ಬೆಂಗಳೂರು:- ಅಗತ್ಯ ಬಿದ್ದರೆ ಸಂಸದೆ ಸುಮಲತಾ ಅವರನ್ನು ಭೇಟಿಯಾಗುತ್ತೇನೆ ಎಂದು ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸುಮಲತಾ ಅವರು ಬಿಜೆಪಿಯಲ್ಲಿ ಮುಂದುವರಿಯುವುದಾದರೆ ಮಿತ್ರಪಕ್ಷ ಬಿಜೆಪಿ ಪರವಾಗಿ ಅವರನ್ನು ಭೇಟಿ ಮಾಡುತ್ತೇನೆ. ಅದರಲ್ಲಿ ತಪ್ಪೇನಿದೆ. ನಾವೇನು ಇಂತಹ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದೀವಾ?. ಈ ಬಗ್ಗೆ ಇನ್ನು ಚರ್ಚೆಯೇ ಆಗಿಲ್ಲ. ಇದೆಲ್ಲ ಪ್ರಾರಂಭಿಕ ಹಂತದಲ್ಲಿ ಇದೆ. ಬಿಜೆಪಿ- ಜೆಡಿಎಸ್ ನಾಯಕರೆಲ್ಲ ಕೂತು ಸೌಹಾರ್ದಯುತವಾಗಿ ಕೆಲಸ ಮಾಡೋಕೆ ಎಲ್ಲರ ಜೊತೆಗೂ ಚರ್ಚೆ ನಡೆಸುತ್ತೇವೆ ಎಂದರು ಲೋಕಸಭೆಬ ಚುನಾವಣೆಗೆ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ʼನಾನು ನಿಲ್ಲುವ ತೀರ್ಮಾನ ಎಲ್ಲೂ ಮಾಡಿಲ್ಲ. ಸ್ನೇಹಿತರು ಬಯಸುತ್ತಿದ್ದಾರೆ. ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಬೆಂಗಳೂರು ಗ್ರಾಮಾಂತರ ಅಂತ ಹೇಳುತ್ತಿದ್ದಾರೆ. ಮಾಧ್ಯಮಗಳಲ್ಲಿ ಕೂಡ ವರದಿಗಳು ಬರುತ್ತಿವೆ. ಸಮಯ ಬಂದಾಗ ಅದನ್ನು ಹೇಳೋಣʼ ಎಂದು ಹೇಳಿದ್ದಾರೆ.
Author: AIN Author
ಮೈಸೂರು:- ಮಹಿಳೆಯರಿಗಿರುವ ಗ್ಯಾರಂಟಿ ಪುರಷರಿಗೆ ಯಾಕಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಪದವೀಧರರಿಗೆ ಮೂರು ಸಾವಿರ, ಡಿಪ್ಲೋಮ ಪದವೀಧರರಿಗೆ ಒಂದೂವರೆ ಸಾವಿರ ಭಿಕ್ಷೆಯ ರೂಪದಲ್ಲಿ ನೀಡುತ್ತಿದ್ದೀರಾ?, ಪದವೀಧರರಿಗೆ ನಿಮ್ಮ ದುಡ್ಡು ಬೇಡ, ಬದಲಾಗಿ ಉದ್ಯೋಗ ನೀಡಿ. ವರ್ಷಕ್ಕೆ ಎಷ್ಟು ಜನ ಪದವೀಧರರಾಗುತ್ತಿದ್ದಾರೆ ಎಂಬ ಮಾಹಿತಿ ಇದೆಯೇ?, ಪದವೀಧರರ ಸಮಸ್ಯೆ ಆಲಿಸಲು ಓರ್ವ ಸಚಿವರನ್ನ ನೇಮಕ ಮಾಡಿ ಎಂದರು. ಇದೇ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ನೀಡಿರುವ ಸ್ತ್ರೀ ಶಕ್ತಿ, ಗೃಹಲಕ್ಷ್ಮೀ ಎಲ್ಲ ಗ್ಯಾರೆಂಟಿಗಳು ಮಹಿಳೆಯರಿಗೆಯೇ ಇವೆ. ಆದರೆ, ಪುರುಷರಿಗೆ ಯಾಕೆ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರಶ್ನಿಸಿದ್ದಾರೆ.
ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಜನವರಿ 2024 ರ JNCASR ಅಧಿಕೃತ ಅಧಿಸೂಚನೆಯ ಮೂಲಕ ರಿಸರ್ಚ್ ಅಸೋಸಿಯೇಟ್ ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಅನ್ನು 15-Jan-2024 ರಂದು ಅಥವಾ ಮೊದಲು ಕಳುಹಿಸಬಹುದು. JNCASR ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ (JNCASR) ಹುದ್ದೆಗಳ ಸಂಖ್ಯೆ: 01 ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಹುದ್ದೆಯ ಹೆಸರು: ರಿಸರ್ಚ್ ಅಸೋಸಿಯೇಟ್ ವೇತನ: ರೂ.47000/- ಪ್ರತಿ ತಿಂಗಳು JNCASR ನೇಮಕಾತಿ 2024 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: JNCASR ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ Ph.D, M.D, M.S, MDS, MVSc, M.Pharm, M.E ಅಥವಾ M.Tech…
ಮಹಾರಾಷ್ಟ್ರ:- ಬಿಜೆಪಿ ಪಕ್ಷ ದೇಶದಲ್ಲಿ ವಸಾಹತುಶಾಹಿ ನೀತಿ ಪಾಲಿಸುತ್ತಿದ್ದು, ಪ್ರಜಾಪ್ರಭುತ್ವದ ತಳಹದಿಗೆ ಅಪಾಯಕಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಾರಾಷ್ಟ್ರದ ಸಹಕಾರಿ ಮಹರ್ಷಿ ಭಾವುಸಾಹೇಬ್ ಥಾರೋಟ್ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಡಾ.ಅಣ್ಣಾಸಾಹೇಬ್ ಶಿಂಧೆ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಪ್ರಜಾತಂತ್ರ ವಿರೋಧಿ ಹಾಗೂ ಸಂವಿಧಾನವಿರೋಧಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರೆ, ದೇಶ ಅಪಾಯಕ್ಕೆ ಸಿಲುಕಲಿದೆ. ಭಾರತವನ್ನು ಬ್ರಿಟೀಷರ ಕಪಿಮುಷ್ಟಿಯಿಂದ ಬಿಡಿಸಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ ಮಾತ್ರ. ಸರ್ವಾಧಿಕಾರಿ ಮನೋಭಾವವಿರುವಂತಹ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವನ್ನು ಉಳಿಸಿದರೆ, ದೇಶಕ್ಕೆ ಸಂವಿಧಾನಕ್ಕೆ ಧಕ್ಕೆ ಬರುತ್ತದೆ. ಆದ್ದರಿಂದ ಭಾರತದ ಸಂವಿಧಾನದ ಆಶಯದ ರಕ್ಷಣೆಯ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ ಎಂದರು. ಕರ್ನಾಟಕದಲ್ಲಿ ಬಿಜೆಪಿಯ ಭ್ರಷ್ಟಾಚಾರ ಹಾಗೂ ವಚನಭ್ರಷ್ಟತೆ ಬಿಜೆಪಿಯ ಜನವಿರೋಧಿ ನೀತಿಯನ್ನು ಕರ್ನಾಟಕದ ಮನೆಮನೆಗೂ ಕಾಂಗ್ರೆಸ್ ತಲುಪಿಸಿದ್ದರಿಂದ, ಬಿಜೆಪಿಯನ್ನು ರಾಜ್ಯದ ಅಧಿಕಾರದಿಂದ ಕಿತ್ತೊಗೆಯಲು ಸಾಧ್ಯವಾಯಿತು. ಕರ್ನಾಟಕದಲ್ಲಿ 40% ಕಮೀಷನ್ ನ ಭ್ರಷ್ಟಾಚಾರ ನಡೆಯಲು ಬಿಜೆಪಿ ಕಾರಣ.…
ಬೆಂಗಳೂರು: ಕೇಂದ್ರ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್ ಮುಂಡಾ ಅವರ ಜತೆ ರಾಜ್ಯದ ಬರ ಪರಿಸ್ಥಿತಿ, ಕೊಬರಿ ಖರೀದಿ ಹಾಗೂ ಎಸ್ ಟಿ ಪ್ರವರ್ಗಕ್ಕೆ ಕಾಡುಗೊಲ್ಲ ಸಮುದಾಯವನ್ನು ಸೇರಿಸುವ ಬಗ್ಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಭಾನುವಾರ ಕೇಂದ್ರ ಸಚಿವರು ಮಾಜಿ ಪ್ರಧಾನಿಗಳ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಶೋಷಿತ ಕಾಡುಗೊಲ್ಲ ಸಮುದಾಯವನ್ನು ಎಸ್ ಟಿ ಪ್ರವರ್ಗಕ್ಕೆ ಸೇರಿಸುವ ವಿಚಾರದಲ್ಲಿ ತಾವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿರುವ ಮನವಿ ಪತ್ರದ ಬಗ್ಗೆ ಪ್ರಸ್ತಾಪ ಮಾಡಿದರು ಮಾಜಿ ಪ್ರಧಾನಿಗಳು. ಈ ಬಗ್ಗೆ ಮಾಜಿ ಪ್ರಧಾನಿಗಳು, ಮಾಜಿ ಮುಖ್ಯಮಂತ್ರಿಗಳ ಜತೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದ ಕೇಂದ್ರ ಸಚಿವರು; ಈ ಬಗ್ಗೆ ತಾವು ಸಲ್ಲಿಸಿದ ಮನವಿ ಪತ್ರವನ್ನು ಬುಡಕಟ್ಟು ಸಚಿವಾಲಯಕ್ಕೆ ಕಳಿಸಿದ್ದಾರೆ. ಆ ಬಗ್ಗೆ ಬಹಳ ಮಹತ್ವ ಕೊಟ್ಟು ಪರಾಮರ್ಷೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಭೇಟಿಯ ನಂತರ ಮಾಜಿ…
ಬೆಂಗಳೂರು:- ರಾಜಧಾನಿ ಬೆಂಗಳೂರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಬಿವೈ ವಿಜಯೇಂದ್ರ ನೇತೃತ್ವದಲ್ಲಿ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ತಯಾರಿ ನಡೆಸಲಾಗುತ್ತಿದೆ ಎಂದರು. ಕಾಂಗ್ರೆಸ್ ಎಲ್ಲೆಡೆ ತೃಷ್ಟಿಕರಣ ರಾಜಕೀಯ ಮಾಡುತ್ತಿದೆ. ದೇಶದಲ್ಲೆಡೆ ಜೈ ಶ್ರೀರಾಮ್ ಜೈ ಶ್ರೀರಾಮ್ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಮಾತ್ರ ಜೈಶ್ರೀರಾಮ್ ಹೇಳುತ್ತಿಲ್ಲ. ಕಾಂಗ್ರೆಸ್ ನಾಯಕರು ತೃಷ್ಟೀಕರಣದ ರಾಜಕೀಯ ಮಾಡುವುದರಲ್ಲೇ ಇದ್ದಾರೆ ಎಂದು ಹೇಳಿದರು.
ಮೈಸೂರು:- ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಗಾಡಿ ಪಂಕ್ಚರ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಗಾಡಿ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಳಿಕ ಪಂಕ್ಚರ್ ಆಗಿದೆ ಎಂದರು. ಅಧಿಕಾರಕ್ಕೆ ಬಂದ 6 ತಿಂಗಳಿಗೆ ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ರಾಜ್ಯದ ಜನರು ಬೇಸತ್ತಿದ್ದು, ಬದಲಾವಣೆ ಬಯಸುತ್ತಿದ್ದಾರೆ ಎಂದು ಆರೋಪಿಸಿದರು. ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ತಮ್ಮ ಸರ್ಕಾರದ ಆಡಳಿತ ವೈಖರಿಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವೆನಿಸಿದೆ. ಹೀಗಾಗಿಯೇ ಅವರು ಜಾತಿವಾರು ಉಪಮುಖ್ಯಮಂತ್ರಿಗಳನ್ನು ಮಾಡಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಇದನ್ನೆಲ್ಲಾ ಗಮನಿಸಿದರೆ ಅಧಿಕಾರಕ್ಕೆ ಬಂದ 7 ತಿಂಗಳಿಗೆ ದೇಶದಲ್ಲಿ ಯಾವುದಾದರೂ ಸರ್ಕಾರ ಜನರ ನಂಬಿಕೆ, ವಿಶ್ವಾಸ ಕಳೆದುಕೊಂಡಿದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಅವರು ಕುಟುಕಿದರು. ದೇಶದ ಜನತೆಗೆ ಮತ್ತೆ ಮೋದಿ ಪ್ರಧಾನಿಯಾಗಬೇಕೆಂದು ಬಯಸಿದ್ದಾರೆ. ಉತ್ತುಂಗಕ್ಕೇರಿರುವ ಮೋದಿಯವರ ಜನಪ್ರಿಯತೆಯನ್ನು ಪಕ್ಷದ ಕಾರ್ಯಕರ್ತರು, ಮುಖಂಡರು…
ದಾವಣಗೆರೆ:- ಪಾಪಿ ಗಂಡನೊಬ್ಬ ಬೈಕ್ ಸಂಚಾರದ ವೇಳೆ ಪ್ರಾಣ ರಕ್ಷಣೆಗೆ ಬಳಸುವ ಹೆಲ್ಮೆಟ್‌ನಿಂದಲೇ ಹಲ್ಲೆ ಮಾಡಿ ಮಡದಿಯ ಜೀವ ತೆಗೆದಿದ್ದಾನೆ. ಹೌದು, ಈ ದುರ್ಘಟನೆ ನಡೆದಿರುವುದು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನುಗ್ಗಿಹಳ್ಳಿ ಕ್ರಾಸ್ ಎಂಬ ಗ್ರಾಮದಲ್ಲಿ. ಮೃತಳನ್ನು ಚನ್ನಗಿರಿ ತಾಲೂಕಿನ ಸಾರಥಿ ಹೊಸೂರು ಗ್ರಾಮದ ನಿವಾಸಿ ಯಶೋಧಾ (23) ಎಂದು ಗುರುತಿಸಲಾಗಿದೆ. ಪತಿ ತಿಪ್ಪೇಶ್ ಕೊಲೆಗೈದ ಆರೋಪಿಯಾಗಿದ್ದಾನೆ. ಆದರೆ, ಇನ್ನು ಬೈಕ್‌ನಲ್ಲಿ ಹೋಗುವಾಗ ಉಂಟಾದ ಜಗಳದಿಂದ ಉದ್ರಿಕ್ತಗೊಂಡ ಪಾಪಿ ಪತಿ ತನ್ನ ಹೆಂಡ್ತಿಗೆ ಹೆಲ್ಮೆಟ್‌ನಿಂದಲೇ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಆದರೆ, ಈತ ಕೊಲೆ ಮಾಡಿದ ಮೇಲೆ ತನ್ನ ಪತ್ನಿ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂದು ಕಥೆ ಕಟ್ಟಿದ್ದಾನೆ. ಹೆಲ್ಮೆಟ್ ನಿಂದ ಹೊಡೆದು ಪತ್ನಿ ಕೊಲೆ ಮಾಡಿ ಅಪಘಾತದ ನಾಟಕವಾಡಿದ್ದ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ವರದಕ್ಷಿಣೆ ಕಾರಣಕ್ಕೆ 3 ತಿಂಗಳ ಗರ್ಭಿಣಿ ಪತ್ನಿಯನ್ನ ಹೊಡೆದು ಕೊಲೆ ಮಾಡಿದ್ದಾನೆ. ಇದೇ ಜ.4ರಂದು ಪತಿ ಜೊತೆ ತವರಿಗೆ ಬಂಧಿದ್ದ ಯಶೋಧಳನ್ನು ಗಂಡ ವಾಪಸ್…
ಬೆಂಗಳೂರು:- ಇನ್ನು ಮುಂದೆ ರಾಜ್ಯದ ಬಸ್ ಕಂಡಕ್ಟರ್‌ಗಳು ಪ್ರಾಯಾಣಿಕರಿಂದ 10ರೂ ನಾಣ್ಯ ತೆಗೆದುಕೊಳ್ಳಬೇಕು ಎಂದು ಸಾರಿಗೆ ಇಲಾಖೆ ಖಡಕ್ ಸೂಚನೆಯೊಂದನ್ನು ಕೊಟ್ಟಿದೆ. ಹೀಗಾಗಿ 10 ರೂಪಾಯಿ ನಾಣ್ಯದ ಬಗ್ಗೆ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆಯಲ್ಲಿ ತಿಳುವಳಿಕೆ ಪತ್ರದ ಮೂಲಕ ಸಾರಿಗೆ ಇಲಾಖೆಯ ಕಾರ್ಯದರ್ಶಿಯು ಎಲ್ಲಾ ನಿಗಮಗಳಿಗೂ ವಾರ್ನಿಂಗ್ ಮಾಡಿದ್ದಾರೆ. ಬಸ್ ಪ್ರಯಾಣದ ವೇಳೆ ಪ್ರಯಾಣಿಕರು 10 ರೂ. ನಾಣ್ಯ ನೀಡಿದರೆ ಪಡೆಯಬೇಕು. ಒಂದು ವೇಳೆ 10 ರೂ. ನಾಣ್ಯ ಪಡೆಯದೇ ಇದ್ದರೆ, ಈ ಬಗ್ಗೆ ಪ್ರಯಾಣಿಕರಿಂದ ದೂರು ಬಂದರೆ ಆ ಬಸ್ಸಿನ ನಿರ್ವಾಹಕರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಕೆ ನೀಡಿದೆ.
ಬೆಳಗಾವಿ:- ರಾಜ್ಯದಲ್ಲಿ ಪೊಲೀಸ್ ಇಲಾಖೆ ಸತ್ತು ಹೋಗಿದ್ಯಾ!? ಎಂಬ ಅನುಮಾನ ಮೂಡಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಳಗಾವಿಯಲ್ಲಿ ಪೊಲೀಸ್ ವ್ಯವಸ್ಥೆ ವೈಫಲ್ಯ ಕಂಡಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ, ಹಲ್ಲೆ ನಡೆಸಿದ್ದೂ ಸೇರಿದಂತೆ ಇತ್ತೀಚೆಗೆ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ದೂರಿದರು. ಕಾಂಗ್ರೆಸಿಗರು ಹಿಂದೂ, ಮುಸ್ಲಿಂ ನಡುವೆ ಗಲಾಟೆ ಸೃಷ್ಟಿಸಿ, ಅದರಿಂದಾಗಿಯೇ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಬೇಕು ಎಂಬ ಸಂಚು ರೂಪಿಸಿದ್ದಾರೆ. ಹೀಗಾಗಿ ಇಂತಹ ಘಟನೆಗಳು ಹೆಚ್ಚಾಗುತ್ತಿವೆ. ಹುಬ್ಬಳ್ಳಿಯ ಕರಸೇವಕ ಪ್ರಕರಣದಲ್ಲಿ 14 ಕೇಸುಗಳಿವೆ ಎಂದು ಸುಳ್ಳು ಹೇಳಿದರು. ಬಿಜೆಪಿ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಯಿತು. ಇದಕ್ಕೆ ಜನರೂ ಬೆಂಬಲ ನೀಡಿದರು. ಕೋರ್ಟಿಗೂ ಮನವರಿಕೆಯಾಗಿ ಬಂಧಿತನಿಗೆ ಜಾಮೀನು ಸಿಕ್ಕಿದೆ ಎಂದು ಹೇಳಿದರು. ಮುಖ್ಯಮಂತ್ರಿಯವರು ಹುಬ್ಬಳ್ಳಿಯಷ್ಟೇ ಅಲ್ಲ, ಹಿಜಾಬ್ ವಿಷಯದಲ್ಲೂ ನ್ಯಾಯಾಲಯವನ್ನು ಮೀರಿ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ಅಲ್ಪಸಂಖ್ಯಾತರನ್ನು ಓಲೈಸುವುದೇ ದೊಡ್ಡ ಕೆಲಸವಾಗಿದೆ ಎಂದರು. ನೈತಿಕ ಪೊಲೀಸ್‍ಗಿರಿ ಪ್ರಕರಣದಲ್ಲಿ ಬೆಳಗಾವಿ ಜಿಲ್ಲೆಯ…