ಬೆಂಗಳೂರು: ಅದೊಂದು ಖತರ್ನಾಕ್ ಗ್ಯಾಂಗ್.ಮಾಡಿಕೊಂಡಿದ್ದ ಸಾಲ ತೀರಿಸಲು ಅಡ್ಡ ದಾರಿ ಹಿಡಿದಿದ್ರು.ಹಗಲು ಹೊತ್ತಲೆ ರಾಬರಿಗೆ ಇಳಿದಿದ್ರು.ಒಂಟಿ ಮಹಿಳೆ ಕೈ ಕಾಲು ಕಟ್ಟಿ ಅಟ್ಟಹಾಸ ಮೆರೆದಿದ್ರು.ಅದೇ ಖತರ್ನಾಕ್ ರಾಬರಿ ಗ್ಯಾಂಗ್ ಕೈಗೆ ಪೊಲೀಸರು ಕೋಳ ತೊಡಿಸಿದ್ದಾರೆ.. ಈ ಫೋಟೋ ರಲ್ಲಿ ಕಾಣ್ತಿರೊ ಆಸಾಮಿಗಳ ಹೆಸರು ಗುರು,ರುದ್ರೇಶ್,ಸಂದೀಪ್,ಪ್ರಭಾವತಿ ಮತ್ತು ರೇಣುಕ.ಮೈ ಬಗ್ಗಿಸಿ ದುಡಿದು ತಿಂದಿದ್ದಿದ್ರೆ ಇವತ್ತು ಪೊಲೀಸ್ ಠಾಣೆಯಲ್ಲಿ ಕೈಕಟ್ಟಿ ನಿಲ್ಲೊ ಪರಿಸ್ಥಿತಿ ಬರ್ತಾ ಇರ್ಲಿಲ್ಲ.ಆದ್ರೆ ಅಡ್ಡದಾರಿ ಹಿಡಿದು ಹೋದವರು ಒಂದೇ ದಿನಕ್ಕೆ ಪೊಲೀಸರ ಅತಿಥಿಗಳಾಗಿದ್ದಾರೆ.. ಹೌದು ಅದು ಜನವರಿ 14 ರ ಬೆಳಗ್ಗೆ 9.30 ರ ಸಮಯ..ಸ್ಥಳ ತಿಂಡ್ಲು ಸರ್ಕಲ್ ನಲ್ಲಿರುವ ಗಂಗಾ ಆಯುರ್ವೇದಿಕ್ ಮಸಾಜ್ ಸೆಂಟರ್.ಆಗಷ್ಟೇ ಕೆಲಸಕ್ಕೆ ಬಂದಿದ್ದ ಅನುಶ್ರೀ ಒಂದು ಗ್ರಾಹಕರ ಮಸಾಜ್ ಮುಗಿಸಿ ಕೂತಿದ್ರು ಈ ವೇಳೆ ಎಂಟ್ರಿಕೊಟ್ಟವಳೇ ಪ್ರಭಾವತಿ..ನನಗೂ ಮಸಾಜ್ ಮಾಡ್ಬೇಕು ಹಣವನ್ನ ನನ್ನ ಗಂಡ ಕೊಡ್ತಾನೆ ಅಂತಾ ಗುರು ಎಂಬಾತನನ್ನ ಒಳಗೆ ಕರೆಸಿಕೊಂಡಿದ್ಳು..ಏಕಾಏಕಿ ಬಂದ ಗುರು ಕರ್ಚೀಫ್ ನಲ್ಲಿ ಕೆಮಿಕಲ್ ಹಾಕಿ ಬಾಯಿ ಮತ್ತು…
Author: AIN Author
ಬೆಂಗಳೂರು: ಅದು ಮಧ್ಯರಾತ್ರಿಯ ಸಮಯ.ಕೈಯಲ್ಲಿ ರಾಡ್ ಹಿಡಿದಿದ್ದ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ರು.ಕಂಡ ಕಂಡ ವಾಹನಗಳ ಮೇಲೆ ಬೀಸಿ ಕ್ರೌರ್ಯ ಮೆರೆದಿದ್ರು.ಎರಡು ಕೆಎಸ್ ಆರ್ ಟಿಸಿ ಬಸ್ ಗಳ ಗಾಜು ಪುಡಿ ಪುಡಿ ಮಾಡಿದ್ರು.ಮದ್ಯದ ಅಮಲಲ್ಲಿ ಕಿರಿಕ್ ಮಾಡಿಕೊಂಡವರು ಪೊಲೀಸರ ಅತಿಥಿ ಆಗಿದ್ದಾರೆ ಕೈಯಲ್ಲಿ ರಾಡ್ ಹಿಡಿದು ಓಡಾಡ್ತಿರೊ ಕ್ರಿಮಿಗಳು..ಪುಡಿ ಪುಡಿಯಾಗಿ ಬಿದ್ದಿರೊ ಕೆಎಸ್ ಆರ್ ಟಿ ಸಿ ಬಸ್ ನ ಕಿಟಕಿ ಗಾಜುಗಳು..ದಿಕ್ಕೇ ತೋಚದಂತೆ ನಿಂತಿರೊ ಚಾಲಕ ಮತ್ತು ನಿರ್ವಾಹಕ..ಮದ್ಯ ರಾತ್ರಿ ನಡೆದ ಈ ಘಟನೆ ಬಸ್ ನಲ್ಲಿದ್ದ ಪ್ರಯಾಣಿಕರೇ ಬೆಚ್ಚಿಬೀಳುವಂತೆ ಮಾಡಿತ್ತು…ಸುಖಾ ಸುಮ್ಮನೆ ಬಂದ ಕಿಡಿಗೇಡಿಗಳು ರಾಡ್ ಬೀಸಿ ಎಸ್ಕೇಪ್ ಆಗಿದ್ರು ಹೌದು..ಅದು ಮಧ್ಯರಾತ್ರಿ 1.40 ರ ಸಮಯ.ಮೈಸೂರು ಡಿಪೋ ನ ಎರಡು ಕೆಎಸ್ ಆರ್ ಟಿಸಿ ಬಸ್ ಬೆಂಗಳೂರು ತಲುಪಿತ್ತು..ಎರಡು ಬಸ್ ನಲ್ಲಿ ಸುಮಾರು 25 ರಿಂದ 30 ಜನ ಪ್ರಯಾಣಿಕರು ಇದ್ರು..ಬಸ್ ಶಾಂತಲ ಸಿಗ್ನಲ್ ಬಳಿ ಬರ್ತಿದ್ದಂತೆ ಎರಡು ಆಟೋ ಹಾಗೂ ಒಂದು ಬೈಕ್ ನಲ್ಲಿ ಬಂದ…
ಬೆಂಗಳೂರು: ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ ಹಾಗಾಗಿ ಇಂದು ಮಧ್ಯರಾತ್ರಿಯಿಂದಲೇ ಲಾರಿ ಸಂಘಟನೆಗಳು ಮುಷ್ಕರ ಕೈಗೊಳ್ಳಲಿದ್ದಾರೆ. ಮುಷ್ಕರ ಹಿನ್ನೆಲೆ 2 ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹಾಗೆ ಕಾನೂನು ರದ್ದತಿಗೆ ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ದಕ್ಷಿಣ ಭಾರತದ ಲಾರಿ ಮಾಲೀಕರ ಸಂಘಗಳು ಮುಷ್ಕರಕ್ಕೆ ಕರೆಕೊಟ್ಟಿವೆ.ಕರ್ನಾಟಕ ಲಾರಿ ಮಾಲೀಕರ ಸಂಘದಿಂದಲೂ ಮಷ್ಕರಕ್ಕೆ ಬೆಂಬಲ ಸಿಕ್ಕಿದೆ. ಇತ್ತ ಫೆಡರೇಶನ್ ಆಫ್ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘ ಮುಷ್ಕರಕ್ಕೆ ಬೆಂಬಲ ನೀಡಿಲ್ಲ. ಇನ್ನು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಹಿಟ್ ಅಯಂಡ್ ರನ್ ಪ್ರಕರಣಗಳಿಗೆ ಕಠಿಣ ಕಾನೂನುಗಳ ವಿರುದ್ಧ ಪ್ರತಿಭಟಿಸಲು ಮುಷ್ಕರಕ್ಕೆ ಕರೆ ನೀಡಲಾಗಿದೆ. ಹೊಸ ಕಾನೂನು ಪ್ರಕಾರ, ರಸ್ತೆಯಲ್ಲಿ ಚಲಿಸುವಾಗ ಲಾರಿಗಳಿಗೆ ಯಾರಾದರೂ ಬಂದು ಅಕಸ್ಮಾತಾಗಿ ಡಿಕ್ಕಿ ಹೊಡೆದರೆ, ಹಾಗೂ ನಮ್ಮ ಚಾಲಕರು ವಾಹನದಲ್ಲಿ ಏನಾದರೂ ತೊಂದರೆ ಉಂಟಾಗಿ ಎದುರಿನ ವಾಹನಕ್ಕೆ ಡಿಕ್ಕಿ ಹೊಡೆದು ಅದರಲ್ಲಿದ್ದ ಪ್ರಯಾಣಿಕರು ಮೃತಪಟ್ಟರೆ ಲಾರಿ ಚಾಲಕರಿಗೆ…
ಬೆಂಗಳೂರು: ಇಂದು ದಿಢೀರ್ ಡಿಸಿಎಂ ಡಿ.ಕೆ,.ಶಿವಕುಮಾರ್ ನಿವಾಸಕ್ಕೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಭೇಟಿ ನೀಡಿದ್ದಾರೆ. ಕುಮಾರಕೃಪಾ ಅತಿಥಿ ಗೃಹದಲ್ಲಿ ಭೇಟಿ ಮಾಡಿ ಉಭಯ ನಾಯಕರು ಸಮಾಲೋಚನೆ ನಡೆಸಿದರು.
ದಾವಣಗೆರೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62) ಹಾಗೂ ಗಂಗಮ್ಮ (80 ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಹಾಗೂ ಗಾಯಾಳುಗಳು ಚನ್ನಗಿರಿ ತಾಲೂಕಿನ ನಾರಶೆಟ್ಟಿಹಳ್ಳಿ ಗ್ರಾಮದ ನಿವಾಸಿಗಳಾಗಿದ್ದು, ಸಂತೆಬೆನ್ನೂರು ಕಡೆಯಿಂದ ಚನ್ನಗಿರಿಗೆ ಒಮಿನಿಯಲ್ಲಿ ಒಂದೇ ಕುಟುಂಬಸ್ಥರು ಹೋಗುವಾಗ ಎದುರಿಗೆ ಭತ್ತದ ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಡಿಕ್ಕಿ ಹೊಡೆದ ರಭಸಕ್ಕೆ ವಾಹನದ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು. ಗಾಯಾಳುಗಳಿಗೆ ಚನ್ನಗಿರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಚನ್ನಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಡಾ.ಯತೀಂದ್ರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿ ಇರುತ್ತೆ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ, ನಾನು ಕೆಪಿಸಿಸಿ ಅಧ್ಯಕ್ಷ ಆಗಿದ್ದೇನೆ ಆಸೆ ಪಡುವುದು, ಜನರ ಬಳಿ ಮನವಿ ಮಾಡುವುದು ಇರುತ್ತೆ ಇದನ್ನು ಟ್ವಿಸ್ಟ್ ಮಾಡುವುದು ಬೇಡ ಎಂದರು. ಯತೀಂದ್ರ ಬಹಳ ಸೂಕ್ಷ್ಮವಾಗಿ ಬೆಳೆಯುತ್ತಿರುವ ನಾಯಕ ನಾನು ಕೂಡಾ ನಮ್ಮ ಭಾಗದಲ್ಲಿ ಹೋದಾಗ ಜನರ ಭಾವನೆಗಳಿಗೆ ತಕ್ಕ ಹಾಗೆ ಮಾತಾಡ್ತೀನಿ ಅದನ್ನು ಮಾಧ್ಯಮಗಳಲ್ಲಿ ಬೇರೆ ಅರ್ಥ ಬರುವ ರೀತಿ ಬಿಂಬಿಸುವುದು ಬೇಡ ಎಂದು ಹೇಳಿದರು.
ಬೆಂಗಳೂರು : ಗಾಢ ನಿದ್ರೆಯೇ ಪ್ರಧಾನಿ ಮೋದಿಯವರ ಮಂತ್ರ ಎಂದು ಹಾಸ್ಯ ಭರಿತ ಪೋಸ್ಟರ್ ಮೂಲಕ ಲೇವಡಿ ಮಾಡಿದ್ದ ಸಿಎಂ ಸಿದ್ದರಾಮಯ್ಯರಿಗೆ ಬಿಜೆಪಿ ಟಾಂಗ್ ಕೊಟ್ಟಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ ‘ಸಿದ್ದಿ’ಸಿದೆ ಎಂದು ಕುಟುಕಿದೆ. https://ainlivenews.com/it-is-the-misfortune-of-the-people-of-karnataka-that-the-cm-has-not-yet-woken-up/ ನಕಲಿ ಸುದ್ದಿಗಳನ್ನು ರಚಿಸುತ್ತಾ ಕಾಲಹರಣ ಮಾಡುವ ಬದಲು ರಾಜ್ಯದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಯೋಚಿಸಿದ್ದರೆ, ರೈತರು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ. ಮಹಿಳೆಯರ ಮೇಲೆ ಹಲ್ಲೆ, ಮಾನಭಂಗಗಳು ನಡೆಯುತ್ತಿರಲಿಲ್ಲ ಎಂದು ಛೇಡಿಸಿದೆ. ಎಲ್ಲೆಂದರಲ್ಲಿ ಸದಾ ನಿದ್ದೆಗೆ ಜಾರುವುದು ನೀವು ಎಂಬುದು ಜಗತ್ತಿಗೆ ತಿಳಿದಿರುವ ವಿಷಯ. ದಿನಕ್ಕೆ 18 ಗಂಟೆ ಕೆಲಸ ಮಾಡುವ ಪ್ರಧಾನಿ ಮೋದಿಯವರನ್ನು ಅವಹೇಳನ ಮಾಡಿದರೆ ಜನ ನಂಬುತ್ತಾರೆ ಎಂಬ ಭ್ರಮೆಯಿಂದ ಆದಷ್ಟು ಬೇಗ ಹೊರ ಬನ್ನಿ. ಸರ್ಕಾರವನ್ನು ಪ್ರಧಾನಿ ಮೋದಿ ಮಾದರಿಯಲ್ಲಿ ಮುನ್ನಡೆಸಿ ಜನರ ಸಮಸ್ಯೆಯನ್ನು ಬಗೆಹರಿಸಿ ಎಂದು ಸಿದ್ದರಾಮಯ್ಯರಿಗೆ ತಿರುಗೇಟು ನೀಡಿದೆ.
ಸೂಪರ್ ಹೀರೋ ಕಾನ್ಸೆಪ್ಟ್ ಹೊಂದಿರುವ ಹನು-ಮಾನ್ ಸಿನಿಮಾಗೆ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತೇಜ ಸಜ್ಜಾ, ವರಲಕ್ಷ್ಮೀ ಶರತ್ ಕುಮಾರ್, ಕನ್ನಡದವರೇ ಆದ ಅಮೃತಾ ಐಯ್ಯರ್, ದೀಪಕ್ ಶೆಟ್ಟಿ ನಟಿಸಿರುವ ಈ ಚಿತ್ರಕ್ಕೆ ಪ್ರೇಕ್ಷಕ ಜೈಕಾರ ಹಾಕುತ್ತಿದ್ದಾರೆ. ದೊಡ್ಡ ದೊಡ್ಡ ಸಿನಿಮಾಗಳಿಗೆ ಟಕ್ಕರ್ ಕೊಡುತ್ತಿರುವ ಹನು-ಮಾನ್ ಚಿತ್ರವನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಿನ್ನೆ ವೀಕ್ಷಿಸಿದ್ದಾರೆ. ಬೆಂಗಳೂರಿನ ಒರಾಯನ್ ಮಾಲ್ ನಲ್ಲಿ ಪತ್ನಿ,ಮಗಳೊಟ್ಟಿಗೆ ಹನು-ಮಾನ್ ಸಿನಿಮಾ ನೋಡಿದ ಶಿವಣ್ಣನಿಗೆ ತೇಜ್ ಸಜ್ಜಾ ಹಾಗೂ ಅಮೃತಾ ಸಾಥ್ ಕೊಟ್ಟರು. ಚಿತ್ರ ವೀಕ್ಷಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಿವಣ್ಣ, ಹನುಮಾನ್ ಸಿನಿಮಾವನ್ನು ಮೈಂಡ್ ಬ್ಲೋಯಿಂಗ್ ಚಿತ್ರ ಎಂದರು. ತೇಜ ಸಜ್ಜಾ, ಅಮೃತಾ, ವರಲಕ್ಷ್ಮೀ ಅಭಿನಯವನ್ನು ಕೊಂಡಾಡಿದರು. ತೇಜ ಮೀಟ್ಸ್ ತೇಜಸ್ವಿ ಸೂರ್ಯ ಕಟ್ಟರ್ ಹಿಂದೂ ವಾದಿ ಎನಿಸಿಕೊಂಡಿರುವ ಸಂಸದ ತೇಜಸ್ವಿ ಸೂರ್ಯ ಅವರನ್ನು ತೇಜ ಸಜ್ಜಾ ನಿನ್ನೆ ಬೆಂಗಳೂರಿನಲ್ಲಿ ಭೇಟಿಯಾಗಿದ್ದಾರೆ. ಇದೊಂದು ಆತ್ಮೀಯ ಭೇಟಿಯಾಗಿದ್ದು, ಹನುಮಾನ್ ಸಿನಿಮಾ ಶೀಘ್ರದಲ್ಲಿಯೇ ವೀಕ್ಷಿಸುವುದಾಗಿ ತೇಜಸ್ವಿ ಸೂರ್ಯ ಹೇಳಿದ್ದಾರೆ. ಸುಗ್ಗಿ…
ಬೆಂಗಳೂರು: ದಿವಸಕ್ಕೆ ಹದಿನೆಂಟು ತಾಸು ದೇಶಕ್ಕಾಗಿ ಕೆಲಸ ಮಾಡುವ ಒಂಭತ್ತುವರೆ ವರ್ಷದಲ್ಲಿ ಒಂದು ದಿನವೂ ರಜೆ ತೆಗೆದುಕೊಳ್ಳದೆ ಕಠಿಣ ಪರಿಶ್ರಮಿ, ಅಪ್ಪಟ ದೇಶಭಕ್ತ ನಮ್ಮ ಪ್ರಧಾನಿ ನರೇಂದ್ರ ಮೋದಿ ಭಾರತದ ಇತಿಹಾಸದಲ್ಲಿ ದಾಖಲೆಯ ಅಭಿವೃದ್ಧಿ ಯನ್ನು ಮಾಡಿದ್ದು, ಅವರ ಬಗ್ಗೆ ಗಾಢ ನಿದ್ರೆ ಎಂದು ಮಾತನಾಡುವ ಸಿದ್ದರಾಮಯ್ಯ ತಮ್ಮ ಗಾಢ ನಿದ್ರೆಯಿಂದ ಈಗ ಎಚ್ಚೆತ್ತುಕೊಂಡಂತೆ ಕಾಣಿಸುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟಕೆ ಮಾಡಿದ್ದಾರೆ ಸಾಮಾಜಿಕ ತಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಬಸವರಾಜ್ ಬೊಮ್ಮಾಯಿ ಅವರು ಬರೆದುಕೊಂಡಿದ್ದಾರೆ. ಯುಪಿಎ 2004-2014 ರ ಹತ್ತು ವರ್ಷದ ಆಡಳಿತದಲ್ಲಿ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ 81,795.19 ಕೋಟಿ ರೂ. ಹಾಗೂ ಅನುದಾನ ಹಂಚಿಕೆ ರೂಪದಲ್ಲಿ 60779.84 ಕೋಟಿ ರೂ. ಹಣ ಬಂದರೆ. ಮೋದಿ ಅವಧಿಯಲ್ಲಿ 2014-2023 ಡಿಸೆಂಬರ್ ವರೆಗೆ ತೆರಿಗೆ ಹಂಚಿಕೆಯಲ್ಲಿ 2,82,791 ಕೋಟಿ ರೂ. ಬಂದರೆ, ಅನುದಾನ ಹಂಚಿಕೆಯಲ್ಲಿ 2,08,882.02 ಕೋಟಿ ರೂ. ಬಂದಂತಹ ಹಣ ಇವರ ಕಣ್ಣಿಗೆ ಕಾಣುತ್ತಿಲ್ಲ. ಮೇ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಅನಂತಕುಮಾರ್ ಹೆಗಡೆ ಹಾಕಿರುವ ಸವಾಲಿನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ನಮ್ಮ ಹೆಸರನ್ನು ದಿನಕ್ಕೆರಡು ಬಾರಿ ಹೇಳದಿದ್ದರೆ ಅವರು ತಿಂದ ಊಟ ಜೀರ್ಣವೂ ಆಗಲ್ಲ ಎಂದು ಕಿಡಿಕಾರಿದ್ದಾರೆ https://ainlivenews.com/high-command-will-decide-whether-siddaramaiah-is-full-time-cm-g-parameshwar/ ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡಲಿಲ್ಲ ಅಂದ್ರೆ ರಾತ್ರಿ ನಿದ್ದೆಯೂ ಬರಲ್ಲ. ಅವರಿಗೆ ನಾವು ಮೂರು ಜನ ಮನೆ ದೇವರಂತಾಗಿದ್ದೇವೆ. ಕೆಲವು ನಾಯಕರು ಯಾವ ಪರಿಸ್ಥಿತಿಯಲ್ಲಿದ್ದಾರೆ ಎಂದರೆ ತಮ್ಮ ರಾಜಕೀಯ ಅಸ್ಥಿತ್ವ ಉಳಿಸಿಕೊಳ್ಳಲು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಟೀಕೆ ಮಾಡಬೇಕಿದೆ ಎಂದು ಹೇಳಿದರು. ಅನಂತಕುಮಾರ್ ಹೆಗಡೆ ಕಳೆದ ನಾಲ್ಕೂವರೆ ವರ್ಷ ಎಲ್ಲಿದ್ದರು ಎಂದು ನಮಗಿಂತ ನಿಮಗೆ ಚೆನ್ನಾಗಿ ಗೊತ್ತಿದೆ. ಅವರು ಕೌಶಲ್ಯಭಿವೃದ್ಧಿ, ಉದ್ಯಮ ಇಲಾಖೆ ಸಚಿವರಾಗಿದ್ದರು. ಅವರು ನಮ್ಮ ರಾಜ್ಯದಲ್ಲಿ ಬೇಡ, ಅವರ ಜಿಲ್ಲೆಯಲ್ಲಿ ಎಷ್ಟು ಜನಕ್ಕೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಡಿಸಿದ್ದಾರೆ ಎಂದು ಹೇಳಲಿ ಎಂದರು. ಎಷ್ಟು ನವೋದ್ಯಮಕ್ಕೆ ಬೆಂಬಲ…