ಉಜ್ವಲ ಯೋಜನೆಯ ಅಡಿಯಲ್ಲಿ ಮನೆ ಮನೆಯಲ್ಲಿಯೂ ಇಂದು ಗ್ಯಾಸ್ ಸಿಲಿಂಡರ್ ಬಳಕೆ ಕಾಣಬಹುದು. ಗ್ಯಾಸ್ ಸಿಲೆಂಡರ್ ಬಳಕೆ ಮಾಡುವಾಗ ಸಾಕಷ್ಟು ಮುತುವರ್ಜಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ ದೊಡ್ಡ ಅನಾಹುತವನ್ನೇ ಎದುರಿಸಬೇಕಾಗುತ್ತದೆ. ಗ್ಯಾಸ್ ಬಳಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದ ಹಾಗೇ ಮುನ್ನೆಚ್ಚರಿಕೆಯನ್ನು ವಹಿಸಲು ಪ್ರತಿಯೊಬ್ಬರಿಗೂ ಸರ್ಕಾರವು ಸೂಚನೆಯನ್ನು ನೀಡಿದೆ. ಇದಕ್ಕಾಗಿಯೇ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಪ್ರತಿಯೊಬ್ಬರಿಗೂ ಹೊಸ ರೂಲ್ಸ್ ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಸಿಲಿಂಡರ್ ಸುರಕ್ಷತೆಗಾಗಿ ಸರ್ಕಾರ ಈ ಹೊಸ ನಿಯಮವನ್ನು ಮಾಡಿದೆ, ಗ್ಯಾಸ್ ಸಿಲಿಂಡರ್ ಬಳಸುವವರು ‘ಪಂಚವಾರ್ಷಿಕ ಅನಿಲ ತಪಾಸಣೆ’ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಇನ್ನು ಮುಂದೆ ಭಾರತ ಗ್ಯಾಸ್ ನಂತಹ ಕಂಪನಿಗಳು ಸುರಕ್ಷತೆ ಹೊಂದಿರುವ ಎಲ್‌ಪಿಜಿ ಕನೆಕ್ಷನ್ ಕುಟುಂಬಗಳಿಗೆ ಮಾತ್ರ ಸಿಲಿಂಡರ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಗ್ಯಾಸ್ ಸಿಲೆಂಡರ್ ಸುರಕ್ಷತೆ ಇಲ್ಲದೆ ಇರುವ ಕುಟುಂಬಗಳಿಗೆ ಇನ್ನು ಮುಂದೆ ಗ್ಯಾಸ್ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು. ಅನಿಲ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ…
Author: AIN Author
ಬೆಂಗಳೂರು :- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಾದ್ಯಂತ ಚಳಿಗಾಲ ಆರಂಭವಾಗಿದ್ದು ನಗರದಲ್ಲಿ ಹಾವುಗಳ ಕಾಟ ಜೋರಾಗಿದೆ. ಇತ್ತೀಚೆಗೆ ಮನೆಯ ಸಂಧಿ ಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಹಾವುಗಳನ್ನ ಹಿಡಿಯೋದಕ್ಕೆ ವನ್ಯ ಸಂರಕ್ಷಣಾ ತಂಡಕ್ಕೆ ಪ್ರತಿದಿನ 50ಕ್ಕೂ ಹೆಚ್ಚು ಕರೆಗಳು ಬರುತ್ತಿವೆ. ಹೆಲ್ಮೆಟ್, ಕಾಂಪೌಂಡ್, ಶೂಸ್, ವಾಟಾರ್ ಟ್ಯಾಂಕರ್, ಫುಟ್ ಪಾತ್, ಕಾರಿನ ಸಂಧಿಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಮನೆಯಿಂದ ಹೊರಗೆ ಹೋಗುವ ಜನರು ಒಮ್ಮೆ ಹುಷಾರಾಗಿ ಎಲ್ಲಾವನ್ನ ಚೆಕ್ ಮಾಡಿ ಮನೆಯಿಂದ ಹೊರಹೋಗುವ ಪರಿಸ್ಥಿತಿ ಎದುರಾಗಿದೆ. ಇನ್ನು ನಗರದ ಯಲಹಂಕ, ಆರ್ಆರ್ ನಗರ, ಆರ್ಟಿ ನಗರ, ನಾಗರಭಾವಿ, ಮಹದೇವಪುರ ಭಾಗದಲ್ಲಿ ಪ್ರತಿನಿತ್ಯ ಹಾವಿನ ದರ್ಶನವಾಗುತ್ತಿದ್ದು, ಹಾವುಗಳಿಂದಾಗಿ ಜನರು ಪ್ರತಿದಿನ ರೋಸಿ ಹೋಗುತ್ತಿದ್ದಾರೆ. ಇನ್ನು ಹಾವುಗಳು ಬಂದಾಗ ಬಿಬಿಎಂಪಿ ವನ್ಯಸಂಸಕ್ಷಕರು ಸಹ ಸರಿಯಾದ ಸಮಯಕ್ಕೆ ಸಿಗದೇ ಇರುವುದು ಹಾಗೂ ಕರೆಗಳನ್ನ ಸ್ವೀಕರಿಸದೇ ಇರೋದ್ರಿಂದ ಜನರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ವನ್ಯ ಸಂರಕ್ಷಕರನ್ನ ಪ್ರಶ್ನಿಸಿದ್ದಕ್ಕೆ ಜನರ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರಿಲ್ಲ. ಸಧ್ಯ…
ಬೆಂಗಳೂರು:- ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಗುತ್ತಿಗೆದಾರರ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆ ಕೇಳಿದರೆ ಅದನ್ನು ಒದಗಿಸಲು ಯಾವುದೇ ಅಡಚಣೆ ಇಲ್ಲ ಎಂದರು. ಮುಚ್ಚಿಡುವ ಅಗತ್ಯವಿಲ್ಲ. 10 ರೂ. ಪಾವತಿಸಿ ಆರ್‍ಟಿಐ ಅರ್ಜಿ ಹಾಕಿದರೆ ದಾಖಲೆ ಕೊಡುತ್ತೇವೆ. ಇನ್ನು ಆದಾಯ ತೆರಿಗೆ ಸರ್ಕಾರಿ ಸಂಸ್ಥೆ ಕೇಳಿದರೆ ಕೊಡಲ್ಲ ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು. ಆದಾಯ ತೆರಿಗೆ ಇಲಾಖೆ 6 ಬಾರಿ ಪತ್ರ ಬರೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಇದು ಸಚಿವರ ಅಥವಾ ಸರ್ಕಾರದವರೆಗೂ ಬರುವ ವಿಚಾರವಲ್ಲ. ಅಧಿಕಾರಿಗಳು ನಿರ್ಧಾರ ತೆಗೆದುಕೊಂಡು ಮಾಹಿತಿ ಒದಗಿಸುತ್ತಾರೆ ಎಂದರು. ಇತ್ತೀಚೆಗೆ ತಾವು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಟ್ಕರಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ 20 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಪಟ್ಟಂತೆ ಚರ್ಚೆ ನಡೆಸಿದ್ದೇವೆ. ಭೂ ಸ್ವಾೀಧಿನ, ಅರಣ್ಯ ಪ್ರದೇಶದ…
ಬೆಂಗಳೂರು:- ಕರ್ನಾಟಕದಲ್ಲಿ ಇಂದು 298 ಹೊಸ ಕೊವಿಡ್ ಕೇಸ್ ಪತ್ತೆ ಆಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನಗರದಲ್ಲಿ ಇಂದು ಒಂದು ದಿನೇ 172 ಕೊವಿಡ್ ಕೇಸ್ ಪತ್ತೆ ಹಚ್ಚಲಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.82ರಷ್ಟಿದೆ. 229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 7,791 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 1240 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿವೆ. ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ಮಂಡ್ಯ 11, ಮೈಸೂರು 18, ರಾಯಚೂರು 1, ರಾಮನಗರ 2, ಶಿವಮೊಗ್ಗ 3,…
ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸೋಂಪುರ ಹೋಬಳಿ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಸಣ್ಣನ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಸುಮಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಅನಿತಾ ರವರು ಮಕ್ಕಳ ಜೊತೆ ಬೇಜವಾಬ್ದಾರಿತನದಿಂದ ವರ್ತಿಸುತ್ತಾರೆ ಮತ್ತು ಮಕ್ಕಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಮಕ್ಕಳ ತಾಯಂದಿರು ಆರೋಪಿಸಿ ಕೂಡಲೇ ಅನಿತಾ ರವರನ್ನು ಅಮಾನತು ಮಾಡಿ ಬೇರೆ ಕಾರ್ಯಕರ್ತೆಯನ್ನು ನೇಮಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು ಅಂಗನವಾಡಿ ಕಾರ್ಯಕರ್ತೆಯನ್ನು ಕೂಡಲೇ ಅಮಾನತು ಮಾಡಿ ಕಾನೂನು ಕ್ರಮ ಜರಗಿಸಬೇಕೆ ಬೇರೆ ಕಾರ್ಯಕರ್ತೆಯನ್ನು ನೇಮಿಸಬೇಕು ಇಲ್ಲದಿದ್ದರೆ ನಮ್ಮ ಮಕ್ಕಳನ್ನು ಅಂಗನವಾಡಿಗೆ ಕಳಿಸುವುದಿಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಗ್ರಾಮಸ್ಥರು ತಿಳಿಸಿದರು.
ಬೆಂಗಳೂರು:- ದಿನದ 24 ಗಂಟೆಯೂ ಸೇವೆ ಸಲ್ಲಿಸುವವರ ಸಾಲಿಗೆ ಈ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರೂ ಸೇರಲಿದ್ದು, ಇಂತಹ ಸೇವೆ ಸಲ್ಲಿಸಿದ ಚಾಲಕರಿಗೆ ನಿಗಮ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಆ ಶುಭಸುದ್ದಿ ಏನು ಅಂತೀರಾ ಇಲ್ಲಿದೆ ನೋಡಿ ಮಾಹಿತಿ. ರಾಜ್ಯದ ರಾಜಧಾನಿ ಬೆಂಗಳೂರಿನ ಎಲ್ಲಾ ಕಡೆಗಳಿಗೂ ಸಂಚಾರ ಮಾಡುತ್ತಿರುವ ಬಿಎಂಟಿಸಿ ನಿಗಮ ಇಡೀ ದೇಶದಲ್ಲೇ ಒಂದೊಳ್ಳೆ ಸಾರಿಗೆ ಸೇವೆ ಎನ್ನುವ ಪ್ರಖ್ಯಾತಿ ಹೊಂದಿದೆ. ಈ ಪ್ರಖ್ಯಾತಿ ಗಳಿಸಲು ಪ್ರಮುಖ ಕಾರಣರಾದವರು ಬಸ್‌ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರು ಹಾಗೂ ಕಾರ್ಯ ನಿರ್ವಾಹಕರು ಆಗಿದ್ದಾರೆ. ಬೆಂಗಳೂರಿನಂಹತ ಮಹನಗರದಲ್ಲಿನ ಟ್ರಾಫಿಕ್ ಜಂಜಾಟದಲ್ಲಿ ಬಸ್ ಈ ಬಸ್‌ಗಳನ್ನು ಓಡಿಸುವುದು ಸುಲಭದ ಮಾತಲ್ಲ ತೀವ್ರ ಗತಿಯ ಟ್ರಾಫಿಕ್ ನಡುವೆಯೂ ಪ್ರಯಾಣಿಕರನ್ನು ಯಾವುದೇ ತೊಂದರೆ ಇಲ್ಲಿದ ತಮ್ಮ ಸ್ಥಳಗಳಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದ್ದರಿಂದ ಇಂತಹ ಚಾಲಕರನ್ನ ಗುರುತಿಸಿರುವ ಬಿಎಂಟಿಸಿ ಪ್ರಮೋಷನ್ ಭಾಗ್ಯವನ್ನು ಕಲ್ಪಿಸಿದೆ. 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಂದುವರೆದಿರುವ 1,000 ಹೆಚ್ಚು ಚಾಲಕರಿಗೆ ಕೂಡಲೇ ಜಾರಿಯಾಗುವಂತೆ…
ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳ ಕರ್ತವ್ಯ ಪ್ರಶ್ನೆ ಮಾಡುವುದರ ಜೊತೆಗೆ ಅನಗತ್ಯವಾಗಿ ಸರ್ಕಾರದ ವಿರುದ್ಧ ಹೇಳಿಕೆ ಕೊಡುತ್ತಾ ಶಾಂತಿ ಸುವ್ಯವಸ್ಥಿತಗೆ ಧಕ್ಕೆ ತರುತಿದ್ದು ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಎಫ್‌ಐಆರ್ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ನಗರದ ವಿವಿಧ ಠಾಣೆಗಳಲ್ಲಿ ಗುರುವಾರ ಕಾಂಗ್ರೆಸ್ ನಾಯಕರುಮನವಿ ಸಲ್ಲಿಸಿದರು. ನಗರದಶಹರ ಪೊಲೀಸ್ ಠಾಣೆಯಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್ ಹಳ್ಳೂರ, ‘1992ರ ಗಲಭೆ ಪ್ರಕರಣ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಬುಧವಾರ ನಡೆಸಿದ ಪ್ರತಿಭಟನೆಯಿಂದ ಜನರಿಗೆ ತೊಂದರೆಯಾಗಿದೆ. ರೌಡಿಶೀಟರ್ ಶ್ರೀಕಾಂತ್ ಅವರನ್ನು ಕರ ಸೇವಕನೆಂದು ಹೇಳಿದ್ದಲ್ಲದೆ, ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯಮ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿದರು. ‘ಅವಳಿ ನಗರದಲ್ಲಿ ಭಯದ ವಾತಾವರಣ ಸೃಷ್ಟಿಸಿ, ಪ್ರಚೋದನಕಾರಿ ಭಾಷಣದಿಂದ ಮಾನಹಾನಿ ಮಾಡಿದ್ದಕ್ಕೆ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್,…
ಧಾರವಾಡ:- ಯುವ ಸಮುದಾಯದಿಂದಲೇ ಭಾರತ ವಿಶ್ವ ಗುರುವಾಗಿದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಯುವಜನರು ಭವ್ಯ ಭಾರತದ ಭವಿಷ್ಯ ಮತ್ತು ಅಭಿವೃದ್ಧಿಯ ಪ್ರಮುಖ ಅಂಶವಾಗಿದ್ದು, ಯುವ ಸಮುದಾಯದಿಂದಲೇ ಭಾರತ ವಿಶ್ವ ಗುರುವಾಗಲು ಕಾರಣವಾಗಿದೆ ಎಂದರು. ಸ್ವಾತಂತ್ರ್ಯ ಬಂದ 75 ವರ್ಷಗಳಲ್ಲಿ ಭಾರತ ಗಮನಾರ್ಹ ಪ್ರಗತಿ ಸಾಧಿಸಿದೆ. ಸ್ವಾವಲಂಬನೆಯತ್ತ ರಾಷ್ಟ್ರದ ಪ್ರಯಾಣ ಮುಂದುವರಿದಿದೆ. ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸಲು ಹಾಗೂ ದೇಶವನ್ನು ವಿಶ್ವದ ಅತ್ಯುತ್ತಮ ಸ್ಥಾನದಲ್ಲಿ ಇರಿಸಲು ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ ಎಂದರು. ಭಾರತ ವಿಶಿಷ್ಟ ಸಂಸ್ಕೃತಿಗಳಿಂದ ತುಂಬಿದ ವೈವಿಧ್ಯಮಯ ದೇಶವಾಗಿದೆ ಮತ್ತು ವಿವಿಧತೆಯಲ್ಲಿ ಏಕತೆ ಈ ರಾಷ್ಟ್ರದ ಶಕ್ತಿಯಾಗಿ ಉಳಿದಿದೆ. ಸೋಲು ಗೆಲುವು ಎಲ್ಲವೂ ಸಾಮಾನ್ಯ, ಸೋಲೇ ಗೆಲುವಿನ ಮೆಟ್ಟಿಲು ಎನ್ನುತ್ತಾರೆ. ಆದರೆ, ಕೆಲವೊಬ್ಬರ ಜೀವನದಲ್ಲಿ ಕೇವಲ ಸೋಲನ್ನು ಮಾತ್ರವೇ ಕಾಣುತ್ತಿರುತ್ತಾರೆ. ಆಗ ಸೋತೆ ಎಂದು ಕೊರಗುವುದು, ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವುದರ ಬದಲು, ಗೆಲುವು ನಿಮ್ಮದಾಗಿಸಿಕೊಳ್ಳುವುದು ಹೇಗೆ, ನೀವು ಎಡವಿದ್ದೆಲ್ಲಿ ಎಂಬುದರ ಬಗ್ಗೆ ಆಲೋಚಿಸಬೇಕು. ಆತ್ಮವಿಶ್ವಾಸ,…
ದಾವಣಗೆರೆ:- ಹಿಂದು, ಮುಸ್ಲಿಮರು ಒಂದಾಗಲು ಕಾಂಗ್ರೆಸ್ ಬಿಡುತ್ತಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಹಿಂದು, ಮುಸ್ಲಿಮರು ಒಟ್ಟಾಗಿರಬೇಕೆಂಬ ಭಾವನೆ ಮುಸ್ಲಿಮರಲ್ಲೂ ಇದೆ. ಆದರೆ, ಇವರಿಬ್ಬರು ಒಟ್ಟಾದರೆ ತಾನು ರಾಜಕೀಯ ಮಾಡಲು ಆಗಲ್ಲ ಎಂದು ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯನವರು ಒಂದಾಗಲು ಬಿಡುತ್ತಿಲ್ಲ ಎಂದರು. ತ್ರಿವಳಿ ತಲಾಕ್ ನಿಷೇಧವನ್ನು ಮುಸ್ಲಿಮರು ಒಪ್ಪಿದ್ದರೂ ಕಾಂಗ್ರೆಸ್ ಒಪ್ಪುತ್ತಿಲ್ಲ. ಇಂದಿಲ್ಲ, ನಾಳೆ ದೇಶಕ್ಕೆ ಸಮಾನ ನಾಗರಿಕ ಸಂಹಿತೆ ಬರಲಿದೆ. ಇದು ಕಾಂಗ್ರೆಸ್‌ಗೆ ತೆಡೆದುಕೊಳ್ಳಲಾಗುತ್ತಿಲ್ಲ. ಹೀಗಾಗಿ ಮುಸ್ಲಿಂ ಹಾಗೂ ಹಿಂದುಗಳು ದೂರ ಇರಬೇಕು ಎನ್ನುವುದು ಕಾಂಗ್ರೆಸ್ ಇರಾದೆ. ಮುಂದೊಂದು ದಿನ ಇಡೀ ದೇಶ ಒಂದಾಗಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಸ್ವಾತಂತ್ರ್ಯ ಹೋರಾಟ ಮಾಡಿದ ಕಾಂಗ್ರೆಸ್ಸಿಗರು ಈಗ ಸ್ವರ್ಗದಲ್ಲಿದ್ದಾರೆ. ಅವರ ಕನಸು ನಮ್ಮ ಸಂಸ್ಕೃತಿ, ಧರ್ಮ ಉಳಿಯಬೇಕು ಎಂಬುದಾಗಿತ್ತೇ ಹೊರತು ಹಿಂದು, ಮುಸ್ಲಿಮರು ಹೊಡೆದಾಡುತ್ತ ಕುಳಿತಕೊಳ್ಳಲು ಅಲ್ಲ. ಮುಸ್ಲಿಮರು ಸಿದ್ಧರಿದ್ದರೂ ಕಾಂಗ್ರೆಸ್ ಸಿದ್ಧವಿಲ್ಲ. 2024ರ ಲೋಕಸಭಾ ಚುನಾವಣೆಯ ಬಳಿಕ ಮತ್ತೆ ಪ್ರಧಾನಿಯಾಗಿ…
ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಾಯಕರಾಗಿ, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿರುವ ಹಾಗೂ ಲೋಹಿತ್ ಹೆಚ್ ನಿರ್ದೇಶಿಸಿರುವ “ಮಾಫಿಯಾ” ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಅವರು ಬರೆದಿರುವ “ತುಂಬಾನೆ ಕೇಳಲಾರೆ” ಎಂಬ ಸುಂದರ ಯುಗಳ ಗೀತೆಯ ಲಿರಿಕಲ್ ವಿಡಿಯೋ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಪ್ರೇಮಗೀತೆಯನ್ನು ಹರಿಹರನ್ ಹಾಗೂ ಸಾನ್ವಿ ಶೆಟ್ಟಿ ಸುಶ್ರಾವ್ಯವಾಗಿ ಹಾಡಿದ್ದಾರೆ. ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಎಲ್ಲರ ಮೆಚ್ಚಗೆ ಗಳಿಸುತ್ತಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.