ನವದೆಹಲಿ: ಜನವರಿ 22ರಂದು ರಾಮನೂರಿನಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಈ ದಿನಕ್ಕಾಗಿ ದೇಶಾದ್ಯಂತ ಜನ ತುದಿಗಾಲಲ್ಲಿ ಕಾಯುತ್ತಿದ್ದಾರೆ. ಅಲ್ಲದೆ ಈ ದಿನ ರಜೆ ನೀಡಬೇಕು ಎಂದು ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದವು. ಇದೀಗ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅರ್ಧ ದಿನ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ನೀಡಲಾಗುವುದು. ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. https://ainlivenews.com/a-huge-kadai-is-ready-to-make-ram-halwa-do-you-know-what-are-its-special-features/ ಈ ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರು ಕೂಡ ಭಾಗವಹಿಸಬೇಕು ಎಂಬ ಕಾರಣಕ್ಕೆ ಭಾರತದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳನ್ನು ಅರ್ಧ ರಜೆ ನೀಡಲಾಗುವುದು ಎಂದು ಎಲ್ಲಾ ಕೇಂದ್ರ ಸರ್ಕಾರದ ಸಚಿವಾಲಯಗಳು / ಇಲಾಖೆಗಳಿಗೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಜನವರಿ 22ರಂದು ಮಧ್ಯಾಹ್ನ 12.30ಕ್ಕೆ, ರಾಮ ಮಂದಿರದಲ್ಲಿ ರಾಮ ಲಲ್ಲಾನ…
Author: AIN Author
ಬೆಂಗಳೂರು: ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಮಾಜಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ ಎಂದಿದ್ದಾರೆ. ನವದೆಹಲಿಯಲ್ಲಿ ಇಂದು ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ನಾನು ಮಂತ್ರಿಯಾಗುತ್ತೇನೆ ಎನ್ನುವ ಸುದ್ದಿ ಯಾವ ಮೂಲಗಳಿಂದ ಅಷ್ಟು ಪ್ರಾಮುಖ್ಯತೆ ಪಡೆಯಿತೋ ಎನ್ನುವುದು ನನಗೆ ಗೊತ್ತಿಲ್ಲ. ಅದು ಎಲ್ಲಿಂದ ಬಂದಿತು, ಹುಟ್ಟಿತು ಎನ್ನವುದೂ ನನಗೆ ತಿಳಿದಿಲ್ಲ. ಮಾಧ್ಯಮಗಳ ಮೂಲಕವೇ ನನಗೆ ಆ ವಿಷಯ ಗೊತ್ತಾಯಿತು ಎಂದು ಹೇಳಿದರು. ಚುನಾವಣೆ ಹತ್ತಿರದಲ್ಲಿ ಇದೆ. ಎರಡು ತಿಂಗಳಷ್ಟೇ ಸಮಯ ಉಳಿದಿದೆ. ಈಗ ನಾನು ಮಂತ್ರಿಯಾಗಿ ಮಾಡುವುದು ಏನಿದೆ? ಇಷ್ಟು ಅಲ್ಪ ಅವಧಿಯಲ್ಲಿ ರಾಜ್ಯಕ್ಕೆ, ರಾಷ್ಟ್ರಕ್ಕೆ ನಾನು ಏನು ಕೆಲಸ ಮಾಡಲು ಸಾಧ್ಯ? ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದ ಮೇಲೆ ಏನನ್ನೂ ಮಾಡಲು ಸಾಧ್ಯವಿಲ್ಲ, ಅದರಿಂದ ಉಪಯೋಗವೂ ಇಲ್ಲ. ಯಾವ ಕಾರಣಕ್ಕೆ ಆ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ನನಗೆ ಅರ್ಥವಾಗುತ್ತಿಲ್ಲ ಎಂದು…
ಬೆಳಗಾವಿ: ಕಾಂಗ್ರೆಸ್ನವರು ಬಿಜೆಪಿಯಿಂದ ಸಭ್ಯತೆ ಕಲಿಯುವ ಅವಶ್ಯಕತೆ ಇಲ್ಲ ಎಂದು ಮಾಜಿ ಸಚಿವ ಹೆಚ್ ಎಂ ರೇವಣ್ಣ ಹೇಳಿದ್ದಾರೆ. ಕಾಂಗ್ರೆಸ್ನವರು ಸಭ್ಯತೆ ಕಲಿಯಲಿ ಎಂಬ ಸಂಸದ ಅನಂತಕುಮಾರ ಹೆಗಡೆ ಹೇಳಿಕೆ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘‘ಇದೇನು ಮೊದಲಲ್ಲ. ಈ ರಾಷ್ಟ್ರದಲ್ಲಿ ಅಂಬೇಡ್ಕರ್ ಅವರ ಸಂವಿಧಾನವನ್ನು ನಾವೆಲ್ಲರೂ ಅಪ್ಪಿ, ಒಪ್ಪಿ ಬಾಳುತ್ತಿದ್ದೇವೆ. ಆದರೆ, ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೇಳಿದ್ದ ಆ ವ್ಯಕ್ತಿ ಸಂಸ್ಕಾರವಂತರಾಗಿ ಮಾತನಾಡುತ್ತಿದ್ದಾರೆ. ಈ ವಿಚಾರದಲ್ಲಿ ಬಿಜೆಪಿಯವರು ಎಷ್ಟು ಜಾಣರು ಎಂದರೆ ಒಳ್ಳೆಯ ಮಗು ಹುಟ್ಟಿದರೆ ನಮ್ಮದು, ಕೆಟ್ಟ ಮುಗು ಹುಟ್ಟಿದರೆ ಬೀದಿಯದ್ದು ಎನ್ನುತ್ತಾರೆ‘‘ ಎಂದು ಲೇವಡಿ ಮಾಡಿದರು. ಟೀಕೆ ಮಾಡಲು ಇವರಿಗೆ ಒಳ್ಳೆಯ ಪದಗಳೇ ಸಿಗುವುದಿಲ್ಲ. ಹಿಂದೆ ಜೆ ಎಚ್ ಪಟೇಲರು ಸೇರಿ ಅನೇಕ ರಾಜಕಾರಣಿಗಳು ಬಹಳ ತೀಕ್ಷ್ಣವಾಗಿ ಟೀಕೆ ಮಾಡುತ್ತಿದ್ದರು. ಆದರೆ, ಬಿಜೆಪಿಯವರಿಗೆ ಪದಗಳು ಸಿಗುವುದಿಲ್ಲವೇ? ಈ ರೀತಿ ಮಾತಾಡುವುದು ಸಾರ್ವಜನಿಕವಾಗಿ ಒಳ್ಳೆಯದಲ್ಲ. https://ainlivenews.com/trust-has-been-betrayed-actor-vasishtha-simha-thundered-against-the-director/ ಬಿಜೆಪಿಯವರು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುತ್ತಾರೆ.…
ಬೆಂಗಳೂರು: ದೇಶದೆಲ್ಲೆಡೆ ಅಯೋಧ್ಯೆ ರಾಮಮಂದಿರದಲ್ಲಿನ (Ayodhya Ram Mandir) ಪ್ರಾಣ ಪ್ರತಿಷ್ಠೆ ಸಮಾರಂಭದ ಸಂಭ್ರಮ ಮನೆ ಮಾಡಿದೆ. ಎಲ್ಲೆಲ್ಲೂ ಶ್ರೀರಾಮ ಜಪ, ಭಜನೆ (Ram Bhajan) ಮೊಳಗುತ್ತಿದೆ. ದೇಶದ ಕೋಟ್ಯಂತರ ಭಾರತೀಯ ಶ್ರೀರಾಮನ ಸ್ಮರಿಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ, ಬೆಂಗಳೂರಿನಿಂದ ಅಯೋಧ್ಯೆಗೆ (Bengaluru-Ayodhya Flight) ಹೊರಟಿದ್ದ ಭಕ್ತರ ತಂಡವೊಂದು ವಿಮಾನದಲ್ಲಿ ರಾಮಜಪ ಮಾಡಿ ಗಮನ ಸೆಳೆಯಿತು. ಬೆಂಗಳೂರು-ಅಯೋಧ್ಯೆ ಏರ್ ಇಂಡಿಯಾ ವಿಮಾನದಲ್ಲಿ ರಾಮಜಪ, ಭಜನೆ ಕೇಳಿಬಂತು. ವಿಮಾನ ನಿಲ್ದಾಣದ ಬೋರ್ಡಿಂಗ್ ಗೇಟಲ್ಲಿ ಭಕ್ತರು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಾರೆ. ಅಲ್ಲದೇ ರಾಮಭಜನೆ ಮಾಡುತ್ತಾ ವಿಮಾನ ಏರಿದ ದೃಶ್ಯಗಳ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಢಕ್ಕೆ ಭಾರಿಸುತ್ತ, ಕಂಸಾಳೆ ಸದ್ದು ಮಾಡುತ್ತ, ‘ಶ್ರೀರಾಮ.. ಜಯ ರಾಮ.. ಜಯ ಜಯ ರಾಮ’ ಎಂದು ಭಜಿಸುತ್ತಾ ಭಕ್ತರು ವಿಮಾನ ಏರಿದ್ದಾರೆ. ಮತ್ತೆ ಒಂದು ಕಡೆ ನಿಂತು ‘ಭೋಲೊ ಭಾರತ್ ಮಾತಾಕಿ’, ‘ರಾಮಚಂದ್ರ ಮಹಾರಾಜ್‌ಕೀ’, ‘ಅಯೋಧ್ಯಾ ವಾಸಿಕೀ’ ಜೈ ಎಂದು ಘೋಷಣೆ ಕೂಗಿದ್ದಾರೆ.
ಬೆಂಗಳೂರು: 10 ಯುನಿಟ್ ಹೆಚ್ಚುವರಿ ವಿದ್ಯುತ್ ನೀಡುವ ವಿಚಾರ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, 200 ಯುನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ವಿ. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ಕೊಡಲಾಗಿತ್ತು ಎಂದರು 20,30,40 ಯುನಿಟ್ ಬಳಕೆ ಮಾಡೋ ಗ್ರಾಹಕರಿಗೆ 10% ಹೆಚ್ಚುವರಿ ಯುನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯುನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ. ಮುಂದಿನ ತಿಂಗಳ ಬಿಲ್ ನಿಂದಲೇ ಇದನ್ನ ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ. (ಉದಾಹರಣೆ- 20 ಯುನಿಟ್ ವಿದ್ಯುತ್ ಬಳಕೆ ಮಾಡೋ ಗ್ರಾಹಕನಿಗೆ 10% ಅಂದರೆ 2 ಯುನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯುನಿಟ್ ಕೊಡುವುದರಿಂದ 20+10 ಸೇರಿ 30…
ಅಯೋಧ್ಯಾ ಶ್ರೀರಾಮ ಮಂದಿರ (Shreerama Mandir) ಉದ್ಘಾಟನೆಯನ್ನು ನೋಡಲು ಇಡೀ ದೇಶವೇ ಎದುರು ನೋಡುತ್ತಿದೆ. ಈ ವೇಳೆ, ಜ.22ರಂದು ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ರಾಮ ನಾಮ ಭಜನೆ ಮಾಡಿ ಎಂದು ವಿಡಿಯೋ ಸಂದೇಶ ನೀಡಿದ್ದ ಖ್ಯಾತ ಹಿನ್ನೆಲೆ ಗಾಯಕಿ, ರಾಷ್ಟ್ರ ಪ್ರಶಸ್ತಿ ವಿಜೇತರು ಕೆ.ಎಸ್. ಚಿತ್ರಾ (K.s Chithra) ಅವರ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಪರ ಮತ್ತು ವಿರೋಧದ ಚರ್ಚೆ ಶುರುವಾಗಿದೆ. ಗಾಯಕಿ ಚಿತ್ರಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪುಟ್ಟದೊಂದು ವಿಡಿಯೋ ಅಪ್‌ಡೇಟ್ ಮಾಡಿದ್ದರು. ಈ ವಿಡಿಯೋದಲ್ಲಿ ಚಿತ್ರಾ ಅವರು ಜನವರಿ 22ರಂದು ಮಧ್ಯಾಹ್ನ 12:20ಕ್ಕೆ ಎಲ್ಲರೂ ಶ್ರೀರಾಮ, ಜಯ ರಾಮ, ಜಯ ಜಯ ರಾಮ ಎಂಬ ಮಂತ್ರವನ್ನು ಭಜನೆ ಮಾಡುವಂತೆ ಮನವಿ ಮಾಡಿದ್ದರು ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗುವ ಹೊತ್ತಲ್ಲಿ ಎಲ್ಲರೂ ರಾಮ ನಾಮ ಭಜಿಸಿ ಧ್ಯಾನ ಮಾಡುವ ಮೂಲಕ ಭಗವಂತನ…
ತಮಗೆ ನಂಬಿಕೆ ದ್ರೋಹವಾಗಿದೆ. ಇನ್ಮುಂದೆ ಸಿನಿಮಾ ಒಪ್ಪಿಕೊಳ್ಳುವಾಗ ಅಗ್ರಿಮೆಂಟ್ ಕ್ಲಿಯರ್ ಆಗಿ ಮಾಡಿಕೊಳ್ಳಬೇಕು ಅನಿಸಿದೆ ಎಂದಿದ್ದಾರೆ ನಟ ವಸಿಷ್ಠ ಸಿಂಹ (Vasishtha Simha). ತಾವು ಇಷ್ಟಪಟ್ಟು ಮಾಡಿದ್ದ ಕಾಲಚಕ್ರ (Kalachakra) ಸಿನಿಮಾವನ್ನು ನಿರ್ದೇಶಕ ಸುಮಂತ್ ಕ್ರಾಂತಿ (Sumanth Kranti) ಯೂಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿದ್ದಾರಂತೆ. ಹೀಗಾಗಿ ಸಿಂಹಗೆ ಸಹಜವಾಗಿ ಬೇಸರವಾಗಿದೆ. ಒಂದು ಸಿನಿಮಾ ಮಾಡುವಾಗ ಎಲ್ಲರೂ ಕಷ್ಟ ಪಡುತ್ತಾರೆ. ಅದನ್ನು ತೆರೆಯ ಮೇಲೆ ನೋಡಲು ಇಷ್ಟ ಪಡುತ್ತಾರೆ. ಆದರೆ, ಕಾಲಚಕ್ರ ಸಿನಿಮಾ ಹಾಗಾಗಲಿಲ್ಲ. ಯಾರದೋ ಮೇಲಿನ ಕೋಪಕ್ಕೆ ನಿರ್ದೇಶಕರು ಎಲ್ಲರ ಕನಸು ನಾಶ ಮಾಡೋದು ಸರಿ ಅಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಕಾಲಚಕ್ರ ಸಿನಿಮಾದ ಬಗ್ಗೆ ಸಿಂಹಗೆ ಅತೀವ ನಿರೀಕ್ಷತೆ ಇತ್ತು. ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ ಎಂದು ಹಲವಾರು ಬಾರಿ ನಿರ್ದೇಶಕರೇ ಹೇಳಿಕೊಂಡಿದ್ದಾರೆ. ಆದರೆ, ಯೂಟ್ಯೂಬ್ ನಲ್ಲಿ ಹಾಕಿದ್ದು ಯಾಕೆ ಎನ್ನುವುದನ್ನು ಸಿಂಹ ಸ್ಪಷ್ಟ ಪಡಿಸಲಿಲ್ಲ. ಯಾರದೋ ಮೇಲಿನ ಕೋಪಕ್ಕೆ ಎಂದು ಹೇಳುವ ಮೂಲಕ ಚಿತ್ರತಂಡದಲ್ಲಿ ಯಾವುದೂ ಸರಿ…
ಮಲಯಾಳಂ ಖ್ಯಾತ ನಟ, ರಾಜ್ಯಸಭಾ ಮಾಜಿ ಸಂಸದ ಸುರೇಶ್ ಗೋಪಿ (Suresh Gopi) ಅವರ ಪುತ್ರಿ ಭಾಗ್ಯ ಸುರೇಶ್ (Bhagya Suresh) -ಶ್ರೇಯಸ್ ಮೋಹನ್ ವಿವಾಹಕ್ಕೆ (Marriage) ಪ್ರಧಾನಿ ನರೇಂದ್ರ ಮೋದಿ (Narendra Modi) ಸಾಕ್ಷಿಯಾಗಿದ್ದಾರೆ. ಅತ್ಯಂತ ಮಾದರಿಯಾಗಿ ನಡೆದ ಮದುವೆಯಲ್ಲಿ ಪಾಳ್ಗೊಂಡಿದ್ದ ಮೋದಿ, ವಧುವರರಿಗೆ ಶುಭ ಕೋರಿದರು. ಇದೇ ವೇಳೆ ದೇವಸ್ಥಾನದಲ್ಲಿ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ಉಳಿದ ಜೋಡಿಗೂ ಮೋದಿ ಶುಭ ಹಾರೈಸಿದರು ಗುರುವಾಯೂರ್ ಶ್ರೀಕೃಷ್ಣ ದೇಗುಲದಲ್ಲಿ ನಡೆದ ವಿವಾಹಕ್ಕೆ ಮಲಯಾಳಂ ಚಿತ್ರರಂಗದ ಗಣ್ಯರಾದ ಮೋಹನ್ ಲಾಲ್, ಮಮ್ಮುಟ್ಟಿ, ದಿಲೀಪ್, ಬಿಜು ಮೆನನ್, ಜಯರಾಂ, ಪಾರ್ವತಿ, ಖುಷ್ಬೂ, ಶಾಜಿ ಕೈಲಾಸ್, ಹರಿಹರನ್, ರಚನಾ ನಾರಾಯಣನ್ ಕುಟ್ಟಿ, ಸರಯೂ ಭಾಗಿ ಮೊದಲಾದವರು ಆಗಮಿಸಿದ್ದರು. ಸುರೇಶ್ ಗೋಪಿ ಮಲಯಾಳಂ ಸಿನಿಮಾ ರಂಗ ಕಂಡ ಅತ್ಯಂತ ಪ್ರತಿಭಾವಂತ ನಟ, ಅಲ್ಲದೇ ಮಾದರಿಯ ಬದುಕನ್ನು ನಡೆಸಿದವರು. ರಾಜಕಾರಣದಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
ಉಡುಪಿ: ಕೃಷ್ಣ ಮಠ ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡ ಕೇಂದ್ರ. ಪುತ್ತಿಗೆ ಮಠದ ಪರ್ಯಾಯದಲ್ಲಿ ಭಾಗಿಯಾಗಿರೋದು ಪುಣ್ಯದ ಕೆಲಸ ಎಂದು ವಿಧಾನಸಭೆ ಸಭಾಪತಿ ಯು.ಟಿ ಖಾದರ್ (UT Khader) ಹೇಳಿದರು. ಉಡುಪಿ (Udupi) ಕೃಷ್ಣ ಮಠದ ಪುತ್ತಿಗೆ ಪರ್ಯಾಯ ದರ್ಬಾರ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಧಾರ್ಮಿಕ ಕೇಂದ್ರಗಳಿಗೆ ಸಮಾಜವನ್ನು ತಿದ್ದುವ ಶಕ್ತಿಯಿದೆ. ಸಮಾಜ ಒಡೆದು ಹೋಗುವ ಸಂದರ್ಭದಲ್ಲಿ ಮಠಾಧೀಶರು ಜೋಡಿಸಬೇಕು. ಪುತ್ತಿಗೆ ಶ್ರೀಗಳು ಧಾರ್ಮಿಕವಾಗಿ ದೇಶ-ವಿದೇಶದಲ್ಲಿ ತೊಡಗಿಸಿಕೊಂಡವರು ಎಂದರು. https://ainlivenews.com/the-tomato-that-was-lost-in-space-has-finally-been-found/ ರಾಜ್ಯ, ದೇಶದಲ್ಲಿ ಸಾಮರಸ್ಯ ಬೆಳೆಯಲು ಮಠಗಳು ದಾರಿದೀಪವಾಗಬೇಕು. ಹಿಂದಿನಿಂದಲೂ ನಾನು ಕೃಷ್ಣ ಮಠಕ್ಕೆ ಸಂಬಂಧಪಟ್ಟ ಎಲ್ಲಾ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದೇನೆ. ಮಠ ಕೇವಲ ಧಾರ್ಮಿಕವಾಗಿ ಕಾರ್ಯಾಚರಿಸದೆ, ಶೈಕ್ಷಣಿಕ, ಸಾಮಾಜಿಕವಾಗಿ ಕೂಡಾ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಬಿಗ್ ಬಾಸ್ ಸ್ಪರ್ಧಿ ಹಾಗು ಹಾಸ್ಯ ನಟ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ಸುದೀಪ್ ಕುರಿತು ಹೇಳಿರುವ ಮಾತುಗಳು ಬಾರಿ ಚರ್ಚೆಗೆ ಗ್ರಾಸವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ಫ್ಯಾನ್ಸ್ ಆಕ್ರೋಶ ಹೊರ ಹಾಕಿದ್ದಾರೆ. ಈ ಹಿನ್ನೆಲೆ ಇದೀಗ ರಕ್ಷಕ್ ಬುಲೆಟ್ ಸುದೀಪ್ ಅಭಿಮಾನಿಗಳಿಗೆ ಕ್ಷಮೇ ಕೇಳಿದ್ದಾರೆ. ʻಬಿಗ್‌ಬಾಸ್ʼ ಕನ್ನಡ ಸೀಸನ್ 10ರಲ್ಲಿ ರಕ್ಷಕ್ ಬುಲೆಟ್ ಒಂದು ತಿಂಗಳ ಕಾಲ ಬಿಗ್‌ಬಾಸ್‌ನಲ್ಲಿದ್ದು ಬಳಿಕ ಎಲಿಮಿನೇಟ್ ಆಗಿ ಹೊರಬಂದಿದ್ದರು. ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ ʻʻಸುದೀಪಣ್ಣ ಬಂದ ಬಳಿಕ, ದೇವರು ನಿಂತಿದ್ದಾರೆ. ನಾವೆಲ್ಲ ಭಕ್ತಾದಿಗಳು. ಅವರು ಹೆಂಗೆ ವರ ಕೊಡ್ತಾರೋ, ಹಂಗೆ ತೆಗೋಬೇಕು ಅನ್ನೋ ಥರ ಎಲ್ಲರೂ ಇರ್ತಾರೆʼʼಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸುದೀಪ್ ಫ್ಯಾನ್ಸ್ ಕೂಡ ರಕ್ಷಕ್ ಅವರು ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು. ಅದರಂತೆ ಇದೀಗ ರಕ್ಷಕ್ ಕ್ಷಮೆ ಕೇಳಿದ್ದಾರೆ. ಈ ಕುರಿತು ವಿಡಿಯೊ ಒಂದನ್ನು ಮಾಡಿ ಪ್ರತಿಕ್ರಿಯಿಸಿರುವ ರಕ್ಷಕ್, ಎರಡು ದಿನಗಳಿಂದ ಒಂದು ವಿಡಿಯೊ ಹರಿದಾಡ್ತಿದೆ.…