮಧು ಬಂಗಾರಪ್ಪ ಬಿಜೆಪಿಗೆ ಸೇರಿದ ನಂತರ ಟಿಕೆಟ್ ಹಂಚಿಕೆ ತಂಡದಲ್ಲಿದ್ದರೆ ಮಾತನಾಡಲಿ. ಸದ್ಯ ಅವರು ಕಾಂಗ್ರೆಸ್ನಲ್ಲಿದ್ದು, ಅವರ ಪಕ್ಷದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂದು ನೋಡಿಕೊಳ್ಳಲಿ. ಇತ್ತೀಚಿಗೆ, ಕಾಂಗ್ರೆಸ್ನಲ್ಲಿ 13 ಕ್ಷೇತ್ರದಲ್ಲಿ ಕಣಕ್ಕಿಳಿಯಲು ಸೂಕ್ತ ಅಭ್ಯರ್ಥಿಗಳೇ ಇಲ್ಲ ಎಂದು ವರದಿಯಾಗಿದೆ. ಇಂತಹ ಗತಿಯಿಲ್ಲದ ಕ್ಷೇತ್ರಗಳಿಗೆ ಟೀಕೆಟ್ ನೀಡಲಿ. ಆಮೇಲೆ ಬಿಜೆಪಿ ಬಗ್ಗೆ ಮಾತನಾಡಲಿ ಎಂದರು. ವೋಟ್ ಹಾಕಿ ಗೆಲ್ಲುಸುವುದು ಮತದಾರು. ಮಧು ಬಂಗಾರಪ್ಪ ಅಲ್ಲ. ತಿರ್ಮಾನ ತೆಗೆದುಕೊಳ್ಳವುದು ಪ್ರಜ್ಞಾವಂತ ಮತದಾರರು. ಏನು…
ಬೆಂಗಳೂರು:- ನಕಲಿ ಮೈಸೂರು ಸ್ಯಾಂಡಲ್ ಸೋಪು ತಯಾರಿಕೆ ದಂಧೆ ಬಗ್ಗೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದದಲ್ಲಿ ಕೆಎಸ್ಡಿಎಲ್ ಉತ್ಪನ್ನಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಕ್ರಮ ಆಗಿದೆ ಅಲ್ವಾ ಎಂದಿದ್ದಾರೆ. ಹೌದು ಆಗಿದೆ ಎಂದು ಕೈಗಾರಿಕೆ ಇಲಾಖೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಇನ್ಮುಂದೆ ಕ್ಯೂ ಆರ್ ಕೋಡ್ ಬಳಸಿ ಪ್ಯಾಕ್ ಮಾಡುತ್ತೇವೆ ಎಂದು ಸಚಿವರು ಹೇಳಿದ್ದಾರೆ. ಮೈಸೂರು ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ನಿಂದ ಕೆಲ ವಸ್ತುಗಳ ಬಿಡುಗಡೆಗೆ ಎಂಬಿಪಿ ಒತ್ತಾಯ ಮಾಡಿದ್ದರು. ಹೆಚ್ಚು ಮಾತನಾಡುವುದಿಲ್ಲ ಬಜೆಟ್ ಪೂರ್ವಭಾವಿ ಸಭೆ ನಡೆಯುತ್ತಿದೆ. ಜ.16ಕ್ಕೆ ಬಜೆಟ್ ಮಂಡಿಸಬೇಕು. ಇದಕ್ಕೆ ತಯಾರಿ ನಡೆಸುತ್ತಿದ್ದೇವೆ. 19 ವೈವಿಧ್ಯಮಯ ಉತ್ಪನ್ನಗಳನ್ನ ಬಿಡುಗಡೆ ಮಾಡಲಾಗಿದೆ. ಅತ್ಯಂತ ಸಂತೋಷದಿಂದ ಎಲ್ಲ ವಸ್ತುಗಳನ್ನು ಬಿಡುಗಡೆ ಮಾಡಿದ್ದೇನೆ. ಯಾವುದೇ ವಸ್ತು ಜನಪ್ರಿಯ ಆಗಬೇಕಂದರೆ ಮಾರುಕಟ್ಟೆ ಸಿಗಬೇಕು. ಒಳ್ಳೆಯ ಗುಣಮಟ್ಟ, ಗ್ರಾಹಕರ ಅಭಿರುಚಿಗೆ ಅನುಗುಣವಾಗಿ ಹೊಸ ಉತ್ಪನ್ನ ತಯಾರಿ ಮಾಡಬೇಕು ಆಗ ಬಿಕರಿ ಆಗುತ್ತೆ ಎಂದು ಹೇಳಿದ್ದಾರೆ. ನಮ್ಮ ಸರ್ಕಾರ…
ಬೆಂಗಳೂರು:- ನಾನು ಸಿಎಂ ಹೆಸರು ಹೇಳಿಲ್ಲ, ಕುಂಬಳಕಾಯಿ ಕಳ್ಳನಂತೆ ವರ್ತಿಸಬಾರದು ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ವಿಚಾರಣೆ ನಡೆಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಾಹಿತಿ ನೀಡಿರುವುದಾಗಿ ಪೊಲೀಸರು ಹೇಳುತ್ತಾರೆ, ಈ ವಿಚಾರಗಳೆಲ್ಲ ಗೃಹಸಚಿವರಿಗೆ ಗೊತ್ತಿದ್ದಂತಿಲ್ಲ ಎಂದು ಹೇಳಿದ ಬಿ.ಕೆ. ಹರಿಪ್ರಸಾದ್ ಅವರು, ಸಿಸಿಬಿ ವಿಚಾರಣೆ ವಿಚಾರದಲ್ಲಿ ನಾನು ಸಿದ್ದರಾಮಯ್ಯ ಅವರ ವಿರುದ್ಧ ಮಾತನಾಡಿಲ್ಲ. ಹೀಗಿರುವಾಗ ಕುಂಬಳಕಾಯಿ ಎಂದರೆ ಹೆಗಲು ಮುಟ್ಟಿಕೊಂಡರೆ ಹೇಗೆ? ಎಂದು ಪ್ರಶ್ನೆ ಮಾಡಿದ್ದಾರೆ. ಇನ್ನೂ ಸಿಸಿಬಿ ಪೊಲೀಸರ ವಿಚಾರಣೆ ಕುರಿತಾಗಿ, ರಾಜ್ಯಪಾಲರಿಗೆ ಬಿಜೆಪಿಯವರು ದೂರು ಕೊಟ್ಟಿದ್ದರು. ವಿಚಾರಣೆ ಮಾಡಿ ತಿಳಿಸಿ ಎಂದು ರಾಜ್ಯಪಾಲರು ಹೇಳಿರಬೇಕು. ಹಾಗಾಗಿ ಇಷ್ಟೊಂದು ಕ್ಷಿಪ್ರವಾಗಿ ಇದು ಬಂದಿದೆ. ದೂರು ಕೊಟ್ಟಿದ್ದರಲ್ಲಿ ತಪ್ಪಿಲ್ಲ, ರಾಜ್ಯಪಾಲರು ಕೇಳಿದ್ದರೆ ಅದರಲ್ಲೂ ತಪ್ಪಿಲ್ಲ. ನಿಜವಾಗಿ ಎಲ್ಲ ಪ್ರಕರಣಗಳು ಹೀಗೆ ಆದರೆ ಉತ್ತಮ. ನಮಗೆ ಮಾತ್ರ ಆದರೆ ಯಾಕೆ ಹೀಗೆ ಎಂದು ಪ್ರಶ್ನೆ ಮಾಡಬೇಕಾಗುತ್ತದೆ, ಉತ್ತರ ಹುಡುಕಬೇಕಾಗುತ್ತದೆ. ರಾಜ್ಯಪಾಲರು ಸಂವಿಧಾನದ ಒಂದು ಅಂಗ ಇದ್ದಂತೆ.…
ನವದೆಹಲಿ:- ರೈಲ್ವೆಯಲ್ಲಿ ಲಕ್ಷಾಂತರ ಹುದ್ದೆ ಖಾಲಿಯಿದ್ದರೂ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೈಲ್ವೆಯಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿಯಿದ್ದರೂ ಸೂಕ್ತವಾಗಿ ನೇಮಕಾತಿ ಮಾಡಿಕೊಳ್ಳದೇ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದರು. ರೈಲ್ವೆಯಲ್ಲಿ ಲಕ್ಷಗಟ್ಟಲೆ ಹುದ್ದೆಗಳು ಖಾಲಿಯಿದ್ದರೂ, ಯುವಕರು 5 ವರ್ಷ ಕಾಯ್ದರೂ ಈಗ ಕೇವಲ 5,696 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿರುವುದರಿಂದ ಸ್ಪರ್ಧಾತ್ಮಕ ಪರೀಕ್ಷಾ ವಿದ್ಯಾರ್ಥಿಗಳಿಗೆ ಭಾರಿ ಅನ್ಯಾಯವಾಗಿದೆ ಎಂದು ಟೀಕಿಸಿದ್ದಾರೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ನೀವು, ಯಾರಿಗೆ ಲಾಭ ಮಾಡಿ ಕೊಡಲು ರೈಲ್ವೆಯಲ್ಲಿ ಹುದ್ದೆಗಳ ಕಡಿತ ಮಾಡುತ್ತಿದ್ದೀರಿ. ರೈಲ್ವೆಯನ್ನು ಖಾಸಗೀಕರಣ ಮಾಡುವುದಿಲ್ಲ ಎಂಬ ನಿಮ್ಮ ಭರವಸೆ ಏನಾಯಿತು? ಎಂದು ಪ್ರಶ್ನಿಸಿದ್ದಾರೆ. ಇಷ್ಟು ವರ್ಷ ಕಾಯ್ದರೂ ಇಷ್ಟು ಕಡಿಮೆ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿರುವುದನ್ನು ನೋಡಿದರೆ ಮೋದಿಯವರ ಗ್ಯಾರಂಟಿ ಯುವಕರಿಗೆ ಎಚ್ಚರಿಕೆ ಕರೆಗಂಟೆಯಾಗಿದೆ ಎಂದು ಹೇಳಿ #NyayForYuva ಎಂಬ ಹ್ಯಾಶ್ ಟ್ಯಾಗ್ ಮೂಲಕ ಆಕ್ರೋಶ…
ಕಾರವಾರ:- ಪ್ರಜಾಪ್ರಭುತ್ವ ವ್ಯವಸ್ಥೆ ವಿರೋಧಿಸುವವರನ್ನು ಮತದಾರರು ಸೋಲಿಸಲಿ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಧರ್ಮದ ಹೆಸರಲ್ಲಿ ದ್ವೇಷ ಬಿತ್ತುವವರನ್ನು ಮತದಾರರು ಸೋಲಿಸಬೇಕು ಎಂದರು. ಸಂವಿಧಾನ ಬದಲಿಸುವ ಮಾತುಗಳನ್ನಾಡುವ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ವಿರೋಧಿಸುವ ಸಂಸದ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನೀಡಬೇಕು. ದಕ್ಷಿಣ ಕನ್ನಡದಲ್ಲಿ ನಳೀನ್ ಕುಮಾರ್ ಗೆ ಸಹ ಬಿಜೆಪಿ ಟಿಕೆಟ್ ಕೊಡಬೇಕು. ಆಗ ಅವರಿಗೆ ಮತದಾರರು ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಧರ್ಮ ಪ್ರೀತಿಸುವ ಜನರು ಕರಾವಳಿ ಭಾಗದಲ್ಲಿ ಹೆಚ್ಚಿದ್ದಾರೆ. ಅವರ ಭಾವನೆಗಳೊಂದಿಗೆ ಚೆಲ್ಲಾಟವಾಡಿ ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಕೆಟ್ಟ ಗುಣ. ಹಿಂದಿನಂತೆ ಕೋಮು ಧ್ರುವೀಕರಣದ ಚಟುವಟಿಕೆಗೆ ಈ ಬಾರಿ ಅವಕಾಶ ಸಿಗದು ಎಂದು ಹೇಳಿದರು. ನಾಲ್ಕು ವರ್ಷ ಜನರಿಂದ ದೂರವಿದ್ದು ಚುನಾವಣೆ ಸಮೀಪಿಸಿದಾಗ ಸಮಾಜದ ಸಾಮರಸ್ಯ ಕದಡುವ ಮಾತುಗಳನ್ನಾಡವವರನ್ನು ಮತದಾರರು ದೂರ ಇಡಬೇಕು ಎಂದು ಸಂಸದ ಅನಂತಕುಮಾರ…