ದಿಸ್ಪುರ್: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅಸ್ಸಾಂನ (Assam) ತೇಜ್‍ಪುರ್‌ನ ಐತಿಹಾಸಿಕ ಮಹಾಭೈರಬ್ ದೇವಾಲಯಕ್ಕೆ (Mahabhairab Temple) ಭೇಟಿ ನೀಡಿ ಅವರಣದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಈಶಾನ್ಯ ರಾಜ್ಯಗಳಾದ ಮೇಘಾಲಯ ಮತ್ತು ಅಸ್ಸಾಂಗೆ ಮೂರು ದಿನಗಳ ಪ್ರವಾಸದಲ್ಲಿರುವ ಅಮಿತ್ ಶಾ ಅವರು ಶಿಲ್ಲಾಂಗ್‍ನಿಂದ ಸಂಜೆ ಇಲ್ಲಿಗೆ ಆಗಮಿಸಿದರು. ಈ ವೇಳೆ ಅವರಿಗೆ `ಗಯಾನ್ ಮತ್ತು ಬಯಾನ್’ (ಡೋಲು ಮತ್ತು ಸಿಂಬಲ್‍ಗಳೊಂದಿಗೆ ಧಾರ್ಮಿಕ ನೃತ್ಯ ಪ್ರದರ್ಶನ) ಸಾಂಪ್ರದಾಯಿಕ ಸ್ವಾಗತವನ್ನು ನೀಡಲಾಯಿತು. ಬಳಿಕ ಅವರು ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ನಂತರ ದೇವಾಲಯದ ಆವರಣದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಅಮಿತ್ ಶಾ ಅವರು ದೇವಾಲಯದ ಅಂಗಳದಲ್ಲಿ ಬಕೆಟ್‍ನಿಂದ ನೀರು ಸುರಿದು ಬಳಿಕ ಒರೆಸಿ ಸ್ವಚ್ಛಗೊಳಿಸಿದ್ದಾರೆ. ಅವರೊಂದಿಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಹ ಭಾಗಿಯಾಗಿದ್ದರು. ಬಳಿಕ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ. ತೇಜ್‍ಪುರ ವಿಶ್ವವಿದ್ಯಾಲಯಕ್ಕೆ ದೇವಸ್ಥಾನದ ಆವರಣದಿಂದ ಹೊರಡುವ ಮೊದಲು ದೇವಾಲಯದ ಬಳಿ ಸೇರಿದ್ದ ಜನರಿಗೆ ಕೈ ಬೀಸಿ…
Author: AIN Author
ಇಸ್ಲಾಮಾಬಾದ್: 2023ರ ಏಕದಿನ ಏಷ್ಯಾಕಪ್ (ODI WorldCup) ಹಾಗೂ 2023ರ ಏಕದಿನ ವಿಶ್ವಕಪ್ ಟೂರ್ನಿಯ ಬಳಿಕವೂ ಪಾಕ್ ತಂಡದ ಕಳಪೆ ಪ್ರದರ್ಶನದಿಂದ ಬೇಸತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗೆ (PCB) ಅಧ್ಯಕ್ಷ ಝಾಕಾ ಅಶ್ರಫ್ (Zaka Ashraf) ರಾಜೀನಾಮೆ ನೀಡಿದ್ದಾರೆ. ಇದರಿಂದ ಪಾಕ್ ಕ್ರಿಕೆಟ್ ತಂಡಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಲಾಹೋರ್‌ನಲ್ಲಿ (Lahore) ನಡೆದ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅಶ್ರಫ್, ಇದೇ ಸಂದರ್ಭದಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ಅಧ್ಯಕ್ಷರಾಗಿ ನೇಮಕವಾದ ಝಾಕಾ ಅಶ್ರಫ್ ಸೇವೆ ಸ್ಮರಿಸಿ ಸಮಿತಿ ಸದಸ್ಯರು ಹಾಗೂ ಪೋಷಕ ಉಸ್ತುವಾರಿ ಪ್ರಧಾನ ಮಂತ್ರಿ ಅನ್ವರ್-ಉಲ್-ಹಕ್ ಕಾಕರ್ ಧನ್ಯವಾದ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜೀನಾಮೆಗೆ ಕಾರಣವನ್ನೂ ಬಹಿರಂಗಪಡಿಸಿದರು. ನಾನು ಕ್ರಿಕೆಟ್‌ನ ಸುಧಾರಣೆಗಾಗಿ ಕೆಲಸ ಮಾಡುತ್ತಿದ್ದೆ. ಆದ್ರೆ ಈ ರೀತಿ ಕೆಲಸ ಮಾಡಲು ನನಗೆ ಸಾಧ್ಯವಿಲ್ಲ. ಈಗ ಕ್ರಿಕೆಟ್ ಮಂಡಳಿ ಮುಖ್ಯಸ್ಥರನ್ನು ಆಯ್ಕೆ ಮಾಡುವ ವಿಚಾರ ಪ್ರಧಾನಿಗಳಿಗೆ ಬಿಟ್ಟದ್ದು, ಅವರು…
ಚೆನ್ನೈ: ತಮಿಳುನಾಡಿನ ಶ್ರೀರಂಗನಾಥ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು ರಾಮನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ. https://twitter.com/DDNewslive/status/1748595507365392801?t=hBaa1F7slRYGLjQ0i5Dnjg&s=19 ಶ್ರೀರಂಗನಾಥನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ತಿರುಚಿರಾಪಳ್ಳಿಯ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ರಾಮನಿಗೆ ಸಂಬಂಧಿಸಿದ ದೇವಸ್ಥಾನಗಳಿಗೆ ಭೇಟಿ ನೀಡ್ತಿರುವ ಮೋದಿ ದಕ್ಷಿಣ ಭಾರತದ ಪ್ರಮುಖ ಶ್ರೀರಾಮನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ವಾಷಿಂಗ್ಟನ್: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ರಾಮೋತ್ಸವ(Ayodhya Ram Mandir) ಆಚರಣೆಗೆ ಸಿದ್ಧತೆಗಳು ನಡೆದಿವೆ. ಅಮೆರಿಕ ಒಂದರಲ್ಲೇ 20ಕ್ಕೂ ಹೆಚ್ಚು ಕಡೆ ರಾಮೋತ್ಸವ ನಡೆಯಲಿದೆ. ಈಗಾಗಲೇ ವಾಷಿಂಗ್ಟನ್ (Washington) ಡಿಸಿ ಸೇರಿ ವಿವಿಧೆಡೆ ಕಾರ್ ರ್‍ಯಾಲಿಗಳನ್ನು ನಿರ್ವಹಿಸಲಾಗಿದೆ. ಜನವರಿ 22ರಂದು ನ್ಯೂಯಾರ್ಕ್‍ನ ಟೈಮ್ಸ್ ಸ್ಕ್ವೇರ್ ನಲ್ಲಿ ರಾಮೋತ್ಸವ ವೈಭವ ಕಂಡುಬರಲಿದೆ. ಫ್ರಾನ್ಸ್ ರಾಜಧಾನಿ ಪ್ಯಾರೀಸ್‍ನಲ್ಲಿ ರಾಮರಥ ಯಾತ್ರೆ ನಿರ್ವಹಿಸಲಾಗುತ್ತದೆ. ಐಫೆಲ್ ಟವರ್ ಬಳಿ ಸಾಂಸ್ಕೃತಿಕ ಕಾರ್ಯಕ್ರಮ, ಭಕ್ತಿಗೀತೆಗಳ ಗಾಯ, ಪ್ರಸಾದ ವಿತರಣೆಗೆ ತಯಾರಿ ನಡೆದಿವೆ. ಆಸ್ಟ್ರೇಲಿಯಾದ ಮೆಲ್ಬೋರ್ನ್, ಸಿಡ್ನಿಯಲ್ಲಿಯೂ ದೊಡ್ಡಮಟ್ಟದಲ್ಲೇ ಕಾರ್ಯಕ್ರಮ ನಿರ್ವಹಿಸಲು ಹಿಂದೂ ಸಮುದಾಯ ಸಜ್ಜಾಗಿದೆ. ಆಫ್ರಿಕಾದ ಕೀನ್ಯಾ, ಉಗಾಂಡ, ಟಾಂಜೇನಿಯಾ, ಘಾನ, ನೈಜೀರಿಯಾ, ಮೊಜಾಂಬಿಕ್ ಮತ್ತಿತರ ದೇಶಗಳಲ್ಲಿಯೂ ರಾಮೋತ್ಸವ ನಡೆಯಲಿದೆ. ಆದರೆ ಪಾಕಿಸ್ತಾನದ ಸೋಷಿಯಲ್ ಮೀಡಿಯಾಗಳಲ್ಲಿ ಮಾತ್ರ ರಾಮಮಂದಿರ ವಿರೋಧಿ ಪೋಸ್ಟ್ ಗಳು ಕಂಡುಬರುತ್ತಿವೆ ಇದೇ ಹೊತ್ತಲ್ಲಿ ಪಾಕ್ ಮಾಜಿ ಕ್ರಿಕೆಟಿಗ, ಹಿಂದೂ ಧರ್ಮೀಯ ದಾನೇಶ್ ಕನ್ಹೇರಿಯಾ ರಾಮ ಮಂದಿರ ಬೆಂಬಲಿಸಿ ಸರಣಿ ಟ್ವೀಟ್ ಮಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಎದೆ…
ಹಾಂಗ್ ಕಾಂಗ್: 11 ತಿಂಗಳ ಮಗುವಿಗೆ ತಾಯಿ ಹಾಲುಣಿಸುತ್ತಿದ್ದಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಚೀನಾದ ಹಾಂಗ್ ಕಾಂಗ್‌ನಲ್ಲಿ ನಡೆದಿದೆ. 25 ವರ್ಷದ ಮಹಿಳೆ ತನ್ನ 11 ತಿಂಗಳ ಮಗುವಿಗೆ ಮನೆಯಲ್ಲಿ ಹಾಲುಣಿಸುತ್ತಿದ್ದ ವೇಳೆ ಮಗು ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದೆ. ಇದರ ಪರಿಣಾಮ ತಾಯಿ ಗಾಬರಿಗೊಂಡು ಮಗುವಿನ ಬೆನ್ನನ್ನು ತಟ್ಟಿದ್ದಾಳೆ. ಆದರೆ ಮಗು ಯಾವುದೇ ಪ್ರತಿಕ್ರಿಯೆ ನೀಡದ ಪರಿಣಾಮ ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಮಗು ಕಳೆದ ಎರಡು ದಿನಗಳಿಂದ ಜ್ವರ ಮತ್ತು ಶೀತದಿಂದ ಅನಾರ‍್ಯೋಗ್ಯಕ್ಕೆ ತುತ್ತಾಗಿತ್ತು. ಪುಟ್ಟ ಮಗುವಿಗೆ ನುಂಗುವ ಅಭಿವೃದ್ಧಿವರ್ತನಗಳು ಸಂಪೂರ್ಣವಾಗಿ ಸಮನ್ವಯಗೊಂಡಿರಲಿಲ್ಲ. ಹಾಲು ಕುಡಿಯುವಾಗ ವೇಗವಾಗಿ ನುಂಗುವ ಸಾಮರ್ಥ್ಯ ಮಗುವಿಗೆ ಇರಲಿಲ್ಲ. ಇದರಿಂದ ಮಗು ಉಸಿರುಗಟ್ಟಿ ಸಾವನ್ನಪ್ಪಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಕೆಲದಿನಗಳಿಂದ ವಿಜಯ್ ದೇವರಕೊಂಡ (Vijay Devarakonda) ಮತ್ತು ರಶ್ಮಿಕಾ ಮಂದಣ್ಣ ಮತ್ತೆ ಸುದ್ದಿಯಾಗಿದ್ದಾರೆ. ಬರುವ ಫೆಬ್ರವರಿ ತಿಂಗಳಲ್ಲಿ ಇವರಿಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾರೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆದರೆ ಈ ಕುರಿತು ಇಬ್ಬರೂ ತುಟಿಬಿಚ್ಚಿರಲಿಲ್ಲ. ವಿಜಯ್ ದೇವರಕೊಂಡ ಮತ್ತು ರಶ್ಮಿಕಾ (Rashmika Mandanna) ಒಟ್ಟಿಗೆ ವಾಸಿಸುತ್ತಿದ್ದಾರೆ. ನಿಶ್ಚಿತಾರ್ಥವಾದ ಬಳಿಕ ತಮ್ಮ ಸಂಬಂಧವನ್ನು ಬಹಿರಂಗಪಡಿಲಿದ್ದಾರೆ ಎಂಬುದಾಗಿಯೂ ಸುದ್ದಿಯಾಗಿತ್ತು. ಆದರೆ ಇಬ್ಬರು ಹಲವಾರು ಬಾರಿ ಒಟ್ಟಿಗೆ ಕಾಣಿಸಿಕೊಂಡಿದ್ದರೂ, ತಮ್ಮ ಸಂಬಂಧದ ಬಗ್ಗೆ ಇನ್ನೂ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ. ಆದರೆ ಇದೀಗ ನಟ ವಿಜಯ್ ದೇವರಕೊಂಡ ಅವರೇ ಮೌನ ಮುರಿದಿದ್ದಾರೆ. ಇತ್ತೀಚೆಗೆ ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡುತ್ತಿದ್ದಾಗ ರಶ್ಮಿಕಾ ಮಂದಣ್ಣ ಅವರೊಂದಿಗಿನ ನಿಶ್ಚಿತಾರ್ಥದ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದರು. ನಾನು ಫೆಬ್ರವರಿಯಲ್ಲಿ ನಿಶ್ಚಿತಾರ್ಥ ಅಥವಾ ಮದುವೆಯಾಗುವುದಿಲ್ಲ. ಮೀಡಿಯಾದವರು ನನ್ನನ್ನು ಎರಡು ವರ್ಷಗಳಿಗೊಮ್ಮೆ ಮದುವೆಯಾಗಲು ಬಯಸುತ್ತಾರೆ ಎಂದನಿಸುತ್ತದೆ . ಪ್ರತಿ ವರ್ಷ ನಾನು ಈ ವದಂತಿಯನ್ನು ಕೇಳುತ್ತಲೇ ಬಂದಿದ್ದೇನೆ. ನನ್ನ ಮದುವೆಗೋಸ್ಕರ ಅವರು ಕಾಯುತ್ತಿದ್ದಾರೆ ಎಂದು ಹೇಳಿದ್ದಾರೆ
ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಂದಿಸಿದ ಆರೋಪದ ಹಿನ್ನೆಲೆ ನಮೋ ಬಿಗ್ರೇಡ್ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಾಗಿದೆ. ಕಲಬುರಗಿ ಕಮೀಷನರ್ ಆರ್.ಚೇತನ್ ಅವರಿಗೆ ಕಲಬುರಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ್ ದೂರು ನೀಡಿದ್ದಾರೆ. ಖರ್ಗೆ ಅವರನ್ನ ಚಕ್ರವರ್ತಿ ಸೂಲಿಬೆಲೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ರಾಯಚೂರಿನಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಖರ್ಗೆ ಬಗ್ಗೆ ಸೂಲಿಬೆಲೆ ಅವಹೇಳನಕಾರಿಯಾಗಿ ನಿಂದಿಸಿದ್ದರು. ಈ ಹಿನ್ನೆಲೆ ಕಲಬುರಗಿ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ದೂರು ದಾಖಲಿಸಿದ್ದಾರೆ.
ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ (Rishabh Shetty)ಅವರನ್ನೂ ಆಹ್ವಾನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತು ಅವರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ರಿಷಬ್ ಶೆಟ್ಟಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಅವಕಾಶಕ್ಕಾಗಿ ಧನ್ಯವಾದ ಎಂದು ಬರೆದುಕೊಂಡಿದ್ದಾರೆ. ರಿಷಬ್ ಶೆಟ್ಟಿ ಜೊತೆ ಕನ್ನಡದ ಇನ್ನೂ ಅನೇಕ ನಟರಿಗೂ ಆಹ್ವಾನ ನೀಡಲಾಗಿದೆ. ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil Kumar) ಅವರಿಗೆ ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಲಾಗಿದೆ. ಉದ್ಘಾಟನೆಗೆ ಕುಟುಂಬ ಸಮೇತ ಬರುವಂತೆ, ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಲಾಗಿದೆ. ಯಶ್ ಅವರಿಗೂ ಬರುವಂತೆ ಆಹ್ವಾನ ನೀಡಲಾಗಿದೆಯಂತೆ. ಕನ್ನಡ ಸಿನಿಮಾ ರಂಗದ ಬೆರಳೆಣಿಕೆಯ ಕಲಾವಿದರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ಒಂದು ಕಡೆ ಉದ್ಘಾಟನೆಗೆ ಆಹ್ವಾನ ಸಿಗುತ್ತಿದ್ದರೆ ಮತ್ತೊಂದು ಕಡೆ ಸಿನಿಮಾ ಸೆಲೆಬ್ರಿಟಿಗಳು ಕೂಡ ದೇಣಿಗೆ ನೀಡುತ್ತಿದ್ದಾರೆ. ಬಹುಭಾಷಾ ನಟಿ ಪ್ರಣೀತಾ ಸುಭಾಷ್(Pranitha Subhash), ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ.…
ಪಲ್ಲಕ್ಕಿ, ಗಣಪ, ಪಾರಿಜಾತದಂಥ ಅದ್ಭುತ ಚಿತ್ರಗಳನ್ನು ನೀಡಿದ ಪರಮೇಶ್ ಅವರೀಗ ಮತ್ತೊಂದು ಇನ್ ಟೆನ್ಸ್ ಲವ್ ಸ್ಟೋರಿಯನ್ನು ಪ್ರಣಯಂ ಚಿತ್ರದ ಮೂಲಕ ಪ್ರೇಕ್ಷಕರಿಗೆ ನೀಡಲಿದ್ದಾರೆ. ಮನಸ್ವಿ ವೆಂಚರ್ಸ್ ಹಾಗೂ ಪಿಟು ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಪರಮೇಶ್ ಅವರೇ ಕಥೆ ಬರೆದು ನಿರ್ಮಿಸಿರುವ ಈ ಚಿತ್ರಕ್ಕೆ ಎಸ್. ದತ್ತಾತ್ರೇಯ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಬಿಚ್ಚುಗತ್ತಿ ಖ್ಯಾತಿಯ ನಟ ರಾಜವರ್ಧನ್, ನೈನಾ ಗಂಗೂಲಿ ಚಿತ್ರದ ನಾಯಕ, ನಾಯಕಿಯಾಗಿ ಅಭಿನಯಿಸಿದ್ದಾರೆ. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಮಾಜಿ ಉಪ ಮೇಯರ್ ಮೋಹನ್ ರಾಜು ಟ್ರೈಲರ್ ರಿಲೀಸ್ ಮಾಡಿ ಈ ಟೈಟಲ್ ಕನ್ನಡದ ಜೊತೆ ತೆಲುಗು ಭಾಷೆಗೂ ಹತ್ತಿರವಾಗುವಂತಿದೆ. ಹಾಡು, ಕಾನ್ಸೆಪ್ಟ್ ಎರಡೂ ಚೆನ್ನಾಗಿದೆ ಎಂದು ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಚಿತ್ರದಲ್ಲಿ ಜಯಂತ್ ಕಾಯ್ಕಿಣಿ ಅವರು 3 ಹಾಡುಗಳನ್ನು ಬರೆದಿದ್ದು, ಮನೋಮೂರ್ತಿ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ವಿ.ನಾಗೇಶ್ ಆಚಾರ್ಯ ಅವರ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ ಕಾರ್ಯಕ್ರಮದಲ್ಲಿ ಮಾತನಾಡಿದ…
ಕರ್ನಾಟಕ ಸರ್ಕಾರದ ಹೆಮ್ಮೆಯ ಉತ್ಸವವಾದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bangalore Chirotsava) ಬೆಂಗಳೂರಿನಲ್ಲಿ ನಡೆಯಲಿದೆ. ಈ ಚಿತ್ರೋತ್ಸವದ ಲೋಗೋವನ್ನು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಅನಾವರಣ ಮಾಡಿದರು. ಉತ್ಸವದ ಉದ್ಘಾಟನಾ ಸಮಾರಂಭ 2024ರ ಫೆಬ್ರವರಿ 29 ರಂದು ವಿಧಾನಸೌಧದ ಮುಂಭಾಗ ನಡೆಯಲಿದ್ದು, ಮಾರ್ಚ್ 7ರಂದು ಸಮಾರೋಪ ಸಮಾರಂಭ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದೆ. 15 ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಈ ಬಾರಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಚಲನಚಿತ್ರ ಸಂಘಟನೆಗಳ ಅಂತಾರಾಷ್ಟ್ರೀಯ ಮಹಾ ಒಕ್ಕೂಟ (FIAPF) ಮಾನ್ಯತೆ ಪಡೆದ ಈ ಚಲನಚಿತ್ರೋತ್ಸವ, ರಾಷ್ಟ್ರೀಯ ಚಲನಚಿತ್ರ ಪ್ರತಿನಿಧಿಗಳು, ಚಲನಚಿತ್ರ ನಿರ್ಮಾಪಕರು, ಕಲಾವಿದರು, ನಿರ್ದೇಶಕರು, ತಂತ್ರಜ್ಞರು ಮತ್ತಿತರ ಗಣ್ಯರ ಸಮ್ಮುಖದಲ್ಲಿ ನಡೆಯಲಿದೆ. ಕರ್ನಾಟಕದ ಗೌರವಾನ್ವಿತ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸಮಾರೋಪ ಸಮಾರಂಭ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಏಷಿಯನ್, ಭಾರತೀಯ ಹಾಗೂ ಕನ್ನಡ ಚಲನಚಿತ್ರ…