ಬೆಂಗಳೂರು:- ಮೆಟ್ರೋ ಟ್ರ್ಯಾಕ್ ಮೇಲೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ಜರುಗಿದೆ. ಘಟನೆ ನಡೆದ ಹಿನ್ನೆಲೆಯಲ್ಲಿ ಯಶವಂತಪುರ- ನಾಗಸಂದ್ರ ಮಾರ್ಗದಲ್ಲಿ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸಂಜೆ 7:12ಕ್ಕೆ ಮೆಟ್ರೋ ಹಳಿಗೆ ಕೇರಳ ಮೂಲದ ಯುವಕ ಧುಮುಕಿದ್ದ. ಸದ್ಯ ಯುವಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಆತನನ್ನು ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಯುವಕನ ಸ್ನೇಹಿತನನ್ನು ವಿಚಾರಣೆ ಮಾಡುತ್ತಿದ್ದಾರೆ. ರೈಲು ಸೇವೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸದ್ಯ ಯಶವಂತಪುರ ಮೆಟ್ರೋ ನಿಲ್ದಾಣದಿಂದ ಪ್ರಯಾಣಿಕರು ಹೊರ ಬರುತ್ತಿದ್ದಾರೆ.
Author: AIN Author
ಬೆಂಗಳೂರು:- ರಾಜ್ಯದಲ್ಲಿ ಕೊರೋನಾ ಭೀತಿ ದಿನೇ ದಿನೇ ಹೆಚ್ಚಾಗ್ತಿದ್ದು, ರಾಜ್ಯದಲ್ಲಿ ಒಟ್ಟು 1159 ಸಕ್ರಿಯ ಕೊವಿಡ್ ಪ್ರಕರಣ ದಾಖಲಾಗಿದೆ. ನಿನ್ನೆ ಒಂದೇ ದಿನ 328 ಪಾಸಿಟಿವ್ ಕೇಸ್ ಇದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 4.55% ಕೊವಿಡ್ ಪಾಸಿಟಿವ್ ರೇಟ್ ವರದಿ ಆಗಿದೆ. ಕಳೆದ 24 ಗಂಟೆಯಲ್ಲಿ 7205 ಟೆಸ್ಟ್‌ಗಳನ್ನು ಮಾಡಲಾಗಿದ್ದು, 6418 RTCPR ಹಾಗೂ 787 RAT ಟೆಸ್ಟ್‌ಗಳನ್ನ ಮಾಡಲಾಗಿದೆ. ಬೆಂಗಳೂರಿನಲ್ಲೇ ಅತಿ ಹೆಚ್ಚು ಪಾಸಿಟಿವ್ ಪ್ರಕರಣ ವರದಿ ಆಗಿದೆ. ಬೆಂಗಳೂರಿನಲ್ಲಿ ಇಲ್ಲಿಯವರೆಗೂ 628 ಕೇಸ್‌ಗಳು ವರದಿ ಆಗಿದ್ದು, ಒಟ್ಟು 1159 ಸಕ್ರಿಯ ಪ್ರಕರಣಗಳಲ್ಲಿ 1087 ಕೇಸ್‌ಗಳು ಹೋಮ್ಐಸೋಲೇಷನ್‌ನಲ್ಲಿ ಇರಲು ಸೂಚನೆ ನೀಡಿದ್ದಾರೆ. 72 ಕೇಸ್‌ಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಅದರಲ್ಲಿ ಐಸಿಯು ನಲ್ಲಿ 9ಕೇಸ್‌ಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. 3 ಕೇಸ್‌ಗಳಿಗೆ ಐಸಿಯು ವೆಂಟೀಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು:- ರಾಜ್ಯದಲ್ಲಿರುವುದು ಸಂಕಷ್ಟಕ್ಕೆ ಬಾರದ ನಿಷ್ಪ್ರಯೋಜಕ ಸರ್ಕಾರ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ X ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ರೈತರಿಗೆ ಬರ ಪರಿಹಾರವಾಗಿ ಕೇವಲ 105 ಕೋಟಿ ರೂ. ಬಿಡುಗಡೆ ಮಾಡಲು ರಾಜ್ಯದ ರೈತರನ್ನು ಆರು ತಿಂಗಳು ಸತಾಬೇಕಾಗಿತ್ತಾ. 123 ತಾಲೂಕುಗಳು ಬರ ಪೀಡಿತ ಎಂದು ನೀವೇ ಘೋಷಣೆ ಮಾಡಿದ್ದು, ಅಷ್ಟು ದೊಡ್ಡ ಮಟ್ಟದ ಬರಕ್ಕೆ ಪ್ರತಿ ಹೆಕ್ಟೇರ್ ಗೆ ಕೇವಲ 2000 ರೂ. ನೀಡುತ್ತಿರುವುದೇಕೆ ? ರೈತರ ಖಾತೆಗಳಿಗೆ ಆಧಾರ ಲಿಂಕ್ ಆಗಿರುವ ಸತ್ಯ ಹೊರಬರುತ್ತಿದ್ದಂತೆ, ತಕ್ಷಣ ರೈತರ ಖಾತೆಗಳಿಗೆ ಹಣ ಬಿಡುಗಡೆ ಮಾಡಲು ಆದೇಶ ಮಾಡಿದ್ದು, ನೀವು ರಾಜಕಾರಣಕ್ಕಾಗಿ, ವಿಳಂಬ ಧೋರಣೆ ಅನುಸರಿಸಲು ಆಧಾರ್ ಲಿಂಕ್ ಮಾಡುವ ಸುಳ್ಳು ಕಥೆ ಹೇಳಿದ್ದೀರಿ ಎನ್ನುವುದು. ನಿಮ್ಮ ನಡೆಯಿಂದ ಸ್ಪಷ್ಟವಾಗುತ್ತದೆ. ರಾಜ್ಯದ 69 ಲಕ್ಷ ರೈತರ ಖಾತೆಗಳಿಗೆ ಆಧಾರ್ ಲಿಂಕ್ ಮಾಡಿರುವ ಮಾಹಿತಿ ಸರ್ಕಾರದ ಬಳಿ ಇದ್ದರೂ, ಸುಳ್ಳು ಹೇಳಿ ಜನರ ದಾರಿ…
ಬೆಂಗಳೂರು:- ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ. ಹೀಗಾಗಿ ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ. ದೊಡ್ಡಗೌಡರ ಮೂಲಕ ರಾಜಕೀಯ ದಾಳ ಉರುಳಿಸಲು ಸೋಮಣ್ಣ ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.
ಆನೇಕಲ್:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಕಾಟ ನಿಂತಿಲ್ಲ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಗೋಪಸಂದ್ರ ಬಳಿ ಚಿರತೆ ಪ್ರತ್ಯಕ್ಷವಾಗಿದೆ. ಮುತ್ತನಲ್ಲೂರು-ಗೋಪಸಂದ್ರ ಮುಖ್ಯರಸ್ತೆಯಲ್ಲಿ ಚಿರತೆ ಓಡಾಡಿದ್ದು, ಅಪಾರ್ಟ್ಮೆಂಟ್ ಹಿಂಬದಿಯಲ್ಲಿ ಚಿರತೆ ಓಡಾಟ ನಡೆಸಿರುವ ದೃಶ್ಯ ಸೆರೆಯಾಗಿದೆ. ಮೊಬೈಲ್ ನಲ್ಲಿ ಅಪಾರ್ಟ್ಮೆಂಟ್ ನಿವಾಸಿಗಳು ದೃಶ್ಯ ಸೆರೆ ಹಿಡಿದಿದ್ದಾರೆ. ಚಿರತೆ ಓಡಾಟದಿಂದ ಗ್ರಾಮಸ್ಥರು ಆತಂಕದಲ್ಲಿದ್ದಾರೆ. ಆನೇಕಲ್ ತಾಲ್ಲೂಕಿನಲ್ಲಿ ಒಂದಿಲ್ಲೊಂದು ಕಡೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಅರಣ್ಯ ಇಲಾಖೆಗೆ ಚಿರತೆ ಹಾವಳಿ ದೊಡ್ಡ ತಲೆನೋವಾಗಿದೆ.
ಬೇಲೂರು:- ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮನೆಗೆ ಬರುವ ಸಂದರ್ಭದಲ್ಲಿ ಏಕಾಏಕಿ ಕಾಡಾನೆಯೊಂದು ಕಾಫಿ ತೋಟದ ಕೂಲಿ ಕಾರ್ಮಿಕನ್ನು ಸೊಡಲಿನಿಂದ ಅಪ್ಪಳಿಸಿದ ಪರಿಣಾಮವಾಗಿ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ್ದು. ಜೊತೆಗೆ ಇದ್ದ ಇನ್ನೊಬ್ಬ ಕಾಡಾನೆಯಿಂದ ತಪ್ಪಿಸಿಕೊಂಡಿದ್ದಾರೆ. ಕಾಡಾನೆಯ ದಾಳಿಯ ಬಗ್ಗೆ ಬೆಳೆಗಾರರು ತೀವ್ರ ಆತಂಕದಲ್ಲಿ ಶಾಶ್ವತ ಪರಿಹಾರ ನೀಡುವಂತೆ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು ! ತಾಲ್ಲೂಕಿನ ಬಿಕ್ಕೋಡು ಹೋಬಳಿ ಮತ್ತಾವರ ಗ್ರಾಮದ ವಸಂತ ಬಿನ್ ಈರಯ್ಯ (೪೮) ಕಾಡಾನೆ ದಾಳಿ ಸಿಕ್ಕಿ ಮೃತ ಪಟ್ಟ ನತದೃಷ್ಟವಾಗಿದ್ದು, ಎಂದಿನಂತೆ ಮತ್ತಾವರ ಗ್ರಾಮದ ವಸಂತ್ ಮತ್ತು ಆತನ ಸ್ನೇಹಿತ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಮಬ್ಬುಗತ್ತಿನಲ್ಲಿ ಸಂಜೆ ಸುಮಾರು ೮ ಗಂಟೆ ವೇಳೆ ಮನೆಗೆ ವಾಪಸು ಬರುತ್ತಿರುವ ವೇಳೆ ಕಾಫಿ ತೋಟದಿಂದ ಏಕಾಏಕಿ ಧಾವಿಸಿದ ಕಾಡಾನೆ ವಸಂತ್ ದಾಳಿ ನಡೆಸಿಲು ಮುಂದಾದ ಸಂದರ್ಭದಲ್ಲಿ ವಸಂತ್ ತಪ್ಪಿಸಿಕೊಳ್ಳುವ ಹೊತ್ತಿಗೆ ಮದವೇರಿದ ಆನೆ ತನ್ನ ಸೊಡಲಿನಿಂದ ಬಲವಾಗಿ ವಸಂತನ ತೊಡೆಯ ಭಾಗಕ್ಕೆ ಅಪ್ಪಳಿಸಿದ್ದು, ವಸಂತ್ ಹೊಡೆತ ತಾಳದೆ…
ಗೌರಿಬಿದನೂರು : ತಾಲ್ಲೂಕಿನ ಅಲ್ಲೀಪುರದಲ್ಲಿ ಸರ್ಕಾರಿ ಶಾಲೆಯ ಮುಂದೆ ಇರುವ ಮುಖ್ಯ ರಸ್ತೆಯಲ್ಲಿ ಸ್ವಾಗತ ಕೋರುತ್ತಿರುವ ಕಸದ ರಾಶಿಗಳು ಅಲ್ಲೀಪುರ ಮುಖ್ಯ ರಸ್ತೆಯಲ್ಲಿ ಕಸದ ರಾಶಿ ಶೇಖರಣೆ ಯಾಗಿದ್ದು ಇದರಿಂದ ದಿನನಿತ್ಯ ಓಡಾಡುವ ವಾಹನಗಳ ಸಾವರರ ಮೇಲೆ ಪ್ಲಾಸ್ಟಿಕ್ ಸೇರಿದಂತೆ ಕೋಳಿತುಪ್ಪಟ ಸೇರಿದಂತೆ ಇತರೇ ತ್ಯಾಜ್ಯ ಗಾಳಿಯಲ್ಲಿ ತೂರಿ ಬರುತ್ತಿದ್ದು ಸಮಪರ್ಕವಾಗಿ ಕಸ ವಿಲೇವಾರಿ ಮಾಡದ ಗ್ರಾಮ ಪಂಚಾಯಿತಿಯ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಇಲ್ಲಿ ಕೆಲಸ ಮಾಡುವ ಗ್ರಾಮ ಪಂಚಾಯಿತಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸುಂದರವಾಗಿರಬೇಕಾದ ಅಲ್ಲಿಪುರ ಪಟ್ಟಣವು ದುರ್ವಾಸನೆ ಇಂದ ಸ್ವಾಗತಿಸುತ್ತಿದೆ ಕೂಡಲೇ ಸಂಬಂಧಪಟ್ಟ ಉನ್ನತ ಅಧಿಕಾರಿಗಳು ಕಸ ವಿಲೇವಾರಿ ಮಾಡುವಂತೆ ಸೂಚಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ,
ಬೆಂಗಳೂರು :- ರಾಮಭಕ್ತರನ್ನೇ ಟಾರ್ಗೆಟ್ ಮಾಡಿ ಕಾಂಗ್ರೆಸ್ ಕಿರುಕುಳ ನೀಡುತ್ತಿದೆ ಎಂದು ಮಾಜಿ ಸಿಎಂ HD ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಒಂದೇ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ರಾಮಭಕ್ತರನ್ನು ಹಾಗೂ ವಿರೋಧ ಪಕ್ಷದ ನಾಯಕರನ್ನು ಟಾರ್ಗೆಟ್ ಮಾಡಿ, ಕಿರುಕುಳ ನೀಡುತ್ತಿದೆ ಎಂದರು. ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರಿಗೆ ಸರ್ಕಾರ ಕಿರುಕುಳ ನೀಡುತ್ತಿರುವುದು ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರ ಷಡ್ಯಂತ್ರದ ಭಾಗವಾಗಿದೆ ಎಂದು ಟೀಕಿಸಿದರು. ಮರ ಕಡಿದ ಆರೋಪಕ್ಕೆ ಗುರಿ ಆಗಿರುವ ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಮೇಲೆ ಸರ್ಕಾರ ನಡೆಸುತ್ತಿರುವ ದಬ್ಬಾಳಿಕೆ ಬಗ್ಗೆ ಹಲವಾರು ಅನುಮಾನಗಳು ಇವೆ. ಪ್ರತಾಪ್ ಸಿಂಹಗೆ ಪಾಠ ಕಲಸಬೇಕು ಎಂದು ಸಿಎಂ ಅಧಿಕಾರಿಗಳಿಗೆ ಕರೆ ಮಾಡಿ ಬೀಟೆ ಮರ ಕಡಿದು ಅ ಜಾಗದಲ್ಲಿ ಹಾಕುವಂತೆ ಹೇಳಿದ್ದರು. ಸಿಎಂ ಆದೇಶದಂತೆ ಬೀಟೆ ಮರವನ್ನು ಗೆಂಡೆಕೆರೆಯಿಂದ ಕಟ್ ಮಾಡಿಕೊಂಡು ಬಂದು ಇಲ್ಲಿ…
ಕೊಪ್ಪಳ:- ಬಿಕೆ ಹರಿಪ್ರಸಾದ್ ರನ್ನು ತನಿಖಾ ಸಂಸ್ಥೆಗಳ ವಶಕ್ಕೆ ನೀಡಿ ಎಂದು ಮಾಜಿ ಸಚಿವ ಶ್ರೀ ರಾಮುಲು ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಗೋಧ್ರಾ ಘಟನೆ ಪುನರಾರ್ವತನೆ ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಗಳು ವಶಕ್ಕೆ ಪಡೆದು ತನಿಖೆ ಮಾಡಬೇಕು. ಅವರನ್ನು ರಾಜ್ಯದಿಂದಲೇ ಗಡಿಪಾರು ಮಾಡಬೇಕು ಎಂದರು. 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿದ್ದು, ಜ.22ರಂದು ಉದ್ಘಾಟನೆ ನಡೆಯಲಿದೆ. ರಾಮಮಂದಿರಕ್ಕೆ ಕಳಂಕ ತರುವುದಕ್ಕೆ ಈ ರೀತಿ ಹೇಳಿಕೆ ನೀಡಿದ್ದಾರೆ. ಸತ್ಯಾಸತ್ಯತೆ ತಿಳಿಯಲು ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಬೇಕು ಎಂದರು. ಕ್ಷುಲ್ಲಕ ರಾಜಕಾರಣ, ರಾಜಕಾರಣದ ಪ್ರತಿಷ್ಠೆಗಾಗಿ ಈ ರೀತಿಯಾಗಿ ಮಾತನಾಡಿರುವುದು ನಾಚಿಕೆಗೇಡಿತನ. ಹರಿಪ್ರಸಾದ್ ಹೇಳಿಕೆಯ ಕುತಂತ್ರದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕೂಡಲೇ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಕಾಲದಲ್ಲಿ ಜಾತಿಗಳನ್ನು ಒಡೆಯಲಾಗಿದ್ದು, ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ನೈತಿಕ ಹಕ್ಕಿಲ್ಲ. 31 ವರ್ಷದ ಬಳಿಕ ಕರಸೇವಕರನ್ನು ಬಂಧಿಸುವ ಕೆಲಸ…
ಬೆಂಗಳೂರು:- ಶ್ರೀರಾಮನ ಹೆಸರನ್ನು ಬಿಜೆಪಿ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಮಭಕ್ತರಿಗೆ ಕಾಂಗ್ರೆಸ್ ಸರ್ಕಾರದಿಂದ ತೊಂದರೆಯಾಗುತ್ತಿದೆ ಎಂದು ಬಿಜೆಪಿ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. 31 ವರ್ಷದ ಹಿಂದಿನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಇದಕ್ಕೆ ಬಿಜೆಪಿಯವರು ರಾಜಕೀಯ ಬಣ್ಣ ಹಚ್ಚುತ್ತಿದ್ದಾರೆ ಎಂದರು. ಕಾಂಗ್ರೆಸ್‌ನವರು ನಿಜವಾದ ರಾಮಭಕ್ತರು. ಬಿಜೆಪಿಯವರು ಚುನಾವಣೆಗಾಗಿ ರಾಮನ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು. 2008-13 ಮತ್ತು 2020-2023ರವರೆಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇತ್ತು. ಆರ್. ಅಶೋಕ್ ಗೃಹ ಸಚಿವರಾಗಿದ್ದರು. ಆಗ ಪ್ರಕರಣ ಏಕೆ ಹಿಂಪಡೆಯಲಿಲ್ಲ ಎಂದು ಪ್ರಶ್ನಿಸಿದರು. ವಿರೋಧ ಪಕ್ಷದ ನಾಯಕರಾದ ನಂತರ ಅಶೋಕ್ ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ಚುನಾವಣೆಗೆ ಕಾರ್ಯಕರ್ತರನ್ನು ಬಳಸಿಕೊಂಡು ನಂತರ ಮರೆಯುತ್ತದೆ ಎನ್ನುವುದಕ್ಕೆ ಇದು ಸೂಕ್ತ ನಿದರ್ಶನ ಎಂದು ಟೀಕಿಸಿದರು.