Author: AIN Author

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳು ಅಭಿರುಚಿಯ ಟೀಕೆಗಳನ್ನು ಮಾಡಿದ್ದ ರಾಜ್ಯ ಕಾಂಗ್ರೆಸ್ ಪಕ್ಷದ ವಿರುದ್ಧ ಜೆಡಿಎಸ್ ಪಕ್ಷ ವಾಗ್ದಾಳಿ ನಡೆಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಿಡಿ ಕಾರಿರುವ ಜೆಡಿಎಸ್; ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಕೊಳಕು ಮಂಡಲ ಕಾಂಗ್ರೆಸ್ ಪಕ್ಷಕ್ಕೆ ಅರ್ಜೆಂಟಾಗಿ ಜನರ ಗಮನ ಬೇರೆಡೆಗೆ ಸೆಳೆಯುವ ತುರ್ತು ಇತ್ತು. ಕಳೆದೊಂದು ವಾರದಿಂದ ಕುಮಾರಸ್ವಾಮಿ ಅವರು ನಡೆಸಿದ ಸರ್ಜಿಕಲ್ ಸ್ಟ್ರೈಕ್ʼಗೆ ಕೈ ಪಡೆ ಪತರಗುಟ್ಟಿ ಹೋಗಿತ್ತು. ಅವರ ಭಾನುವಾರದ ಮಾಧ್ಯಮಗೋಷ್ಠಿ ಒಂದರಿಂದಲೇ ಅದರ ನವರಂಧ್ರಗಳು ಆಸ್ಫೋಟಗೊಂಡಿವೆ ಎಂದು ಜೆಡಿಎಸ್ ಟಾಂಗ್ ಕೊಟ್ಟಿದೆ. ಶಿಖಂಡಿ ಸ್ಥಿತಿಯಲ್ಲಿ ಕಾಂಗ್ರೆಸ್: ಈಗ ಮಾರಿ ಉಳಿಸಿಕೊಳ್ಳಲು ಕರೆಂಟ್ ವೈರ್ ಮೊರೆ ಹೋಗಿದೆ ಕಾಂಗ್ರೆಸ್. ಗ್ಯಾರಂಟಿಗಳ ವೈಫಲ್ಯಕ್ಕೆ ದಿನ ಬೆಳಗಾದರೆ ಜನರಿಂದ ಕ್ಯಾಕರಿ ಉಗಿಸಿಕೊಳ್ಳುತ್ತಿರುವ ಆ ಪಕ್ಷ, ದಿಕ್ಕಿಲ್ಲದೆ ಅಪಾಯಕಾರಿ ಕರೆಂಟ್ ವೈರ್ ಹಿಡಿದುಬಿಟ್ಟಿದೆ. ದರಬೇಸಿ ಕಾಂಗ್ರೆಸ್ಸಿಗೆ ದಾರಿ ಕಾಣುತ್ತಿಲ್ಲ…

Read More

ಹುಬ್ಬಳ್ಳಿ: ರಾಜ್ಯದಲ್ಲಿಯೇ ಮೊದಲ ಬಾರಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾದ ಯುಪಿಐ ಪಾವತಿ ವ್ಯವಸ್ಥೆಗೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ಎಲ್ಲ ಬಸ್ ಗಳಿಗೂ ವಿಸ್ತರಿಸಲಾಗಿದ್ದು, ಶೀಘ್ರವಾಗಿ ಇನ್ನುಳಿದ ಎಲ್ಲಾ ಬಸ್ಸುಗಳಿಗೂ ವಿಸ್ತರಿಸಲಾಗುತ್ತದೆ ಎಂದು ವ್ಯವಸ್ಥಾಪಕ ನಿರ್ದೇಶಕ ಭರತ್ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಆರಾಮದಾಯಕ ಹಾಗೂ ಪ್ರಯಾಣಿಕ ಸ್ನೇಹಿಯಾಗಿಸುವ ನಿಟ್ಟಿನಲ್ಲಿ ಸಂಸ್ಥೆಯಲ್ಲಿ ಹಲವಾರು ಉಪಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನಗದು ರಹಿತ ವ್ಯವಹಾರಕ್ಕೆ ಉತ್ತೇಜನ ನೀಡುತ್ತಿವೆ‌. ಈ ಹಿನ್ನೆಲೆಯಲ್ಲಿ ಫೋನ್ ಪೇ ಕಂಪನಿಯ ಸಹಯೋಗದಲ್ಲಿ ಯುಪಿಐ ಮೂಲಕ ಹಣ ಸ್ವೀಕೃತಿ ವ್ಯವಸ್ಥೆಯನ್ನು ಹುಬ್ಬಳ್ಳಿ ಗ್ರಾಮಾಂತರ 3ನೇ ಘಟಕದ ಬಸ್ಸುಗಳಲ್ಲಿ ಸಪ್ಟೆಂಬರ್ 1ರಿಂದ ಪ್ರಾಯೋಗಿಕವಾಗಿ ಆರಂಭಿಸಲಾಗಿತ್ತು. ಈ ನೂತನ‌ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಿರ್ವಾಹಕರಿಗೆ ಪ್ರತ್ಯೇಕ ಸ್ಟ್ಯಾಟಿಕ್ ಕ್ಯೂ ಆರ್ ಕೋಡ್ ನೀಡಲಾಗಿದೆ. ನಿರ್ವಾಹಕರ ಟಿಕೆಟ್ ವಿತರಣೆ ಯಂತ್ರದಲ್ಲಿ ಅವಶ್ಯಕ ಮಾರ್ಪಾಡುಗಳನ್ನು ಮಾಡಲಾಗಿದೆ ಹಾಗೂ ನಿರ್ವಾಹರಿಗೆ…

Read More

ಕಲಬುರಗಿ: ಕಲಬುರಗಿಯಲ್ಲಿ ನಡೆದ KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಗೆ 9 ದಿನಗಳ ಕಾಲ CID ವಶಕ್ಕೆ ನೀಡಿ ಎರಡನೇ JMFC ನ್ಯಾಯಾಲಯ ಆದೇಶ ನೀಡಿದೆ.. ನಾಲ್ಕು ದಿನಗಳ ಜ್ಯೂಡಿಷಿಯಲ್ ಕಸ್ಟಡಿ ಅಂತ್ಯ ಹಿನ್ನಲೆ CID ಇವತ್ತು ಕೋರ್ಟಿಗೆ ಮನವಿ ಸಲ್ಲಿಸಿತ್ತು. ಮನವಿ ಪುರಸ್ಕರಿಸಿದ ನ್ಯಾಯಾಲಯ 9 ದಿನಗಳ ಕಾಲ CID ವಶಕ್ಕೆ ನೀಡಿದೆ.. ಹೀಗಾಗಿ RD ವಶಕ್ಕೆ ಪಡೆದ ಪೋಲೀಸರು CID ಕಚೇರಿಗೆ ಕರೆತಂದು ವಿಚಾರಣೆ ಶುರು ಮಾಡಿದ್ರು..

Read More

ತಮ್ಮ ಮನೆಯ ನಾಯಿಯು ಮಹಿಳೆಯೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್  ವಿಚಾರಣೆಗೆ ಹಾಜರಾದರು. ಪೊಲೀಸ್ ಕೇಳಿದ ಹಲವಾರು ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ‘ಘಟನೆ ನಡೆದಾಗ ನಾನು ಗುಜರಾತ್ ನಲ್ಲಿ ಶೂಟಿಂಗ್ ನಲ್ಲಿದ್ದೆ. ಹುಡುಗರಿಗೆ ಕರೆಕ್ಟಾಗಿ ನೋಡಿಕೊಳ್ಳುವಂತೆ ಹೇಳಿದ್ದೆ. ಕೇರ್ ಟೇಕರ್ ಗೆ ಸರಿಯಾಗಿ ನೋಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದೆ’ ಎಂದು ತಿಳಿಸಿದ್ದಾರೆ. ‘ಸೆಲೆಬ್ರಿಟಿಗಳ ಮನೆ ಬಳಿ ಸಾಕಷ್ಟು ಜನ ಬರ್ತಿರ್ತಾರೆ. ಹೀಗಾಗಿ ಅಕ್ಕಪಕ್ಕದ ಮನೆಗಳ ನಿವಾಸಿಗಳಿಗೆ ತೊಂದರೆಯಾಗುತ್ತೆ . ಯಾರೆ ಬಂದ್ರೂ ವಿಚಾರಿಸುವಂತೆ ನೋಡಿಕೊಳ್ಳುವಂತೆ ಹೇಳಿರುತ್ತೇನೆ. ಈ ಹಿನ್ನೆಲೆಯಲ್ಲಿ ಕಾರ್ ಪಾರ್ಕಿಂಗ್ ವಿಚಾರವಾಗಿ ಕೇಳಿದ್ದಾರೆ. ಎಚ್ಚರಿಕೆ ವಹಿಸಬೇಕಿತ್ತು ಅಂತಾ ಹುಡುಗರಿಗೆ ಹೇಳಿದ್ದೇನೆ. ಅಮಿತಾ ಜಿಂದಾಲ್ ಅವರಿಗೆ ಈ ರೀತಿಯಾದಾಗ ಅವರ ಆಸ್ಪತ್ರೆ ವೆಚ್ಚ ಭರಿಸುವಂತೆ ಹೇಳಿದ್ದೇನೆ. ಮುಂದೆ ಹೀಗಾಗದಂತೆ ಎಚ್ಚರಿಕೆ ವಹಿಸುತ್ತೇನೆ’ ಎಂದು ಮಾತುಗಳನ್ನು ದರ್ಶನ್ ದಾಖಲಿಸಿದ್ದಾರೆ. ಘಟನೆ ನಡೆದ ದಿನದಂದು ಸಿಸಿಟಿವಿ ವರ್ಕ್ ಆಗ್ತಿರಲಿಲ್ಲ. ಘಟನೆ ಆದ ಬಳಿಕ ಸಿಸಿಟಿವಿ ಮೈಂಟೇನ್ ಮಾಡುವಂತೆ ಹೇಳಿದ್ದೀನಿ ಎಂದೂ ಪೊಲೀಸರಿಗೆ ದರ್ಶನ್…

Read More

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರಿಗೆ ಚಿಗರಿ ಸೇವೆ ವರವಾಗಿದೆಯೋ ಅಥವಾ ಶಾಪವಾಗಿದೆಯೋ ಗೊತ್ತಿಲ್ಲ. ಆದರೆ ಜನರು ಮಾತ್ರ ಚಿಗರಿ ಸೇವೆ ಪಡೆಯುವುದಕ್ಕಿಂತ ಅವ್ಯವಸ್ಥೆಯಿಂದಲೇ ಹೈರಾಣಾಗಿದ್ದಾರೆ. ಹೌದು.. ಓವರ್ ಸ್ಪೀಡ್ ಡ್ರೈವಿಂಗ್ ಹಾಗೂ ಎಲ್ಲೆಂದರಲ್ಲಿ ಅವ್ಯವಸ್ಥೆಯಿಂದ ಇತರೇ ವಾಹನ ಸವಾರರಿಗೆ ಆತಂಕವನ್ನುಂಟು ಮಾಡಿರುವ ಚಿಗರಿ ಬಸ್ ಈಗ ಆಯಕಟ್ಟಿನ ಜಾಗೆಯಲ್ಲಿಯೇ ಕೆಟ್ಟುನಿಂತು ಸುಮಾರು ಮೂರು ಗಂಟೆಗಳ ಕಾಲ ತೆರವುಗೊಳ್ಳದೇ ಇರುವುದು ಜನರಲ್ಲಿ ಅಸಮಾಧಾನ ಉಂಟಾಗುವಂತೆ ಮಾಡಿದೆ.‌ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಹಾಗೂ ಜನನಿಬಿಡ ಪ್ರದೇಶದಲ್ಲಿ ಒಂದಾಗಿರುವ ಸಾಯಿಬಾಬಾ ಮಂದಿರದ ಮುಂದೆ ಚಿಗರಿ ಬಸ್ ಕೆಟ್ಟು ನಿಂತಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರು ಸುಸ್ತಾಗಿ ಹೋಗಿದ್ದಾರೆ. ಈಗಾಗಲೇ ಸ್ಮಾರ್ಟ್ ಸಿಟಿ ಕಾಮಗಾರಿಯಿಂದ ಇಕ್ಕಟ್ಟಾದ ಜಾಗೆಯಲ್ಲಿ ವಾಹನ ಸವಾರ ಕಷ್ಟಕರವಾಗಿದೆ. ಇಂತಹ ಪರಿಸ್ಥಿತಿ ನಡುವೆಯೂ ಮೂರು ಗಂಟೆಗೂ ಅಧಿಕ ಕಾಲ ಚಿಗರಿ ಬಸ್ ಸ್ಥಳಾಂತರ ಮಾಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಸಾಕಷ್ಟು ಸಾರ್ವಜನಿಕರ ದೂರವಾಣಿ ಮೂಲಕ ದೂರು ಸಲ್ಲಿಸಿದ ನಂತರವೇ ತೆರವು…

Read More

ಹಾವೇರಿ: ಬಿ.ವೈ ವಿಜಯೇಂದ್ರ ಬಿಜೆಪಿ ನೂತನ ರಾಜ್ಯಾದ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಹಾವೇರಿ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ವಿಜಯೇಂದ್ರ ಅಭಿಮಾನಿಗಳಿಂದ ಸಂಭ್ರಮಾಚರಣೆ ಮಾಡಲಾಯಿತು. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಜಿಲೆಬಿ ಹಾಗೂ ಪೇಡಾ ಹಂಚಿ ಸಂಭ್ರಮಾಚರಣೆ ಮಾಡಿದರು. ಪಟಾಕಿ ಹೊಡೆದು  ವಿಜಯೇಂದ್ರ ಪರ ಜೈಕಾರ ಕೂಗಿ ಕಾರ್ಯಕರ್ತರು ಸಂಭ್ರಮಿಸಿದರು.

Read More

ಬಾಲಿವುಡ್ ನ ಮತ್ತೊಂದು ಸಿನಿಮಾ ಎರಡೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದೆ. ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ದೀಪಾವಳಿ ದಿನದಂದು ಜಗತ್ತಿನಾದ್ಯಂತ ಬಿಡುಗಡೆ ಆಗಿದೆ. ಸಿನಿಮಾ ರಿಲೀಸ್ ಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಹಾಗಾಗಿ ಅಡ್ವಾನ್ಸ್ ಬುಕ್ಕಿಂಗ್ ನಲ್ಲೇ (Box Office) ದಾಖಲೆ ರೀತಿಯಲ್ಲಿ ಟಿಕೆಟ್ ಗಳು ಮಾರಾಟವಾಗಿದ್ದವು. ಜೊತೆಗೆ ಹಬ್ಬವೂ ಕೂಡಿ ಬಂದಿದ್ದರಿಂದ ಮೊದಲ ದಿನದ ಗಳಿಕೆ ಎಷ್ಟಾಗಿರಬಹುದು ಎನ್ನುವ ಚರ್ಚೆ ಶುರುವಾಗಿತ್ತು. ನಿರ್ಮಾಣ ಸಂಸ್ಥೆಯೇ ಪೋಸ್ಟರ್ ವೊಂದನ್ನು ಹಂಚಿಕೊಂಡಿದ್ದು, ಸಿನಿಮಾದ ಮೊದಲ ದಿನವೇ ಜಗತ್ತಿನಾದ್ಯಂತ 94 ಕೋಟಿ ರೂಪಾಯಿ ಕಮಾಯಿ ಮಾಡಿದೆ. ನಿನ್ನೆ ಕೂಡ ಸಾಕಷ್ಟು ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಹಾಗಾಗಿ ಎರಡು ದಿನದಲ್ಲಿ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದಂತಾಗಿದೆ.

Read More

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಮತ್ತೊಂದು ಡೀಪ್‌ಫೇಕ್ ವಿಡಿಯೋ ವೈರಲ್ ಆಗಿದೆ. ಈ ಹಿಂದೆಯೂ ಇವರ ಇಂಥದ್ದೇ ವಿಡಿಯೋ ಶೇರ್ ಆಗಿ ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಡಿಯೋ ಕುರಿತು ದೂರು ದಾಖಲಾಗಿದ್ದರೂ, ದುರುಳರು ಅಂಜದೇ ಮತ್ತೊಂದು  ಡೀಪ್‌ಫೇಕ್ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಕುರಿತು ಅನೇಕರು ವಿರೋಧ ವ್ಯಕ್ತ ಪಡಿಸಿದ್ದಾರೆ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ (Deepfake) ಎಐ-ರಚಿಸಿದ ವೀಡಿಯೋಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಳೆದ ಶುಕ್ರವಾರ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಶೇಷ ಸೆಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದರು. ದೆಹಲಿ ಪೊಲೀಸರು (Delhi Police) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. “ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವೀಡಿಯೋಗೆ ಸಂಬಂಧಿಸಿದಂತೆ, ಐಪಿಸಿಯ ಎಫ್‌ಐಆರ್ ಯು/ಎಸ್ 465 ಮತ್ತು 469, 1860 ಮತ್ತು ಐಟಿ ಆಕ್ಟ್, 2000 ರ ಸೆಕ್ಷನ್ 66 ಸಿ ಮತ್ತು…

Read More

ರಾಯಚೂರು: ಸಾಲಬಾಧೆ ತಾಳದೆ ತಾಲೂಕಿನ ಗೋನಾಳ ಗ್ರಾಮದ  ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರೈತ ಬಸವರಾಜ (55) ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿ ಆಗಿದ್ದು, https://ainlivenews.com/joint_pain_suprem_ray_treatment_reiki/ ಐದು ಎಕರೆ ಜಮೀನಿನಲ್ಲಿ ತೊಗರಿ ಬಿತ್ತನೆ ಮಾಡಿದ್ದ ರೈತ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ಸಾಲ ಬಾಧೆ ತಾಳಲಾರದೆ ಸೋಮವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Read More

ಬೆಂಗಳೂರು: ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್‌ ತೊರೆಯುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೀಗ, ಪಕ್ಷದಲ್ಲಿ ಪ್ರಬಲ ನಾಯಕರಾಗಿ ಗುರುತಿಸಿಕೊಂಡಿದ್ದ ಇಬ್ಬರು ಮಾಜಿ ಶಾಸಕರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದಾರೆ. ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿಸಿ ಗೌರಿಶಂಕರ್ ಮತ್ತು ಬೆಂಗಳೂರಿನ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್‌ಗೆ ಗುಡ್‌ಬೈ ಹೇಳಲಿದ್ದಾರೆ. ಇಬ್ಬರೂ ಬೆಂಗಳೂರಿನಲ್ಲಿ ಬುಧವಾರ ಕಾಂಗ್ರೆಸ್‌ ಸೇರಲಿದ್ದಾರೆ. ಈ ಇಬ್ಬರೂ ಸೇರ್ಪಡೆಯಾದರೆ ಕಾಂಗ್ರೆಸ್‌ಗೆ ಪ್ರಬಲ ನೆಲೆ ಇಲ್ಲದಿದ್ದ ಕ್ಷೇತ್ರಗಳಲ್ಲಿ ಬಲ ಬಂದಂತಾಗಲಿದೆ. ವಿಧಾನಸಭಾ ಚುನಾವಣೆಗೂ ಮುನ್ನವೇ ಹಲವಾರು ಹಾಲಿ-ಮಾಜಿ ಶಾಸಕರು ಕಾಂಗ್ರೆಸ್‌ನತ್ತ ಮುಖಮಾಡಿದ್ದರು. ಇಂತಹ ಪ್ರಹಸನಗಳ ನಡುವೆಯೂ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ, ಜೆಡಿಎಸ್ ತೊರೆಯುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಗೌರಿಶಂಕರ್ ಅವರು ಬಿಜೆಪಿ-ಜೆಡಿಎಸ್‌ ಮೈತ್ರಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ಮಂಜುನಾಥ್ ಅವರೂ ಕೂಡ ಹಿಂದೆ ಕಾಂಗ್ರೆಸ್‌ನಲ್ಲಿಯೇ ಇದ್ದರು. ಕಾಂಗ್ರೆಸ್‌ ಟಿಕೆಟ್ ಕೊಡಲಿಲ್ಲವೆಂದು ಜೆಡಿಎಸ್‌ ಸೇರಿದ್ದರು. ಈಗ ಬಿಜೆಪಿ ಜೊತೆಗಿನ…

Read More