ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ತಾಯಿ ಸರಸ್ವತಿ ಕಿರವೆ(27), ದೀಪಿಕಾ(7), ರೀತಿಕಾ(4) ಮೃತರು.ತಾಯಿ ಸರಸ್ವತಿ ಎರಡು ಮಕ್ಕಳನ್ನ ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 2016ರಲ್ಲಿ ಸಾಂಗ್ಲಿಯ ನಿತಿನ್ ಕಿರವೆ ಜೊತೆ ಮದುವೆ ಆಗಿತ್ತು. ಆದ್ರೆ, ಗಂಡನ ಕಿರುಕುಳ ತಾಳಲಾರದೆ ಸರಸ್ವತಿ ತವರು ಮನೆ ಸೇರಿದ್ದಳು. ಆದರೂ ಸಹ ಕೌಟುಂಬಿಕ ಸಮಸ್ಯೆಗಳಿಂದ ತೊಂದರೆ ಅನುಭವಿಸುತ್ತಿದ್ದ ಆಕೆ ಕೊನೆಗೆ ಸಾವೇ ದಾರಿಯೆಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಬಳಿಕ ಸೂಚನೆ ಮೇರೆಗೆ ಸ್ಥಳೀಯರು ಮೂರು ಮೃತದೇಹಗಳನ್ನು ಬಾವಿಯಿಂದ ಹೊರ ತೆಗೆದಿದ್ದಾರೆ. ಈ ಬಗ್ಗೆ ಹಾರೂಗೇರಿ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ಪೊಲೀಸರು ಮೃತ ಕುಟುಂಬಸ್ಥರ ವಿಚಾರಣೆ ನಡೆಸಿದ್ದಾರೆ.
Author: AIN Author
ಬೆಂಗಳೂರು: ಜನವರಿ 22ರಂದು ಅಯ್ಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಹಾಗು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆ ಪ್ರತಿಷ್ಠಾಪನಾ ಕಾರ್ಯಕ್ರಮವನ್ನ ಮಾಲ್ ಆಫ್ ಏಷ್ಯಾದಲ್ಲಿ LED ಮೂಲಕ ಪ್ರದರ್ಶಸುವಂತೆ ಹಿಂದೂ ಸಂಘಟನೆ ಮನವಿ ಮಾಡಿದೆ. ರಾಜ್ಯದ ಎಲ್ಲಾ ಹಿಂದೂಪರ ಸಂಘಟನೆಗಳ ಪರವಾಗಿ ರಾಷ್ಟ್ರ ರಕ್ಷಣಾ ಪಡೆಯ ಮುಖ್ಯಸ್ಥ ಪುನೀತ್ ಕೆರೆಹಳ್ಳಿ ಹಾಗೂ ಇತರರು ಇಂದು ಬೆಂಗಳೂರಿನ ಫೀನಿಕ್ಸ್ ಮಾಲ್ ಆಫ್ ಏಷಿಯಾದ ಆಡಳಿತ ಸಿಬ್ಬಂದಿಗೆ ಮನವಿಯೊಂದನ್ನು ಮಾಡಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಕ್ರಿಸ್ಮಸ್ ಆಚರಣೆ ಯನ್ನು ಮಾಲ್ ಆಫ್ ಏಷಿಯಾದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಗಿತ್ತು ಮಾಲ್ ನ ದೊಡ್ಡ ಪರದೆಗಳಲ್ಲಿ ಕ್ರಿಸ್ ಸಂಭ್ರಮ ರಾರಾಜಿಸಿತ್ತು, ಇದೀಗ ಅದೇ ಮಾದರಿಯಲ್ಲಿ ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದ ಚಿತ್ರಣವನ್ನು ಮಾಲ್ ನ ದೊಡ್ಡ ದೊಡ್ಡ ಪರದೆಗಳಲ್ಲಿ ಲೈವ್ ಪ್ರದರ್ಶನ ಮಾಡುವಂತೆ ಮನವಿ ಮಾಡಲಾಗಿದೆ. ಸದ್ಯ ಈ ಮನವಿಗೆ ಮಾಲ್ ನ ಆಡಳಿತ ಸಿಬ್ಬಂದಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ. ಕನ್ನಡ ನಾಮ…
ನವದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ (Ayodhya Ram Mandir) ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಈ ನಡುವೆ ಭಾರತೀಯ ವಕೀಲ ಸಂಘವು (Bar Council) ಮುಖ್ಯ ನ್ಯಾಯಮೂರ್ತಿಗಳಿಗೆ (Chief Justice) ಪತ್ರವೊಂದನ್ನು ಬರೆದಿದೆ. ಜನವರಿ 22 ರಂದು ರಜಾ ದಿನವನ್ನಾಗಿ ಘೋಷಣೆ ಮಾಡುವಂತೆ ಹಾಗೂ ತುರ್ತು ವಿಚಾರಣೆಯ ಅಗತ್ಯವಿರುವ ವಿಷಯಗಳನ್ನು ವಿಶೇಷ ವ್ಯವಸ್ಥೆಗಳ ಮೂಲಕ ಸರಿ ಹೊಂದಿಸಬಹುದು ಅಥವಾ ಮುಂದಿನ ಕೆಲಸದ ದಿನಕ್ಕೆ ಮುಂದೂಡಬಹುದು ಎಂದು ಪತ್ರ ಬರೆಯುವ ಮೂಲಕ ಮುಖ್ಯ ನ್ಯಾಯಮೂರ್ತಿಗಳ ಬಳಿ ವಕೀಲರ ಸಂಘ ಮನವಿ ಮಾಡಿಕೊಂಡಿದೆ. https://ainlivenews.com/the-tomato-that-was-lost-in-space-has-finally-been-found/ ಪತ್ರದಲ್ಲೇನಿದೆ..?: ನೀವು ರಜೆ ನೀಡಿದಲ್ಲಿ ದೇಶಾದ್ಯಂತದ ನ್ಯಾಯಾಧೀಶರು, ವಕೀಲರು ಮತ್ತು ನ್ಯಾಯಾಲಯದ ನೌಕರರು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಸಮಾರಂಭ ಹಾಗೂ ಇದರ ಸಂಬಂಧಿತ ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾಧ್ಯವಾಗಲಿದೆ. ಈ ಮನವಿಯನ್ನು ಅತ್ಯಂತ ಸಹಾನುಭೂತಿಯಿಂದ ಪರಿಗಣಿಸಿ ಐತಿಹಾಸಿಕ ಸಂದರ್ಭವನ್ನು ಜನರ ಭಾವನೆಗಳಿಗೆ ಅನುಗುಣವಾಗಿ ಆಚರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಕೀಲರ ಸಂಘವು ವಿನಂತಿಸಿಕೊಂಡಿದೆ. ಅಯೋಧ್ಯೆಯಲ್ಲಿ ಪ್ರಾಣ ಪ್ರತಿಷ್ಠಾ…
ಬಿಗ್ ಬಾಸ್ ಮನೆಯಲ್ಲಿ ಆಟ ಟ್ವಿಸ್ಟ್ ಮೇಲೆ ಟ್ವಿಸ್ಟ್ ತೆಗೆದುಕೊಳ್ತಿದೆ. ಬಂದ ಅತಿಥಿಗಳೆಲ್ಲಾ ಹೊರಗೆ ಹೋದ ಬಳಿಕ ಬಿಗ್ ಬಾಸ್ ಎಲಿಮಿನೇಷನ್ ಶಾಕ್ ಕೊಟ್ಟಿದ್ದಾರೆ. ಹೌದು, ಬಿಗ್‌ಬಾಸ್ ಮನೆಯಲ್ಲಿ ಶಾಕಿಂಗ್ ಎಲಿಮಿನೇಷನ್ ನಡೆದಿದೆ.‘ಬಿಗ್‌ಬಾಸ್ ಸೂಚಿಸಿದ್ದ ಸದಸ್ಯರು ಈ ಕೂಡಲೇ ಮುಖ್ಯಧ್ವಾರದಿಂದ ಹೊರಬರಬೇಕು’ ಹೀಗೆ ಬಿಗ್‌ಬಾಸ್ ಧ್ವನಿ ಮನೆಯೊಳಗೆ ಮೊಳಗುತ್ತಿದ್ದ ಹಾಗೆ ಸ್ಪರ್ದಿಗಳ ಮುಖದಲ್ಲಿ ಆತಂಕದ ಕಾರ್ಮೋಡ ಕವಿದಿದೆ. ಕಳೆದ ವಾರಾಂತ್ಯದಲ್ಲಿ ಹೋಲ್ಡ್‌ನಲ್ಲಿ ಇರಿಸಿದ್ದ ಎಲಿಮಿನೇಷನ್ ಪ್ರಕ್ರಿಯೆಗೆ ಈಗ ಇದ್ದಕ್ಕಿದ್ದಂತೆಯೇ ಬಿಗ್‌ಬಾಸ್ ಚಾಲನೆ ಕೊಟ್ಟಿದ್ದಾರೆ. ಈ ಹಂತದಲ್ಲಿ ಮನೆಯಿಂದ ಹೊರಹೋಗುತ್ತಿರುವ ಸ್ಪರ್ಧಿ ಯಾರು ಎಂಬುದು JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಜಾಹೀರಾಗಿದೆ. ಬಿಗ್‌ಬಾಸ್ ‘ತನಿಷಾ ಈ ಮನೆಯಲ್ಲಿ ನಿಮ್ಮ ಪಯಣ ಇಲ್ಲಿಗೆ ಮುಕ್ತಾಯವಾಗುತ್ತದೆ’ ಎಂಬ ಮಾತಿನೊಂದಿಗೆ ಮಿಡ್‌ವೀಕ್ ಎಲಿಮಿನೇಷನ್ ಸ್ಪೋಟಗೊಂಡಿದೆ. ತನಿಷಾ ಕುಪ್ಪಂಡ ಮನೆಯಿಂದ ಹೊರಬೀಳುತ್ತಿದ್ದಾರೆ.ಹಾಗಾದರೆ ಇವೆಲ್ಲವೂ ನಡೆದಿದ್ದು ಹೇಗೆ? ಮನೆಯ ಸದಸ್ಯರ ಪ್ರತಿಕ್ರಿಯೆ ಹೇಗಿತ್ತು? ಈ ಎಲ್ಲವನ್ನೂ ಈವತ್ತಿನ ಎಪಿಸೋಡಿನಲ್ಲಿ ವೀಕ್ಷಿಸಬಹುದು.
ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಎಸ್ ಐಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರತಿಭಟನೆಯಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಅನೇಕ ನಾಯಕರು ಹಾಗೂ ಜಿಲ್ಲಾ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹಾವೇರಿಯಲ್ಲಿ ನೈತಿಕ ಪೊಲಿಸ್ ಗಿರಿ ಮಾಡಿ ಗ್ಯಾಂಗ್ ರೇಪ್ ಮಾಡಿರುವ ಪ್ರಕರಣವನ್ನು ಪೊಲಿಸರು ಮುಚ್ಚಿ ಹಾಕುವ ಯತ್ನ ಮಾಡಿದ್ದರು. ಹಾವೇರಿ ಎಸ್ಪಿ, ಹೊಮ್‌ಮಿನಿಸ್ಟರ್ ಅದನ್ನು ಒಪ್ಪಿಕೊಳ್ಳಲು ಸಿದ್ದರಿರಲಿಲ್ಲ. ಆದರೆ, ಈಗ ಹಾನಗಲ್ ಪೊಲಿಸರನ್ನು ಅವರೇ ಅಮಾನತು ಮಾಡಿದ್ದಾರೆ. ಹೀಗಾಗಿ ಪೊಲಿಸರಿಂದ ಲೋಪವಾಗಿರುವುದನ್ನು ಒಪ್ಪಿಕೊಂಡಂತಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯಲ್ಲಿ ಕಾಪಾಡುವಲ್ಲಿ ರಾಜಕಾರಣ ಬಹಳ ಪಾತ್ರ ವಹಿಸುತ್ತಿದೆ. ಹಾನಗಲ್ ಪೊಲಿಸರು ಕಾನೂನು ಪ್ರಕಾರ ನಡೆದುಕೊಂಡಿಲ್ಲ. ಆ ಹೆಣ್ಣು ಮಗಳಿಗೆ ಸರಿಯಾದ ಚಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಸಿಎಂ ಕೂಡ…
ಶಿವಮೊಗ್ಗ: ಎಂಟು ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿಯೊಬ್ಬಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಾಲೂರು ಕೊಳಿಗೆ ಸಮೀಪ ದಾಸನಕೊಡಿಗೆಯಲ್ಲಿ ಘಟನೆ ನಡೆದಿದೆ. ತೀರ್ಥಹಳ್ಳಿ ತಾಲ್ಲೂಕು ನಾಲೂರು ಕೊಳಿಗೆ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದ್ದಿದು. ಮಂಗಳವಾರ ರಾತ್ರಿ ಘಟನೆ ಆಗಿಬಹುದು ಎನ್ನಲಾಗ್ತಿದೆ. ಮೃತ ಹುಡುಗಿ ಹೆಸರು ಶಮಿತಾ. ವಯಸ್ಸು 24 ಇವರ ಪತಿ ಸೋಮೇಶ್ವರ ಅಭಯಾರಣ್ಯ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ರಾತ್ರಿ ಪಾಳಿ ಇದ್ದಿದ್ದರಿಂದ ಕೆಲಸಕ್ಕೆ ಹೋಗಿದ್ದಾರೆ. ಆ ಬಳಿಕ ಶಮಿತ ಮನೆಯ ಉಪ್ಪರಿಗೆ ಮೇಲಿದ್ದ ಕೋಣೆಗೆ ಹೋಗಿ ಮಲಗಿದ್ದಾರೆ. ಬೆಳಗ್ಗೆ ಎಷ್ಟೊತ್ತಾದರೂ ರೂಮಿನಿಂದ ಹೊರಕ್ಕೆ ಬರದ ಕಾರಣ ಮನೆಯವರು ಬಾಗಿಲು ತಟ್ಟಿದ್ದಾರೆ. ಅನುಮಾನಗೊಂಡು ಕಿಟಕಿಯಲ್ಲಿ ಇಣಕಿದ್ದಾರೆ. ಆಗ ಶಮಿತರಾ ಮೃತದೇಹ ಕಂಡುಬಂದಿದೆ. https://ainlivenews.com/the-tomato-that-was-lost-in-space-has-finally-been-found/ ಪೊಲೀಸರಿಗೆ ವಿಷಯ ಮುಟ್ಟಿಸಿ ಸ್ಥಳೀಯರು ಮನೆಯ ಬಳಿ ಜಮಾಯಿಸಿದ್ದರು. ಮೃತಳ ಫೋಷಕರು ಬರುವರೆಗೂ ಕೋಣೆಯ ಬಾಗಿಲು ತೆಗೆದಿರಲಿಲ್ಲ. ಅಂತಿಮವಾಗಿ ಪಂಚರು ಹಾಗೂ ಪೋಷಕರ ಸಮ್ಮುಖದಲ್ಲಿ ಬಾಗಿಲು ಒಡೆದು ಶಮಿತಾರ ಮೃತದೇಹ ಸ್ಥಳಾಂತರ…
ಬೆಂಗಳೂರು: 1ನೇ ಬೆಂಗಳೂರು ಅಂತರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿಯಾಗಿದ್ದು ಸಿಎಂ ಸಿದ್ದರಾಮಯ್ಯ ಅವರು ಓಪನ್ ಚೆಸ್ ಪಂದ್ಯಾವಳಿ ಕಾರ್ಯಕ್ರಮ ಉದ್ಘಾಟಿಸಿದರು ನಗರದ ಕಂಠೀರವ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕಾರ್ಯಕ್ರಮವಾಗಿದ್ದು ಬೆಂಗಳೂರು ನಗರ ಜಿಲ್ಲಾ ಚದುರಂಗ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಇಂದಿನಿಂದ 1 ವಾರಗಳ ಕಾಲ ನಡೆಯಲಿರುವ ಓಪನ್ ಚೆಸ್ ಪಂದ್ಯಾವಳಿಯಾಗಿದ್ದು ಸಿಎಂ ಸಿದ್ದರಾಮಯ್ಯ ಅವರು ಚೆಸ್ ಆಟವಾಡಿದರು.
ವಿಜಯ ರಾಘವೇಂದ್ರ , ಭಾವನಾ ಮೆನನ್ ನಟನೆಯ “ಕೇಸ್ ಆಫ್ ಕೊಂಡಾಣ’ ಬಿಡುಗಡೆಗೆ ದಿನಗಣನೆಯಷ್ಟೇ ಬಾಕಿ ಇದೆ. ದೇವಿಪ್ರಸಾದ್ ಶೆಟ್ಟಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ‘ಸೀತಾರಾಮ್ ಬಿನೋಯ್’ ಎಂಬ ಚಿತ್ರ ಮಾಡಿದ್ದ ಇವರು ಈಗ ಹೈಪರ್ ಲಿಂಕ್ ಕಥೆ ಇರುವ ಇನ್ವೆಸ್ಟಿಗೇಷನ್ ಜಾನರ್‌ನ ಚಿತ್ರವನ್ನು ಮಾಡಿದ್ದಾರೆ. ಚಿತ್ರ ಜನವರಿ 26ರಂದು ತೆರೆಕಾಣಲಿದೆ. ಹೀಗಾಗಿ ಚಿತ್ರತಂಡ ಮಾಧ್ಯಮವರ ಎದುರು ಹಾಜರಾಗಿ ಮಾಹಿತಿ ಹಂಚಿಕೊಂಡಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್ ನಲ್ಲಿ ನಿನ್ನೆ ಕೇಸ್ ಆಫ್ ಕೊಂಡಾಣ ಸುದ್ದಿ ಗೋಷ್ಟಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಬರಹಗಾರರು ಹಾಗೂ ಸಂಭಾಷಣೆಗಾರರು ಆಗಿರುಗ ಜೋಗಿ, ಹೊಸ ಹುಡುಗರ ಜೊತೆ ನಮಗೆ ಕಲಿಯುವುದು ಇರುತ್ತದೆ. ಹೇಳಿದ ಕಥೆ ಬಹಳ ಚೆನ್ನಾಗಿತ್ತು. ಈ ಕಥೆ ನಡೆಯವುದು ಸಂಜೆ ಶುರುವಾಗಿ ರಾತ್ರಿ ನಡೆಯುತ್ತದೆ. ಬೆಳಗ್ಗೆ ಮುಗಿಯುತ್ತದೆ. ಕೊಂಡಾಣ ಇರುವುದು ದೇವಿಪ್ರಸಾದ್ ಮನಸ್ಸಿನಲ್ಲಿ. ಪ್ರತಿ ಪಾತ್ರ ದ್ರೋಹ ಮತ್ತು ದ್ರೋಹ ಕಂಡುಹಿಡಿಯುವ ಪಾತ್ರ. ಡೈಲಾಗ್ ರೈಟರ್ ಆಗಿ ನನ್ನ…
ದಕ್ಷಿಣದ ಹೆಸರಾಂತ ನಿರ್ದೇಶಕ ವೆಟ್ರಿಮಾರನ್ (Vetrimaran) ಅನ್ನಪೂರ್ಣಿ ಸಿನಿಮಾದ ಪರವಾಗಿ ಮಾತನಾಡಿದ್ದಾರೆ. ನಯನತಾರಾ (Nayantara) ನಟನೆಯ ಅನ್ನಪೂರ್ಣಿ ಸಿನಿಮಾದ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಅದನ್ನು ಓಟಿಟಿಯಿಂದ ತೆಗೆದು ಹಾಕಲಾಗಿತ್ತು. ಈ ಕ್ರಮವನ್ನು ಅವರು ವಿರೋಧಿಸಿದ್ದಾರೆ. ಸೆನ್ಸಾರ್ ಆದ ಮೇಲೂ ಈ ರೀತಿ ಒತ್ತಡ ಹಾಕುವುದು ಸರಿಯಾದದ್ದು ಅಲ್ಲವೆಂದು ಅವರು ಹೇಳಿದ್ದಾರೆ. ಅನ್ನಪೂರ್ಣಿ ಸಿನಿಮಾದಲ್ಲಿ ಶ್ರೀರಾಮನಿಗೆ ಹಾಗೂ ಹಿಂದೂ ಧರ್ಮಕ್ಕೆ ಧಕ್ಕೆ ಆಗುವಂತಹ ಸನ್ನಿವೇಶಗಳ ಇವೆ ಎನ್ನುವ ಕಾರಣಕ್ಕಾಗಿ ಹಲವಾರು ಜನರು ಆಕ್ರೋಶ ವ್ಯಕ್ತ ಪಡಿಸಿದ್ದರು. ಒಟಿಟಿಯಿಂದ ಚಿತ್ರವನ್ನು ಡಿಲಿಟ್ ಮಾಡಲಾಗಿತ್ತು. ನಂತರ ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಗೂ ನಟಿ ನಯನತಾರಾ ಅವರ ಮೇಲೂ ಪ್ರಕರಣ ದಾಖಲಾಗಿತ್ತು. ಮಧ್ಯ ಪ್ರದೇಶದ ಜಬಲ್ ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿವಾದ (Controversy) ಭುಗಿಲೇಳುತ್ತಿದ್ದಂತೆಯೇ ‘ಅನ್ನಪೂರ್ಣಿ‘(Annapoorani) ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು. ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಫಘಾನಿಸ್ತಾನ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ ಚುಟುಕು ಸ್ವರೂಪದಲ್ಲಿ ಮೊದಲ ಬಾರಿ ಗೋಲ್ಡನ್ ಡಕ್ ಔಟ್ ಆದ ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ, ಗಾಡ್ ಆಫ್ ಕ್ರಿಕೆಟ್ ಖ್ಯಾತಿಯ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಅನಗತ್ಯ ದಾಖಲೆ ಹೆಗಲಿಗೇರಿಸಿಕೊಂಡಿದ್ದಾರೆ. ಇಂಧೋರ್ ನ ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಕಮ್ ಬ್ಯಾಕ್ ಪಂದ್ಯದಲ್ಲಿ 5 ಬೌಂಡರಿ ಸಹಿತ 16 ಎಸೆತಗಳಲ್ಲಿ 29 ರನ್ ಗಳಿಸಿ ವಿರಾಟ್ ಕೊಹ್ಲಿ ಗಮನ ಸೆಳೆದಿದ್ದರು. ತನ್ನ ಎರಡನೇ ತವರು ಅಂಗಳವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 6 ರನ್ ಗಳಿಸಿ ಟಿ20 ಸ್ವರೂಪದಲ್ಲಿ 12000 ರನ್ ಗಳಿಸಿ ನೆರೆದಿರುವ ಅಭಿಮಾನಿಗಳನ್ನು ಸಂಭ್ರಮಿಸಬೇಕೆಂದು ಕೊಹ್ಲಿ ಲೆಕ್ಕಾಚಾರ ಹಾಕಿಕೊಂಡಿದ್ದರು. ಆದರೆ ಪಂದ್ಯದಲ್ಲಿ ತಾವು ಎದುರಿಸಿದ ಮೊದಲ ಎಸೆತದಲ್ಲೇ ಅಫ್ಘನ್ ಯುವ ವೇಗಿ ಫರೀದ್ ಅಹ್ಮದ್ ಎಸೆತದಲ್ಲಿ ಗೋಲ್ಡನ್ ಡಕ್ ಔಟ್ ಆಗಿ ನಿರಾಸೆ ಮೂಡಿಸಿದ್ದರು. ಆಧುನಿಕ ಕ್ರಿಕೆಟ್ ಜಗತ್ತಿನ ದಿಗ್ಗಜ ವಿರಾಟ್ ಕೊಹ್ಲಿ ಒಟ್ಟಾರೆ…