Author: AIN Author

ಚಿಕ್ಕಬಳ್ಳಾಪುರ: ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಏಕಾಏಕಿಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಮುನ್ಸಿಪಾಲ್ ಕಾಲೇಜಿನ ಮುಂಭಾಗ ನಡೆದಿದೆ. ನಗರದ ಫರ್ಜಾನಾ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕರಾದ ಫರ್ಜಾನಾ ಕೆಲಸಕ್ಕೆ ತೆರಳಿದ್ದ ವೇಳೆ ಅವರ ಮಗ ರಫೀಕ್ (4) ಹಾಗೂ ಮಗಳು ಹರ್ಷಿಯಾ ಭಾನು (16) ಮನೆಯಲ್ಲಿದ್ದರು. ಈ ವೇಳೆ ಮನೆಯಿಂದ ಗ್ಯಾಸ್ ವಾಸನೆ ಬರುತ್ತಿದೆ ಎಂದು ಪಕ್ಕದ ಮನೆಯ ಹೇಮಾವತಿ (18) ಎಂಬಾಕೆ ಬಂದಿದ್ದಾಳೆ. ಈ ವೇಳೆ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು ಸ್ಫೋಟ ಸಂಭವಿಸಿದೆ. https://ainlivenews.com/joint_pain_suprem_ray_treatment_reiki/ ಘಟನೆಯಲ್ಲಿ ಮೂವರು ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರಿಗೂ 35 ರಿಂದ 40% ಸುಟ್ಟ ಗಾಯಗಳಾಗಿದ್ದು ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.  

Read More

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯದ ಟಾಸ್ ಈಗಾಗಲೇ ನಡೆದಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಉಭಯ ತಂಡಗಳು ಹೀಗಿವೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ. ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್. ನ್ಯೂಜಿಲೆಂಡ್ ತಂಡ: ಡೆವೊನ್ ಕಾನ್ವೇ, ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್ (ನಾಯಕ), ಡೇರಿಲ್ ಮಿಚೆಲ್, ಟಾಮ್ ಲೇಥಮ್, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್ಮನ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಲಾಕಿ ಫರ್ಗುಸನ್, ಟ್ರೆಂಟ್ ಬೌಲ್ಟ್.

Read More

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ವಿಜಯ ಶಕೆ ಆರಂಭವಾಗಿದೆ. ಬಿಜೆಪಿಯ ಯುವ ಅಧ್ಯಕ್ಷ ವಿಜಯೇಂದ್ರ (BY Vijayendra) ಮುಂದೆ ಸಾಲು ಸಾಲು ಸವಾಲುಗಳಿವೆ. ಲೋಕಸಭೆ ಚುನಾವಣಾ (Lok Sabha Election) ಟಾಸ್ಕ್ ರೀಚ್ ಆಗಲು ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯ ತಂತ್ರಗಳನ್ನು ಹೆಣೆದಿದ್ದಾರೆ.. ವಿಜಯೇಂದ್ರ ಎದುರು ಮುಳ್ಳಿನ ಹಾದಿ ಇದ್ದು ಸದ್ಯ ಈಗ ಬಿಜೆಪಿ (BJP) ಮನೆ ಸಮಸ್ಯೆಗಳ ಗೂಡಾಗಿದೆ. ಪಕ್ಷದ ಹೀನಾಯ ಸೋಲು, ಬಣ ಸಂಘರ್ಷ, ಒಗ್ಗಟ್ಟಿಲ್ಲ, ನಾಯಕತ್ವದ ಕೊರತೆ, ಸೊರಗಿದ ಪಕ್ಷ ಸಂಘಟನೆ ಇಂಥಹ ಸಂದರ್ಭದಲ್ಲಿ ಪಕ್ಷಕ್ಕೆ ನೂತನ ಸಾರಥಿಯಾಗಿ ವಿಜಯೇಂದ್ರ ಎಂಟ್ರಿಯಾಗಿದ್ದಾರೆ. ಇದೀಗ ವಿಜಯೇಂದ್ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದು, ಅವರ ಮುಂದೆ ದೊಡ್ಡ ಸವಾಲಗಳ ರಾಶಿಯೇ ಇದೆ. ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಪಕ್ಷವನ್ನು ಮೇಲೆತ್ತಬೇಕಿದೆ. ಮತ್ತೊಂದೆಡೆ ಸೋಲಿನಿಂದ ಹತಾಶೆಗೊಂಡು ಮನೆ ಸೇರಿರುವ ಕಾರ್ಯಕರ್ತರು, ಮುಖಂಡರಲ್ಲಿ ಉತ್ಸಹ ಮೂಡಿಸಿ ಮುನ್ನಲೆಗೆ ಕರೆದುಕೊಂಡು ಬರಬೇಕಿದೆ. ಅದರಲ್ಲೂ ಪ್ರಮುಖವಾಗಿ ಅಸಮಾಧಾನಗೊಂಡಿರುವ ಹಿರಿಯ ನಾಯಕರನ್ನು ಸಮಾಧಾನ ಮಾಡಬೇಕಿದೆ. ಹೀಗೆ ಹತ್ತು…

Read More

ಚಾಮರಾಜನಗರ: ಭಗವಾನ್ ಶ್ರೀ ಬಿರ್ಸಾಮುಂಡಾ ಜಯಂತಿ ಹಾಗೂ ಜನಜಾತೀಯ ಗೌರವ್ ದಿವಸ್ ರಾಜ್ಯ ಮಟ್ಟದ  ಕಾರ್ಯಕ್ರಮ ನಗರದಲ್ಲಿ  ಅದ್ದೂರಿಯಾಗಿ ನಡೆಯಿತು. ನಗರದ ಡಾ.ಬಿ.ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ  ನಡೆಯಿತು. ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಹಯೋಗದಲ್ಲಿ ಜಿಲ್ಲಾಡಳಿತ ಜಿಲ್ಲಾಪಂಚಾಯತ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್  ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಶಿಲ್ಪಾನಾಗ್ ಜಿಲ್ಲಾ ಎಸಪಿ ಪದ್ಮಿನಿಸಾಹೋ ಹಾಗೂ ಜಿಲ್ಲಾ ಹಾಗೂ ರಾಜ್ಯ ಮಟ್ಟದ ಬುಡಕಟ್ಟು ಸೋಲಿಗ ಅಭಿವೃದ್ದಿ ಸಂಘದ ಮುಖಂಡರು ಇದ್ರು.

Read More

ಬೆಂಗಳೂರು: ಸಿಎಂ ಸಿದ್ದರಾಮಯ್ಯ, DCM ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಮಾಜಿ ಶಾಸಕರಾದ ಮಂಜುನಾಥ್​, ಗೌರಿ ಶಂಕರ್​ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬೆಂಬಲಿಗರ ಜೊತೆ ಮಂಜುನಾಥ್​, ಗೌರಿಶಂಕರ್ ಕಾಂಗ್ರೆಸ್ ಸೇರಿದರು. ಗೌರಿಶಂಕರ್ ಸೇರ್ಪಡೆ ಕಾರ್ಯಕ್ರಮಕ್ಕೆ ತುಮಕೂರು ನಾಯಕರೇ ಗೈರಾಗಿದ್ದಾರೆ https://ainlivenews.com/joint_pain_suprem_ray_treatment_reiki/ ಸಿದ್ದರಾಮಯ್ಯ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದ ಮಾಜಿ ಶಾಸಕರಾದ ಗೌರಿ ಶಂಕರ್ ಮತ್ತು ಮಂಜುನಾಥ್ 2018ರಲ್ಲಿ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ಪ್ರಸಾದ್ ಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಜಿ ಶಾಸಕ ಗೌರಿ ಶಂಕರ್ ಜೊತೆಗೆ ನೂರಕ್ಕೂ ಹೆಚ್ಚು ಮಂದಿ ಮುಖಂಡರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಜೆಡಿಎಸ್ ವಕ್ತಾರ ಚರಣ್ ಗೌಡ ಸೇರಿದಂತೆ ದಾಸರಹಳ್ಳಿಯ 100ಕ್ಕೂ ಹೆಚ್ಚು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಡಿ.ಸಿ. ಗೌರಿಶಂಕರ್‌ ಅವರು ಜೆಡಿಎಸ್‌ ಬಿಟ್ಟು ಕಾಂಗ್ರೆಸ್‌ ಸೇರುವಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ಕುಣಿಗಲ್‌ ಶಾಸಕ ಡಾ. ರಂಗನಾಥ್‌ ಅವರು ಪ್ರಧಾನ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ.…

Read More

ರಾಮನಗರ: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಕನಕಪುರ ತಾಲ್ಲೂಕು ಹುಕುಂದ ಗ್ರಾಮದಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮರು ಭೂ ಮಾಪನ ಕಾರ್ಯವನ್ನು ಪರಿಶೀಲನೆ ನಡೆಸಿದರು. ಸಂಸದ ಡಿಕೆ ಸುರೇಶ್ ಶಾಸಕ ಎಸ್ ರವಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.

Read More

ರಾಯಚೂರು: ರಾಯಚೂರು ತಾಲೂಕಿನ ಗೋನಾಳ ಗ್ರಾಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ್ ಪಾಟೀಲ್ ರೈತರ ಹೊಲಗಳಿಗೆ ಭೇಟಿ ನೀಡಿ ಬರಗಾಲ ಬೆಳೆ ಸಮೀಕ್ಷೆ ನಡೆಸಿದರು. ರಾಯಚೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಬೆಳೆ ನಾಶದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ರೈತರ ಹೊಲದಲ್ಲಿ ರೈತರೊಂದಿಗೆ ಸಂವಾದ ನಡೆಸಿದರು.  ಇನ್ನೂ ಹತ್ತಿ, ತೊಗೆರಿ ಮತ್ತು ಜೋಳ ಬೆಳೆ ವೀಕ್ಷಣೆ ಮಾಡಿದ ಸಚಿವರು.. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಪಟ್ಟಾಭಿಷೇಕ ಹಿನ್ನೆಲೆ ಅದರ ಬಗ್ಗೆ ಪ್ರತಿಕ್ತಿಯೇ ನೀಡಿದರು. ಅದನ್ನ ತಗೊಂಡು ಏನ್ ಮಾಡೋದು, ಯಾವ ವಿಜೇಂದ್ರ ನನಗೆ ಗೊತ್ತಿಲ್ಲ. ನಾನು ಬರ ವೀಕ್ಷಣೆ ಮಾಡೋದಿಕ್ಕೆ ಬಂದಿದ್ದೇನೆ. ಆದ್ದರಿಂದ ಯಾವ ವಿಜೇಂದ್ರ ನನಗೆ ಗೊತ್ತಿಲ್ಲ, ಮುಂದೆ ನೋಡೋಣ ಅದು ಎಲೆಕ್ಷನ್ ಬಂದಾಗ ಮಾತಾಡೋಣ ಎಂದು ರಾಯಚೂರಿನಲ್ಲಿ ಸಚಿವ ಶರಣಪ್ರಕಾರ ಪಾಟೀಲ್ ಹೇಳಿದರು.

Read More

ಬೆಂಗಳೂರು: ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಕೊನೆಗೂ ನಟ ದರ್ಶನ್ ಆರ್.ಆರ್.ನಗರ ಪೊಲೀಸ್‍ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ದರ್ಶನ್ ಮೂರು ದಿನದ ಒಳಗೆ ಸಿಸಿಟಿವಿ ಫೂಟೇಜ್ ಜೊತೆ ವಿಚಾರಣೆಗೆ ಬರಬೇಕೆಂದು ಪೊಲೀಸ್ ರು ನೋಟೀಸ್ ಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ  ಕೊನೆಗೂ ಆರ್ ಆರ್ ನಗರ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ನಟ ದರ್ಶನ್ ತನಿಖಾಧಿಕಾರಿ ಇನ್ಸ್ ಪೆಕ್ಟರ್ ಶಿವಕುಮಾರ್ ಮುಂದೆ ವಿಚಾರಣೆಗೆ ಹಾಜರು. ಏನಿದು ಪ್ರಕರಣ? ಈ ಹಿಂದೆ ದರ್ಶನ್ ವಿರುದ್ಧ ಆರ್‌ಆರ್ ನಗರದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ದರ್ಶನ್ ಮನೆಯ ನಾಯಿಗಳು ಮಹಿಳೆಯೊಬ್ಬರ ಮೇಲೆ ಎರಗಿ ಕಚ್ಚಿದ ಸಂಬಂಧ ಐಪಿಸಿ 289ರ ಅಡಿ ನಾಯಿ ನೋಡಿಕೊಳ್ಳುತ್ತಿದ್ದವನ ಮೇಲೆ ಮತ್ತು ನಟ ದರ್ಶನ್ ವಿರುದ್ಧ ಕೇಸ್ ದಾಖಲಾಗಿತ್ತು.

Read More

ಗದಗ: ಬಸ್ ಕೊರತೆ ಹಾಗೂ ಬಸ್ ನಿಲುಗಡೆ ಮಾಡದ ಹಿನ್ನೆಲೆ ಗದಗ ಹೊರವಲಯದ ಮಲ್ಲಸಮುದ್ರ ಕ್ರಾಸ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಬಂದ್ ಮಾಡಿ, ಬಸ್ ಗಳನ್ನು ತಡೆದು ನಿಲ್ಲಿಸಿ ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸದರು. ಮಲ್ಲಸಮುದ್ರ ಗ್ರಾಮಕ್ಕೆ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಬಿಡಬೇಕು, ಗ್ರಾಮಕ್ಕೆ ಬಸ್ ಗಳ ನಿಲುಗಡೆ ಮಾಡಬೇಕು ಅಂತಾ ಆಗ್ರಹಿಸಿ ಏಕಾಏಕಿ ಪ್ರತಿಭಟನೆ ಮಾಡಿದ್ರಿಂದಾಗಿ ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತವು. ಇದರಿಂದ ಪ್ರಯಾಣಿಕರು ಹಾಗೂ ಜಿಮ್ಸ್ ಆಸ್ಪತ್ರೆಗೆ ತೆರಳೋ ರೋಗಿಗಳ ಪರದಾಟ ನಡೆಸುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಬರಬೇಕು ಅಂತಾ ಪಟ್ಟು ಹಿಡಿದ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದರು.

Read More

ಬೆಂಗಳೂರು: ಬೆಂಗಳೂರು: ನಾನು ಲಿಂಗಾಯತ, ನಾನು ಒಕ್ಕಲಿಗ, ಆ ಜಾತಿ, ಈ ಜಾತಿ ಅಂತ ಬಿಟ್ಟು ನಾನು ಭಾರತೀಯ ಜನತಾ ಪಾರ್ಟಿಯ (BJP) ಕಾರ್ಯಕರ್ತ ಅಂತ ಭಾವಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಕೆಲಸ ಮಾಡಬೇಕೆಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಕರ್ನಾಟಕ ಬಿಜೆಪಿಯ (Karnataka BJP) 11ನೇ ಅಧ್ಯಕ್ಷರಾಗಿ ಶಾಸಕ ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು ನನ್ನನ್ನು ಅಧ್ಯಕ್ಷರಾಗಿ ನೇಮಿಸಿರುವ ರಾಷ್ಟ್ರೀಯ ವರಿಷ್ಠರಿಗೆ ಧನ್ಯವಾದ. ಪ್ರಧಾನಿ ಮೋದಿ, ಕೇಂದ್ರ ಸಚಿವ ಅಮಿತ್ ಶಾ​, ಜೆ.ಪಿ.ನಡ್ಡಾರಿಗೆ ಧನ್ಯವಾದ. ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷವು ಅಧ್ಯಕ್ಷರಾಗಿ ನೇಮಕ ಮಾಡಿದೆ.ಪಕ್ಷದ ಎಲ್ಲಾ ನಾಯಕರ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ. ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳಲ್ಲೂ ಗೆಲ್ಲುವ ವಿಶ್ವಾಸವಿದೆ. ನನಗೆ ನೀಡಿರುವ ಸ್ಥಾನದ ಬಗ್ಗೆ ಅರಿವು ಇದೆ, ಜವಾಬ್ದಾರಿ ಹೆಚ್ಚಿದೆ. ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕಾರ್ಯಕರ್ತರು ತಲೆತಗ್ಗಿಸುವ ಕೆಲಸ ಮಾಡದಂತೆ ಪಕ್ಷ ಸಂಘಟನೆ ಮಾಡುವೆ ಎಂದು ಅಧಿಕಾರ…

Read More