ಬೆಂಗಳೂರು: ನಮ್ಮ ಮೆಟ್ರೋದಲ್ಲಿ (Namma Metro) ಯುವತಿಗೆ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು (Bengaluru) ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಜನವರಿ 1 ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯುವಕನೋರ್ವ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮೆಟ್ರೋದಿಂದ ಇಳಿಯುತ್ತಿದ್ದಂತೆ ಯುವತಿ (Bengaluru Woman), ಯುವಕನಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾಳೆ. https://ainlivenews.com/tragedy-while-making-the-birthday-cutout-actor-yash-is-going-to-visit-the-deceaseds-house/ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾಳೆ. ಬಳಿಕ ನೀನು ಇಲ್ಲಿಂದ ಹೋಗೋಹಾಗಿಲ್ಲ, ನಿನಗೆ ಶಿಕ್ಷೆ ಆಗಲೇಬೇಕು, ಮಾತನಾಡದಿದ್ರೆ ನಮಗೆ ನ್ಯಾಯ ಸಿಗಲ್ಲ ಎಂದು ಪಟ್ಟು ಹಿಡಿದು ಕ್ರಮಕ್ಕೆ ಒತ್ತಾಯಿಸಿದ್ದಾಳೆ. ಬಳಿಕ ವಿಚಾರಣೆ ನಡೆಸಿ ಮೆಟ್ರೊ ಅಧಿಕಾರಿಗಳು ಯುವಕನನ್ನ ಉಪ್ಪಾರ ಪೇಟೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಯುವಕ ತಪ್ಪೊಪ್ಪಿಕೊಂಡ ಬಳಿಕ ಇನ್ನೊಮ್ಮೆ ಹೀಗೆ ಮಾಡದಂತೆ ಕ್ಷಮೆ ಕೇಳಿಸಿ ಕಳುಹಿಸಿದ್ದಾರೆ. ಘಟನೆ ನಡೆದ ಒಂದು ವಾರದ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೃತ್ಯ ಎಸಗಿದ್ದ ಯುವಕ…
Author: AIN Author
ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ. ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಿರಡಿಯ ಶ್ರೀ ಸಾಯಿಬಾಬಾ ಮಂದಿರಕ್ಕೆ (Shri Sai Baba Mandir) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. https://ainlivenews.com/expired-party-in-jet-log-notice-issued-to-8-people-including-actor-darshan/ ಮಹಾರಾಷ್ಟ್ರ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಚ್.ಕೆ ಪಾಟೀಲ್, ಮಹಾರಾಷ್ಟ್ರ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್ ಚನ್ನಿತಾಲ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರೊಂದಿಗೆ ತೆರಳಿದ್ದ ಸಿಎಂ ವಿಶೇಷ ಪೂಜೆ ಸಲ್ಲಿಸಿ ಭಕ್ತಿ ಭಾವದಿಂದ ಪ್ರಾರ್ಥಿಸಿದ್ದಾರೆ. ನಂತರ ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ‍್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಧಾರವಾಡ: ಧಾರವಾಡದ ಸಿಬಿಟಿ ನವೀಕರಣ ಕಾರ್ಯಕ್ರಮಕ್ಕೆಂದು ಬಂದಿದ್ದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಸಿಬಿಟಿ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅಲ್ಲಿಂದ ಬಿಆರ್‌ಟಿಎಸ್ ಬಸ್‌ನಲ್ಲಿ ಹುಬ್ಬಳ್ಳಿಯತ್ತ ತೆರಳಿದರು. ಕಾರ್ಯಕ್ರಮ ಮುಗಿಸಿಕೊಂಡು ತಮ್ಮ ವಾಹನದಲ್ಲಿ ಅವರು ಹುಬ್ಬಳ್ಳಿಗೆ ಹೋಗಬೇಕಿತ್ತು. ಆದರೆ, ಸಚಿವ ರಾಮಲಿಂಗಾರೆಡ್ಡಿ ಅವರು ಬಿಆರ್‌ಟಿಎಸ್ ಬಸ್ ಹತ್ತಿ ಅದರ ಮೂಲಕ ಹುಬ್ಬಳ್ಳಿಯತ್ತ ತೆರಳಿದರು. ರಾಮಲಿಂಗಾರೆಡ್ಡಿ ಅವರ ಜೊತೆ ಸಚಿವ ಸಂತೋಷ ಲಾಡ್, ಶಾಸಕ ಎನ್.ಎಚ್.ಕೋನರಡ್ಡಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಕೂಡ ಅದೇ ಬಸ್‌ನಲ್ಲಿ ತೆರಳಿದರು.
ಬೆಂಗಳೂರು: ಜೆಟ್ ಲಾಗ್ ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ಒಟ್ಟು 8 ಮಂದಿಗೆ ನೋಟೀಸ್ ಕೊಟ್ಟ ಸುಬ್ರಮಣ್ಯನಗರ ಪೊಲೀಸರು https://ainlivenews.com/another-trouble-for-actor-darshan-who-was-in-katera-success-notice-from-police/ ನಟ ದರ್ಶನ್ , ನಿರ್ಮಾಪಕ ರಾಕ್ ಲೈನ್ ವೆಂಕಟೇ ಶ್ , ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ, ನಟ ನೀನಾಸಂ ಸತೀಶ್, ಡಾಲಿ ಧನಂಜಯ್, ಅಭಿಶೇಕ್ ಅಂಬರೀಷ್ ಹಾಗೂ ಚಿಕ್ಕಣ್ಣ ಗೆ ನೋಟೀಸ್ ಈ ನೋಟೀಸ್ ತಲುಪಿದ ಕೂಡಲೇ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದು ಸುಬ್ರಮಣ್ಯಪುರ ಠಾಣೆಗೆ ಹಾಜರಾಗುವಂತೆ ನೋಟೀಸ್ ಕಳುಹಿಸಲಾಗಿದೆ. ಸದ್ಯ ನೋಟೀಸ್ ಗೆ ಇದುವರೆಗೂ ಯಾವುದೇ ಉತ್ತರ ಬಂದಿಲ್ಲಆದರೆ ನೋಟೀಸ್ ಕೊಟ್ಟಿರುವ ಬಹುತೇಕರು ದುಬೈನಲ್ಲಿರುವ ಕುರಿತು ಮಾಹಿತಿ ಒದಗಿ ಬಂದಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿ ಎಂ ಟಿ ಸಿ ಗೆ ಮತ್ತೊಂದು ಜೀವ ಬಲಿಯಾಗಿರುವ ಘಟನೆ ಉತ್ತರಹಳ್ಳಿ ರಸ್ತೆಯ ಮಂತ್ರಿ ಆಲ್ಫೈನ್ ಅಪಾರ್ಟ್ಮೆಂಟ್ ಎಂಟ್ರಿ ಗೇಟ್ ಮುಂದೆ ನಡೆದಿದೆ. ಮೈಸೂರು ರಸ್ತೆ ಕಡೆಯಿಂದ ಉತ್ತರಹಳ್ಳಿ ಕಡೆಗೆ ಬರುತ್ತಿದ್ದ ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಪಲ್ಸರ್ ಬೈಕ್ ಗೆ ಡಿಕ್ಕಿ ಹೊಡೆದಿದೆ. https://ainlivenews.com/tragedy-while-making-the-birthday-cutout-actor-yash-is-going-to-visit-the-deceaseds-house/ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಬಿಎಂಟಿಸಿ ಬಸ್ 22 ವರ್ಷದ ತೇಜಸ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಸ್ ಚಾಲಕನ್ನು ವಶಕ್ಕೆ ಪಡೆಯಲಾಗಿದೆ.
ಗದಗ: ನಟ್ ಯಶ್ ಬರ್ಥಡೇ ಸಂಭ್ರಮಾಚರಣೆಗಾಗಿ ಕಟೌಟ್ ಕಟ್ಟುವ ಸಂದರ್ಭದಲ್ಲಿ ಕರೆಂಟ್ ತಗುಲಿ ಮೂವರು ಯುವಕರು ದಾರುಣ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದ್ದು ರಾಜ್ಯದ ಜನ್ರನ್ನ ಮಮ್ಮಲ ಮರಗುವಂತೆ ಮಾಡಿದೆ. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ಇದೇ ಪ್ರಕರಣದಲ್ಲಿ ಕರೆಂಟ್ ತಾಕಿ ಗಾಯಗೊಂಡ ಇನ್ನೂ ಇರ್ವರನ್ನ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸ ಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗ್ತಾಯಿದೆ. ಆ ಗಾಯಾಳುಗಳು ನಟ ಯಶ್ ಸೂರಣಗಿ ಗ್ರಾಮಕ್ಕೆ ಬರಬೇಕು ನಮ್ಮ ಸ್ನೇಹಿತರ ಕುಟುಂಬಕ್ಕೆ ಸಾಂತ್ವಾನ ಹೇಳ್ಬೇಕು ಅಂತಾ ಒತ್ತಾಯಿಸ್ತಿದ್ದಾರೆ.
ಮುಂಬೈ: ಬದುಕಿನ ಎಲ್ಲ ಭರವಸೆಯನ್ನೂ ಕಳೆದುಕೊಂಡಿದ್ದೇನೆ. ಹೀಗಾಗಿ ನಾನು ಈಗಿರುವ ಸ್ಥಿತಿಯಲ್ಲಿ ಬದುಕುವುದಕ್ಕಿಂತ ಜೈಲಿನಲ್ಲಿ ಸಾಯುವುದೇ ಉತ್ತಮ ಎಂದು ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ (Jet Airways Founder Naresh Goyal) ಹೇಳಿದ್ದಾರೆ. ಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ವಂಚನೆ ಮಾಡಿದ ಆರೋಪದ ಮೇಲೆ ಆರೋಪಿಯಾಗಿರುವ ಅವರು ಶನಿವಾರ ವಿಶೇಷ ನ್ಯಾಯಾಲದಯಲ್ಲಿ (Special Court) ಈ ಮಾತನ್ನು ಹೇಳಿದರು. ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಕಳೆದ ವರ್ಷ ಸೆಪ್ಟೆಂಬರ್ 1 ರಂದು ಗೋಯಲ್ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ಇಲ್ಲಿನ ಆರ್ಥರ್ ರೋಡ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. https://ainlivenews.com/there-is-no-better-savings-than-this-save-50-rupees-a-day-and-make-30-lakhs-yours/ ವಿಶೇಷ ನ್ಯಾಯಾಧೀಶ ಎಂ.ಜಿ.ದೇಶಪಾಂಡೆ ಅವರ ಮುಂದೆ ಗೋಯಲ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆಗಾಗಿ ಗೋಯಲ್ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಗೋಯಲ್ ಅವರು ಕೆಲವು ನಿಮಿಷಗಳ ವೈಯಕ್ತಿಕ ವಿಚಾರಣೆಗೆ ಮನವಿ ಮಾಡಿದ್ದು, ಇದಕ್ಕೆ ನ್ಯಾಯಾಧೀಶರು ಅನುಮತಿ ನೀಡಿದರು.
ಬೆಂಗಳೂರು: ಚಲನಚಿತ್ರ ನಟ ಯಶ್ (Yash) ಹುಟ್ಟುಹಬ್ಬಕ್ಕೆ ಬೃಹತ್ ಗಾತ್ರದ ಕಟೌಟ್ ಕಟ್ಟಲು ಹೋಗಿ ವಿದ್ಯುತ್ ಸ್ಪರ್ಶದಿಂದ ಮೂವರು ಯುವಕರು ಮೃತರಾಗಿದ್ದು ಯುವಕರ ಮನೆಗೆ ತೆರಳಿಲಿರುವ ನಟ ಯಶ್. ಮೃತರ ಕುಟುಂಬಕ್ಕೆ ಸಾಂತ್ವಾನ ಹೇಳಲಿರುವ ರಾಕಿ ಭಾಯ್. ಗದಗಿನ ಲಕ್ಷಮೇಶ್ವರದ (Laxmeshwar) ಸೂರಣಗಿ ಗ್ರಾಮದಲ್ಲಿ ದುರಂತ ನಡೆದಿದ್ದು. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು ಮುಂದಾಗಿದ್ದಾರೆ. ರಾತ್ರಿ ಸಮಯ ಆಗಿದ್ದರಿಂದ ವಿದ್ಯುತ್ ತಂತಿ ಯುವಕರ ಗಮನಕ್ಕೆ ಬಂದಿಲ್ಲ. ಇದರಿಂದ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಸೂತಕದ ಛಾಯೆ ಮನೆ ಮಾಡಿದೆ. ಇನ್ನೂ . ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಗೆ ಶಾಸಕ ಚಂದ್ರು ಲಮಾಣಿ ಭೇಟಿ ನೀಡಿ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಮಧ್ಯರಾತ್ರಿ ವೇಳೆ, ಹತ್ತಾರು ಜನ ಯುವಕರು ಸೇರಿಕೊಂಡು ತಮ್ಮ ನೆಚ್ಚಿನ ನಟನ ಕಟೌಟ್ ಕಟ್ಟಲು…
ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ (Janhvi Kapoor) ಆಡಿದ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಕಾಫಿ ವಿತ್ ಕರಣ್ (Koffee With Karan) ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಜಾಹ್ನವಿ, ನಿರೂಪಕ ಕರಣ್ ಜೋಹಾರ್ (Karan Johar) ಕೇಳಿದ ಪ್ರಶ್ನೆಗೆ ಅಷ್ಟೇ ಬೋಲ್ಡ್ ಆಗಿ ಉತ್ತರಿಸಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಬೋಲ್ಡ್ ಪ್ರಶ್ನೆಗಳನ್ನು ಕೇಳುವುದರಲ್ಲಿ ಕರಣ್ ಜೋಹಾರ್ ಎತ್ತಿದ ಕೈ. ಅದರಲ್ಲೂ ಕಾಂಟ್ರವರ್ಸಿ ಎನ್ನುವಂತಹ ಪ್ರಶ್ನೆಗಳನ್ನೂ ಅವರು ಕೇಳುತ್ತಾರೆ. ಹೆಚ್ಚಾಗಿ ಅವರ ಮಾತುಗಳು ಸೆಕ್ಸ್, ಅಫೇರ್, ಬ್ರೇಕ್ ಅಪ್, ಡೇಟಿಂಗ್ ಇದರ ಸುತ್ತಲೇ ಗಿರಕಿ ಹೊಡೆಯುತ್ತವೆ. ಅದರಲ್ಲೂ ಸೆಕ್ಸ್ ಬಗ್ಗೆ ಕೇಳದೇ ಯಾವ ಎಪಿಸೋಡ್ ಅನ್ನು ಅವರು ಮುಗಿಸೋದಿಲ್ಲ. ಜಾಹ್ನವಿ ಎಪಿಸೋಡ್ ನಲ್ಲಿ ಅವರು ಬೇರೆ ರೀತಿಯಲ್ಲಿ ಕೇಳಿ ಅಚ್ಚರಿ ಮೂಡಿಸಿದ್ದಾರೆ. ಜಾಹ್ನವಿ ಕಪೂರ್ ಅವರ ಸಿನಿಮಾ ಕೆರಿಯರ್, ಶೂಟಿಂಗ್, ಫ್ರೆಂಡ್ಸ್ ಹೀಗೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಾ ಹೋಗುವ ಕರಣ್ ಜೋಹಾರ್, ಕೊನೆಗೊಂದು ಪ್ರಶ್ನೆ…