Author: AIN Author

ಹುಬ್ಬಳ್ಳಿ; ವಿಶ್ವ ಕಪ್ ಕ್ರಿಕೆಟ್ ಪಂದ್ಯಾವಳಿಯ್ಲಿಯಲಿ ಭಾರತದ ಕ್ರಿಕೆಟ್ ತಂಡ ಸತತ 9 ಪಂದ್ಯಗಳಲ್ಲಿ ಜಯ ಸಾಧಿಸಿ ವಿಶ್ವಕಪ್ ಫನಲ್ ಪ್ರವೇಶಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಕ್ರಿಕೆಟ್ ಪ್ರೇಮಿಗಳು ಕುಣಿದು ಕುಪ್ಪಳಿದರು. ಪರಸ್ಪರ ಸಿಹಿ ತಿನ್ನಿಸಿದ ಬುಧವಾರ ರಾತ್ರಿಮುಂಬೈನ ವಾಂಕಡೆ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹಿಲಿಯ ದಾಖಲೆಯ 50ನೇ ಶತಕ ಮತ್ತು ಶ್ರೇಯಸ್ ಅಯ್ಯರ್ ಅವರ ಶತಕದ ನೆರವಿನಿಂದ ಬೃಹತ್ ಮೊತ್ತ ಪೇರಿಸಿ, ಮೊಹಮ್ಮದ ಶಮಿಯ ಕರಾರುವಕ್ಕ ದಾಳಿಯಿಂದ ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಜಯಗಳಿಸಿದ್ದು ಮಹಾನಗರದ್ಯಂತ ದೀಪಾವಳಿ ಹಬ್ಬ ಮತ್ತೊಮ್ಮೆ ಆಚರಿಸಲಾಯಿತು. ಪ್ರತಿ ಗಲ್ಲಿ ಗಲ್ಲಿಗಳಲ್ಲಿ ಭಾರತ ತಂಡಕ್ಕೆ ಶುಭಕೋರುವ ಮುಖಾಂತರ ಫೈನಲ್ ನಲ್ಲಿ ಜಯಗಳಿಸಲು ಪ್ರಾರ್ಥಿಸಲಾಯಿತು. ಉತ್ತರ ಕರ್ನಾಟಕ ಅಟೋ ಚಾಲಕರ ಸಂಘದ ಅಧ್ಯಕ್ಷ ಶೇಖರಯ್ಯಾ ಮಠಪತಿ ಸೇರಿದಂತೆ ಮುಂತಾದವರಿದ್ದರು

Read More

ಚಿತ್ರದುರ್ಗ: ಕಳೆದ 14 ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾ ಮಠದ ಶಿವಮೂರ್ತಿ ಶರಣರು ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮುರುಘಾ ಶ್ರೀ ವಿರುದ್ಧ ಎರಡು ಪೋಕ್ಸೋ ಪ್ರಕರಣ ದಾಖಲಾಗಿತ್ತು. ನ.8 ರಂದು ಒಂದು ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದರೂ ಎರಡನೇ ಪೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿಯಿದ್ದ ಹಿನ್ನೆಲೆಯಲ್ಲಿ ಬಿಡುಗಡೆಯಾಗಿರಲಿಲ್ಲ. ಜಾಮೀನು ಆದೇಶ ನೀಡುವ ಚಿತ್ರದುರ್ಗದಲ್ಲಿ ನೆಲೆಸುವಂತಿಲ್ಲ ಎಂದು ಕೋರ್ಟ್‌ ಷರತ್ತು ವಿಧಿಸಿದ ಹಿನ್ನಲೆಯಲ್ಲಿ ಶ್ರೀಗಳು ಜೈಲಿನಿಂದ ಬಿಡುಗಡೆಯಾದ ಬಳಿಕ  ದಾವಣಗೆರೆ ಕಡೆ ಹೊರಟಿದ್ದಾರೆ. ವಿಚಾರಣೆ ಮುಗಿಯುವವರೆಗೂ ಚಿತ್ರದುರ್ಗಕ್ಕೆ ಹೋಗುವಂತಿಲ್ಲ. ಇಬ್ಬರ ಶ್ಯೂರಿಟಿಯನ್ನು ಒದಗಿಸಬೇಕು. ವೀಡಿಯೊ ಕಾನ್ಫರೆನ್ಸ್ ಮೂಲಕ ಕೋರ್ಟ್ ವಿಚಾರಣೆಗೆ ಹಾಜರಾಗಬೇಕು. ಎರಡು ಲಕ್ಷ ರೂ. ಬಾಂಡ್ ಶ್ಯೂರಿಟಿ ನೀಡಬೇಕು. ಪಾಸ್‌ಪೋರ್ಟ್‌ ಅನ್ನು ಕೋರ್ಟ್‌ ವಶಕ್ಕೆ ನೀಡಬೇಕು. ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂತಹ ಕೃತ್ಯ ಪುನರಾವರ್ತನೆಯಾಗಬಾರದು ಎಂದು ಷರತ್ತು ವಿಧಿಸಿದೆ.

Read More

ಬೆಳಗಾವಿ-ಬಾಗಲಕೋಟೆ ಜಿಲ್ಲೆ ಬೆಸುಗೆ ಮಾಡುವಲ್ಲಿ ಮಹತ್ತರ ಯೋಜನೆಯಾಗಿರುವ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿಯ ಜಾಕವೆಲ್‌ನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ರಬಕವಿ ಮಹಿಷವಾಡಗಿ ಬ್ಯಾರೇಜ್ ಕಾಮಗಾರಿ ತಾತ್ಕಾಲಿಕ ಸ್ಥಗಿತಗೊಂಡು ಅಸ್ತಿ ಪಂಜರದಂತೆ ಬ್ಯಾರೇಜ್ ಅನಾಥವಾಗಿ ನಿಂತಿರುವದು ಬೇಸರ ತರುವಲ್ಲಿ ಕಾರಣವಾಗಿತ್ತು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ರಬಕವಿ ನಿರೀಕ್ಷಣಾ ಮಂದಿರದಲ್ಲಿ ನಾಳೆ ರಬಕವಿ ಮಹಿಷವಾಡಗಿ ಬ್ರಿಡ್ಜ್ ಕಾಮಗಾರಿ ವೀಕ್ಷಣೆಗೆ ಬೆಂಗಳೂರಿನ ಪಿಡಬ್ಲ್ಯೂಡಿ ತಂಡ ಭೇಟಿ ನೀಡಲಿದೆ, ಅದರ ಕುರಿತು ಪೂರ್ವಭಾವಿ ಸಭೆ ನಡೆಯಿತು. 2018 ರಲ್ಲಿ ಅಂದಿನ ಸಚಿವೆ ಉಮಾಶ್ರೀಯವರು 30. 26 ಕೋಟಿ ರೂ.ಗಳಷ್ಟು ಟೆಂಡರ್ ಕಾಮಗಾರಿ ಮೂಲಕ ನಾಗಾರ್ಜುನ ಕನಸ್ಟ್ರಕ್ಸನ್ಸ್ ಕಂಪನಿಗೆ ನೀಡಿತ್ತು. ಕಳೆದ ಐದು ವರ್ಷಗಳಲ್ಲಿ ಕೇವಲ ಶೇ.25 ರಷ್ಟು ಮಾತ್ರ ಕಾಮಗಾರಿ ನಡೆದಿದೆ. ಇದಕ್ಕೆ ಪೂರಕವಾಗಿ 2021 ರಲ್ಲಿ ಕಾಮಗಾರಿಗೆ ಮತ್ತಷ್ಟು ಉತ್ತೇಜನ ನೀಡುವ ಸಲುವಾಗಿ ಶಾಸಕ ಸಿದ್ದು ಸವದಿ ಈ ಟೆಂಡರ್ ಕಾಮಗಾರಿಯನ್ನು 10 ಕೋಟಿ ರೂ.ಗಳವರೆಗೆ ಹೆಚ್ಚಳಗೊಳಿಸುವ ಮೂಲಕ ಕಾಮಗಾರಿ…

Read More

ಹುಬ್ಬಳ್ಳಿ: ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಐದು ರಾಜ್ಯಗಳಲ್ಲಿ 80 ವರ್ಷ ವಯಸ್ಸಿ ದಾಟಿದವರಿಗೂ ಟಿಕೆಟ್ ಕೊಟ್ಟಿದ್ದು, ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ ಎಂದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ ಕೇಂದ್ರ ನಾಯಕರು ಬಂದಿರಲಿಲ್ಲ. ವೀಕ್ಷಕರು ಸಹ ಬಂದಿರಲಿಲ್ಲ ರಾಜ್ಯ ಬಿಜೆಪಿ ಪರಿಸ್ಥಿತಿಗೆ ಇದೇ ಸಾಕ್ಷಿ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿರೋದು ಅವರಿಗೆ ಬಿಟ್ಟ ವಿಚಾರ ಎಂದ ಅವರು, ಒಬ್ಬರನ್ನು ಅಧ್ಯಕ್ಷರನ್ನಾಗಿ ಮಾಡಬೇಕಿತ್ತು, ವಿಜಯೇಂದ್ರರನ್ನು ಮಾಡಿದ್ದಾರೆಆದರೆ ರಾಜ್ಯಾಧ್ಯಕ್ಷ ಸ್ಥಾನಕಾಂಕ್ಷಿಗಳು ಯಾರೂ ಪದಗ್ರಹಣಕ್ಕೆ ಹೋಗಲಿಲ್ಲ. ಒಮ್ಮೆ ನೇಮಕವಾದ ಮೇಲೆ ಎಲ್ಲರೂ ಕೂಡಿ ಕೆಲಸ ಮಾಡಬೇಕೆಂಬ ಮನೋಭಾವ ಬರಬೇಕಿತ್ತುಹೀಗಾಗಿ ಬಿಜೆಪಿಯ ಒಳ ಜಗಳ ಎಲ್ಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ ಎಲ್ಲವನ್ನು ಕಾದು ನೋಡಿ, ಮುಂದೆ ನಿಮಗೆ ಗೊತ್ತಾಗುತ್ತೆ ಬಿಜೆಪಿಯಲ್ಲಿ ಹಿರಿಯರನ್ನು ದೂರವಿಡುವ ಕೆಲಸ…

Read More

ಹುಬ್ಬಳ್ಳಿ: ಭಾರತದ ನೆಲದಲ್ಲಿ ನಡೆಯುತ್ತಿರುವ ವಿಶ್ವಕಸಪ್ ಕ್ರಿಕೆಟ್ ಪಂದ್ಯಾವಳಿಯ್ಲಿ ಭಾರತದ ಕ್ರಿಕೆಟ್ ತಂಡ ಸತತ 9 ಪಂದ್ಯಗಳಲ್ಲಿ ಜಯ ಸಾಧಿಸಿ ವಿಶ್ವಕಪ್ ಫನಲ್ ಪ್ರವೇಶಿಸಿದ್ದು, ಭಾರತ ತಂಡದ ಆಟಗರಾರ ಸಂಘಟಿತ ಹೋರಾಟಕ್ಕೆ ಸಿಕ್ಕ ದೊಡ್ಡ ಜಯವಾಗಿದೆ ಎಂದು ಶಾಸಕ ಪ್ರಸಾದ ಅಬ್ಬಯ್ಯ ಅಭಿನಂದಿಸಿದ್ದಾರೆ. https://ainlivenews.com/joint_pain_suprem_ray_treatment_reiki/ ಬುಧವಾರ ಮುಂಬೈನ ವಾಂಕಡೆ ಮೈದಾನದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹಿಲಿಯ ದಾಖಲೆಯ 50ನೇ ಶತಕ ಮತ್ತು ಶ್ರೇಯಸ್ ಅಯ್ಯರ್ ಅವರ ಶತಕದ ನೆರವಿನಿಂದ ಬೃಹತ್ ಮೊತ್ತ ಪೇರಿಸಿ, ಮೊಹಮ್ಮದ ಶಮಿಯ ಕರಾರುವಕ್ಕ ದಾಳಿಯಿಂದ ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಜಯಗಳಿಸಿದ್ದು ಶ್ಲಾಘನೀಯ. ವಿಶ್ವಕಪ್‌ನ ಅಂತಿಮ ಪಂದ್ಯ ಗೆದ್ದುಕೊಂಡು ಮೂರನೇ ಬಾರಿಗೆ ವಿಶ್ವಕಪ್ಪ ಕಿರಿಟ ಮುಡಿಗೇರಿಸಿಕೊಳ್ಳಲಿ ಎಂದು ಭಾರತೀಯ ಕ್ರಿಕೆಟ್ ತಂಡಕ್ಕೆ ಶಾಸಕ ಪ್ರಸಾದ ಅಬ್ಬಯ್ಯ ಶುಭ ಕೋರಿದ್ದಾರೆ.

Read More

ವಿಜಯಪುರ: ಲಿಸ್ಟ್ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ಮಾತನಾಡಿರುವ ವಿಡಿಯೋ ವೈರಲ್​ ವಿಚಾರವಾಗಿ ವಿಜಯಪುರದಲ್ಲಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ನನಗೆ ಆ ಬಗ್ಗೆ ಗೊತ್ತಿಲ್ಲ, ಸತ್ಯಾಸತ್ಯತೆ ತಿಳಿದುಕೊಂಡು ಮಾತನಾಡುತ್ತೇನೆ. ವಿಡಿಯೋ ಮಾಧ್ಯಮದವರದ್ದು, ಆರ್ಟಿಫಿಷಿಯಲ್ ಇಂಟಲಿಜೆನ್ಸ್​ ಬಂದಿದೆ. ಈ ಹಿಂದೆ ನಂದೇ ಧ್ವನಿಯನ್ನು ಮಹಾರಾಷ್ಟ್ರದ ಒಬ್ಬ ಮಿಮಿಕ್ರಿ ಮಾಡಿದ್ದ. ಆಗ ಆತನನ್ನು ಅರೆಸ್ಟ್ ಮಾಡಿಸಿದ್ದೆವು. ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಬಂದಿದೆ, ಬದಲಾವಣೆ ಮಾಡಬಹುದು ಎಂದರು. ಇನ್ನೂ ಬಿಜೆಪಿ ಹಾಗೂ ಜೆಡಿಎಸ್​ನಿಂದ ಮಾಜಿ ಶಾಸಕರು ಹಾಗೂ ಮುಖಂಡರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಸಚಿವ ಎಂಬಿ ಪಾಟೀಲ್, ಬಿಜೆಪಿಯಿಂದ ಹಾಗೂ ಜೆಡಿಎಸ್​​ನಿಂದಲೂ ಕಾಂಗ್ರೆಸ್​ಗೆ ಬರುತ್ತಾರೆ. ಕಾದುನೋಡಿ ಲೋಕಸಭಾ ಚುನಾವಣೆ ವೇಳೆಗೆ ಎಲ್ಲಾ ಸ್ವಚ್ಛವಾಗುರುತ್ತದೆ ಎಂದರು. ಬಹಳಷ್ಟು ಜನರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದಾಗ ಅಂಕಿ ಸಂಖ್ಯೆ ಬಗ್ಗೆ ಮಾಹಿತಿ ನೀಡಿ ಎಂದು ಮಾಧ್ಯಮದವರು ಕೇಳಿದರು. ಇದಕ್ಕೆ ಎಂಬಿ ಪಾಟೀಲರು, ಬಹಳಷ್ಟು ಜನರು ಎಂದು ಹೇಳುತ್ತೇವೆ ಎಷ್ಟು ಬೇಕಾದಷ್ಟು ಬರೆದುಕೊಳ್ಳಿ ಎಂದರು.

Read More

ಬೆಂಗಳೂರು: ನಗರದ ಬನಶಂಕರಿಯಲ್ಲಿಂದು ಅನಧಿಕೃತ ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ಬೆಳಿಗ್ಗೆ 9 ಗಂಟೆಯ ನಂತರ ಆರಂಭವಾಗಲಿದೆ. ಬನಶಂಕರಿ ಕಾಂಪ್ಲೆಕ್ಸ್ ಸುತ್ತಮುತ್ತ ನಡೆಯಲಿರುವ ಕಾರ್ಯಾಚರಣೆ ಇದಾಗಿದೆ. ಈಗಾಗಲೇ ಅಧಿಕಾರಿಗಳು ಲಿಸ್ಟ್ ತಯಾರಿಸಿದ್ದಾರೆ. ಮಾರ್ಷಲ್ಸ್ ಸೂಪರ್ ವೈಸರ್ ಸೋಮಶೇಖರ್ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ನೋಟಿಸ್ ನೀಡಿದರೂ ಅಂಗಡಿ ತೆರವು ಮಾಡದ ಹಿನ್ನಲೆ ಅಂಗಡಿಗಳ ತೆರವು ಮಾಡಲು ಬಿಬಿಎಂಪಿ ಮುಂದಾಗಿದೆ.

Read More

ಮಂಡ್ಯ: ಪ್ರೊಫೆಸರ್ ಒಬ್ಬ ಆಸ್ತಿ ಆಸೆಗಾಗಿ ತನ್ನ ಪತ್ನಿಯನ್ನು (Wife) ಕೊಲೆಗೈದ ಘಟನೆ ಇಲ್ಲಿನ (Mandya) ವಿವಿ ನಗರ ಬಡಾವಣೆಯಲ್ಲಿ ನಡೆದಿದೆ. ಕೊಲೆಗೈದ ಬಳಿಕ ಸಹಜ ಸಾವೆಂದು ನಾಟಕವಾಡಿ ಈಗ ಪೊಲೀಸರ (Police) ಅತಿಥಿಯಾಗಿದ್ದಾನೆ. ಕೊಲೆಯಾದ ಮಹಿಳೆಯನ್ನು ಎಸ್.ಶೃತಿ (32) ಎಂದು ಗುರುತಿಸಲಾಗಿದೆ. ಹತ್ಯೆಗೀಡಾದವಳ ಪತಿ ಟಿ.ಎನ್.ಸೋಮಶೇಖರ್ (41) ಹಣದ ದಾಹಕ್ಕೆ ಬಿದ್ದು, ಮಲಗಿದ್ದ ಪತ್ನಿಯನ್ನು ದಿಂಬು ಹಾಗೂ ಬೆಡ್ ಶೀಟ್‍ನಿಂದ ಉಸಿರುಗಟ್ಟಿಸಿ ಕೊಲೆಗೈದಿದ್ದಾನೆ. ಶೃತಿಯ ತಂದೆ, ತಾಯಿ ಕೆಲವು ವರ್ಷಗಳ ಹಿಂದೆ ಅನಾರೋಗ್ಯದಿಂದ ಮೃತ ಪಟ್ಟಿದ್ದರು. ಆಕೆಯ ತಂಗಿ 2018ರಲ್ಲಿ ಅಪಘಾತದಲ್ಲಿ ಸಾವಿಗೀಡಾಗಿದ್ದಳು. ಇದಾದ ಬಳಿಕ ಆಕೆಯ ಹೆಸರಿಗೆ 10 ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಆಸ್ತಿ ಸೇರಿತ್ತು. ಮೈಸೂರಿನ ಪ್ರಮುಖ ನಗರಗಳಲ್ಲಿದ್ದ ಕಮರ್ಷಿಯಲ್ ಕಟ್ಟಡಗಳು, ಮನೆ ಹಾಗೂ ಸೈಟ್‍ಗಳು ಶೃತಿಯ ಹೆಸರಲ್ಲಿತ್ತು. ಆ ಆಸ್ತಿಯನ್ನು ಮಾರಿ ಬೇರೆಡೆ ಆಸ್ತಿ ಕೊಳ್ಳಲು ಶೃತಿಗೆ ಆರೋಪಿ ಪತಿ ಒತ್ತಾಯಿಸುತ್ತಿದ್ದ. ಪತಿಯ ಆಸ್ತಿ ಮಾರಾಟ ವಿಚಾರಕ್ಕೆ ಪತ್ನಿ ನಿರಾಕರಿಸಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ…

Read More

ಮಂಡ್ಯ: ಸೋಶಿಯಲ್ ಮೀಡಿಯಾದಲ್ಲಿ ಅನ್ಯಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಸ್ವಾಮಿ ಎಂಬ ಯುವಕನನ್ನು ಮಂಡ್ಯ ಜಿಲ್ಲೆಯ ಮದ್ದೂರು ಠಾಣೆ ಪೊಲೀಸರು ಸೆರೆ ಹಿಡಿದಿದ್ದಾರೆ. ಕೋಮುಸೌಹಾರ್ದ ಕದಡುವ ಯತ್ನ ಆರೋಪದಡಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಇನ್ನು ಇದನ್ನು ಖಂಡಿಸಿ ಮದ್ದೂರು ಪೊಲೀಸ್ ಠಾಣೆಯ ಎದುರು ಭಜರಂಗದಳದಿಂದ ಧರಣಿ ಶುರು ಮಾಡಿದ್ದಾರೆ. https://ainlivenews.com/joint_pain_suprem_ray_treatment_reiki/  

Read More

ಬೆಂಗಳೂರು: ಪುತ್ರ ಯತೀಂದ್ರ  ತಂದೆ ಸಿದ್ದರಾಮಯ್ಯನವರ  ಜೊತೆ ಮಾತನಾಡಿದಾಗ ಕೇಳಿ ಬಂದ ಮಹದೇವ್‌  ಅವರು ಮುಖ್ಯಮಂತ್ರಿಯವರ ಹತ್ತಿರ ಸಂಬಂಧಿ ಆಗಿದ್ದಾರೆ. ಮೂಲತಃ ಸಬ್ ರಿಜಿಸ್ಟ್ರಾರ್ ಆಗಿರುವ ಮಹದೇವ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜನೆ ಆಗಿದ್ದಾರೆ. ಮಹದೇವ ಅವರು ಯತೀಂದ್ರ ಅವರ ಆಪ್ತರಾಗಿದ್ದು, ಸಿದ್ದರಾಮಯ್ಯ ಸಿಎಂ ಆಗುತ್ತಿದ್ದಂತೆ ಸಬ್ ರಿಜಿಸ್ಟ್ರಾರ್ ಮಹದೇವ ಅವರನ್ನು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಯಾಗಿ ಯತೀಂದ್ರ ಅವರು ನೇಮಿಸಿದ್ದಾರೆ ಎನ್ನಲಾಗುತ್ತಿದೆ. ಈಗ ಮಹದೇವ್ ಎಂದು ಕರೆಯಲಾಗುತ್ತಿದ್ದರೂ ಅವರ ಮೂಲ ಹೆಸರು ಮಾದೇ ಸ್ವಾಮಿ. ಏನಿದು ವಿವಾದ? ಬುಧವಾರ ಯತೀಂದ್ರ ಅವರು ವರುಣ (Varuna) ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಚಟ್ನಹಳ್ಳಿಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಕುಂದುಕೊರತೆ ವಿಚಾರಣೆ ಸಭೆ ನಡೆಸಿ ಗ್ರಾಮದ ಜನರ ಅಹವಾಲು ಸ್ವೀಕರಿಸುತ್ತಿದ್ದರು. ಈ ವೇಳೆ ಅವರು ತಂದೆಗೆ ಕರೆ ಮಾಡಿದ್ದಾರೆ. ಯಾವುದೋ ವಿಷಯವನ್ನು ಪ್ರಸ್ತಾಪ ಮಾಡಿದ ಅವರು, ನಾನು ನೀಡಿದ ಲಿಸ್ಟ್‌ನದ್ದು ಮಾತ್ರ ಮಾಡಿ ಎಂದು ಸಾರ್ವಜನಿಕರ ಮುಂದೆಯೇ ತಾನು ನೀಡಿದ ಪಟ್ಟಿಯ…

Read More