ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆಫ್ಘಾನಿಸ್ತಾನ ತಂಡದ ವಿರುದ್ಧದ ಟಿ20 ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಆರಂಭಿಸಿದ ಭಾರತ, ರೋಹಿತ್ ಮತ್ತು ರಿಂಕು ಅವರ ಭರ್ಜರಿ ಪ್ರದರ್ಶನದಿಂದ ಅಫ್ಘಾನ್ ಗೆ 213 ರನ್ ಟಾರ್ಗೆಟ್ ನೀಡಿದೆ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀ ಇಂಡಿಯಾ ಒಂದು ಹಂತದಲ್ಲಿ 4.3 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 22 ರನ್ ಗಳಿಸಿತ್ತು. ಈ ವೇಳೆ ನಾಯಕ ರೋಹಿತ್ ಶರ್ಮಾ ಶತಕ (121 ರನ್) ಹಾಗೂ ರಿಂಕು ಸಿಂಗ್ ಆರ್ಧ ಶತಕ (69) ಜೊತೆಯಾಟ ಭಾರತ 212 ರನ್ ತಲುಪಿಸುವಲ್ಲಿ ಯಶಸ್ವಿಯಾಯಿತು. ಆರ್ ಸಿಬಿಯ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಆಟವನ್ನು ಕಣ್ತುಂಬಿಕೊಳ್ಳಲು ಆಗಮಿಸಿದ್ದ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. ಮೊದಲ ವಿಕೆಟ್ ಪತನವಾಗುತ್ತಿದ್ದಂತೆ ಬ್ಯಾಟಿಂಗ್‍ಗೆ ಆಗಮಿಸಿದ ಕೊಹ್ಲಿ ಕೇವಲ 1 ಬಾಲ್ ಎದುರಿಸಿ ಕ್ಯಾಚ್ ಕೊಟ್ಟು ಔಟಾದರು. ನೆಚ್ಚಿನ ಆಟಗಾರ ಕೊಹ್ಲಿ ಶೂನ್ಯಕ್ಕೆ ಔಟಾದಾಗ ತುಂಬಿದ ಕ್ರೀಡಾಂಗಣದಲ್ಲಿ ನೀರವ ಮೌನ ಮನೆ…
Author: AIN Author
ಬೆಂಗಳೂರು:- ಯತೀಂದ್ರ ಜವಾಬ್ದಾರಿಯುತ ನಾಯಕ, ಅವರ ಮಾತನ್ನು ತಿರುಚುವ ಅಗತ್ಯವಿಲ್ಲ ಎಂದು DCM ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿಗಳು. ಅವರು ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ ಎಂದು ತಿಳಿಸಿದ್ದಾರೆ. ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ. ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್‌ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆ ಬಗ್ಗೆಯೂ ಪ್ರತಿಕ್ರಿಯಿಸಿದ…
ಮುಂಬೈ:- ಪ್ರೀತಿ ನಿರಾಕರಿಸಿದ ಗೆಳತಿ ಕೊಂದು ಯುವಕ ಸೂಸೈಡ್ ಮಾಡಿಕೊಂಡ ಘಟನೆ ಜರುಗಿದೆ. ಮುಂಬೈನ ತಲೋಜಾ ಜೈಲು ಆವರಣದಲ್ಲಿ ಯುವತಿಯ ಮೃತದೇಹವೊಂದು ಪತ್ತೆಯಾಗಿತ್ತು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರ ತಂಡ ಧಾವಿಸಿ, ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿತ್ತು. ಬಳಿಕ ಈ ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರಿಗೆ ಆಘಾತಕಾರಿ ಮಾಹಿತಿಯೊಂದು ದೊರಕಿತ್ತು. ನವಿ ಮುಂಬೈನ ಕಲಾಂಬೋಲಿ ಪ್ರದೇಶದ ನಿವಾಸಿ 19 ವರ್ಷದ ಯುವತಿ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋಗಿದ್ದಳು. ಆದರೆ ರಾತ್ರಿಯಾದರೂ ಆಕೆ ಮನೆಗೆ ವಾಪಸ್ಸಾಗಿರಲಿಲ್ಲ. ಹೀಗಾಗಿ ಮನೆಯವರು ಆತಂಕಗೊಂಡು ಬಳಿಕ ಪೊಲೀಸರಿಗೆ ದೂರು ನೀಡಿದ್ದರು. ಇತ್ತ ಇದೇ ದಿನ ರೈಲ್ವೇ ಪೊಲೀಸರ ಮೂಲಕ ಪೊಲೀಸರಿಗೆ ಆತ್ಮಹತ್ಯೆ ಪ್ರಕರಣವೊಂದರ ಮಾಹಿತಿ ಸಿಕ್ಕಿತ್ತು. ಪೊಲೀಸರು ಸ್ಥಳಕ್ಕಾಗಮಿಸಿದಾಗ ಯುವಕನ ಮೃತದೇಹದ ಬಳಿ ಫೋನ್‌ನಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ತನ್ನ ಗೆಳತಿಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದನು. ನಂತರ ಪೊಲೀಸರು ಆತ್ಮಹತ್ಯೆ ಪತ್ರದಲ್ಲಿ ಸಿಕ್ಕ ಸುಳಿವು ಆಧರಿಸಿ ಯುವತಿಯ ಶವಕ್ಕಾಗಿ ಹುಡುಕಾಟ…
ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ರೋಹಿತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 2019ರಿಂದ ಭಾರತದಲ್ಲಿ ಆಡಿದ ಟಿ20 ಸರಣಿಯಲ್ಲಿ ಒಂದರಲ್ಲೂ ಭಾರತ ಸರಣಿಯನ್ನು ಸೋತಿಲ್ಲ. ಆಡಿದ 15 ಸರಣಿಗಳಲ್ಲಿ 13 ಸರಣಿ ವಶಪಡಿಸಿಕೊಂಡಿದೆ. ಉಳಿದ ಎರಡು ಸರಣಿ ಡ್ರಾದಲ್ಲಿ ಅಂತ್ಯಗೊಂಡಿದೆ. ಇನ್ನೂ ಮೂರನೇ ಟಿ20ಯಲ್ಲಿ ಭಾರತ ಗೆದ್ದರೆ, ಟೀಮ್ ಇಂಡಿಯಾ ಪರ ನಾಯಕನಾಗಿ 41 ಟಿ20 ಪಂದ್ಯಗಳನ್ನು ಗೆದ್ದ ಧೋನಿಯವರ ದಾಖಲೆಯನ್ನು ರೋಹಿತ್ ಮುರಿಯಲಿದ್ದಾರೆ
ಅಯೋಧ್ಯೆ:- ರಾಮಲಲ್ಲಾ ಮೂರ್ತಿಯು ರಾಮಮಂದಿರವನ್ನು ಪ್ರವೇಶಿಸಿದೆ. ಜನವರಿ 22 ರಂದು ರಾಮಮಂದಿರದಲ್ಲಿ ನಡೆಯುವ ಬಾಲರಾಮನ ಪ್ರಾಣ ಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಇದೀಗ ರಾಮಲಲ್ಲಾ ಮೂರ್ತಿಯು ರಾಮಮಂದಿರವನ್ನು ಪ್ರವೇಶಿಸಿದೆ. https://twitter.com/ANI/status/1747612786195308712?ref_src=twsrc%5Etfw%7Ctwcamp%5Etweetembed%7Ctwterm%5E1747612786195308712%7Ctwgr%5E31b89146c3801a60dc73d938ea114a8b653b7db8%7Ctwcon%5Es1_c10&ref_url=https%3A%2F%2Fpublictv.in%2Fram-mandir-lord-rams-idol-being-brought-to-ayodhya%2F ಇಂದು ಸಂಜೆ ಭಗವಾನ್ ರಾಮನ ವಿಗ್ರಹವನ್ನು ಹೊತ್ತ ಟ್ರಕ್ ಅನ್ನು ‘ಜೈ ಶ್ರೀ ರಾಮ್’ ಘೋಷಣೆಗಳೊಂದಿಗೆ ರಾಮ ಮಂದಿರದ ಆವರಣಕ್ಕೆ ತರಲಾಯಿತು. ಈ ಮೂರ್ತಿಯನ್ನು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ್ದಾರೆ ಭವ್ಯ ರಾಮಮಂದಿರದ ಸಂಕೀರ್ಣಕ್ಕೆ ವಿಗ್ರಹವನ್ನು ಕೊಂಡೊಯ್ಯಲು ಮಂಗಳವಾರ ರಾತ್ರಿಯಿಂದಲೇ ಸಿದ್ಧತೆ ನಡೆದಿತ್ತು. 150-200 ಕೆಜಿ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಮೆರವಣಿಗೆಗಾಗಿ ತಡರಾತ್ರಿ ಹೂವಿನಿಂದ ಅಲಂಕರಿಸಿದ ಟ್ರಕ್ ಮೇಲೆ ಇರಿಸಲಾಯಿತು. ಇಂದು ಈ ಟ್ರಕ್ ರಾಮಮಂದಿರದ ಆವರಣವನ್ನು ಪ್ರವೇಶಿಸಿದೆ. 51 ಇಂಚು ಎತ್ತರದ ರಾಮನ ಮೂರ್ತಿಯನ್ನು ಅಯೋಧ್ಯೆ ರಾಮಮಂದಿರದಲ್ಲಿ ಸೋಮವಾರ ಪ್ರತಿಷ್ಠಾಪಿಸಲಾಗುತ್ತದೆ. ನಾಳೆ ರಾಮನ ಮೂರ್ತಿ ಗರ್ಭಗುಡಿ ಪ್ರವೇಶಿಸಲಿದೆ.
ಬೆಂಗಳೂರು:- ರಾಜಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅನುಮತಿ ಪಡೆದು ಶ್ರೀ ರಾಮನ ಕಟೌಟ್ ಹಾಕಿದ್ದರೂ ಪೊಲೀಸರಿಂದ FIR ದಾಖಲು ಮಾಡಲಾಗಿದೆ. ಶಿವನಗರ ಯುವಕರ ಸಂಘದಿಂದ ಬೆಸ್ಕಾಂಗೆ ಹಣ ಪಾವತಿಸಿ, ಅನುಮತಿ ಪಡೆದು ಕಾರ್ಡ್ ರಸ್ತೆಯ ವಾರಿಯರ್ ಬೇಕರಿ ಬಳಿ ಬೃಹತ್ ಕಟೌಟ್ ಅಳವಡಿಸಲಾಗಿದೆ. ರಾಜಾಜಿನಗರ ಪೊಲೀಸರ ನಡೆಗೆ ಶಿವನಗರ ಯುವಕರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದಾರೆ ರಾಜ್ಯದ ಜಿಲ್ಲೆ ಜಿಲ್ಲೆಯಲ್ಲೂ ರಾಮಜಪ ನಡೆಯುತ್ತಿದೆ. ಇದರ ನಡುವೆ ಕೋಲಾರದಲ್ಲಿ ಕಿಡಿಗೇಡಿಗಳು ಶ್ರೀರಾಮನ ಫ್ಲೆಕ್ಸ್ ಹರಿದು ಶಾಂತಿ ಕದಡುವ ಪ್ರಯತ್ನ ಮಾಡಿದ್ದರು. ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲೂ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ಸಂಕ್ರಾಂತಿ ಸಂಬಂಧ ಶುಭ ಕೋರಿ ಫ್ಲೆೇಕ್ಸ್ ಅಳವಡಿಸಲಾಗಿತ್ತು.
ಹುಬ್ಬಳ್ಳಿ : ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಐಶಾರಾಮಿ ಪಲ್ಲಕ್ಕಿ ಬಸ್ ಗಳ ಸೇವೆಯನ್ನು ವಿದ್ಯುಕ್ತವಾಗಿ ಆರಂಭಿಸಲಾಗಿದ್ದು, ಮೊದಲ ಎರಡು ಬಸ್ ಗಳು ಹುಬ್ಬಳ್ಳಿ- ಶಿರಡಿ ನಡುವೆ ಸಂಚರಿಸುತ್ತವೆ ಎಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಸಾರಿಗೆ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ ಎಸಿ ಸ್ಲೀಪರ್ ಅಂಬಾರಿ ಉತ್ಸವ, ನಾನ್ ಎಸಿ ಸ್ಲೀಪರ್ ಹಾಗೂ ವೇಗದೂತ ಸಾರಿಗೆಗಳು ಸೇರಿದಂತೆ ಹೊಸ ಬಸ್ಸುಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಮೊದಲ ಹಂತದಲ್ಲಿ ಸಂಸ್ಥೆಗೆ ಬಂದಿರುವ ನಾಲ್ಕು ಪಲ್ಲಕ್ಕಿ ಬಸ್ಸುಗಳಲ್ಲಿ ಎರಡು ಬಸ್ಸುಗಳನ್ನು ಹುಬ್ಬಳ್ಳಿ ಗ್ರಾಮಾಂತರ ವಿಭಾಗಕ್ಕೆ ನೀಡಲಾಗಿದೆ. ಪ್ರಯಾಣಿಕರ ಬೇಡಿಕೆ ಹೆಚ್ಚಾಗಿರುವ ಹುಬ್ಬಳ್ಳಿ-ಶಿರಡಿ ಮಾರ್ಗದಲ್ಲಿ ಈ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ನಿರ್ಧರಿಸಲಾಗಿದೆ. ಹುಬ್ಬಳ್ಳಿಯಿಂದ ಶಿರಡಿಗೆ ಹೋಗುವ ಬಸ್ಸು ಗೋಕುಲ ರಸ್ತೆ ಬಸ್ ನಿಲ್ದಾಣದಿಂದ ರಾತ್ರಿ 8 -00 ಗಂಟೆಗೆ ಹೊರಡುತ್ತದೆ. ಧಾರವಾಡ ಹೊಸ ಬಸ್ ನಿಲ್ದಾಣದಿಂದ 9-00ಕ್ಕೆ ಹಾಗೂ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ 10-15ಕ್ಕೆ ಹೊರಡುತ್ತದೆ. ಪುಣೆ, ಅಹ್ಮದನಗರ ಮಾರ್ಗವಾಗಿ ಮರುದಿನ…
ಬೆಂಗಳೂರು, ಜ. 17:ಇದೇ ತಿಂಗಳು 25 ರಿಂದ ಶಿವರಾಮ ಕಾರಂತ ಬಡಾವಣೆ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗುವುದು. ಮೊದಲ ಆದ್ಯತೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಬಿಡಿಎ ಪ್ರಧಾನ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; ಶಿವರಾಮ ಕಾರಂತ ಬಡಾವಣೆ ಹಾಗೂ ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಗಳ ಪರಿಶೀಲನೆ ಮಾಡಿದ್ದೇವೆ. ಶಿವರಾಮ್ ಕಾರಂತ ಬಡಾವಣೆ ನಿವೇಶನಕ್ಕೆ ಆನ್ ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಮಾಡಿಕೊಡಲಾಗುವುದು. ಉಳಿದಂತೆ ಬೆಂಗಳೂರಿನ ವಿವಿಧ ಬಿಡಿಎ ಕಚೇರಿಗಳಲ್ಲಿ ಆಫ್ ಲೈನ್ ಮೂಲಕ ಅರ್ಜಿಗಳ ಸ್ವೀಕಾರ ಮಾಡಲಾಗುವುದು. ಅರ್ಜಿ ಹಾಕಿದ ನಂತರ ಅರ್ಜಿದಾರರು ಒಂದು ತಿಂಗಳಲ್ಲಿ ನಿವೇಶನ ಒಟ್ಟು ಮೊತ್ತದ 12.5 % ರಷ್ಟು ಆರಂಭಿಕ ಠೇವಣಿ ಕಟ್ಟಬೇಕು. ಪರಿಶಿಷ್ಟರು 5 % ರಷ್ಟು ಠೇವಣಿ ಕಟ್ಟಬೇಕು. ಬಹಳ ಪಾರದರ್ಶಕವಾಗಿ ನಿವೇಶನ ಹಂಚಿಕೆ ಮಾಡಲಾಗುವುದು. ಯಾರು ಬೇಕಾದರೂ ಮಾಹಿತಿ ಪಡೆಯಲು ಹಾಗೂ ನೋಡಲು…
ದೆಹಲಿ:- ಜನವರಿ 22 ರ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ. ಜನವರಿ 22 ರ ಉದ್ಘಾಟನಾ ಸಮಾರಂಭದ ನಂತರ ತಮ್ಮ ಕುಟುಂಬದೊಂದಿಗೆ ರಾಮಮಂದಿರಕ್ಕೆ ಭೇಟಿ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು ಹೇಳಿದ್ದಾರೆ. ನಾನು ನನ್ನ ಹೆಂಡತಿ, ಮಕ್ಕಳು ಮತ್ತು ಪೋಷಕರೊಂದಿಗೆ ರಾಮಮಂದಿರಕ್ಕೆ ಹೋಗಲು ಬಯಸುತ್ತೇನೆ.ಪ್ರಾಣ ಪ್ರತಿಷ್ಠಾ ಸಮಾರಂಭದ ನಂತರ ನಾವು ಹೋಗುತ್ತೇವೆ ಎಂದರು. ನನಗೆ ಸರ್ಕಾರದಿಂದ ಪತ್ರ ಬಂದಿದೆ.ನಾವು ಅವರಿಗೆ ಕರೆ ಮಾಡಿದಾಗ, ವೈಯಕ್ತಿಕ ಆಹ್ವಾನ ನೀಡಲು ತಂಡ ಬರಲಿದೆ ಎಂದು ನಮಗೆ ತಿಳಿಸಲಾಯಿತು. ಆ ತಂಡ ಇನ್ನೂ ಬಂದಿಲ್ಲ ಎಂದಿದ್ದಾರೆ. ಆಮಂತ್ರಣ ಪತ್ರಿಕೆಯ ಪ್ರಕಾರ ಒಬ್ಬರಿಗೆ ಮಾತ್ರ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಇಷ್ಟೊಂದು ವಿವಿಐಪಿಗಳು ಇರುವುದರಿಂದ ಅವರ ಮೇಲೆ ಹೆಚ್ಚಿನ ಭದ್ರತೆಯನ್ನು ಕೇಂದ್ರೀಕರಿಸಲಾಗುವುದು ಎಂದು ಅವರು ಹೇಳಿದರು.
ಬೆಂಗಳೂರು:- ಕರ್ನಾಟಕದಲ್ಲಿ ಹೂಡಿಕೆ ಮಾಡಲು ಹಲವು ಕಂಪನಿಗಳ ಆಸಕ್ತಿ ತೋರಿದ್ದು, ಡಾವೋಸ್ ಶೃಂಗಸಭೆಯಲ್ಲಿ 7 ಕಂಪನಿಗಳೊಂದಿಗೆ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ಸ್ವಿಟ್ಜರ್ಲ್ಯಾಂಡ್ನ ಡಾವೋಸ್ನಲ್ಲಿ ನಡೆದ ವರ್ಲ್ಡ್ ಎಕನಾಮಿಕ್ ಫೋರಂನ ವಾರ್ಷಿಕ ಸಭೆಯಲ್ಲಿ ಏಳು ಕಂಪನಿಗಳು ಕರ್ನಾಟಕದಲ್ಲಿ ಹೂಡಿಕೆ ಮಾಡಲು ಒಡಂಬಡಿಕೆ ಮಾಡಿಕೊಂಡಿವೆ ಎಂದು ರಾಜ್ಯ ಸರ್ಕಾರ ಇಂದು ಹೇಳಿದೆ. ವೆಬ್ ವೆರ್ಕ್ಸ್, ಲುಲು ಗ್ರೂಪ್, ಟಕೆಡಾ ಫಾರ್ಮಾಸ್ಯೂಟಿಕಲ್ಸ್ ಸೇರಿದಂತೆ ಏಳು ಸಂಸ್ಥೆಗಳು ರಾಜ್ಯ ಸರ್ಕಾರದೊಂದಿಗೆ ಎಂಒಯುಗೆ ಸಹಿ ಹಾಕಿರುವ ವಿಚಾರವನ್ನು ಸಚಿವ ಎಂಬಿ ಪಾಟೀಲ್ ತಿಳಿಸಿದ್ದಾರೆ. ಇವುಗಳಿಂದ ಒಟ್ಟು 2.6 ಬಿಲಿಯನ್ ಡಾಲರ್ನಷ್ಟು ಹೂಡಿಕೆ ಆಗಲಿದೆ ಎಂದು ಸಚಿವರು ವಿವರಿಸಿದ್ದಾರೆ. ಅಂದರೆ, ಸುಮಾರು 22,000 ಕೋಟಿ ರೂನಷ್ಟು ಹೂಡಿಕೆ ಕರ್ನಾಟಕಕ್ಕೆ ಹರಿದುಬರಲಿದೆ. ಮೂರು ದಿನಗಳ ಶೃಂಗಸಭೆಯಲ್ಲಿ ಕರ್ನಾಟಕ ಅಮೋಘ 2.6 ಬಿಲಿಯನ್ ಡಾಲರ್ನಷ್ಟು ಮೌಲ್ಯದ ಒಪ್ಪಂದಗಳನ್ನು ಗಿಟ್ಟಿಸಿಕೊಂಡಿದೆ. ಈ ಸಂಬಂಧ ಸಚಿವ MB ಪಾಟೀಲ್ ಮಾತನಾಡಿ, ವೆಬ್ ವೆರ್ಕ್ಸ್, ಮೈಕ್ರೋಸಾಫ್ಟ್, ಹಿಟಾಚಿ, ಲುಲು ಗ್ರೂಪ್, ಹ್ಯೂಲೆಟ್ ಪ್ಯಾಕಾರ್ಡ್, ಹನಿವೆಲ್, ಐನಾಕ್ಸ್, ವೋಲ್ವೋ,…