ಬೆಂಗಳೂರು: ಕಾಟೇರ’ ಚಿತ್ರದ ಸಕ್ಸಸ್ ಪಾರ್ಟಿಯಲ್ಲಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಚಿತ್ರತಂಡ ಪಾರ್ಟಿ ಮಾಡಿದ್ದರು ಎಂಬ ಆರೋಪ ಕೇಳಿಬಂದಿದ್ದು ನಟ ದರ್ಶನ್ & ಟೀಂ ಪೊಲೀಸ್ ಠಾಣೆ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಅವಧಿ ಮೀರಿ ಕಾರ್ಯಾಚರಣೆ ನಡೆಸಿದ ಆರೋಪದಡಿ ಯಶವಂತಪುರದ ಜೆಟ್ ಲ್ಯಾಗ್ ಪಬ್‌ನ ಬಾರ್ ಪರವಾನಗಿಯನ್ನು 25 ದಿನಗಳ ಕಾಲ ಅಮಾನತುಗೊಳಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ದಯಾನಂದ ಆದೇಶ ಹೊರಡಿಸಿದ್ದಾರೆ. ಕಾಟೇರ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ನಟರಾದ ದರ್ಶನ್, ನಿನಾಸಂ ಸತೀಶ್, ಡಾಲಿ ಧನಂಜಯ್, ಅಭಿಷೇಕ್ ಅಂಬರೀಷ್, ಚಿಕ್ಕಣ್ಣ, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಜೆಟ್‌ಲ್ಯಾಗ್ ಪಬ್‌ನಲ್ಲಿ ಜ.3ರಂದು ನಿಯಮ ಉಲ್ಲಂಘಿಸಿ ಮುಂಜಾನೆವರೆಗೆ ಪಾರ್ಟಿ ಮಾಡಿದ್ದರು. ಈ ಸಂಬಂಧ ಸುಬ್ರಮಣ್ಯನಗರ ಠಾಣೆ ಪೊಲೀಸರು ಪಬ್‌ನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಅಬಕಾರಿ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು. ದರ್ಶನ್ ನಟನೆಯ ಕಾಟೇರ ಸಿನಿಮಾದ ಸೆಲೆಬ್ರಿಟಿ ಶೋ ಆಯೋಜನೆಯಾಗಿತ್ತು. ಸೆಲೆಬ್ರಿಟಿ ಶೋ…
Author: AIN Author
ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ಒಂದಲ್ಲ ಒಂದು ದಿನ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ. ಉಡುಪಿಯಲ್ಲಿ (Udupi) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣಕ್ಕೆ ನಾನು ಸಹ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಹೇಳಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ರಾಮಮಂದಿರ (Ram Mandir) ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ಆದ್ರೆ ನಾನಂತೂ ದೈವಿ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ. ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗೇ ಹೋಗ್ತೀನಿ. ರಾಮ ಮಂದಿರ ಅವರದ್ದೂ (BJP) ಅಲ್ಲ ನಮ್ಮದೂ ಅಲ್ಲ, ಅಯೋಧ್ಯೆ ರಾಮಮಂದಿರ 140 ಕೋಟಿ ಜನರದ್ದು ಎಂದು ತಿಳಿಸಿದ್ದಾರೆ.
ರಾಮಮಂದಿರ (Ram Mandir) ಉದ್ಘಾಟನೆಗೆ ದಿನಗಣನೆ ಶುರುವಾಗಿದ್ದು, ಪ್ರಾಣಪ್ರತಿಷ್ಠೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಈ ಹೊತ್ತಲ್ಲೇ ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ರಾಮಮಂದಿರ ಉದ್ಘಾಟನೆ ಹಿನ್ನೆಲೆ ಜನವರಿ 22ರಂದು ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ (Educational Institution) ರಜೆ (Holiday) ಘೋಷಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವುದರ ಜೊತೆಗೆ, ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ದಿನದಂದು ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಿ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಜನವರಿ 22ರಂದು ಎಲ್ಲಾ ಸರ್ಕಾರಿ ಕಟ್ಟಡಗಳನ್ನು ಅಲಂಕರಿಸಲು ಮತ್ತು ಪಟಾಕಿಗಳ ವ್ಯವಸ್ಥೆಯನ್ನು ಮಾಡಲು ಆದಿತ್ಯನಾಥ್ ಕರೆ ನೀಡಿದ್ದಾರೆ ಗೋವಾದಲ್ಲೂ ರಜೆ ಗೋವಾದಲ್ಲೂ ಕೂಡ ಸಾರ್ವಜನಿಕ ರಜೆ ಘೋಷಣೆ ಮಾಡಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಆದೇಶ ನೀಡಿದ್ದಾರೆ. ಜನವರಿ 22 ರಂದು ರಾಜ್ಯದಲ್ಲಿ ಸಂಭ್ರಮ ಮೇಳೈಸಬೇಕು. ಹೀಗಾಗಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಕಚೇರಿಗಳಲ್ಲೂ ಯಾವುದೇ ಕೆಲಸ ಮಾಡುವುದು ಬೇಡ. ದೀಪಾವಳಿಯಂತೆ ಆ ದಿನವನ್ನು ಆಚರಿಸಿ…
ನವದೆಹಲಿ: ಭಾರತ (India) ಮತ್ತು ಅರ್ಜೆಂಟೀನಾ (Argentina) ನಡುವೆ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಹಾಗೂ ಗಣಿಗಾರಿಕೆಗೆ ಒಪ್ಪಂದ ಏರ್ಪಟ್ಟಿದೆ. ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದಲ್ಲಿ 5 ಲಿಥಿಯಂ ಬ್ಲಾಕ್‌ಗಳ ಪರಿಶೋಧನೆ ಮತ್ತು ಗಣಿಗಾರಿಕೆ ಒಪ್ಪಂದಕ್ಕೆ ಉಭಯ ರಾಷ್ಟ್ರಗಳು ಸಹಿ ಹಾಕಿವೆ ಎಂದು ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಟ್ವಿಟ್ಟರ್ ಮೂಲಕ ಮಾಹಿತಿ ರವಾನಿಸಿದ್ದಾರೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಅರ್ಜೆಂಟೀನಾದಲ್ಲಿ 5 ಲಿಥಿಯಂ ಬ್ಲಾಕ್‌ಗಳಲ್ಲಿ ಗಣಿಗಾರಿಕೆ (Lithium Mining) ಒಪ್ಪಂದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸಹಿ ಹಾಕುವ ಮೂಲಕ ಭಾರತ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಚಿವ ಜೋಶಿ ತಿಳಿಸಿದ್ದಾರೆ. ಖನೀಜ್ ಬಿಡೇಶ್ ಇಂಡಿಯಾ ಲಿಮಿಟೆಡ್ ಮತ್ತು CAMYEN, ಅರ್ಜೆಂಟೀನಾದ ಕ್ಯಾಟಮಾರ್ಕಾ ಪ್ರಾಂತ್ಯದ ಸರ್ಕಾರಿ ಸ್ವಾಮ್ಯದ ಕಂಪನಿ ನಡುವೆ ಒಪ್ಪಂದ ಏರ್ಪಟ್ಟಿದೆ. ಈ ಯೋಜನೆ ಭಾರತಕ್ಕೆ ಲಿಥಿಯಂ ಪೂರೈಕೆಯನ್ನು ಬಲಪಡಿಸುತ್ತದೆ ಎಂದು ಜೋಶಿ ಹೇಳಿದ್ದಾರೆ.
ನವದೆಹಲಿ: ಕಳೆದ ತಿಂಗಳು ಲೋಕಸಭೆಯಿಂದ ಉಚ್ಚಾಟಿತರಾದ ಟಿಎಂಸಿ ಮಾಜಿ ಸಂಸದೆ ಮಹುವಾ ಮೊಯಿತ್ರಾ (Mahua Moitra) ಅವರಿಗೆ, ಸರ್ಕಾರಿ ಬಂಗಲೆಯನ್ನು ಈ ಕೂಡಲೇ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ. ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಮೊಯಿತ್ರಾ ಅವರಿಗೆ ಎಸ್ಟೇಟ್ ನಿರ್ದೇಶನಾಲಯ ನೋಟಿಸ್ ನೀಡಿದೆ ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಗಳು ತಿಳಿಸಿವೆ. ತೃಣಮೂಲ ಕಾಂಗ್ರೆಸ್ ನಾಯಕಿ ಅವರಿಗೆ ಸಂಸದೆಯಾಗಿ ನೀಡಲಾಗಿದ್ದ ಬಂಗಲೆಯನ್ನು ಕೂಡಲೇ ತೆರವು ಮಾಡುವಂತೆ ಸೂಚಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಸರ್ಕಾರಿ ಬಂಗಲೆ ಖಾಲಿ ಮಾಡಿಸಲು ಎಸ್ಟೇಟ್ ನಿರ್ದೇಶನಾಲಯದ ಅಧಿಕಾರಿಗಳ ತಂಡವನ್ನು ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. https://ainlivenews.com/there-is-a-job-vacancy-in-nimhans-salary-%e2%82%b9-90000-per-month-last-date-today/ ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ 2023 ರ ಡಿಸೆಂಬರ್ 8 ರಂದು ಉಚ್ಚಾಟನೆ ಮಾಡಲಾಗಿತ್ತು. ಅಲ್ಲದೇ ಜನವರಿ 7 ರ ಒಳಗಾಗಿ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಲಾಗಿತ್ತು. ಸರ್ಕಾರಿ ವಸತಿಯನ್ನು ಏಕೆ ಖಾಲಿ…
ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನೆ ಸಂಸ್ಥೆಯ ನಿರ್ದೇಶಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಜನವರಿ 30 ರಂದು ಡಾ ಸಿ.ಎನ್. ಮಂಜುನಾಥ್ ಅವರು ನಿವೃತ್ತಯಾಗಲಿದ್ದು ಮಂಜುನಾಥ್ ಸ್ಥಾನಕ್ಕೆ ಮತ್ತೊಬ್ಬರ ನೇಮಕಾತಿಗೆ ಪತ್ರಿಕಾ ಪ್ರಕಟಣೆ ಮೂಲಕ ನಿರ್ದೇಶಕ ಹುದ್ದೆಗೆ ಆರ್ಜಿ ಆಹ್ವಾನಿಸಲಾಗಿದೆ. ಖಾಲಿ ಇರುವ ಖಾಯಂ ನಿರ್ದೇಶಕರ ಹುದ್ದೆಗೆ ಅರ್ಜಿ ಆಹ್ವಾನ ನೀಡಲಾಗಿದ್ದು ಇದೆ ತಿಂಗಳು 19ರ ಸಂಜೆ 5 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಅನ್ ಲೈನ್ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೆ ಅರ್ಜಿ ಶುಲ್ಕದ ಡಿ.ಡಿ ಹಾಗೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಪಡಿಸಲಾಗಿದೆ. ಈಗಾಗಲೇ 5ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ ಆಗಿದ್ದು ಬರುವಂತಹ ಅರ್ಜಿಗಳನ್ನು ಪರಿಶೀಲಿಸಿ ಹಿರಿಯ ವೈದ್ಯರನ್ನೂ ನಿರ್ದೇಶಕರ ಸ್ಥಾನಕ್ಕೆ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿಕೊಳ್ಳುತ್ತಿದೆ.
ಬೆಂಗಳೂರು: ದಾವೋಸ್ʼನ ಸ್ವಿಟ್ಜರ್ಲೆಂಡಿನ ಈ ನಗರದಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಸಮಾವೇಶದಲ್ಲಿ ಪಾಲ್ಗೊಂಡಿರುವ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ನೇತೃತ್ವದ ನಿಯೋಗವು ಎರಡನೆಯ ದಿನವಾದ ಮಂಗಳವಾರದಂದು ವಿವಿಧ ಕಂಪನಿಗಳೊಂದಿಗೆ 22 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾವನೆಗಳಿಗೆ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, `ಈ ಯೋಜನೆಗಳಲ್ಲಿ ವೆಬ್ ವರ್ಕ್ಸ್ ಕಂಪನಿಯು ಬೆಂಗಳೂರಿನಲ್ಲಿ ಸ್ಥಾಪಿಸಲಿರುವ 100 ಮೆಗಾವ್ಯಾಟ್ ಸಾಮರ್ಥ್ಯದ, 20 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆಯ ಡೇಟಾ ಸೆಂಟರ್ ಪಾರ್ಕ್ ಯೋಜನೆ ಕೂಡ ಸೇರಿದೆ. ಇದಲ್ಲದೆ ಮೈಕ್ರೋಸಾಫ್ಟ್, ಹಿಟಾಚಿ, ಲುಲು ಗ್ರೂಪ್, ಹ್ಯೂಲೆಟ್ ಪೆಕಾರ್ಡ್ (ಎಚ್.ಪಿ), ಹನಿವೆಲ್, ಐನಾಕ್ಸ್, ವೋಲ್ವೋ, ನೆಸ್ಲೆ, ಕಾಯಿನ್ ಬೇಸ್, ಟಕೇಡಾ ಫಾರ್ಮಾ, ಬಿಎಲ್ ಆಗ್ರೋ ಇತ್ಯಾದಿ ಕಂಪನಿಗಳೊಂದಿಗೆ 2,000 ಕೋಟಿ ರೂ. ಮೌಲ್ಯದ ಹೂಡಿಕೆಗಳಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದೆ’ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಹೂಡಿಕೆಗೆ ಮುಂದಾಗಿರುವ ಮೈಕ್ರೋಸಾಫ್ಟ್ ಕಂಪನಿಯು ಕೌಶಲ್ಯಾಭಿವೃದ್ಧಿ…
ಬೆಂಗಳೂರು: ಬೆಂಗಳೂರು ನಗರದಿಂದ ಬರೋಬ್ಬರಿ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಪೀಣ್ಯ ಫ್ಲೈಓವರ್ 3 ದಿನಗಳ ಕಾಲ ಬಂದ್ ಹಿನ್ನೆಲೆಯಲ್ಲಿ ಇಂದು ತುಮಕೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಕಂಡುಬಂದಿದೆ. ಪೀಣ್ಯ ಫ್ಲೈಓವರ್ 3 ದಿನಗಳ ಕಾಲ ಬಂದ್ ಹಿನ್ನೆಯಲ್ಲಿ ಕಿಲೋಮೀಟರ್ ವರೆಗೂ ಟ್ರಾಫಿಕ್ ಜಾಂ ವಾಹನ ಸವಾರರು ಪರದಾಡುತ್ತಿದ್ದು ಮೂರು ದಿನಗಳ ಕಾಲ ಮೆಲ್ಸೇತುವೆ ದುರಸ್ಥಿಗಾಗಿ ಪ್ಲೈ ಓವರ್ ಬಂದ್ ಮಾಡಿರುವ ಹೆದ್ದಾರಿ ಪ್ರಾಧಿಕಾರ ಬೆಂಗಳೂರಿಗೆ ಎಂಟ್ರಿ ಕೊಡುವ ಸ್ಥಳದಲ್ಲೇ ಹೆವಿ ಟ್ರಾಫಿಕ್ ಜಾಂ ಆಗಿದ್ದು 8 ನೇ ಮೈಲಿ, ಜಾಲಹಳ್ಳಿ ಕ್ರಾಸ್ ,ಪೀಣ್ಯ ಮೂಲಕ ಗೊರಗುಂಟೆ ಪಾಳ್ಯ ತಲುಪಲು ಹರಸಾಹಸ ಪಡುತ್ತಿದ್ದು ಅರ್ಧಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ನಲ್ಲಿ ನಿಂತು ವಾಹನ ಸವಾರರು ಹೈರಾಣ
ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ . ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, ” ಅವನೇ ಶ್ರೀಮನ್ನಾರಾಯಣ” ಚಿತ್ರಗಳಲ್ಲಿ ಒನ್ ಲೈನ್ ಪಂಚಿಂಗ್ ಡೈಲಾಗ್ ಗಳು ಅಭಿಜಿತ್ ಅವರ ಕೊಡುಗೆ. ಅಂತಹ ಅದ್ಭುತ ಪ್ರತಿಭೆ ಅವರು. ಆಗಿನಿಂದಲೂ ನಾನು ಅಭಿಜಿತ್ ಅವರಿಗೆ ನಿರ್ದೇಶನ ಮಾಡಲು ಹೇಳುತ್ತಿದ್ದೆ. ಈಗ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇನ್ನೂ ದಿಗಂತ್ ಹಾಗೂ ಯೋಗಿ ಇಬ್ಬರು ಅದ್ಭುತ ಕಲಾವಿದರು. ನಾನು ಅವರಿಬ್ಬರ ಚಿತ್ರಗಳನ್ನು ನೋಡಿ ಬಹಳ ಇಷ್ಟಪಟ್ಟಿದ್ದೇನೆ. ಈ ಚಿತ್ರದಲ್ಲಿ ಒಟ್ಟಿಗೆ ಅಭಿನಯಿಸಿದ್ದಾರೆ. ಒಟ್ಟಾರೆ ಚಿತ್ರತಂಡದ ಸಹಕಾರದಿಂದ…
ಬೆಂಗಳೂರು: ಇನೇನು ಕೆಲವೇ ದಿನಗಳಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು ಕಾಂಗ್ರೆಸ್ನವರು ಕೂಡ ತಕರಾರು ತೆಗೆಯುತ್ತಿದ್ದರು ಈ ಮಧ್ಯೆ ರಾಮಮಂದಿರ ಉದ್ಘಾಟನೆಗೆ ನಾನೂ ದೇಣಿಗೆ ಕೊಟ್ಟಿದ್ದೇನೆ ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ https://ainlivenews.com/corporation-board-recruitment-the-list-is-likely-to-be-released-today-evening/ ನಗರದಲ್ಲಿ ಮಾತನಾಡಿದ ಅವರು, ರಾಮ ಹಾಗೂ ಕೃಷ್ಣನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿಯಿದೆ ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದ್ದಾರೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆ ಬಗ್ಗೆ ನಾನು ಮಾತನಾಡಲ್ಲ ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ನಾನಿಲ್ಲ ನಾನು ದೈವಭಕ್ತಳು ಎಂದು ಪದೇಪದೇ ಹೇಳುತ್ತೇನೆ ಅಷ್ಟೇ ರಾಮಮಂದಿರಕ್ಕೆ ಯಾವಾಗಾದ್ರೂ ಒಂದು ದಿನ ನಾನು ಹೋಗುತ್ತೇನೆ ಅಯೋಧ್ಯೆಯಲ್ಲಿರುವ ರಾಮ ಮಂದಿರ ದೇಶದ 140 ಕೋಟಿ ಜನರದ್ದು ಎಂದು ಮಹಿಳಾ & ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.