ಕಲಬುರ್ಗಿ: ಹಾಲು ತರಲು ಹೋಗಿದ್ದ 5 ವರ್ಷದ ಬಾಲಕನ ಮೇಲೆ ಬೀದಿನಾಯಿಗಳು ದಾಳಿ ಮಾಡಿವೆ. ಕಲಬುರಗಿ ಜಿಲ್ಲೆಯ ಮಿಸ್ಬಾನಗರದಲ್ಲಿ ಘಟನೆ ನಡೆದಿದ್ದು, ರಶೀದ್ ಅಶ್ಫಕ್ ಎಂಬ ಬಾಲಕ ಮೇಲೆ ಬೀದಿನಾಯಿಗಳು ಎರಗಿದ್ವು. ಇನ್ನೂ ಗಾಯಗೊಂಡ ರಶೀದ್ ಅಶ್ಫಕ್ನನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗ್ತಿದೆ. \ ಕಳೆದ ವಾರದಿಂದ 2 ಘಟನೆ ನಡೆದರೂ ನಗರ ಪಾಲಿಕೆ ಅಧಿಕಾರಿಗಳು ಕ್ರಮಕೈಗೊಂಡಿಲ್ಲ. ಇದ್ರಿಂದ ಅಧಿಕಾರಿಗಳ ವಿರುದ್ಧ ಮಿಸ್ಬಾನಗರ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ರು.
Author: AIN Author
ಬೆಂಗಳೂರು:- ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಕಿಡಿಗೇಡಿಯೊಬ್ಬ ಹಿಂಬದಿಯಿಂದ ಯುವತಿಯ ಖಾಸಗಿ ಅಂಗವನ್ನ ಮುಟ್ಟಿ ಲೈಂಗಿಕ ಕಿರುಕುಳ ಕೊಟ್ಟಿದ್ದಾನೆ. ಈ ಘಟನೆ ಜನವರಿ 1 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕೂಡಲೇ ಯುವತಿ ಅಲ್ಲಿಯರುವ ಭದ್ರತಾ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಅಲರ್ಟ್ ಆದ ಭದ್ರತಾ ಸಿಬ್ಬಂದಿ ಲೈಂಗಿಕ ಕಿರುಕುಳ ಕೊಟ್ಟ ಆಸಾಮಿಯನ್ನ ಹಿಡಿದಿದ್ದು, ಈ ವೇಳೇ ಈ ಕಿಡಿಗೇಡಿ ಯುವತಿಯ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ನಮ್ಮ ಮೆಟ್ರೋದಲ್ಲಿ ಕೇವಲ 2 ತಿಂಗಳ ಅಂತರದಲ್ಲಿ ಈ ರೀತಿಯ ಮೂರು ಪ್ರಕರಣ ನಡೆದಿದೆ. ಹೀಗೆ ಪದೇ ಪದೇ ಈ ರೀತಿಯ ಪ್ರಕರಣ ನಡೆಯುತ್ತಿರೋದ್ರಿಂದ ಮೆಟ್ರೋ ಹೆಣ್ಣುಮಕ್ಕಳಿಗೆ ಎಷ್ಟು ಸುರಕ್ಷಿತ ಅನ್ನೋ ಆತಂಕಭರಿತ ಪ್ರಶ್ನೆ ಮೂಡಿದೆ. ಇನ್ನಾದ್ರೂ BMRCL ಅಧಿಕಾರಿಗಳು ಹೆಣ್ಣುಮಕ್ಕಳ ಸುರಕ್ಷತೆಗೆ ಹೆಚ್ಚು ಒತ್ತುಕೊಡುವ ಮೂಲಕ ಜನರಲ್ಲಿ ಆವರಿಸಿರುವ ಭಯವನ್ನ ಹೋಗಲಾಡಿಸಬೇಕಾಗಿದೆ.
ಮುಂಬೈ: ಬಿಜೆಪಿ ಶಾಸಕ ಸುನೀಲ್ ಕಾಂಬ್ಳೆ (Sunil Kamble) ಮಹಾರಾಷ್ಟ್ರದ (Maharastra) ಪುಣೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಕಪಾಳಮೋಕ್ಷ ಮಾಡುವ ಮೂಲಕ ಸುದ್ದಿಯಾಗಿದ್ದಾರೆ. ಪುಣೆಯ ಸಾಸೂನ್ ಆಸ್ಪತ್ರೆಯಲ್ಲಿ ತೃತೀಯಲಿಂಗಿ ಆರೈಕೆಗಾಗಿ ವಿಶೇಷ ವಾರ್ಡ್ ಅನ್ನು ಸಿದ್ಧಪಡಿಸಲಾಗಿದೆ. ಇದನ್ನು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಮತ್ತು ಪುಣೆ ಜಿಲ್ಲೆಯ ಉಸ್ತುವಾರಿ ಸಚಿವ ಅಜಿತ್ ಪವಾರ್ (Ajit Pawar) ಉದ್ಘಾಟಿಸಿದರು. ಕಾರ್ಯಕ್ರಮದ ಸ್ಥಳದಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಸುನೀಲ್ ಕಾಂಬ್ಳೆ ಅಸಮಾಧಾನ ವ್ಯಕ್ತಪಡಿಸಿದರು. https://twitter.com/pulse_pune/status/1743179898259423263?ref_src=twsrc%5Etfw%7Ctwcamp%5Etweetembed%7Ctwterm%5E1743179898259423263%7Ctwgr%5E1317e6e03dadf8e2e412d232daf7f9c0e04e0a99%7Ctwcon%5Es1_&ref_url=https%3A%2F%2Fpublictv.in%2Fvideo-bjp-mla-sunil-kamble-slaps-police-officer-during-dy-cm-ajit-pawars-event%2F ಇದಾದ ಬಳಿಕ ವೇದಿಕೆಯಿಂದ ಕೆಳಗಿಳಿಯುವಾಗ ಕಾಂಬ್ಳೆಯವರು ಎಡವಿ ಬಿದ್ದರು. ಇದೇ ಕೋಪದ ಕ್ಷಣದಲ್ಲಿ ಘಟನಾ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಆ ಸಮಯದಲ್ಲಿ ನಿಜವಾಗಿಯೂ ಏನಾಯಿತು ಎಂದು ಯಾರಿಗೂ ಅರ್ಥವಾಗಲಿಲ್ಲ. ಆದರೆ ಸದ್ಯ ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕಾರ್ಯಕ್ರಮದಲ್ಲಿ ಸಚಿವ ಹಸನ್ ಮುಶ್ರೀಫ್, ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಾಕಣಕರ, ಸಂಸದ ಸುನೀಲ ತಾಟಕರೆ, ಶಾಸಕ ಸುನೀಲ ಕಾಂಬಳೆ, ಶಾಸಕ ರವೀಂದ್ರ ಧಾಂಗೇಕರ, ಸಸೂನ್ ಆಸ್ಪತ್ರೆಯ…
ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಮೇಲಿನ ರೌಡಿಶೀಟರ್ ಕೇಸ್‌ಗೆ ಮುಕ್ತಿ ಕೊಟ್ಟಿದ್ದೇ ಕಾಂಗ್ರೆಸ್ (congress) ಸರ್ಕಾರ. ಈಗ ಕೋರ್ಟ್ ಆದೇಶ ಇದ್ದಿದ್ದರಿಂದ ಆತನನ್ನು ಬಂಧಿಸಲಾಗಿತ್ತು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಶ್ರೀಕಾಂತ್ ಪೂಜಾರಿ ಹೆಸರಿನಲ್ಲಿ ಬಿಜೆಪಿ (BJP) ರಾಜಕೀಯ ಮಾಡುತ್ತಿದೆ. ಶ್ರೀಕಾಂತ್ ಪೂಜಾರಿ ಹೆಸರಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ನಮಗೆ ಶ್ರೀಕಾಂತ್ ಪೂಜಾರಿ ಯಾgರು ಎನ್ನುವುದೇ ಗೊತ್ತಿಲ್ಲ. ಆತನಿಗಾಗಿ ಸುಮ್ಮನೆ ರಾಜ್ಯಾದ್ಯಂತ ಹೋರಾಟ ಮಾಡುತ್ತಿದ್ದಾರೆ. ಕೇಂದ್ರದಿಂದ ಬರುವ ಜಿಎಸ್‍ಟಿಯ (GST) ಬಂದಿಲ್ಲ, ಆ ಹಣಕ್ಕಾಗಿ ಹೋರಾಟ ಮಾಡಬೇಕು. ಮೋದಿ ಸರ್ಕಾರದಿಂದ ನಮಗೆ ಅನ್ಯಾಯ ಆಗಿದೆ ಎಂದು ಅವರು ಕುಟುಕಿದ್ದಾರೆ. https://ainlivenews.com/elon-musk-offered-1-billion-dollars-to-change-the-name-on-wikipedia/ ರಾಮಮಂದಿರ ಉದ್ಘಾಟನೆ ಆಗುತ್ತಿರುವುದು ಸಂತೋಷದ ವಿಚಾರವಾಗಿದೆ. ಪ್ರತಿ ಗ್ರಾಮದಲ್ಲೂ ರಾಮ ಮಂದಿರ ಇವೆ, ಹಿಂದುತ್ವ ಒಬ್ಬರ ಆಸ್ತಿ ಅಲ್ಲ. ಹಿಂದುತ್ವಕ್ಕೆ ಅನೇಕ ಇತಿಹಾಸ ಇದೆ. ಹಿಂದುತ್ವ ಯಾವ ಪಕ್ಷದ ಆಸ್ತಿಯೂ ಅಲ್ಲ ಎಂದಿದ್ದಾರೆ.ಕೋವಿಡ್ ವಿಚಾರವಾಗಿ, ಬೇರೆ ರಾಜ್ಯಗಳಿಗೆ ಹೋಲಿಸಿದರೆ…
ಬೆಂಗಳೂರು:- ರಾಜ್ಯದ ದಕ್ಷಿಣ ಒಳನಾಡು, ಕರಾವಳಿಯಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ರಾಜ್ಯದ ಹಲವು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಬೆಳಗಿನ ಜಾವ ದಟ್ಟ ಮಂಜು ಕವಿದಿರಲಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇದೆ. ಎಚ್ಎಎಲ್ನಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರಿನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರು:- ರಾಜ್ಯ ಸರ್ಕಾರ ಬರಗಾಲದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ 2000 ರೂಪಾಯಿ ನೀಡಲು ನಿರ್ಧರಿಸಿದೆ. ಸರ್ಕಾರ ಶನಿವಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ 105 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇಂದು ರೈತರ ಖಾತೆಗಳಿಗೆ ಹಣ ಜಮಾವಣೆಯಾಗಲಿದೆ. ಎಂದು ಕಂದಾಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ವರ್ಷದ ಭೀಕರ ಬರಗಾಲದಿಂದ ರಾಜ್ಯದ ರೈತರು 30 ಸಾವಿರ ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದಾರೆ. ಬರದಿಂದಾಗಿ 42 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬೆಳೆದ ಬೆಳೆ ನಷ್ಟವಾಗಿದೆ ಮತ್ತು ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರ ಪೀಡಿತ ಪ್ರದೇಶಗಳೆಂದು ಅಧಿಕೃತವಾಗಿ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಕಳೆದ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಕೃಷ್ಣ ಬೈರೇಗೌಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬರಗಾಲದಿಂದ ರಾಜ್ಯ ತತ್ತರಿಸಿದೆ. ಹೀಗಾಗಿ 18,177 ಕೋಟಿ ರೂ. ಬಿಡುಗಡೆ ಮಾಡುವಂತೆ…
ನಮ್ಮ ದೈನಂದಿನ ಬಹುತೇಕ ಚಟುವಟಿಕೆಗಳಿಗೆ ಸ್ಮಾರ್ಟ್ ಫೋನ್ ನೆರವಾಗುತ್ತದೆ. ಹೀಗೆ ನಿರಂತರ ಸ್ಮಾರ್ಟ್ ಫೋನ್ ಬಳಕೆ ಸಹಜವಾಗಿಯೇ ಬ್ಯಾಟರಿಯನ್ನು ಖಾಲಿ ಮಾಡುತ್ತದೆ. ಹೀಗಾಗಿ, ಆಗಾಗ ಬ್ಯಾಟರಿ ಚಾರ್ಜ್ ಕೂಡಾ ಮಾಡುತ್ತಲೇ ಇರಬೇಕಾಗುತ್ತದೆ. ಆದರೆ, ನಮ್ಮ ಆಂಡ್ರಾಯ್ಡ್ ಫೋನ್ನ ಬ್ಯಾಟರಿ ಅವಧಿಯನ್ನು ವಿಸ್ತರಿಸಲು ಕೆಲವೊಂದು ಸರಳ ಹಾಗೂ ಪರಿಣಾಮಕಾರಿ ಮಾರ್ಗಗಳೂ ಇವೆ. ಅವುಗಳ ಬಗ್ಗೆ ಇಲ್ಲಿ ನೋಡೋಣ ಬ್ರೈಟ್ನೆಸ್ ಕಡಿಮೆ ಮಾಡಿ ಸ್ಕ್ರೀನ್ನ ಬ್ರೈಟ್ನೆಸ್ ಕಡಿಮೆ ಮಾಡುವುದು ಬಹಳ ಉತ್ತಮ ಕ್ರಮಗಳಲ್ಲಿ ಒಂದು. ಸಾಮಾನ್ಯವಾಗಿ ಎಲೆಕ್ಟ್ರಾನಿಕ್ ಡಿವೈಜ್ಗಳಲ್ಲಿ ಡಿಸ್ಪ್ಲೇ ಹೆಚ್ಚಿನ ಶಕ್ತಿಯನ್ನು ಬಳಸುತ್ತದೆ ಹಾಗೂ ಬೇಗ ಬ್ಯಾಟರಿ ಖಾಲಿಯಾಗುವಂತೆ ಮಾಡುತ್ತದೆ. ಹೀಗಾಗಿ ನಿಮ್ಮ ಆಂಡ್ರಾಯ್ಡ್ ಫೋನ್ನಲ್ಲಿ ಸಾಧ್ಯವಾದಷ್ಟು ಬ್ರೈಟ್ನೆಸ್ ಕಡಿಮೆ ಇಟ್ಟುಕೊಳ್ಳುವುದರಿಂದ ಶಕ್ತಿಯ ಬಳಕೆಯನ್ನು ಕಡಿಮೆ ಮಾಡುತ್ತದೆ ಟರ್ನ್ ಆಫ್ ಸಮಯ ಕಡಿಮೆ ಮಾಡಿ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ಗಳ ಸ್ಕ್ರೀನ್ ಆಟೋಮ್ಯಾಟಿಕ್ ಆಗಿ ಟರ್ನ್ ಆಫ್ ಆಗುತ್ತದೆ. ಆದರೆ, ಹೀಗೆ ಟರ್ನ್ ಆಫ್ ಆಗುವ ಸಮಯವನ್ನು ಸೆಟ್ ಮಾಡುವ ಅವಕಾಶ ಕೂಡಾ ಬಳಕೆದಾರರಿಗೆ…
ಗದಗ :- ಹುಟ್ಟುಹಬ್ಬದ ಅಂಗವಾಗಿ ಬ್ಯಾನರ್ ಕಟ್ಟಲು ಹೋಗಿದ್ದ ಮೂವರು ಯುವಕರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹರಿಜನ್ ಮುರಳಿ ನಡವಿನಮನಿ, ಮತ್ತು ನವೀನ್ ಗಾಜಿ ಮೃತರು. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಲಕ್ಷ್ಮೇಶ್ವರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯಶ್ ಮೇಲಿನ ಅಭಿಮಾನದಿಂದ ಮಧ್ಯರಾತ್ರಿ ಬರ್ತ್ ಡೇ ಪ್ಲಾನ್ ಮಾಡಿಕೊಂಡಿದ್ದರು. ಈ ವೇಳೆ ಯಶ್ ಫೋಟೋವುಳ್ಳ ಬೃಹತ್ ಬ್ಯಾನರ್ ನಿಲ್ಲಿಸುವಾಗ ವಿದ್ಯುತ್ ತಂತಿಗೆ ತಗುಲಿ ಅವಘಡ ಸಂಭವಿಸಿದೆ
ಕೂದಲು ಉದುರುವುದು, ತಲೆಹೊಟ್ಟು, ಅಕಾಲಿಕವಾಗಿ ಕೂದಲು ಬಿಳಿಯಾಗುವುದು ಮುಂತಾದ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಕಾಮನ್ ಆಗೋಗಿದೆ. ಸಾಮಾನ್ಯವಾಗಿ ಜನರು ದುಬಾರಿ ಶ್ಯಾಂಪೂಗಳು ಮತ್ತು ಸೌಂದರ್ಯವರ್ಧಕ ಉತ್ಪನ್ನಗಳಲ್ಲಿ ಕೂದಲಿಗೆ ಚಿಕಿತ್ಸೆಯನ್ನು ಹುಡುಕುತ್ತಲೇ ಇರುತ್ತಾರೆ. ಆದರೆ ಈ ಕೂದಲಿನ ಸಮಸ್ಯೆಗಳಿಗೆ ರಾಮಬಾಣವಾಗಿರುವಂತಹ ಅದ್ಭುತ ವಸ್ತುಗಳು ನಮ್ಮ ಅಡುಗೆಮನೆಯಲ್ಲಿರುತ್ತವೆ. ಕರಿಬೇವಿನ ಸೊಪ್ಪು ಕೂದಲಿಗೆ ಬಹಳ ಮುಖ್ಯವಾಗಿದೆ. ಕರಿಬೇವಿನ ಸೊಪ್ಪಿನಿಂದ ಕೂದಲಿನ ಅನೇಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳಬಹುದು. ಆಗಿನ ಕಾಲದ ಅಜ್ಜಿಯಂದಿರು ಇದನ್ನೇ ಉಪಯೋಗಿಸುತ್ತಿದ್ದರು. ನೀವು ಅವುಗಳನ್ನು ಕರಿಬೇವನ್ನ ಸರಿಯಾಗಿ ಬಳಸಿದರೆ, ನಿಮ್ಮ ಕೂದಲಿಗೆ ತುಂಬಾ ಪರಿಣಾಮಕಾರಿ ಎಂದು ಸಾಬೀತುಪಡಿಸಬಹುದು. ಕೂದಲು ಉದುರುವಿಕೆಗೆ ಕರಿಬೇವಿನ ಎಲೆಗಳು : ಕೂದಲು ಉದುರುವ ಸಮಸ್ಯೆಯಿಂದ ನೀವು ತೊಂದರೆಗೀಡಾಗಿದ್ದರೆ ಮತ್ತು ಹಲವಾರು ರೀತಿಯ ಸೌಂದರ್ಯವರ್ಧಕಗಳನ್ನು ಪ್ರಯತ್ನಿಸಿದ್ದರೆ, ಅಂತವರು ಈ ಮನೆ ಮದ್ದನ್ನ ಉಪಯೋಗಿಸಿದರೆ ಕೂದಲು ಉದುರುವುದು ಕಡಿಮೆಯಾಗಿ ಕೂದಲು ಬೆಳೆಯೋದಕ್ಕೆ ಕರಿಬೇವಿನ ಎಲೆಗಳು ರಾಮಬಾಣ. ಕರಿಬೇವಿನ ಎಲೆಗಳಲ್ಲಿ ವಿಟಮಿನ್ ಸಿ, ಕಬ್ಬಿನಾಂಶ, ಕ್ಯಾಲ್ಸಿಯಂ, ಪೋಸ್ಪರಸ್, ನಿಕೊಟಿನಿಕ್ ಆಮ್ಲವಿದೆ. ಕರಿಬೇವಿನ ಎಲೆಗಳನ್ನು ಕೂದಲಿಗೆ ಬಳಸಿಕೊಳ್ಳುವುದು…
ಹುಬ್ಬಳ್ಳಿ: ಮುಂಬೈ ಡಿಸಿಪಿ ಹೆಸರಲ್ಲಿ ₹30.16 ಲಕ್ಷ ವಂಚನೆ ಎಸಗಲಾಗಿದೆ. ನಗರದ ವೈದ್ಯ ರಾಜೀವ್ ಅವರಿಗೆ ಮುಂಬೈ ಡಿಸಿಪಿ ಹೆಸರಲ್ಲಿ ವಿಡಿಯೋ ಕರೆ ಮಾಡಿ ಬೆದರಿಸಿದ ವ್ಯಕ್ತಿ, ಅವರಿಂದ ಹಂತಹಂತವಾಗಿ ಒಟ್ಟು ₹30.16 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ವೈದ್ಯರಿಗೆ ಮೊದಲು ಕರೆ ಮಾಡಿದ ಕೊರಿಯರ್ ಕಂಪನಿಯೊಂದರ ವ್ಯಕ್ತಿಯೊಬ್ಬರು, ‘ನಿಮ್ಮ ಹೆಸರಲ್ಲಿ ಅಪರಿಚಿತ ವ್ಯಕ್ತಿ ಕೆಲವು ವಸ್ತುಗಳನ್ನು ಬುಕ್ ಮಾಡಿ ಕೊರಿಯರ್ ಮಾಡಿದ್ದಾರೆ’ ಎನ್ನುತ್ತಾನೆ. ಅದಕ್ಕೆ ವೈದ್ಯರು, ’ನಾನು ಯಾವುದೇ ವಸ್ತುಗಳನ್ನು ಬುಕ್ ಮಾಡಿಲ್ಲ’ ಎಂದು ಹೇಳುತ್ತಾರೆ. ‘ನಿಮ್ಮ ಆಧಾರ್ ಕಾರ್ಡ್ ಸೋರಿಕೆಯಾಗಿದೆ. ನೀವು ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಬೇಕು’ ಎಂದು ಹೇಳುತ್ತಾನೆ. ನಂತರ ವೈದ್ಯರಿಗೆ ಸ್ಕೈಪ್ ಆ್ಯಪ್ ಮೂಲಕ ವಿಡಿಯೊ ಕರೆ ಮಾಡಿದ ಮತ್ತೊಬ್ಬ ವ್ಯಕ್ತಿ, ತಾನು ಮುಂಬೈ ಡಿಸಿಪಿ ಎಂದು ಬೆದರಿಸಿ, ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ಹವಾಲ ವ್ಯವಹಾರಕ್ಕೆ ಲಿಂಕ್ ಆಗಿದೆ. ನಿಮ್ಮ ಬ್ಯಾಂಕ್ ಖಾತೆಯ ವಿವರ ಬೇಕಿದೆ ಎಂದು ಬೆದರಿಸಿ, ಹಣ ವರ್ಗಾಹಿಸಿಕೊಂಡಿರುವುದಾಗಿ…