ಸೂರ್ಯೋದಯ: 06:52, ಸೂರ್ಯಾಸ್ತ : 05:52 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗದರ್ಶಿ, ಕೃಷ್ಣ ಪಕ್ಷ, ದಕ್ಷಿಣಾಯನಮ್, ಹೇಮಂತ ಋತು, ತಿಥಿ: ಎಕಾದಶಿ, ನಕ್ಷತ್ರ: ವಿಶಾಖಾ, ಯೋಗ: ಸುಲಾ ಕರಣ: ಬಾಲವ, ರಾಹು ಕಾಲ: 04:30 ನಿಂದ 06:00 ತನಕ ಯಮಗಂಡ: 12:00 ನಿಂದ 01:30 ತನಕ ಗುಳಿಕ ಕಾಲ: 03:00 ನಿಂದ 04:30 ತನಕ ಅಮೃತಕಾಲ: ಮ.1:03 ನಿಂದ ಮ.2:42 ತನಕ ಅಭಿಜಿತ್ ಮುಹುರ್ತ: ಮ.12:00 ನಿಂದ ಮ.12:44 ತನಕ ಮೇಷ ರಾಶಿ; ಮನೆಯಲ್ಲಿ ಬೆಳೆಬಾಳುವ ವಸ್ತುಗಳ ಕಳ್ಳತನ ಸಂಭವ, ಹೋಟೆಲ್ ವ್ಯಾಪಾರಿಗಳಿಗೆ ತಕ್ಕ ಪ್ರತಿಫಲ ಸಿಗಲಿದೆ, ನಿರಂತರ ಎಲೆಕ್ಟ್ರಿಕಲ್ ಕಂಪ್ಯೂಟರ್ ಆಪರೇಟರ್ನವರಿಗೆ ದೈಹಿಕ ತೊಂದರೆ, ಮಾವನಿಂದ ಹಣದ ಸಹಾಯ ಸಿಗಲಿದೆ, ಉದ್ಯೋಗದಲ್ಲಿ ಮೇಲಾಧಿಕಾರಿ ಕಂಡರೆ ಹೆದರಿಕೆ, ಪ್ರಿಯತಮೆಯಿಂದ ಅವಮಾನ, ಕೋರ್ಟ್ ಕೇಸ್ ನಲ್ಲಿ ಅಪಜಯ, ಮಹಿಳಾ ಉದ್ಯೋಗಿಗಳಿಗೆ ಕೆಲಸದಲ್ಲಿ ಹೆಚ್ಚಿನ ಒತ್ತಡ ಹಾಗೂ ಮಾನಸಿಕ ಕಿರುಕುಳ ಸಂಭವ. ಶಿಕ್ಷಕರಉದ್ಯೋಗ ವಿಚಾರದಲ್ಲಿ ನಾನಾ ಕಿರಿಕಿರಿ ಏರ್ಪಡಬಹುದು. ವಿದೇಶದ…
Author: AIN Author
ಬೆಂಗಳೂರು:- ಮೂವರು ಡಿಸಿಎಂಗಳ ನೇಮಕ ಸುಳ್ಳು ಸುದ್ದಿ ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಡಿಸಿಎಂ ನೇಮಕದ ಬಗ್ಗೆ ಸಚಿವರು ವೈಯಕ್ತಿಕ ಅಭಿಪ್ರಾಯವನ್ನು ಹೇಳಿರುತ್ತಾರೆ. ರಾಜಣ್ಣ ಅವರ ಹೇಳಿಕೆಯೂ ಅಷ್ಟೆ. ಅವರ ದೃಷ್ಟಿಯಲ್ಲಿ ಒಳ್ಳೆಯದು ಇರಬಹುದು. ಹೀಗಾಗಿ ಹೇಳಿರುತ್ತಾರೆ. ಈ ಬಗ್ಗೆ ಹೈಕಮಾಂಡ್ ನಿರ್ಧರಿಸಬೇಕು. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು. ಮೂವರು ಡಿಸಿಎಂಗಳ ನೇಮಕ ವಿಚಾರವಾಗಿ ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿದೆ. ಡಿಸಿಎಂ ಡಿಕೆ ಶಿವಕುಮಾರ್ ಪ್ರಭಾವ ಕುಗ್ಗಿಸಲು ಮೂವರು ಡಿಸಿಎಂಗಳ ನೇಮಕ ಮಾಡಲಾಗುತ್ತಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿದೆ. ಡಿಸಿಎಂ ಸ್ಥಾನಕ್ಕೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೆಸರೂ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ಪರಮೇಶ್ವರ್ ಅವರು ಈ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದರು. ಸಚಿವರ ದೆಹಲಿ ಪ್ರವಾಸದ ಬಗ್ಗೆ ಮಾತನಾಡಿ, ಒಬ್ಬೊಬ್ಬರು ಒಂದೊಂದು ಕಾರಣ ಇಟ್ಟುಕೊಂಡು ದೆಹಲಿಗೆ ಹೋಗುತ್ತಾರೆ. ಈ ವೇಳೆ ಪಕ್ಷದ ಮುಖ್ಯ ಕಚೇರಿಗೆ ಹೋಗಿ ರಾಜ್ಯ ಉಸ್ತುವಾರಿಯನ್ನು ಭೇಟಿ ಮಾಡುವುದು, ಸಾಧ್ಯವಾದರೆ ಅಧ್ಯಕ್ಷರ…
ಎರಡು ದಿನ ಸತತ ಉಪವಾಸದ ಕಾರಣ ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪ್ರತಾಪ್ ಬಿಗ್ ಬಾಸ್ ಗೆ ಮತ್ತೆ ಮರಳಿದ್ದಾರೆ. ಈ ಕಾರ್ಯಕ್ರಮದಿಂದ ಅವರ ಬಗ್ಗೆ ಜನರಿಗಿದ್ದ ಅಭಿಪ್ರಾಯ ಬದಲಾಗಿದ್ದಷ್ಟೇ ಅಲ್ಲ, ಅನೇಕ ಹೊಸ ಅಭಿಮಾನಿಗಳನ್ನೂ ಅವರು ಹೊಂದಿದಂತಾಗಿದೆ. ಈ ಬಾರಿಯ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ರ ಜನಪ್ರೀಯತೆ ಹೆಚ್ಚಿದ್ದು, ಅವರ ಅನೇಕ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ಜೊತೆಗೆ ಟ್ವಿಟರ್‌ಲ್ಲೂ ಅವರ ಹೆಸರು ಟ್ರೆಂಡ್ ಆಗುತ್ತಿದ್ದು, ʼwe love Drone Prathapʼ ಎಂಬ ಹ್ಯಾಶ್ ಟ್ಯಾಗ್ ಹರಿದಾಡುತ್ತಿದೆ. ಭಾರತದ ಟ್ರೆಂಡ್ ನಲ್ಲೂ ಅವರು ಕಾಣಿಸಿಕೊಂಡಿದ್ದಾರೆ. ಒಂದೆರಡು ವಾರಗಳಲ್ಲಿ ಅವರು ಎಲಿಮಿನೇಟ್ ಆಗಬಹುದೆಂಬ ನಿರೀಕ್ಷೆ ಸುಳ್ಳಾಗಿದ್ದು, ಈ ವಾರ ನಾಮಿನೇಷನ್ ಪಟ್ಟಿಯಲ್ಲಿರುವ ಅವರು ಉಳಿಯಬೇಕಾದರೆ ಹೆಚ್ಚು ಮತ ಪಡೆಯಬೇಕಾದ ಅನಿವಾರ್ಯತೆಯಿದೆ.
ಬೆಂಗಳೂರು, ಜನವರಿ 07: ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ಬಗ್ಗೆ ಚರ್ಚಿಸಿದರು. ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು. ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ , ಎಸ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು:- ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಬೇಡ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ X ಮಾಡಿರುವ ಅವರು,ಮುಸ್ಲಿಂ ಸಮುದಾಯಕ್ಕೆ 10 ಸಾವಿರ ಕೋಟಿ ರೂಪಾಯಿ ಘೋಷಣೆ ಮಾಡಿರುವ ಸಿದ್ದರಾಮಯ್ಯ(Siddaramaiah) ಸರ್ಕಾರ ಬರಗಾಲದಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಪರಿಹಾರವಾಗಿ ಒಟ್ಟು 105 ಕೋಟಿ ರೂ. ಬಿಡುಗಡೆ ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಕಾರಣವಾಗಿದೆ ಎಂದರು. ರಾಜಕೀಯ ಅಸ್ತಿತ್ವಕ್ಕಾಗಿ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡುತ್ತಿರುವುದಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತ್ಯುತ್ತರ ನೀಡಿದ ಬೊಮ್ಮಾಯಿ, ರೈತರ ಹಿತ ಕಾಯುವುದರಲ್ಲಿ ನನ್ನ ರಾಜಕೀಯ ಅಸ್ತಿತ್ವ ಇದೆ ಎಂದರು. ಮುಖ್ಯಮಂತ್ರಿಗಳೇ ತಾವು ಬಿಡುಗಡೆ ಮಾಡಿರುವ 105 ಕೋಟಿ ಎಷ್ಟು ಲಕ್ಷ ಜನ ರೈತರಿಗೆ ತಲುಪಲಿದೆ?ಅರೆಕಾಸಿನ ಮಜ್ಜಿಗೆಗೂ ಸಾಲುವುದಿಲ್ಲ. ಅಗಾಧ ಪ್ರಮಾಣದ ಬರ ಮತ್ತು ತಾವು ಬಿಡುಗಡೆ ಮಾಡಿರುವ ಹಣವನ್ನು ನೋಡಿದರೆ ರೈತರಿಗೆ ಚಿಲ್ಲರೆ ಕಾಸಿನ ಭಿಕ್ಷೆ ಕೊಟ್ಟಂತೆ ಕಾಣುತ್ತದೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. NDRF ಮಾರ್ಗಸೂಚಿ…
ಮೈಸೂರು:- ಬಿಕೆ ಹರಿಪ್ರಸಾದ್ ರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿ.ಕೆ.ಹರಿಪ್ರಸಾದ್ ಬಂಧಿಸಿ ಮಂಪರು ಪರೀಕ್ಷೆ ಮಾಡಬೇಕು. ಮುಖ್ಯಮಂತ್ರಿಗಳು ತಕ್ಷಣ ಈ ನಿರ್ಧಾರವನ್ನು ಕೈಗೊಳ್ಳಬೇಕು ಎಂದರು. ಈ ಸರ್ಕಾರ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಚಿವರು, ಶಾಸಕರು ಸಮಾಜ ಒಡೆಯುವ ಕೆಲಸ ಮಾಡುತ್ತಿವೆ. ಆಡಳಿತ ಪಕ್ಷದಿಂದ ರಾಜ್ಯದಲ್ಲಿ ಅಶಾಂತಿ ಉಂಟಾಗಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಡಿ.ಜೆ. ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ಕೇಸ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಹಿಂದೂ ಕಾರ್ಯಕರ್ತರನ್ನು ಬೆದರಿಸುವ ಕೆಲಸವಾಗುತ್ತಿದೆ. ಮತ್ತೊಂದೆಡೆ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸ. ಹಿಂದೂ ಕಾರ್ಯಕರ್ತರನ್ನು ಅರೆಸ್ಟ್ ಮಾಡುವುದು. ಠಾಣೆಗೆ ಬೆಂಕಿ ಹಚ್ಚಿದವರನ್ನ ಅಮಾಯಕರು ಅನ್ನೋದು ಇದು ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ. ಇದನ್ನ ನಾವು ಖಂಡಿಸುತ್ತೇವೆ ಎಂದು ಕಿಡಿಕಾರಿದ್ದಾರೆ. ಕೆಜೆ ಹಳ್ಳಿ, ಡಿಜೆ ಹಳ್ಳಿ ಆರೋಪಿಗಳ ರಕ್ಷಣೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಇದು ತುಷ್ಟೀಕರಣ…
ಬಳ್ಳಾರಿ: ಯುವಜನರ ಮತ್ತು ಕ್ರೀಡಾಪಟುಗಳ ಬೆಳವಣಿಗೆಗೆ ಎಲ್ಲಾ ರೀತಿಯ ಬೆಂಬಲ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಯುವಜನ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಹೇಳಿದರು. ಎಂದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ನಲ್ಲಚೆರುವು ಪ್ರದೇಶದ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನೇತೃತ್ವದ ಸರ್ಕಾರವು, ಯುವಜನರಿಗೆ ಮತ್ತು ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸುವ ಕೆಲಸ ಮಾಡುತ್ತಿದೆ. ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರತಿಯೊಂದು ಇಲಾಖೆಗಳಲ್ಲಿ ಶೇ.02 ರಷ್ಟು ಉದ್ಯೋಗ ಮೀಸಲಾತಿ ಕಲ್ಪಿಸಲು ನಿರ್ಧಾರ ಕೈಗೊಳ್ಳುತ್ತಿದೆ ಎಂದರು. ಜಿಲ್ಲೆಯಲ್ಲಿ ಮಾದರಿ ಕ್ರೀಡಾ ವಸತಿ ನಿಲಯ ನಿರ್ಮಾಣ: ರಾಜ್ಯದಲ್ಲಿಯೇ ಅತ್ಯಂತ ಮಾದರಿಯಾದ ಕ್ರೀಡಾ ವಸತಿ ನಿಲಯವನ್ನು ಬಳ್ಳಾರಿಯಲ್ಲಿ ನಿರ್ಮಿಸಲಾಗುವುದು. ಈ ಮೂಲಕ…
ಬೆಂಗಳೂರು:- ಕರವೇ ನಾರಾಯಣ ಸೇರಿ ಬಂಧನಕ್ಕೊಳಗಾಗಿದ್ದ 29 ಕರವೇ ಕಾರ್ಯಕರ್ತರನ್ನು ರಿಲೀಸ್ ಮಾಡಲಾಗಿದೆ. ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಬಿರಾದಾರ್ ದೇವೇಂದ್ರಪ್ಪ ಅವರಿದ್ದ ಪೀಠ, ನಾರಾಯಣಗೌಡ ಮತ್ತು ಇತರೆ 29 ಕಾರ್ಯಕರ್ತರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ನಾಮಫಲಕ ಧ್ವಂಸ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಕರವೇ ಬೆಂಗಳೂರು ನಗರದ ಯುವ ಘಟಕದ ಅಧ್ಯಕ್ಷ ಕಾರ್ತಿಕ್ ಗೌಡ, ಕಾರ್ಯಕರ್ತರಾದ ಶರತ್, ಲೋಕೇಶ್ ಗೌಡ, ಹೇಮಂತ್ ಅವರಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಬಿಡುಗಡೆಗೊಂಡ ಕಾರ್ಯಕರ್ತರನ್ನು ಹಾರ ಹಾಕಿ ಪಟಾಕಿ ಸಿಡಿಸಿ ಕರವೇ ಕಾರ್ಯಕರ್ತರು ಬರಮಾಡಿಕೊಂಡರು.
ಬೆಂಗಳೂರು:- ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಪರಾಧ ಪ್ರಕರಣ ಕಡಿಮೆ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮನ್ನು ಭೇಟಿಯಾದ ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ʼನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಿದೆ. ಸಂಪೂರ್ಣವಾಗಿ ಅಪರಾಧ ನಿರ್ಮೂಲನೆ ಮಾಡಲಾಗದಿದ್ದರೂ, ಕಡಿಮೆಗೊಳಿಸಲು ಸಾಧ್ಯವಿದೆ. ತಡೆಯಲು ಸಾಧ್ಯವಿರುವ ಅಪರಾಧಗಳನ್ನು ತಡೆಗಟ್ಟಲು ಪೊಲೀಸರು ಹೆಚ್ಚಿನ ಆದ್ಯತೆ ನೀಡಬೇಕುʼ ಎಂದು ತಿಳಿಸಿದರು. ನಗರದಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟುವಂತೆ ಸೂಚನೆ ನೀಡಿದ ಮುಖ್ಯಮಂತ್ರಿಗಳು, ಸಮಾಜದ ಒಳಿತಿಗಾಗಿ ಡ್ರಗ್ಸ್ ಮಾಫಿಯಾವನ್ನು ಮಟ್ಟಹಾಕುವ ಬಗ್ಗೆ ಎಲ್ಲ ಹಂತದ ಪೊಲೀಸ್ ಅಧಿಕಾರಿಗಳು ತೀರ್ಮಾನ ಕೈಗೊಂಡು ಅನುಷ್ಠಾನಗೊಳಿಸಬೇಕು. ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂಟಿಯಾಗಿ ಜೀವನ ಮಾಡುವವರನ್ನು ಗುರುತಿಸಿ, ಅವರ ರಕ್ಷಣೆಗೆ ಆದ್ಯತೆ ನೀಡಬೇಕು ಹಾಗೂ ಪೊಲೀಸ್ ಬೀಟ್ ವ್ಯವಸ್ಥೆ ಬಲಪಡಿಸಬೇಕು ಎಂದು ಸೂಚಿಸಿದರು.
ಬೆಂಗಳೂರು:- ಜಾಮೀನು ಪಡೆದ್ರೂ ಕರವೇ ಅಧ್ಯಕ್ಷ ನಾರಾಯಣಗೌಡಗೆ ಸಂಕಷ್ಟ ಮಾತ್ರ ತಪ್ಪಿಲ್ಲ. ಹೀಗಾಗಿ ಮತ್ತೆ ವಶಕ್ಕೆ ಪಡೆಯಲು ಪೊಲೀಸ್ ಚಿಂತನೆ ನಡೆಸಿದ್ದಾರೆ. ಆಂಗ್ಲ ನಾಮಫಲಕ ವಿರುದ್ಧ ಹೋರಾಟ ಮಾಡಿದ್ದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಇನ್ನೂ ಬಿಡುಗಡೆ ಬೆನ್ನಲ್ಲೇ ಹಳೇ ಪ್ರಕರಣಗಳ ಸಂಬಂಧ ವಾರಂಟ್ ಮೇಲೆ ಮತ್ತೆ ಕಸ್ಟಡಿಗೆ ಪಡೆಯಲು ಕುಮಾರಸ್ವಾಮಿಲೇಔಟ್, ಹಲಸೂರು ಗೇಟ್ ಠಾಣೆ ಪೊಲೀಸರಿಂದ ಸಿದ್ಧತೆ ಮಾಡಲಾಗುತ್ತಿದೆ. ಹಿರಿಯ ಅಧಿಕಾರಿಗಳ ಸೂಚನೆಯಂತೆ ನಾರಾಯಣಗೌಡ ವಿರುದ್ಧದ ಹಳೇ ಕೇಸ್ಗಳನ್ನು ಪೊಲೀಸರು ಕೆದಕುತ್ತಿದ್ದಾರೆ. ಬೆಂಗಳೂರಿನ ಎಲ್ಲಾ ಠಾಣೆಗಳ ಕೇಸ್ ರೀಓಪನ್ ಮಾಡಿ ನಾರಾಯಣಗೌಡನನ್ನು ವಶಕ್ಕೆ ಪಡೆಯಲು ಪೊಲೀಸರು ಚಿಂತನೆ ನಡೆಸುತ್ತಿದ್ದಾರೆ. 2017ರಲ್ಲಿ ಎನ್ಡಿಎಂಎ ಆಯಕ್ಟ್ನಡಿ ಹಲಸೂರು ಗೇಟ್ ಠಾಣೆಯಲ್ಲಿ ಒಂದು ಪ್ರಕರಣ, ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದ್ದವು. ಈ ಕೇಸ್ ಸಂಬಂಧ ನಾರಾಯಣಗೌಡ ವಿರುದ್ಧ NBW ಜಾರಿ ಮಾಡಲಾಗಿತ್ತು. ಇವೆರಡು ಕೇಸ್‌ಗಳ ಸಂಬಂಧ ವಾರಂಟ್ ಮೇಲೆ ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.