Author: AIN Author

ಬೇಲೂರು:- ವಿದ್ಯಾರ್ಥಿಗಳಲ್ಲಿ ವ್ಯವಹಾರಿಕ ಜ್ಞಾನವನ್ನು ತಿಳಿಸಪಡಿಸುವ ಉದ್ದೇಶದಿಂದ ಕ್ಯಾಂಟೀನ್ ಡೇ ಆಯೋಜಿಸಲಾಗಿದೆ ಎಂದು ಮುಖ್ಯಶಿಕ್ಷಕಿ ರುಭಾನಾ ತಿಳಿಸಿದರು. ಐಡಿಯಲ್ ಪಬ್ಲಿಕ್ ಶಾಲೆಯ ಆವರಣದಲ್ಲಿ ಯುಕೆಜಿ ಇಂದ ಮೊದಲನೇ ತರಗತಿಯ ವಿದ್ಯಾರ್ಥಿಗಳಿಗೆ ಕ್ಯಾಂಟೀನ್ ಡೇ ನಡೆಸಲಾಯಿತು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ವಿವಿಧ ಚಟುವಟಿಕೆಗಳನ್ನು ನಡೆಸಿದರೆ ಕೌಶಲ್ಯ ಅಭಿವೃದ್ದಿ ಹಾಗೂ ಗಣಿತದ ಅಂಕಗಳಿಕೆಗೆ ಸಹ ಉಪಯುಕ್ತವಾಗುತ್ತದೆ.ಕ್ಯಾಂಟೀನ್ ಡೇ ನಡೆಸುವುದರಿಂದ ಅವರಲ್ಲಿರುವ ನೈಜ್ಯ ಕಲೆ ಹಾಗೂ ವ್ಯಾಪಾರದ ಬಗ್ಗೆ ಸಂಪೂರ್ಣವಾಗಿ ಅವರಿಗೆ ಮಾಹಿತಿ ಸಿಗುವಂತಾಗುತ್ತದೆ. ಇದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಇತುವ ಆತ್ಮವಿಶ್ವಾಸ ಹೆಚ್ಚಾಗುವುದಲ್ಲದೆ ತಾವು ದುಡಿದು ಕೂಡಿಟ್ಟ ಹಣವನ್ನು ಯಾವರೀತಿ ಖರ್ಚುಮಾಡಬೇಕೆಂಬ ಮನಸ್ಥಿತಿ ಬಲವಾಗಿ ಬೀರುವುದರಿಂದ ಇಂತಹ ಚಟುವಟಿಕೆ ಉತ್ತಮ .ಇಲ್ಲಿ ಅತಿಹೆಚ್ಚು ವ್ಯಾಪಾರ ವಹಿವಾಟು ಮಾಡುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಪ್ರಥಮ ದ್ವಿತೀಯ ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಿಸಲು ಬಹುಮಾನ ವಿತರಿಸಲಾಗುತ್ತದೆ ಎಂದರು. ಇದೇ ವೇಳೆ ವಿದ್ಯಾರ್ಥಿಗಳು ಹಲವು ಬಗೆಯ ವೆಜ್ ರೋಲ್,ಚಿಕನ್ ರೋಲ್, ಸಮೋಸ,ಕೇಕ್ ಸೇರಿದಂತೆ…

Read More

ಕೃಷಿ ಜಮೀನಿನ ವಿಸ್ತೀರ್ಣ ದಾಖಲಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಗಡುವು ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರೈತರ ಜಮೀನಿನ ವಿಸ್ತೀರ್ಣಕ್ಕೆ ಸಂಬಂಧಿಸಿದ ದತ್ತಾಂಶವನ್ನು ಫ್ರೂಟ್ಸ್‌ನಲ್ಲಿ ದಾಖಲಿಸುವಂತೆ ಎರಡು ತಿಂಗಳ ಹಿಂದೆಯೇ ಸೂಚಿಸಲಾಗಿತ್ತು. ಈವರೆಗೆ ಒಟ್ಟು ವಿಸ್ತೀರ್ಣದ ಶೇಕಡ 70ರಷ್ಟನ್ನೂ ದಾಖಲಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬರಗಾಲದಿಂದ ಬೆಳೆ ನಷ್ಟಕ್ಕೀಡಾದ ರೈತರಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಆದರೆ, ಫ್ರೂಟ್ಸ್‌ನಲ್ಲಿ ಮಾಹಿತಿ ದಾಖಲಿಸದೇ ಇದ್ದರೆ ಅಂತಹ ರೈತರು ಪರಿಹಾರದಿಂದ ವಂಚಿತರಾಗುತ್ತಾರೆ. ಇದಕ್ಕೆ ಜಿಲ್ಲಾಧಿಕಾರಿಗಳೇ ಹೊಣೆ ಎಂದರು. ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಜಮೀನು ವಿಸ್ತೀರ್ಣ ದಾಖಲಿಸುವಲ್ಲಿ ಹೆಚ್ಚು ಪ್ರಗತಿಯಾಗಿಲ್ಲ. ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪು ಕೂಡ ರೈತರು ಪರಿಹಾರದಿಂದ ವಂಚಿತರಾಗಲು ಕಾರಣವಾಗಲಿದೆ. ಆಂದೋಲನದ ಮಾದರಿಯಲ್ಲಿ ಈ ಕೆಲಸ ಮಾಡಬೇಕು. ಹೋಬಳಿವಾರು ಅಧಿಕಾರಿಗಳ ಸಭೆ ನಡೆಸಿ, ಇದೇ ಶುಕ್ರವಾರದೊಳಗೆ ಎಲ್ಲ ರೈತರ ಜಮೀನುಗಳ ವಿಸ್ತೀರ್ಣವನ್ನು ದಾಖಲಿಸಬೇಕು ಎಂದು ತಾಕೀತು ಮಾಡಿದರು. 134 ತಾಲ್ಲೂಕುಗಳಲ್ಲಿ ಈವರೆಗೂ ಬರ ನಿರ್ವಹಣೆ ಕಾರ್ಯಪಡೆ…

Read More

ಐಪಿಎಲ್ ಮಿನಿ ಹರಾಜಿಗೂ ಮುನ್ನ ಐದು ಬಾರಿಯ ಚಾಂಪಿಯನ್ ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ವಜಾಗೊಳಿಸಲಾಯಿತು ಮತ್ತು ಇದು ಮುಂಬೈ ಇಂಡಿಯನ್ಸ್ ಅಭಿಮಾನಿಗಳಿಗೆ ತೀವ್ರ ಆಶ್ಚರ್ಯ ಉಂಟುಮಾಡಿತು. ಗುಜರಾತ್ ಟೈಟನ್ಸ್‌ನಿಂದ ವ್ಯಾಪಾರ ಮಾಡಿಕೊಂಡ ಹಾರ್ದಿಕ್ ಪಾಂಡ್ಯ ಅವರನ್ನು ನೂತನ ನಾಯಕ ಎಂದು ಘೋಷಿಸಿತು. ಐದು ಪ್ರಶಸ್ತಿಗಳನ್ನು ಗೆದ್ದುಕೊಟ್ಟ ರೋಹಿತ್ ಶರ್ಮಾರನ್ನು ದಿಢೀರ್‌ನೆ ನಾಯಕತ್ವದಿಂದ ತೆಗೆದುಹಾಕಿದ್ದು, ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ವಿರುದ್ಧ ಅಪ್ಪಟ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಇದರ ಪರಿಣಾಮವಾಗಿ, ಮುಂಬೈ ಇಂಡಿಯನ್ಸ್ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ 10 ಲಕ್ಷಕ್ಕೂ ಅಧಿಕ ಫಾಲೋವರ್ಸ್‌ಗಳನ್ನು ಕಳೆದುಕೊಂಡಿದೆ. ಕೆಲವು ಅಭಿಮಾನಿಗಳು ಮುಂಬೈ ಇಂಡಿಯನ್ಸ್ ಜೆರ್ಸಿಯನ್ನು ನಡುರಸ್ತೆಯಲ್ಲಿ ಸುಟ್ಟುಹಾಕುತ್ತಿದ್ದಾರೆ. ಇದೀಗ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಮುಂಬೈ ಇಂಡಿಯನ್ಸ್ ತಂಡದಿಂದ ಹೊರಬಂದು ಬೇರೆ ಯಾವುದಾದರೂ ಐಪಿಎಲ್ ಫ್ರಾಂಚೈಸಿ ಪರ ಆಡಬೇಕು ಎಂದು ಕೇಳಿಕೊಳ್ಳುತ್ತಿದ್ದಾರೆ. ಈ ಕುರಿತು ಕೆಲವು ಪೋಸ್ಟ್‌ಗಳು, ಟ್ವೀಟ್‌ಗಳು, ಮೀಮ್ಸ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಇದರಲ್ಲಿ ಜನಪ್ರಿಯ ಐಪಿಎಲ್ ಫ್ರಾಂಚೈಸಿ ಆರ್‌ಸಿಬಿ ಅಭಿಮಾನಿಗಳು…

Read More

ತುಮಕೂರು:- ಬೈಕ್ ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಅರೆಸ್ಟ್ ಮಾಡಲಾಗಿದೆ. ಇರ್ಫಾನ್ ಅಲಿಯಾಸ್ ಫಾಕ್ಸ್ ಬಂಧಿತ ಆರೋಪಿ. ಇರ್ಫಾನ್‌ ಹೊನ್ನುಡಿಕೆ ಬಳಿ ಅನುಮಾನಾಸ್ಪದವಾಗಿ ಬೈಕ್‌ನಲ್ಲಿ ತೆರಳುತ್ತಿದ್ದ. ಅಗತ್ಯ ದಾಖಲೆ ಕೇಳಿದಾಗ ಸೂಕ್ತ ಉತ್ತರ ನೀಡಿಲ್ಲ. ಇದರಿಂದ ಅನುಮಾನಗೊಂಡ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದು ವಿಚಾರ ನಡೆಸಿದಾಗ ಕಳ್ಳತನ ಮಾಡಿರುವ ವಿಚಾರ ಗೊತ್ತಾಗಿದೆ. 11 ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಕ್‌ ಕದ್ದು ವ್ಹೀಲಿಂಗ್‌ ಮಾಡಲು ಬಾಡಿಗೆಗೆ ಕೊಡುತ್ತಿದ್ದ. ಪ್ರತಿಯೊಂದು ಬೈಕ್‌ಗೆ ₹5 ಸಾವಿರ ಪಡೆಯುತ್ತಿದ್ದ ಎನ್ನಲಾಗಿದೆ.

Read More

ಕಲಬುರ್ಗಿ:- ನ್ಯೂ ಇಯರ್ ಗೈಡ್‌ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಸಚಿವ ಶರಣ ಪ್ರಕಾಶ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಕೋವಿಡ್ ಹೊಸ ರೂಪಾಂತರಿ ತಳಿ ಎಂಟ್ರಿ ಹಿನ್ನಲೆ, ಈ ಕೋರೊನಾ ಎಷ್ಟರಮಟ್ಟಿಗೆ ಅಪಾಯಕಾರಿ ಇದೆ ಅನ್ನೊದು ಇನ್ನೂ ತಿಳಿದಿಲ್ಲ. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೆನೆ. ಆರೋಗ್ಯ ಸಚಿವ ಗುಂಡೂರಾವ್ ಕೂಡ ನಿರಂತರವಾಗಿ ಸಭೆ ನಡೆಸುತ್ತಿದ್ದಾರೆ. ನ್ಯೂ ಇಯರ್ ಗೈಡ್‌ಲೆನ್ಸ್ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ಕಲಬುರಗಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಹೇಳಿಕೆ ನೀಡಿದ್ದಾರೆ.

Read More

ಬೆಳಗಾವಿ:- ಜಿಲ್ಲೆಯ ಹುಕ್ಕೇರಿ ತಾಲೂಕಿನ ಪ್ರಾದೇಶಿಕ ಅರಣ್ಯ ವಲಯದ ಬಸ್ಸಾಪುರ ಶಾಖಾ ವ್ಯಾಪ್ತಿಯ ಶಿರೂರು ಡ್ಯಾಮ್ ಹತ್ತಿರ ರಸ್ತೆ ಬದಿ ಹೆಬ್ಬಾವು ಒಂದು ಕಂಡು ಬಂದಿದೆ. ಇನ್ನು ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ಉರಗ ಪ್ರೇಮಿ ಹಾಗೂ ಶ್ರೀರಾಮ ಸೇನೆಯ ಸಕ್ರಿಯ ಕಾರ್ಯಕರ್ತ ಅನಿಲ್ ಬಡಿಗೇರ ಹಾಗೂ ಸಂಗಡಿಗರ ಸಹಾಯದಿಂದ ಹೆಬ್ಬಾವು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಇನ್ನು ಯುವಕರ ಸಾಹಸಕ್ಕೆ ಸಾರ್ವಜನಿಕರು ಪ್ರಸಂಸೆ ವ್ಯಕ್ತಪಡಿಸಿದ್ದಾರೆ.

Read More

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಆರಾಧನಾ ಜೋಡಿಯಾಗಿ ನಟಿಸಿರುವ’ಕಾಟೇರ’ ಚಿತ್ರದ ಟ್ರೇಲರ್ ಮೊನ್ನೆಯಷ್ಟೇ ಬಿಡುಗಡೆಯಾಗಿದೆ. ದಚ್ಚು ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ ಸಿನಿಮಾ ಇದು.ಆದರೆ ಇದೀಗ ಮತ್ತೊಂದು ಸಂಕಷ್ಟಕ್ಕೆ ಎದುರಾಗಿದೆ. ಸಿನಿಮಾದ ಕೆಲವು ಡೈಲಾಗ್‌ಗಳು ವಿವಾದವೆಬ್ಬಿಸಿವೆ. ಅದರಲ್ಲೂ ನಾಗಹಾವಿನ ಕುರಿತು ಡೈಲಾಗ್ ಇದೀಗ ಕಾಟೇರ ಸಿನಿಮಾಗೆ ಸಂಕಷ್ಟ ತಂದೊಡ್ಡಿದೆ. ಕಾಟೇರ ಟ್ರೇಲರ್ ಬಿಡುಗಡೆಗಾಗಿ ಕೋಟ್ಯಂತರ ಅಭಿಮಾನಿಗಳು ಕಾದು ಕುಳಿತಿದ್ದರು. ಬಿಡುಗಡೆಯಾದ ದಿನವೇ ಮಿಲಿಯನ್ ವಿವ್ಸ್ ಕ್ರಾಸ್ ಮಾಡಿದ್ದ ಟ್ರೇಲರ್. ಟ್ರೇಲರ್ ನಲ್ಲಿ ಎಂದಿನಂತೆ ಮಾಸ್ ಡೈಲಾಗ್ ಗಳಿಗೆ ಹುಚ್ಚೆದ್ದು ಕುಣಿದ ಅಭಿಮಾನಿಗಳು ಆದರೆ ವನ್ಯ ಜೀವಿ ಸಂರಕ್ಷಣಾ ಒಕ್ಕೂಟ ದರ್ಶನ್ ಮೇಲೆ ಗರಂ ಆಗಿದೆ ಯಾಕೆ ಅಂತೀರಾ? ಇವರೆಲ್ಲಾ ಹಾವು ಇದ್ದಂಗೆ. ವಿಷ ಇಲ್ಲಾಂದ್ರೆ ಹಿಡಿಬೇಕು. ವಿಷ ಇದ್ರೆ ಹೊಡಿಬೇಕು” ಟ್ರೇಲರ್ ನಲ್ಲಿ ಕೇಳಿ ಬಂದ ಡೈಲಾಗ್. ಹಾವಿನ ಬಗ್ಗೆ ಹೇಳಿರೋ ಡೈಲಾಗ್ ಇದೀಗ ದರ್ಶನ್‌ಗೆ ಸಂಕಷ್ಟ ತಂದೊಡ್ಡಿದೆ. ದರ್ಶನ್ ಜೀವನ ಶೈಲಿ, ಡೈಲಾಗ್ ಫಾಲೋ ಮಾಡೋ ಕೋಟ್ಯಂತರ ಅಭಿಮಾನಿಗಳಿದ್ದಾರೆ. ದರ್ಶನ ಆಡುವ…

Read More

ಕೋಲಾರ:- ಮಾಲೂರಿನ ಯಳವಳ್ಳಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ ಮಾಡಿಸಿರುವ ಘಟನೆ ಖಂಡನೀಯ ಮತ್ತು ಹೇಯಕೃತ್ಯ ಎಂದು ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್ ಸುರೇಶ್ ಅವರು ತಿಳಿಸಿದರು. ಇಂದು ಮಾಲೂರಿನ ಯಳವಳ್ಳಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ಅಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಜೊತೆ ಮಾತನಾಡಿದ ಅವರು, ಮಕ್ಕಳನ್ನು ಶೌಚಗುಂಡಿ ಸ್ವಚ್ಛತೆಗೆ ಇಳಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದರು. ಈ ಪ್ರಕರಣ ನಾಗರೀಕ ಸಮಾಜ ತಲೆ ತಗ್ಗಿಸುವ ಹೇಯಕೃತ್ಯವಾಗಿದೆ. ತಪ್ಪು ಮಾಡಿದವರ ವಿರುದ್ದ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ವಿಚಾರಣೆ ವೇಳೆ ಇನ್ನು ಯಾವುದಾದರೂ ಅಧಿಕಾರಿಗಳ ಲೋಪ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು. ಪ್ರಸ್ತುತ ವಸತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಯನ್ನು ಶಿಕ್ಷೆಯ ಮೇಲೆ ವರ್ಗಾವಣೆಗೊಳಿಸಲಾಗುವುದು. ಶಾಲೆಯಲ್ಲಿ ಓದುತ್ತಿರುವ ಮಕ್ಕಳ…

Read More

ಮಡಿಕೇರಿ:- 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಮಾಸ್ಕ್ ಕಡ್ಡಾಯ ಇಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.‌ ಕೊರೋನಾ ರೂಪಾಂತರಿ ಬಗ್ಗೆ ಯಾರೂ ಕೂಡ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Read More

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಖಾಸಗಿ ಶಾಲೆಗೆ ಸೇರಿದ್ದ ಬಸ್ ಪಲ್ಟಿಯಾಗಿದ್ದು ವಿದ್ಯಾರ್ಥಿಗಳು ಸೇರಿದಂತೆ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸೋಮವಾರ ಬೆಳಗಿನ ಜಾವ ಘಟನೆ ನಡೆದಿದ್ದು, ಚಾಲಕ ಹಾಗೂ ನಿರ್ವಾಹಕ ಸೇರಿದಂತೆ 10 ವಿದ್ಯಾರ್ಥಿಗಳು ಬಸ್ ನಲ್ಲಿದ್ದರು. ಅದೃಷ್ಟವಶಾತ್ ಬಸ್ ಉರುಳಿ ಬಿದ್ದರು ಯಾವುದೇ ಹಾನಿ ಸಂಭವಿಸಿಲ್ಲ. ತಾಲೂಕಿನ ಹಲವೆಡೆ ಖಾಸಗಿ ಸಂಸ್ಥೆಗಳು ನಾಯಿ ಕೊಡೆಗಳಂತೆ ತಲೆ ಎತ್ತಿದ್ದು ಬಸ್ ಚಾಲನೆ ಮಾಡುವವರಿಗೆ ಯಾವುದೇ ಲಗಾಮು ಇಲ್ಲದಂತಾಗಿದೆ. ಓವರ್ ಸ್ಪೀಡ್ ನಲ್ಲಿ ಬಸ್ ಚಾಲನೆ ಮಾಡುತ್ತಿದ್ದು ಮಕ್ಕಳು ಕೈಯಲ್ಲಿ ಜೀವ ಹಿಡಿದು ಸಂಚರಿಸಬೇಕಾಗಿದೆ.‌ ಈ‌ ಕುರಿತು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತ ಖಾಸಗಿ ಶಾಲೆಗಳಿಗೆ ಎಚ್ಚರಿಕೆ ನೀಡಿದರೆ ಮಾತ್ರ ಮುಂದೆ ಆಗುವ ಅಪಾಯಗಳನ್ನು ತಡೆಗಟ್ಟಬಹುದು.

Read More